ಬ್ರೇಕಿಂಗ್ ನ್ಯೂಸ್

ಕೇರಳ: 2ನೇ ಮಂಕಿಫಾಕ್ಸ್ ಪ್ರಕರಣ ಪತ್ತೆ

 (ನ್ಯೂಸ್ ಕಡಬ) newskadaba.com ತಿರುವನಂತಪುರಂ ಸೆ.27: : ಯುನೈಟೆಡ್ ಅರಬ್ ಎಮಿರೇಟ್ಸ್(UAE)ನಿಂದ ಬಂದಿದ್ದ ಕೇರಳದ ಎರ್ನಾಕುಲಂನ 26 ವರ್ಷದ ಯುವಕನಿಗೆ ಮಂಕಿಪಾಕ್ಸ್ ಶುಕ್ರವಾರದಂದು ದೃಢಪಟ್ಟಿದೆ. ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಇದು ಈ ವರ್ಷ ರಾಜ್ಯದಲ್ಲಿ ಎರಡನೇ ಮತ್ತು ದೇಶದಲ್ಲಿ ಮೂರನೇ ಮಂಕಿಪಾಕ್ಸ್ ಪ್ರಕರಣವಾಗಿದೆ. ಈ ಹಿಂದೆ ಮಲಪ್ಪುರಂನ ಎಡವನ್ನಾ ಎಂಬ ಪ್ರದೇಶದ 38 ವರ್ಷದ ವ್ಯಕ್ತಿಗೆ ಸೆಪ್ಟೆಂಬರ್ 18 ರಂದು ಮಂಕಿಪಾಕ್ಸ್ ಕಂಡುಬಂದಿತ್ತು. ನಂತರ ಅವರ ಸೋಂಕಿಗೆ ವೈರಸ್‌ನ ಕ್ಲೇಡ್ 1 ಬಿ ಸ್ಟ್ರೈನ್ ಕಾರಣ ಎಂದು ತಿಳಿದುಬಂತು.

ಕೇರಳ: 2ನೇ ಮಂಕಿಫಾಕ್ಸ್ ಪ್ರಕರಣ ಪತ್ತೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ತುಮಕೂರು-ಯಶವಂತಪುರ ಮಧ್ಯೆ ನೂತನ ವೈಮು ರೈಲು ಸೇವೆ:ಕೇಂದ್ರ ಸಚಿವ ವಿ ಸೋಮಣ್ಣ ಚಾಲನೆ

(ನ್ಯೂಸ್ ಕಡಬ) newskadaba.com ತುಮಕೂರು ಸೆ.27: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಇಂದು ಶುಕ್ರವಾರ ತುಮಕೂರು-ಯಶವಂತಪುರ ಮೆಮು ರೈಲಿಗೆ ಚಾಲನೆ ನೀಡಿದರು. ನಂತರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ತುಮಕೂರು-ಯಶವಂತಪುರ ಜೊತೆಗೆ ಬಾಣಸವಾಡಿ-ತುಮಕೂರು ನಡುವೆ ಹೊಸ ಮೆಮು ರೈಲು ಸೇವೆ ಆರಂಭ ಮಾಡುವುದಾಗಿ ಭರವಸೆ ನೀಡಿದರು. ಮೆಮು ರೈಲು ಸಂಚಾರ: ತುಮಕೂರು-ಯಶವಂತಪುರ ನಡುವಿನ ಹೊಸ ಮೆಮು ರೈಲು ಇಂದೇ ಕಾರ್ಯಾರಂಭ ಮಾಡುತ್ತಿದ್ದು, ಭಾನುವಾರ ಹೊರತುಪಡಿಸಿ ವಾರದ ಎಲ್ಲ ದಿನ ಸಂಚರಿಸಲಿದೆ.

