ಬ್ರೇಕಿಂಗ್ ನ್ಯೂಸ್

ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಉಜಿತ್ ಶ್ಯಾಮ್, ಕಾರ್ಯದರ್ಶಿಯಾಗಿ ವೇಗನ್ ಅಮೈ ,ಜೊತೆ ಕಾರ್ಯದರ್ಶಿಯಾಗಿ ಪ್ರಿಯಾ ಎಸ್.ಸಾಯ

(ನ್ಯೂಸ್‌ ಕಡಬ) newskadaba.com ಸೆ.06 : ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಉಜಿತ್ ಶ್ಯಾಮ್ ಚಿಕ್ಮುಳಿ ಅಂತಿಮ LLB, ಕಾರ್ಯದರ್ಶಿಯಾಗಿ ವೇಗನ್ ಅಮೈ  ಅಂತಿಮ BA.LLB, ಮತ್ತು ಜೊತೆ ಕಾರ್ಯದರ್ಶಿಯಾಗಿ  ಪ್ರಿಯಾ ಎಸ್.ಸಾಯ ಎಣ್ಮಕಜೆ ಅಂತಿಮ BA.LLB ಇವರು  ಆಯ್ಕೆಯಾಗಿದ್ದಾರೆ. ಉಜಿತ್ ಶ್ಯಾಮ್ ರವರು ಗುತ್ತಿಗಾರು ಗ್ರಾಮದ ಚಿಕ್ಮುಳಿ ಕಾರ್ಯಪ್ಪ ಗೌಡ ಮತ್ತು ದಮಯಂತಿ ದಂಪತಿ ಪುತ್ರ. ವೇಗನ್ ಅಮೈಯವರು  ಯೇನೇಕಲ್ ಗ್ರಾಮದ  ಅಮೈ, ಲೋಕೇಶ್ ಗೌಡ ಮತ್ತು ಇಂದಿರಾರವರ ಪುತ್ರ. . […]

ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಉಜಿತ್ ಶ್ಯಾಮ್, ಕಾರ್ಯದರ್ಶಿಯಾಗಿ ವೇಗನ್ ಅಮೈ ,ಜೊತೆ ಕಾರ್ಯದರ್ಶಿಯಾಗಿ ಪ್ರಿಯಾ ಎಸ್.ಸಾಯ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ರಿಕ್ಕಿಕೇಜ್ ಸಂಗೀತ ನಿರ್ದೇಶನದ ಚಿತ್ರ ಆಸ್ಕರ್‌ಗೆ ಪ್ರವೇಶ

o   (ನ್ಯೂಸ್‌ ಕಡಬ) newskadaba.com ಸೆ.06  ಮುಂಬೈ:  3  ಬಾರಿ ಪ್ರತಿಷ್ಟಿತ ಗ್ರ್ಯಾಮಿ ಪ್ರಶಸ್ತಿ ವಿಜೇತ ರಿಕ್ಕಿ ಕೇಜ್ ಅವರ ಸಂಗೀತ ನಿರ್ದೇಶನದ ಸಿನಿಮಾ ಅಧಿಕೃತವಾಗಿ ಆಸ್ಕರ್ ಪ್ರಶಸ್ತಿ ಅಂಗಳಕ್ಕೆ ಪ್ರವೇಶ ಪಡೆದಿದೆ. ಈ ಖುಷಿಯನ್ನ ಖುದ್ದು ರಿಕ್ಕಿ ಕೇಜ್ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. “ಪಾಪಾ ಬುಕಾ” ಇದು ಪಪುವಾ ನ್ಯೂಗಿನಿಯಾದ ಮೊದಲ ಅಧಿಕೃತ ಆಸ್ಕರ್ ಪ್ರವೇಶ ಪಡೆದ ಚಿತ್ರವಾಗಿದೆ. ಈ ಚಿತ್ರಕ್ಕೆ ರಿಕ್ಕಿ ಕೇಜ್ ಹಿನ್ನೆಲೆ ಸಂಗೀತ ಸಂಯೋಜಿಸಿದ್ದಾರೆ. 3 ಬಾರಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

