ಬ್ರೇಕಿಂಗ್ ನ್ಯೂಸ್

ಅ.19 ರವರೆಗೆ ಶಾಸಕ ಮುನಿರತ್ನಗೆ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ)newskadaba.comಬೆಂಗಳೂರು, ಅ. 05. : ಬಿಜೆಪಿ ಶಾಸಕ ಮುನಿರತ್ನಗೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 19ರ ವರೆಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಮುನಿರತ್ನ ಅವರ ಎಸ್‌ಐಟಿ ಕಸ್ಟಡಿ ಇಂದು ಅಂತ್ಯವಾಗಿದೆ. ಈ ಹಿನ್ನಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಮುನಿರತ್ನ ಅವರಿಗೆ ವೈದ್ಯಕೀಯ ಪರೀಕ್ಷೆ ಮಾಡಿಸಿ ಬಳಿಕ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಹಾಜರು ಪಡಿಸಿದ್ದಾರೆ. ಈ ವೇಳೆ ಮತ್ತೆ ಮುನಿರತ್ನರನ್ನು ಕಸ್ಟಡಿಗೆ ನೀಡುವಂತೆ ಎಸ್‌ಐಟಿ ಅಧಿಕಾರಿಗಳು ಕೋರ್ಟ್​ಗೆ ಮನವಿ ಮಾಡಿದ್ದಾರೆ. ಅದರಂತೆ ಕೋರ್ಟ್ ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶ […]

ಅ.19 ರವರೆಗೆ ಶಾಸಕ ಮುನಿರತ್ನಗೆ ನ್ಯಾಯಾಂಗ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಸಿನಿಮೀಯ ಶೈಲಿಯಲ್ಲಿ ಬೈಕಿಗೆ ಢಿಕ್ಕಿ ಹೊಡೆದ ಕಾರು

(ನ್ಯೂಸ್ ಕಡಬ) newskadaba.com ಕಡಬ, ಅ.05. ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಬೈಕ್ ಸವಾರ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟ ಘಟನೆ ಕಡಬದಲ್ಲಿ ನಡೆದಿದೆ. ಮೃತರನ್ನು‌ ಕಡಬ ಹಳೇಸ್ಟೇಷನ್ ನಿವಾಸಿ ಹಸೈನಾರ್ ಎಂದು ಗುರುತಿಸಲಾಗಿದೆ. ಮೃತರು ತನ್ನ ಮನೆಯಿಂದ ಕಡಬ ಕಡೆಗೆ ಬರುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾರು ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಅಪಘಾತದ ದೃಶ್ಯ ಸ್ಥಳೀಯ ಇಂಡಸ್ಟ್ರೀಸ್ ಒಂದರ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ

ಕಡಬ: ಸಿನಿಮೀಯ ಶೈಲಿಯಲ್ಲಿ ಬೈಕಿಗೆ ಢಿಕ್ಕಿ ಹೊಡೆದ ಕಾರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಟೊಮೆಟೊ ದರ ದುಬಾರಿ

(ನ್ಯೂಸ್ ಕಡಬ)newskadaba.com, ಬೆಂಗಳೂರು(ಅ.05):  ಈರುಳ್ಳಿ, ಬೆಳ್ಳುಳ್ಳಿ ದರ ಏರಿಕೆ ಬೆನ್ನಲ್ಲೇ ಇದೀಗ ಟೊಮೆಟೊ ದರ ಏರಿಕೆಯಾಗಿದ್ದು, ಜನಸಾಮಾನ್ಯರಿಗೆ ಬರೆ ಎಳೆದಂತಾಗಿದೆ. ಕಳೆದ ಒಂದು ವಾರದ ಹಿಂದೆ ಟೊಮೆಟೊ ಕೆಜಿಗೆ 40 ರೂ. ಇದ್ದ ದರ ಇದೀಗ ಎರಡು ಪಟ್ಟು ಏರಿಕೆ ಕಂಡಿದೆ. ಅ.4 ರಿಂದ ಟೊಮೆಟೊವು ಕೆಜಿಗೆ 80 ರೂ.ಯಂತೆ ಮಾರಾಟವಾಗುತ್ತಿದೆ. ಅಕಾಲಿಕ ಮಳೆಯಿಂದ ಟೊಮೆಟೊ ಇಳುವರಿ ಕಡಿಮೆಯಾಗಿದೆ. ಇದೇ ವೇಳೆಯಲ್ಲಿ ನವರಾತ್ರಿ ಹಬ್ಬವೂ ಆರಂಭಗೊಂಡಿದ್ದು, ಟೊಮೆಟೊ ಬೇಡಿಕೆ ಹೆಚ್ಚಾಗಿದೆ. ಟೊಮೆಟೊ ಪೂರೈಕೆ ಕಡಿಮೆ ಇದ್ದು, ಬೇಡಿಕೆ