ತುಮಕೂರು-ಯಶವಂತಪುರ ಮಧ್ಯೆ ನೂತನ ವೈಮು ರೈಲು ಸೇವೆ:ಕೇಂದ್ರ ಸಚಿವ ವಿ ಸೋಮಣ್ಣ ಚಾಲನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಿಎಂ ಮುಡಾ ಕೇಸ್ ಬೆನ್ನಲ್ಲೇ ಖರ್ಗೆ ಭೂ ಕಬಳಿಕೆ ಕಂಟಕ:ಲೋಕಾಯುಕ್ತಕ್ಕೆ ದೂರು

(ನ್ಯೂಸ್ ಕಡಬ) newskadaba.com ಕೆ.ಆರ್.ಪೇಟೆ, ಸೆ.27. ಮುಡಾ ನಿವೇಶನ ಹಂಚಿಕೆ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಸಂಕಷ್ಟಕ್ಕೆ ಸಿಲುಕಿದ ಬೆನ್ನಲ್ಲೇ ಇದೀಗ ಕಾಂಗ್ರೆಸ್‌ಗೆ ಮತ್ತೊಂದು ಭೂ ಕಬಳಿಕೆಯ ಉರುಳು ಸುತ್ತಿಕೊಂಡಿದೆ. ಮುಡಾ ಹಗರಣದಲ್ಲಿ ಸರ್ಕಾರ ಸಂಕಷ್ಟಕ್ಕೆ ಸಿಲುಕಿದ ಸಂದಿಗ್ಧ ಪರಿಸ್ಥಿತಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಕುಟುಂಬಸ್ಥರ ವಿರುದ್ಧ ಲೋಕಯುಕ್ತದಲ್ಲಿ ಮತ್ತೊಂದು ದೂರು ದಾಖಲಾಗಿದೆ. ಮಾಜಿ ಕಾರ್ಪೊರೇಟರ್ ಎನ್ ಆರ್ ರಮೇಶ್ ಅವರು ಭೂ ಕಬಳಿಕೆ ಆರೋಪದಡಿಯಲ್ಲಿ ಇಬ್ಬರು ಸಚಿವರು ಹಾಗೂ ಹಿರಿಯ IAS ಅಧಿಕಾರಿ

ಸಿಎಂ ಮುಡಾ ಕೇಸ್ ಬೆನ್ನಲ್ಲೇ ಖರ್ಗೆ ಭೂ ಕಬಳಿಕೆ ಕಂಟಕ:ಲೋಕಾಯುಕ್ತಕ್ಕೆ ದೂರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹ

 (ನ್ಯೂಸ್ ಕಡಬ) newskadaba.com ಕೆ.ಆರ್.ಪೇಟೆ (ಸೆ.27)  ಮಹಿಳೆಯರು ಮತ್ತು ಒಕ್ಕಲಿಗ ಸಮುದಾಯದ ವಿರುದ್ದ ಅವಹೇಳನಕಾರಿಯಾಗಿ ಮಾತನಾಡಿರುವ ಶಾಸಕ ಮುನಿರತ್ನ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ತಾಲೂಕು ಒಕ್ಕಲಿಗ ಮಹಿಳಾ ಸಂಘ ಆಗ್ರಹಿಸಿದೆ. ಎಲ್ಲಿ ಮಹಿಳೆಯರನ್ನು ಗೌರವಿಸುತ್ತಾರೋ ಅಲ್ಲಿ ದೇವತೆಗಳು ನೆಲೆಸಿದ್ದಾರೆ ಎಂದು ನಂಬಿರುವ ದೇಶ ನಮ್ಮದು. ಒಕ್ಕಲಿಗ ಸಮುದಾಯ ನಾಡಿಗೆ ಅನ್ನ ನೀಡುವ ಸಮುದಾಯ. ಎಲ್ಲಾ ಜಾತಿ, ಧರ್ಮ ಮತ್ತು ಸಂಸ್ಕೃತಿಯನ್ನು ಗೌರವಿಸಿ ನಡೆಯುತ್ತಿರುವರರು ಒಕ್ಕಲಿಗ ಸಮುದಾಯದ ಜನ. ಶಾಂತಿ ಮತ್ತು ಸಹಬಾಳ್ವೆಯಿಂದ ಬದುಕುತ್ತಿರುವ ಒಕ್ಕಲಿಗ ಸಮಾಜವನ್ನು

ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜಪಾನ್ ನನ್ನು ಹಿಂದಿಕ್ಕಿದ ಭಾರತ: ಏಷ್ಯಾ ಫೆಸಿಫಿಕ್ ನಲ್ಲಿ ಟಾಪ್ 3ನೇ ದೇಶ