ರಿಕ್ಕಿಕೇಜ್ ಸಂಗೀತ ನಿರ್ದೇಶನದ ಚಿತ್ರ ಆಸ್ಕರ್‌ಗೆ ಪ್ರವೇಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್, ಸಿನಿಮಾ

ಕಾಸರಗೋಡು: ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ವೃದ್ಧ

(ನ್ಯೂಸ್‌ ಕಡಬ) newskadaba.com ಸೆ.06 ಕಾಸರಗೋಡು: ಗುಂಡು ಹಾರಿಸಿಕೊಂಡು ವೃದ್ಧರೋರ್ವರು ಆತ್ಮಹತ್ಯೆಗೆ ಶರಣಾದ ಘಟನೆ ಮಂಜೇಶ್ವರ ಠಾಣಾ ವ್ಯಾಪ್ತಿಯ ಮೀಯಪದವು ಮದಂಗಲ್ಲು ಎಂಬಲ್ಲಿ ನಡೆದಿದೆ. ಮದಂಗಲ್ಲಿನ ಸುಬ್ರಾಯ ಭಟ್ (86) ಮೃತಪಟ್ಟವರು. ಶುಕ್ರವಾರ ಮಧ್ಯಾಹ್ನ ಮನೆಯಲ್ಲಿ ಈ ಘಟನೆ ನಡೆದಿದೆ. ಮಾನಸಿಕ ಅಸ್ವಸ್ಥತೆಯಿಂದ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರ ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ಸುಬ್ರಾಯ ಭಟ್ ಹಾಗೂ ಪತ್ನಿ ರಾಜಮ್ಮ ಮಾತ್ರ ಮನೆಯಲ್ಲಿ ವಾಸವಾಗಿದ್ದರು. ಮಂಜೇಶ್ವರ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಮಹಜರು ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ

ಕಾಸರಗೋಡು: ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ವೃದ್ಧ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ಮತಪತ್ರ ಬಳಕೆ ಮತ್ತೆ ಪುರಾತನ ಯುಗಕ್ಕೆ ಹೋಗುವ ನಿರ್ಣಯ’- ಎನ್.ರವಿಕುಮಾರ್

(ನ್ಯೂಸ್‌ ಕಡಬ) newskadaba.com,  ಸೆ.06  ಬೆಂಗಳೂರು: ಇವಿಎಂ ಯಂತ್ರಗಳನ್ನು ಬದಿಗಿಟ್ಟು ಮತಪತ್ರದೊಂದಿಗೆ ಚುನಾವಣೆ ನಡೆಸಲು ಈ ಸರಕಾರ ಮುಂದಾಗಿದ್ದು, ಮತ್ತೆ ಪುರಾತನ ಯುಗಕ್ಕೆ ಹೋಗುತ್ತಿದೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಅವರು ಆಕ್ಷೇಪಿಸಿದ್ದಾರೆ. ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರಿಸಿದರು. ಮತಪತ್ರ ಬಳಸಿದರೆ 2-3 ದಿನ ಮತ ಎಣಿಕೆ ಮಾಡಬೇಕಾಗುತ್ತದೆ. ರಾಹುಲ್ ಗಾಂಧಿಯವರು ಹೇಳಿದರೆಂಬ ಕಾರಣಕ್ಕಾಗಿ ಇವಿಎಂ ಬದಿಗಿಟ್ಟು, ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ಮಾಡುವುದನ್ನು ಬಿಜೆಪಿ

‘ಮತಪತ್ರ ಬಳಕೆ ಮತ್ತೆ ಪುರಾತನ ಯುಗಕ್ಕೆ ಹೋಗುವ ನಿರ್ಣಯ’- ಎನ್.ರವಿಕುಮಾರ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪತ್ನಿಯನ್ನು ಗುಂಡಿಟ್ಟು ಕೊಂದ ಪತಿ

