ಬ್ರೇಕಿಂಗ್ ನ್ಯೂಸ್

ಪ್ರಥಮ ಬಾರಿಗೆ 7700 ಗಡಿ ದಾಟಿದ ಚಿನ್ನದ ಬೆಲೆ

 (ನ್ಯೂಸ್ ಕಡಬ) newskadaba.com ಬೆಂಗಳೂರು(ಸೆ.25): ಚಿನ್ನದ ಬೆಲೆಯ ಏರಿಕೆಯು ಮುಂದುವರೆದಿದೆ. ಷೇರುಮಾರುಕಟ್ಟೆ ಹೊಸ ದಾಖಲೆ ಎತ್ತರಕ್ಕೆ ಹೋದಂತೆ ಚಿನ್ನದ ಬೆಲೆಯೂ ಹೊಸ ಮೈಲಿಗಲ್ಲುಗಳನ್ನು ದಾಟುತ್ತಿದೆ. ಭಾರತದಲ್ಲಿ ಅಪರಂಜಿ ಚಿನ್ನ ಮೊದಲ ಬಾರಿಗೆ 7,700 ರೂ ಗಡಿ ದಾಟಿದೆ. ಬೆಳ್ಳಿ ಬೆಲೆ ಮುಂಬೈನಲ್ಲಿ ಕಡಿಮೆ ಆದರೂ ಚೆನ್ನೈ, ಕೇರಳ ಮೊದಲಾದೆಡೆ ಹೊಸ ಏರಿಕೆ ದಾಟಿದೆ. ಅಲ್ಲೆಲ್ಲಾ ಬೆಳ್ಳಿ ಬೆಲೆ ಗ್ರಾಮ್​ಗೆ 100 ರೂ ಗಡಿ ದಾಟಿದೆ. ಬೆಂಗಳೂರಿನಲ್ಲಿ 87 ರೂ ಬೆಲೆ ಮುಂದುವರಿದಿದೆ. ಉಳಿದ ಕಡೆ 95 ರೂ […]

ಪ್ರಥಮ ಬಾರಿಗೆ 7700 ಗಡಿ ದಾಟಿದ ಚಿನ್ನದ ಬೆಲೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶ್ರೀಮತಿ ಶೆಟ್ಟಿಯನ್ನು 29 ತುಂಡು ಮಾಡಿ ಎಸೆದ ಆರೋಪಿಗಳಿಗೆ ಜೀವಾವಧಿ ಶಿಕ್ಷೆ

 (ನ್ಯೂಸ್ ಕಡಬ) newskadaba.com ಮಂಗಳೂರು(ಸೆ.25): ಕರಾವಳಿಯ ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಿಗೆ ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿದೆ. 2019ರ ಮೇ 11ರಂದು ಮಂಗಳೂರು ನಗರದ ವೆಲೆನ್ಸಿಯಾದ ಸೂಟರ್ ಪೇಟೆಯಲ್ಲಿ ಶ್ರೀಮತಿ ಶೆಟ್ಟಿ ಕೊಲೆ ನಡೆದಿತ್ತು. ಮನೆಗೆ ಬಂದು ಚಿಟ್ ಫಂಡ್ ಹಣ ಕೇಳಿದ್ದ ಮಹಿಳೆಯನ್ನು ಜೋನ್ ಸ್ಯಾಮ್ಸನ್ ದೊಣ್ಣೆಯಿಂದ ಹೊಡೆದು ಕೊಂದಿದ್ದ. ಬಳಿಕ ಶ್ರೀಮತಿ ಶೆಟ್ಟಿ ಅವರನ್ನು 29 ತುಂಡುಗಳಾಗಿ ಕತ್ತರಿಸಿ ನಗರದ ವಿವಿದೆಡೆ ಎಸೆಯಲಾಗಿತ್ತು.

ಶ್ರೀಮತಿ ಶೆಟ್ಟಿಯನ್ನು 29 ತುಂಡು ಮಾಡಿ ಎಸೆದ ಆರೋಪಿಗಳಿಗೆ ಜೀವಾವಧಿ ಶಿಕ್ಷೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೋಲಾರದಲ್ಲಿ ಆತಂಕಕಾರಿ ಸೂಟ್ ಕೇಸ್ ಪತ್ತೆ

