ಬ್ರೇಕಿಂಗ್ ನ್ಯೂಸ್

ದುಬೈಯಲ್ಲಿ ಉದ್ಯಮಿಯಾಗಿದ್ದ ಉಪ್ಪಿನಂಗಡಿಯ ವ್ಯಕ್ತಿ ಮೃತ್ಯು

(ನ್ಯೂಸ್‌ ಕಡಬ) newskadaba.com,  ಸೆ.29 ದುಬೈ : ಉಪ್ಪಿನಂಗಡಿಯಲ್ಲಿನ ಬಜತ್ತೂರು ಗ್ರಾಮದ ಅರ್ಬಿ ಮನೆ ನಿವಾಸಿ ತಿಲಕಾನಂದ ಪೂಜಾರಿ ಅಲಿಯಾಸ್‌ ಪ್ರಶಾಂತ್‌ ಪೂಜಾರಿ(33) ಅವರು ದುಬೈಯಲ್ಲಿ ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಅವರ ಮೃತದೇಹ ಸೆ.27ರಂದು ಸ್ವಗ್ರಾಮಕ್ಕೆ ಆಗಮಿಸಿದೆ. ದುಬೈಯಲ್ಲಿ ಉದ್ಯಮಿಯಾಗಿದ್ದ ಪ್ರಶಾಂತ್‌ ವಾರದ ಹಿಂದೆ ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದರು. ಅವರ ಮೃತದೇಹವನ್ನು ಭಾರತಕ್ಕೆ ತರುವಲ್ಲಿ ಕಾನೂನಿನ ತೊಡಕುಂಟಾಗಿತ್ತು. ಈ ಬಗ್ಗೆ ಸ್ಪಂದನೆ ತೋರಿದ ದ.ಕ. ಮೂಲದ ಸಮದ್‌ ಬಿರಾಲಿ ಮತ್ತಿತರ ಯುವಕರ ತಂಡ ಅಗತ್ಯ ದಾಖಲೆಗಳನ್ನು ಸಿದ್ಧಗೊಳಿಸಿ ದುಬೈಯಲ್ಲಿ […]

ದುಬೈಯಲ್ಲಿ ಉದ್ಯಮಿಯಾಗಿದ್ದ ಉಪ್ಪಿನಂಗಡಿಯ ವ್ಯಕ್ತಿ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕರಾವಳಿಯಲ್ಲಿ ಬಿರುಗಾಳಿ ಸಹಿತ ಸುರಿದ ಭಾರೀ ಮಳೆ; ಅಕ್ಟೋಬರ್ 4ರವರೆಗೆ ಮುಂದುವರಿಯುವ ಸಾಧ್ಯತೆ

(ನ್ಯೂಸ್‌ ಕಡಬ) newskadaba.com,  ಸೆ.29 ಮಂಗಳೂರು: ಕೆಲ ಕಾಲ ದ.ಕ ಜಿಲ್ಲೆಯಲ್ಲಿ ಬಿಡುವು ಪಡೆದಿದ್ದ ಮಳೆ ಶನಿವಾರ (ಸೆ.27) ಮತ್ತೆ ಬಿರುಸುಗೊಂಡಿತ್ತು. ಗ್ರಾಮೀಣ ಭಾಗಗಳಲ್ಲಿ ಬಿರುಗಾಳಿ ಸಹಿತ ಸುರಿದ ಮಳೆಯಿಂದಾಗಿ ಹಲವು ಮರಗಳು ಧರೆಗೆ ಉರುಳಿದ್ದು, ಬೆಳೆಗಳಿಗೆ ಹಾನಿಯಾಗಿದೆ. ಸುಳ್ಯ ತಾಲೂಕಿನ ಕೆಲ ಭಾಗಗಳಲ್ಲಿ ವಿದ್ಯುತ್ ಪೂರೈಕೆ ವ್ಯತ್ಯಯವಾಗಿದ್ದು, ಹಲವೆಡೆ ನವರಾತ್ರಿ ಆಚರಣೆಗಳಿಗೆ ಅಡಚಣೆಯಾಗಿದೆ. ಭಾರತೀಯ ಹವಾಮಾನ ಇಲಾಖೆ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ. ಭಾನುವಾರದಂದು ರಾಜ್ಯದ ಕರಾವಳಿಯುದ್ದಕ್ಕೂ ಗಾಳಿಯ ವೇಗ ಗಂಟೆಗೆ 50-60 ಕಿ.ಮೀ.

