ಬ್ರೇಕಿಂಗ್ ನ್ಯೂಸ್

ಬಿಜೆಪಿ ಶಾಸಕ ಮುನಿರತ್ನ ಮತ್ತೆ ಬಂಧನ: ಅತ್ಯಾಚಾರ ಆರೋಪ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 20.  ಶಾಸಕ ಮುನಿರತ್ನ 2020ರಿಂದ 2022ರವರೆಗೆ  ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಬ್ಲ್ಯಾಕ್​ಮೇಲ್​ ಮಾಡಿದ್ದಾರೆ ಎಂದು ರಾಜರಾಜೇಶ್ವರಿ ನಗರದ ಮಹಿಳೆಯೋರ್ವರು ದೂರು ದಾಖಲಿಸಿದ್ದಾರೆ. ಇದೀಗ ಮತ್ತೊಮ್ಮೆ ರಾಜರಾಜೇಶ್ವರಿ​ ನಗರ ಬಿಜೆಪಿ ಶಾಸಕ ಮುನಿರತ್ನ ಅವರು, ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಮತ್ತೆ ಬಂಧನಕ್ಕೊಳಗಾಗಿದ್ದಾರೆ.ಸಂತ್ರಸ್ತೆ ದೂರಿನ ಆಧಾರದ ಮೇಲೆ ಕಗ್ಗಲೀಪುರ ಠಾಣೆ ಪೊಲೀಸರು ಶಾಸಕ ಮುನಿರತ್ನ ವಿರುದ್ಧ ಎಫ್​ಐಆರ್​ ದಾಖಲಿಸಿದ್ದು, ಈ ಸಂಬಂಧ ಮುನಿರತ್ನ ಅವರನ್ನು ಬಂಧನಕ್ಕೊಳಪಡಿಸಿದ್ದಾರೆ.

ಬಿಜೆಪಿ ಶಾಸಕ ಮುನಿರತ್ನ ಮತ್ತೆ ಬಂಧನ: ಅತ್ಯಾಚಾರ ಆರೋಪ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸೆ. 21ರಿಂದ ಕಿರಿಯ ವೈದ್ಯರಿಂದ ತುರ್ತು ಸೇವೆ ಆರಂಭಿಸಲು ನಿರ್ಧಾರ

(ನ್ಯೂಸ್ ಕಡಬ) newskadaba.com ಕೋಲ್ಕತ್ತಾ, ಸೆ. 20. ಕೋಲ್ಕತ್ತಾದ ಆರ್‌ಜಿ ಕರ್ ಮೆಡಿಕಲ್ ಕಾಲೇಜಿನ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯನ್ನು ವಿರೋಧಿಸಿ ಕಳೆದ 41 ದಿನಗಳಿಂದ ಕಿರಿಯ ವೈದ್ಯರು ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ಕೊಂಚ ಸಡಿಲಿಕೆ ಮಾಡಿ ನಾಳೆಯಿಂದ(ಸೆ. 21) ತುರ್ತು ಸೇವೆಗಳನ್ನು ಪುನರಾರಂಭಿಸಲು ನಿರ್ಧರಿಸಿರುವುದಾಗಿ ತಿಳಿದುಬಂದಿದೆ. ಈ ಕುರಿತು ಹೇಳಿಕೆ ನೀಡಿರುವ ಕಿರಿಯ ವೈದ್ಯರು, ಇಂದು ಮಧ್ಯಾಹ್ನ 3 ಗಂಟೆಗೆ ಸಿಬಿಐ ಕಚೇರಿಯವರೆಗೆ ರ‍್ಯಾಲಿ ನಡೆಸಿ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಶೀಘ್ರ ನಡೆಸಬೇಕು ಎಂದು

