ಬ್ರೇಕಿಂಗ್ ನ್ಯೂಸ್

ರಾಜಸ್ಥಾನದ ಮುಖ್ಯಮಂತ್ರಿಗೆ ಜೈಲಿನಿಂದಲೇ ಬೆದರಿಕೆ

(ನ್ಯೂಸ್ ಕಡಬ) newskadaba.com ಫೆ. 22. ಪ್ರಸ್ತುತ ದೌಸಾ ಜೈಲಿನಲ್ಲಿದ್ದ ವ್ಯಕ್ತಿಯೊಬ್ಬರು ಮುಖ್ಯಮಂತ್ರಿ ಭಜನ್ಲಾಲ್ ಶರ್ಮಾ ಅವರಿಗೆ ದೂರವಾಣಿ ಮೂಲಕ ಕೊಲೆ ಬೆದರಿಕೆ ಕಳುಹಿಸಿದ್ದಾರೆ ಎಂದು ಆರೋಪಿಸಲಾಗಿದೆ. ಇದು ಅಪರಾಧಿಗೆ ಫೋನ್ ಹೇಗೆ ಸಿಕ್ಕಿತು ಎಂಬುದರ ಬಗ್ಗೆ ವಿಚಾರಣೆಗೆ ಕಾರಣವಾಗಿದೆ. ರಾಜ್ಯದ ಗೃಹ ಸಚಿವರು “ಜೈಲಿನೊಳಗೆ ಇನ್ನೊಬ್ಬ ಅಧಿಕಾರಿ ಭಾಗಿಯಾಗಿರಬಹುದು ಎಂದು ಮೇಲ್ನೋಟಕ್ಕೆ ತೋರುತ್ತಿದೆ” ಎಂದು ಹೇಳಿದ್ದಾರೆ. ಆರೋಪಿ, ರಿಂಕು/ರಣ್ವಾ, ಮೊದಲು ಲೈಂಗಿಕ ಅಪರಾಧಗಳಿಗಾಗಿ ಪೋಕ್ಸೋ ಕಾಯ್ದೆಯಡಿಯಲ್ಲಿ ಬಂಧಿತನಾಗಿದ್ದಾನೆ. ಜೈಲಿನ ಇನ್ಸ್ಪೆಕ್ಟರ್ ಜನರಲ್ ವಿಕ್ರಮ್ ಸಿಂಗ್‌ಗೆ ತನಿಖೆಯ ಜವಾಬ್ದಾರಿಯನ್ನು ನೀಡಲಾಗಿದೆ. “ಅಪರಾಧಿಗೆ […]

ರಾಜಸ್ಥಾನದ ಮುಖ್ಯಮಂತ್ರಿಗೆ ಜೈಲಿನಿಂದಲೇ ಬೆದರಿಕೆ Read More »

ಬ್ರೇಕಿಂಗ್ ನ್ಯೂಸ್

ಮಾ.11 ,12 ರಂದು ಪ್ರಧಾನಿ ಮೋದಿ ಮಾರಿಷಸ್‌ ಪ್ರವಾಸ

(ನ್ಯೂಸ್ ಕಡಬ) newskadaba.com ಫೆ. 22. ಮಾ.11 ಮತ್ತು ಮಾ.12ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮಾರಿಷಸ್‌ ಪ್ರವಾಸ ಕೈಗೊಳ್ಳಲಿದ್ದಾರೆ.ಮಾರಿಷಸ್‌ನ ರಾಷ್ಟ್ರೀಯ ದಿನಾಚರಣೆಯಲ್ಲಿ ಮೋದಿ ಅವರು  ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಮಾರಿಷಸ್ ಪ್ರಧಾನಿ ನವೀನ್ ರಾಮ್‌ಗೂಲಂ ತಿಳಿಸಿದ್ದಾರೆ. ಶುಕ್ರವಾರ ಸದನವನ್ನುದ್ದೇಶಿಸಿ ಮಾತನಾಡಿದ ನವೀನ್ ರಾಮ್‌ಗೂಲಂ, ನಮ್ಮ ದೇಶದ ಸ್ವಾತಂತ್ರ್ಯದ 57ನೇ ವಾರ್ಷಿಕೋತ್ಸವದ ಆಚರಣೆಯ ಸಂದರ್ಭದಲ್ಲಿ, ಸದನಕ್ಕೆ ಒಂದು ವಿಷಯ ತಿಳಿಸಲು ನನಗೆ ತುಂಬಾ ಸಂತೋಷವಾಗಿದೆ. ನಮ್ಮ ಆಹ್ವಾನದ ಮೇರೆಗೆ ರಾಷ್ಟ್ರೀಯ ದಿನಾಚರಣೆಯಲ್ಲಿ ಗೌರವಾನ್ವಿತ ಅತಿಥಿಯಾಗಿ ಪಾಲ್ಗೊಳ್ಳಲು ಭಾರತದ ಪ್ರಧಾನಿ ಮೋದಿ ಅವರು