ಕರಾವಳಿಯಲ್ಲಿ ಬಿರುಗಾಳಿ ಸಹಿತ ಸುರಿದ ಭಾರೀ ಮಳೆ; ಅಕ್ಟೋಬರ್ 4ರವರೆಗೆ ಮುಂದುವರಿಯುವ ಸಾಧ್ಯತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಾಡಹಗಲೇ 74 ವರ್ಷದ ವೃದ್ಧೆಯ ಕತ್ತಿನಲ್ಲಿದ್ದ ಚಿನ್ನದ ಸರ ಕಸಿದು ಪರಾರಿ; ವೃದ್ಧೆಗೆ ಗಾಯ

(ನ್ಯೂಸ್‌ ಕಡಬ) newskadaba.com,  ಸೆ.29 ಮಂಗಳೂರು: ಬೈಕ್‌ನಲ್ಲಿ ಬಂದ ಯುವಕನೊಬ್ಬ ವೃದ್ಧೆಯ ಕತ್ತಿನಲ್ಲಿದ್ದ ಸುಮಾರು 3 ಲಕ್ಷ ರೂ. ಮೌಲ್ಯದ ಚಿನ್ನದ ಸರ ಕಸಿದು ಪರಾರಿಯಾಗಿದ್ದು, ಘಟನೆಯಲ್ಲಿ ವೃದ್ಧೆ ಗಾಯಗೊಂಡಿರುವ ಘಟನೆ ಮುಲ್ಕಿ ಪೋಸ್ಟ್ ಆಫೀಸ್ ಬಳಿಯ ಅಕ್ಕಸಾಲಿಗರ ಕೇರಿ ವೀರ ಮಾರುತಿ ದೇವಸ್ಥಾನದ ಸಮೀಪದ ಒಳ ರಸ್ತೆಯಲ್ಲಿ ನಡೆದಿದೆ.ಗಾಯಗೊಂಡ ವೃದ್ಧೆಯನ್ನು ಪೋಸ್ಟ್ ಆಫೀಸ್ ಸಮೀಪದ ನಿವಾಸಿ ನಳಿನಿ ಎ ನಾಯಕ್ ಎಂದು ಗುರುತಿಸಲಾಗಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಮಧ್ಯಾಹ್ನದ ಊಟದ ನಂತರ ನಳಿನಿಯವರು ಎಂದಿನಂತೆ

ಹಾಡಹಗಲೇ 74 ವರ್ಷದ ವೃದ್ಧೆಯ ಕತ್ತಿನಲ್ಲಿದ್ದ ಚಿನ್ನದ ಸರ ಕಸಿದು ಪರಾರಿ; ವೃದ್ಧೆಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು ಟು ಮುಂಬೈ ನಡುವೆ ಸೂಪರ್‌ಫಾಸ್ಟ್ ರೈಲು

ನ್ಯೂಸ್‌ ಕಡಬ) newskadaba.com,  ಸೆ. 27 ಬೆಂಗಳೂರು: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಕರ್ನಾಟಕದ ಜನರಿಗೆ ಗುಡ್​ ನ್ಯೂಸ್​​ ನೀಡಿದ್ದಾರೆ. ಬೆಂಗಳೂರಿನಿಂದ ಮುಂಬಯಿಗೆ ಸೂಪರ್‌ ಫಾಸ್ಟ್ ರೈಲು ಘೋಷಣೆ ಮಾಡಿದ್ದಾರೆ. ಆ ಮೂಲಕ ಬೆಂಗಳೂರಿನ ಜನತೆಯ 30 ವರ್ಷಗಳ ಬೇಡಿಕೆ ಈಡೇರಿದೆ ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಸಂತಸ ವ್ಯಕ್ತಪಡಿಸಿದ್ದಾರೆ.ಈ ವಿಚಾರವಾಗಿ ಮಾತನಾಡಿರುವ ಸಚಿವ ಅಶ್ವಿನಿ ವೈಷ್ಣವ್​​, ಶೀಘ್ರದಲ್ಲೇ ನಾವು ಬೆಂಗಳೂರು ಟು ಮುಂಬೈ ನಡುವೆ ಸೂಪರ್‌ಫಾಸ್ಟ್ ರೈಲು ಪ್ರಾರಂಭಿಸುತ್ತೇವೆ. ಎರಡೂ

