ಬ್ರೇಕಿಂಗ್ ನ್ಯೂಸ್

ಛತ್ತೀಸ್‌ಗಢ: 6 ನಕ್ಸಲರನ್ನ ಹೊಡೆದುರುಳಿಸಿದ ಭದ್ರತಾ ಪಡೆ

(ನ್ಯೂಸ್ ಕಡಬ) com ಜು. 19. ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ 6 ನಕ್ಸಲರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, “ಅಬುಜ್ಮದ್ ಪ್ರದೇಶದ ಕಾಡಿನಲ್ಲಿ ಇಂದು ಮಧ್ಯಾಹ್ನ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ಎನ್‌ಕೌಂಟರ್ ನಡೆದಿತ್ತು. ಈ ಪ್ರದೇಶದಲ್ಲಿ ನಕ್ಸಲರ ಉಪಸ್ಥಿತಿಯ ಬಗ್ಗೆ ಮಾಹಿತಿ ಬಂದ ನಂತರ ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದವು” ಎಂದು ತಿಳಿಸಿದ್ದಾರೆ. “ಮಧ್ಯಾಹ್ನದಿಂದ ಭದ್ರತಾ […]

ಛತ್ತೀಸ್‌ಗಢ: 6 ನಕ್ಸಲರನ್ನ ಹೊಡೆದುರುಳಿಸಿದ ಭದ್ರತಾ ಪಡೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಗಸ್ಟ್ 11ರಿಂದ ಕರ್ನಾಟಕ ಮುಂಗಾರು ಅಧಿವೇಶನ ಆರಂಭ

(ನ್ಯೂಸ್ ಕಡಬ) newskadaba.com ಜು. 19. ಸಂಸತ್ತಿನ ಮುಂಗಾರು ಅಧಿವೇಶನ ಇದೇ ಜುಲೈ 21ರಿಂದ ಆರಂಭವಾಗಲಿದೆ. ಇದೀಗ ಕರ್ನಾಟಕ ವಿಧಾನ ಮಂಡಲದ ಮುಂಗಾರು ಅಧಿವೇಶನ ಆಗಸ್ಟ್ 11ರಿಂದ ಆರಂಭವಾಗಲಿದೆ ಎಂದು ರಾಜ್ಯ ಸರ್ಕಾರದ ಸಂಸದೀಯ ವ್ಯವಹಾರಗಳ ಕಾರ್ಯದರ್ಶಿ ಜಿ.ಶ್ರೀಧರ್ ಅಧಿಸೂಚನೆ ಹೊರಡಿಸಿದ್ದಾರೆ. ಆಗಸ್ಟ್ 11ರಿಂದ ಆ. 22ರ ವರೆಗೆ ಕರ್ನಾಟಕ ವಿಧಾನ ಮಂಡಲದ ಮುಂಗಾರು ಅಧಿವೇಶನ ನಡೆಯಲಿದೆ. ಇನ್ನು ಆಗಸ್ಟ್ 11ರಂದು ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಲಿದ್ದು, ಒಟ್ಟು 12 ದಿನಗಳ

ಆಗಸ್ಟ್ 11ರಿಂದ ಕರ್ನಾಟಕ ಮುಂಗಾರು ಅಧಿವೇಶನ ಆರಂಭ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಮನೆ ಮನೆಗೆ ಪೊಲೀಸ್’ ಯೋಜನೆಗೆ ಚಾಲನೆ ನೀಡಿದ ಗೃಹ ಸಚಿವ ಡಾ. ಜಿ ಪರಮೇಶ್ವರ್

(ನ್ಯೂಸ್ ಕಡಬ) newskadaba.com,ಜು .18. ‘ಮನೆ ಮನೆಗೆ ಪೊಲೀಸ್’ ಯೋಜನೆಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಬೆಂಗಳೂರಿನಲ್ಲಿ ಶುಕ್ರವಾರ ಚಾಲನೆ ನೀಡಿದರು. ಯೋಜನೆಗೆ ಚಾಲನೆ ನೀಡಿ ಬಳಿಕ ಮಾತನಾಡಿದ ಅವರು, “ಮನೆ ಮನೆಗೆ ಪೊಲೀಸರು ಭೇಟಿ ನೀಡುವ ಯೋಜನೆ ಇಡೀ ದೇಶದಲ್ಲಿ ಇದೇ ಮೊದಲು. ಈ ವಿನ್ಯಾಸದ ಕಾರ್ಯಕ್ರಮದ ಮೂಲಕ, ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನು ಸಂಬಂಧಿತ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸಲು

