ಬ್ರೇಕಿಂಗ್ ನ್ಯೂಸ್

LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ

(ನ್ಯೂಸ್ ಕಡಬ) newskadaba.com , ಏ.01: ದೇಶದಲ್ಲಿ ತೈಲ ಕಂಪನಿಗಳು ವಾಣಿಜ್ಯ ಬಳಕೆಯ 19 ಕೆಜಿ  ಸಿಲಿಂಡರ್ ಗಳ ಬೆಲೆಯಲ್ಲಿ 41 ರೂಪಾಯಿ ಇಳಿಕೆ ಮಾಡಿದೆ. ಪರಿಷ್ಕೃತ ದರದ ಪ್ರಕಾರ, ದೆಹಲಿಯಲ್ಲಿ 19ಕೆಜಿ ಸಿಲಿಂಡರ್ ಬೆಲೆ ಈಗ 1762 ರೂ. ಆಗಿದೆ. ಮುಂಬೈ ನಗರದಲ್ಲಿ 1714.50 ರೂ. ಮತ್ತು ಚೆನ್ನೈ ನಲ್ಲಿ 1924 ರೂ. ಆಗಿದೆ. ತೈಲ ಕಂಪನಿಗಳು ಪ್ರತೀ ತಿಂಗಳ ಮೊದಲ ದಿನ ದೇಶದಲ್ಲಿ ಅಡುಗೆ ಅನಿಲ ಬೆಲೆಯಲ್ಲಿ ಪರಿಷ್ಕರಣೆ ಮಾಡುತ್ತದೆ. ಸದ್ಯಕ್ಕೆ ಗೃಹ ಬಳಕೆ […]

LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಯನ್ಮಾರ್‌ನಲ್ಲಿ 7.2 ತೀವ್ರತೆಯ ಭೂಕಂಪ: ದೆಹಲಿ,ಬ್ಯಾಂಕಾಕ್‌ ಸೇರಿದಂತೆ ಹಲವು ಕಡೆ ಕಂಪನದ ಅನುಭವ

(ನ್ಯೂಸ್ ಕಡಬ) newskadaba.com , ಮಾ.28: ಶುಕ್ರವಾರ ಬೆಳಿಗ್ಗೆ ಮಧ್ಯ ಮಯನ್ಮಾರ್ ನಲ್ಲಿ 7.7 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ತಿಳಿದು ಬಂದಿದೆ. ಮಧ್ಯಾಹ್ನ 12:30 ರ ಸುಮಾರಿಗೆ ಭೂಕಂಪ ಸಂಭವಿಸುತ್ತಿದ್ದಂತೆ ಕಟ್ಟಡಗಳಲ್ಲಿ ಎಚ್ಚರಿಕೆಯ ಶಬ್ದಗಳು ಮೊಳಗಿದವು. ಜನರಿಗೆ ಭೂ ಕಂಪನದ ಅನುಭವವಾಗುತ್ತಿದ್ದಂತೆ ಕಟ್ಟಡಗಳನ್ನು ಬಿಟ್ಟು ಹೊರಗೆ ಓಡಿ ಹೋಗಿದ್ದಾರೆ. ಸದ್ಯ ಜನರು ಭಯಭೀತರಾಗಿ ಓಡಿ ಬಂದಿರುವ ದೃಶ್ಯ ಸಿಸಿಟವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಹಾನಿ ಅಥವಾ ಸಾವುನೋವುಗಳ ಬಗ್ಗೆ ಯಾವುದೇ ವರದಿಯಾಗಿಲ್ಲ. ಮಯನ್ಮಾರ್

ಮಯನ್ಮಾರ್‌ನಲ್ಲಿ 7.2 ತೀವ್ರತೆಯ ಭೂಕಂಪ: ದೆಹಲಿ,ಬ್ಯಾಂಕಾಕ್‌ ಸೇರಿದಂತೆ ಹಲವು ಕಡೆ ಕಂಪನದ ಅನುಭವ Read More »