ಟೊಮೆಟೊ ದರ ದುಬಾರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಲೇಜ್ ಗೆ ಬಾಂಬ್ ಬೆದರಿಕೆ; ಬೆಂಗಳೂರಿಗೆ ಎಚ್ಚರಿಕೆ ಕೊಟ್ಟ ದುಷ್ಕರ್ಮಿಗಳು

(ನ್ಯೂಸ್ ಕಡಬ)newskadaba.com, ಬೆಂಗಳೂರು(ಅ.04): ಬೆಂಗಳೂರಿನಲ್ಲಿರುವ ಖಾಸಗಿ ಕಾಲೇಜುಗಳಿಗೆ ಬಾಂಬ್ ಬೆದರಿಕೆ ಇಮೇಲ್ ಬಂದಿದೆ. ಬೆಂಗಳೂರಿನ ಬುಲ್ ಟೆಂಪಲ್ ರಸ್ತೆಯಲ್ಲಿರುವ ಖಾಸಗಿ ಕಾಲೇಜುಗಳಿಗೆ ಈ ಬಾಂಬ್‌ ಬೆದರಿಗೆ ಸಂದೇಶ ಕಳುಹಿಸಲಾಗಿದೆ ಎಂದು ವರದಿಯಾಗಿದೆ. ಇಮೇಲ್ ನೋಡಿದ ಕೂಡಲೇ ಕಾಲೇಜು ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಹಾಗೂ ಹನುಮಂತನಗರ ಪೊಲೀಸರು ದೌಡಾಯಿಸಿದ್ದು, ಕಾಲೇಜು ಆವರಣದಲ್ಲಿ ಸದ್ಯ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಕಾಲೇಜ್ ಗೆ ಬಾಂಬ್ ಬೆದರಿಕೆ; ಬೆಂಗಳೂರಿಗೆ ಎಚ್ಚರಿಕೆ ಕೊಟ್ಟ ದುಷ್ಕರ್ಮಿಗಳು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಾಮಾಜಿಕ, ಆರ್ಥಿಕ ವರದಿ ಬಿಡುಗಡೆ ಮಾಡಲಿ: ಬಸವರಾಜ್ ರಾಮರೆಡ್ಡಿ ಒತ್ತಾಯ

(ನ್ಯೂಸ್ ಕಡಬ)newskadaba.com, ಕೊಪ್ಪಳ(ಅ.04): ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದೆ ನಮ್ಮದೇ ಸರಕಾರದಲ್ಲಿ ಸಮೀಕ್ಷೆ ಮಾಡಿಸಿದ ಸಾಮಾಜಿಕ, ಆರ್ಥಿಕ ಗಣತಿ ವರದಿಯನ್ನು ಇದೇ ವಾರದಲ್ಲಿ ಸಚಿವ ಸಂಪುಟದಲ್ಲಿ ಒಪ್ಪಿಗೆ ಪಡೆದು ನವೆಂಬರ್ 01ರಂದು ಅನುಷ್ಠಾನ ಮಾಡಲಿ ಎಂದು ಸಿಎಂ ಆರ್ಥಿಕ ಸಲಹೆಗಾರ ಮತ್ತು ಶಾಸಕ ಬಸವರಾಜ್ ರಾಯರೆಡ್ಡಿ ಆಗ್ರಹಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅಭಿವೃದ್ಧಿ ಚರ್ಚೆ ಮಾಡಿರುವೆ, 2013-18ರಲ್ಲಿ ಸಿದ್ದರಾಮಯ್ಯ ಸರ್ಕಾರ ರಾಜ್ಯದ ಎಲ್ಲ ಧರ್ಮ, ಜಾತಿಗಳು ಒಳಗೊಂಡ ಸಮಾಜಿಕ, ಶೈಕ್ಷಣಿಕ, ಆರ್ಥಿಕ ಹಿಂದುಳಿದ ಸಮೀಕ್ಷೆ ಮಾಡಿಸಿತ್ತು.