‘ಮನೆ ಮನೆಗೆ ಪೊಲೀಸ್’ ಯೋಜನೆಗೆ ಚಾಲನೆ ನೀಡಿದ ಗೃಹ ಸಚಿವ ಡಾ. ಜಿ ಪರಮೇಶ್ವರ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಇಂಡಿಯಾ ಒಕ್ಕೂಟದಿಂದ ಆಮ್ ಆದ್ಮಿ ಪಕ್ಷ ಹೊರಬಂದಿದೆ’- ಎಎಪಿ ನಾಯಕ ಸಂಜಯ್ ಸಿಂಗ್

(ನ್ಯೂಸ್ ಕಡಬ) newskadaba.com,ಜು .18. ಇಂಡಿಯಾ ಒಕ್ಕೂಟದಿಂದ ಆಮ್ ಆದ್ಮಿ ಪಕ್ಷ ಹೊರ ಬಂದಿದೆ. ಆಪ್ ಇಂಡಿಯಾ ಒಕ್ಕೂಟದ ಭಾಗವಾಗಿಲ್ಲ. ಇದನ್ನು ನಮ್ಮ ನಾಯಕ ಅರವಿಂದ್ ಕೇಜ್ರಿವಾಲ್ ಸ್ಪಷ್ಟಪಡಿಸಿದ್ದಾರೆ ಎಂದು ಎಎಪಿ ನಾಯಕ ಸಂಜಯ್ ಸಿಂಗ್ ಮಾಹಿತಿ ನೀಡಿದ್ದಾರೆ. ಈ ಹಿಂದೆ 2024ರ ಲೋಕಸಭಾ ಚುನಾವಣೆಯಲ್ಲಿ ದೆಹಲಿಯಲ್ಲಿ ಎಎಪಿ ಮತ್ತು ಕಾಂಗ್ರೆಸ್ ಭಾರತ ಮೈತ್ರಿಕೂಟದ ಭಾಗವಾಗಿ ಸ್ಪರ್ಧಿಸಿವೆ. ಆದರೆ, ಹರಿಯಾಣ ಮತ್ತು ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಪ್ರತ್ಯೇಕವಾಗಿ ಸ್ಪರ್ಧಿಸಿದವು. ಇಂದು ಮುಂಗಾರು ಅಧಿವೇಶನ ಹಿನ್ನೆಲೆ

‘ಇಂಡಿಯಾ ಒಕ್ಕೂಟದಿಂದ ಆಮ್ ಆದ್ಮಿ ಪಕ್ಷ ಹೊರಬಂದಿದೆ’- ಎಎಪಿ ನಾಯಕ ಸಂಜಯ್ ಸಿಂಗ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಿಮಿಷ ಪ್ರಿಯಾರನ್ನು ಕರೆತರಲು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಲಾಗುತ್ತಿದೆ: ಸುಪ್ರೀಂ ಕೋರ್ಟ್‌ಗೆ ಕೇಂದ್ರ

