ಬ್ರೇಕಿಂಗ್ ನ್ಯೂಸ್

ಫೆಬ್ರವರಿಯಲ್ಲಿ ಅಮೆರಿಕಕ್ಕೆ ಮೋದಿ ಭೇಟಿ ; ಟ್ರಂಪ್‌

(ನ್ಯೂಸ್ ಕಡಬ) newskadaba.com ಜ.28: ಮಂಗಳೂರು : ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ತಿಂಗಳು ಫೆಬ್ರವರಿಯಲ್ಲಿ ಶ್ವೇತಭವನಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್‌್ಡ ಟ್ರಂಪ್‌ ಹೇಳಿದ್ದಾರೆ. ಫ್ಲೋರಿಡಾದಿಂದ ಜಾಯಿಂಟ್‌ ಬೇಸ್‌‍ ಆಂಡ್ರ್ಯೂಸ್‌‍ಗೆ ಹಿಂದಿರುಗುವಾಗ ಏರ್‌ ಫೋರ್ಸ್‌ ಒನ್‌ನಲ್ಲಿ ಸುದ್ದಿಗಾರರಿಗೆ ಟ್ರಂಪ್‌ ಅವರು ಮಾತನಾಡಿ ,ನಾನು ಇಂದು ಬೆಳಿಗ್ಗೆ ಮೋದಿ ಅವರೊಂದಿಗೆ ಸುದೀರ್ಘ ಮಾತುಕತೆ ನಡೆಸಿದ್ದೇನೆ. ಅವರು ಮುಂದಿನ ತಿಂಗಳು, ಬಹುಶಃ ಫೆಬ್ರವರಿಯಲ್ಲಿ ಶ್ವೇತಭವನಕ್ಕೆ ಬರಲಿದ್ದಾರೆ ಎಂದರು. ಪ್ರಧಾನಿ ಮೋದಿಯವರೊಂದಿಗಿನ ಅವರ […]

ಫೆಬ್ರವರಿಯಲ್ಲಿ ಅಮೆರಿಕಕ್ಕೆ ಮೋದಿ ಭೇಟಿ ; ಟ್ರಂಪ್‌ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸರಿಗಮಪ ಖ್ಯಾತಿಯ ಮಂಜಮ್ಮ ವಿಧಿವಶ

(ನ್ಯೂಸ್ ಕಡಬ) newskadaba.com ಜ.28: ಸರಿಗಮಪ ಖ್ಯಾತಿಯ ಮಂಜಮ್ಮ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ.  ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಡಿವಿ ಹಳ್ಳಿ ಗ್ರಾಮದ ಮಂಜಮ್ಮ ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಮಂಜಮ್ಮ ಅವರನ್ನ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ತಡರಾತ್ರಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮಂಜಮ್ಮಳನ್ನ ಕಳೆದುಕೊಂಡ ಕುಟುಂಬಸ್ಥರು ಕಂಗಾಲಾಗಿದ್ದಾರೆ.  

ಸರಿಗಮಪ ಖ್ಯಾತಿಯ ಮಂಜಮ್ಮ ವಿಧಿವಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪೊಲೀಸರು ಆರೋಪಿಗಳಿಗೆ ನೋಟಿಸ್ ನೀಡಲು ವಾಟ್ಸ್ಆ್ಯಪ್, ಎಲೆಕ್ಟ್ರಾನಿಕ್ ಸಾಧನ ಬಳಸುವಂತಿಲ್ಲ- ಸುಪ್ರೀಂ

(ನ್ಯೂಸ್ ಕಡಬ) newskadaba.com ಜ.27 ಬೆಂಗಳೂರು: ಪೊಲೀಸರು ಆರೋಪಿಗಳಿಗೆ ನೋಟಿಸ್ ನೀಡಲು ವಾಟ್ಸ್ಆ್ಯಪ್ ಅಥವಾ ಇತರ ಎಲೆಕ್ಟ್ರಾನಿಕ್ ಸಾಧನ ಬಳಸುವಂತಿಲ್ಲ. ಈ ರೀತಿ ನೀಡಿದ ನೋಟಿಸ್ ಸೇವೆಯನ್ನು ಕ್ರಿಮಿನಲ್ ಪ್ರೊಸೀಜರ್ ಕೋಡ್ ಅಥವಾ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಅಡಿಯಲ್ಲಿ ಪರಿಗಣಿಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ನ್ಯಾಯಮೂರ್ತಿಗಳಾದ ಎಂ.ಎಂ ಸುಂದ್ರೇಶ್ ಮತ್ತು ರಾಜೇಶ್ ಬಿಂದಾಲ್ ಅವರ ಪೀಠ ಈ ಆದೇಶ ಹೊರಡಿಸಿದ್ದು, ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 1973ರ ಸಿಆರ್‌ಪಿಸಿ ಸೆಕ್ಷನ್ 41-ಎ