ಬ್ರೇಕಿಂಗ್ ನ್ಯೂಸ್

ರಾಜ್ಯದ ಜನತೆಗೆ ಕರೆಂಟ್‌ ಶಾಕ್‌- ಪ್ರತಿ ಯೂನಿಟ್‌ಗೆ 36 ಪೈಸೆ ಹೆಚ್ಚಳ

(ನ್ಯೂಸ್ ಕಡಬ) newskadaba.com , ಮಾ.28: ಕರ್ನಾಟಕ ವಿದ್ಯುತ್‌ ನಿಯಂತ್ರಣ ಆಯೋಗ ಜನರಿಗೆ ವಿದ್ಯುತ್ ಶಾಕ್ ಕೊಟ್ಟಿದೆ. ಪ್ರತಿ ಯೂನಿಟ್‌ಗೆ 36 ಪೈಸೆ ಹೆಚ್ಚಳ ಮಾಡಿ ಕೆಇಆರ್‌ಸಿ ಇಂದು (ಗುರುವಾರ) ಅಧಿಕೃತ ಆದೇಶ ಹೊರಡಿಸಿದ್ದು, ಪರಿಷ್ಕೃತ ವಿದ್ಯುತ್ ದರ ಏಪ್ರಿಲ್‌ 1ರಿಂದಲೇ ಅನ್ವಯವಾಗಲಿದೆ. ಮುಂದಿನ ಮೂರು ವರ್ಷಗಳಿಗೆ ದರ ಏರಿಕೆ ಮಾಡಿ ಪಟ್ಟಿ ಆದೇಶಿಸಿದೆ. ಯೂನಿಟ್‍ಗೆ 49 ಪೈಸೆ ಏರಿಕೆ ಮಾಡುವಂತೆ ಡಿಸೆಂಬರ್ ಕೊನೆಯ ವಾರದಲ್ಲಿ ಎಸ್ಕಾಂಗಳು ಕೆಇಆರ್‌ಸಿ ಪ್ರಸ್ತಾವನೆ ಸಲ್ಲಿಸಿದ್ದವು. ಪ್ರಸ್ತಾವನೆಯಂತೆ ಉತ್ಪಾದನೆಯ ಖರ್ಚು-ವೆಚ್ಚ ಮತ್ತು

ರಾಜ್ಯದ ಜನತೆಗೆ ಕರೆಂಟ್‌ ಶಾಕ್‌- ಪ್ರತಿ ಯೂನಿಟ್‌ಗೆ 36 ಪೈಸೆ ಹೆಚ್ಚಳ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅರ್ಹ ಮಹಿಳೆಯರಿಗೆ ತಿಂಗಳಿಗೆ 2,500 ರೂ. – ದೆಹಲಿ ಬಜೆಟ್‌ನಲ್ಲಿ ಸಿಎಂ ರೇಖಾ ಗುಪ್ತಾ ಘೋಷಣೆ

(ನ್ಯೂಸ್ ಕಡಬ) newskadaba.com, ಮಾ. 25: ದೆಹಲಿಯಲ್ಲಿ ಹೊಸದಾಗಿ ಆಯ್ಕೆಯಾದ ಬಿಜೆಪಿ ಸರ್ಕಾರವು 26 ವರ್ಷಗಳ ಬಳಿಕ ದೆಹಲಿ ವಿಧಾನಸಭೆಯಲ್ಲಿ ತನ್ನ ಮೊದಲ ಬಜೆಟ್ ಮಂಡಿಸಿದೆ. ದೆಹಲಿ ಮುಖ್ಯಮಂತ್ರಿ ಮತ್ತು ಹಣಕಾಸು ಸಚಿವೆ ರೇಖಾ ಗುಪ್ತಾ 2025-26 (FY26) ಹಣಕಾಸು ವರ್ಷದ ಬಜೆಟ್ ಅನ್ನು ಮಂಡಿಸಿದ್ದಾರೆ. ಬಜೆಟ್‌ನಲ್ಲಿ ಅರ್ಹ ಮಹಿಳೆಯರಿಗೆ ತಿಂಗಳಿಗೆ 2,500 ಪಾವತಿಸಲು ಸರ್ಕಾರ 5,100 ಕೋಟಿ ಹಣವನ್ನು ನಿಗದಿಪಡಿಸಿದೆ. ದೆಹಲಿಯ ಈ ಬಾರಿಯ ಬಜೆಟ್‌ 2025 ಹಿಂದಿನ ಬಜೆಟ್‌ಗಿಂತ ಶೇ. 31.5 ರಷ್ಟು ಹೆಚ್ಚಳ ಕಂಡಿದೆ. FY26 ರ

