ಬ್ರೇಕಿಂಗ್ ನ್ಯೂಸ್

ರಾಷ್ಟ್ರೀಯ ಆರೋಗ್ಯ ಮಿಷನ್ 5 ವರ್ಷ ವಿಸ್ತರಣೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

(ನ್ಯೂಸ್ ಕಡಬ) newskadaba.com ಜ.23 ನವದೆಹಲಿ: ಕೇಂದ್ರ ಸಚಿವ ಸಂಪುಟವು ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್‌ಎಚ್ಎಂ) ಅನ್ನು ಮುಂದಿನ 5 ವರ್ಷಗಳವರೆಗೆ ವಿಸ್ತರಿಸಲು ಬುಧವಾರ ಅನುಮೋದನೆ ನೀಡಿದೆ. ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಕೇಂದ್ರ ಸಚಿವ ಪೀಯೂಷ್ ಗೋಯೆಲ್, ‘ಈ ಯೋಜನೆ ಕಳೆದ 10 ವರ್ಷಗಳಲ್ಲಿ ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. 2021-22ರ ಅವಧಿಯಲ್ಲಿ ಸುಮಾರು 12 ಲಕ್ಷ ಆರೋಗ್ಯ ಕಾರ್ಯಕರ್ತರು ಮಿಷನ್‌ನೊಂದಿಗೆ ಜೋಡಿಸಿದ್ದು, ಇಡೀ ದೇಶ ಕೋವಿಡ್ ವಿರುದ್ಧ ಹೋರಾಡಲು ಸಾಧ್ಯವಾಯಿತು’ ಎಂದರು. ಕೋವಿಡ್ ಸಮಯದಲ್ಲಿ […]

ರಾಷ್ಟ್ರೀಯ ಆರೋಗ್ಯ ಮಿಷನ್ 5 ವರ್ಷ ವಿಸ್ತರಣೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪತ್ನಿಯ ಶವವನ್ನು ಕತ್ತರಿಸಿ ಪ್ರೆಶರ್ ಕುಕ್ಕರ್‌ನಲ್ಲಿ ಅಡುಗೆ ಮಾಡಿದ ಪತಿ

(ನ್ಯೂಸ್ ಕಡಬ) newskadaba.com ಜ.23  ಹೈದರಬಾದ್: ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಂದು, ದೇಹವನ್ನು ಹಲವು ತುಂಡುಗಳಾಗಿ ಕತ್ತರಿಸಿ ಪ್ರೆಶರ್ ಕುಕ್ಕರ್ನಲ್ಲಿ ಕುದಿಸಿ ಅಪರಾಧವನ್ನು ಮುಚ್ಚಿಹಾಕಲು ಪ್ರಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ. 45 ವರ್ಷದ ಗುರು ಮೂರ್ತಿ ಎಂಬ ವ್ಯಕ್ತಿ, ತನ್ನ ಪತ್ನಿ ನಾಪತ್ತೆಯಾದ ನಂತರ ಪೊಲೀಸ್ ತನಿಖೆಯ ಸಮಯದಲ್ಲಿ ಈ ಹೇಳಿಕೆಗಳನ್ನು ನೀಡಿದ್ದಾನೆ. ಆರೋಪಗಳನ್ನು ಪರಿಶೀಲಿಸಲಾಗುತ್ತಿದೆ. 35 ವರ್ಷದ ವೆಂಕಟ ಮಾಧವಿ ನಾಪತ್ತೆಯಾಗಿದ್ದಾರೆ ಎಂದು ಕುಟುಂಬವು ಜನವರಿ 16ರಂದು ವರದಿ ಮಾಡಿತ್ತು. ಪೊಲೀಸರು ತನಿಖೆ ಆರಂಭಿಸಿದಾಗ, ಅವರಿಗೆ ಗಂಡನ

ಪತ್ನಿಯ ಶವವನ್ನು ಕತ್ತರಿಸಿ ಪ್ರೆಶರ್ ಕುಕ್ಕರ್‌ನಲ್ಲಿ ಅಡುಗೆ ಮಾಡಿದ ಪತಿ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರೈತ ಸಂಘಟನೆಗಳ ಬೃಹತ್ ಪ್ರತಿಭಟನಾರ್ಯಾಲಿ ಕಲಬುರಗಿ ಬಂದ್ಗೆಾ ಮಿಶ್ರ ಪ್ರತಿಕ್ರಿಯೆ; ಜನಜೀವನ ಸಹಜ

