ಬ್ರೇಕಿಂಗ್ ನ್ಯೂಸ್

ಸರ್ಕಾರದ ವಿರುದ್ಧ ಸಾರಿಗೆ ನೌಕರರ ಮುಷ್ಕರ – ಹಲವು ಕಡೆ ಬಸ್‌ ಬಂದ್‌

(ನ್ಯೂಸ್‌ ಕಡಬ) newskadaba.com, ಆ.05: ವೇತನ ಹಿಂಬಾಕಿ, ಸಂಬಳ ಹೆಚ್ಚಳ ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಆಗಸ್ಟ್ 5 ರಿಂದ (ಇಂದಿನಿಂದ) ಅನಿರ್ದಿಷ್ಠಾವಧಿ ಮುಷ್ಕರಕ್ಕೆ ಬೇಡಿಕೆ ಇಡಲಾಗಿದೆ. 1800 ಕೋಟಿ ಹಿಂಬಾಕಿ, ಕೋಟ್ಯಾಂತರ ರುಪಾಯಿ ಪಿಎಫ್ ಬಾಕಿ,ವೇತನ ಹೆಚ್ಚಳ ಸೇರಿದಂತೆ ಹತ್ತಾರು ಬೇಡಿಕೆಗಳನ್ನು ಸರ್ಕಾರದ ಮುಂದೆ ಇಡಲಾಗಿದೆ. ಆದರೆ ಹಿಂಬಾಕಿ ಕೊಡಲು ಸರ್ಕಾರ ಒಪ್ಪದಿದ್ದ ಕಾರಣ, ಸಭೆಯಲ್ಲಿ ಒಮ್ಮತದ ನಿರ್ಧಾರಕ್ಕೆ ಬಂದಿಲ್ಲ. ವೇತನ ಹಿಂಬಾಕಿ, ವೇತನ ಹೆಚ್ಚಳಕ್ಕೆ ಒತ್ತಾಯಿಸಿ ರಾಜ್ಯ ಸಾರಿಗೆ ಸಂಸ್ಥೆಗಳ ನೌಕರರು ಸರ್ಕಾರದ […]

ಸರ್ಕಾರದ ವಿರುದ್ಧ ಸಾರಿಗೆ ನೌಕರರ ಮುಷ್ಕರ – ಹಲವು ಕಡೆ ಬಸ್‌ ಬಂದ್‌ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್; ಜೀವಾವಧಿ ಶಿಕ್ಷೆ ಪ್ರಕಟಿಸಿದ ಕೋರ್ಟ್

(ನ್ಯೂಸ್‌ ಕಡಬ) newskadaba.com August.02: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಪ್ರಕಟಗೊಂಡಿದೆ. ಐಪಿಸಿ ಸೆಕ್ಷನ್ 376(2)(k) ಅತ್ಯಾ1ಚಾರ ಅಪರಾಧಕ್ಕೆ ಜೀವಾವಧಿ ಶಿಕ್ಷೆಯಾಗಿದೆ. ಈ ಮೂಲಕ ಜೀವನ ಪರ್ಯಂತ ಜೈಲಿನಲ್ಲೇ ಇರುವ ಶಿಕ್ಷೆ ಪ್ರಕಟವಾಗಿದೆ. 376(2)(n) ಸೆಕ್ಷನ್ ಗೆ ಜೀವಾವಧಿ. 354 ಗೆ 3 ವರ್ಷ, 354(b) 3 ವರ್ಷ ಕಠಿಣ ಕಾರಗೃಹ, . ಸಂತ್ರಸ್ತಗೆ 11ಲಕ್ಷ ಪರಿಹಾರ ನೀಡುವಂತೆ ಕೋರ್ಟ್ ಆದೇಶ ಹೊರಬಿದ್ದಿದೆ. ಈ ಮೂಲಕ ಪ್ರಜ್ವಲ್ ರೇವಣ್ಣಗೆ ಬಹುದೊಡ್ಡ ಶಿಕ್ಷೆಯಾಗಿದೆ.  

ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್; ಜೀವಾವಧಿ ಶಿಕ್ಷೆ ಪ್ರಕಟಿಸಿದ ಕೋರ್ಟ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜಮ್ಮು ಕಾಶ್ಮೀರ ಭೂಕುಸಿತ – ಉಪವಿಭಾಗೀಯ ಮ್ಯಾಜಿಸ್ಟ್ರೇಟ್‌, ಪುತ್ರ ಸಾವು

(ನ್ಯೂಸ್ ಕಡಬ) newdkadaba.com, ಆ. 02 ಶ್ರೀನಗರ: ಭಾರೀ ಮಳೆಯಿಂದಾಗಿ ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಪ್ರದೇಶದಲ್ಲಿ ಭೂಕುಸಿತ ಉಂಟಾಗಿ, ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್‌ ಹಾಗೂ ಅವರ ಪುತ್ರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್‌ ರಾಜಿಂದರ್ ಸಿಂಗ್ ರಾಣಾ ಹಾಗೂ ಅವರ ಪುತ್ರ ಮೃತಪಟ್ಟಿದ್ದಾರೆ. ಅವರ ಪತ್ನಿ ಹಾಗೂ ಇನ್ನಿಬ್ಬರು ಮಕ್ಕಳು ಗಾಯಗೊಂಡಿದ್ದಾರೆ. ಶುಕ್ರವಾರ ಕುಟುಂಬ ಸಮೇತರಾಗಿ ಧರ್ಮರಿಯಿಂದ ಪಟ್ಟಿಯನ್‌ಗೆ ಕಾರಿನಲ್ಲಿ ಪ್ರಯಾಣಿಸುತ್ತಿರುವಾಗ ಈ ಅವಘಡ ಸಂಭವಿಸಿದೆ.

ಜಮ್ಮು ಕಾಶ್ಮೀರ ಭೂಕುಸಿತ – ಉಪವಿಭಾಗೀಯ ಮ್ಯಾಜಿಸ್ಟ್ರೇಟ್‌, ಪುತ್ರ ಸಾವು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಂಗಳೂರು ಮೆಟ್ರೋ ಇತಿಹಾಸದಲ್ಲೇ ಮೊದಲು, ಯಶಸ್ವಿ ಅಂಗಾಂಗ ಸಾಗಣೆ!

(ನ್ಯೂಸ್ ಕಡಬ) newdkadaba.com, ಆ. 02 ಬೆಂಗಳೂರು: ಬೆಂಗಳೂರು ಮೆಟ್ರೋ ಇತಿಹಾಸದಲ್ಲೇ ಮೊದಲ ಬಾರಿಗೆ ಯಶಸ್ವಿಯಾಗಿ ಮಾನವ ಅಂಗಾಂಗ ಸಾಗಣೆ ಮಾಡಲಾಗಿದೆ. ಹೌದು.. ಕರ್ನಾಟಕದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿ ಮಾನವ ಅಂಗಾಂಗವನ್ನು ನಮ್ಮ ಮೆಟ್ರೋ ಮೂಲಕ ವೈದೇಹಿ ಆಸ್ಪತ್ರೆಯಿಂದ ಆರ್.ಆರ್.ನಗರದ ಸ್ಪರ್ಶ ಆಸ್ಪತ್ರೆಗೆ ಸಾಗಿಸಲಾಯಿತು. ನಮ್ಮ ಮೆಟ್ರೋದಲ್ಲಿ ಮಾನವ ಯಕೃತ್ತನ್ನು ಶಸ್ತ್ರಚಿಕಿತ್ಸೆಗಾಗಿ ಸಾಗಿಸಲು ಸಹಕಾರ ನೀಡಿದೆ. ಶುಕ್ರವಾರ, ಆಗಸ್ಟ್ 1, 2025ರ ರಾತ್ರಿ 8:38ಕ್ಕೆ, ಯಕೃತ್ತನ್ನು ವೈದ್ಯರೊಬ್ಬರು ಮತ್ತು ಏಳು ಮಂದಿ ವೈದ್ಯಕೀಯ ಸಿಬ್ಬಂದಿಯೊಂದಿಗೆ ವೈದೇಹಿ ಆಸ್ಪತ್ರೆಯಿಂದ