(ನ್ಯೂಸ್ ಕಡಬ) newskadaba.com,ಜು .18. ನವದೆಹಲಿ: ಯೆಮೆನ್‌ನಲ್ಲಿ ಸ್ಥಳೀಯ ಪ್ರಜೆಯನ್ನು ಕೊಲೆ ಮಾಡಿದ ಆರೋಪದಲ್ಲಿ ಶಿಕ್ಷೆಗೆ ಗುರಿಯಾಗಿರುವ ಕೇರಳದ ನರ್ಸ್ ನಿಮಿಷ ಪ್ರಿಯಾ ಅವರ ಮರಣದಂಡನೆಯನ್ನು ಮುಂದೂಡಲಾಗಿದೆ ಎಂದು ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಲಾಗಿದೆ. ಯೆಮನ್‌ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಕೇರಳ ಮೂಲದ 38 ವರ್ಷದ ನಿಮಿಷ ಪ್ರಿಯಾ ಅವರನ್ನು ರಕ್ಷಿಸಲು ಕೇಂದ್ರ ಸರ್ಕಾರವು ರಾಜತಾಂತ್ರಿಕ ಮಾರ್ಗಗಳನ್ನು ಬಳಸುವಂತೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು. ಕೇಂದ್ರದ ಪರವಾಗಿ ಹಾಜರಾದ ಅಟಾರ್ನಿ ಜನರಲ್

ನಿಮಿಷ ಪ್ರಿಯಾರನ್ನು ಕರೆತರಲು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಲಾಗುತ್ತಿದೆ: ಸುಪ್ರೀಂ ಕೋರ್ಟ್‌ಗೆ ಕೇಂದ್ರ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ‌ ಪ್ರಕರಣ: ಯಾವುದೇ ಒತ್ತಡಕ್ಕೂ ಮಣಿಯುವುದಿಲ್ಲ: ಕಾನೂನು ರೀತಿ ಕ್ರಮ: ಸಿ.ಎಂ

(ನ್ಯೂಸ್ ಕಡಬ) newskadaba.com,ಜು .18. ಬೆಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದಲ್ಲಿ ಯಾವುದೇ ಒತ್ತಡಕ್ಕೂ ಮಣಿಯುವುದಿಲ್ಲ. ಸರ್ಕಾರ ಈ ಬಗ್ಗೆ ಕಾನೂನು ಕ್ರಮ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಧರ್ಮಸ್ಥಳದ ಸೌಜನ್ಯ ಪ್ರಕರಣದಲ್ಲಿ ನಿವೃತ್ತ ನ್ಯಾಯಾಧೀಶರೊಬ್ಬರು ಪ್ರಕರಣದ ಎಸ್ ಐ ಟಿ ತನಿಖೆಯಾಗಬೇಕೆಂದು ಒತ್ತಾಯಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸರ್ಕಾರ ಈ ಬಗ್ಗೆ ಕಾನೂನು ಕ್ರಮ ತೆಗೆದುಕೊಳ್ಳಲಿದೆ. ಪ್ರಕರಣಕ್ಕೆ ಸಂಬಂಧಿಸಿದ ವ್ಯಕ್ತಿ ಹತ್ತುವರ್ಷಗಳ ನಂತರ ಬಂದು ಪೊಲೀಸರಿಗೆ ಹೇಳಿಕೆ

ಧರ್ಮಸ್ಥಳ‌ ಪ್ರಕರಣ: ಯಾವುದೇ ಒತ್ತಡಕ್ಕೂ ಮಣಿಯುವುದಿಲ್ಲ: ಕಾನೂನು ರೀತಿ ಕ್ರಮ: ಸಿ.ಎಂ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು: ಬರೋಬ್ಬರಿ 40 ಶಾಲೆಗಳಿಗೆ ಬಾಂಬ್ ಬೆದರಿಕೆ

(ನ್ಯೂಸ್ ಕಡಬ) newskadaba.com,ಜು .18. ಬೆಂಗಳೂರು: ಬೆಂಗಳೂರಿನಲ್ಲಿ ಬರೋಬ್ಬರಿ 40 ಖಾಸಗಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ ಆಗಮಿಸಿದ್ದು. ಒಂದೇ ರೀತಿಯ ಬೆದರಿಕೆ ಇಮೇಲ್ ಆಗಮಿಸಿದ್ದು, ಪೋಷಕರು ಹಾಗೂ ಶಾಲಾ ನಿರ್ವಹಣಾ ಮಂಡಳಿಯಲ್ಲಿ ಭೀತಿ ವಾತಾವರಣ ಸೃಷ್ಟಿಯಾಗಿದೆ. Roadkill333atomic@mail.com ಎಂಬ ಇಮೇಲ್ ಐಡಿಯಿಂದ ಈ ಬೆದರಿಕೆ ಸಂದೇಶ ರವಾನೆಯಾಗಿದ್ದು, ಆರ್‌ಆರ್ ನಗರ ಮತ್ತು ಕೆಂಗೇರಿ ಭಾಗದ ಶಾಲೆಗಳು ಇದರ ಗುರಿಯಾಗಿವೆ ಎಂದು ಮೂಲಗಳು ತಿಳಿಸಿವೆ. ಅಪರಿಚಿತ ವ್ಯಕ್ತಿಯು ಇಮೇಲ್‌ನಲ್ಲಿ ಹಿಂಸೆ ಪ್ರಚೋದಿಸುವ ಪದಗಳನ್ನು ಬಳಸಿದ್ದಾನೆ. ಶಾಲಾ ತರಗತಿಗಳಲ್ಲಿ

