ಬ್ರೇಕಿಂಗ್ ನ್ಯೂಸ್

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ.26. ಮಾಜಿ ಪ್ರಧಾನಮಂತ್ರಿ, ಆರ್ಥಿಕ ತಜ್ಞ ಮನಮೋಹನ್ ಸಿಂಗ್ ಗುರುವಾರ ರಾತ್ರಿ ವಿಧಿವಶರಾಗಿದ್ದಾರೆ. ಆರೋಗ್ಯದಲ್ಲಿ ತೀವ್ರ ಸ್ವರೂಪದ ಅಸ್ವಸ್ಥತೆ ಕಂಡುಬಂದ ಹಿನ್ನೆಲೆಯಲ್ಲಿ ಗುರುವಾರದಂದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ 92 ವರ್ಷ ವಯಸ್ಸಾಗಿತ್ತು.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಂಡಿಯಾ ಸಿಮೆಂಟ್ಸ್‌ನ ಸಿಇಒ ಸ್ಥಾನಕ್ಕೆ ಎನ್. ಶ್ರೀನಿವಾಸನ್ ರಾಜೀನಾಮೆ

(ನ್ಯೂಸ್ ಕಡಬ) newskadaba.com ಡಿ. 26: ಭಾರತೀಯ ಸ್ಪರ್ಧಾತ್ಮಕ ಆಯೋಗ (ಸಿಸಿಐ) 7,000 ಕೋಟಿ ರೂಪಾಯಿಗಳ ಒಪ್ಪಂದಕ್ಕೆ ಅನುಮೋದನೆ ನೀಡಿದ ನಂತರ ಎನ್. ಶ್ರೀನಿವಾಸನ್ ಬುಧವಾರ ಇಂಡಿಯಾ ಸಿಮೆಂಟ್ಸ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಸ್ಥಾನಕ್ಕೆ ರಾಜೀನಾಮೆ ನೀಡಿದರು. ಈ ಒಪ್ಪಂದವು ಬಿಲಿಯನೇರ್ ಕುಮಾರ್ ಮಂಗಳಂ ಬಿರ್ಲಾ ಅವರಿಂದ ಪ್ರಚಾರಗೊಂಡ ಅಲ್ಟ್ರಾಟೆಕ್ ಸಿಮೆಂಟ್ ಕಂಪನಿಯು ಇಂಡಿಯಾ ಸಿಮೆಂಟ್ಸ್ ಲಿಮಿಟೆಡ್ (ಐಸಿಎಲ್) ನಲ್ಲಿ ಹೆಚ್ಚಿನ ಪಾಲನ್ನು ಸ್ವಾಧೀನಪಡಿಸಿಕೊಂಡಿದೆ. ನಿಯಂತ್ರಕ ಫೈಲಿಂಗ್‌ನಲ್ಲಿ, ವಹಿವಾಟು ಪೂರ್ಣಗೊಂಡ ನಂತರ ಶ್ರೀನಿವಾಸನ್ ಉಪಾಧ್ಯಕ್ಷ ಮತ್ತು

ಇಂಡಿಯಾ ಸಿಮೆಂಟ್ಸ್‌ನ ಸಿಇಒ ಸ್ಥಾನಕ್ಕೆ ಎನ್. ಶ್ರೀನಿವಾಸನ್ ರಾಜೀನಾಮೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಮಲಯಾಳಂ ಸಾಹಿತಿ ಎಂ ಟಿ ವಾಸುದೇವನ್ ನಾಯರ್ ನಿಧನ

