ಬ್ರೇಕಿಂಗ್ ನ್ಯೂಸ್

‘ಅಕ್ರಮ ವಲಸಿಗರ ಅಪರಾಧಿಗಳ ಬಗ್ಗೆ ಮೃದು ಧೋರಣೆ ತೋರುವ ಸಮಯ ಮುಗಿದಿದೆ’- ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌

(ನ್ಯೂಸ್‌ ಕಡಬ) newskadaba.com,  ಸೆ.16 ವಾಷಿಂಗ್ಟನ್‌ : ಅಕ್ರಮ ವಲಸಿಗ ಅಪರಾಧಿಗಳ ಬಗ್ಗೆ ಮೃದು ಧೋರಣೆ ತೋರುವ ಸಮಯ ನಮ್ಮ ಆಡಳಿತದಲ್ಲಿ ಮುಗಿದಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ. ಇತ್ತೀಚೆಗೆ ಡಲ್ಲಾಸ್‌ ನಗರದಲ್ಲಿ ನಡೆದ ಕರ್ನಾಟಕ ಮೂಲದ ಚಂದ್ರ ನಾಗಮಯ್ಯಲ್ಲಯ್ಯ ಶಿರಚ್ಛೇದದ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ತಮ್ಮ ಸೋಷಿಯಲ್‌ ಮೀಡಿಯಾ ವೇದಿಕೆ ಟ್ರುತ್‌ ಸೋಷಿಯಲ್‌ನಲ್ಲಿ ಪ್ರತಿಕ್ರಿಯಿಸಿದ್ದು, ಪ್ರಕರಣದ ಆರೋಪಿಯ ಮೇಲೆ ಫಸ್ಟ್‌ ಗ್ರೇಡ್‌ನ ಕೊಲೆ ಆರೋಪ ಹೊರಿಸಲಾಗುವುದು. ಜೊತೆಗೆ ಕಾನೂನಿನ ಪೂರ್ಣ ಪ್ರಮಾಣದಲ್ಲಿ ವಿಚಾರಣೆಗೆ […]

‘ಅಕ್ರಮ ವಲಸಿಗರ ಅಪರಾಧಿಗಳ ಬಗ್ಗೆ ಮೃದು ಧೋರಣೆ ತೋರುವ ಸಮಯ ಮುಗಿದಿದೆ’- ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪಾಕ್‌ ವಿರುದ್ಧದ ಗೆಲುವನ್ನು ಪಹಲ್ಗಾಮ್ ಸಂತ್ರಸ್ತರು, ಭಾರತೀಯ ಸಶಸ್ತ್ರ ಪಡೆಗಳಿಗೆ ನಾಯಕ ಸೂರ್ಯ ಯಾದವ್ ಅರ್ಪಣೆ

(ನ್ಯೂಸ್‌ ಕಡಬ) newskadaba.com,  ಸೆ.16 ದುಬೈ: ಏಷ್ಯಾ ಕಪ್‌ 2025ರ ಟೂರ್ನಿಯ ಪಾಕ್‌ ವಿರುದ್ಧದ ಗೆಲುವನ್ನು ಪಹಲ್ಗಾಮ್‌ ಸಂತ್ರಸ್ತರು, ಭಾರತೀಯ ಸಶಸ್ತ್ರ ಪಡೆಗಳಿಗೆ ನಾಯಕ ಸೂರ್ಯಕುಮಾರ್‌ ಯಾದವ್‌ ಅರ್ಪಿಸಿದ್ದಾರೆ. ಪಂದ್ಯ ಗೆದ್ದ ಬಳಿಕ ಮಾತನಾಡಿದ ಸೂರ್ಯಕುಮಾರ್, ಇದೊಂದು ಪರಿಪೂರ್ಣ ಸಂದರ್ಭ ಎಂದು ನಾನು ಭಾವಿಸುತ್ತೇನೆ. ಪಹಲ್ಗಾಮ್ ಸಂತ್ರಸ್ತರ ಕುಟುಂಬಗಳೊಂದಿಗೆ ನಾವು‌ ನಿಲ್ಲುತ್ತೇವೆ, ನಮ್ಮ ಒಗ್ಗಟ್ಟನ್ನು ಪ್ರದರ್ಶಿಸುತ್ತೇವೆ. ಈ ಗೆಲುವನ್ನು ನಮ್ಮ ಎಲ್ಲಾ ಭಾರತೀಯ ಸಶಸ್ತ್ರ ಪಡೆಗಳಿಗೆ ಅರ್ಪಿಸಲು ಬಯಸುತ್ತೇವೆ. ಅವರು ನಮಗೆಲ್ಲರಿಗೂ ಸ್ಫೂರ್ತಿ ನೀಡುವುದನ್ನು ಮುಂದುವರಿಸುತ್ತಾರೆ ಎಂದು ಆಶಿಸುತ್ತೇವೆ