 (ನ್ಯೂಸ್ ಕಡಬ) newskadaba.com ನವದೆಹಲಿ(ಸೆ.27) ಭಾರೀ ವೇಗದ ಆರ್ಥಿಕಾಭಿವೃದ್ಧಿಯಿಂದ ಜಗತ್ತಿನ ಗಮನ ಸೆಳೆದಿರುವ ಭಾರತ ಇದೀಗ ಏಷ್ಯಾ ಪೆಸಿಫಿಕ್‌ ರಾಷ್ಟ್ರಗಳ ಪೈಕಿ ಮೂರನೇ ಅತ್ಯಂತ ಶಕ್ತಿಶಾಲಿ ರಾಷ್ಟ್ರವಾಗಿ ಹೊರಹೊಮ್ಮಿದೆ. ಈ ಪಟ್ಟಿಯಲ್ಲಿ ಜಪಾನ್‌ ದೇಶವನ್ನು ಹಿಂದಿಕ್ಕಿರುವ ಭಾರತವು ಅಮೆರಿಕ ಮತ್ತು ಚೀನಾದ ನಂತರದ ಸ್ಥಾನಕ್ಕೆ ಏರಿದೆ. ಭಾರೀ ವೇಗದ ಆರ್ಥಿಕಾಭಿವೃದ್ಧಿಯಿಂದ ಜಗತ್ತಿನ ಗಮನ ಸೆಳೆದಿರುವ ಭಾರತ ಇದೀಗ ಏಷ್ಯಾ ಪೆಸಿಫಿಕ್‌ ರಾಷ್ಟ್ರಗಳ ಪೈಕಿ ಮೂರನೇ ಅತ್ಯಂತ ಶಕ್ತಿಶಾಲಿ ರಾಷ್ಟ್ರವಾಗಿ ಹೊರಹೊಮ್ಮಿದೆ. ಆಸ್ಟ್ರೇಲಿಯಾದ ಲೋವಿ ಇನ್‌ಸ್ಟಿಟ್ಯೂಟ್‌ ‘2024ನೇ ಆವೃತ್ತಿಯ ಏಷ್ಯಾ

ಜಪಾನ್ ನನ್ನು ಹಿಂದಿಕ್ಕಿದ ಭಾರತ: ಏಷ್ಯಾ ಫೆಸಿಫಿಕ್ ನಲ್ಲಿ ಟಾಪ್ 3ನೇ ದೇಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮತ್ತೊಂದು ಹಂತಕ್ಕೆ ತಲುಪಿದ ರಾಜ್ಯಪಾಲ-ಸರ್ಕಾರದ ಗುದ್ದಾಟ

 (ನ್ಯೂಸ್ ಕಡಬ) newskadaba.com ಬೆಂಗಳೂರು(ಸೆ.27) ರಾಜ್ಯಪಾಲರು ಅಥವಾ ರಾಜ್ಯಪಾಲರ ಸಚಿವಾಲಯವು ಸರ್ಕಾರದಿಂದ ವಿವರಣೆ, ವರದಿ ಸೇರಿದಂತೆ ಯಾವುದೇ ಮಾಹಿತಿ ಕೇಳಿದರೂ ಅಧಿಕಾರಿಗಳು ನೇರವಾಗಿ ನೀಡುವಂತಿಲ್ಲ. ಸಚಿವ ಸಂಪುಟ ಸಭೆಯು ಪರಿಶೀಲಿಸಿ ಅನುಮತಿಸಿದ ಮಾಹಿತಿಯನ್ನು ಮಾತ್ರ ರಾಜ್ಯಪಾಲರಿಗೆ ನೀಡಬೇಕು’ ಎಂದು ಸಚಿವ ಸಂಪುಟ ಸಭೆ ನಿರ್ಧಾರ ಮಾಡಿದೆ. ತನ್ಮೂಲಕ ತಕ್ಷಣದಿಂದ ಜಾರಿಯಾಗುವಂತೆ ಯಾವುದೇ ಮಾಹಿತಿಯನ್ನೂ ಸಚಿವ ಸಂಪುಟ ಸಭೆ ಮುಂದೆ ಮಂಡಿಸದೆ ನೇರವಾಗಿ ರಾಜ್ಯ ಪಾಲರಿಗೆ ನೀಡುವಂತಿಲ್ಲ. ಈವರೆಗೆ ರಾಜ್ಯಪಾಲರು ಬರೆದಿರುವ ಪತ್ರಗಳಿಗೂ ಮುಂದಿನ ಸಂಪುಟ ಸಭೆಯಲ್ಲಿ ಮಂಡಿಸಿ ಸಭೆ

