ಬ್ರೇಕಿಂಗ್ ನ್ಯೂಸ್

2025ರ ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಶಿಪ್‌ : ಭಾರತಕ್ಕೆ ಪದಕ ಖಚಿತ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30:  2025ರ ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಶಿಪ್‌ನ ಸೆಮಿಫೈನಲ್‌ಗೆ ಭಾರತದ ಸಾತ್ವಿಕ್‌ ಸಾಯಿರಾಜ್‌ ರಾಂಕಿರೆಡ್ಡಿ ಮತ್ತು ಚಿರಾಗ್‌ ಶೆಟ್ಟಿ ಎಂಟ್ರಿ ಕೊಟ್ಟಿದ್ದು, ಈ ಬಾರಿ ಭಾರತಕ್ಕೆ ಪದಕ ಸಿಗುವುದು ಖಚಿತಪಟ್ಟಿದೆ. ಕಳೆದ 2022 ರಲ್ಲಿ ಸಾತ್ವಿಕ್‌ ಸಾಯಿರಾಜ್‌ ರಾಂಕಿರೆಡ್ಡಿ ಮತ್ತು ಚಿರಾಗ್‌ ಶೆಟ್ಟಿ ಸೆಮಿಫೈನಲ್‌ಗೆ ತಲುಪುವ ಮೂಲಕ ಕಂಚಿನ ಪದಕ ಗೆದ್ದಿದ್ದರು.ಇದೀಗ ಮತ್ತೊಮ್ಮೆ ಸಾತ್ವಿಕ್‌ ಸಾಯಿರಾಜ್‌ ರಾಂಕಿರೆಡ್ಡಿ ಮತ್ತು ಚಿರಾಗ್‌ ಶೆಟ್ಟಿ ನಿರ್ಣಾಯಕ ಹಂತಕ್ಕೇರುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಕಂಚಿನ ಪದಕ ದೃಢಪಡಿಸಿಕೊಂಡಿರುವ […]

2025ರ ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಶಿಪ್‌ : ಭಾರತಕ್ಕೆ ಪದಕ ಖಚಿತ Read More »

ಬ್ರೇಕಿಂಗ್ ನ್ಯೂಸ್

ಹುಬ್ಬಳ್ಳಿ – ಜೋಧಪುರ್ ನೇರ ರೈಲು ಸಂಚಾರ : ಟಿಕೆಟ್ ಬುಕಿಂಗ್ ಶುರು

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 ನವದೆಹಲಿ : ಕರ್ನಾಟಕಕ್ಕೆ ಅನೇಕ ರೈಲ್ವೆ ಯೋಜನೆಗಳ ಕೊಡುಗೆ ನೀಡಿರುವ ಕೇಂದ್ರ ಸರ್ಕಾರ, ಇದೀಗ ಹುಬ್ಬಳ್ಳಿ-ಜೋಧಪುರ್ ನೇರ ರೈಲು ಸಂಚಾರ ಘೋಷಣೆ ಮಾಡಿದೆ. ಹುಬ್ಬಳ್ಳಿ-ಜೋಧಪುರ್ ವಿಶೇಷ ರೈಲು ಸೆಪ್ಟೆಂಬರ್ ತಿಂಗಳಿನಿಂದಲೇ ಸಂಚಾರ ಆರಂಭಿಸಲಿದೆ. ಪ್ರಸ್ತುತ ವಿಶೇಷ ರೈಲಾಗಿರುವ ಇದನ್ನು ಮುಂದಿನ ದಿನಗಳಲ್ಲಿ ನಿಯತಕಾಲಿಕವಾಗಿ ಪರಿವರ್ತನೆಗೊಳಿಸುವ ಬಗ್ಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭರವಸೆ ನೀಡಿದ್ದಾರೆಂದು ಸಚಿವ ಪ್ರಹ್ಲಾದ್ ಜೋಶಿ ಮಾಹಿತಿ ನೀಡಿದ್ದಾರೆ. ಹುಬ್ಬಳ್ಳಿ-ಜೋಧಪುರ್ ನೂತನ ರೈಲು ಹುಬ್ಬಳ್ಳಿಯಿಂದ ಸಂಜೆ