ಪಾಕ್‌ ವಿರುದ್ಧದ ಗೆಲುವನ್ನು ಪಹಲ್ಗಾಮ್ ಸಂತ್ರಸ್ತರು, ಭಾರತೀಯ ಸಶಸ್ತ್ರ ಪಡೆಗಳಿಗೆ ನಾಯಕ ಸೂರ್ಯ ಯಾದವ್ ಅರ್ಪಣೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಳ್ಳಾರೆ ಮೂಲದ ವ್ಯಕ್ತಿ ತೆಂಗಿನಕಾಯಿ ಕೀಳುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ಮೃತ್ಯು

(ನ್ಯೂಸ್‌ ಕಡಬ) newskadaba.com,  ಸೆ.16 ಸುಳ್ಯ: ತೆಂಗಿನ ಮರದಿಂದ ಕಾಯಿ ಕೀಳುತ್ತಿದ್ದಾಗ ಅಲ್ಯೂಮೀನಿಯಂ ಗಳೆ ವಿದ್ಯುತ್ ಲೈನಿಗೆ ತಗುಲಿ ಕಾಯಿ ಕೊಯ್ಯುತ್ತಿದ್ದ ವ್ಯಕ್ತಿ ಮೃತಪಟ್ಟ ಘಟನೆ  ಬೆಳ್ಳಾರೆ ಬಳಿಯ ಅಯ್ಯನಕಟ್ಟೆಯಿಂದ ಸಂಭವಿಸಿದೆ. ಮೃತರಾದ ವ್ಯಕ್ತಿ ತಂಬಿನಮಕ್ಕಿಯ ರಾಮ ಎಂಬುವವರು ಎಂದು ಗುರುತಿಸಲಾಗಿದೆ.. ‌ ಅಯ್ಯನಕಟ್ಟೆಯ ಗೋಕುಲಂ ಎದುರುಗಡೆ ಇರುವ ಸಿದ್ದಿಕ್ ಎಂಬರಿಗೆ ಸೇರಿದ ತೆಂಗಿನ ಮರದಿಂದ ಕಾಯಿ ಕೀಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆಳ್ಳಾರೆ ಮೂಲದ ವ್ಯಕ್ತಿ ತೆಂಗಿನಕಾಯಿ ಕೀಳುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿಯಲ್ಲಿ ಶ್ರೀ ಕೃಷ್ಣ ಲೀಲೋತ್ಸವ ಅದ್ಧೂರಿ ಸಂಭ್ರಮ – ಲಕ್ಷಾಂತರ ಭಕ್ತರು ಸಾಕ್ಷಿ