(ನ್ಯೂಸ್ ಕಡಬ) newskadaba.com ಡಿ. 26 ಕೋಝಿಕ್ಕೋಡ್: ಖ್ಯಾತ ಮಲಯಾಳಂ ಸಾಹಿತಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಎಂ ಟಿ ವಾಸುದೇವನ್ ನಾಯರ್ ರವರು ಬುಧವಾರ ನಿಧನರಾಗಿದ್ದಾರೆ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರು ಕೋಝಿಕ್ಕೋಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು. ಹೃದ್ರೋಗ ಮತ್ತು ಉಸಿರಾಟದ ತೊಂದರೆಯಿಂದ 11 ದಿನಗಳ ಕಾಲ ಆಸ್ಪತ್ರೆಯಲ್ಲಿ  ಚಿಕಿತ್ಸೆ ಪಡೆಯುತ್ತಿದ್ದ ಅವರ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟಿತ್ತು. ಅವರ ಚಿಕಿತ್ಸೆಗಾಗಿ ವಿಶೇಷ ವೈದ್ಯಕೀಯ ತಂಡವನ್ನೂ ರಚಿಸಲಾಗಿತ್ತು. ಆದರೆ ನಿನ್ನೆ ರಾತ್ರಿ ಮೂತ್ರಪಿಂಡ ಮತ್ತು

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಮಲಯಾಳಂ ಸಾಹಿತಿ ಎಂ ಟಿ ವಾಸುದೇವನ್ ನಾಯರ್ ನಿಧನ Read More »

ಬ್ರೇಕಿಂಗ್ ನ್ಯೂಸ್

ವಿಮಾನದ ಚಕ್ರದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಡಿ. 26 ಚಿಕಾಗೋ: ಯುನೈಟೆಡ್ ಏರ್‌ಲೈನ್ಸ್ ಜೆಟ್‌ಲೈನರ್ ವಿಮಾನದ ಚಕ್ರದಲ್ಲಿ ಮೃತದೇಹ ಪತ್ತೆಯಾಗಿದ್ದು, ಮಂಗಳವಾರ ಮಧ್ಯಾಹ್ನ ಚಿಕಾಗೋ ಓ’ಹೇರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಯುನೈಟೆಡ್ ಫ್ಲೈಟ್ 202 ಕಹುಲುಯಿ ವಿಮಾನ ನಿಲ್ದಾಣದಲ್ಲಿ ಇಳಿದಾಗ ವಿಮಾನದ ಲ್ಯಾಂಡಿಂಗ್ ಗೇರ್ ಹೊಂದಿರುವ ಕಂಪಾರ್ಟ್‌ಮೆಂಟ್‌ಗಳಲ್ಲಿ ಶವ ಪತ್ತೆಯಾಗಿದೆ ಎಂದು ಏರ್‌ಲೈನ್‌ನ ವೆಬ್‌ಸೈಟ್ ತಿಳಿಸಿದೆ.   ಮೃತ ವ್ಯಕ್ತಿಯ ಬಗ್ಗೆ ತನಿಖೆ ನಡೆಯುತ್ತಿದೆ. ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆಗಳು ಸಾಮಾನ್ಯವಾಗಿವೆ ಮತ್ತು ಘಟನೆಯಿಂದ ಏನೂ ಪರಿಣಾಮ ಬೀರಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಮಾನದ ಚಕ್ರದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ Read More »

ಬ್ರೇಕಿಂಗ್ ನ್ಯೂಸ್

ನಟ ಅಲ್ಲು ಅರ್ಜುನ್ ವಿರುದ್ಧ ಮತ್ತೊಂದು ಕೇಸ್ ದಾಖಲು

(ನ್ಯೂಸ್ ಕಡಬ) newskadaba.com ಡಿ. 25 ಹೈದರಾಬಾದ್: ನಟ ಅಲ್ಲು ಅರ್ಜುನ್ ಅವರು ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿರುವ ವಿಚಾರ ಬೆಳಕಿಗೆ ಬಂದಿದೆ. ಪುಷ್ಪ 2′ ಚಿತ್ರವು ರಕ್ತಚಂದನ ಕಳ್ಳಸಾಗಣೆ ಮಾಡುವ ಪುಷ್ಪರಾಜ್ ಹಾಗೂ ಪೊಲೀಸ್ ಅಧಿಕಾರಿ ಬನ್ವರ್ ಸಿಂಗ್ ಶೇಖಾವತ್ ನಡುವಿನ ಘರ್ಷಣೆಯ ಕಥೆಯಾಗಿದೆ. ಇವರಿಬ್ಬರು ಸದಾ ಕಿತ್ತಾಡಿಕೊಳ್ಳುತ್ತಾರೆ. ಇದೀಗ ಈ ಚಿತ್ರದಲ್ಲಿ ಪೊಲೀಸರಿಗೆ ಅವಮಾನ ಆಗಿದೆ ಎಂದು ಕಾಂಗ್ರೆಸ್ ನಾಯಕ ಧೀನ್ಮರ್ ಮಲ್ಲಣ್ಣ ಅವರು ಪ್ರಕರಣ ದಾಖಲಿಸಿದ್ದಾರೆ. ಪೊಲೀಸ್

