ಬ್ರೇಕಿಂಗ್ ನ್ಯೂಸ್

IPL 2025: ಮೇ 17ರಂದು ಪುನರಾರಂಭ

(ನ್ಯೂಸ್ ಕಡಬ) newskadaba.com , ಮೇ.13. ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆ ಹೆಚ್ಚಾದ ಕಾರಣ ಐಪಿಎಲ್ ಅನ್ನು ಒಂದು ವಾರ ಸ್ಥಗಿತಗೊಳಿಸಲಾಗಿತ್ತು. ಇದೀಗ ಇಂಡಿಯನ್ ಪ್ರೀಮಿಯರ್ ಲೀಗ್ 2025 ಸೀಸನ್ 18 ಮೇ 17 ರಿಂದ ಪುನರಾರಂಭಗೊಳ್ಳಲಿದೆ ಎಂದು ಬಿಸಿಸಿಐ ದೃಢಪಡಿಸಿದೆ. ಋತುವಿನ ಉಳಿದ ಪಂದ್ಯಗಳನ್ನು ಆರು ಸ್ಥಳಗಳಲ್ಲಿ ನಡೆಸಲಾಗುವುದು ಮತ್ತು ಜೂನ್ 3 ರಂದು ಫೈನಲ್ ಪಂದ್ಯವನ್ನು ನಿಗದಿಪಡಿಸಲಾಗಿದೆ ಎಂದು ಮಂಡಳಿ ತಿಳಿಸಿದೆ

IPL 2025: ಮೇ 17ರಂದು ಪುನರಾರಂಭ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮತ್ತೆ ಪಾಕ್‌ನಿಂದ ಡ್ರೋನ್ ದಾಳಿ

(ನ್ಯೂಸ್ ಕಡಬ) newskadaba.com , ಮೇ.13. ಮೋದಿ ಭಾಷಣದ ಬೆನ್ನಲ್ಲೇ ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘಿಸಿದೆ. ಜಮ್ಮು ಹಾಗೂ ಪಂಜಾಬ್‌ನಲ್ಲಿ ಪಾಕ್ ಡ್ರೋನ್ ದಾಳಿ ನಡೆಸಿದೆ. ಜಮ್ಮು, ಸಾಂಬಾ ಸೇರಿದಂತೆ ಹಲವೆಡೆ ಡ್ರೋನ್‌ಗಳು ಹಾರಾಟ ನಡೆಸಿವೆ. ಅಲ್ಲದೇ ಪಂಜಾಬ್‌ನ ಅಮೃತಸರದಲ್ಲೂ ಡ್ರೋನ್‌ಗಳ ಹಾರಾಟ ಕಂಡುಬಂದಿದೆ. ಡ್ರೋನ್ ಹಾರಾಟ ಹಿನ್ನೆಲೆ ಅಮೃತಸರದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ. ಮಾತ್ರವಲ್ಲದೇ ಮನೆಯಿಂದ ನಾಗರಿಕರು ಹೊರಬಾರದಂತೆ ಸೂಚನೆ ನೀಡಲಾಗಿದೆ. ಸಾಂಬಾ ಪ್ರದೇಶದಲ್ಲಿ ಬ್ಲಾಕ್‌ಔಟ್ ಘೋಷಿಸಲಾಗಿದೆ. ಸುಮಾರು 50-60 ಪಾಕ್ ಡ್ರೋನ್‌ಗಳು ದಾಳಿ

ಮತ್ತೆ ಪಾಕ್‌ನಿಂದ ಡ್ರೋನ್ ದಾಳಿ Read More »