(ನ್ಯೂಸ್‌ ಕಡಬ) newskadaba.com,  ಸೆ.16 ಉಡುಪಿ :  ಬಹುನಿರೀಕ್ಷಿತ ಶ್ರೀ ಕೃಷ್ಣ ವಿಟ್ಲ ಪಿಂಡಿ ಮಹೋತ್ಸವ ಸೋಮವಾರ ಉಡುಪಿಯಲ್ಲಿ ಅದ್ಧೂರಿ ಸಂಭ್ರಮಕ್ಕೆ ಸಾಕ್ಷಿಯಾಯಿತು. ಈ ದಿನ ಲಕ್ಷಾಂತರ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿ ಸಂಭ್ರಮಿಸಿದರು ಸೌರಮಾನ ಪಂಚಾಂಗದ ಪ್ರಕಾರ ರವಿವಾರ ನಡೆದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮಧ್ಯರಾತ್ರಿ ಸಾಂಪ್ರದಾಯಿಕ ಅರ್ಘ್ಯ ಪ್ರಧಾನ ವಿಧಿವಿಧಾನದ ಬಳಿಕ ಹಬ್ಬದ ಆಚರಣೆಗಳು ಆರಂಭವಾದವು. ಸರಿಯಾಗಿ 12:11 ಕ್ಕೆ ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು ಶ್ರೀ

ಉಡುಪಿಯಲ್ಲಿ ಶ್ರೀ ಕೃಷ್ಣ ಲೀಲೋತ್ಸವ ಅದ್ಧೂರಿ ಸಂಭ್ರಮ – ಲಕ್ಷಾಂತರ ಭಕ್ತರು ಸಾಕ್ಷಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಹಲವು ವಿಷಯಗಳ ಬಗ್ಗೆ ಕುರಿತು ಗಂಭೀರ ಚರ್ಚೆ

(ನ್ಯೂಸ್‌ ಕಡಬ) newskadaba.com,  ಸೆ.16 ಬಂಟ್ವಾಳ  : ಬಂಟ್ವಾಳ ಪುರಸಭೆಯ ಸಾಮಾನ್ಯ ಸಭೆಯು ಪುರಸಭಾ ಅಧ್ಯಕ್ಷ ವಾಸು ಪೂಜಾರಿಯವರ ಅಧ್ಯಕ್ಷತೆಯಲ್ಲಿ ಸೋಮವಾರ(ಸೆ.15) ದಂದು ನಡೆಯಿತು. ಸಾಮಾನ್ಯ ಸಭೆಯಲ್ಲಿ ಯಾವುದೇ ಪ್ರಕರಣಗಳಿಗೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಒಂದೇ ಒಂದು ಕಾನೂನು ಪ್ರಕಾರ ದಾಖಲೆಗಳು ಸಿಗುತ್ತಿಲ್ಲ. ಪುರಸಭೆಯ ಸದಸ್ಯರುಗಳಿಗೆ ಮರ್ಯಾದೆ ಇಲ್ಲವೇ? ನಾವೇನು ಕೆಲಸವಿಲ್ಲದೆ ಬಂದು ಇಲ್ಲಿ ಕುಳಿತುಕೊಂಡಿದ್ದೇವಾ? ಎಂದು ಅಧಿಕಾರಿಗಳಿಗೆ ಹಿರಿಯ ಸದಸ್ಯ ಎ.ಗೋವಿಂದ ಪ್ರಭುರವರು ಪ್ರಶ್ನಿಸಿದರು. ಘನತ್ಯಾಜ್ಯ ವಾಹನವೊಂದಕ್ಕೆ ಒಬ್ಬ ಡ್ರೈವರನ್ನು ನಿಯೋಜಿಸಿ ಆತನಿಗೆ ಫೆ.ಯಿಂದ ಜೂನ್ ವರೆಗೆ

ಬಂಟ್ವಾಳ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಹಲವು ವಿಷಯಗಳ ಬಗ್ಗೆ ಕುರಿತು ಗಂಭೀರ ಚರ್ಚೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಣಕಾಸು ಸಚಿವಾಲಯ ಅಧಿಕಾರಿ ಬೈಕ್‌ಗೆ ಬಿಎಂಡಬ್ಲ್ಯೂ ಕಾರು ಡಿಕ್ಕಿ, ನವಜೋತ್ ಸಿಂಗ್ ಸಾವು, ಪತ್ನಿ ಗಂಭೀರ

