ಬ್ರೇಕಿಂಗ್ ನ್ಯೂಸ್

ಕೇರಳ: ಹೆದ್ದಾರಿ ಮಧ್ಯೆ ಚಿನ್ನ ದರೋಡೆ

 (ನ್ಯೂಸ್ ಕಡಬ) newskadaba.com ಕೇರಳ(ಸೆ.27) :  ಕೇರಳದ ತ್ರಿಶ್ಶೂರ್ ಬಳಿಯ ಪೀಚಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ದರೋಡೆ ಪ್ರಕರಣದ ಡ್ಯಾಷ್ ಕ್ಯಾಮ್ ವಿಡಿಯೊ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹೆದ್ದಾರಿಯಲ್ಲಿ ಕಾರನ್ನು ತಡೆದ 12 ಮಂದಿಗಳ ಗುಂಪು ಆ ಕಾರಿನಲ್ಲಿದ್ದ ಇಬ್ಬರ ಸಹಿತ 2.5 ಕೆ.ಜಿ ಚಿನ್ನವನ್ನು ದರೋಡೆ ಮಾಡಿದೆ ಎಂದು ಪೊಲೀಸರು ಹೇಳಿದ್ದಾರೆ. ನಿರ್ಮಾಣ ಹಂತದ ಫ್ಲೈಓವರ್ ನಲ್ಲಿ ಕಾರೊದನ್ನು ಗುರಿಯಾಗಿಸಿ ಬಂದ ಮೂರು ಕಾರುಗಳು ಹೆದ್ದಾರಿಯಲ್ಲಿ ಬ್ಲಾಕ್ ಮಾಡಿವೆ. ಚಿನ್ನ ಸಾಗಿಸುತ್ತಿದ್ದ ಕಾರನ್ನು ಇತರ ಮೂರು […]

ಕೇರಳ: ಹೆದ್ದಾರಿ ಮಧ್ಯೆ ಚಿನ್ನ ದರೋಡೆ Read More »

ಬ್ರೇಕಿಂಗ್ ನ್ಯೂಸ್

ಪುತ್ತೂರು: ಸಾಲ ವಸೂಲಾತಿಗೆ ಹೋದ ಬ್ಯಾಂಕ್ ಸಿಬ್ಬಂದಿಗಳಿಗೆ ಪಿಸ್ತೂಲ್ ತೋರಿಸಿ ಬೆದರಿಕೆ

 (ನ್ಯೂಸ್ ಕಡಬ) newskadaba.com ಪುತ್ತೂರು(ಸೆ.27) :  ಪುತ್ತೂರು ಕೋರ್ಟ್‌ ರೋಡ್‌ನ‌ ಸ್ಟೇಟ್‌ ಬ್ಯಾಂಕ್‌ ಆಫ್ ಇಂಡಿಯಾದ ರಿಲೇಷನ್‌ಶಿಪ್‌ ಮ್ಯಾನೇಜರ್‌ ಚೈತನ್ಯ ಎಚ್‌.ಸಿ. ಅವರು ನೀಡಿದ ದೂರಿನಂತೆ ಅಖಿಲೇಶ್ ಮತ್ತು ಕೃಷ್ಣ ಕಿಶೋರ್‌ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿಗಳು ಬೊಳುವಾರು ಬಳಿ ತಿರುಮಲ ಹೋಂಡಾ ಸಂಸ್ಥೆಯನ್ನು ನಡೆಸುತ್ತಿದ್ದಾರೆ. ಉಜಿರ್ಪಾದೆ ನಿವಾಸಿ ಕೀರ್ತಿ ಎನ್ನುವವರು ಅಖಿಲೇಶ್ ಹೆಸರಿನಲ್ಲಿ ಎಸ್‌ಬಿಐ ಬ್ಯಾಂಕ್‌ನಲ್ಲಿ 2 ಕೋಟಿ ರೂ. ಸಾಲ ಮಾಡಿದ್ದು, ಸಾಲ ಮರುಪಾವತಿ ಮಾಡದೇ ಎನ್‌ಪಿಎ ಆಗಿತ್ತು. ಸಾಲ ಬಾಕಿಯ ಬಗ್ಗೆ ಹಲವಾರು

ಪುತ್ತೂರು: ಸಾಲ ವಸೂಲಾತಿಗೆ ಹೋದ ಬ್ಯಾಂಕ್ ಸಿಬ್ಬಂದಿಗಳಿಗೆ ಪಿಸ್ತೂಲ್ ತೋರಿಸಿ ಬೆದರಿಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ದ ಎಫ್ಐಆರ್ ದಾಖಲು ಸಾಧ್ಯತೆ