ಸೆ. 21ರಿಂದ ಕಿರಿಯ ವೈದ್ಯರಿಂದ ತುರ್ತು ಸೇವೆ ಆರಂಭಿಸಲು ನಿರ್ಧಾರ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರೈಲು ಹತ್ತಲು ಹೋಗಿ ಆಯತಪ್ಪಿ ಬಿದ್ದ ಮಹಿಳೆಯ ರಕ್ಷಿಸಿದ ಆರ್.ಪಿಎಫ್ ಮಹಿಳಾ ಸಿಬ್ಬಂದಿ- ವ್ಯಾಪಕ ಮೆಚ್ಚುಗೆ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 20. ಚಲಿಸುತ್ತಿರುವ ರೈಲನ್ನು ಹತ್ತಲು ಹೋಗಿ ಮಹಿಳೆ ಆಯತಪ್ಪಿ ಬಿದ್ದಿದ್ದು, ತಕ್ಷಣವೇ ಸ್ಥಳದಲ್ಲಿದ್ದ ಆರ್ ಪಿಎಫ್ ಮಹಿಳಾ ಸಿಬ್ಬಂದಿ ರಕ್ಷಣೆ ಮಾಡಿರುವ ಕುರಿತು ಉಡುಪಿಯಿಂದ ವರದಿಯಾಗಿದೆ. ಮಂಗಳೂರು- ಮಡಗಾಂವ್ ಮಧ್ಯೆ ಚಲಿಸುತ್ತಿದ್ದ ರೈಲನ್ನು ಹತ್ತಲು ಮಹಿಳೆ ಓಡುತ್ತಿದ್ದ ವೇಳೆ ಆಯತಪ್ಪಿ ಬಿದ್ದಿದ್ದು, ತಕ್ಷಣವೇ ಸಮಯಪ್ರಜ್ಞೆ ಮೆರೆದ ಆರ್ಪಿಎಫ್ ಮಹಿಳಾ ಸಿಬ್ಬಂದಿ ಮಹಿಳೆಯನ್ನು ರಕ್ಷಿಸಿದ್ದಾರೆ. ಇದೀಗ ಆರ್ಪಿಎಫ್ ಮಹಿಳಾ ಸಿಬ್ಬಂದಿ ಕಾರ್ಯಕ್ಕೆ ವ್ಯಾಪಕ ಶ್ಲಾಘನೆ ವ್ಯಕ್ತವಾಗುತ್ತಿದೆ.

ರೈಲು ಹತ್ತಲು ಹೋಗಿ ಆಯತಪ್ಪಿ ಬಿದ್ದ ಮಹಿಳೆಯ ರಕ್ಷಿಸಿದ ಆರ್.ಪಿಎಫ್ ಮಹಿಳಾ ಸಿಬ್ಬಂದಿ- ವ್ಯಾಪಕ ಮೆಚ್ಚುಗೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
crime, arrest, suspected

ಲಂಚಕ್ಕೆ ಬೇಡಿಕೆ- ಪಟ್ಟಣ ಪಂಚಾಯತ್ ಇಂಜಿನಿಯರ್, ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 20. ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿ ಕಿನ್ನಿಗೋಳಿ ಪಟ್ಟಣ ಪಂಚಾಯತ್‌ನ ಜೂನಿಯರ್ ಇಂಜಿನಿಯರ್ ಎಂ.ಆರ್ ಸ್ವಾಮಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಕುರಿತು ವರದಿಯಾಗಿದೆ. ದೂರಿನ ಪ್ರಕಾರ, ಪಿಡಬ್ಲ್ಯೂಡಿ ಕ್ಲಾಸ್-1 ಗುತ್ತಿಗೆದಾರರೋರ್ವರು 2022-23ನೇ ಸಾಲಿನ 5ನೇ ಹಣಕಾಸು ಯೋಜನೆಯಲ್ಲಿ ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕೋಡಿ ಸರಕಾರಿ ಕೆರೆ ಅಭಿವೃದ್ಧಿಪಡಿಸುವ ಕಾಮಗಾರಿಯ ಕಾಂಟ್ರಾಕ್ಟ್ ಕೆಲಸವನ್ನು ನಿರ್ವಹಿಸಿದ್ದರು. ಕಾಮಗಾರಿಯ ಒಟ್ಟು 9,77,154 ರೂ. ಮೊತ್ತದ ಬಿಲ್ ಮಂಜೂರಾತಿಯ ಬಗ್ಗೆ ಕಿನ್ನಿಗೊಳಿ ಪಟ್ಟಣ ಪಂಚಾಯತ್‌ನ