(ನ್ಯೂಸ್‌ ಕಡಬ) newskadaba.com,  ಸೆ.15  ನವದೆಹಲಿ: ಬೈಕ್‌ಗೆ ಬಿಎಂಡಬ್ಲ್ಯೂ ಕಾರು ಡಿಕ್ಕಿ ಹೊಡೆದ ಪರಿಣಾಮ ಕೇಂದ್ರ ಹಣಕಾಸು ಸಚಿವಾಲಯದ ಉಪ ಕಾರ್ಯದರ್ಶಿ ನವಜೋತ್ ಸಿಂಗ್ ಸಾವನ್ನಪ್ಪಿದ್ದಾರೆ. ಈ ಅಪಘಾತದಲ್ಲಿ ಅವರ ಮಡದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆಯ ಉಪ ಕಾರ್ಯದರ್ಶಿ ನವಜೋತ್ ಸಿಂಗ್ (52), ಬಾಂಗ್ಲಾ ಸಾಹಿಬ್‌ ಗುರುದ್ವಾರದಿಂದ ತಮ್ಮ ಬೈಕ್‌ನಲ್ಲಿ ಮನೆಗೆ ಹಿಂದಿರುಗುತ್ತಿದ್ದರು. ಈ ವೇಳೆ ಬಿಎಂಡಬ್ಲ್ಯೂ ಕಾರು ಡಿಕ್ಕಿಯಾಗಿ ಪ್ರಾಣ ಬಿಟ್ಟಿದ್ದಾರೆ. ಅಪಘಾತದಲ್ಲಿ ನವತೋಜ್‌ ಸಿಂಗ್‌

ಹಣಕಾಸು ಸಚಿವಾಲಯ ಅಧಿಕಾರಿ ಬೈಕ್‌ಗೆ ಬಿಎಂಡಬ್ಲ್ಯೂ ಕಾರು ಡಿಕ್ಕಿ, ನವಜೋತ್ ಸಿಂಗ್ ಸಾವು, ಪತ್ನಿ ಗಂಭೀರ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಡುಪಿಯ ಪರ್ಕಳದಲ್ಲಿ ರಸ್ತೆ ದುರಸ್ತಿ ಕಾರ್ಯ ಆರಂಭ; ಪ್ರಯಾಣಿಕರು ನಿರಾಳ

(ನ್ಯೂಸ್‌ ಕಡಬ) newskadaba.com,  ಸೆ.15  : ಸಾರ್ವಜನಿಕರ ನಿರಂತರ ಬೇಡಿಕೆಯ ನಂತರ ಕೆಳ ಪರ್ಕಳದಲ್ಲಿ ರಸ್ತೆ ದುರಸ್ತಿ ಕಾರ್ಯ ಅಂತಿಮವಾಗಿ ಪ್ರಾರಂಭವಾಗಿದೆ. ಉಡುಪಿ-ಚಿಕ್ಕಮಗಳೂರು ಸಂಸದ ಶ್ರೀನಿವಾಸ್ ಪೂಜಾರಿ ಅವರು ಸ್ಥಳಕ್ಕೆ ಭೇಟಿ ನೀಡಿ ತಕ್ಷಣ ರಸ್ತೆ ದುರಸ್ತಿಪಡಿಸುವಂತೆ ಮತ್ತು ಸೆಪ್ಟೆಂಬರ್ 15, ಸೋಮವಾರದಿಂದಲೇ ಕಾಮಗಾರಿ ಆರಂಭಿಸುವಂತೆ ಸೂಚಿಸಿದ್ದರು. ಸಂಸದರು, ಶಾಸಕರು ಮತ್ತು ಜಿಲ್ಲಾಧಿಕಾರಿಗಳ ಆದೇಶದಂತೆ ಸೆಪ್ಟೆಂಬರ್ 15ರಿಂದ ರಸ್ತೆ ದುರಸ್ತಿ ಕಾಮಗಾರಿ ಆರಂಭಗೊಂಡಿದೆ. ಮೊದಲ ದಿನ, ಗುತ್ತಿಗೆದಾರರು ಕೆಳ ಪರ್ಕಳದ ಹತ್ತಿರ ಕಾಮಗಾರಿ ಆರಂಭಿಸಿದ್ದಾರೆ. ರಸ್ತೆ ಡಾಂಬರೀಕರಣ