 (ನ್ಯೂಸ್ ಕಡಬ) newskadaba.com ಬೆಂಗಳೂರು(ಸೆ.27) : ಮುಡಾ ಹಗರಣದಲ್ಲಿ ಲೋಕಾಯುಕ್ತ ಸುಳಿಗೆಗೆ ಸಿಲುಕಿರುವ ಸಿಎಂ ಸಿದ್ದರಾಮಯ್ಯಗೆ ದಿನ ದಿನಕ್ಕೂ ಆತಂಕ ಹೆಚ್ಚಾಗುತ್ತಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ಹಿನ್ನೆಲೆ, ಎಫ್ಐಆರ್ ದಾಖಲಿಸಲು ಲೋಕಾಯುಕ್ತ ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಲೋಕಾಯುಕ್ತ ಐಜಿಪಿ, ಎಡಿಜಿಪಿ, ಮೈಸೂರು ಲೋಕಾಯುಕ್ತ ಎಸ್​​​​ಪಿ ಗುರುವಾರ ಸಿಎಂ ವಿರುದ್ಧ ಮುಂದಿನ ಹಂತದ ತನಿಖೆ ಬಗ್ಗೆ ಸಭೆ ನಡೆಸಿದ್ದಾರೆ. ಸಭೆಯ ನಂತರ ಲೋಕಾಯುಕ್ತ ಮೈಸೂರು ಎಸ್‌ಪಿ ಉದೇಶ್ ಅವ್ರು ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ಆದೇಶ ಪ್ರತಿ ಪಡೆದಿದ್ದಾರೆ.

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ದ ಎಫ್ಐಆರ್ ದಾಖಲು ಸಾಧ್ಯತೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪತ್ರಕರ್ತರಿಗೆ ಉಚಿತ ಬಸ್ ಪಾಸ್ ವಿತರಣೆಗೆ ರಾಜ್ಯ ಸರಕಾರ ಆದೇಶ

(ನ್ಯೂಸ್ ಕಡಬ) newskadaba.com ಸೆ. 26. ಇನ್ನು 15 ದಿನಗಳಲ್ಲಿ ರಾಜ್ಯದ ಅರ್ಹ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್‌ ಯೋಜನೆ ಜಾರಿಗೆ ಬರಲಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ ಹೇಳಿದರು. ಈ ಕುರಿತು ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆಯ ಸಂದರ್ಭ ಮಾತನಾಡಿದ ಅವರು, ರಾಜ್ಯದಲ್ಲಿ ಸುಮಾರು 6,500 ಗ್ರಾಮೀಣ ಪತ್ರಕರ್ತರಿದ್ದಾರೆ. ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದ್ದು, ಅದಕ್ಕೆ ತಗಲುವ ವೆಚ್ಚವನ್ನು ಸರಕಾರವೇ ಭರಿಸಲಿದೆ. ಇನ್ನು 15ರಿಂದ 20 ದಿನಗಳಲ್ಲಿ ಈ ಕುರಿತು

ಪತ್ರಕರ್ತರಿಗೆ ಉಚಿತ ಬಸ್ ಪಾಸ್ ವಿತರಣೆಗೆ ರಾಜ್ಯ ಸರಕಾರ ಆದೇಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗೌರವ ಉಳಿಯಬೇಕಾದರೆ ಕೂಡಲೇ ರಾಜೀನಾಮೆ ನೀಡಿ- ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಸೆ. 26. ತಮಗಿರುವ ಗೌರವ ಉಳಿಯಬೇಕೆಂದರೆ ಸಿಎಂ ಸಿದ್ದರಾಮಯ್ಯ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಸಂಸದ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.   ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಕರ್ನಾಟಕ ರಾಜಕಾರಣದಲ್ಲಿ ಅವರದ್ದೇ ಆದ ಗುರುತಿದೆ. ತಮ್ಮದೇ ಜನಾಭಿಪ್ರಾಯ ಇದೆ. ಅದನ್ನು ಉಳಿಸಿಕೊಂಡು ಹೋಗಬೇಕಾದರೆ ಅವರು ನೈತಿಕತೆಯನ್ನು ಮೆರೆಯಬೇಕು. ಎಲ್ಲರಂತೆ ಉದಾಹರಣೆ ಕೊಟ್ಟರೆ ಇವರೂ ಅವರ ಸಾಲಿಗೆ ಸೇರುತ್ತಾರೆ ಎಂದರು.