ಅರ್ಹ ಮಹಿಳೆಯರಿಗೆ ತಿಂಗಳಿಗೆ 2,500 ರೂ. – ದೆಹಲಿ ಬಜೆಟ್‌ನಲ್ಲಿ ಸಿಎಂ ರೇಖಾ ಗುಪ್ತಾ ಘೋಷಣೆ Read More »

ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಕುಟುಂಬದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುವವರ ವಿರುದ್ಧ ಜಾನ್ ಡೋ ಆದೇಶ ಜಾರಿ

(ನ್ಯೂಸ್ ಕಡಬ) newskadaba.com, ಮಾ. 25: ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರ ವಿರುದ್ಧ ಅವಹೇಳನಕಾರಿ ಹೇಳಿಕೆ ಹಾಗೂ ವರದಿ ಮಾಡದಂತೆ ಬೆಂಗಳೂರಿನ ಸಿಟಿ ಸಿವಿಲ್‌ ಕೋರ್ಟ್‌ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಲಯಜಾನ್ ಡೋ (ಅಶೋಕಕುಮಾರ್) ಆದೇಶ  ಹೊರಡಿಸಿದೆ. ಈ ಸಂಬಂಧ ಹಿರಿಯ ನ್ಯಾಯವಾದಿ ಎಸ್. ರಾಜಶೇಖರ್ ಹಿಳಿಯಾರು ವಾದ ಮಂಡಿಸಿದ್ದು, ದಾವೆಯನ್ನು ವಿಚಾರಣೆ ನಡೆಸಿದ ಸಿಸಿಎಚ್‌–11ನೇ ನ್ಯಾಯಾಲಯ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಿ ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಮಾಧ್ಯಮಗಳ ಮೂಲಕ ಅವಹೇಳನಕಾರಿ ವರದಿ ಮಾಡದಂತೆ ಹಾಗೂ ಈಗಾಗಲೇ ಸಾಮಾಜಿಕ

ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಕುಟುಂಬದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುವವರ ವಿರುದ್ಧ ಜಾನ್ ಡೋ ಆದೇಶ ಜಾರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಂಸದರ ವೇತನ, ಭತ್ಯೆ , ಪಿಂಚಣಿ ಏರಿಕೆ ಮಾಡಿದ ಕೇಂದ್ರ ಸರ್ಕಾರ

(ನ್ಯೂಸ್ ಕಡಬ) newskadaba.com, ಮಾ. 25: ಲೋಕಸಭೆ ಮತ್ತು ರಾಜ್ಯಸಭಾ ಸಂಸದರ ವೇತನವನ್ನು ಕೇಂದ್ರ ಸರ್ಕಾರ ಹೆಚ್ಚಿಸಿದೆ. ಸಂಸದರ ವೇತನದ ಹೊರತಾಗಿ, ಮಾಜಿ ಸಂಸತ್ ಸದಸ್ಯರ ಭತ್ಯೆಗಳು ಮತ್ತು ಪಿಂಚಣಿಯನ್ನು ಸಹ ಹೆಚ್ಚಿಸಲಾಗಿದೆ. ಈ ಹೆಚ್ಚಳವು ಏಪ್ರಿಲ್ 1, 2023 ರಿಂದ ಜಾರಿಗೆ ಬರಲಿದೆ. ಸಂಸದೀಯ ವ್ಯವಹಾರಗಳ ಸಚಿವಾಲಯ ಸೋಮವಾರ ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿದೆ. ಅಧಿಸೂಚನೆಯ ಪ್ರಕಾರ, ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರ ವೇತನವು ತಿಂಗಳಿಗೆ 1 ಲಕ್ಷ ರೂ.ಗಳಿಂದ 1.24 ಲಕ್ಷ ರೂ.ಗಳಿಗೆ ಏರಿಕೆಯಾಗಿದೆ. ಅದೇ ಸಮಯದಲ್ಲಿ, ದಿನಭತ್ಯೆ 2,000