ಬೆಂಗಳೂರು ಮೆಟ್ರೋ ಇತಿಹಾಸದಲ್ಲೇ ಮೊದಲು, ಯಶಸ್ವಿ ಅಂಗಾಂಗ ಸಾಗಣೆ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣದಲ್ಲಿ ಮಂಗಳೂರಿನ 14 ಕಡೆ ಎನ್‌ಐಎ ದಾಳಿ

(ನ್ಯೂಸ್ ಕಡಬ) newdkadaba.com, ಆ. 02 ಮಂಗಳೂರು: ಕಳೆದ ಕೆಲವು ತಿಂಗಳ ಹಿಂದೆ ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಹಾಗೂ ರೌಡಿಶೀಟರ್ ಸುಹಾಸ್ ಶೆಟ್ಟಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿತ್ತು. ಇದೀಗ ಆ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರಲ್ಲಿ ಇಂದು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಅಧಿಕಾರಿಗಳು 14 ಕಡೆ ಏಕಕಾಲದಲ್ಲಿ ದಾಳಿ ಮಾಡಿದ್ದಾರೆ. ಎನ್‌ಐಎ ಅಧಿಕಾರಿಗಳು ಶನಿವಾರ ಬೆಳಗ್ಗೆ ಬಜ್ಪೆ ಮತ್ತು ಸುರತ್ಕಲ್‌ ಪ್ರದೇಶಗಳಲ್ಲಿ ಆರೋಪಿಗಳ ಮನೆ, ಕಚೇರಿ ಮೊದಲಾದ 14 ಕಡೆ ದಾಳಿ ನಡೆಸಿ ದಾಖಲೆಗಳ

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣದಲ್ಲಿ ಮಂಗಳೂರಿನ 14 ಕಡೆ ಎನ್‌ಐಎ ದಾಳಿ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಖಾತಾ ಹೆಸರಿನಲ್ಲಿ ಸರ್ಕಾರದ ಲೂಟಿ: ಜೆಡಿಎಸ್ ಮುಖಂಡ ಎಚ್‌.ಎಂ.ರಮೇಶ್‌ಗೌಡ ಆರೋಪ

(ನ್ಯೂಸ್ ಕಡಬ) newdkadaba.com, ಆ. 02 ಬೆಂಗಳೂರು: ಸ್ಥಿರಾಸ್ತಿಗಳ ಮೇಲಿನ ತೆರಿಗೆ ಹೆಚ್ಚಿಸುವ ಉದ್ದೇಶದಿಂದಲೇ ರಾಜ್ಯ ಸರ್ಕಾರವು ಬಿಬಿಎಂಪಿಯನ್ನು ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಮಾಡಲು ಹೊರಟಿದೆ. ಜನರು ‘ಬಿ’ ಖಾತಾವನ್ನು ‘ಎ’ ಖಾತೆಗೆ ಬದಲಿಸಿಕೊಳ್ಳಲು ಆರೇಳು ಲಕ್ಷ ರೂಪಾಯಿ ವೆಚ್ಚಮಾಡಬೇಕಾಗುತ್ತದೆ ಎಂದು ಜೆಡಿಎಸ್‌ ಬೆಂಗಳೂರು ಜಿಲ್ಲಾ ಘಟಕದ ಅಧ್ಯಕ್ಷ ಎಚ್‌.ಎಂ.ರಮೇಶ್‌ಗೌಡ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘2007ರಲ್ಲಿ ಬಿಬಿಎಂಪಿ ವ್ಯಾಪ್ತಿಗೆ ಸೇರಿಸಿದ ಹಳ್ಳಿಗಳ ನಿವೇಶನಗಳಿಗೆ, ಪ್ರತಿ ಚದರ ಮೀಟರ್‌ಗೆ ಗರಿಷ್ಠ ₹250 ಸುಧಾರಣಾ ಶುಲ್ಕ ವಿಧಿಸಲಾಗುತ್ತಿತ್ತು. ಈಗ ಗ್ರೇಟರ್‌