ಪೊಲೀಸರು ಆರೋಪಿಗಳಿಗೆ ನೋಟಿಸ್ ನೀಡಲು ವಾಟ್ಸ್ಆ್ಯಪ್, ಎಲೆಕ್ಟ್ರಾನಿಕ್ ಸಾಧನ ಬಳಸುವಂತಿಲ್ಲ- ಸುಪ್ರೀಂ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಕೋಟೆಕಾರ್ ದರೋಡೆ ಪ್ರಕರಣ : 18.3 ಕೆಜಿ ಚಿನ್ನ ವಶ

(ನ್ಯೂಸ್ ಕಡಬ) newskadaba.com ಜ.27: ಜನವರಿ 17 ರಂದು ನಡೆದ ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗರವಾಲ್ ಘೋಷಿಸಿದ್ದಾರೆ. ಮುರುಗಂಡಿ ತೇವರ್ (36); ಯೊಸೊವಾ ರಾಜೇಂದ್ರನ್ (35); ಕಣ್ಣನ್ ಮಣಿ (36); ಮತ್ತು ಮುರುಗಂಡಿ ತೇವರ್ ಅವರ ತಂದೆ ಷಣ್ಮುಗಸುಂದರಂ ಬಂಧಿತ ಆರೋಪಿಗಳು. ಇನ್ನೂ ನಾಲ್ವರು ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ಸ್ಥಳೀಯ ವ್ಯಕ್ತಿ ಶಶಿ ತೇವರ್ ಎಂಬಾತನ ಹೆಸರು ಹೇಳಿದ್ದು,

ಮಂಗಳೂರು: ಕೋಟೆಕಾರ್ ದರೋಡೆ ಪ್ರಕರಣ : 18.3 ಕೆಜಿ ಚಿನ್ನ ವಶ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಅಮಿತ್‌ ಶಾ ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

(ನ್ಯೂಸ್ ಕಡಬ) newskadaba.com ಜ.27: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸಾಧುಗಳ ಜೊತೆಗೆ ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ. ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ ನಂತರ ಅವರು ಬಡೇ ಹನುಮಾನ್ ಜಿ ದೇವಸ್ಥಾನ ಮತ್ತು ಅಭಯವತ್‌ಗೆ ಭೇಟಿ ನೀಡಲಿದ್ದಾರೆ. ನಂತರ ಜುನಾ ಅಖಾರಕ್ಕೆ ತೆರಳಿ ಮಹಾರಾಜರು ಮತ್ತು ಅಖಾರದ ಇತರ ಸಂತರನ್ನು ಭೇಟಿ ಮಾಡಿ ಅವರೊಂದಿಗೆ ಭೋಜನ ಸೇವಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಫೆ. 5 ರಂದು ಪವಿತ್ರ ಸ್ನಾನ ಮಾಡಲಿದ್ದಾರೆ.

ಅಮಿತ್‌ ಶಾ ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ Read More »

ಬ್ರೇಕಿಂಗ್ ನ್ಯೂಸ್

ಮೈಸೂರು: ಹೃದಯಾಘಾತದಿಂದ SSLC ವಿದ್ಯಾರ್ಥಿನಿ ಸಾವು

(ನ್ಯೂಸ್ ಕಡಬ) newskadaba.com ಜ.27  ಮೈಸೂರು: ಹೃದಯಾಘಾತದಿಂದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಕೆಲ್ಲೂರು ಗ್ರಾಮದಲ್ಲಿ ಸೋಮವಾರ ಸಂಭವಿಸಿದೆ. ನಾಗರಾಜ್, ವಸಂತ ದಂಪತಿ ಪುತ್ರಿ ದೀಪಿಕಾ (15) ಮೃತ ವಿದ್ಯಾರ್ಥಿನಿ. ರಾವಂದೂರು ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಎಸ್‌ಎಸ್ ಎಲ್‌ಸಿ ವ್ಯಾಸಂಗ ಮಾಡುತ್ತಿದ್ದ ದೀಪಿಕಾ ಭಾನುವಾರ ಇದ್ದಕ್ಕಿದ್ದಂತೆ ಅಸ್ವಸ್ಥಳಾಗಿದ್ದಳು. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಅಷ್ಟರಲ್ಲಾಗಲೇ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