ಸಾಮಾಜಿಕ, ಆರ್ಥಿಕ ವರದಿ ಬಿಡುಗಡೆ ಮಾಡಲಿ: ಬಸವರಾಜ್ ರಾಮರೆಡ್ಡಿ ಒತ್ತಾಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂದುವರೆದ ಮಳೆ: ದಕ್ಷಿಣ ಒಳನಾಡಿನಲ್ಲಿ ಎಲ್ಲೋ ಅಲರ್ಟ್ ಘೋಷಣೆ

(ನ್ಯೂಸ್ ಕಡಬ)newskadaba.com, (ಅ.04): ರಾಜ್ಯದಲ್ಲಿ ನಿನ್ನೆ ಸಾಧಾರಣ ಮಳೆಯಾಗಿದ್ದು, ಇನ್ನೂ ಎರಡು ದಿನ ಹೆಚ್ಚಿನ ಪ್ರಮಾಣದ ಮಳೆಯಾಗುವ ಮುನ್ಸೂಚನೆಗಳಿವೆ. ಹವಾಮಾನ ಇಲಾಖೆ ರಾಜ್ಯದ ಒಳನಾಡಿನಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುಂದುವರೆಯಲಿದೆ. ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ.ಕೆಲವೆಡೆ ವ್ಯಾಪಕ ಪ್ರಮಾಣದ ಮಳೆಯಾದರೆ, ಕೆಲವೆಡೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಗಳಿವೆ.

ಮಂದುವರೆದ ಮಳೆ: ದಕ್ಷಿಣ ಒಳನಾಡಿನಲ್ಲಿ ಎಲ್ಲೋ ಅಲರ್ಟ್ ಘೋಷಣೆ Read More »

ಬ್ರೇಕಿಂಗ್ ನ್ಯೂಸ್

ಮಂಗಳೂರು-ಬೆಂಗಳೂರು ರೈಲು ವೇಳಾಪಟ್ಟಿ ಬದಲಾವಣೆ

(ನ್ಯೂಸ್ ಕಡಬ)newskadaba.com,ಮಂಗಳೂರು (ಅ.04):   ಕಣ್ಣೂರು ಕೆಎಸ್ಆರ್ (ವಯಾ ಮಂಗಳೂರು) ರೈಲನ್ನು ಐದು ತಿಂಗಳ ಕಾಲ ಕೆಎಸ್ಆರ್. ಯಶವಂತಪುರ ನಿಲ್ದಾಣಕ್ಕೆ ಸಂಚರಿಸುವುದನ್ನು ರದ್ದುಪಡಿಸುವ ನಿರ್ಧಾರವನ್ನು ರೈಲ್ವೇ ಇಲಾಖೆ ಅಂಶಿಕವಾಗಿ ಹಿಂಪಡೆದಿದೆ. ನವೆಂಬರ್ 1ರಿಂದ ಮಾರ್ಚ್ 31ರ ವರೆಗೆ ಯಶವಂತಪುರದಲ್ಲಿ ನಿಲ್ದಾಣ ಅಭಿವೃದ್ಧಿ ಕಾಮಗಾರಿ ಕಾರಣ ಮುಂದಿಟ್ಟು 16511 ಹಾಗೂ 16512 ನಂಬರಿನ ರೈಲುಗಳನ್ನು ಯಶವಂತಪುರ, ಕೆಎಸ್ಆರ್ ಹೋಗದೆಯೇ ಎಸ್ಎಂವಿಟಿಬಿಯಿಂದ ಸಂಚರಿಸುವಂತೆ ರೈಲ್ವೇ ಇಲಾಖೆ ಪ್ರಕಟನೆ ಹೊರಡಿಸಿತ್ತು. ಇದಕ್ಕೆ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇಲಾಖೆ ಮತ್ತೆ ವೇಳಾಪಟ್ಟಿಯಲ್ಲಿ

ಮಂಗಳೂರು-ಬೆಂಗಳೂರು ರೈಲು ವೇಳಾಪಟ್ಟಿ ಬದಲಾವಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತಿರುಪತಿ ಲಡ್ಡು ವಿವಾದ: 5 ಸದಸ್ಯರ ಸ್ವತಂತ್ರ ಎಸ್ಐಟಿ ರಚಿಸುವಂತೆ ಸುಪ್ರೀಂ ಸೂಚನೆ

(ನ್ಯೂಸ್ ಕಡಬ)newskadaba.com,ಉತ್ತರ ಪ್ರದೇಶ (ಅ.04):  ತಿರುಪತಿ ಲಡ್ಡು ವಿವಾದದ ಕುರಿತು ಹೊಸದಾಗಿ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಸಿಬಿಐ, ರಾಜ್ಯ ಪೊಲೀಸ್ ಮತ್ತು ಎಫ್‌ಎಸ್‌ಎಸ್‌ಎಐ ಅಧಿಕಾರಿಗಳನ್ನು ಒಳಗೊಂಡಿರುವ ಹೊಸ 5 ಸದಸ್ಯರ ಸ್ವತಂತ್ರ ಎಸ್‌ಐಟಿಯನ್ನು ರಚಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಈ ಪ್ರಕರಣದ ವಿಚಾರಣೆಯನ್ನು ನ್ಯಾಯಮೂರ್ತಿ ಬಿಆರ್ ಗವಾಯಿ ಮತ್ತು ನ್ಯಾಯಮೂರ್ತಿ ಕೆವಿ ವಿಶ್ವನಾಥನ್ ಅವರ ಪೀಠವು ನಡೆಸುತ್ತಿದೆ. ತಿರುಪತಿ ದೇವಸ್ಥಾನದಲ್ಲಿ ಲಡ್ಡುಗಳನ್ನು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪದ ಕುರಿತು ನ್ಯಾಯಾಲಯದ