 (ನ್ಯೂಸ್ ಕಡಬ) newskadaba.com ಕೋಲಾರ(ಸೆ.25): ಕೋಲಾರದ ಹೆದ್ದಾರಿ ಪಕ್ಕದಲ್ಲಿ ಕಂಡು ಬಂದ ಸೂಟ್‌ಕೇಸ್‌ವೊಂದು ಪತ್ತೆಯಾಗಿದೆ. ನಗರ ಹೊರವಲಯದಲ್ಲಿ ಸೂಟ್ ಕೇಸ್ ಕಂಡು ಬಂದಿದ್ದು, ಸೂಟ್‌ಕೇಸ್‌ನಿಂದ ಶಬ್ದ ಹೊರ ಬರುತ್ತಿದೆ. ಸ್ಫೋಟಕ ಇರುವ ಅನುಮಾನದ ಹಿನ್ನೆಲೆಯಲ್ಲಿ ಸ್ಥಳೀಯರು ಆತಂಕದಲ್ಲಿದ್ದಾರೆ. ಕ್ರೌನ್ ಕಂಪನಿಯ ಸೂಟ್‌ಕೇಸ್ ಇದಾಗಿದ್ದು, ಸೆನ್ಸಾರ್ ಇರುವ ಸೂಟ್‌ಕೇಸ್ ಆಗಿರುವ ಕಾರಣ ಶಬ್ದ ಬರುತ್ತಿದೆ ಎಂದು ಪೊಲೀಸರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಇದೀಗ ಬಾಂಬ್ ತಜ್ಞರು ಹಾಗೂ ಕೋಲಾರ ಎಸ್ಪಿ ನಿಖಿಲ್.ಬಿ ಭೇಟಿ ನೀಡಿದ್ದಾರೆ ಹಾಗೂ ಶ್ವಾನ ದಳ,

ಕೋಲಾರದಲ್ಲಿ ಆತಂಕಕಾರಿ ಸೂಟ್ ಕೇಸ್ ಪತ್ತೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹೆದ್ದಾರಿ ಪಕ್ಕದಲ್ಲಿ ಸೂಟ್ ಕೇಸ್ ಪತ್ತೆ – ವಿಚಿತ್ರ ಶಬ್ದದಿಂದ ಭಯಭೀತರಾದ ಜನತೆ

(ನ್ಯೂಸ್ ಕಡಬ) newskadaba.com ಸೆ. 25. ರಸ್ತೆ ಪಕ್ಕದಲ್ಲಿ ಸೂಟ್‌ಕೇಸ್‌ವೊಂದು ಪತ್ತೆಯಾಗಿರುವ ಕುರಿತು ನಗರ ಹೊರವಲಯದ ಟಮಕ ಬಳಿಯಿಂದ ವರದಿಯಾಗಿದೆ. ಸೂಟ್‌ಕೇಸ್‌ನಿಂದ ಶಬ್ದ ಹೊರ ಬರುತ್ತಿದ್ದು, ಇದರಿಂದಾಗಿ ಸ್ಫೋಟಕ ಇರುವ ಅನುಮಾನದ ಹಿನ್ನೆಲೆಯಲ್ಲಿ ಸ್ಥಳೀಯರು ಆತಂಕದಲ್ಲಿದ್ದಾರೆ. ಸೂಟ್‌ಕೇಸ್ ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಹೆಚ್ಚುವರಿ ಎಸ್ಪಿ ರವಿಶಂಕರ್, ಶ್ವಾನ ದಳ, ಬಾಂಬ್ ಸ್ಕ್ವಾಡ್ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿದ್ದಾರೆ. ಕ್ರೌನ್ ಕಂಪನಿಯ ಸೂಟ್‌ಕೇಸ್ ಇದಾಗಿದ್ದು, ಸೆನ್ಸಾರ್ ಇರುವ ಸೂಟ್‌ಕೇಸ್ ಆಗಿರುವ ಕಾರಣ