(ನ್ಯೂಸ್‌ ಕಡಬ) newskadaba.com ಸೆ.06 ಲಖನೌ : ಉತ್ತರ ಪ್ರದೇಶದ ಗೋರಖ್‌ಪುರದ ಶಾಹ್‌ಪುರದಲ್ಲಿ ಬುಧವಾರ ಸಂಜೆ ವಿಚ್ಛೇದನ (Divorce) ವಿವಾದದ ಹಿನ್ನೆಲೆಯಲ್ಲಿ ಗಂಡನೊಬ್ಬ ತನ್ನ ಹೆಂಡತಿಯನ್ನು ಗುಂಡಿಟ್ಟು ಕೊಂದ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ವಿಶ್ವಕರ್ಮಾ ಚೌಹಾಣ್ ಎಂದು ಗುರುತಿಸಲಾಗಿದ್ದು, ಘಟನೆಯ ತಕ್ಷಣವೇ ಆತನನ್ನು ಸ್ಥಳದಲ್ಲಿಯೇ ಬಂಧಿಸಲಾಗಿದೆ. ಮೃತ ಮಮತಾ ಚೌಹಾಣ್ (35) ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ತನ್ನ 13 ವರ್ಷದ ಮಗಳೊಂದಿಗೆ ಪ್ರತ್ಯೇಕವಾಗಿ ವಾಸಿಸುತ್ತಿದ್ದಳು. ವಿಚ್ಛೇದನಕ್ಕೆ ಮುನ್ನ ಮಗುವಿನ ಆರೈಕೆಗಾಗಿ ಹಣ ಮತ್ತು

ಪತ್ನಿಯನ್ನು ಗುಂಡಿಟ್ಟು ಕೊಂದ ಪತಿ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನೇರ ನೇಮಕಾತಿ ಪ್ರಕ್ರಿಯೆ- ಒಳಮೀಸಲಾತಿಯೊಂದಿಗೆ ಹೊಸ ನೇಮಕಾತಿ ಅಧಿಸೂಚನೆ

(ನ್ಯೂಸ್‌ ಕಡಬ) newskadaba.com,  ಸೆ.06  ಬೆಂಗಳೂರು: ಪರಿಶಿಷ್ಟ ಜಾತಿ ಒಳಮೀಸಲಾತಿ ಅಳವಡಿಸಿಕೊಂಡು ಕಾಲಬದ್ಧವಾಗಿ ಆಯಾ ಇಲಾಖೆ, ಮಂಡಳಿ, ನಿಗಮ, ಸ್ವಾಯತ್ತ ಸಂಸ್ಥೆಗಳ ಹುದ್ದೆಗಳಿಗೆ ಹೊಸದಾಗಿ ನೇಮಕಾತಿ ಅಧಿಸೂಚನೆ ಹೊರಡಿಸಬೇಕು ಎಂದು ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ. ಸಚಿವ ಸಂಪುಟದ ನಿರ್ಣಯದಂತೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ(ಡಿಪಿಎಆರ್) ಸರಕಾರದ ಅಧೀನ ಕಾರ್ಯದರ್ಶಿ ವೀರಭದ್ರ ಅವರು, ಈ ಕುರಿತು ಅಧಿಕೃತ ಸುತ್ತೋಲೆ ಹೊರಡಿಸಿದ್ದು, ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿ ಹಿನ್ನೆಲೆ 2024ರ ಅಕ್ಟೋಬರ್ 28ರ ನಂತರಹೊರಡಿಸಲಾದ

ನೇರ ನೇಮಕಾತಿ ಪ್ರಕ್ರಿಯೆ- ಒಳಮೀಸಲಾತಿಯೊಂದಿಗೆ ಹೊಸ ನೇಮಕಾತಿ ಅಧಿಸೂಚನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