ಲಂಚಕ್ಕೆ ಬೇಡಿಕೆ- ಪಟ್ಟಣ ಪಂಚಾಯತ್ ಇಂಜಿನಿಯರ್, ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ರಸ್ತೆ ಅಪಘಾತ: ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಚಂಡೀಗಢ, ಸೆ. 20.  ಬಿಜೆಪಿ ನಾಯಕನ ಅಜಾಗರೂಕ ಕಾರು ಚಾಲನೆಯಿಂದ ಭೀಕರ ಅಪಘಾತ ಸಂಭವಿಸಿ ಯುವಕನೊಬ್ಬ ಮೃತಪಟ್ಟ ಘಟನೆ ಗುರುಗ್ರಾಮದಲ್ಲಿ ವರದಿಯಾಗಿದೆ. ಮೃತಪಟ್ಟ ಯುವಕನನ್ನು ಅಕ್ಷತ್ ಗಾರ್ಗ್ ಎಂದು ಗುರುತಿಸಲಾಗಿದೆ. ಮಹೇಂದ್ರಾ 3XO ಕಾರಿನಲ್ಲಿ ಚಲಿಸುತ್ತಿದ್ದ ವೇಳೆ ಎದುರಿಗೆ ಬಂದ ಬೈಕ್‌ಗೆ ಕಾರು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.  

ರಸ್ತೆ ಅಪಘಾತ: ಯುವಕ ಮೃತ್ಯು..! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

BSY ಗೆ ತಾತ್ಕಾಲಿಕ ರಿಲೀಫ್ – ಸೆ.27ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 19. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಪೋಕ್ಸೋ ಕೇಸ್ ನ ವಿಚಾರಣೆಯನ್ನು ಸೆ. 27ಕ್ಕೆ ಮುಂದೂಡಲಾಗಿದ್ದು, ಅವರಿಗೆ ಕೊಂಚ ರಿಲೀಫ್ ಸಿಕ್ಕಿದಂತಾಗಿದೆ. ಮಾಜಿ ಸಿಎಂ ಬಿಎಸ್ ವೈ ವಿರುದ್ದದ ಪೋಕ್ಸೋ ಕೇಸ್ ಗೆ ಸಂಬಂಧಿಸಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ನ್ಯಾಯಪೀಠವು ಇಂದು ನಡೆಸಿದ್ದು, ಅರ್ಜಿಯ ವಿಚಾರಣೆಯನ್ನು ಕೋರ್ಟ್ ಸೆ.27ಕ್ಕೆ ಮುಂದೂಡಿದೆ ಎನ್ನಲಾಗಿದೆ. ಸಹಾಯಕ್ಕಾಗಿ ಯಾಚಿಸಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನಿವಾಸಕ್ಕೆ

BSY ಗೆ ತಾತ್ಕಾಲಿಕ ರಿಲೀಫ್ – ಸೆ.27ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಡ್ರಗ್ಸ್ ಹಾವಳಿ ಮಟ್ಟಹಾಕಲು ಟಾಸ್ಕ್ ಫೋರ್ಸ್ ರಚನೆ- ಸಿಎಂ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 18. ರಾಜ್ಯಾದ್ಯಂತ ಹೆಚ್ಚಾಗಿರುವ ಮಾದಕ ವಸ್ತುಗಳ ಹಾವಳಿಯನ್ನು ಮಟ್ಟಹಾಕಲು ರಾಜ್ಯಮಟ್ಟದಲ್ಲಿ ವಿಶೇಷವಾದ ಕಾರ್ಯಪಡೆ ರಚನೆಯ ಜೊತೆಗೆ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಹಿರಿಯ ಸಚಿವರು ಹಾಗೂ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾದಕವಸ್ತುಗಳ ನಿಯಂತ್ರಣಕ್ಕೆ ಈಗಾಗಲೇ ಸರ್ಕಾರದ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ರಾಜ್ಯಮಟ್ಟದ ಉನ್ನತಾಧಿಕಾರಿಗಳ ಸಮಿತಿ ಹಾಗೂ ಜಿಲ್ಲಾಮಟ್ಟದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ

ಡ್ರಗ್ಸ್ ಹಾವಳಿ ಮಟ್ಟಹಾಕಲು ಟಾಸ್ಕ್ ಫೋರ್ಸ್ ರಚನೆ- ಸಿಎಂ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