ಮಾ.11 ,12 ರಂದು ಪ್ರಧಾನಿ ಮೋದಿ ಮಾರಿಷಸ್‌ ಪ್ರವಾಸ Read More »

ಬ್ರೇಕಿಂಗ್ ನ್ಯೂಸ್

ಭಾರತದಲ್ಲಿ ಇಂಧನ ಬೆಲೆ ಇಳಿಕೆ ಸಾಧ್ಯತೆ

(ನ್ಯೂಸ್ ಕಡಬ) newskadaba.com ಫೆ. 22. ಅಮೆರಿಕ ಸೇರಿದಂತೆ ಜಾಗತಿಕ ಮಾರುಕಟ್ಟೆಯಲ್ಲಿ ಹೆಚ್ಚಿನ ತೈಲ ಬರುತ್ತಿರುವುದರಿಂದ ಇಂಧನ ಬೆಲೆಗಳು ಕಡಿಮಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಎಸ್ ಪುರಿ ಹೇಳಿದ್ದಾರೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪುರಿ, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇತೃತ್ವದ ಹೊಸ ಯುಎಸ್ ಆಡಳಿತದೊಂದಿಗೆ ಭಾರತವು ಸಂಪರ್ಕಗಳನ್ನು ಸ್ಥಾಪಿಸಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ ಅವರು ಇಂಧನ ರಂಗದಲ್ಲಿ ಇಂಡೋ-ಅಮೆರಿಕನ್ ಸಂಬಂಧವು ಗಾಢವಾಗಲಿದೆ ಎಂದು ಹೇಳಿದರು. ಭಾರತವು ಅರ್ಜೆಂಟೀನಾ ಸೇರಿದಂತೆ 40 ದೇಶಗಳಿಂದ ತೈಲವನ್ನು ಆಮದು

ಭಾರತದಲ್ಲಿ ಇಂಧನ ಬೆಲೆ ಇಳಿಕೆ ಸಾಧ್ಯತೆ Read More »

ಬ್ರೇಕಿಂಗ್ ನ್ಯೂಸ್
crime, arrest, suspected

ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 51 ಜನರಿಗೆ ವಂಚನೆ: ದಂಪತಿ ಬಂಧನ

(ನ್ಯೂಸ್ ಕಡಬ) newskadaba.com ಫೆ. 22. ಬೆಂಗಳೂರು: ವಿದೇಶಿ ವರ್ಕಿಂಗ್ ವೀಸಾ ಕೊಡಿಸುವುದಾಗಿ ನಂಬಿಸಿ 51 ಜನರಿಗೆ ವಂಚಿಸಿದ ದಂಪತಿಗಳನ್ನು ನಗರ ಪೊಲೀಸರು ಶುಕ್ರವಾರ ಬಂಧಿಕ್ಕೊಳಪಡಿಸಿದ್ದಾರೆ. ತಿಲಕನಗರ ಸಕ್ಲೇನ್ ಸುಲ್ತಾನ್ (34) ಮತ್ತು ಈತನ ಪತ್ನಿ ನಿಖಿತಾ ಸುಲತಾನ್ (28) ಬಂಧಿತರು. ಆರೋಪಿಗಳಿಂದ 2 ಐಷಾರಾಮಿ ಕಾರು, ಎರಡು ದ್ವಿಚಕ್ರ ವಾಹನ, ರೂ.66 ಲಕ್ಷ ನಗರು, 24 ಗ್ರಾಂ ಚಿನ್ನಾಭರಣವನ್ನು ಜಪ್ತಿ ಮಾಡಲಾಗಿದೆ. ರಾಜಸ್ಥಾನ ಮೂಲಕ ಮಗ್ ಸಿಂಗ್ ನೀಡಿದ ದೂರಿನ ಮೇಲೆಗೆ ಪ್ರಕರಣ ದಾಖಲಿಸಿ ತನಿಖೆ ನಡೆಸಿ ಇಬ್ಬರು ಆರೋಪಿಗಳನ್ನು

ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 51 ಜನರಿಗೆ ವಂಚನೆ: ದಂಪತಿ ಬಂಧನ Read More »