ಮೈಸೂರು: ಹೃದಯಾಘಾತದಿಂದ SSLC ವಿದ್ಯಾರ್ಥಿನಿ ಸಾವು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿಯ ಶಾಲೆಗೆ ಬಾಂಬ್ ಬೆದರಿಕೆ

(ನ್ಯೂಸ್ ಕಡಬ) newskadaba.com ಜ.27  ಉಡುಪಿ:  ಬೆಳ್ಳಂಬೆಳಗ್ಗೆ ಉಡುಪಿಯ ಪ್ರತಿಷ್ಠಿತ ಖಾಸಗಿ ಶಾಲೆಗೆ ಬಾಂಬ್‌ ಬೆದರಿಕೆಯ ಇಮೇಲ್‌ ಬಂದಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಕೂಡಲೇ ಸ್ಥಳಕ್ಕೆ ಪೊಲೀಸರಿಗೆ ಆಗಮಿಸಿದ್ದು, ತನಿಖೆ ನಡೆಸಲಾಗುತ್ತಿದೆ. ಇದುವರೆಗೆ ಯಾವುದೇ ಸಂಶಯಾಸ್ಪದ ವಸ್ತು ಪತ್ತೆಯಾಗಿಲ್ಲ. ಉಡುಪಿಯ ಶಾರದಾ ಇಂಟರ್‌ನ್ಯಾಷನಲ್‌ ವಸತಿ ಶಾಲೆಗೆ ಇಮೇಲೆ ಮೂಲಕ ಬಾಂಬ್‌ ಬೆದರಿಕೆ ಹಾಕಲಾಗಿದ್ದು, ಇಲ್ಲಿ ರಾಜ್ಯದ ವಿವಿಧ ಭಾಗಗಳ, ವಿವಿಧ ರಾಜ್ಯಗಳ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಬಾಂಬ್‌ ಬೆದರಿಕೆಯ ಸಂದೇಶ ಬರುತ್ತಿದ್ದಂತೆ ಶಾಲಾ ಆಡಳಿತ ಮಂಡಳಿ

ಉಡುಪಿಯ ಶಾಲೆಗೆ ಬಾಂಬ್ ಬೆದರಿಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸುಳ್ಯ: ಮಂಡೇಕೋಲಿನಲ್ಲಿ ಆನೆಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಜ.27  : ಗಂಡಾನೆಯ ಮೃತದೇಹವೊಂದು ಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಮತ್ತು ಕೇರಳ ಗಡಿ ಭಾಗದ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಎರ್ಕಲ್ಪಾಡಿಯಲ್ಲಿ ಭಾನುವಾರ ನಡೆದಿದೆ. ಮಂಡೆಕೋಲು ರಿಸರ್ವ್ ಫಾರೆಸ್ಟ್‌ನಲ್ಲಿ ಸ್ಥಳೀಯರಿಗೆ ಸುಮಾರು 50-55 ವರ್ಷ ಪ್ರಾಯದ ಕಾಡಾನೆ ಮೃತದೇಹ ಕಂಡುಬಂದಿದ್ದು, ಅವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಕಾದಾಟದಲ್ಲಿ ಸಾವು ಶಂಕೆಮೃತ ಆನೆ ಹಾಗೂ ಬೇರೆ ಕಾಡಾನೆಗಳ ನಡುವೆ ಕಾದಾಟ ನಡೆದು ಇದರಿಂದ ತೀವ್ರ ರಕ್ತಸ್ರಾವಗೊಂಡು ಆನೆ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಆನೆಯ

ಸುಳ್ಯ: ಮಂಡೇಕೋಲಿನಲ್ಲಿ ಆನೆಯ ಮೃತದೇಹ ಪತ್ತೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಹಳ್ಳಿ ಹುಡುಗ ವಿಜೇತ ಹನುಮಂತ