200 ಆನೆಗಳ ಸಹಿತ ಕಾಡು ಪ್ರಾಣಿಗಳನ್ನು ಕೊಲ್ಲಲು ಅನುಮತಿಸಿದ ಜಿಂಬಾಬ್ವೆ

(ನ್ಯೂಸ್ ಕಡಬ) newskadaba.com ನಮೀಬಿಯಾ, ಸೆ. 18. ನಮೀಬಿಯಾದ ಬಳಿಕ ಭೀಕರ ಬರಗಾಲಕ್ಕೆ ತುತ್ತಾಗಿರುವ ಆಫ್ರಿಕಾ ಖಂಡದ ಇನ್ನೊಂದು ದೇಶ ಅಲ್ಲಿನ ಕಾಡು ಪ್ರಾಣಿಗಳನ್ನು ಕೊಲ್ಲಲ್ಲು ಅನುಮತಿ ನೀಡಿದ್ದು, ನಾವು ಸುಮಾರು 200 ಆನೆಗಳನ್ನು ಕೊಲ್ಲುತ್ತೇವೆ. ಅವುಗಳ ಮಾಂಸವನ್ನು ಅವಶ್ಯವಿರುವ ಸಮುದಾಯಗಳ ಜನರಿಗೆ ಹಂಚುತ್ತೇವೆ ಎಂದು ಜಿಂಬಾಬ್ವೆ ತಿಳಿಸಿದೆ. ಜಿಂಬಾಬ್ವೆ ರಾಷ್ಟ್ರೀಯ ಉದ್ಯಾನವನ ಮತ್ತು ವನ್ಯಜೀವಿ ನಿರ್ವಹಣಾ ಪ್ರಾಧಿಕಾರದ ವಕ್ತಾರ ತಿನಶೆ ಫರವೊ ಪ್ರತಿಕ್ರಿಯಿಸಿ, ನಾವು ಅವಶ್ಯವಿರುವ ಸಮುದಾಯದ ಜನರಿಗೆ ಪ್ರಾಣಿಗಳನ್ನು ಬೇಟೆಯಾಡಲು ಅನುಮತಿ ನೀಡುತ್ತೇವೆ. ಅದೇ

200 ಆನೆಗಳ ಸಹಿತ ಕಾಡು ಪ್ರಾಣಿಗಳನ್ನು ಕೊಲ್ಲಲು ಅನುಮತಿಸಿದ ಜಿಂಬಾಬ್ವೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಲೈನ್ ದುರಸ್ತಿ ವೇಳೆ ವಿದ್ಯುತ್ ಶಾಕ್- ಸಿಬ್ಬಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 18. ವಿದ್ಯುತ್ ಲೈನ್ ಬದಲಾವಣೆ ಮಾಡುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿದ ಪರಿಣಾಮ ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಿಬ್ಬಂದಿ ಗಾಯಗೊಂಡ ಘಟನೆ ತಾಲೂಕಿನ ಕೊಡಿಯಾಲ್ ಬೈಲಿನಲ್ಲಿ ನಡೆದಿದೆ. ಗಾಯಗೊಂಡವರನ್ನು ಖಾಸಗಿ ಇಲೆಕ್ಟ್ರಿಕಲ್ ಸಂಸ್ಥೆಯ ಸಿಬ್ಬಂದಿ ಭವಿತ್ ಎಂದು ಗುರುತಿಸಲಾಗಿದೆ. ವಿದ್ಯುತ್ ಕಂಬವೇರಿ ವಿದ್ಯುತ್ ಬದಲಾವಣೆ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಲೈನ್ ಸ್ಪರ್ಶಿಸಿ ವಿದ್ಯುತ್ ಶಾಕ್ ತಗಲಿದ ಪರಿಣಾಮ ಕಂಬದಿಂದ ನೆಲಕ್ಕೆ ಬಿದ್ದ ಭವಿತ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನುಸುಳ್ಯದ ಖಾಸಗಿ

ಲೈನ್ ದುರಸ್ತಿ ವೇಳೆ ವಿದ್ಯುತ್ ಶಾಕ್- ಸಿಬ್ಬಂದಿಗೆ ಗಾಯ Read More »

ಬ್ರೇಕಿಂಗ್ ನ್ಯೂಸ್
Scroll to Top