ಸಂಸದರ ವೇತನ, ಭತ್ಯೆ , ಪಿಂಚಣಿ ಏರಿಕೆ ಮಾಡಿದ ಕೇಂದ್ರ ಸರ್ಕಾರ Read More »

ಬ್ರೇಕಿಂಗ್ ನ್ಯೂಸ್

ಮೇಕೆದಾಟು ಯೋಜನೆ ತಡೆಯಲು ಅಗತ್ಯ ಬಿದ್ದರೆ ಕೋರ್ಟಿಗೆ- ತಮಿಳುನಾಡು

(ನ್ಯೂಸ್ ಕಡಬ) newskadaba.com, ಮಾ. 25: ಚೆನ್ನೈ: ಕರ್ನಾಟಕದ ಮೇಕೆದಾಟು ಅಣೆಕಟ್ಟು ಯೋಜನೆ ತಡೆಯಲು ಅಗತ್ಯ ಬಿದ್ದರೆ ಕೋರ್ಟಿಗೆ ಹೋಗುವುದಾಗಿ ತಮಿಳು ನಾಡು ಸರಕಾರ ತಿಳಿಸಿದೆ. ಮೇಕೆದಾಟಿನಲ್ಲಿ ಕಾವೇರಿ ನದಿಗೆ ಜಲಾಶಯ ನಿರ್ಮಿಸುವ ಯೋಜನೆಗೆ ಯಾವ ಕಾರಣಕ್ಕೂ ಅವಕಾಶ ನೀಡುವುದಿಲ್ಲ. ಯೋಜನೆಯನ್ನು ತಡೆಯುವುದಕ್ಕಾಗಿ ಕಾನೂನು ಕ್ರಮ ಸೇರಿದಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ ಎಂದು ತಮಿಳುನಾಡು ಜಲಸಂಪನ್ಮೂಲ ಸಚಿವ ದೊರೈ ಮುರುಗನ್ ಹೇಳಿದ್ದಾರೆ. ಯೋಜನೆಗೆ ಕರ್ನಾಟಕ ಸರ್ಕಾರ ಅನುಮತಿ ಕೋರಿದ ಬೆನ್ನಲ್ಲೇ ಸಚಿವರ ಈ ಹೇಳಿಕೆ ಹೊರಟಿದೆ. 2025-2026ರ ನೀತಿ ಟಿಪ್ಪಣಿಯನ್ನು

ಮೇಕೆದಾಟು ಯೋಜನೆ ತಡೆಯಲು ಅಗತ್ಯ ಬಿದ್ದರೆ ಕೋರ್ಟಿಗೆ- ತಮಿಳುನಾಡು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

15 ಕೋಟಿ ರೂ. ಪತ್ತೆ ಪ್ರಕರಣ; ನ್ಯಾಯಮೂರ್ತಿ ಯಶವಂತ್ ವರ್ಮಾ ಕರ್ತವ್ಯದಿಂದ ವಜಾ

(ನ್ಯೂಸ್ ಕಡಬ) newskadaba.com, ಮಾ. 24 ನವದೆಹಲಿ: ಮನೆಯಲ್ಲಿ ಸುಟ್ಟ ಸ್ಥಿತಿಯಲ್ಲಿ 15 ಕೋಟಿ ರೂ.ಗಳ ನೋಟಿನ ಕಂತೆಗಳು ಸಿಕ್ಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಮುಂದಿನ ಆದೇಶದವರೆಗೆ ಯಶವಂತ್‌ ವರ್ಮಾ ಅವರನ್ನು ತಕ್ಷಣದಿಂದಲೇ ಕರ್ತವ್ಯದಿಂದ ವಜಾಗೊಳಿಸಿ ದೆಹಲಿ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಆದೇಶ ಹೊರಡಿಸಿದ್ದಾರೆ. ಇದಕ್ಕೂ ಮುನ್ನ ಸುಪ್ರೀಂ ಕೋರ್ಟ್‌ ಈ ಪ್ರಕರಣದ ವಿಚಾರಣೆಗಾಗಿ ಪಂಜಾಬ್‌, ಹರಿಯಾಣ ಮತ್ತು ಕರ್ನಾಟಕ ಹೈಕೋರ್ಟ್‌ಗಳ ನ್ಯಾಯಮೂರ್ತಿಗಳ ಸಮಿತಿಯನ್ನು ರಚಿಸಿದೆ. ದೆಹಲಿ ಹೈಕೋರ್ಟ್‌