ಬೆಂಗಳೂರು ಟು ಮುಂಬೈ ನಡುವೆ ಸೂಪರ್‌ಫಾಸ್ಟ್ ರೈಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಾಷಿಂಗ್ಟನ್ : ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನದ ಪ್ರಧಾನಿಯನ್ನ ತರಾಟೆಗೆ ತೆಗೆದುಕೊಂಡ ಭಾರತ

(ನ್ಯೂಸ್‌ ಕಡಬ) newskadaba.com,  ಸೆ. 27 ವಾಷಿಂಗ್ಟನ್ : ಪಾಕಿಸ್ತಾನ ಭಯೋತ್ಪಾದನೆಯನ್ನು ವೈಭವೀಕರಿಸುತ್ತಿದೆ, ವಿಶ್ವವೇದಿಕೆಯಲ್ಲಿ ಸುಳ್ಳುಗಳನ್ನೇ ಹರಡುತ್ತಿದೆ ಎಂದು ಭಾರತೀಯ ರಾಜತಾಂತ್ರಿಕರಾಗಿರುವ ಪೆಟಲ್ ಗೆಹ್ಲೋಟ್ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಗೆ ಭಾರತ ತಕ್ಕ ಉತ್ತರ ನೀಡಿದೆ .ಪಾಕಿಸ್ತಾನದ ವಾಯುಪಡೆಯು ಏಳು ಭಾರತೀಯ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದೆ ಎಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಷರೀಫ್ ಹೇಳಿದ್ದಾರೆ. ನಾನು ಪ್ರಧಾನಿ ಷರೀಫ್ ಅವರ ಭಾಷಣ ಕೇಳಿದೆ. ಪಾಕಿಸ್ತಾನ ಭಯೋತ್ಪಾದನೆಯನ್ನ ವೈಭವೀಕರಿಸುತ್ತಿದೆ. ವಿಶ್ವವೇದಿಕೆಯಲ್ಲಿ ಸುಳ್ಳುಗಳನ್ನೇ ಬಿತ್ತರಿಸುತ್ತಿದೆ ಎಂದು ತರಾಟೆಗೆ ತೆಗೆದುಕೊಂಡರು.”ಶೆಹಬಾಜ್

ವಾಷಿಂಗ್ಟನ್ : ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನದ ಪ್ರಧಾನಿಯನ್ನ ತರಾಟೆಗೆ ತೆಗೆದುಕೊಂಡ ಭಾರತ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಇಂದು BSNL ಸ್ವದೇಶಿ 4G ‘ನೆಟ್‌ವರ್ಕ್ ಸ್ಟಾಕ್’ ಉದ್ಘಾಟನೆ

(ನ್ಯೂಸ್‌ ಕಡಬ) newskadaba.com,  ಸೆ. 27 ದೆಹಲಿ: ಬಿಎಸ್‌ಎನ್‌ಎಲ್‌ನ ಸ್ವದೇಶಿ 4G ‘ನೆಟ್‌ವರ್ಕ್ ಸ್ಟಾಕ್’ ಅನ್ನು ಪ್ರಧಾನಮಂತ್ರಿ ಮೋದಿ ಇಂದು (ಸೆಪ್ಟೆಂಬರ್ 27) ಬಿಡುಗಡೆ ಮಾಡಲಿದ್ದಾರೆ. ಇದು ಭಾರತವನ್ನು ಡೆನ್ಮಾರ್ಕ್, ಸ್ವೀಡನ್, ದಕ್ಷಿಣ ಕೊರಿಯಾ ಮತ್ತು ಚೀನಾ ಜೊತೆಗೆ ತಮ್ಮದೇ ಆದ ದೂರಸಂಪರ್ಕ ಉಪಕರಣಗಳನ್ನು ತಯಾರಿಸುವ ಕೆಲವೇ ದೇಶಗಳಲ್ಲಿ ಭಾರತವೂ ಒಂದಾಗಲಿದೆ. ಈ ಉಡಾವಣೆಯು ಭಾರತದ ದೂರಸಂಪರ್ಕ ವಲಯ ಮತ್ತು ಡಿಜಿಟಲ್ ಮೂಲಸೌಕರ್ಯಕ್ಕೆ ಒಂದು ಪ್ರಮುಖ ಮೈಲಿಗಲ್ಲು.. ಒಡಿಶಾದ ಜಾರ್ಸುಗುಡದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 97,500ಕ್ಕೂ