ಮತ್ತೊಂದು ಹಂತಕ್ಕೆ ತಲುಪಿದ ರಾಜ್ಯಪಾಲ-ಸರ್ಕಾರದ ಗುದ್ದಾಟ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ2.37 ಲಕ್ಷ ಎಕರೆ ಅರಣ್ಯ ಭೂಮಿ ಒತ್ತುವರಿ

 (ನ್ಯೂಸ್ ಕಡಬ) newskadaba.com ಬೆಂಗಳೂರು(ಸೆ.27) ಸೆಪ್ಟೆಂಬರ್ 1 ರವರೆಗೆ ರಾಜ್ಯದಲ್ಲಿ ಸುಮಾರು 2,37,079.24 ಎಕರೆ ಅರಣ್ಯ ಭೂಮಿ ಒತ್ತುವರಿಯಾಗಿದ್ದು, ಅರಣ್ಯ ಇಲಾಖೆಯಿಂದ 1,25,306 ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಸರ್ಕಾರದ ಅಂಕಿಅಂಶಗಳು ಬಹಿರಂಗಪಡಿಸಿವೆ. ಮೂರು ಎಕರೆಗಿಂತ ಕಡಿಮೆ ಭೂಮಿಯಲ್ಲಿ ಅತಿಕ್ರಮಣದ ಒಟ್ಟು ಪ್ರಮಾಣವು ಅತ್ಯಧಿಕವಾಗಿದೆ. ಒಟ್ಟು 1,39,055.99 ಎಕರೆ ಭೂಮಿ ಒತ್ತುವರಿಯಾಗಿದ್ದು, ಅದರಲ್ಲಿ 1,07,477 ಪ್ರಕರಣಗಳು ಮೂರು ಎಕರೆಗಿಂತ ಕಡಿಮೆ ಅರಣ್ಯ ಭೂಮಿಯನ್ನು ಅತಿಕ್ರಮಣ ಮಾಡಿದವುಗಳಾಗಿವೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

ರಾಜ್ಯದಲ್ಲಿ2.37 ಲಕ್ಷ ಎಕರೆ ಅರಣ್ಯ ಭೂಮಿ ಒತ್ತುವರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೇಂದ್ರ ಸರ್ಕಾರ: ಕನಿಷ್ಠ ವೇತನ ಹೆಚ್ಚಳ

 (ನ್ಯೂಸ್ ಕಡಬ) newskadaba.com ನವದೆಹಲಿ(ಸೆ.27): ಅಸಂಘಟಿತ ನೌಕರರನ್ನು ಬೆಂಬಲಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ವೇರಿಯಬಲ್ ಡಿಯರ್ನೆಸ್ ಭತ್ಯೆಯನ್ನು ಪರಿಷ್ಕರಣೆ ಮಾಡುವ ಮೂಲಕ ಕನಿಷ್ಠ ವೇತನ ದರ ಹೆಚ್ಚಿಸಿದೆ. ಈ ಹೆಚ್ಚಳವು ಕಾರ್ಮಿಕರಿಗೆ ಹೆಚ್ಚುತ್ತಿರುವ ಜೀವನ ವೆಚ್ಚವನ್ನು ನಿಭಾಯಿಸಲು ಸಹಾಯ ಮಾಡುವ ಗುರಿಯನ್ನು ಹೊಂದಿದೆ ಎಂದು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ. ಕಟ್ಟಡ ನಿರ್ಮಾಣ, ಲೋಡಿಂಗ್ ಮತ್ತು ಅನ್‌ಲೋಡಿಂಗ್, ವಾಚ್ ಮತ್ತು ವಾರ್ಡ್, ಗುಡಿಸುವುದು, ಸ್ವಚ್ಛತೆ, ಮನೆಗೆಲಸ, ಗಣಿಗಾರಿಕೆ ಮತ್ತು ಕೇಂದ್ರ ಗೋಳದ ಸಂಸ್ಥೆಗಳಲ್ಲಿ ಕೃಷಿ ಸೇರಿದಂತೆ

ಕೇಂದ್ರ ಸರ್ಕಾರ: ಕನಿಷ್ಠ ವೇತನ ಹೆಚ್ಚಳ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಜ್ಯದ ಈ ಎರಡು ಕಡೆಗಳಲ್ಲಿ ತುಪ್ಪ ಸೇಫ್ ಅಲ್ಲ-ಆಹಾರ ಸುರಕ್ಷತಾ ಇಲಾಖೆ