ಹುಬ್ಬಳ್ಳಿ – ಜೋಧಪುರ್ ನೇರ ರೈಲು ಸಂಚಾರ : ಟಿಕೆಟ್ ಬುಕಿಂಗ್ ಶುರು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉತ್ತರಾಖಂಡ: ಮೇಘಸ್ಫೋಟಕ್ಕೆ 6 ಮಂದಿ ಸಾವು ; 11 ಮಂದಿ ನಾಪತ್ತೆ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 ಕುಮಾವೂನ್:  ಉತ್ತರಾಖಂಡದಲ್ಲಿ ಮೇಘಸ್ಫೋಟ ಸಂಭವಿಸಿದ ಹಿನ್ನೆಲೆ ಭಾರೀ ಮಳೆ ಸುರಿಯುತ್ತಿದ್ದು, ಭೂಕುಸಿತದಿಂದ 5 ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 11 ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಉತ್ತರಾಖಂಡದ ವಿವಿಧ ಜಿಲ್ಲೆಗಳಲ್ಲಿ ಶುಕ್ರವಾರ(ಆ.29) ಮುಂಜಾನೆ ಭಾರೀ ಮಳೆ ಸುರಿದಿದೆ. ಈ ಹಿನ್ನೆಲೆ ಭೂಕುಸಿತ ಸಂಭವಿಸಿ ಮನೆಗಳಿಗೆ ಹಾನಿಯುಂಟಾಗಿದ್ದು, ಹಲವು ಮಂದಿ ಅವಶೇಷಗಳಡಿಯಲ್ಲಿ ಸಮಾಧಿಯಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ರಾತ್ರಿಯಿಡೀ ಸುರಿದ ಅತಿಯಾದ ಮಳೆಯಿಂದ ಬಾಗೇಶ್ವರ ಜಿಲ್ಲೆಯ ಕಪ್‌ಕೋಟ್ ಪ್ರದೇಶದ ಪೌಸಾರಿ ಗ್ರಾಮ

ಉತ್ತರಾಖಂಡ: ಮೇಘಸ್ಫೋಟಕ್ಕೆ 6 ಮಂದಿ ಸಾವು ; 11 ಮಂದಿ ನಾಪತ್ತೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕುಂದಾಪುರ: ಕೊಲ್ಲೂರು ಸೌಪರ್ಣಿಕಾ ನದಿಯಲ್ಲಿ ಬೆಂಗಳೂರು ವಿವಾಹಿತ ಮಹಿಳೆ ಕಲ್ಮರೆ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 ಕುಂದಾಪುರ: 2 ದಿನಗಳ ಹಿಂದೆ ಕೊಲ್ಲೂರಿಗೆ ಆಗಮಿಸಿದ್ದ ಮಹಿಳೆಯೊಬ್ಬರು ಸೌಪರ್ಣಿಕಾ ನದಿಯ ಬಳಿ ನಾಪತ್ತೆಯಾಗಿದ್ದು, ಅವರ ನಾಪತ್ತೆಯ ಬಗ್ಗೆ ಹಲವು ಊಹಾಪೋಹಗಳು ಕೇಳಿಬಂದಿವೆ. ನಾಪತ್ತೆಯಾದ ವಿವಾಹಿತೆಯನ್ನು ಬೆಂಗಳೂರಿನ ತ್ಯಾಗರಾಜನಗರದ ನಿವಾಸಿ ಸಿ.ಆರ್. ಗೋವಿಂದರಾಜು ಅವರ ಪುತ್ರಿ ವಸುಧಾ ಚಕ್ರವರ್ತಿ (46) ಎಂದು ಗುರುತಿಸಲಾಗಿದೆ. ಆಗಸ್ಟ್ 28ರಂದು ಅವರು ಕೊಲ್ಲೂರಿಗೆ ಆಗಮಿಸಿ, ಖಾಸಗಿ ಲಾಡ್ಜ್ ಬಳಿ ತಮ್ಮ ಕಾರನ್ನು ನಿಲ್ಲಿಸಿ ದೇವಸ್ಥಾನಕ್ಕೆ ತೆರಳಿದ್ದರು. ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ಸ್ವಲ್ಪ ಸಮಯ ಕಳೆದ