“ಶಿಕ್ಷಕರು ಮಕ್ಕಳನ್ನು ಸಮರ್ಥ ನಾಗರಿಕರನ್ನಾಗಿ ರೂಪಿಸಬೇಕು” –  ಡಾ. ವಿಜಯಲಕ್ಷ್ಮಿ ದೇಶಮಾನೆ

(ನ್ಯೂಸ್‌ ಕಡಬ) newskadaba.com ಬೆಂಗಳೂರು; ಎಪಿಎಸ್ ಸಂಸ್ಥೆಗಳು ಇಂದು ತನ್ನ ಸಂಸ್ಥಾಪಕರ ದಿನ ಮತ್ತು ಶಿಕ್ಷಕರ ದಿನವನ್ನು ಆಚರಿಸಿದೆ. ಇದು ಒಂದು ಉತ್ತಮ ಸಂಯೋಗವಾಗಿದೆ, ಏಕೆಂದರೆ ಸಂಸ್ಥೆಯ ಸಂಸ್ಥಾಪಕರು ಸ್ವತಃ ಶಿಕ್ಷಕರಾಗಿದ್ದರು ಮತ್ತು ಅವರ ಜನ್ಮದಿನ ಸೆಪ್ಟೆಂಬರ್ 5 ರಂದು ಬರುತ್ತದೆ, ಇದು ಶಿಕ್ಷಕರ ದಿನವೂ ಆಗಿದೆ, ಅಂದರೆ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನ. ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ. ವಿಜಯಲಕ್ಷ್ಮಿ ದೇಶಮಾನೆ ಅವರು ಭಾಗವಹಿಸಿದ್ದರು. ಅವರು ಎಲ್ಲಾ ಅಧ್ಯಾಪಕ ವರ್ಗಕ್ಕೆ ಶುಭ

“ಶಿಕ್ಷಕರು ಮಕ್ಕಳನ್ನು ಸಮರ್ಥ ನಾಗರಿಕರನ್ನಾಗಿ ರೂಪಿಸಬೇಕು” –  ಡಾ. ವಿಜಯಲಕ್ಷ್ಮಿ ದೇಶಮಾನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಮೊಬೈಲ್ ಬಿಡಿ-ಪುಸ್ತಕ ಹಿಡಿ’- ಶಿಕ್ಷಕರಿಗೆ-ಮಕ್ಕಳಿಗೆ ಕರೆ ನೀಡಿದ- ಸಿಎಂ ಸಿದ್ದರಾಮಯ್ಯ

(ನ್ಯೂಸ್‌ ಕಡಬ) newskadaba.com,  ಸೆ.06  ಬೆಂಗಳೂರು:ಮೊಬೈಲ್ ಗೀಳು ಈಗ ಮಕ್ಕಳಲ್ಲಿ ಹೆಚ್ಚಾಗಿದೆ. ಈ ಗೀಳಿನಿಂದ ಮಕ್ಕಳನ್ನು ಹೊರಗೆ ತರುವ ಕೆಲಸವನ್ನು ಶಿಕ್ಷಕರು ಪರಿಣಾಮಕಾರಿಯಾಗಿ ಆಗಬೇಕಿದೆ. ಆದ್ದರಿಂದ, “ಮೊಬೈಲ್ ಬಿಡಿ-ಪುಸ್ತಕ ಹಿಡಿ” ಎನ್ನುವ ಮೌಲ್ಯವನ್ನು ಪ್ರತೀ ಶಾಲೆ ಮತ್ತು ಮನೆಗಳಲ್ಲೂ ಜಾರಿ ಆಗಲಿ ಎಂದು ಶಿಕ್ಷಕರಿಗೆ-ಮಕ್ಕಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಪ್ರಶಸ್ತಿ ನೀಡಿ ಅಭಿನಂದಿಸಿ ಮಾತನಾಡಿದರು .ಶಿಕ್ಷಣ ನಮ್ಮ‌

‘ಮೊಬೈಲ್ ಬಿಡಿ-ಪುಸ್ತಕ ಹಿಡಿ’- ಶಿಕ್ಷಕರಿಗೆ-ಮಕ್ಕಳಿಗೆ ಕರೆ ನೀಡಿದ- ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