 (ನ್ಯೂಸ್ ಕಡಬ) newskadaba.com ಬೆಂಗಳೂರು(ಸೆ.27) : ತಿರುಪತಿ ಲಡ್ಡು ತಯಾರಿಕೆಗೆ ಬಳಸಲಾದ ತುಪ್ಪ  ಕಲಬೆರಕೆ ವಿವಾದ ಬೆಳಕಿಗೆ ಬರುವುದಕ್ಕೂ ಮುನ್ನವೇ ರಾಜ್ಯದಲ್ಲಿ ತುಪ್ಪ ಕಲಬೆರಕೆ ಆಗಿರುವುದು ಬೆಳಕಿಗೆ ಬಂದಿದೆ. ಆಹಾರ ಸುರಕ್ಷತಾ ಇಲಾಖೆ 40 ಕಡೆ ತುಪ್ಪ ಸಂಗ್ರಹ ಮಾಡಿ ಟೆಸ್ಟ್ ಮಾಡಿದಾಗ ರಾಜ್ಯದ 2 ಕಡೆ ತುಪ್ಪ ಕಲಬೆರಕೆ ಆಗಿರುವುದು ಬಯಲಾಗಿದೆ. ಆಹಾರ ಮತ್ತು ಸುರಕ್ಷತಾ ಇಲಾಖೆ ಆಗಸ್ಟ್ ತಿಂಗಳಲ್ಲಿ ತುಪ್ಪವನ್ನ ಟೆಸ್ಟ್ ಮಾಡಿದೆ. ರಾಜ್ಯಾದ್ಯಂತ 40 ಕಡೆ ಮಾದರಿ ಸಂಗ್ರಹಿಸಿ, ಬೆಂಗಳೂರು ಮತ್ತು ಬಾಗಲಕೋಟೆಯಲ್ಲಿ

ರಾಜ್ಯದ ಈ ಎರಡು ಕಡೆಗಳಲ್ಲಿ ತುಪ್ಪ ಸೇಫ್ ಅಲ್ಲ-ಆಹಾರ ಸುರಕ್ಷತಾ ಇಲಾಖೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೈಸೂರು: ಮಹಿಷಾ ದಸರಾದಿಂದ ಮೈಸೂರು ದಸದ ಎಂಬ ಹೆಸರೇ ಬದಲಾವಣೆ

 (ನ್ಯೂಸ್ ಕಡಬ) newskadaba.com ಮೈಸೂರು(ಸೆ.27) : ಮೈಸೂರು ದಸರಾದಿಂದ ಮಹಿಷಾ ದಸರಾ ಎಂದು ಹೆಸರು ಬದಾಲಾಯಿಸಲಾಗಿದ್ದು, ಮಹಿಷಾ ದಸರಾದಿಂದ  ಮೈಸೂರು  ಹೆಸರೇ ಬದಲಾಗಿದೆ. ಮಹಿಷ ದಸರಾ ಆಚರಣಾ ಸಮಿತಿ ಬಿಡುಗಡೆಗೊಳಿಸಿರುವ ಆಹ್ವಾನ ಪತ್ರಿಕೆಯಲ್ಲಿ ಮೈಸೂರು ಬದಲಿಗೆ ಮಹಿಷೂರು, ಚಾಮುಂಡಿಬೆಟ್ಟ  ಬದಲಿಗೆ ಮಹಿಷಾ ಬೆಟ್ಟ ಎಂದು ಹೆಸರು ಮುದ್ರಿಸಿರುವುದು ಈಗ ತೀವ್ರ ವಿವಾದಕ್ಕೆ ಕಾರಣವಾಗಿದೆ. ಇದೇ ತಿಂಗಳು 29 ರಂದು ಮಹಿಷಾ ದಸರಾ ನಡೆಸಲು ಸಮಿತಿ ಉದ್ದೇಶಿಸಿದೆ. ಚಾಮುಂಡಿ ಬೆಟ್ಟದಲ್ಲಿ ಮಹಿಷಾಸುರನಿಗೆ ಪುಷ್ಪಾರ್ಚನೆ ಮಾಡಿ ನಂತರ ಪುರಭವನದಲ್ಲಿ ವೇದಿಕೆ

ಮೈಸೂರು: ಮಹಿಷಾ ದಸರಾದಿಂದ ಮೈಸೂರು ದಸದ ಎಂಬ ಹೆಸರೇ ಬದಲಾವಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top