ಬ್ರೇಕಿಂಗ್ ನ್ಯೂಸ್

ಬಸ್ ಫುಟ್ಬೋರ್ಡ್ ನಿಂದ ಬಿದ್ದ ವಿದ್ಯಾರ್ಥಿ..!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13. ಬಸ್ಸಿನ ಫುಟ್ ಬೋರ್ಡಲ್ಲಿ ನೇತಾಡುತ್ತಿದ್ದ ವಿದ್ಯಾರ್ಥಿಯೊಬ್ಬ ರಸ್ತೆಗೆಸೆಯಲ್ಪಟ್ಟ ಘಟನೆ ತೊಕ್ಕೊಟ್ಟು ಮೇಲ್ಸೆತುವೆ ಬಳಿ ನಡೆದಿದೆ. ತಲಪಾಡಿಯಿಂದ ಮಂಗಳೂರಿಗೆ ಬರುತ್ತಿದ್ದ ಸಿಟಿ ಬಸ್ಸೊಂದು ಪ್ರಯಾಣಿಕರನ್ನು ತುಂಬಿಸಿಕೊಂಡು ಬರುತ್ತಿದ್ದಾಗ ತೊಕ್ಕೊಟ್ಟು ಮೇಲ್ಸೇತುವೆಯಲ್ಲಿ ಚಾಲಕ ದಿಢೀರ್‌ ಬ್ರೇಕ್‌ ಹಾಕಿದ ಪರಿಣಾಮ ಫುಟ್‌ಬೋರ್ಡ್‌ನಲ್ಲಿ ನೇತಾಡುತ್ತಿದ್ದ ವಿದ್ಯಾರ್ಥಿ ಬಸ್ಸಿನಿಂದ ಕೆಳಕ್ಕೆ ಬಿದ್ದಿದ್ದಾನೆ ಎನ್ನಲಾಗಿದೆ. ಘಟನೆಯಲ್ಲಿ ವಿದ್ಯಾರ್ಥಿ ಅಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ.

ಬಸ್ ಫುಟ್ಬೋರ್ಡ್ ನಿಂದ ಬಿದ್ದ ವಿದ್ಯಾರ್ಥಿ..! Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಲೋ ಬಿಪಿ- ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು..!

(ನ್ಯೂಸ್ ಕಡಬ) newskadaba.com ರಾಯಚೂರು, ಸೆ. 11. ಲೋ ಬಿಪಿ ಉಂಟಾಗಿ ಕುಸಿದುಬಿದ್ದ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ರಾಯಚೂರಿನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ತರುಣಕುಮಾರ್ ಎಂದು ಗುರುತಿಸಲಾಗಿದೆ. ಶಾಲೆಯಲ್ಲಿ ಕುಸಿದುಬಿದ್ದ ವಿದ್ಯಾರ್ಥಿಯನ್ನು ಶಾಲಾ ಆಡಳಿತ ಮಂಡಳಿಯವರು ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಸಾಗಿಸುವ ವೇಳೆ ದಾರಿಮಧ್ಯೆ ಬಾಲಕ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಲೋ ಬಿಪಿ- ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗಣೇಶ ಹಬ್ಬ- 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

(ನ್ಯೂಸ್ ಕಡಬ) newskadaba.com ಮುಂಬಯಿ, ಸೆ. 07. ರಿಲಯನ್ಸ್ ಅಧ್ಯಕ್ಷ ಮುಖೇಶ್ ಅಂಬಾನಿಯವರ ಕಿರಿಯ ಪುತ್ರ ಅನಂತ್ ಅಂಬಾನಿಅವರು ಮೂಂಬೈನಲ್ಲಿರುವ ಪ್ರಸಿದ್ದ ಲಾಲ್ಬಾಗ್ ಚಾ ರಾಜ ವಿನಾಯಕನಿಗೆ 15 ಕೋಟಿ ರೂ. ಮೌಲ್ಯದ 20 ಕೆಜಿ ಚಿನ್ನದ ಕಿರೀಟವನ್ನು ಕಾಣಿಕೆಯಾಗಿ ನೀಡಿದ್ದಾರೆ. ಇಲ್ಲಿ 10 ದಿನಗಳ ಕಾಲ ಗಣೇಶ ವಿಗ್ರಹವನ್ನು ಪೂಜಿಸಲಾಗುತ್ತದೆ. ಈ ವೇಳೆ  ಮುಂಬೈನ ಉದ್ಯಮಿಗಳು, ಚಲನಚಿತ್ರದ ನಟ ನಟಿಯರು, ರಾಜಕಾರಣಿಗಳು ಇಲ್ಲಿಗೆ ಭೇಟಿ ನೀಡಿ ಗಣೇಶನ ದರ್ಶನ ಪಡೆಯುತ್ತಾರೆ.

