ಬ್ರೇಕಿಂಗ್ ನ್ಯೂಸ್

ಜಮೀರ್ ವಿರುದ್ಧ ಹೈಕೋರ್ಟ್ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ

(ನ್ಯೂಸ್ ಕಡಬ) newskadaba.com ಸೆ. 28 ಬೆಂಗಳೂರು: ಹೈಕೋರ್ಟ್ ತೀರ್ಪನ್ನು ಪೊಲಿಟಿಕಲ್ ಜಡ್ಜ್‌ಮೆಂಟ್‌ ಎಂದಿದ್ದ ಸಚಿವ ಜಮೀರ್ ಅಹ್ಮದ್ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿ ಜೆ ಅಬ್ರಹಾಂ ಅವರು ಹೈಕೋರ್ಟ್ ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಹೈಕೋರ್ಟ್ ಮತ್ತು ಜನಪ್ರತಿನಿಧಿಗಳ ನ್ಯಾಯಾಲಯ ನೀಡಿರುವ ತೀರ್ಪಿನ್ನು ಪೊಲಿಟಿಕಲ್ ಜಡ್ಜ್ಮೆಂಟ್ ಎಂದು ಜಮೀರ್ ಅಹ್ಮದ್ ಖಾನ್ ಕರೆದಿದ್ದರು. ಹೀಗಾಗಿ ಜಮೀರ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲು ಮಾಡುವಂತೆ ಅಡ್ವೋಕೆಟ್ ಜನರಲ್ ಶಶಿಕಿರಣ್ […]

ಜಮೀರ್ ವಿರುದ್ಧ ಹೈಕೋರ್ಟ್ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಿರ್ಮಲಾ ಸೀತಾರಾಮನ್ ಪ್ರಕರಣಕ್ಕೂ, ಸಿದ್ಧರಾಮಯ್ಯ ಪ್ರಕರಣಕ್ಕೂ ಅಜಾಗಜಾಂತರ ವ್ಯತ್ಯಾಸವಿದೆ:ಆರ್ ಆಶೋಕ್

(ನ್ಯೂಸ್ ಕಡಬ) newskadaba.com ಸೆ. 28 ಮಂಗಳೂರು: ಬೆಂಗಳೂರು : ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗೂ ಇತರರ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿರುವುದಕ್ಕೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಡಾ ಹಗರಣಕ್ಕೂ ಅಜಗಜಾಂತರ ವ್ಯತ್ಯಾಸವಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಹೇಳಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ ಅವರು, “ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿರುವುದಕ್ಕೂ, ಮುಖ್ಯಮಂತ್ರಿ ಸಿದ್ದರಾಮಯ್ಯ

ನಿರ್ಮಲಾ ಸೀತಾರಾಮನ್ ಪ್ರಕರಣಕ್ಕೂ, ಸಿದ್ಧರಾಮಯ್ಯ ಪ್ರಕರಣಕ್ಕೂ ಅಜಾಗಜಾಂತರ ವ್ಯತ್ಯಾಸವಿದೆ:ಆರ್ ಆಶೋಕ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ಗೆ ಬಾಂಬ್ ಬೆದರಿಕೆ

(ನ್ಯೂಸ್ ಕಡಬ) newskadaba.com ಸೆ. 28. ನಗರದ ಪ್ರತಿಷ್ಠಿತ ಹೋಟೆಲ್‌ವೊಂದಕ್ಕೆ ಬಾಂಬ್‌ ಬೆದರಿಕೆ ಯ ಕುರಿತು ಇ-ಮೇಲ್‌ ಸಂದೇಶ ಬಂದಿದ್ದು ಕೆಲಕಾಲ ಆತಂಕ ಸೃಷ್ಟಿಯಾಗಿತ್ತು. ಹೈಗ್ರೌಂಡ್ಸ್ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿರುವ ತಾಜ್‌ ವೆಸ್ಟಂಡ್‌ ಹೋಟೆಲ್‌ ಗೆ ಇಂದು ಬೆಳಗ್ಗೆ ಇ-ಮೇಲ್‌ವೊಂದು ಬಂದಿದ್ದು, ಅದರಲ್ಲಿ ಹೋಟೆಲ್‌ಗೆ ಬಾಂಬ್‌ ಇಡಲಾಗಿದೆ ಅದು ಕೆಲವೇ ನಿಮಿಷಗಳಲ್ಲಿ ಸ್ಪೋಟಗೊಳ್ಳಲಿದೆ ಎಂಬ ಬೆದರಿಕೆ ಹಾಕಲಾಗಿತ್ತು. ಈ ಸಂದೇಶವನ್ನು ಗಮನಿಸಿದ ಹೋಟೆಲ್‌ ಸಿಬ್ಬಂದಿ ಸಂಬಂಧಿಸಿದವರಿಗೆ ತಿಳಿಸಿದ್ದು, ಅವರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ತಕ್ಷಣ ಪೊಲೀಸರು, ಬಾಂಬ್‌

ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ಗೆ ಬಾಂಬ್ ಬೆದರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಅಕ್ರಮ ಮರಳುಗಾರಿಕೆಯಿಂದ ದ್ವೀಪ ಉಳಿಸಲು ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಸೆ. 28 ಮಂಗಳೂರು: ಅಕ್ರಮ ಮರಳುಗಾರಿಕೆಯಿಂದ ಮುಳುಗಡೆಯಾಗುತ್ತಿರುವ ಪಾವೂರು ಉಳಿಯ ಅಡ್ಯಾರ್, ಉಳ್ಳಾಲ ಹೊಯ್ಗೆ, ರಾಣಿಪುರ ದ್ವೀಪಗಳನ್ನು ಉಳಿಸಿ ದ್ವೀಪವಾಸಿಗಳನ್ನು ರಕ್ಷಿಸಬೇಕೆಂದು ಬೃಹತ್ ಪ್ರತಿಭಟನೆ ನಗರದ ಮಿನಿ ವಿಧಾನಸೌಧದ ಮುಂಭಾಗ ನಡೆಯಿತು. ಅಕ್ರಮ ಮರಳುಗಾರಿಕೆ ನಡೆಸುತ್ತಿರುವ ಎಲ್ಲರೂ ಮೂರೂ ಪಕ್ಷಗಳಲ್ಲಿ ಗುರುತಿಸಿಕೊಂಡಿದ್ದಾರೆ. ಮರಳು ಮಾಫಿಯಾಗಳೊಂದಿಗೆ ಕೈಜೋಡಿಸುತ್ತಿರುವ ಜನಪ್ರತಿನಿಧಿಗಳಿಗೆ ನಾಚಿಕೆಯಾಗಬೇಕು. ಈ ಪ್ರತಿಭಟನೆಯ ಬಳಿಕ ಮರಳುಗಾರಿಕೆ ನಿಂತಲ್ಲಿ ಜನಪ್ರತಿನಿಧಿಗಳಿಗೆ ಜೈಕಾರ ಹಾಕುತ್ತೇವೆ. ಇಲ್ಲದಿದ್ದಲ್ಲಿ ಅವರಿಗೂ ಧಿಕ್ಕಾರ ಕೂಗುತ್ತೇವೆ‌. ಅದೇ ರೀತಿ ಕೊಣಾಜೆ, ಉಳ್ಳಾಲ ಸೇರಿದಂತೆ

ಮಂಗಳೂರು: ಅಕ್ರಮ ಮರಳುಗಾರಿಕೆಯಿಂದ ದ್ವೀಪ ಉಳಿಸಲು ಪ್ರತಿಭಟನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪೆಟ್ರೋಲ್ ಡಿಸೇಲ್ ಜಿ.ಎಸ್.ಟಿ ವ್ಯಾಪ್ತಿಗೆ ತರಲು ಪ್ರಯತ್ನ

(ನ್ಯೂಸ್ ಕಡಬ) newskadaba.com ಸೆ. 28 ಪುಣೆ: ಪೆಟ್ರೋಲ್‌‍, ಡೀಸೆಲ್‌ ಅನ್ನು ಸರಕು ಮತ್ತು ಸೇವಾ ತೆರಿಗೆ ವ್ಯಾಪ್ತಿಗೆ ತರುವ ಬಗ್ಗೆ ಒಮತ ಮೂಡಿಸಲು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್‌ ಸಿಂಗ್‌ ಪುರಿ ಕರೆ ನೀಡಿದ್ದಾರೆ.ಪುಣೆ ಇಂಟರ್‌ನ್ಯಾಶನಲ್‌ ಸೆಂಟರ್‌ನ (ಪಿಐಸಿ) 14ನೇ ಸಂಸ್ಥಾಪನಾ ದಿನದ ಉಪನ್ಯಾಸದಲ್ಲಿ ಮುಂಬರುವ ದಶಕದಲ್ಲಿ ಭಾರತದ ಇಂಧನ ಭದ್ರತೆಯನ್ನು ಹೆಚ್ಚಿಸುವ ಕಾರ್ಯತಂತ್ರ ಮತ್ತು ಕ್ರಮಗಳು ಕುರಿತು ಉಪನ್ಯಾಸ ನೀಡಿದ ಅವರು, ಈಗ ಪೆಟ್ರೋಲ್‌ ಮತ್ತು ಡೀಸೆಲ್‌ ಅನ್ನು ಜಿಎಸ್‌‍ಟಿ ವ್ಯಾಪ್ತಿಗೆ