ಬ್ರೇಕಿಂಗ್ ನ್ಯೂಸ್

ಕಾಶ್ಮೀರದಲ್ಲಿ ಸೇನಾ ಕಾರ್ಯಚರಣೆ; ಓರ್ವ ಉಗ್ರನ ಎನ್ ಕೌಂಟರ್

(ನ್ಯೂಸ್ ಕಡಬ) newskadaba.com , ಮೇ.13. ಶ್ರೀನಗರ: ಏ. 22 ರಂದು ಪಹಲ್ಗಾಮ್‌ನಲ್ಲಿ ನಡೆದ ದಾಳಿ ಬಳಿಕ ಉಗ್ರರ ವಿರುದ್ಧ ಕಾರ್ಯಾಚರಣೆ ಜೋರಾಗಿದೆ. ಪಾಕಿಸ್ತಾನ ಹಾಗೂ ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿದ್ದ ಉಗ್ರರ ತಾಣಗಳನ್ನು ಧ್ವಂಸ ಮಾಡಿದ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರಿಗಾಗಿ ಶೋಧ ಮತ್ತಷ್ಟು ಹೆಚ್ಚಾಗಿದೆ. ಮಂಗಳವಾರ ಶೋಪಿಯಾನ್‌ನ ಜಿನ್‌ಪಥರ್ ಕೆಲ್ಲರ್ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಒಬ್ಬ ಲಷ್ಕರ್-ಎ-ತೈಬಾ ಭಯೋತ್ಪಾದಕ ಹತನಾಗಿದ್ದಾನೆ ಎಂದು ತಿಳಿದು ಬಂದಿದೆ. ಇತರ

ಕಾಶ್ಮೀರದಲ್ಲಿ ಸೇನಾ ಕಾರ್ಯಚರಣೆ; ಓರ್ವ ಉಗ್ರನ ಎನ್ ಕೌಂಟರ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಳ್ತಂಗಡಿ: ನಿದ್ದೆ ಮಾತ್ರೆ ಸೇವಿಸಿದ್ದ ತಾಯಿ ಸಾವು, ಮಗ ಗಂಭೀರ

(ನ್ಯೂಸ್ ಕಡಬ) newskadaba.com , ಮೇ.13. ಬೆಳ್ತಂಗಡಿ: ಆರ್ಥಿಕ ಸಮಸ್ಯೆ ಮತ್ತು ಅನಾರೋಗ್ಯದ ಕಾರಣದಿಂದ ಅತಿಯಾಗಿ ನಿದ್ರೆ ಮಾತ್ರೆ ಸೇವಿಸಿದ್ದ ವೃದ್ಧ ತಾಯಿ ಸಾವಿಗೀಡಾಗಿ ಪುತ್ರ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಸೋಮವಾರ   ಸಂಭವಿಸಿದೆ. ಮೃತರನ್ನು ಮುಂಡಾಜೆ ಗ್ರಾಮದ ಕೂಳೂರು ನಿವಾಸಿ ದಿ|ಕುಂಞರಾಮನ್ ನಾಯರ್ ಅವರ ಪತ್ನಿ ಕಲ್ಯಾಣಿ (96) ಎಂದು ಗುರುತಿಸಲಾಗಿದ್ದು ಅವರ ಪುತ್ರ ಖ್ಯಾತ ಜಾನಪದ ಕಲಾವಿದ, ಶಿಕ್ಷಕ ಜಯರಾಂ ಕೆ (58) ಗಂಭೀರ ಸ್ಥಿತಿಯಲ್ಲಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಲಾಕ್ ಜಿಲ್ಲಾ

ಬೆಳ್ತಂಗಡಿ: ನಿದ್ದೆ ಮಾತ್ರೆ ಸೇವಿಸಿದ್ದ ತಾಯಿ ಸಾವು, ಮಗ ಗಂಭೀರ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ನೆಲಮಂಗಲ : ಹೊತ್ತಿ ಉರಿದ ಶೆಲ್ ಕಂಪನಿಯ ಆಯಿಲ್ ಗೋದಾಮು, 30 ಕೋಟಿ ರೂ. ನಷ್ಟ