ಖಾತಾ ಹೆಸರಿನಲ್ಲಿ ಸರ್ಕಾರದ ಲೂಟಿ: ಜೆಡಿಎಸ್ ಮುಖಂಡ ಎಚ್‌.ಎಂ.ರಮೇಶ್‌ಗೌಡ ಆರೋಪ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ: SIT ಅಧಿಕಾರಿ ದೂರುದಾರರಿಗೆ ಬೆದರಿಕೆ ಹಾಕಿದ ಆರೋಪ; ತನಿಖಾ ತಂಡ ನಿರಾಕರಣೆ

(ನ್ಯೂಸ್ ಕಡಬ) newdkadaba.com, ಆ. 02: ಮಂಗಳೂರು: ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದಲ್ಲಿ ದೂರುದಾರರ ಪರ ವಕೀಲರು ವಿಶೇಷ ತನಿಖಾ ತಂಡದ (SIT) ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದಿದ್ದು, SIT ಯಲ್ಲಿರುವ ಪೊಲೀಸ್ ಅಧಿಕಾರಿ ಮಂಜುನಾಥ ಗೌಡ ಅವರು ದೂರುದಾರರು ತಮ್ಮ ದೂರನ್ನು ಹಿಂಪಡೆಯುವಂತೆ ಬೆದರಿಕೆ ಮತ್ತು ಒತ್ತಡ ಹೇರಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ SIT ಯ ಮೂಲಗಳು ಈ ಆರೋಪಗಳನ್ನು ನಿರಾಕರಿಸಿವೆ. ಇವು ಆಧಾರರಹಿತ ಆರೋಪಗಳಲ್ಲದೆ ಬೇರೇನೂ ಅಲ್ಲ. ಆದರೂ ನಾವು ಅದನ್ನು ಪರಿಶೀಲಿಸುತ್ತೇವೆ ಎಂದು SIT

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ: SIT ಅಧಿಕಾರಿ ದೂರುದಾರರಿಗೆ ಬೆದರಿಕೆ ಹಾಕಿದ ಆರೋಪ; ತನಿಖಾ ತಂಡ ನಿರಾಕರಣೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಜಮ್ಮು ಕಾಶ್ಮೀರ: ಭದ್ರತಾ ಪಡೆಗಳ ಎನ್ ಕೌಂಟರ್ ಗೆ ಓರ್ವ ಉಗ್ರ ಬಲಿ

(ನ್ಯೂಸ್ ಕಡಬ) newdkadaba.com, ಆ. 02: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆಯುತ್ತಿರುವ ‘ಆಪರೇಷನ್ ಅಖಾಲ್’ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ವೇಳೆ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರ ಹತ್ಯೆಗೀಡಾಗಿದ್ದಾನೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ದಟ್ಟ ಅರಣ್ಯ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ಗುಪ್ತಚರ ಮಾಹಿತಿ ಪಡೆದ ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ ‘ಆಪರೇಷನ್ ಅಖಾಲ್’ ಹೆಸರಿನಲ್ಲಿ ಕಾರ್ಯಾಚರಣೆ ಆರಂಭಿಸಿತು. ಅರಣ್ಯ ಪ್ರದೇಶ ಸುತ್ತುವರಿದು ಶೋಧ ಆರಂಭಿಸಿದ

ಜಮ್ಮು ಕಾಶ್ಮೀರ: ಭದ್ರತಾ ಪಡೆಗಳ ಎನ್ ಕೌಂಟರ್ ಗೆ ಓರ್ವ ಉಗ್ರ ಬಲಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಧರ್ಮಸ್ಥಳ ಪ್ರಕರಣ: 15 ವರ್ಷಗಳ ಯುಡಿಆರ್ ಡಿಲೀಟ್, ಪೊಲೀಸರ ವಿರುದ್ಧ ವ್ಯಾಪಕ ಟೀಕೆ!*