ಬೆಂಗಳೂರು: ಬರೋಬ್ಬರಿ 40 ಶಾಲೆಗಳಿಗೆ ಬಾಂಬ್ ಬೆದರಿಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ: ಶವ ಹೂತ ಪ್ರಕರಣ- ಭದ್ರತೆ ಕೋರಿದ ಸಾಕ್ಷಿ ವ್ಯಕ್ತಿ; SIT ರಚನೆಗೆ ನಿವೃತ್ತ ನ್ಯಾ.ಗೋಪಾಲಗೌಡ ಒತ್ತಾಯ

(ನ್ಯೂಸ್ ಕಡಬ) newskadaba.com,ಜು .18. ಬೆಂಗಳೂರು: ಧರ್ಮಸ್ಥಳದಲ್ಲಿ ಹಲವಾರು ಮಹಿಳೆಯರ ಮೇಲೆ ನಡೆದ ಅತ್ಯಾಚಾರ, ಕೊಲೆ ಮತ್ತು ಸಮಾಧಿ ಪ್ರಕರಣದ ಮಾಹಿತಿ ಬಹಿರಂಗಪಡಿಸಿದ ವ್ಯಕ್ತಿ, ಭಾರತದ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದು, ತನ್ನ ಸುರಕ್ಷತೆಗಾಗಿ ಮನವಿ ಮಾಡಿದ್ದಾರೆ. ತನಿಖಾಧಿಕಾರಿಗೆ ನೀಡಿದ ಹೇಳಿಕೆಯನ್ನು ಪೊಲೀಸರು ಸೋರಿಕೆ ಮಾಡಿದ್ದಾರೆ. ಮಾಹಿತಿ ಬಹಿರಂಗಪಡಿಸಿದ ವ್ಯಕ್ತಿ ತನ್ನ ಹೇಳಿಕೆ ಸೋರಿಕೆಯಾದ ಬಗ್ಗೆ ತಕ್ಷಣದ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಕೋರಿದ್ದಾರೆ. ಮೂರು ಪುಟಗಳ ಪತ್ರದ ಪ್ರತಿಗಳನ್ನು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ, ಮುಖ್ಯಮಂತ್ರಿ ಸಿದ್ದರಾಮಯ್ಯ,