ನಟ ಅಲ್ಲು ಅರ್ಜುನ್ ವಿರುದ್ಧ ಮತ್ತೊಂದು ಕೇಸ್ ದಾಖಲು Read More »

ಬ್ರೇಕಿಂಗ್ ನ್ಯೂಸ್

ಅಮಿತ್ ಶಾ ವಜಾಗೊಳಿಸುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಡಿ. 25  ಕಮಲನಗರ: ಕಮಲನಗರ ತಾಲ್ಲೂಕಿನ ದಾಬಕಾ ಗ್ರಾಮದಲ್ಲಿ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಸಂಸತ್ ಕಲಾಪದಲ್ಲಿ ಅವಹೇಳನಕಾರಿ ಹೇಳಿಕೆ ನೀಡಿರುವ ಅದನ್ನು ಖಂಡಿಸಿ ದಾಬಕಾ ವಲಯ ಮಾದಿಗ ಸಮಾಜದಿಂದ ಬೃಹತ್ ಪ್ರತಿಭಟನೆ ನಡೆಸಿ ಕೂಡಲೇ ಅಮಿತ್ ಶಾ ಅವರನ್ನು ವಜಗೊಳಿಸುವಂತೆ ಗ್ರಾಮದ ಭವಾನಿ ಮಂದಿರದಿAದ ನಾಡ ಕಚೇರಿ ಅವರಿಗೆ ಬೃಹತ್ ಪ್ರತಿಭಟನ ಮೆರವಣಿಗೆ ಮೂಲಕ ದಾಬಕ ನಾಡ ತಸಿಲ್ದಾರ್ ಅವರ

ಅಮಿತ್ ಶಾ ವಜಾಗೊಳಿಸುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನೆ Read More »

ಬ್ರೇಕಿಂಗ್ ನ್ಯೂಸ್

ಲೈಂಗಿಕ ದೌರ್ಜನ್ಯ, ಅತ್ಯಾಚಾರ, ಆಸಿಡ್ ದಾಳಿ ಸಂತ್ರಸ್ತರಿಗೆ ಉಚಿತ ಚಿಕಿತ್ಸೆ ನಿರಾಕರಿಸುವಂತಿಲ್ಲ- ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು

(ನ್ಯೂಸ್ ಕಡಬ) newskadaba.com ಡಿ. 24: ಅತ್ಯಾಚಾರ, ಆಸಿಡ್ ದಾಳಿ ಮತ್ತು ಲೈಂಗಿಕ ದೌರ್ಜನ್ಯದಿಂದ ಬದುಕುಳಿದವರಿಗೆ ಸರ್ಕಾರಿ, ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಂಗಳು ಉಚಿತ ವೈದ್ಯಕೀಯ ಚಿಕಿತ್ಸೆ ನಿರಾಕರಿಸುವಂತಿಲ್ಲ. ಹೀಗೆ ದೌರ್ಜನ್ಯಕ್ಕೊಳಗಾದವರಿಗೆ ಚಿಕಿತ್ಸೆ ನಿರಾಕರಿಸುವುದು ಅಪರಾಧವಾಗಿದ್ದು, ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಮತ್ತು ಆಡಳಿತ ಮಂಡಳಿಗೆ ದಂಡ ವಿಧಿಸಬಹುದು ಎಂದು ದೆಹಲಿ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. 16 ವರ್ಷದ ಬಾಲಕಿಯ ಮೇಲೆ ಆಕೆಯ ತಂದೆಯೇ ಅತ್ಯಾಚಾರ ಎಸಗಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಅರ್ಜಿಯ ವಿಚಾರಣೆ ವೇಳೆ