(ನ್ಯೂಸ್ ಕಡಬ) newskadaba.com , ಮೇ.13. ನೆಲಮಂಗಲ ಮೇ 13- ಆಯಿಲ್ ಗೋದಾಮುವೊಂದರಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಸುಮಾರು 30 ಕೋಟಿಗೂ ಹೆಚ್ಚು ಮೌಲ್ಯದ ಆಯಿಲ್ ಬೆಂಕಿಗೆ ಹೊತ್ತಿ ಉರಿದಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಅಡಕಮಾರನಹಳ್ಳಿ ಬಳಿ ಇರುವ ಶೆಲ್ ಕಂಪನಿಗೆ ಸೇರಿದ ಆಯಿಲ್ ಗೋದಾಮಿನಲ್ಲಿ ಇಂದು ಮುಂಜಾನೆ 3 ಗಂಟೆ ಸುಮಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆ ಗೋದಾಮು ಪೂರ್ತಿ ಬೆಂಕಿ ಆವರಿಸಿಕೊಂಡು ಧಗಧಗನೆ ಹೊತ್ತಿ ಉರಿಯಲಾರಂಭಿಸಿದೆ. ಸುದ್ದಿ ತಿಳಿಯುತ್ತಿದ್ದಂತೆ ನೆಲಮಂಗಲ,

ನೆಲಮಂಗಲ : ಹೊತ್ತಿ ಉರಿದ ಶೆಲ್ ಕಂಪನಿಯ ಆಯಿಲ್ ಗೋದಾಮು, 30 ಕೋಟಿ ರೂ. ನಷ್ಟ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆಂಧ್ರದಲ್ಲಿ ಸೈನಿಕರ ಆಸ್ತಿಗೆ ತೆರಿಗೆ ವಿನಾಯಿತಿ: ಪವನ್ ಕಲ್ಯಾಣ್ ಘೋಷಣೆ

(ನ್ಯೂಸ್ ಕಡಬ) newskadaba.com , ಮೇ.13. ಆಂಧ್ರಪ್ರದೇಶದ ಗ್ರಾಮ ಪಂಚಾಯತಿ ವ್ಯಾಪ್ತಿಯೊಳಗಿನ ಸೈನಿಕರ ಒಡೆತನದ ಮನೆಗಳಿಗೆ ಆಸ್ತಿ ತೆರಿಗೆ ವಿನಾಯಿತಿ ನೀಡಲಾಗುವುದು ಎಂದು ಡಿಸಿಎಂ ಪವನ್ ಕಲ್ಯಾಣ್ ಘೋಷಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಈ ಹಿಂದೆ ನಿವೃತ್ತ ಸೈನಿಕರು ಅಥವಾ ಗಡಿಗಳಲ್ಲಿ ನಿಯೋಜನೆಗೊಂಡವರಿಗೆ ಸೀಮಿತವಾಗಿತ್ತು. ಇನ್ನು ಮುಂದೆ ಈ ವಿನಾಯಿತಿಯು ದೇಶದ ಯಾವುದೇ ಭಾಗದಲ್ಲಿ ನಿಯೋಜನೆಗೊಂಡ ಎಲ್ಲಾ ಸಕ್ರಿಯ ಸಿಬ್ಬಂದಿಗೂ ಅನ್ವಯವಾಗುತ್ತದೆ’ ಎಂದು ಮಾಹಿತಿ ನೀಡಿದ್ದಾರೆ. ‘ಈ ನಿರ್ಧಾರವು

ಆಂಧ್ರದಲ್ಲಿ ಸೈನಿಕರ ಆಸ್ತಿಗೆ ತೆರಿಗೆ ವಿನಾಯಿತಿ: ಪವನ್ ಕಲ್ಯಾಣ್ ಘೋಷಣೆ Read More »