ಬ್ರೇಕಿಂಗ್ ನ್ಯೂಸ್

ಮತ್ತೆ ಚಿನ್ನದ ದರ ಗಗನಮುಖಿ

(ನ್ಯೂಸ್ ಕಡಬ) newskadaba.com ಫೆ. 22. ಬೆಂಗಳೂರು: ಕೆಲವು ದಿನಗಳಿಂದ ಏರುಮುಖವಾಗಿ ಸಾಗುತ್ತಲೇ ಇರುವ ಚಿನ್ನದ ದರದಲ್ಲಿ ಇಂದು (ಫೆ. 22) ಮತ್ತೆ ಏರಿಕೆ ಕಂಡು ಬಂದಿದೆ (Gold Price Today). ಶನಿವಾರ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ 20 ರೂ. ಏರಿಕೆಯಾಗಿ 8,045 ರೂ.ಗೆ ತಲುಪಿದರೆ, 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ 22 ರೂ. ಅಧಿಕವಾಗಿ 8,777 ರೂ.ಗೆ ತಲುಪಿದೆ. ಆ ಮೂಲಕ 22 ಕ್ಯಾರಟ್‌ನ 8 ಗ್ರಾಂ ಚಿನ್ನ 64,360 ರೂ. ಬೆಲೆ ಬಾಳಿದರೆ,

ಮತ್ತೆ ಚಿನ್ನದ ದರ ಗಗನಮುಖಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಗಂಗಾ ನೀರು ಶುದ್ದವಾಗಿದೆ, ಚರ್ಮ ರೋಗಗಳು ಕೂಡ ಬರುವುದಿಲ್ಲ’ – ಪದ್ಮಶ್ರೀ ಪುರಸ್ಕೃತ ವಿಜ್ಞಾನಿ ಡಾ.ಅಜಯ್ ಸೋಂಕರ್

(ನ್ಯೂಸ್ ಕಡಬ) newskadaba.com ಫೆ. 22. ಮಹಾ ಕುಂಭಮೇಳದ ತ್ರಿವೇಣಿ ಸಂಗಮದ ನೀರಿನ ಶುದ್ಧತೆ ಬಗ್ಗೆ ವ್ಯಾಪಕ ಟೀಕೆಗೆ ಕಾರಣವಾಗಿತ್ತು. ಈ ಮಧ್ಯೆ ಗಂಗಾ ನೀರು ಶುದ್ದವಾಗಿದೆ, ಸ್ನಾನಕ್ಕೆ ಸುರಕ್ಷಿತವಾಗಿದೆ. ಅಲ್ಲದೆ ಚರ್ಮ ರೋಗಗಳು ಕೂಡ ಬರುವುದಿಲ್ಲ ಎಂದು ಪದ್ಮಶ್ರೀ ಪುರಸ್ಕೃತ ವಿಜ್ಞಾನಿ ಡಾ.ಅಜಯ್ ಸೋಂಕರ್ ಹೇಳಿದ್ದಾರೆ. ಸಂಗಮ್ ಮತ್ತು ಅರೈಲ್ ಸೇರಿದಂತೆ ಐದು ಘಾಟ್‌ಗಳಿಂದ ಗಂಗಾ ನೀರಿನ ಪ್ರಯೋಗಾಲಯ ಪರೀಕ್ಷೆಯ ನಂತರ ಅವರು ಈ ಹೇಳಿಕೆ ನೀಡಿದ್ದಾರೆ. ಐದು ಘಾಟ್‌ಗಳಿಂದ ಗಂಗಾ ನೀರಿನ ಮಾದರಿಗಳನ್ನು ತೆಗೆದುಕೊಂಡು ಪ್ರಯೋಗಾಲಯದಲ್ಲಿ ಸೂಕ್ಷ್ಮ ಪರೀಕ್ಷೆಗಳನ್ನು

‘ಗಂಗಾ ನೀರು ಶುದ್ದವಾಗಿದೆ, ಚರ್ಮ ರೋಗಗಳು ಕೂಡ ಬರುವುದಿಲ್ಲ’ – ಪದ್ಮಶ್ರೀ ಪುರಸ್ಕೃತ ವಿಜ್ಞಾನಿ ಡಾ.ಅಜಯ್ ಸೋಂಕರ್ Read More »

ಬ್ರೇಕಿಂಗ್ ನ್ಯೂಸ್

ಮಹಾಕುಂಭ ಮೇಳ: ಉತ್ತರ ಪ್ರದೇಶದ ಆರ್ಥಿಕತೆಗೆ ರೂ. 3ಲಕ್ಷ ಕೋಟಿಗೂ ಹೆಚ್ಚಿನ ಹಣ!