ಇಂದು BSNL ಸ್ವದೇಶಿ 4G ‘ನೆಟ್‌ವರ್ಕ್ ಸ್ಟಾಕ್’ ಉದ್ಘಾಟನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕರ್ನಾಟಕದಲ್ಲಿ ಮತ್ತೆ ಜೋರಾಯಿತು ಮಳೆಯ ಆರ್ಭಟ

(ನ್ಯೂಸ್‌ ಕಡಬ) newskadaba.com,  ಸೆ. 27 ಬೆಂಗಳೂರು: ಕರ್ನಾಟಕದಲ್ಲಿ ಮತ್ತೆ ಚುರುಕಾಗಿದ್ದು, ರಾಜ್ಯದಾದ್ಯಂತ ಭಾರಿ ಮಳೆಯಾಗುತ್ತಿದೆ. ರಾಜ್ಯದ ಬರೊಬ್ಬರಿ 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯಾದ್ಯಂತ ಮುಂದಿನ 5 ದಿನಗಳ ವರೆಗೆ ಅಂದರೆ ಅಕ್ಟೋಬರ್ 2ರವರೆಗೂ ಮಳೆ ಮುಂದುವರೆಯಲಿದೆ. ಪ್ರಮುಖವಾಗಿ ಇಂದಿನಿಂದ 2 ದಿನಗಳ ಕಾಲ ಉತ್ತರ ಕರ್ನಾಟಕದಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲೂ ಅಕ್ಟೋಬರ್ 1ರಿಂದ ಮಳೆ ಚುರುಕಾಗಲಿದ್ದು, ದಕ್ಷಿಣ

ಕರ್ನಾಟಕದಲ್ಲಿ ಮತ್ತೆ ಜೋರಾಯಿತು ಮಳೆಯ ಆರ್ಭಟ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಾನಸಿಕ ಅಸ್ವಸ್ಥನೊಬ್ಬ ಹೆತ್ತ ತಾಯಿಯ ಮುಂದೆಯೇ ಮಗುವಿನ ಶಿರಚ್ಛೇದ

(ನ್ಯೂಸ್‌ ಕಡಬ) newskadaba.com,  ಸೆ. 27 : ಮಾನಸಿಕ ಅಸ್ವಸ್ಥನೊಬ್ಬ ತಾಯಿಯ ಮುಂದೆಯೇ ಮಗುವಿನ ಶಿರಚ್ಛೇದ ಮಾಡಿದ ಘಟನೆ ಮಧ್ಯಪ್ರದೇಶದಲ್ಲಿ ಶುಕ್ರವಾರ ನಡೆದಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಆರೋಪಿ ಮಹೇಶ್ (25) ಬೈಕ್‌ನಲ್ಲಿ ಬಂದು ನಿವಾಸಿ ಕಾಲು ಸಿಂಗ್ ಅವರ ಮನೆಗೆ ಪ್ರವೇಶಿಸಿದ್ದಾನೆ. ಈ ವರೆಗೂ ಆತನನ್ನು ಯಾರೂ ನೋಡಿಲ್ಲ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಯಾವುದೇ ಮಾತು ಆಡದೆ, ಮಹೇಶ್ ಇದ್ದಕ್ಕಿದ್ದಂತೆ ಮನೆಯಲ್ಲಿ ಬಿದ್ದಿದ್ದ ಹರಿತವಾದ ಗುದ್ದಲಿಯನ್ನು ಎತ್ತಿಕೊಂಡು ಹುಡುಗನ ಮೇಲೆ ಹಲ್ಲೆ ನಡೆಸಿ, ಮಗುವಿನ ಕುತ್ತಿಗೆಯನ್ನು ಮುಂಡದಿಂದ

ಮಾನಸಿಕ ಅಸ್ವಸ್ಥನೊಬ್ಬ ಹೆತ್ತ ತಾಯಿಯ ಮುಂದೆಯೇ ಮಗುವಿನ ಶಿರಚ್ಛೇದ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರೌಡಿ ಶೀಟರ್ ಸೈಫುದ್ದೀನ್ ನನ್ನು ಉಡುಪಿಯ ಮಲ್ಪೆಯಲ್ಲಿ ಗುಂಡಿಕ್ಕಿ ಹತ್ಯೆ