15 ಕೋಟಿ ರೂ. ಪತ್ತೆ ಪ್ರಕರಣ; ನ್ಯಾಯಮೂರ್ತಿ ಯಶವಂತ್ ವರ್ಮಾ ಕರ್ತವ್ಯದಿಂದ ವಜಾ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನಿಂದ ದೆಹಲಿ ವಿಧಾನಸಭೆಯ ಅಧಿವೇಶನ ಆರಂಭ; ನಾಳೆ ಬಜೆಟ್ ಮಂಡನೆ

(ನ್ಯೂಸ್ ಕಡಬ) newskadaba.com, ಮಾ. 24:  ದೆಹಲಿ ವಿಧಾನಸಭೆಯ ಬಜೆಟ್ ಅಧಿವೇಶನ ಇಂದಿನಿಂದ ಪ್ರಾರಂಭವಾಗಲಿದೆ. ಖೀರ್ ಸಮಾರಂಭದೊಂದಿಗೆ ಬಜೆಟ್ ಅಧಿವೇಶನವು ಆರಂಭವಾಗಲಿದೆ. 27 ವರ್ಷಗಳ ಬಳಿಕ ಅಧಿಕಾರಕ್ಕೇರಿದ ಬಿಜೆಪಿ ಸರ್ಕಾರ ಮಾರ್ಚ್ 25ರಂದು ಮೊದಲ ಬಜೆಟ್ ಮಂಡಿಸಲಿದೆ. ಮಾರ್ಚ್ 24ರಿಂದ ಮಾರ್ಚ್ 28ರ ವರೆಗೆ ಈ ಅಧಿವೇಶನ ನಡೆಯಲಿದೆ. ನಾಳೆ ನಡೆಯಲಿರುವ ಅಧಿವೇಶನದಲ್ಲಿ ದೆಹಲಿ ಸಿಎಂ ರೇಖಾ ಗುಪ್ತ ಅವರು 2025-26ನೇ ಹಣಕಾಸು ವರ್ಷದ ಬಜೆಟ್ ಮಂಡಿಸಲಿದ್ದಾರೆ. ಎಂ ರೇಖಾ ಗುಪ್ತಾ ಅವರು, ಬಿಜೆಪಿ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಮಹಿಳೆಯರಿಗೆ ಮಾಸಿಕ 2,500,

ಇಂದಿನಿಂದ ದೆಹಲಿ ವಿಧಾನಸಭೆಯ ಅಧಿವೇಶನ ಆರಂಭ; ನಾಳೆ ಬಜೆಟ್ ಮಂಡನೆ Read More »

ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ! ವಿವಿಧ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ!

(ನ್ಯೂಸ್ ಕಡಬ) newskadaba.com ಮಾ. 22: ಕೇರಳದ ವಿವಿಧ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಪಾಲಕ್ಕಾಡ್, ಮಲಪ್ಪುರಂ ಮತ್ತು ವಯನಾಡ್ ಜಿಲ್ಲೆಗಳಲ್ಲಿ ಹಳದಿ ಎಚ್ಚರಿಕೆ. ಪ್ರತ್ಯೇಕ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. 24 ಗಂಟೆಗಳಲ್ಲಿ 64.5 ಮಿ.ಮೀ ನಿಂದ 115.5 ಮಿ.ಮೀ ಮಳೆಯಾಗಿದ್ದರೆ ಅದನ್ನು ಭಾರೀ ಮಳೆ ಸಾಧ್ಯತೆ ಇದೆ ಎನ್ನಲಾಗ್ತಿದೆ. ಮುಂದಿನ 3 ಗಂಟೆಗಳಲ್ಲಿ ಕೇರಳದ ಕೊಲ್ಲಂ ಜಿಲ್ಲೆಯ ಕೆಲ ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆ ಮತ್ತು ಗಂಟೆಗೆ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು

ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ! ವಿವಿಧ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ! Read More »

ಬ್ರೇಕಿಂಗ್ ನ್ಯೂಸ್
Scroll to Top