ಕುಂದಾಪುರ: ಕೊಲ್ಲೂರು ಸೌಪರ್ಣಿಕಾ ನದಿಯಲ್ಲಿ ಬೆಂಗಳೂರು ವಿವಾಹಿತ ಮಹಿಳೆ ಕಲ್ಮರೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜಮ್ಮು- ಕಾಶ್ಮೀರದಲ್ಲಿ ಭೂಕುಸಿತ- ರಿಯಾಸಿಯಲ್ಲಿ 7, ರಾಂಬನ್ನಲ್ಲಿ 4 ಮಂದಿ ಸಾವು

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30: ಜಮ್ಮು ಮತ್ತು ಕಾಶ್ಮೀರದ ರಂಬನ್ ಜಿಲ್ಲೆಯಲ್ಲಿ ಶುಕ್ರವಾರ ಮೇಘಸ್ಫೋಟ ಉಂಟಾಗಿದೆ. ಭೂಕುಸಿತಗಳು ಮತ್ತು ಮೇಘಸ್ಫೋಟದ ನಂತರ ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ ಮತ್ತು ಅನೇಕರು ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ರಿಯಾಸಿ ಜಿಲ್ಲೆಯಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದ ಭೂಕುಸಿತದಿಂದ ಮನೆ ಕುಸಿದು ಒಂದೇ ಕುಟುಂಬದ ಏಳು ಸದಸ್ಯರು ಸಾವನ್ನಪ್ಪಿದ್ದಾರೆ. ಶನಿವಾರ ಬೆಳಿಗ್ಗೆ ಕಚ್ಚಾ ಮನೆಯ ಅವಶೇಷಗಳಿಂದ ಐದು ಮಕ್ಕಳು ಸೇರಿದಂತೆ ಎಲ್ಲಾ ಏಳು ಸದಸ್ಯರ ಶವಗಳನ್ನು ಹೊರತೆಗೆಯಲಾಯಿತು.   ರಂಬನ್‌ನಲ್ಲಿ,

ಜಮ್ಮು- ಕಾಶ್ಮೀರದಲ್ಲಿ ಭೂಕುಸಿತ- ರಿಯಾಸಿಯಲ್ಲಿ 7, ರಾಂಬನ್ನಲ್ಲಿ 4 ಮಂದಿ ಸಾವು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

’75ವರ್ಷಕ್ಕೆ ನಿವೃತ್ತಿ ಕಡ್ಡಾಯವಲ್ಲ’- ಮೋಹನ್ ಭಾಗವತ್

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 ನವದೆಹಲಿ : 75ವರ್ಷಕ್ಕೆ ನಿವೃತ್ತಿ ಕಡ್ಡಾಯವಲ್ಲ ಎಂದು ಹೇಳುವ ಮೂಲಕ ಪ್ರಧಾನಿ ಮೋದಿ ನಿವೃತ್ತಿ ಚರ್ಚೆಗೆ ಆರ್​​ಎಸ್​ಎಸ್​ ಸರಸಂಘ ಚಾಲಕ ಮೋಹನ್ ಭಾಗವತ್ ತೆರೆ ಎಳೆದಿದ್ದಾರೆ. ಸೆಪ್ಟೆಂಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 75ನೇ ವರ್ಷಕ್ಕೆ ಕಾಲಿಡಲಿದ್ದಾರೆ. ಹಾಗೆಯೇ 75ನೇ ವಯಸ್ಸಿನಲ್ಲೇ ನಿವೃತ್ತಿ ಘೋಷಿಸಲಿದ್ದಾರೆ ಎನ್ನುವ ಚರ್ಚೆಯಾಗಿತ್ತು. ಆದರೆ ಇದೀಗ ಎಲ್ಲಾ ಊಹಾಪೋಹಗಳಿಗೆ ಮೋಹನ್ ಭಾಗವತ್ ತೆರೆ ಎಳೆದಿದ್ದಾರೆ. ಸ್ವತಃ ಭಾಗವತ್ ಅವರು ಸೆಪ್ಟೆಂಬರ್‌ನಲ್ಲಿ ಪ್ರಧಾನಿ ಮೋದಿಯವರಿಗಿಂತ ಆರು ದಿನ ಮುಂಚಿತವಾಗಿ