ಗಣೇಶ ಹಬ್ಬ- 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗಣೇಶ ಹಬ್ಬ- ಮದ್ಯ ಮಾರಾಟ ನಿಷೇಧ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 07. ಗಣೇಶ ಚತುರ್ಥಿ ಆಚರಣೆಯ ಪ್ರಯುಕ್ತ ಹೆಚ್ಚಿನ ಸ್ಥಳಗಳಲ್ಲಿ ಗಣೇಶ ವಿಗ್ರಹ ವಿಸರ್ಜನೆ ನಡೆಯುವ ಸಂದರ್ಭ ಬಾರ್ ಮತ್ತು ವೈನ್‌ ಶಾಪ್‌ಗಳು ತೆರೆದಿದ್ದಲ್ಲಿ ಮದ್ಯಪಾನೀಯರು ಮದ್ಯ ಸೇವಿಸಿ ಗಲಭೆಮಾಡುವ ಸಾಧ್ಯತೆ ಇದ್ದು, ಹೀಗಾಗಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ (ಭಾರತೀಯ ಮತ್ತು ವಿದೇಶಿಯ ಮದ್ಯ ಮಾರಾಟ) ನಿಯಮಗಳು 1968 ರ ನಿಯಮ 3 ರಡಿ ನೀಡಿರುವ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಅಂಗಡಿಗಳಲ್ಲಿ

ಗಣೇಶ ಹಬ್ಬ- ಮದ್ಯ ಮಾರಾಟ ನಿಷೇಧ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ನಟ ದರ್ಶನ್ ಸೆಲ್ ಗೆ ಟಿವಿ ಅಳವಡಿಕೆ

(ನ್ಯೂಸ್ ಕಡಬ) newskadaba.com ಬಳ್ಳಾರಿ, ಸೆ. 07. ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್‌ ಇರುವ ಸೆಲ್ ಗೆ ಟಿವಿ ಅಳವಡಿಸಲಾಗಿದ್ದು, ಈ ಮೂಲಕ ಮೂರನೇ ಬಾರಿಗೆ ದರ್ಶನ್ ಅವರ ಬೇಡಿಕೆಯನ್ನು ಜೈಲಾಧಿಕಾರಿಗಳು ಈಡೇರಿಕೆ ಮಾಡಿರುವುದಾಗಿ ವರದಿಯಾಗಿದೆ. ನಟ ದರ್ಶನ್ ಕಳೆದ ಐದು ದಿನಗಳ ಹಿಂದೆ ಟಿವಿಗಾಗಿ ಬೇಡಿಕೆ ಇಟ್ಟಿದ್ದರು. ಇದೀಗ ಕೊನೆಗೂ ಇಂದು ಬೆಳಗ್ಗೆ ದರ್ಶನ್ ಇರುವ ಸೆಲ್‌ಗೆ ಟಿವಿ ಅಳವಡಿಸಲಾಗಿದೆ.

ನಟ ದರ್ಶನ್ ಸೆಲ್ ಗೆ ಟಿವಿ ಅಳವಡಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕುಸ್ತಿಪಟು ಪೋಗಟ್ ಹಾಗೂ ಬಜರಂಗ್ ಪೂನಿಯಾ ಕಾಂಗ್ರೆಸ್ ಗೆ ಸೇರ್ಪಡೆ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಸೆ. 06. ಕುಸ್ತಿಪಟುಗಳಾದ ವಿನೇಶ್ ಫೋಗಟ್ ಹಾಗೂ ಬಜರಂಗ್ ಪೂನಿಯಾ ರವರು ಎಐಸಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಕ್ಷಕ್ಕೆ ಸೇರ್ಪಡೆಯಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪೂನಿಯಾರವರನ್ನು ಕೆ.ಸಿ ವೇಣುಗೋಪಾಲ್ ಶಾಲು ಹಾಕಿ ಪಕ್ಷಕ್ಕೆ ಸ್ವಾಗತಿಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮೊದಲು ವಿನೇಶ್ ಫೋಗಟ್ ಮತ್ತು ಬಜರಂಗ್ ಪೂನಿಯಾ ಕಾಂಗ್ರೆಸ್ ಅಧ್ಯಕ್ಷ  ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಹಿರಿಯ ನಾಯಕರನ್ನು ಭೇಟಿ ಮಾಡಿ ಮಾತುಕತೆಯನ್ನು