(ನ್ಯೂಸ್ ಕಡಬ) newskadaba.com ಫೆ. 21. ಲಖನೌ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳ ರಾಜ್ಯದ ಆರ್ಥಿಕತೆಗೆ 3 ಲಕ್ಷ ಕೋಟಿ ರೂ.ಗಿಂತ ಹೆಚ್ಚಿನ ಹಣವನ್ನು ತರಲಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶುಕ್ರವಾರ ಹೇಳಿದ್ದಾರೆ. ಬಜೆಟ್ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಸಮಾಜವಾದಿ ಪಕ್ಷದ ಶಾಸಕಿ ರಾಗಿಣಿ ಸೋಂಕರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಉತ್ತರ ಪ್ರದೇಶ ಮುಖ್ಯಮಂತ್ರಿ, ಕಳೆದ ಎಂಟು ವರ್ಷಗಳಲ್ಲಿ ಸರ್ಕಾರ ಎಂಟು ಕೋಟಿಗೂ ಹೆಚ್ಚು ಜನರನ್ನು ಬಡತನ ರೇಖೆಯಿಂದ ಹೊರತಂದಿದೆ ಎಂದು ಹೇಳಿದರು. ಕಳೆದ 10 ವರ್ಷಗಳಲ್ಲಿ ಪ್ರಧಾನಿ

ಮಹಾಕುಂಭ ಮೇಳ: ಉತ್ತರ ಪ್ರದೇಶದ ಆರ್ಥಿಕತೆಗೆ ರೂ. 3ಲಕ್ಷ ಕೋಟಿಗೂ ಹೆಚ್ಚಿನ ಹಣ! Read More »

ಬ್ರೇಕಿಂಗ್ ನ್ಯೂಸ್

ಸರ್ಕಾರದ ಭ್ರಷ್ಟಾಚಾರ, ಜನವಿರೋಧಿ ನೀತಿ ವಿರುದ್ಧ ಬಜೆಟ್ ಅಧಿವೇಶದಲ್ಲಿ ಹೋರಾಟಕ್ಕೆ ಪ್ರತಿಪಕ್ಷ ಸಜ್ಜು

(ನ್ಯೂಸ್ ಕಡಬ) newskadaba.com ಫೆ. 21. ರಾಜ್ಯ ಸರ್ಕಾರದ ಭ್ರಷ್ಟಾಚಾರ, ವೈಫಲ್ಯ, ಜನವಿರೋಧಿ ನೀತಿಗಳನ್ನು ಮುಂಬರುವ ಬಜೆಟ್ ಅಧಿವೇಶನದಲ್ಲಿ ಬಹಿರಂಗಪಡಿಸಲು ಬಿಜೆಪಿ ಪಕ್ಷ ಸಜ್ಜಾಗಿದೆ. ಇಂದು ವಿಧಾನಸೌಧದ  ಕಚೇರಿಯಲ್ಲಿ ಮುಂಬರುವ ಬಜೆಟ್ ಅಧಿವೇಶನ ಕುರಿತು ಮಹತ್ವದ ಚರ್ಚೆ ನಡೆಯಿತು. ಸದನದಲ್ಲಿ ಪ್ರಶ್ನೆಗಳನ್ನು ಕೇಳುವುದು, ಚರ್ಚೆಗೆ ಒಳಪಡಿಸುವ ವಿಷಯಗಳು ಹಾಗೂ ನಿಲುವಳಿ ಸೂಚನೆಯ ಮಂಡನೆಗೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸದಸ್ಯರೊಂದಿಗೆ ಸಭೆ ನಡೆಸಲಾಯಿತು. ರಾಜ್ಯ ಸರ್ಕಾರದ ಭ್ರಷ್ಟಾಚಾರ, ವೈಫಲ್ಯ, ಜನವಿರೋಧಿ ನೀತಿಗಳನ್ನು ಬಹಿರಂಗಪಡಿಸಲು ಹಾಗೂ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಲು ಸದನದಲ್ಲಿ ಬಲವಾದ ಪ್ರತಿಪಕ್ಷದ ಹೋರಾಟ

ಸರ್ಕಾರದ ಭ್ರಷ್ಟಾಚಾರ, ಜನವಿರೋಧಿ ನೀತಿ ವಿರುದ್ಧ ಬಜೆಟ್ ಅಧಿವೇಶದಲ್ಲಿ ಹೋರಾಟಕ್ಕೆ ಪ್ರತಿಪಕ್ಷ ಸಜ್ಜು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