ಪೆಟ್ರೋಲ್ ಡಿಸೇಲ್ ಜಿ.ಎಸ್.ಟಿ ವ್ಯಾಪ್ತಿಗೆ ತರಲು ಪ್ರಯತ್ನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವೈದ್ಯನ ನಿರ್ಲಕ್ಷ್ಯಕ್ಕೆ ಏಳರ ಬಾಲಕ ಬಲಿ – ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಸೆ. 28. ಖಾಸಗಿ ಕ್ಲಿನಿಕ್ ಒಂದರ ವೈದ್ಯ ನೀಡಿದ ಇಂಜೆಕ್ಷನ್​ನಿಂದಾಗಿ ತೀವ್ರ ಜ್ವರದಿಂದ ಬಳಲುತ್ತಿದ್ದ ಏಳು ವರ್ಷದ ಬಾಲಕನೋರ್ವ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಪಟ್ಟಣದಲ್ಲಿ ನಡೆದಿದೆ.   ಅಜ್ಜಂಪುರ ಸಮೀಪದ ಕೆಂಚಾಪುರ ಗ್ರಾಮದ ಅಶೋಕ್ ಎಂಬವರ 7 ವರ್ಷದ ಮಗ ಸೋನೇಶ್ ಕಳೆದ ನಾಲ್ಕು ದಿನಗಳ ಹಿಂದೆ ತೀವ್ರ ಜ್ವರದಿಂದ ಬಳಲುತ್ತಿದ್ದ. ಪೋಷಕರು ಸೋನೇಶ್ ನನ್ನು ಅಜ್ಜಂಪುರ ಪಟ್ಟಣದ ಖಾಸಗಿ ಕ್ಲಿನಿಕ್ ವೈದ್ಯರ ಬಳಿ ಸೆಪ್ಟೆಂಬರ್ 24 ರಂದು ಚಿಕಿತ್ಸೆಗಾಗಿ

ವೈದ್ಯನ ನಿರ್ಲಕ್ಷ್ಯಕ್ಕೆ ಏಳರ ಬಾಲಕ ಬಲಿ – ಪ್ರಕರಣ ದಾಖಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜಮ್ಮು & ಕಾಶ್ಮೀರ: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ

(ನ್ಯೂಸ್ ಕಡಬ) newskadaba.com ಸೆ. 27 ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಇಂದು ನಡೆದ ಭಯೋತ್ಪಾದಕ ವಿರೋಧಿ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಇಬ್ಬರು ಅಪರಿಚಿತ ಉಗ್ರರನ್ನು ಹತ್ಯೆಗೈದಿವೆ. ಈ ವೇಳೆ ಮೂವರು ಸೇನಾ ಸಿಬ್ಬಂದಿ ಮತ್ತು ಓರ್ವ ಪೊಲೀಸ್‌ ಅಧಿಕಾರಿ ಸೇರಿ ನಾಲ್ವರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ”ಕುಲ್ಗಾಮ್ ಜಿಲ್ಲೆಯ ಅಡಿಗಮ್ ದೇವ್ಸರ್ ಪ್ರದೇಶದಲ್ಲಿ ಇಂದು ಬೆಳಗ್ಗೆ ಭದ್ರತಾ ಸಿಬ್ಬಂದಿ ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ಜರುಗಿದೆ. ಈ ವೇಳೆ ಇಬ್ಬರು ಉಗ್ರರನ್ನು

ಜಮ್ಮು & ಕಾಶ್ಮೀರ: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶೀಘ್ರವೇ 2 ತಿಂಗಳ ಗೃಹಲಕ್ಷ್ಮಿಬಾಕಿ ಪಾವತಿ:ಲಕ್ಷ್ಮಿ ಹೆಬ್ಬಾಳ್ಕರ್