ಗೌರವ ಉಳಿಯಬೇಕಾದರೆ ಕೂಡಲೇ ರಾಜೀನಾಮೆ ನೀಡಿ- ಬೊಮ್ಮಾಯಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಿಎಂ ರಾಜೀನಾಮೆ ಆಗ್ರಹಿಸಿ ರಾಜ್ಯ ಬಿಜೆಪಿ ವತಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಸೆ. 26. ಸಿಎಂ ರಾಜೀನಾಮೆಗೆ ಆಗ್ರಹಿಸಿ ರಾಜ್ಯ ಬಿಜೆಪಿ ವತಿಯಿಂದ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಇಂದು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರ ಕರೆಯನ್ವಯ ಪ್ರತಿಭಟನೆ ನಡೆಯಿತು. ವಿರೋಧಪಕ್ಷದ ನಾಯಕ ಆರ್. ಅಶೋಕ್, ಉಪ ನಾಯಕ ಅರವಿಂದ ಬೆಲ್ಲದ, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದರು, ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರು ಉಪಸ್ಥಿತರಿದ್ದರು. ಪ್ರತಿಭಟನೆಯಲ್ಲಿ ಕಾರ್ಯಕರ್ತರು ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಧಿಕ್ಕಾರ ಕೂಗಲಾಯಿತು.

ಸಿಎಂ ರಾಜೀನಾಮೆ ಆಗ್ರಹಿಸಿ ರಾಜ್ಯ ಬಿಜೆಪಿ ವತಿಯಿಂದ ಪ್ರತಿಭಟನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನೆಟ್ ಫ್ಲಿಕ್ಸ್ ನಿಂದ 47 ಕೋಟಿ ವಂಚನೆ ಆರೋಪ-ದೂರು

(ನ್ಯೂಸ್ ಕಡಬ) newskadaba.com ಸೆ. 26. ಬಾಲಿವುಡ್‌ ನಿರ್ಮಾಪಕ ವಶು ಭಗ್ನಾನಿ ಅವರು ನೆಟ್ ಫ್ಲಿಕ್ಸ್ ಇಂಡಿಯಾ ಸಂಸ್ಥೆ ಚಿತ್ರದ ಹಕ್ಕುಗಳಿಗಾಗಿ 47.37 ಕೋಟಿಗಳಷ್ಟು ವಂಚಿಸಿದ್ದಾರೆ ಎಂದು ಆರೋಪಿಸಿ ಪೊಲೀಸ್‌‍ ದೂರು ದಾಖಲಿಸಿರುವ ಕುರಿತು ವರದಿಯಾಗಿದ್ದು, ಆದರೆ ಈ ಆರೋಪವನ್ನು ಸಂಸ್ಥೆ ನಿರಾಕರಿಸಿರುವುದಾಗಿ ತಿಳಿದುಬಂದಿದೆ. ಮುಂಬೈ ಪೊಲೀಸ್‌‍ನ ಆರ್ಥಿಕ ಅಪರಾಧ ವಿಭಾಗ (ಇಒಡಬ್ಲ್ಯು) ಭಗ್ನಾನಿ ಅವರು ಸಲ್ಲಿಸಿದ ದೂರಿನ ತನಿಖೆಯನ್ನು ಪ್ರಾರಂಭಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವರದಿಯ ಪ್ರಕಾರ, ನಿರ್ಮಾಪಕರು ತಮ್ಮ ಇತ್ತೀಚಿನ ಮೂರು ಹಿಂದಿ ಚಲನಚಿತ್ರಗಳಾದ

ನೆಟ್ ಫ್ಲಿಕ್ಸ್ ನಿಂದ 47 ಕೋಟಿ ವಂಚನೆ ಆರೋಪ-ದೂರು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನು ಸಿಎಂ ಆಗುತ್ತೇನೆ’- ದೇಶಪಾಂಡೆ

 (ನ್ಯೂಸ್ ಕಡಬ) newskadaba.com ಮೈಸೂರು(ಸೆ.25) : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮತಿ ಕೊಟ್ಟರೆ ನಾನು ಸಿಎಂ ಆಗುತ್ತೇನೆ ಅಂತ ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಆರ್.ವಿ ದೇಶಪಾಂಡೆ ಹೇಳಿಕೆ ನೀಡಿ ಅಚ್ಚರಿ ಮೂಡಿಸಿದ್ದಾರೆ. ಈ ಮೂಲಕ ಪರೋಕ್ಷವಾಗಿ ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ್ದಾರೆ. ನಾನು ಸಚಿವ ಆಗಿ ದಣಿದಿದ್ದೇನೆ. ಇನ್ನೇನಿದ್ದರೂ ಮುಖ್ಯಮಂತ್ರಿ ಆಗಬೇಕು ಅಷ್ಟೇ. ಆದ್ರೆ ಈಗ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. ನಾನು ಸಿದ್ದರಾಮಯ್ಯಗಿಂತ 2 ವರ್ಷ ವಯಸ್ಸಿನಲ್ಲಿ ದೊಡ್ಡವನು.