(ನ್ಯೂಸ್ ಕಡಬ) newskadaba.com ಜ.22 :  ಕಲಬುರಗಿ : ಪ್ರತಿಕ್ವಿಂಟಾಲ್‍ತೊಗರಿಗೆ ರೂ.12500 ಧಾರಣೆ ನೀಡಬೇಕುಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡುಕರ್ನಾಟಕ ಪ್ರಾಂತರೈತ ಸಂಘ ಹಾಗೂ ಅಖಿಲ ಭಾರತಕಿಸಾನ್ ಸಭಾಸೇರಿದಂತೆ ಹಲವು ರೈತಪರ ಸಂಘಟನೆಗಳು ಕರೆದಿದ್ದ ಕಲಬುರಗಿ ಬಂದ್‍ಗೆಇಂದು ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮುಂಜಾನೆ ಸುಮಾರು 5ರ ಹೊತ್ತಿಗೆ ಬಂದ್‍ಆರಂಭಗೊಂಡಿದ್ದರಿಂದ ಆ ಸಮಯಕ್ಕೂ ಮೊದಲುಕೇಂದ್ರ ಬಸ್ ನಿಲ್ದಾಣದಿಂದ ಹೊರರಾಜ್ಯ ಮತ್ತುಅನ್ಯ ಜಿಲ್ಲೆಗಳಿಗೆ ಹೊರಡಬೇಕಿದ್ದ ಸಾರಿಗೆಇಲಾಖೆಯ ಬಸ್‍ಗಳುಅದಕ್ಕೂ ಮುಂಚೆ ನಿರ್ಗಮಿಸಿದ್ದು ಬಿಟ್ಟರೆ ಉಳಿದಂತೆ ಬಸ್ ಸಂಚಾರ ಸ್ಥಗಿತಗೊಂತ್ತು.ಇನ್ನುಳಿದಂತೆ ನಗರದ ನಾಲ್ಕೂ

ರೈತ ಸಂಘಟನೆಗಳ ಬೃಹತ್ ಪ್ರತಿಭಟನಾರ್ಯಾಲಿ ಕಲಬುರಗಿ ಬಂದ್ಗೆಾ ಮಿಶ್ರ ಪ್ರತಿಕ್ರಿಯೆ; ಜನಜೀವನ ಸಹಜ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಾಹ್ಯಾಕಾಶದಿಂದ ಮಹಾ ಕುಂಭಮೇಳದ ಫೊಟೋ ಬಿಡುಗಡೆ ಮಾಡಿದ ಇಸ್ರೋ

(ನ್ಯೂಸ್ ಕಡಬ) newskadaba.com ಜ.22 : ಬಾಹ್ಯಾಕಾಶದಿಂದ ಕಾಣಿಸುವ ಮಹಾ ಕುಂಭಮೇಳದ ಸ್ಥಳದ ಫೋಟೋಗಳನ್ನು ಇಸ್ರೋ ಬಿಡುಗಡೆ ಮಾಡಿದೆ. ಭಾರತದ ಅತ್ಯಾಧುನಿಕ ಆಪ್ಟಿಕಲ್ ಉಪಗ್ರಹಗಳು ಮತ್ತು ಹಗಲು ರಾತ್ರಿ ವೀಕ್ಷಿಸುವ ಸಾಮರ್ಥ್ಯವಿರುವ ರಾಡಾರ್‌ಸ್ಯಾಟ್ ಬಳಸಿ ಈ ಫೋಟೋಗಳನ್ನು ತೆಗೆಯಲಾಗಿದೆ. ಹೈದರಾಬಾದ್‌ನಲ್ಲಿರುವ ರಾಷ್ಟ್ರೀಯ ದೂರಸಂವೇದಿ ಕೇಂದ್ರವು ಮಹಾ ಕುಂಭಮೇಳದ ಚಿತ್ರಗಳ ಸರಣಿಯನ್ನು ಉಪಗ್ರಹದಿಂದ ರಿಸೀವ್‌ ಮಾಡಿಕೊಂಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ NRSC ನಿರ್ದೇಶಕ ಡಾ. ಪ್ರಕಾಶ್ ಚೌಹಾಣ್, ಪ್ರಯಾಗ್‌ರಾಜ್ ಮೇಲೆ ಆವರಿಸಿರುವ ಕ್ಲೌಡ್ ಬ್ಯಾಂಡ್ ಮೂಲಕ ಪ್ರದೇಶವನ್ನು ಚಿತ್ರಿಸಲು

ಬಾಹ್ಯಾಕಾಶದಿಂದ ಮಹಾ ಕುಂಭಮೇಳದ ಫೊಟೋ ಬಿಡುಗಡೆ ಮಾಡಿದ ಇಸ್ರೋ Read More »