PM Internship Scheme ಮೂಲಕ ಯುವ ಪದವೀಧರರಿಗೆ ಸುವರ್ಣಾವಕಾಶ

(ನ್ಯೂಸ್ ಕಡಬ) newskadaba.com ಫೆ. 21. : PM Internship Scheme ಯೋಜನೆಯಡಿ ಯುವಕರಿಗೆ ಇಂಟರ್ನ್ಶಿಪ್ ಗೆ ಹೊಸ ಅವಕಾಶಗಳನ್ನು ನೀಡಲಾಗಿದೆ. ಈ ಯೋಜನೆಯ ಮೂಲಕ 1 ಕೋಟಿ ಯುವಕರಿಗೆ ಕೇಂದ್ರ ಇಂಟರ್ನ್ಶಿಪ್ ಅವಕಾಶಗಳನ್ನು ಒದಗಿಸುವುದು ಕೇಂದ್ರ ಸರಕಾರದ ಗುರಿಯಾಗಿದೆ. ಈ ಯೋಜನೆಯಡಿಯಲ್ಲಿ ಯುವಕರಿಗೆ ತಾಂತ್ರಿಕ ಹಾಗೂ ವೃತ್ತಿಪರ ಕೌಶಲ್ಯಗಳನ್ನು ಕಲಿಸುವ ಮೂಲಕ ಭವಿಷ್ಯದ ಉದ್ಯೋಗಕ್ಕಾಗಿ ಅವರನ್ನು ಸಿದ್ಧಪಡಿಸಲಾಗುತ್ತದೆ ಅದೇ ರೀತಿ ಈ ಯೋಜನೆಯಡಿಯಲ್ಲಿ ತರಬೇತಿ ಪಡೆಯುತ್ತಿರುವ ಯುವಕರು ತಮ್ಮ ಉದ್ಯೋಗದಲ್ಲಿ ಉತ್ತಮ ತಾಂತ್ರಿಕ ಜ್ಞಾನವನ್ನು ಪಡೆಯುತ್ತಾರೆ,ಇದು ಅವರ ವೃತ್ತಿ ಮತ್ತು ಭವಿಷ್ಯವನ್ನು ಬಲಪಡಿಸುತ್ತದೆ.

PM Internship Scheme ಮೂಲಕ ಯುವ ಪದವೀಧರರಿಗೆ ಸುವರ್ಣಾವಕಾಶ Read More »

ಬ್ರೇಕಿಂಗ್ ನ್ಯೂಸ್

ದಿಲ್ಲಿಯ ನೂತನ ಸಿಎಂ ಆಗಿ ರೇಖಾ ಗುಪ್ತಾ ಆಯ್ಕೆ, ಇಂದು ಪ್ರಮಾಣವಚನ ಸ್ವೀಕಾರ

(ನ್ಯೂಸ್ ಕಡಬ) newskadaba.com ಫೆ. 20. ನವದೆಹಲಿ : ಬರೋಬ್ಬರಿ 27 ವರ್ಷಗಳ ಬಳಿಕ ಸ್ವಂತ ಬಲದ ಮೇಲೆ ಅಧಿಕಾರದ ಗದ್ದುಗೆ ಹಿಡಿದಿರುವ ಬಿಜೆಪಿಯು ದಿಲ್ಲಿಯ ತನ್ನ ನೂತನ ಸಿಎಂ ಆಗಿ ರೇಖಾಗುಪ್ತಾ ಹಾಗೂ ಡಿಸಿಎಂ ಆಗಿ ಪರ್ವೇಶ್ ವರ್ಮಾ ಅವರನ್ನು ಅಧಿಕೃತವಾಗಿ ಇಂದು ಘೋಷಿಸಿದೆ. ದೆಹಲಿಯ ಬಿಜೆಪಿ ಕಚೇರಿಯಲ್ಲಿ ಶಾಸಕಾಂಗ ಸಭೆಯು ವೀಕ್ಷಕರ ಸಮ್ಮುಖದಲ್ಲಿ ನಡೆಯಿತು. ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಮಾಡಲಾಗಿದ್ದು, ಅಂತಿಮವಾಗಿ ಸಿಎಂ, ಡಿಸಿಎಂ ಹೆಸರು ಘೋಷಣೆ ಮಾಡಲಾಯಿತು. ನವದೆಹಲಿಯಲ್ಲಿರುವ ಐತಿಹಾಸಿಕ

ದಿಲ್ಲಿಯ ನೂತನ ಸಿಎಂ ಆಗಿ ರೇಖಾ ಗುಪ್ತಾ ಆಯ್ಕೆ, ಇಂದು ಪ್ರಮಾಣವಚನ ಸ್ವೀಕಾರ Read More »

ಬ್ರೇಕಿಂಗ್ ನ್ಯೂಸ್
Scroll to Top