‘ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನು ಸಿಎಂ ಆಗುತ್ತೇನೆ’- ದೇಶಪಾಂಡೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪ್ರಧಾನಿ ಮೋದಿ: ಸಿದ್ದರಾಮಯ್ಯ ವಿರುದ್ಧ ತನಿಖೆಯಾಗಲೇಬೇಕು

(ನ್ಯೂಸ್ ಕಡಬ) newskadaba.com ಸೋನಿಪತ್(ಸೆ.25) : ಹರಿಯಾಣ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ಕರ್ನಾಟಕದ ಮುಡಾ ಪ್ರಕರಣದ ಪ್ರಸ್ತಾಪವಾಗಿದೆ‌. ಪ್ರಧಾನಿ ನರೇಂದ್ರ ಮೋದಿ, ಸಿಎಂ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್ ತನಿಖೆಗೆ ಆದೇಶಿಸಿದೆ, ಅವರ ವಿರುದ್ಧ ತನಿಖೆಯಾಗಲೇಬೇಕು ಎಂದು ಆಗ್ರಹಿಸಿದ್ದಾರೆ. ಸಾರ್ವಜನಿಕ ‍ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ಹೈಕಮಾಂಡ್‌ ಭ್ರಷ್ಟವಾದಾಗ ಕೆಳಗೆ ಇರುವವರಿಗೆ ಲೂಟಿ ಹೊಡೆಯಲು ಪರವಾನಿಗೆ ನೀಡಿದಂತಾಗಲಿದೆ. ಕಾಂಗ್ರೆಸ್ ಆಡಳಿತ ಮಾಡಿದ ಯಾವ ರಾಜ್ಯವೂ ಅಭಿವೃದ್ಧಿಯಾಗಿಲ್ಲ ಎಂದು ಹೇಳಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷ ಆಗಿದೆ.

ಪ್ರಧಾನಿ ಮೋದಿ: ಸಿದ್ದರಾಮಯ್ಯ ವಿರುದ್ಧ ತನಿಖೆಯಾಗಲೇಬೇಕು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಲಾರಿ ಚಾಲಕ ಅರ್ಜುನ್ ಮೃತದೇಹ ಪತ್ತೆ…!

(ನ್ಯೂಸ್ ಕಡಬ) newskadaba.com ಸೆ. 25. ಉತ್ತರಕನ್ನಡ ಅಂಕೋಲಾದ ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿ ನಾಪತ್ತೆಯಾಗಿದ್ದ ಕೇರಳ ಮೂಲದ ಲಾರಿ ಹಾಗೂ ಅದರ ಚಾಲಕ ಅರ್ಜುನ್ ಅವರ ಮೃತದೇಹ ಪತ್ತೆಯಾಗಿರುವ ಕುರಿತು ವರದಿಯಾಗಿದೆ. ಶಿರೂರು ಗಂಗಾವಳಿ ನದಿಯಲ್ಲಿ ಆರನೇ ದಿನವೂ ಕಾರ್ಯಾಚರಣೆ ಮುಂದುವರಿದಿದ್ದು, ನದಿಯಲ್ಲಿ ಮುಳುಗಿದ್ದ ಕೇರಳದ ಲಾರಿ ಪತ್ತೆಯಾಗಿದೆ ಎಂದು ಕಾರ್ಯಾಚರಣೆ ಮಾಡುತ್ತಿರುವ ತಂಡ ತಿಳಿಸಿದೆ. ಡ್ರಜ್ಜಿಂಗ್ ಯಂತ್ರ ಹಾಗೂ ಕ್ರೇನ್ ಮೂಲಕ ಲಾರಿ ಮೇಲೆತ್ತುವ ಪ್ರಕ್ರಿಯೆ ಕೆಲವೇ ಕ್ಷಣದಲ್ಲಿ ಆರಂಭವಾಗಲಿದೆ.

ಲಾರಿ ಚಾಲಕ ಅರ್ಜುನ್ ಮೃತದೇಹ ಪತ್ತೆ…! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top