(ನ್ಯೂಸ್ ಕಡಬ) newskadaba.com ಸೆ. 27 ಬೆಳಗಾವಿ: ಗೃಹಲಕ್ಷ್ಮಿ ಯೋಜನೆಯ ಜುಲೈ ಕಂತಿನ ಹಣ ಬಿಡುಗಡೆಯ ಪ್ರಕ್ರಿಯೆ ನಡೆಯುತ್ತಿದ್ದು, ಇದಾದ ಕೆಲ ದಿನಗಳಲ್ಲೇ ಆಗಸ್ಟ್ ತಿಂಗಳ ಹಣವೂ ಬಿಡುಗಡೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಇದು ನಿರಂತರ ಪ್ರಕ್ರಿಯೆ. ಸರ್ಕಾರ ಯಾವುದೇ ಕಾರಣಕ್ಕೂ ಪಂಚ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಮಾತೇ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು. ಗೃಹಲಕ್ಷ್ಮಿ ಹಣವನ್ನು ಕಾಯುತ್ತಿರುವ ಲಕ್ಷಾಂತರ ಮಹಿಳೆಯರಿಗೆ ಈ ತಿಂಗಳು ಮುಗಿಯುವ ಮುನ್ನವೇ

ಶೀಘ್ರವೇ 2 ತಿಂಗಳ ಗೃಹಲಕ್ಷ್ಮಿಬಾಕಿ ಪಾವತಿ:ಲಕ್ಷ್ಮಿ ಹೆಬ್ಬಾಳ್ಕರ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳಗಾವಿ ವಿಭಜನೆಯಾಗದೆ ಅಭಿವೃದ್ಧಿ ಸಾಧ್ಯವಿಲ್ಲ:ಲಕ್ಷ್ಮಿ ಹೆಬ್ಬಾಳ್ಕರ್

(ನ್ಯೂಸ್ ಕಡಬ) newskadaba.com ಸೆ. 27. ವಿಟ್ಲ: ಭೌಗೋಳಿಕವಾಗಿ ಮತ್ತು ಜನಸಂಖ್ಯೆ ದೃಷ್ಟಿಯಿಂದ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ವಿಭಜನೆಯಾಗದ ಹೊರತು, ಅಭಿವೃದ್ಧಿ ಸಾಧ್ಯವಿಲ್ಲ. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರೊಂದಿಗೆ ಚರ್ಚಿಸಿ ದಸರಾ ಹಬ್ಬ ಮುಗಿದ ಬಳಿಕ ಸಿಎಂ ಹಾಗೂ ಕಂದಾಯ ಸಚಿವರಿಗೆ ಮನವಿ ಪತ್ರ ನೀಡುತ್ತೇವೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದರು. ಬೆಳಗಾವಿಯಲ್ಲಿ ಮಾತನಾಡಿದ ಅವರು, ಯಾವುದನ್ನು ಹೊಸ ಜಿಲ್ಲೆ ಮಾಡಬೇಕೆಂದು ನಾನು ಹೇಳುವುದಿಲ್ಲ. ಆದರೆ, ಬೆಳಗಾವಿಯನ್ನು ಎರಡು ಅಥವಾ ಮೂರು ಜಿಲ್ಲೆಗಳಾಗಿ

ಬೆಳಗಾವಿ ವಿಭಜನೆಯಾಗದೆ ಅಭಿವೃದ್ಧಿ ಸಾಧ್ಯವಿಲ್ಲ:ಲಕ್ಷ್ಮಿ ಹೆಬ್ಬಾಳ್ಕರ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ; ಅಂಗಡಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

(ನ್ಯೂಸ್ ಕಡಬ) newskadaba.com ಸೆ. 27. ವಿಟ್ಲ: ಅಂಗಡಿಗೆ ತೆರಳಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಯ ಅಂಗಡಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಘಟನೆ ಕುದ್ದುಪದವು ಎಂಬಲ್ಲಿ ನಡೆದಿದೆ. ಕೆಲವು ದಿನಗಳ ಹಿಂದೆ ಕುದ್ದುಪದವು ನಿವಾಸಿ ಅಶ್ರಫ್ ಎಂಬಾತ ಅಂಗಡಿಗೆ ತೆರಳಿದ್ದ ಬಾಲಕಿಗೆ ಲೈಂಗಿಕ ದೌರ್ಜನ್ಯ ವೆಸಗಿದ ಘಟನೆ ವಿಟ್ಲ ಸಮೀಪದ ಕುದ್ದುಪದವು ಎಂಬಲ್ಲಿ ನಡೆದಿತ್ತು. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಶ್ರಫ್ ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ; ಅಂಗಡಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು Read More »

ಬ್ರೇಕಿಂಗ್ ನ್ಯೂಸ್
Scroll to Top