ಕುಸ್ತಿಪಟು ಪೋಗಟ್ ಹಾಗೂ ಬಜರಂಗ್ ಪೂನಿಯಾ ಕಾಂಗ್ರೆಸ್ ಗೆ ಸೇರ್ಪಡೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನೂಜಿಬಾಳ್ತಿಲ: ಭಾರೀ ಮಳೆಗೆ ಮನೆ ನೆಲಸಮ; ಕಡಬ ತಹಶೀಲ್ದಾರ್ ಭೇಟಿ, ಪರಿಶೀಲನೆ

(ನ್ಯೂಸ್ ಕಡಬ) newskadaba.com ನೂಜಿಬಾಳ್ತಿಲ, ಸೆ. 06. ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ಫಕೀರ ಎಂಬವರ ಮನೆಯು ಸಂಪೂರ್ಣ ನೆಲಸಮಗೊಂಡ ಘಟನೆ ನೂಜಿಬಾಳ್ತಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಬಲಾಡಿ ಪಂಜಳ ಎಂಬಲ್ಲಿ ನಡೆದಿದೆ. ಘಟನಾ ಸ್ಥಳಕ್ಕೆ ಕಡಬ ತಹಶೀಲ್ದಾರ್ ಪ್ರಭಾಕರ ಖಜೂರೆ, ಗ್ರಾಮಕರಣಿಕ ಸಂತೋಷ್, ಗ್ರಾಮ ಪಂಚಾಯತ್ ಪ್ರಭಾರ ಪಿಡಿಒ ಗುರುವ ಎಸ್, ಗ್ರಾಮ ಪಂಚಾಯತ್ ಸದಸ್ಯರಾದ ವಸಂತ ಕುಬಲಾಡಿ ಗ್ರಾಮ ಸಹಾಯಕ ಗ್ರಾಮ ಪಂಚಾಯತ್ ಸಿಬ್ಬಂದಿ ಭೇಟಿ ನೀಡಿದ್ದರು.

ನೂಜಿಬಾಳ್ತಿಲ: ಭಾರೀ ಮಳೆಗೆ ಮನೆ ನೆಲಸಮ; ಕಡಬ ತಹಶೀಲ್ದಾರ್ ಭೇಟಿ, ಪರಿಶೀಲನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಆರ್.ಜಿಕರ್ ಮಾಜಿ ಪ್ರಿನ್ಸಿಪಾಲ್ ಸಂದೀಪ್ ಮನೆ ಮೇಲೆ ಇಡಿ ದಾಳಿ

(ನ್ಯೂಸ್ ಕಡಬ) newskadaba.com ಕೋಲ್ಕತ್ತಾ, ಸೆ. 06. ಇಲ್ಲಿನ ಆರ್ಜಿಕರ್‌ ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್‌ ಘೋಷ್‌ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯವು ದಾಳಿ ನಡೆಸಿದ್ದು, ಸರ್ಕಾರಿ ಸಂಸ್ಥೆಯಲ್ಲಿ ನಡೆದ ಆರ್ಥಿಕ ಹಗರಣದ ಭಾಗವಾಗಿ ದಾಳಿ ನಡೆದಿದೆ ಎನ್ನಲಾಗಿದೆ. ಸಂದೀಪ್‌ ಘೋಷ್‌ ಅವರ ಅಧಿಕಾರಾವಧಿಯಲ್ಲಿ ಆಸ್ಪತ್ರೆಯಲ್ಲಿ ನಡೆದ ಹಣಕಾಸು ಅಕ್ರಮಗಳ ಆರೋಪವೇ ಕೇಂದ್ರೀಯ ಸಂಸ್ಥೆಗಳ ತನಿಖೆಗೆ ಕಾರಣವಾಗಿದೆ. ಸಂದೀಪ್‌ ಘೋಷ್‌ ಅವರು ಆಪಾದಿತ ಹಣಕಾಸು ಅಕ್ರಮಗಳ ಕುರಿತು ಸಿಬಿಐ ತನಿಖೆಗೆ ಆದೇಶಿಸಿದ ಕೋಲ್ಕತ್ತಾ ಹೈಕೋರ್ಟ್‌

ಆರ್.ಜಿಕರ್ ಮಾಜಿ ಪ್ರಿನ್ಸಿಪಾಲ್ ಸಂದೀಪ್ ಮನೆ ಮೇಲೆ ಇಡಿ ದಾಳಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೇಶದಲ್ಲಿ ವಿಮಾನ ತಯಾರಿಕಾ ಕೇಂದ್ರ ಶೀಘ್ರದಲ್ಲೇ ಆರಂಭ..!