ಬ್ರೇಕಿಂಗ್ ನ್ಯೂಸ್

ಪ್ರಯಾಗರಾಜ್ ಮಹಾಕುಂಭದಲ್ಲಿ ಪುಣ್ಯ ಸ್ನಾನ ನೆರವೇರಿಸಿದ ಸುಧಾ ಮೂರ್ತಿ

(ನ್ಯೂಸ್ ಕಡಬ) newskadaba.com ಜ.22 : ಪ್ರಯಾಗರಾಜ್‌ನ ಮಹಾಕುಂಭ ಮೇಳದಲ್ಲಿ ಪ್ರಸಿದ್ಧ ಲೇಖಕಿ ಮತ್ತು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುದಾ ಮೂರ್ತಿ ಅವರು ಪವಿತ್ರ ಸ್ನಾನವನ್ನು ನೆರವೇರಿಸಿದರು. ಅವರು ಪವಿತ್ರ ಕುಂಭಮೇಳದ ಪಾವನ ವಾತಾವರಣದಲ್ಲಿ ಭಾಗಿಯಾಗಿ ಸಂತಸ ವ್ಯಕ್ತಪಡಿಸಿದರು. ಪ್ರಯಾಗರಾಜ್‌ನಲ್ಲಿ ಗಂಗಾ, ಯಮುನಾ ಮತ್ತು ಪಾವಿತ್ರ್ಯಮಯ ಸರಸ್ವತಿ ನದಿಗಳ ಸಂಗಮದಲ್ಲಿ ಆಯೋಜಿಸಲಾಗಿರುವ ಮಹಾಕುಂಭ ಮೇಳವು ಹಿಂದೂ ಧಾರ್ಮಿಕ ಪರಂಪರೆಯಲ್ಲಿ ವಿಶೇಷ ಸ್ಥಾನವನ್ನು ಹೊಂದಿದೆ. ಈ ವೇಳೆ ಸುದಾ ಮೂರ್ತಿ ಅವರು ತನ್ನ ಕುಟುಂಬ ಸದಸ್ಯರೊಂದಿಗೆ ಪಾಲ್ಗೊಂಡು, ಪೂರ್ವಜರಿಗೆ ತರ್ಪಣ

ಪ್ರಯಾಗರಾಜ್ ಮಹಾಕುಂಭದಲ್ಲಿ ಪುಣ್ಯ ಸ್ನಾನ ನೆರವೇರಿಸಿದ ಸುಧಾ ಮೂರ್ತಿ Read More »

ಬ್ರೇಕಿಂಗ್ ನ್ಯೂಸ್

ಚಿನ್ನದ ದರದಲ್ಲಿ ಏರಿಕೆ

(ನ್ಯೂಸ್ ಕಡಬ) newskadaba.com ಜ.22 : ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ ತಲಾ 75 ರೂ. ಮತ್ತು 86 ರೂ. ಏರಿಕೆ ಕಂಡಿದೆ. 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,525 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 8,209 ರೂ. ಇದೆ.

ಚಿನ್ನದ ದರದಲ್ಲಿ ಏರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಯಲ್ಲಾಪುರದಲ್ಲಿ ಭೀಕರ ರಸ್ತೆ ಅಪಘಾತ: ಲಾರಿ ಪಲ್ಟಿಯಾಗಿ 10 ಮಂದಿ ದುರ್ಮರಣ, 13 ಜನರಿಗೆ ಗಾಯ

(ನ್ಯೂಸ್ ಕಡಬ) newskadaba.com ಜ.22 :  ಯಲ್ಲಾಪುರ: ಲಾರಿ ಪಲ್ಟಿಯಾಗಿ 9 ಮಂದಿ ಸಾವನ್ನಪ್ಪಿರುವ ದುರ್ಘಟನೆಯೊಂದು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಬಳಿ ಬುಧವಾರ ನಡೆದಿದೆ. ಕುಮಟಾದಲ್ಲಿ ಸಂತೆ ಹಿನ್ನೆಲೆಯಲ್ಲಿ ವ್ಯಾಪಾರಸ್ಥರು ಹಣ್ಣು ಹಾಗೂ ತರಕಾರಿ ಹೊತ್ತು ಲಾರಿಯಲ್ಲಿ ಬರುತ್ತಿದ್ದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಲಾರಿ ಪಲ್ಟಿಯಾಗಿ ಅಪಘಾತ ಸಂಭವಿಸಿದೆ. ಸವಣೂರು ತಾಲೂಕಿನ 28 ವ್ಯಾಪಾರಿಗಳು ಲಾರಿಯಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಗುಳ್ಳಾಪುರದ ಬಳಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ

ಯಲ್ಲಾಪುರದಲ್ಲಿ ಭೀಕರ ರಸ್ತೆ ಅಪಘಾತ: ಲಾರಿ ಪಲ್ಟಿಯಾಗಿ 10 ಮಂದಿ ದುರ್ಮರಣ, 13 ಜನರಿಗೆ ಗಾಯ Read More »