(ನ್ಯೂಸ್‌ ಕಡಬ) newskadaba.com,  ಸೆ. 27 ಉಡುಪಿ: ಮಲ್ಪೆಯಲ್ಲಿ ರೌಡಿ ಶೀಟರ್ ಸೈಫುದ್ದೀನ್ ನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಸೆಪ್ಟೆಂಬರ್ 27 ರ ಶನಿವಾರ ಬೆಳಕಿಗೆ ಬಂದಿದೆ. ಮಣಿಪಾಲ ಮೂಲದ ಸಾರಿಗೆ ವ್ಯವಹಾರದಲ್ಲಿಯೂ ತೊಡಗಿಸಿಕೊಂಡಿದ್ದ ಸೈಫುದ್ದೀನ್ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ  ಎಂದು ವರದಿಯಾಗಿದೆ .ಆತನ ಮೇಲೆ ಗುಂಡು ಹಾರಿಸಿದ ನಂತರ, ದಾಳಿಕೋರರು ಆತನ ಮೇಲೆ ಮತ್ತಷ್ಟು ಹಲ್ಲೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್

ರೌಡಿ ಶೀಟರ್ ಸೈಫುದ್ದೀನ್ ನನ್ನು ಉಡುಪಿಯ ಮಲ್ಪೆಯಲ್ಲಿ ಗುಂಡಿಕ್ಕಿ ಹತ್ಯೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಳ್ಳಾಲ ಬೀಚ್‌ನಲ್ಲಿ ಕೊಳೆತ ದೇಹ ಪತ್ತೆ; ಆಂಬುಲೆನ್ಸ್ ಗೆ 4 ಕಿ.ಮೀ. ದೂರ ಸಾಗಿಸಿದ ಜೀವ ರಕ್ಷಕ ಸಿಬ್ಬಂದಿ

(ನ್ಯೂಸ್‌ ಕಡಬ) newskadaba.com,  ಸೆ.27 ಮಂಗಳೂರು : ಉಳ್ಳಾಲದ ಮೊಗವೀರಪಟ್ಣದ ಶಿವಾಜಿ ಜೀವ ರಕ್ಷಕ ಈಜುಗಾರರ ಸಂಘದ ಸದಸ್ಯರು ಮಾನವೀಯತೆ ಮೆರೆದಿದ್ದು, ಕೊಳೆತ ಸ್ಥಿತಿಯಲ್ಲಿದ್ದ ಮೃತದೇಹವನ್ನು ಸುಮಾರು 4 ಕಿಲೋಮೀಟರ್ ದೂರ ತಮ್ಮ ಹೆಗಲ ಮೇಲೆ ಹೊತ್ತು ಸಾಗಿಸಿ ಆಂಬುಲೆನ್ಸ್ ಗೆ ಹಸ್ತಾಂತರಿಸಿ ಮಾನವೀಯತೆ ಪ್ರದರ್ಶಿಸಿದ್ದಾರೆ. ಶುಕ್ರವಾರ ತಡರಾತ್ರಿ, ಅಳಿವೆಬಾಗಿಲು ಬ್ರೇಕ್‌ವಾಟರ್ ಬಂಡೆಗಳ ಸಮೀಪ ಬಲೆ ಬೀಸಿದ್ದ ಮೀನುಗಾರರಿಗೆ ಬಂಡೆಗಳ ನಡುವೆ ಸಿಲುಕಿದ್ದ ಕೊಳೆತ ಸ್ಥಿತಿಯ ಮೃತದೇಹವೊಂದು ಕಂಡುಬಂದಿದೆ. ಅವರು ತಕ್ಷಣವೇ ಪೊಲೀಸ್ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಿದ್ದಾರೆ.

ಉಳ್ಳಾಲ ಬೀಚ್‌ನಲ್ಲಿ ಕೊಳೆತ ದೇಹ ಪತ್ತೆ; ಆಂಬುಲೆನ್ಸ್ ಗೆ 4 ಕಿ.ಮೀ. ದೂರ ಸಾಗಿಸಿದ ಜೀವ ರಕ್ಷಕ ಸಿಬ್ಬಂದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top