ಧರ್ಮಸ್ಥಳ: ಶವ ಹೂತ ಪ್ರಕರಣ- ಭದ್ರತೆ ಕೋರಿದ ಸಾಕ್ಷಿ ವ್ಯಕ್ತಿ; SIT ರಚನೆಗೆ ನಿವೃತ್ತ ನ್ಯಾ.ಗೋಪಾಲಗೌಡ ಒತ್ತಾಯ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನರ್ಸ್ ನಿಮಿಷಾ ಪ್ರಿಯಾ ಪ್ರಕರಣ – ಗಲ್ಲು ಶಿಕ್ಷೆ ಬಗ್ಗೆ ವಿದೇಶಾಂಗ ಸಚಿವಾಲಯ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com,ಜು .18. ಕೇರಳದ ನರ್ಸ್ ನಿಮಿಷಾ ಪ್ರಿಯಾ ಪ್ರಕರಣದಲ್ಲಿ ಮಧ್ಯಪ್ರವೇಶಿಸಬೇಕೆಂಬ ಒತ್ತಾಯ ಹೆಚ್ಚುತ್ತಿರುವ ನಡುವೆ ಭಾರತದ ವಿದೇಶಾಂಗ ಸಚಿವಾಲಯ ಇಂದು ಪ್ರತಿಕ್ರಿಯಿಸಿದ್ದು ಹೇಳಿಕೆ ನೀಡಿದೆ. ಪ್ರಕರಣವನ್ನು ಬಗೆಹರಿಸಲು ನಡೆಯುತ್ತಿರುವ ಪ್ರಯತ್ನಗಳ ನಡುವೆಯೂ ಸರ್ಕಾರ ಕುಟುಂಬಕ್ಕೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದೆ ಎಂದು ಹೇಳಿದೆ. “ಭಾರತ ಸರ್ಕಾರವು ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದೆ. ನಾವು ಕಾನೂನು ನೆರವು ನೀಡಿದ್ದೇವೆ ಮತ್ತು ಕುಟುಂಬಕ್ಕೆ ಸಹಾಯ ಮಾಡಲು ವಕೀಲರನ್ನು ನೇಮಿಸಿದ್ದೇವೆ. ನಾವು ನಿಯಮಿತ ಕಾನ್ಸುಲರ್ ಭೇಟಿಗಳನ್ನು ಸಹ ಏರ್ಪಡಿಸಿದ್ದೇವೆ

ನರ್ಸ್ ನಿಮಿಷಾ ಪ್ರಿಯಾ ಪ್ರಕರಣ – ಗಲ್ಲು ಶಿಕ್ಷೆ ಬಗ್ಗೆ ವಿದೇಶಾಂಗ ಸಚಿವಾಲಯ ಸ್ಪಷ್ಟನೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಬ್ರೇಕಿಂಗ್ ನ್ಯೂಸ್

ಉಡುಪಿ: ಭಾರೀ ಮಳೆಯಿಂದಾಗಿ ಪ್ರವಾಹ- 24 ಜನರ ರಕ್ಷಣೆ

(ನ್ಯೂಸ್ ಕಡಬ) newskadaba.com,ಜು .17. ಜುಲೈ 15 ರಂದು ಮುಂಜಾನೆಯಿಂದ ಉಡುಪಿ ಜಿಲ್ಲೆಯಲ್ಲಿ ನಿರಂತರ ಮತ್ತು ವ್ಯಾಪಕ ಮಳೆಯಾಗುತ್ತಿದೆ. ಕಾಪು ತಾಲ್ಲೂಕಿನ ಪಡುಬಿದ್ರಿಯ ಪಾದೆಬೆಟ್ಟು ಪ್ರದೇಶದಲ್ಲಿ ನೀರಿನ ಮಟ್ಟ ವೇಗವಾಗಿ ಏರಿದ್ದು, ಹಲವಾರು ವಸತಿ ಮನೆಗಳು ಜಲಾವೃತಗೊಂಡಿವೆ. ಕಾಪು ತಹಶೀಲ್ದಾರ್ ಪ್ರತಿಭಾ ಆರ್ ಅವರ ನೇತೃತ್ವದಲ್ಲಿ, ಮುನ್ನೆಚ್ಚರಿಕೆ ಕ್ರಮವಾಗಿ ಐದು ಮನೆಗಳ 24 ಜನರನ್ನು ರಕ್ಷಿಸಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಜಿಲ್ಲೆಯ ಹಲವಾರು ಪ್ರದೇಶಗಳಲ್ಲಿ ಭಾರೀ ಮಳೆಯಿಂದಾಗಿ ನೀರು ನುಗ್ಗಿ ಪ್ರವಾಹ ಉಂಟಾಗಿದೆ. ಉಡುಪಿ, ಬ್ರಹ್ಮಾವರ, ಬೈಂದೂರು,

ಉಡುಪಿ: ಭಾರೀ ಮಳೆಯಿಂದಾಗಿ ಪ್ರವಾಹ- 24 ಜನರ ರಕ್ಷಣೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top