ಬ್ರೇಕಿಂಗ್ ನ್ಯೂಸ್

ಸುಳ್ಯ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: 21ನೇ ಆರೋಪಿಯನ್ನು ಬಂಧಿಸಿದ ಎನ್ ಐಎ

(ನ್ಯೂಸ್ ಕಡಬ) newskadaba.com ಜ.22 ಸುಳ್ಯ : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದು, ಪ್ರಕರಣದಲ್ಲಿ ಬಂಧಿತರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ. ಬಂಧಿತ ವ್ಯಕ್ತಿ ಅತೀಕ್ ಅಹ್ಮದ್ ನನ್ನು ಜನವರಿ 20 ರಂದು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಈಗ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸದಸ್ಯ ಎಂದು ಗುರುತಿಸಲಾದ ಅಹ್ಮದ್, ಜುಲೈ 2022 ರಲ್ಲಿ

ಸುಳ್ಯ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: 21ನೇ ಆರೋಪಿಯನ್ನು ಬಂಧಿಸಿದ ಎನ್ ಐಎ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ನಟ ದರ್ಶನ್ ಗನ್ ಲೈಸೆನ್ಸ್ ತಾತ್ಕಾಲಿಕ ರದ್ದು

(ನ್ಯೂಸ್ ಕಡಬ) newskadaba.com ಜ.21 ಭುವನೇಶ್ವರ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಬಳಿಯಿರುವ ಗನ್ ಲೈಸೆನ್ಸ್ ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ. ಮೂರು ವರ್ಷಕ್ಕಿಂತ ಮೇಲ್ಪಟ್ಟ ಶಿಕ್ಷೆ ವಿಧಿಸಬಹುದಾದ ಕೇಸ್‌ನಲ್ಲಿ ಆರೋಪಿಯಾಗಿರುವ ವ್ಯಕ್ತಿಯ ಬಳಿ ಲೈಸೆನ್ಸ್ ಇರುವ ಗನ್ ಇದ್ದರೆ ಅದನ್ನು ತಕ್ಷಣ ವಶಕ್ಕೆ ಪಡೆಯಲಾಗುತ್ತದೆ. ಅಲ್ಲದೇ ಆ ವ್ಯಕ್ತಿಯ ಗನ್ ಲೈಸೆನ್ಸ್ ಕೂಡ ರದ್ದು ಮಾಡಬಹುದಾಗಿದೆ. ಇನ್ನು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಲೈಸೆನ್ಸ್ ಗನ್ ಬಳಕೆ ಮಾಡಿರೊದು ಎಲ್ಲಿಯೂ

ನಟ ದರ್ಶನ್ ಗನ್ ಲೈಸೆನ್ಸ್ ತಾತ್ಕಾಲಿಕ ರದ್ದು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಛತ್ತೀಸಗಢದ ಗರಿಯಾಬಂದ್‌ನಲ್ಲಿ ಎನ್‌ಕೌಂಟರ್: ಭದ್ರತಾ ಪಡೆಗಳ ಗುಂಡಿಗೆ 14 ಮಂದಿ ನಕ್ಸಲರ ಹತ್ಯೆ

(ನ್ಯೂಸ್ ಕಡಬ) newskadaba.com ಜ.21 ಭುವನೇಶ್ವರ: ಛತ್ತೀಸಗಢದ ಗರಿಯಾಬಂದ್ ಜಿಲ್ಲೆಯ ಛತ್ತೀಸಗಢ-ಒಡಿಶಾ ಗಡಿಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಹಿರಿಯ ಕೇಡರ್ ಸೇರಿದಂತೆ ಕನಿಷ್ಠ 14 ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್), ಸೋಜಿ ಒಡಿಶಾ ಮತ್ತು ಛತ್ತೀಸ್‌ಗಢ ಪೊಲೀಸರು ಅಂತರರಾಜ್ಯ ಗಡಿಯಲ್ಲಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಮಾವೋವಾದಿಗಳನ್ನು ಹತ್ಯೆ ಮಾಡಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ನಕ್ಸಲ್ ಮುಕ್ತ ಭಾರತದ ಸಂಕಲ್ಪ ಮತ್ತು ಭದ್ರತಾ

ಛತ್ತೀಸಗಢದ ಗರಿಯಾಬಂದ್‌ನಲ್ಲಿ ಎನ್‌ಕೌಂಟರ್: ಭದ್ರತಾ ಪಡೆಗಳ ಗುಂಡಿಗೆ 14 ಮಂದಿ ನಕ್ಸಲರ ಹತ್ಯೆ Read More »

ಬ್ರೇಕಿಂಗ್ ನ್ಯೂಸ್
Scroll to Top