ಬ್ರೇಕಿಂಗ್ ನ್ಯೂಸ್

ಮಸೀದಿಯಲ್ಲಿದ್ದ ಕುರಾನ್‌ ಕದ್ದೊಯ್ದು ಭಸ್ಮ, ಬೆಳಗಾವಿಯಲ್ಲಿ ಪ್ರತಿಭಟನೆ, ಉದ್ವಿಗ್ನ ವಾತಾವರಣ

(ನ್ಯೂಸ್ ಕಡಬ) newskadaba.com , ಮೇ.13. ಬೆಳಗಾವಿ: ಬೆಳಗಾವಿಯ ಮಸೀದಿಯೊಂದರಲ್ಲಿ ಇಸ್ಲಾಂ ಧರ್ಮದ ಪವಿತ್ರ ಕುರಾನ್ ಪುಸ್ತಕ ಸುಟ್ಟು ಹಾಕಿರುವ ಘಟನೆ ಬೆಳಕಿಗೆ ಬಂದಿದ್ದು, ಘಟನೆ ಬೆನ್ನಲ್ಲೇ ಪ್ರತಿಭಟನೆ, ಆಕ್ರೋಶ ಭುಗಿಲೆದ್ದಿದೆ. ಬೆಳಗಾವಿ ತಾಲೂಕಿನ ಸಂತಿಬಸ್ತವಾಡ ಎಂಬ ಗ್ರಾಮದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿದ್ದ ಮಸೀದಿಯ ಕೆಳಮಹಡಿಯಲ್ಲಿದ್ದ ಕುರಾನ್ ಪುಸ್ತಕವನ್ನು ಕದ್ದೊಯ್ದು ಸುಟ್ಟು ಹಾಕಲಾಗಿದೆ ಎನ್ನಲಾಗಿದೆ. ಈ ಮಸೀದಿಯಲ್ಲಿ ಎಂದಿನಂತೆ ಸೋಮವಾರ ಪ್ರಾರ್ಥನೆ ಮಾಡಲು ಮುಸಲ್ಮಾನರು ಆಗಮಿಸಿದ ವೇಳೆ ಕುರಾನ್, ಹದೀಸ್ ನಾಪತ್ತೆಯಾಗಿರುವುದನ್ನು

ಮಸೀದಿಯಲ್ಲಿದ್ದ ಕುರಾನ್‌ ಕದ್ದೊಯ್ದು ಭಸ್ಮ, ಬೆಳಗಾವಿಯಲ್ಲಿ ಪ್ರತಿಭಟನೆ, ಉದ್ವಿಗ್ನ ವಾತಾವರಣ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಟೆಸ್ಟ್‌ ಕ್ರಿಕೆಟ್‌ಗೆ ಕೊಹ್ಲಿ ಗುಡ್‌ಬೈ

(ನ್ಯೂಸ್ ಕಡಬ) newskadaba.com , ಮೇ.12.  ಕಿಂಗ್‌ ಕೊಹ್ಲಿ ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ. ಕಳೆದ 14 ವರ್ಷಗಳಿಂದ ಭಾರತೀಯ ಟೆಸ್ಟ್‌ ಕ್ರಿಕೆಟ್‌ ತಂಡದ ಪ್ರಮುಖ ಆಟಗಾರರಾಗಿದ್ದ ವಿರಾಟ್‌ ಕೊಹ್ಲಿ ಇಂದು ತಮ ಟೆಸ್ಟ್‌ ಕ್ರಿಕೆಟ್‌ ಜೀವನಕ್ಕೆ ವಿದಾಯ ಹೇಳಿದ್ದಾರೆ. ಇಂಗ್ಲೆಂಡ್‌ ವಿರುದ್ಧದ ಟೆಸ್ಟ್‌ ಪಂದ್ಯಗಳಿಗೆ ಭಾರತ ತಂಡ ಪ್ರಕಟಿಸಲು ಬಿಸಿಸಿಐ ಸಿದ್ಧತೆ ನಡೆಸುತ್ತಿದ್ದ ಸಂದರ್ಭದಲ್ಲೇ ಕೊಹ್ಲಿ ಅವರು ತಮ ಇನ್‌ಸ್ಟಾಗ್ರಾಮ್‌ನಲ್ಲಿ ತಮ ರಾಜೀನಾಮೆ ವಿಷಯ ಬಹಿರಂಗಪಡಿಸಿದ್ದಾರೆ.