’75ವರ್ಷಕ್ಕೆ ನಿವೃತ್ತಿ ಕಡ್ಡಾಯವಲ್ಲ’- ಮೋಹನ್ ಭಾಗವತ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕನ್ನಡಾಂಬೆ ಕುರಿತು ಬಾನು ಮುಷ್ತಾಕ್ ಮೊದಲು ಸ್ಪಷ್ಟೀಕರಣ ಕೊಡಲಿ’- ಯದುವೀರ್

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30: ಮೈಸೂರು ದಸರಾ ಉದ್ಘಾಟನೆಗೆ ಆಯ್ಕೆಯಾಗಿರುವ ಬಾನು ಮುಷ್ತಾಕ್‌ ಅವರು ಕನ್ನಡಾಂಬೆ ಕುರಿತ ತಮ್ಮ ಹೇಳಿಕೆಗೆ ಸ್ಪಷ್ಟನೆ ಕೊಡಬೇಕು ಎಂದು ಯದುವೀರ್‌ ಒತ್ತಾಯಿಸಿದ್ದಾರೆ. ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಆಯ್ಕೆಯನ್ನು ಮೊದಲು ಯದುವೀರ್ ಸ್ವಾಗತಿಸಿದ್ದರು. ಇದಕ್ಕೆ ತೀವ್ರ ವಿರೋಧ ವ್ಯಕ್ತವಾದ ಕಾರಣ ಪಕ್ಷದ ನಿರ್ಧಾರಕ್ಕೆ ಮಣೆ ಹಾಕಿದ್ದಾರೆ. ಬಾನು ಮುಷ್ತಾಕ್ ಕನ್ನಾಡಂಬೆ ಕುರಿತ ತಮ್ಮ ಹೇಳಿಕೆಗೆ ಮೊದಲು ಸ್ಪಷ್ಟನೆಯನ್ನ ಕೊಡಲಿ ಎಂದು ಆಗ್ರಹಿಸಿದ್ದಾರೆ.   ಸ್ಪಷ್ಟೀಕರಣ ಕೊಡದಿದ್ದರೆ ಬಾನು ಮುಷ್ತಾಕ್ ದಸರಾ

ಕನ್ನಡಾಂಬೆ ಕುರಿತು ಬಾನು ಮುಷ್ತಾಕ್ ಮೊದಲು ಸ್ಪಷ್ಟೀಕರಣ ಕೊಡಲಿ’- ಯದುವೀರ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೇಂದ್ರ ಸರ್ಕಾರದಿಂದ ರೈತರಿಗೆ ಜನೌಷಧಿ ಮಾದರಿಯಲ್ಲಿ ಕೀಟನಾಶಕ ಕೇಂದ್ರ ಸ್ಥಾಪನೆ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 ಬೆಂಗಳೂರು: ಕೇಂದ್ರ ಸರ್ಕಾರವು ರೈತರಿಗೆ ಬಂಪರ್‌ ಕೊಡುಗೆಯನ್ನು ನೀಡಲು ಮುಂದಾಗಿದೆ. ಜನೌಷಧಿ ಕೇಂದ್ರಗಳ ಮಾದರಿಯಲ್ಲಿ, ರೈತರಿಗೆ ಕಡಿಮೆ ದರದಲ್ಲಿ ಕೀಟನಾಶಕಗಳನ್ನು ಒದಗಿಸಲು ಕರ್ನಾಟಕದ ಪ್ರತಿ ಜಿಲ್ಲೆಯಲ್ಲಿ ಕೀಟನಾಶಕ ಕೇಂದ್ರಗಳನ್ನು ಸ್ಥಾಪಿಸುವ ಚಿಂತನೆ ಇದೆ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನೌಷಧಿ ಕೇಂದ್ರಗಳು ರಿಯಾಯಿತಿ ದರದಲ್ಲಿ ಔಷಧಿಗಳನ್ನು ಒದಗಿಸುವಂತೆ, ರೈತರಿಗೆ ಅಗತ್ಯವಾದ ಕೀಟನಾಶಕಗಳನ್ನು ಕಡಿಮೆ ದರದಲ್ಲಿ ಒದಗಿಸುವ ಯೋಜನೆಯ ಬಗ್ಗೆ ಚಿಂತನೆ ನಡೆಯುತ್ತಿದೆ ಎಂದು