ಹೆದ್ದಾರಿ ಪಕ್ಕದಲ್ಲಿ ಸೂಟ್ ಕೇಸ್ ಪತ್ತೆ – ವಿಚಿತ್ರ ಶಬ್ದದಿಂದ ಭಯಭೀತರಾದ ಜನತೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಿಂಚಣಿಗಾಗಿ ಪಂಚಾಯತ್ ಗೆ ತೆವಳಿಕೊಂಡು ಹೋದ 70ರ ವೃದ್ದೆ- ವಿಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಸೆ. 25. 70 ವರ್ಷದ ಅಂಗವಿಕಲ ವೃದ್ದೆಯೊಬ್ಬರು ತಮ್ಮ ವೃದ್ಧಾಪ್ಯ ಪಿಂಚಣಿ ಪಡೆಯಲು ಸ್ಥಳೀಯ ಪಂಚಾಯತ್ ಕಚೇರಿಗೆ ಸುಮಾರು ಎರಡು ಕಿಲೋಮೀಟರ್ ತೆವಳಿಕೊಂಡು ಹೋದ ಘಟನೆ ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಸದ್ಯ ಮಹಿಳೆ ತೆವಳುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಪತುರಿ ದೆಹುರಿ ಎಂಬ ಹೆಸರಿನ ವೃದ್ಧ ಮಹಿಳೆ ಜೀವನೋಪಾಯಕ್ಕಾಗಿ ತನ್ನ ಪಿಂಚಣಿಯನ್ನೇ ಅವಲಂಬಿಸಿದ್ದಾರೆ. ಅವರಿಗೆ ಈ ಹಿಂದೆ ನಡೆದ ಅಪಘಾತದಿಂದ ಅಂಗವೈಕಲ್ಯ ಉಂಟಾಗಿ ಸರಿಯಾಗಿ ನಡೆಯಲು ಸಾಧ್ಯವಾಗುತ್ತಿಲ್ಲ

ಪಿಂಚಣಿಗಾಗಿ ಪಂಚಾಯತ್ ಗೆ ತೆವಳಿಕೊಂಡು ಹೋದ 70ರ ವೃದ್ದೆ- ವಿಡಿಯೋ ವೈರಲ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶಾರ್ಟ್ ಸರ್ಕ್ಯೂಟ್ ನಿಂದ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ

(ನ್ಯೂಸ್ ಕಡಬ) newskadaba.com ಸೆ. 25. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಚಲಿಸುತ್ತಿದ್ದ ಕಾರಿನಲ್ಲಿ ಹಠಾತ್ ಬೆಂಕಿ ಹೊತ್ತಿಕೊಂಡ ಘಟನೆ ಉಡುಪಿಯ ಎಂಟಿಆರ್ ಹೋಟೆಲ್ ಮುಂಭಾಗದ ರಸ್ತೆಯಲ್ಲಿ ನಡೆದಿದೆ. ಬ್ರಹ್ಮಗಿರಿಯ ಹಿರಿಯ ನಾಗರಿಕರೊಬ್ಬರು ತಮ್ಮ ಹಳೆಯ ಆಲ್ಟೋ ಕಾರನ್ನು ಚಲಾಯಿಸುತ್ತಿದ್ದಾಗ ಏಕಾಏಕಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ವೇಗವಾಗಿ ಕಾರಿನ ಮುಂಭಾಗಕ್ಕೆ ವ್ಯಾಪಿಸಿದೆ. ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.   ಕಾರಿನ ಬ್ಯಾಟರಿಯಿಂದ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ

ಶಾರ್ಟ್ ಸರ್ಕ್ಯೂಟ್ ನಿಂದ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಿಎಂ ಸಿದ್ದರಾಮಯ್ಯಗೆ ಬಿಗ್ ಶಾಕ್- ರಾಜ್ಯಪಾಲರ ಆದೇಶ ಎತ್ತಿಹಿಡಿದ ಹೈಕೋರ್ಟ್..!

(ನ್ಯೂಸ್ ಕಡಬ) newskadaba.com ಸೆ. 24. ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ತನಿಖೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಮುಡಾ ಹಗರಣಕ್ಕೆ ಸಂಬಂಧಿಸಿ ರಾಜ್ಯಪಾಲ ಮತ್ತು ಸಿಎಂ ನಡುವಿನ ಕಾನೂನು ಸಮರದಲ್ಲಿ ರಾಜ್ಯಪಾಲರ ಕ್ರಮವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಹಗರಣಕ್ಕೆ ಸಂಬಂಧಿಸಿ ರಾಜ್ಯಪಾರ ಕ್ರಮವನ್ನು ನ್ಯಾ.ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಎತ್ತಿಹಿಡಿದಿದ್ದು, ಸಿಎಂ ಸಿದ್ದರಾಮಯ್ಯಗೆ ಭಾರೀ ಹಿನ್ನಡೆಯಾಗಿದೆ. ಮುಡಾ ಪ್ರಕರಣದಲ್ಲಿ