ಟೆಸ್ಟ್‌ ಕ್ರಿಕೆಟ್‌ಗೆ ಕೊಹ್ಲಿ ಗುಡ್‌ಬೈ Read More »

ಬ್ರೇಕಿಂಗ್ ನ್ಯೂಸ್

ಯುದ್ಧದ ಉದ್ವಿಗ್ನ ಸ್ಥಿತಿಯ ನಡುವೆ ಪಾಕ್‌ನಲ್ಲಿ 4.6 ತೀವ್ರತೆಯ ಭೂಕಂಪ

(ನ್ಯೂಸ್ ಕಡಬ) newskadaba.com , ಮೇ.12.  ಭಾರತ-ಪಾಕ್‌ ಯುದ್ಧದ ಉದ್ವಿಗ್ನ ಸ್ಥಿತಿಯ  ನಡುವೆ ಪಾಕಿಸ್ತಾನ ಈಗ ಭೂಕಂಪದಿಂದ ನಲುಗಿದೆ. ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆ ದಾಖಲಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ಭೂಕಂಪದ ಅಕ್ಷಾಂಶ 29.12N ಮತ್ತು ರೇಖಾಂಶ 67.26E ಆಗಿತ್ತು. ಶುಕ್ರವಾರ-ಶನಿವಾರದ ಮಧ್ಯರಾತ್ರಿ ಪಾಕಿಸ್ತಾನದಲ್ಲಿ 4.0 ತೀವ್ರತೆಯ ಭೂಕಂಪ ಸಂಭವಿಸಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಮಾಹಿತಿ ಪ್ರಕಾರ, ಇಂದು ಮಧ್ಯಾಹ್ನ 1:26ರ ಸುಮಾರಿಗೆ ಮತ್ತೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆ ದಾಖಲಾಗಿದ್ದು, 10

ಯುದ್ಧದ ಉದ್ವಿಗ್ನ ಸ್ಥಿತಿಯ ನಡುವೆ ಪಾಕ್‌ನಲ್ಲಿ 4.6 ತೀವ್ರತೆಯ ಭೂಕಂಪ Read More »

ಬ್ರೇಕಿಂಗ್ ನ್ಯೂಸ್

ಪಾಕ್‍ಗೆ ನಾವು ಹೇಗಾದ್ರೂ ಪ್ರತಿಕ್ರಿಯಿಸುತ್ತೇವೆ, ಇದನ್ನು ಟ್ರಂಪ್ ಅರ್ಥ ಮಾಡಿಕೊಳ್ಳಲಿ: ಮೋದಿ

(ನ್ಯೂಸ್ ಕಡಬ) newskadaba.com , ಮೇ.12.  ಪಾಕಿಸ್ತಾನದ ದಾಳಿಗೆ ಭಾರತ ಏನು ಬೇಕಾದರೂ, ಹೇಗೆ ಬೇಕಾದರೂ ಪ್ರತಿಕ್ರಿಯಿಸುತ್ತೇವೆ. ಇದನ್ನು ಟ್ರಂಪ್ ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ಅಮೆರಿಕದ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ಅವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ ಎಂದು ಉನ್ನತ ಮೂಲಗಳು ಮಾಹಿತಿ ನೀಡಿವೆ. ಭಾರತ ಹಾಗೂ ಪಾಕ್ ನಡುವಿನ ಉದ್ವಿಗ್ನತೆ ಹೆಚ್ಚಾದ ಬಗ್ಗೆ ಗುಪ್ತಚರ ಮಾಹಿತಿ ಪಡೆದಿದ್ದ ವ್ಯಾನ್ಸ್, ಮೇ 9ರಂದು ಮೋದಿಯವರನ್ನು ಸಂಪರ್ಕಿಸಿ ಸಂಯಮದಿಂದ ವರ್ತಿಸುವಂತೆ ಮನವಿ ಮಾಡಿದ್ದರು.

ಪಾಕ್‍ಗೆ ನಾವು ಹೇಗಾದ್ರೂ ಪ್ರತಿಕ್ರಿಯಿಸುತ್ತೇವೆ, ಇದನ್ನು ಟ್ರಂಪ್ ಅರ್ಥ ಮಾಡಿಕೊಳ್ಳಲಿ: ಮೋದಿ Read More »

ಬ್ರೇಕಿಂಗ್ ನ್ಯೂಸ್
Scroll to Top