ಕೇಂದ್ರ ಸರ್ಕಾರದಿಂದ ರೈತರಿಗೆ ಜನೌಷಧಿ ಮಾದರಿಯಲ್ಲಿ ಕೀಟನಾಶಕ ಕೇಂದ್ರ ಸ್ಥಾಪನೆ Read More »

ಬ್ರೇಕಿಂಗ್ ನ್ಯೂಸ್

ದೆಹಲಿ: ಭಾರೀ ಮಳೆ ಹಿನ್ನೆಲೆ ರಸ್ತೆಗಳಿಗೆ ನುಗ್ಗಿದ ನೀರು, ವಿಮಾನ ಹಾರಾಟ ವಿಳಂಬ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30: ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಹಲವಾರು ಪ್ರದೇಶಗಳಲ್ಲಿ ವ್ಯಾಪಕ ನೀರು ನಿಂತಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ. ಅಲ್ಲದೇ ದೆಹಲಿ ವಿಮಾನ ನಿಲ್ದಾಣದಲ್ಲಿಯೂ ವಿಮಾನಗಳ ಕಾರ್ಯಾಚರಣೆಯಲ್ಲಿ ಸಮಸ್ಯೆಯುಂಟಾಗಿ ನಿರ್ಗಮನ ಮತ್ತು ಆಗಮನದಲ್ಲಿ ವಿಳಂಬವಾಗಿದೆ. ನಿರಂತರ ಮಳೆಯ ಹಿನ್ನೆಲೆ ನೋಯ್ಡಾ ಮತ್ತು ಗಾಜಿಯಾಬಾದ್‌ಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಪ್ರದೇಶಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ಭಾರೀ ಮಳೆಯಿಂದಾಗಿ ಪ್ರಗತಿ ಮೈದಾನ,

ದೆಹಲಿ: ಭಾರೀ ಮಳೆ ಹಿನ್ನೆಲೆ ರಸ್ತೆಗಳಿಗೆ ನುಗ್ಗಿದ ನೀರು, ವಿಮಾನ ಹಾರಾಟ ವಿಳಂಬ Read More »

ಬ್ರೇಕಿಂಗ್ ನ್ಯೂಸ್

ಪ್ರೋ ಕಬಡ್ಡಿ ಅಖಾಡದಲ್ಲಿ ಕಾಣಿಸಿಕೊಂಡ ‘ವೈಭವ್ ಸೂರ್ಯವಂಶಿ’

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 ವಿಶಾಖಪಟ್ಟಣಂ : ಕೇವಲ 14 ನೇ ವಯಸ್ಸಿನಲ್ಲಿ ಐಪಿಎಲ್‌ಗೆ ಪಾದಾರ್ಪಣೆ ಮಾಡಿ ಸ್ಫೋಟಕ ಶತಕ ಬಾರಿಸುವ ಮೂಲಕ ವಿಶ್ವದಾದ್ಯಂತ ಗಮನ ಸೆಳೆದಿದ್ದ ವೈಭವ್ ಸೂರ್ಯವಂಶಿ ಇದೀಗ ಕಬಡ್ಡಿ ಅಂಗಳದಲ್ಲೂ ಕಾಣಿಸಿಕೊಂಡಿದ್ದಾರೆ. ಪ್ರೊ ಕಬಡ್ಡಿ ಲೀಗ್‌ನ 12 ನೇ ಸೀಸನ್ ಆಗಸ್ಟ್ 29 ರ ಶುಕ್ರವಾರದಿಂದ ಪ್ರಾರಂಭವಾಗಿದೆ. ಅದರ ಉದ್ಘಾಟನೆಗೆ ವೈಭವ್ ಸೂರ್ಯವಂಶಿ ಅವರನ್ನು ವಿಶೇಷವಾಗಿ ಆಹ್ವಾನಿಸಲಾಗಿತ್ತು. ಐಪಿಎಲ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆಡುತ್ತಿರುವ ವೈಭವ್ ಅವರನ್ನು ನೋಡಿದ ತಕ್ಷಣ ಅಭಿಮಾನಿಗಳ ಹರ್ಷೋದ್ಘಾರ

ಪ್ರೋ ಕಬಡ್ಡಿ ಅಖಾಡದಲ್ಲಿ ಕಾಣಿಸಿಕೊಂಡ ‘ವೈಭವ್ ಸೂರ್ಯವಂಶಿ’ Read More »

ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top