ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಇನ್ನೂ 4 ದಿನ ಮುಂದುವರೆಯಲಿದೆ ಮಳೆ

(ನ್ಯೂಸ್ ಕಡಬ)newskadaba.com,ಬೆಂಗಳೂರು ಅ. 07. ರಾಜ್ಯದ ವಿವಿಧೆಡೆ ಭಾನುವಾರ ಭರ್ಜರಿ ಮಳೆಯಾಗಿದ್ದು, ಅ. 11ರವರೆಗೆ ಹಲವು ಜಿಲ್ಲೆಗಳಲ್ಲಿ ವರುಣನ ಅಬ್ಬರ ಮುಂದುವರಿಯಲಿದೆ. ಕಳೆದ 24 ಗಂಟೆಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಅರಿಯಡ್ಕದಲ್ಲಿ ರಾಜ್ಯದಲ್ಲೇ ಅತ್ಯಧಿಕ 120 ಮಿಮೀ ಮಳೆಯಾಗಿದೆ. ಇನ್ನು ಅ.8ರಂದು ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ, ಚಾಮರಾಜನಗರ, ಮೈಸೂರು, ಮಂಡ್ಯ, ಚಿತ್ರದುರ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ […]

ರಾಜ್ಯದಲ್ಲಿ ಇನ್ನೂ 4 ದಿನ ಮುಂದುವರೆಯಲಿದೆ ಮಳೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮನೆ ಬೀಗ ಮುರಿದು ಚಿನ್ನಾಭರಣ ದೋಚುತ್ತಿದ್ದವನ ಬಂಧನ

(ನ್ಯೂಸ್ ಕಡಬ)newskadaba.com,ಬೆಂಗಳೂರು ಅ. 07. ಮನೆಗಳ ಬೀಗ ಮುರಿದು ಹಣ- ಆಭರಣ ಕಳ್ಳತನ ಮಾಡಿದ್ದ ಆರೋಪಿಯೊಬ್ಬನನ್ನು ಸಿಟಿ ಮಾರ್ಕೆಟ್‌ ಠಾಣೆ ಪೊಲೀಸರು ಬಂಧಿಸಿ 30 ಲಕ್ಷ ರೂ. ಬೆಲೆಬಾಳುವ 475 ಗ್ರಾಂ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಮಂಜುನಾಥ ಅಲಿಯಾಸ್‌‍ ಪಾರಿವಾಳ ಮಂಜ(38) ಬಂಧಿತ ಆರೋಪಿ. ಈತ ಈ ಹಿಂದೆ ನಗರದ ನಗರ್ತಪೇಟೆಯ, ತಿಗಳರಪೇಟೆಯಲ್ಲಿ ವಾಸವಾಗಿದ್ದನು. ಈಗ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಮುಕುಂಡಪಲ್ಲಿ ಗ್ರಾಮದಲ್ಲಿ ನೆಲೆಸಿದ್ದಾನೆ. ಚಿಕ್ಕಪೇಟೆಯ, ಮಾಣಿಕ್‌ ಮೇವಾ ಅಂಗಡಿ ಸಮೀಪದ

ಮನೆ ಬೀಗ ಮುರಿದು ಚಿನ್ನಾಭರಣ ದೋಚುತ್ತಿದ್ದವನ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪೋಕ್ಸೋ ಪ್ರಕರಣ: ಮುರುಘಾಶ್ರೀಗೆ ಜಾಮೀನು ಮಂಜೂರು ಮಾಡಿದ ಕೋರ್ಟ್

(ನ್ಯೂಸ್ ಕಡಬ)newskadaba.com,ಚಿತ್ರದುರ್ಗ ಅ. 07. ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮುರುಘಾಶ್ರೀ ಅವರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಾಕ್ಷ್ಯಗಳ ವಿಚಾರಣೆ ಬಹುತೇಕ ಪೂರ್ಣಗೊಂಡ ಹಿನ್ನೆಲೆಯಲ್ಲಿ, ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಮುರುಘಾಶ್ರೀಗೆ ಕೋರ್ಟ್ ಜಾಮೀನು ನೀಡಿದೆ. ಈ ಹಿಂದೆ ಮುರುಘಾಶ್ರೀಗೆ ಹೈಕೋರ್ಟ್ ಜಾಮೀನು ನೀಡಿತ್ತು. ಹೈಕೋರ್ಟ್ ಮುರುಘಾಶ್ರೀಗೆ ಮಂಜೂರು ಮಾಡಿರುವ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನೆ ಮಾಡಲಾಗಿತ್ತು. ಆರೋಪಿ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ

ಪೋಕ್ಸೋ ಪ್ರಕರಣ: ಮುರುಘಾಶ್ರೀಗೆ ಜಾಮೀನು ಮಂಜೂರು ಮಾಡಿದ ಕೋರ್ಟ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನದ ದರದಲ್ಲಿ ತುಸು ಇಳಿಕೆ

(ನ್ಯೂಸ್ ಕಡಬ)newskadaba.com,ಬೆಂಗಳೂರು ಅ. 07. ಕೆಲವು ದಿನಗಳಿಂದ ಸತತವಾಗಿ ಏರಿಕೆಯ ಹಾದಿಯಲ್ಲಿದ್ದ ಚಿನ್ನದ ದರದಲ್ಲಿಇಂದು ತುಸು ಇಳಿಕೆ ಕಂಡುಬಂದಿದೆ. ಶನಿವಾರ ಮತ್ತು ಭಾನುವಾರ ಯಥಾಸ್ಥಿತಿ ಕಾಯ್ದುಕೊಂಡಿದ್ದ ಚಿನ್ನದ ಬೆಲೆಯಲ್ಲಿ ಇಂದು ಸ್ವಲ್ಪವೇ ಸ್ವಲ್ಪ ಇಳಿಕೆಯಾಗಿದೆ. ಸೋಮವಾರ ರಾಜ್ಯ ರಾಜಧಾನಿ ರಾಜ್ಯ ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ ತಲಾ 1 ರೂ. ಕಡಿಮೆಯಾಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,119 ರೂ. ಮತ್ತು

ಚಿನ್ನದ ದರದಲ್ಲಿ ತುಸು ಇಳಿಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ನಂದಿನಿ ಉತ್ಪನ್ನದಲ್ಲಿ ಶೇ.10ರಷ್ಟು ರಿಯಾಯಿತಿ

(ನ್ಯೂಸ್ ಕಡಬ)newskadaba.com,ಮೈಸೊರು ಅ. 07. ಈ ಬಾರಿ ನಾಡಹಬ್ಬ ದಸರೆಗೆ ಮೈಮುಲ್ ನಿಂದ ಶೇ.10 ರಷ್ಟು ರಿಯಾಯಿತಿ ದರದಲ್ಲಿ ಉತ್ಪನ್ನಗಳ ಮಾರಾಟ ಮಾಡುವುದಾಗಿ ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ಅಧ್ಯಕ್ಷ ಆರ್. ಚೆಲುವರಾಜು ಹೇಳಿದರು. ನಗರದ ದಸರ ವಸ್ತು ಪ್ರದರ್ಶನ ಆವರಣದಲ್ಲಿ ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತದ ಮಳಿಗೆ ಉದ್ಘಾಟಿಸಿ ಅವರು ಮಾತನಾಡಿದರು. ಒಕ್ಕೂಟ ಜನರಿಗೆ ಹೊಸ ಆಫರ್ ನೀಡುವ ಉದ್ದೇಶದಿಂದ ದಸರೆಯಲ್ಲಿ ಶೇ.10 ರಷ್ಟು

ನಂದಿನಿ ಉತ್ಪನ್ನದಲ್ಲಿ ಶೇ.10ರಷ್ಟು ರಿಯಾಯಿತಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಾಪತ್ತೆಯಾಗಿದ್ದ ಮುಮ್ತಾಝ್ ಅಲಿ ಮೃತದೇಹ ಫಲ್ಗುಣಿ ನದಿಯಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com,ಮಂಗಳೂರು ಅ. 07. ಕೂಳೂರು ಸೇತುವೆ ಬಳಿ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಸಾಮಾಜಿಕ ಮುಂದಾಳು, ಉದ್ಯಮಿ ಮುಮ್ತಾಝ್ ಅಲಿ ಅವರ ಮೃತದೇಹ ಕೂಳೂರಿನ ಫಲ್ಗುಣಿ ನದಿಯಲ್ಲಿ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ. ಮೃತದೇಹ ಪತ್ತೆಯಾದ ಕೂಡಲೇ ಅದನ್ನು ನಗರದ ಎಜೆ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿದೆ. ಮಮ್ತಾಜ್‌ ಅವರು ರವಿವಾರ ಮುಂಜಾನೆ ಹೊಚ್ಚ ಹೊಸ ಬಿಎಂಡಬ್ಲ್ಯು ಕಾರು ಕೂಳೂರು ಸೇತುವೆಯ ಬಳಿ ಅಪಘಾತಕ್ಕೊಳಗಾದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮೊಬೈಲ್‌, ಕಾರಿನ ಕೀ ಅಲ್ಲಿಯೇ ಇದ್ದ ಕಾರಣ ಆತ್ಮಹತ್ಯೆ ಮಾಡಿರುವ ಶಂಕೆಯಲ್ಲಿ