(ನ್ಯೂಸ್ ಕಡಬ) newskadaba.com ಜ.27  ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 11ರ ವಿಜೇತರಾಗಿ ಹನುಮಂತ ಹೊರಹೊಮ್ಮಿದ್ದಾರೆ. ವೈಲ್ಡ್ ಕಾರ್ಡ್ ಮೂಲಕ ದೊಡ್ಮನೆಗೆ ಎಂಟ್ರಿಕೊಟ್ಟಿದ್ದ ಹನುಮಂತ ವಿಜೇತರಾಗಿ ಹೊರಹೊಮ್ಮಿರುವುದು ಅಚ್ಚರಿ ಮೂಡಿಸಿದೆ. ಟಾಪ್ ಐವರ ಪೈಕಿ ಮೊದಲಿಗೆ ಉಗ್ರಂ ಮಂಜು ಹೊರಹೋಗಿದ್ದರು. ಬಿಗ್ ಬಾಸ್ ಆರಂಭದಲ್ಲಿ ಉಗ್ರಂ ಮಂಜು ಉತ್ತಮವಾಗಿ ಆಡುತ್ತಿದ್ದು ಟ್ರೋಫಿ ಗೆಲ್ಲುವ ಭರವಸೆ ಮೂಡಿಸಿದ್ದರು. ಆದರೆ ವೈಲ್ಡ್ ಕಾರ್ಡ್ ಮೂಲಕ ಹನುಮಂತ ಮತ್ತು ರಜತ್ ಎಂಟ್ರಿ ನಂತರ ಮಂಜು ಉತ್ಸಾಹ ಕಳೆದುಕೊಂಡಿದ್ದರು. ಬರಬರುತ್ತಾ ಅವರ

‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಹಳ್ಳಿ ಹುಡುಗ ವಿಜೇತ ಹನುಮಂತ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಹಾಕುಂಭ ಮೇಳದಲ್ಲಿ ಸ್ಪೀಕರ್ ಯುಟಿ ಖಾದರ್

(ನ್ಯೂಸ್ ಕಡಬ) newskadaba.com ಜ.25  ಪ್ರಯಾಗ್ ರಾಜ್: ತನ್ನ ಸರಳತೆ, ಜಾತ್ಯತೀತ ತತ್ವಗಳ ಅನುಸರಣೆಯಿಂದ ಹೆಸರುವಾಸಿಯಾಗಿರುವ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಏಕತೆ ಮತ್ತು ಕೋಮು ಸಾಮರಸ್ಯದ ಸಂಕೇತವಾಗಿ ಶುಕ್ರವಾರ ಹಿಂದೂ ಕುಂಭ ಮೇಳಕ್ಕೆ ಭೇಟಿ ನೀಡಿದ್ದಾರೆ. ಮುಸ್ಲಿಂ ಆಗಿದ್ದರೂ ನಾಗ ಸಾಧುಗಳು ಮತ್ತು ಅಘೋರಿಗಳೊಂದಿಗೆ ಆಧ್ಯಾತ್ಮಿಕತೆ ಬಗ್ಗೆ ಆತ್ಮೀಯವಾಗಿ ಮಾತನಾಡಿದ್ದು, ಅನುಭವಗಳನ್ನು ಹಂಚಿಕೊಂಡಿದ್ದಾರೆ. ಹಿಂದಿಯಲ್ಲಿ ನಿರರ್ಗಳವಾಗಿ ಮಾತನಾಡುವ ಖಾದರ್ ಸಾಧುಗಳೊಂದಿಗೆ ಬೆರೆತು, ವಿಶ್ವದ ಅತಿದೊಡ್ಡ ಧಾರ್ಮಿಕ ಕೂಟಗಳಲ್ಲಿ ಒಂದಾದ ಮಹಾ ಕುಂಭ ಮೇಳದಲ್ಲಿ ಅದ್ಬುತ ಕ್ಷಣಗಳನ್ನು

ಮಹಾಕುಂಭ ಮೇಳದಲ್ಲಿ ಸ್ಪೀಕರ್ ಯುಟಿ ಖಾದರ್ Read More »

ಬ್ರೇಕಿಂಗ್ ನ್ಯೂಸ್
Scroll to Top