ಲೈಂಗಿಕ ದೌರ್ಜನ್ಯ, ಅತ್ಯಾಚಾರ, ಆಸಿಡ್ ದಾಳಿ ಸಂತ್ರಸ್ತರಿಗೆ ಉಚಿತ ಚಿಕಿತ್ಸೆ ನಿರಾಕರಿಸುವಂತಿಲ್ಲ- ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಾಮಾಜಿಕ ಮಾಧ್ಯಮದ ಪ್ರಭಾವಿ ಯುವತಿಯರೇ ಸೈಬರ್ ವಂಚಕರ ಟಾರ್ಗೆಟ್!

(ನ್ಯೂಸ್ ಕಡಬ) newskadaba.com ಡಿ. 24: ಬೆಂಗಳೂರು: ದಿನಗಳು ಕಳೆದಂತೆಲ್ಲಾ ಸೈಬರ್ ವಂಚಕರು ಹೊಸ ಹೊಸ ವೇಷ ತೊಟ್ಟು ವಂಚಿಸುವ ದಾರಿಯನ್ನು ಕಂಡುಕೊಳ್ಳುತ್ತಿದ್ದಾರೆ. ಇತ್ತೀಚೆಗಿನ ಟ್ರೆಂಡ್‌ನಲ್ಲಿ ಲಾಭದಾಯಕ ಸಹಯೋಗದ ಅವಕಾಶ ನೀಡುವ ಬ್ರ್ಯಾಂಡ್‌ಗಳು ಅಥವಾ ಏಜೆನ್ಸಿಗಳ ಸೋಗಿನಲ್ಲಿ ಸಾಮಾಜಿಕ ಮಾಧ್ಯಮದ ಪ್ರಭಾವಿಗಳನ್ನು ಅದರಲ್ಲೂ ಮಹಿಳಾ ಪ್ರಭಾವಿಗಳನ್ನು ಗುರಿಯಾಗಿಸಿಕೊಂಡು ವಂಚನೆಗೆ ಮುಂದಾಗಿದ್ದಾರೆ. ವೃತ್ತಿಪರ ಪಾಲುದಾರಿಕೆಯ ಹೆಸರಿನಲ್ಲಿ ಈ ವಂಚಕರು ಮಹಿಳೆಯರ ವೈಯಕ್ತಿಕ ಮಾಹಿತಿ, ಫೊಟೋಗಳು ಮತ್ತು ವಿಡಿಯೋಗಳನ್ನು ಕೇಳುತ್ತಾರೆ. ಕೃತಕ ಬುದ್ಧಿಮತ್ತೆ (AI) ಮತ್ತು ಡೀಪ್‌ಫೇಕ್ ತಂತ್ರಜ್ಞಾನವನ್ನು ಬಳಸಿಕೊಂಡು, ಅವುಗಳನ್ನು

ಸಾಮಾಜಿಕ ಮಾಧ್ಯಮದ ಪ್ರಭಾವಿ ಯುವತಿಯರೇ ಸೈಬರ್ ವಂಚಕರ ಟಾರ್ಗೆಟ್! Read More »