ನಾಪತ್ತೆಯಾಗಿದ್ದ ಮುಮ್ತಾಝ್ ಅಲಿ ಮೃತದೇಹ ಫಲ್ಗುಣಿ ನದಿಯಲ್ಲಿ ಪತ್ತೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಪೇಜಾವರ ಶ್ರೀ: ಹಿಂದೂ ದೇವಾಲಯಗಳನ್ನು ಹಿಂದೂ ಸಮಾಜಕ್ಕೆ ಬಿಟ್ಟುಕೊಡಿ

(ನ್ಯೂಸ್ ಕಡಬ)newskadaba.com,ಮಂಗಳೂರು ಅ. 07. ಹಿಂದೂ ದೇವಾಲಯಗಳಿಗೆ ಅದರದ್ದೇ ಆದ ನಿಯಮಗಳಿವೆ ಆದ್ದರಿಂದ ಹಿಂದೂ ದೇವಾಲಯಗಳನ್ನು ಹಿಂದೂ ಸಮಾಜವೇ ನಿರ್ವಹಿಸಬೇಕಾಗಿದ್ದು ಎಲ್ಲಾ ಹಿಂದೂ ದೇವಾಲಯಗಳನ್ನು ಹಿಂದೂ ಸಮಾಜಕ್ಕೆ ಬಿಟ್ಟು ಕೊಡಬೇಕೆಂದು ಉಡುಪಿ ಪೇಜಾವರ ಮಠಾಧೀಶ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಸರ್ಕಾರವನ್ನು ಆಗ್ರಹಿಸಿದ್ದಾರೆ. ಮಂಗಳೂರು ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು ಇತರ ಧರ್ಮಿಯರಲ್ಲಿ ಅವರ ಧಾರ್ಮಿಕ ಸಂಸ್ಥೆಗಳನ್ನು ನಡೆಸುವ ಜವಾಬ್ದಾರಿಯನ್ನು ಅವರ ಸಮುದಾಯಕ್ಕೆ ನೀಡಲಾಗಿದೆ. ನಮ್ಮ ದೇಶದಲ್ಲಿ ಹಿಂದೂ ದೇವಾಲಯಗಳು ಮಾತ್ರ ಸರ್ಕಾರದ ಕಪಿಮುಷ್ಠಿಯಲ್ಲಿವೆ. ಹಿಂದೂಗಳಿಗೆ ಅವರದ್ದೇ

ಪೇಜಾವರ ಶ್ರೀ: ಹಿಂದೂ ದೇವಾಲಯಗಳನ್ನು ಹಿಂದೂ ಸಮಾಜಕ್ಕೆ ಬಿಟ್ಟುಕೊಡಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಬರಿಮಲೆ: ಆನ್ಲೈನ್ ಬುಕ್ಕಿಂಗ್ ಕಡ್ಡಾಯ, ದಿನಕ್ಕೆ 80 ಮಂದಿಗೆ ಮಾತ್ರವೇ ದರ್ಶನಕ್ಕೆ ಅವಕಾಶ

(ನ್ಯೂಸ್ ಕಡಬ)newskadaba.com,ಮಂಗಳೂರು ಅ. 07. ಶಬರಿಮಲೆ ಯಾತ್ರೆಯ ಋತು ಪ್ರಾರಂಭವಾಗಲಿದ್ದು, ಈ ಹಿನ್ನಲೆ ಸಿಎಂ ನೇತೃತ್ವದಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಸಲಾಗಿದ್ದು, ಈ ಬಾರಿ ಶಬರಿಮಲೆಗೆ ಆನ್‌ಲೈನ್ ಬುಕ್ಕಿಂಗ್‌ಗೆ ಮಾತ್ರ ಅವಕಾಶ ನೀಡಲು ನಿರ್ಧರಿಸಲಾಗಿದೆ. ಒಂದು ದಿನದಲ್ಲಿ ಗರಿಷ್ಠ 80,000 ಮಂದಿಗೆ ಮಾತ್ರ ಅಯ್ಯಪ್ಪನ ದರ್ಶನಕ್ಕೆ ಅವಕಾಶ ನೀಡಲು ನಿರ್ಧರಿಸಲಾಗಿದೆ. ಯಾತ್ರಿಕರು ಕಡಿಮೆ ದಟ್ಟಣೆಯ ಮಾರ್ಗವನ್ನು ಆಯ್ಕೆ ಮಾಡಬಹುದು. ಕಾನನ ಮಾರ್ಗದಲ್ಲಿ ಬರುವ ಭಕ್ತರಿಗೆ ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು. ಜನದಟ್ಟಣೆ ಇರುವ ಸಮಯದಲ್ಲಿ ವಾಹನಗಳನ್ನು ನಿಯಂತ್ರಿಸಬೇಕಾದರೆ ಕೇಂದ್ರಗಳನ್ನು