“ಭಾರತ ನಮ್ಮ ಕೈ ತಪ್ಪಿಲ್ಲ, ನಮ್ಮ ನಡುವೆ ವಿಶೇಷ ಸಂಬಂಧವಿದೆ”- ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್

(ನ್ಯೂಸ್‌ ಕಡಬ) newskadaba.com,  ಸೆ.06 ವಾಷಿಂಗ್ಟನ್: ಭಾರತ ನಮ್ಮ ಕೈ ತಪ್ಪಿಲ್ಲ, ನಮ್ಮ ನಡುವೆ ವಿಶೇಷ ಸಂಬಂಧವಿದೆ. ಈ ಬಗ್ಗೆ ತಲೆಕೆಡಿಸಿಕೊಳ್ಳಬೇಕಿಲ್ಲ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೇಳಿದ್ದಾರೆ. ಶುಕ್ರವಾರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಟ್ರಂಪ್ ಅವರು, ನಾವು ಭಾರತ ಮತ್ತು ರಷ್ಯಾವನ್ನು ಕರಾಳ ಚೀನಾದಿಂದಾಗಿ ಕಳೆದುಕೊಂಡಂತೆ ಕಾಣುತ್ತಿದೆ. ಅವರಿಗೆ ಸುದೀರ್ಘ ಹಾಗೂ ಸಮೃದ್ಧ ಭವಿಷ್ಯ ಸಿಗುವಂತಾಗಲಿ ಎಂದು ಹೇಳಿದ್ದರು. ಇದರ ಜತೆಗೆ ಅವರು ಇತ್ತೀಚೆಗೆ ನಡೆದ ಶಾಂಫ್ಟ್ ಕೋ ಆಪರೇಷನ್ ಆರ್ಗನೈಸೇಷನ್

“ಭಾರತ ನಮ್ಮ ಕೈ ತಪ್ಪಿಲ್ಲ, ನಮ್ಮ ನಡುವೆ ವಿಶೇಷ ಸಂಬಂಧವಿದೆ”- ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪುತ್ತೂರಿನ ಪಿಲಿನಲಿಕೆಯ ಬ್ರಾಂಡ್ ಪಿಲಿ ರಾಧಣ್ಣ ನಿಧನ

(ನ್ಯೂಸ್‌ ಕಡಬ) newskadaba.com,  ಸೆ.06 ಪುತ್ತೂರು : ಪಿಲಿ ಪರಂಪರೆಗೆ ತನ್ನದೇ ಶೈಲಿಯ ಹೆಜ್ಜೆಯ ಹೆಗ್ಗುರುತಿನ ಬ್ರ‍್ಯಾಂಡ್ ತಂದುಕೊಟ್ಟ ಪಿಲಿ ರಾಧಣ್ಣ ಅವರು ಅನಾರೋಗ್ಯದ ಹಿನ್ನೆಲೆ ಶನಿವಾರ ನಸುಕಿನ ಜಾವ ಕೊನೆಯುಸಿರೆಳೆದಿದ್ದಾರೆ. ಕೆಮ್ಮಾಯಿ ನಿವಾಸಿ ರಾಧಾಕೃಷ್ಣ ಶೆಟ್ಟಿ (59) ಅವರನ್ನು ಅನಾರೋಗ್ಯದ ಹಿನ್ನಲೆ ಸೆ.5 ರಂದು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿಂದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು. ಪುತ್ತೂರಿನಲ್ಲಿ ಪಿಲಿ ರಾಧಣ್ಣ ಎಂದೇ ಹೆಸರಾದ ರಾಧಾಕೃಷ್ಣ ಶೆಟ್ಟಿಯವರು

ಪುತ್ತೂರಿನ ಪಿಲಿನಲಿಕೆಯ ಬ್ರಾಂಡ್ ಪಿಲಿ ರಾಧಣ್ಣ ನಿಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top