ಉಡುಪಿಯ ಪರ್ಕಳದಲ್ಲಿ ರಸ್ತೆ ದುರಸ್ತಿ ಕಾರ್ಯ ಆರಂಭ; ಪ್ರಯಾಣಿಕರು ನಿರಾಳ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಾಸಿಗೆ, ದಿಂಬು ಯಾವುದೇ ಸೌಕರ್ಯ ದರ್ಶನ್ ಗೆ ಒದಗಿಸಿಲ್ಲ – ಮತ್ತೆ ದರ್ಶನ್ ಪರ ಅರ್ಜಿ ಸಲ್ಲಿಸಿದ ವಕೀಲರು

(ನ್ಯೂಸ್‌ ಕಡಬ) newskadaba.com,  ಸೆ.15  ಬೆಂಗಳೂರು  : ಸುಪ್ರೀಂ ಕೋರ್ಟ್ ಆದೇಶದ ಬಳಿಕ ಮತ್ತೆ ಜೈಲು ಸೇರಿದ ನಟ ದರ್ಶನ್ ಗೆ ಇತ್ತೀಚಿಗಷ್ಟೇ ಕೋರ್ಟ್ ಹಾಸಿಗೆ, ದಿಂಬು ನೀಡುವಂತೆ ಆದೇಶಿಸಿತ್ತು. ಆದರೆ ಜೈಲಧಿಕಾರಿಗಳು ಯಾವುದೇ ಸೌಕರ್ಯ ನೀಡಿಲ್ಲ ಎಂದು ದರ್ಶನ್ ಪರ ವಕೀಲರು 57ನೇ ಸಿಸಿಎಚ್ ಕೋರ್ಟ್‌ನಲ್ಲಿ ಮತ್ತೆ ಅರ್ಜಿ ಸಲ್ಲಿಸಿದ್ದಾರೆ. ಇತ್ತೀಚಿಗೆ ದರ್ಶನ್ ಪರ ವಕೀಲ ಸುನೀಲ್‌ ಅವರು, ತುಂಬಾ ಚಳಿಯಿದೆ, ಹೀಗಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್‌ಗೆ ಕಷ್ಟವಾಗುತ್ತಿದೆ. ಹೀಗಾಗಿ ದಿಂಬು, ಹಾಸಿಗೆ ಕೊಡಿಸಬೇಕು

ಹಾಸಿಗೆ, ದಿಂಬು ಯಾವುದೇ ಸೌಕರ್ಯ ದರ್ಶನ್ ಗೆ ಒದಗಿಸಿಲ್ಲ – ಮತ್ತೆ ದರ್ಶನ್ ಪರ ಅರ್ಜಿ ಸಲ್ಲಿಸಿದ ವಕೀಲರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಬೆಂಗಳೂರು : ನಟಿ ಪ್ರಿಯಾಂಕ ಉಪೇಂದ್ರ ಹಾಗೂ ಉಪೇಂದ್ರ ಅವರ ಮೊಬೈಲ್‌ ಹ್ಯಾಕ್‌