ಶಬರಿಮಲೆ: ಆನ್ಲೈನ್ ಬುಕ್ಕಿಂಗ್ ಕಡ್ಡಾಯ, ದಿನಕ್ಕೆ 80 ಮಂದಿಗೆ ಮಾತ್ರವೇ ದರ್ಶನಕ್ಕೆ ಅವಕಾಶ Read More »

ಬ್ರೇಕಿಂಗ್ ನ್ಯೂಸ್

ಉಡುಪಿಯಲ್ಲಿ ಮೇಘಸ್ಪೋಟ:10ಕ್ಕೂ ಹೆಚ್ಚು ಮನೆ ಮುಳುಗಡೆ

(ನ್ಯೂಸ್ ಕಡಬ)newskadaba.com, ಉಡುಪಿ ಅ. 07. ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ಕಬ್ಬಿನಾಲೆ ಪ್ರದೇಶದಲ್ಲಿ ಭಾನುವಾರ ಮಧ್ಯಾಹ್ನ ಅತ್ಯಲ್ಪ ಅವಧಿಯಲ್ಲಿ ಧಾರಾಕಾರ ಮಳೆಯಾಗಿದ್ದು, ಮೇಘ ಸ್ಪೋಟವಾಗಿರಬಹುದು ಎಂದು ಹೇಳಲಾಗುತ್ತಿದೆ. 2.25 ಗಂಟೆಯಲ್ಲಿ 18 ಸೆಂ.ಮೀ. ಮಳೆಯಾದ ಪರಿಣಾಮ, ಬಮ್ಮಗುಂಡಿ ನದಿಯಲ್ಲಿ ಹಠಾತ್ ಪ್ರವಾಹ ಕಾಣಿಸಿಕೊಂಡಿದೆ. ಇದರಿಂದ ಹೆಬ್ರಿ ತಾಲೂಕಿನ ಮು ದ್ರಾಡಿ ಗ್ರಾ.ಪಂ. ವ್ಯಾಪ್ತಿಯ ಬಲ್ಲಾಡಿ ಯಲ್ಲಿ 10ಕ್ಕೂ ಹೆಚ್ಚು ಮನೆಗಳು ಸಂ ಪೂರ್ಣ ಮುಳುಗಡೆಯಾಗಿವೆ. ಜಮನಿಗೆ ನೀರು ನುಗ್ಗಿದೆ 2 ಕಾರು, ಎರಡು ಬೈಕ್‌ಗಳು ಸೇರಿ

ಉಡುಪಿಯಲ್ಲಿ ಮೇಘಸ್ಪೋಟ:10ಕ್ಕೂ ಹೆಚ್ಚು ಮನೆ ಮುಳುಗಡೆ Read More »

ಬ್ರೇಕಿಂಗ್ ನ್ಯೂಸ್

18ನೇ ಕಂತಿನ ಪಿಎಂ ಕಿಸಾನ್ ಸಮ್ಮನ್ ಯೋಜನೆಯ 20 ಕೋಟಿ ರೂ ಬಿಡುಗಡೆ: ಮೋದಿ

(ನ್ಯೂಸ್ ಕಡಬ)newskadaba.com, ನವದೆಹಲಿಅ. 05. ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿಯಡಿ 18ನೇ ಕಂತಿನ ₹20 ಸಾವಿರ ಕೋಟಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದಲ್ಲಿ ಬಿಡುಗಡೆ ಮಾಡಿದರು. ಮಹಾರಾಷ್ಟ್ರದ ವಾಶಿಮ್‌ನಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ನೇರ ನಗದು ವರ್ಗಾವಣೆಗೆ (ಡಿಬಿಟಿ) ಪ್ರಧಾನಿ ಮೋದಿ ಚಾಲನೆ ನೀಡಿದರು. ದೇಶದ 9.4 ಕೋಟಿಗೂ ಹೆಚ್ಚು ರೈತರಿಗೆ ಈ ಯೋಜನೆಯಡಿ ಸೌಲಭ್ಯ ಸಿಗಲಿದೆ.9.4 ಕೋಟಿ ಫಲಾನುಭವಿ ರೈತರ ಖಾತೆಗಳಿಗೆ ತಲಾ 2,000 ರೂ ಸಿಗಲಿದೆ. ಕೇಂದ್ರದಿಂದ

18ನೇ ಕಂತಿನ ಪಿಎಂ ಕಿಸಾನ್ ಸಮ್ಮನ್ ಯೋಜನೆಯ 20 ಕೋಟಿ ರೂ ಬಿಡುಗಡೆ: ಮೋದಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top