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 05. ವಿಮಾನ ತಯಾರಿಕಾ ಕಾರ್ಯವನ್ನು ಭಾರತದಲ್ಲಿ ಅತಿ ಶೀಘ್ರದಲ್ಲೇ ಆರಂಭಿಸುವುದಾಗಿ ಕೇಂದ್ರ ವಿಮಾನಯಾನ ಸಚಿವ ಕೆ ರಾಮಮೋಹನ್‌ ನಾಯ್ದು ಹೇಳಿದ್ದಾರೆ. ಈ ಕುರಿತು ದೆಹಲಿಯಲ್ಲಿ ನಡೆದ ಸಮಾವೇಶವೊಂದರಲ್ಲಿ ಮಾತನಾಡಿದ ಅವರು, ಏರ್‌ ಕ್ರಾಫ್ಟ್‌ ಮ್ಯಾನುಫ್ಯಾಕ್ಟರಿಂಗ್‌ ನಲ್ಲಿ ಭಾರತವನ್ನು ವಿಶ್ವದ ಅಡ್ಡೆಯನ್ನಾಗಿ ಮಾಡುವ ಗುರಿ ಇದೆ. ಇದಕ್ಕಾಗಿ ಸ್ಪೆಷಲ್‌ ಪರ್ಪೋಸ್‌ ವೆಹಿಕಲ್‌ ಮೂಲಕ ಒಂದು ವಿಶೇಷ ತಂಡ ರಚಿಸುವ ಪ್ಲಾನ್‌ ಹೊಂದಿರುವುದಾಗಿಯೂ, ಸರ್ಕಾರದ ಈ ಗುರಿಯಲ್ಲಿ HAL ಪಾತ್ರ ಮಹತ್ವದ್ದಾಗಿರಲಿದೆ ಎಂದೂ

ದೇಶದಲ್ಲಿ ವಿಮಾನ ತಯಾರಿಕಾ ಕೇಂದ್ರ ಶೀಘ್ರದಲ್ಲೇ ಆರಂಭ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಎನ್‌ ಕೌಂಟರ್‌ ನಲ್ಲಿ 6 ಮಾವೋವಾದಿಗಳ ಹತ್ಯೆ..! ಇಬ್ಬರು ಪೊಲೀಸ್ ಸಿಬ್ಬಂದಿಗೆ ಗಾಯ  

(ನ್ಯೂಸ್ ಕಡಬ) newskadaba.com  ತೆಲಂಗಾಣ, ಸೆ. 5. ಭದ್ರಾದ್ರಿ ಕೊತಗುಡೆಂ ಜಿಲ್ಲೆಯ ನಕ್ಸಲೀಯರ ಭದ್ರಕೋಟೆಯಾಗಿದ್ದ ಕರಕಗುಡೆಂ ಮಂಡಲದ ನೀಲಾದ್ರಿಗುಟ್ಟಾ ಅರಣ್ಯ ಪ್ರದೇಶದಲ್ಲಿ ಬೆಳಿಗ್ಗೆ ನಡೆದ ಎನ್‌ ಕೌಂಟರ್‌ ನಲ್ಲಿ 6 ಮಾವೋವಾದಿಗಳು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಇಂದು ಬೆಳಿಗ್ಗೆ ಅರಣ್ಯ ಪ್ರದೇಶದಲ್ಲಿ ಪೊಲೀಸರು ಕೂಂಬಿಂಗ್ ಕಾರ್ಯಾಚರಣೆ ನಡೆಸುತ್ತಿದ್ದಾಗ ನೀಲಾಂದ್ರಿಗುಟ್ಟದ ಬೆಟ್ಟದ ಬಳಿ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸ್ ತಿಳಿಸಿದ್ದಾರೆ. ಛತ್ತೀಸ್ ಗಢ ಮೂಲದ ಶಸ್ತ್ರಸಜ್ಜಿತ ಮಾವೋವಾದಿ ಬಂಡುಕೋರರ ಗುಂಪು ಇತ್ತೀಚೆಗೆ ಅರಣ್ಯದ

ಎನ್‌ ಕೌಂಟರ್‌ ನಲ್ಲಿ 6 ಮಾವೋವಾದಿಗಳ ಹತ್ಯೆ..! ಇಬ್ಬರು ಪೊಲೀಸ್ ಸಿಬ್ಬಂದಿಗೆ ಗಾಯ   Read More »

ಬ್ರೇಕಿಂಗ್ ನ್ಯೂಸ್
Scroll to Top