ಸಿಎಂ ಸಿದ್ದರಾಮಯ್ಯಗೆ ಬಿಗ್ ಶಾಕ್- ರಾಜ್ಯಪಾಲರ ಆದೇಶ ಎತ್ತಿಹಿಡಿದ ಹೈಕೋರ್ಟ್..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾತ್ರಿ ಹೊತ್ತು ಕರ್ತವ್ಯ ನಿರ್ವಹಿಸುವ ಮಹಿಳಾ ವೈದ್ಯರ ಜೊತೆ ಮಹಿಳಾ ಸಿಬ್ಬಂದಿ ಕಡ್ಡಾಯ- ಆದೇಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 24. ಸರ್ಕಾರಿ ಆಸ್ಪತ್ರೆಗಳಲ್ಲಿ ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುವ ಮಹಿಳಾ ವೈದ್ಯರ ಜೊತೆ ಓರ್ವ ಮಹಿಳಾ ನರ್ಸ್ ನ್ನು ನಿಯೋಜಿಸುವುದು ಕಡ್ಡಾಯಗೊಳಿಸಿ ಎಂದು ಆರೋಗ್ಯ ಇಲಾಖೆ ಸೂಚನೆ ಹೊರಡಿಸಿದೆ. ಇತ್ತೀಚೆಗೆ ಕೋಲ್ಕತ್ತಾದ ಆಸ್ಪತ್ರೆಯಲ್ಲಿ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆ ಸಿಬ್ಬಂದಿಗಳು ನಡೆಸಿದ ಪ್ರತಿಭಟನೆಗಳು ಆಸ್ಪತ್ರೆಗಳಲ್ಲಿ ರಾತ್ರಿ ಹೊತ್ತು ಕೆಲಸ ಮಾಡುವ ಮಹಿಳಾ ಸಿಬ್ಬಂದಿಗಳಿಗೆ ಸೂಕ್ತ ರಕ್ಷಣೆ ನೀಡುವಂತೆ ಒತ್ತಾಯಿಸಿವೆ.  

ರಾತ್ರಿ ಹೊತ್ತು ಕರ್ತವ್ಯ ನಿರ್ವಹಿಸುವ ಮಹಿಳಾ ವೈದ್ಯರ ಜೊತೆ ಮಹಿಳಾ ಸಿಬ್ಬಂದಿ ಕಡ್ಡಾಯ- ಆದೇಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮುಡಾ ಹಗರಣ- ಇಂದು ತೀರ್ಪು ಪ್ರಕಟ; ಸಿಎಂ ನಿವಾಸದ ಬಳಿ ಬಿಗಿ ಬಂದೋಬಸ್ತ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 24. ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ವಿಚಾರವಾಗಿ ಹೈಕೋರ್ಟ್ ಇಂದು ತೀರ್ಪು ಪ್ರಕಟಿಸಲಿದೆ. ಈ ಹಿನ್ನೆಲೆಯಲ್ಲಿ ಸಿಎಂ ನಿವಾಸದ ಬಳಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಇಂದು ಮಧ್ಯಾಹ್ನ 12 ಗಂಟೆಗೆ ಹೈಕೋರ್ಟ್ ನಿಂದ ತೀರ್ಪು ಪ್ರಕಟವಾಗಲಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಮುಖ್ಯಮಂತ್ರಿಗಳ ನಿವಾಸ ಕಾವೇರಿ ಬಳಿ ಕಟ್ಟೆಚ್ಚರ ವಹಿಸಲಾಗಿದ್ದು, ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಒಂದು ವೇಳೆ ಸಿಎಂ

ಮುಡಾ ಹಗರಣ- ಇಂದು ತೀರ್ಪು ಪ್ರಕಟ; ಸಿಎಂ ನಿವಾಸದ ಬಳಿ ಬಿಗಿ ಬಂದೋಬಸ್ತ್..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಿಂದೂ ಕಾರ್ಯಕರ್ತರ ಬಂಧನ ಖಂಡಿಸಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 24. ಅನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿ ಹಿಂದೂ ಕಾರ್ಯಕರ್ತರನ್ನು ಬಂಧಿಸಲಾಗಿದ್ದು, ಈ ಘಟನೆಯನ್ನು ಖಂಡಿಸಿ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಸುಳ್ಯ ಠಾಣೆಯ ಗೇಟಿನ ಬಳಿಯಲ್ಲಿ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸುತ್ತಿರುವ ಕುರಿತು ವರದಿಯಾಗಿದೆ.

ಹಿಂದೂ ಕಾರ್ಯಕರ್ತರ ಬಂಧನ ಖಂಡಿಸಿ ಪ್ರತಿಭಟನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top