ತಿರುಪತಿ ಲಡ್ಡು ವಿವಾದ: 5 ಸದಸ್ಯರ ಸ್ವತಂತ್ರ ಎಸ್ಐಟಿ ರಚಿಸುವಂತೆ ಸುಪ್ರೀಂ ಸೂಚನೆ Read More »

ಬ್ರೇಕಿಂಗ್ ನ್ಯೂಸ್

ದಸರಾ ದೀಪಾಲಂಕಾರಕ್ಕೆ ಡಿಕೆಶಿ ಚಾಲನೆ

(ನ್ಯೂಸ್ ಕಡಬ)newskadaba.com,ಉತ್ತರ ಪ್ರದೇಶ (ಅ.04):  ನಾಡಹಬ್ಬ ದಸರಾದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿರುವ ವಿದ್ಯುತ್ ದೀಪಾಲಂಕಾರಕ್ಕೆ ರಾಜ್ಯ ಉಪಮುಖ್ಯಮಂತ್ರಿ  ಡಿ.ಕೆ. ಶಿವಕುಮಾರ್ ಗುರುವಾರದಂದು ಚಾಲನೆ ನೀಡಿದರು. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿನ ಹಸಿರು ಚಪ್ಪರದ ಆವರಣದಲ್ಲಿ ಗುರುವಾರ ಸಂಜೆ ನಡೆದ ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದಸರಾ ವಿದ್ಯುತ್ ದೀಪಾಲಂಕಾರಕ್ಕೆ ವಿದ್ಯುಕ್ತ ಚಾಲನೆ ನೀಡಿ ಮಾತನಾಡಿದರು. “ಪವರ್ ಮ್ಯಾನ್”ಗಳ ಕರ್ತವ್ಯದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಈ ಬಾರಿ ರೂಪಿಸಲಾಗಿರುವ ವಿದ್ಯುತ್ ರಥ ಕ್ಕೂ ಚಾಲನೆ ನೀಡಲಾಯಿತು.ಪ್ರತಿ

ದಸರಾ ದೀಪಾಲಂಕಾರಕ್ಕೆ ಡಿಕೆಶಿ ಚಾಲನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉತ್ತರಪ್ರದೇಶ: ಭೀಕರ ಅಪಘಾತದಲ್ಲಿ 10 ಜನ ಕಾರ್ಮಿಕರು ಮೃತ್ಯು

(ನ್ಯೂಸ್ ಕಡಬ)newskadaba.com,ಉತ್ತರ ಪ್ರದೇಶ (ಅ.04): ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಟ್ರಕ್‌ ಟ್ರಾಕ್ಟರ್‌ ಟ್ರಾಲಿಗೆ ಡಿಕ್ಕಿ ಹೊಡೆದ ಪರಿಣಾಮ ಹತ್ತು ಜನರು ಸಾವನ್ನಪ್ಪಿ ಇತರ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಭದೋಹಿ ಜಿಲ್ಲೆಯಲ್ಲಿ ನಿರ್ಮಾಣ ಕಾರ್ಯ ಮುಗಿಸಿ ಹಿಂತಿರುಗುತ್ತಿದ್ದ 13 ಮಂದಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್‌ ಟ್ರಾಲಿ ಚಾಲಕನ ನಿಯಂತ್ರಣ ತಪ್ಪಿದ ಟ್ರಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ ಎಂದು ಎಸ್‌‍ಪಿ ತಿಳಿಸಿದ್ದಾರೆ.ತಕ್ಷಣ ಎಸ್ಪಿ ಮತ್ತು ಇತರ ಹಿರಿಯ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಯ

ಉತ್ತರಪ್ರದೇಶ: ಭೀಕರ ಅಪಘಾತದಲ್ಲಿ 10 ಜನ ಕಾರ್ಮಿಕರು ಮೃತ್ಯು Read More »

ಬ್ರೇಕಿಂಗ್ ನ್ಯೂಸ್
Scroll to Top