ಬ್ರೇಕಿಂಗ್ ನ್ಯೂಸ್

ನಿಷೇಧಿತ ಖಲಿಸ್ತಾನ್ ಕಮಾಂಡೋ ಫೋರ್ಸ್‌ನ ಮೂವರು ಭಯೋತ್ಪಾದಕರು ಎನ್‌ಕೌಂಟರ್

(ನ್ಯೂಸ್ ಕಡಬ) newskadaba.com ಡಿ. 23 ನವದೆಹಲಿ: ನಿಷೇಧಿತ ಸಂಘಟನೆ ಖಲಿಸ್ತಾನ್ ಕಮಾಂಡೋ ಫೋರ್ಸ್‌ನ ಮೂವರು ಭಯೋತ್ಪಾದಕರನ್ನು ಸೋಮವಾರ ಮುಂಜಾನೆ ಉತ್ತರ ಪ್ರದೇಶದ ಪಿಲಿಭಿತ್ ಜಿಲ್ಲೆಯಲ್ಲಿ ಪೊಲೀಸರು ಎನ್‌ಕೌಂಟರ್ ಮಾಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಎನ್‌ಕೌಂಟರ್‌ನಲ್ಲಿ ಹತರಾದ ಖಲಿಸ್ತಾನಿ ಭಯೋತ್ಪಾದಕರನ್ನು ಗುರ್ವಿಂದರ್ ಸಿಂಗ್ (25), ವೀರೇಂದ್ರ ಸಿಂಗ್ ಅಲಿಯಾಸ್ ರವಿ (23), ಮತ್ತು ಜಸ್ಪ್ರೀತ್ ಸಿಂಗ್ ಅಲಿಯಾಸ್ ಪ್ರತಾಪ್ ಸಿಂಗ್ (18) ಎಂದು ಗುರುತಿಸಲಾಗಿದೆ. ಹತರು ಪಂಜಾಬ್‌ನ ಗುರುದಾಸ್‌ಪುರ ಜಿಲ್ಲೆಯ ಪೊಲೀಸ್ ಪೋಸ್ಟ್ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದರು

ನಿಷೇಧಿತ ಖಲಿಸ್ತಾನ್ ಕಮಾಂಡೋ ಫೋರ್ಸ್‌ನ ಮೂವರು ಭಯೋತ್ಪಾದಕರು ಎನ್‌ಕೌಂಟರ್ Read More »

ಬ್ರೇಕಿಂಗ್ ನ್ಯೂಸ್

ಆಂಧ್ರ ಪ್ರದೇಶ, ನೇಪಾಳ, ಕ್ಯೂಬಾ ಸೇರಿದಂತೆ ಜಗತ್ತಿನ ಹಲವೆಡೆ ಭೂಕಂಪನ, ವನವಾಟುನಲ್ಲಿ 12 ಮಂದಿ ಸಾವು!

(ನ್ಯೂಸ್ ಕಡಬ) newskadaba.com ಡಿ. 23 ನವದೆಹಲಿ: ಜಗತ್ತಿನಾದ್ಯಂತ ಹಲವು ದೇಶಗಳಲ್ಲಿ ಭಾರಿ ಭೂಕಂಪನ ಸಂಭವಿಸಿದ್ದು, ಭಾರತದ ಆಂಧ್ರ ಪ್ರದೇಶ, ನೆರೆಯ ನೇಪಾಳ, ಕ್ಯೂಬಾ ಮತ್ತು ದಕ್ಷಿಣ ಪೆಸಿಫಿಕ್ ಸಾಗರದಲ್ಲಿರುವ ದ್ವೀಪರಾಷ್ಟ್ರ ವನವಾಟುವಿನಲ್ಲಿ ಭಾರಿ ಕಂಪನ ದಾಖಲಾಗಿವೆ. ಆಂಧ್ರ ಪ್ರದೇಶದ ಪ್ರಕಾಶಂ ಜಿಲ್ಲೆಯ ಕಳೆದ ಮೂರು ದಿನಗಳಲ್ಲಿ ಮೂರನೇ ಬಾರಿಗೆ ಕಂಪನದ ಅನುಭವವಾಗಿದೆ. ಜಿಲ್ಲೆಯ ಮುಂಡ್ಲಮೂರಿನಲ್ಲಿ ಇಂದು ಕೂಡ ಭೂಕಂಪನದ ಅನುಭವವಾಗಿದ್ದು, ಕಳೆದ ಮೂರು ದಿನಗಳಿಂದ ಮುಂಡ್ಲಮೂರಿನಲ್ಲಿ ಸತತ ಭೂಕಂಪನ ಉಂಟಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಶನಿವಾರ ಮತ್ತು

ಆಂಧ್ರ ಪ್ರದೇಶ, ನೇಪಾಳ, ಕ್ಯೂಬಾ ಸೇರಿದಂತೆ ಜಗತ್ತಿನ ಹಲವೆಡೆ ಭೂಕಂಪನ, ವನವಾಟುನಲ್ಲಿ 12 ಮಂದಿ ಸಾವು! Read More »

ಬ್ರೇಕಿಂಗ್ ನ್ಯೂಸ್
Scroll to Top