(ನ್ಯೂಸ್ ಕಡಬ) newdkadaba.com, ಆ. 02: ಧರ್ಮಸ್ಥಳ: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ ಚುರುಕುಗೊಳಿಸಿರುವಂತೆಯೇ 2000 ದಿಂದ 2015 ರ ನಡುವೆ ದಾಖಲಾದ ಅಪರಿಚಿತ ಸಾವಿನ ಪ್ರಕರಣಗಳ ಪ್ರಮುಖ ದಾಖಲೆಗಳನ್ನು(UDR)ಡಿಲೀಟ್ ಆಗಿರುವ ಪ್ರತಿಕ್ರಿಯೆ ಕೇಳಿಬಂದ ನಂತರ ಬೆಳ್ತಂಗಡಿ ಪೊಲೀಸರು ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ಇದೇ ಅವಧಿಯಲ್ಲಿ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂದು ದೂರುದಾರ ಆರೋಪಿಸಿದ್ದಾನೆ. 1998 ಮತ್ತು 2014ರ ನಡುವೆ ಲೈಂಗಿಕ ಅತ್ಯಾಚಾರಕ್ಕೊಳಗಾದ ಮಹಿಳೆಯರು, ಅಪ್ರಾಪ್ತ ಬಾಲಕಿಯರು ಸೇರಿದಂತೆ ಹಲವು

ಧರ್ಮಸ್ಥಳ ಪ್ರಕರಣ: 15 ವರ್ಷಗಳ ಯುಡಿಆರ್ ಡಿಲೀಟ್, ಪೊಲೀಸರ ವಿರುದ್ಧ ವ್ಯಾಪಕ ಟೀಕೆ!* Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಚಿಕ್ಕಮಗಳೂರು ಕೆಪಿಸಿಸಿ ರಾಜ್ಯ ಅಲ್ಪಸಂಖ್ಯಾತರ ಉಪಾಧ್ಯಕ್ಷರಾಗಿ ಹರ್ಷ ಮೇಲ್ವಿನ್ ಲಸ್ರಾದೋ ಆಯ್ಕೆ

(ನ್ಯೂಸ್ ಕಡಬ) newdkadaba.com, ಆ. 02: ಚಿಕ್ಕಮಗಳೂರು ಕೆಪಿಸಿಸಿ ರಾಜ್ಯ ಅಲ್ಪಸಂಖ್ಯಾತರ ಉಪಾಧ್ಯಕ್ಷರಾಗಿ ಹರ್ಷ ಮೇಲ್ವಿನ್ ಲಸ್ರಾದೋ ಅವರು ಆಯ್ಕೆ ಆಗಿದ್ದಾರೆ. 20 ವರ್ಷಗಳ ರಾಜಕೀಯ ಜೀವನ ದೊಂದಿಗೆ ಬಣಕಲ್ ಹೋಬಳಿ ಅಲ್ಪಸಂಖ್ಯಾತರ ಅಧ್ಯಕ್ಷರಾಗಿ ಸೇವೆ ಸಲ್ಲಿದ್ದರು. ಅಲ್ಲದೇ ಚಿಕ್ಕಮಗಳೂರು ಜಿಲ್ಲಾ ಕಾರ್ಯದರ್ಶಿಯಾಗಿ , ರಾಜ್ಯ ಕಾಂಗ್ರೆಸ್ ಅಲ್ಪಸಂಖ್ಯಾತರ ಸಂಘಟನಾ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಕೆಪಿಸಿಸಿ ರಾಜ್ಯ ಅಲ್ಪಸಂಖ್ಯಾತರ ಉಪಾಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಅಲ್ಲದೇ ಚಿಕ್ಕಮಂಗಳೂರು ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಗಳು ಮೂಡಿಗೆರೆ ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರಾಗಿ,

ಚಿಕ್ಕಮಗಳೂರು ಕೆಪಿಸಿಸಿ ರಾಜ್ಯ ಅಲ್ಪಸಂಖ್ಯಾತರ ಉಪಾಧ್ಯಕ್ಷರಾಗಿ ಹರ್ಷ ಮೇಲ್ವಿನ್ ಲಸ್ರಾದೋ ಆಯ್ಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top