(ನ್ಯೂಸ್‌ ಕಡಬ) newskadaba.com,  ಸೆ.15  ಬೆಂಗಳೂರು : ಪ್ರಿಯಾಂಕ ಉಪೇಂದ್ರ ದಂಪತಿಗಳ ಮೊಬೈಲ್‌ ಹ್ಯಾಕ್‌ ಆಗಿದ್ದು, ಈ ಬಗ್ಗೆ ದಂಪತಿಗಳು ದೂರು ನೀಡಲು ಸದಾಶಿವನಗರದ ಪೊಲೀಸ್‌ ಠಾಣೆಗೆ ತೆರಳಿದ್ದಾರೆ. ಈ ಬಗ್ಗೆ ನಟ ಉಪೇಂದ್ರ ಅವರು ವಿಡಿಯೋ ಮೂಲಕ ಮನವಿ ಮಾಡಿಕೊಂಡಿದ್ದು, ‘ದಯವಿಟ್ಟು ಯಾವುದೇ ಕಾರಣಕ್ಕೂ ನನ್ನ ನಂಬರ್‌ನಿಂದ ಅಥವಾ ಪ್ರಿಯಾಂಕ ಅವರ ನಂಬರ್‌ನಿಂದ ಯಾವುದೇ ಮೆಸೇಜ್‌ ಬಂದರೆ ಅದಕ್ಕೆ ಮರು ಉತ್ತರ ನೀಡಬೇಡಿ. ಹಾಗೂ ಹಣ ನೀಡಬೇಡಿ’ ಎಂದು ಹೇಳಿದ್ದಾರೆ. ಮೊಬೈಲ್ ಹ್ಯಾಕ್ ಆದ ಬಗ್ಗೆ

ಬೆಂಗಳೂರು : ನಟಿ ಪ್ರಿಯಾಂಕ ಉಪೇಂದ್ರ ಹಾಗೂ ಉಪೇಂದ್ರ ಅವರ ಮೊಬೈಲ್‌ ಹ್ಯಾಕ್‌ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಮಂಗಳೂರಿನಲ್ಲಿ ಎಂಜಿನ್ ವೈಫಲ್ಯದಿಂದ ಮೀನುಗಾರಿಕಾ ಬೋಟ್‌ ಪಲ್ಟಿ – 13 ಮೀನುಗಾರರು ಅಪಾಯದಿಂದ

(ನ್ಯೂಸ್‌ ಕಡಬ) newskadaba.com,  ಸೆ.15  ಮಂಗಳೂರು : ಮೀನುಗಾರಿಕೆಗಾಗಿ ಆಳ ಸಮುದ್ರಕ್ಕೆ ತೆರಳಿದ್ದ ಮೀನುಗಾರಿಕೆ ಬೋಟ್‌ ಎಂಜಿನ್ ವೈಫಲ್ಯದಿಂದ ಸಮುದ್ರ ತಟದ ಕಲ್ಲು ಬಂಡೆಗಳಿಗೆ ಬಡಿದು ಪಲ್ಟಿ ಹೊಡೆದ ಘಟನೆ ಉಳ್ಳಾಲ ಸೀಗ್ರೌಂಡ್‌ನಲ್ಲಿ ಸೋಮವಾರ ಬೆಳಗ್ಗೆ ಘಟನೆ ನಡೆದಿದೆ. ಹಡಗಿನಲ್ಲಿದ್ದ 13 ಜನ  ಮೀನುಗಾರರ ಪ್ರಾಣ ಅಪಾಯದಿಂದ ಪಾರಾಗಿದ್ದಾರೆ. ಬುರಾಕ್ ಟ್ರಾಲರ್ ಎಂಬ ದೋಣಿ ಉಳ್ಳಾಲದ ಮುಕ್ಕಚ್ಚೇರಿ ನಿವಾಸಿ ಮೊಹಮ್ಮದ್ ಅಶ್ಫಾಕ್ ಅವರಿಗೆ ಸೇರಿದ್ದು, ರವಿವಾರ ರಾತ್ರಿ ಈ ಹಡಗು ಮಂಗಳೂರು ಬಂದರಿನಿಂದ ಕೇರಳದ ಕಡೆಗೆ ಆಳ

ಮಂಗಳೂರಿನಲ್ಲಿ ಎಂಜಿನ್ ವೈಫಲ್ಯದಿಂದ ಮೀನುಗಾರಿಕಾ ಬೋಟ್‌ ಪಲ್ಟಿ – 13 ಮೀನುಗಾರರು ಅಪಾಯದಿಂದ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top