ಬ್ರೇಕಿಂಗ್ ನ್ಯೂಸ್

ಕಡಬ: ನೇಣು ಬಿಗಿದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ)‌ newskadaba.com ಕಡಬ, ಜು.29. ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಸಮೀಪದ ಕಳಾರ ಎಂಬಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕಳಾರ ನಿವಾಸಿ ಮುಸ್ತಫಾ(33) ಎಂದು ಗುರುತಿಸಲಾಗಿದೆ. ಸೋಮವಾರದಂದು ಬೆಳಿಗ್ಗೆ ಮುಸ್ತಫಾ ಅವರನ್ನು ಹುಡುಕಾಡಿದಾಗ ಹಳೆ ಮನೆಯೊಂದರಲ್ಲಿ ಮೊಬೈಲ್ ರಿಂಗ್ ಆಗುತ್ತಿದ್ದು ಬಳಿಕ ಸ್ಥಳೀಯರು ಗಾಜು ಒಡೆದು ನೋಡಿದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ. ಆತ್ಮಹತ್ಯೆ ಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಕಡಬ ಪೊಲೀಸರು […]

ಕಡಬ: ನೇಣು ಬಿಗಿದು ಯುವಕ ಆತ್ಮಹತ್ಯೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ನಿಫಾ ಸೋಂಕಿಗೆ ತುತ್ತಾಗಿ ಕಳೆದ 8 ತಿಂಗಳಿನಿಂದ ಕೋಮಾವಸ್ಥೆಯಲ್ಲಿ 24ರ ಹರೆಯದ ಕಡಬದ ಯುವಕ

(ನ್ಯೂಸ್ ಕಡಬ) newskadaba.com ಕಡಬ, ಜು.28. ನಿಫಾ ವೈರಸ್ ಬಾಧಿಸಿದ್ದ ರೋಗಿಗೆ ಆರೈಕೆ ನೀಡಿದ್ದ ಕಡಬದ ನರ್ಸ್ ಓರ್ವರು ನಿಫಾ ವೈರಸ್ ಗೆ ತುತ್ತಾಗಿ ಕಳೆದ ಎಂಟು ತಿಂಗಳಿನಿಂದ ಕೋಮಾದಲ್ಲಿ ದಿನ ದೂಡುತ್ತಿರುವ ಹೃದಯ ವಿದ್ರಾವಕ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಡಬ ತಾಲೂಕಿನ ಐತ್ತೂರು ಗ್ರಾಮದ ಮರ್ಧಾಳ ಸಮೀಪದ ತುಂಬ್ಯ ನಿವಾಸಿ ತೋಮಸ್ ಟಿ.ಸಿ. ಎಂಬವರ ಪುತ್ರ ಟಿಟ್ಟೋ ತೋಮಸ್(24) ಇದೀಗ ಜೀವನ್ಮರಣ ಸ್ಥಿತಿಯಲ್ಲಿ ದಿನದೂಡುತ್ತಿರುವ ಯುವಕ. ಬಿಎಸ್ಸಿ ನರ್ಸಿಂಗ್ ಪದವೀಧರನಾಗಿರುವ ಟಿಟ್ಟೋ ತೋಮಸ್ ಕೇರಳದ

ನಿಫಾ ಸೋಂಕಿಗೆ ತುತ್ತಾಗಿ ಕಳೆದ 8 ತಿಂಗಳಿನಿಂದ ಕೋಮಾವಸ್ಥೆಯಲ್ಲಿ 24ರ ಹರೆಯದ ಕಡಬದ ಯುವಕ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಜೆಟ್ ದಾಖಲೆ ಹಿಡಿದು ಸಂಸತ್ತಿಗೆ ಆಗಮಿಸಿದ ವಿತ್ತ ಸಚಿವೆ

(ನ್ಯೂಸ್ ಕಡಬ)newskadaba.com ನವದೆಹಲಿ, ಜು.23. ಬಜೆಟ್ ಮಂಡನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಒಪ್ಪಿಗೆಯನ್ನು ಪಡೆದ ಬಳಿಕ ಸಂಸತ್‌ ಗೆ ಆಗಮಿಸಿದರು. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ ಭವನಕ್ಕೆ ಆಗಮಿಸಿದ್ದಾರೆ ಎಂದು ವರದಿ ತಿಳಿಸಿದೆ. ವಿತ್ತ ಸಚಿವೆ ಕೆಂಪು ವಸ್ತ್ರದಲ್ಲಿ ಸುತ್ತಿರುವ ಬಜೆಟ್‌ ದಾಖಲೆ (ಬಹಿ ಖಾತಾ) ಕೈಯಲ್ಲಿ ಹಿಡಿದುಕೊಂಡು ನಗುಮುಖದೊಂದಿಗೆ ಸಂಸತ್ತನ್ನು ಪ್ರವೇಶಿಸಿದ್ದು, ಈ ಬಜೆಟ್‌ ಮಂಡನೆಗೂ ಮುನ್ನ ಕೇಂದ್ರ ಕ್ಯಾಬಿನೆಟ್‌ ಸಭೆ ನಡೆಯಲಿದೆ. ಸಭೆಯ ಬಳಿಕ 11 ಗಂಟೆಗೆ ನಿರ್ಮಲಾ ಸೀತಾರಾಮನ್ ಬಜೆಟ್

ಬಜೆಟ್ ದಾಖಲೆ ಹಿಡಿದು ಸಂಸತ್ತಿಗೆ ಆಗಮಿಸಿದ ವಿತ್ತ ಸಚಿವೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕನ್ನಡಿಗರ ಆಕ್ರೋಶಕ್ಕೆ ಕಾರಣರಾದ ಫೋನ್ ಪೇ ಸಿಇಒ..!     ಟ್ವೀಟ್ ಮೂಲಕ ಕ್ಷಮೆಯಾಚನೆ.!

(ನ್ಯೂಸ್ ಕಡಬ)newskadaba.com ನವದೆಹಲಿ, ಜು.22. ಫೋನ್ ಪೇ ಸಿಇಒ ಸಮೀರ್ ನಿಗಮ್ ಕ್ಷಮೆಯಾಚಿಸುವ ಮೂಲಕ ಕನ್ನಡಿಗರ ಆಕ್ರೋಶಕ್ಕೆ ತಲೆಬಾಗಿದ್ದು, “ನನ್ನ ಉದ್ದೇಶ ಕರ್ನಾಟಕ ಅಥವಾ ಕನ್ನಡಿಗರನ್ನು ಅವಮಾನಿಸುವುದಲ್ಲ. ನನ್ನ ಮಾತು ಯಾರಿಗಾದರೂ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ” ಎನ್ನುವ ಮೂಲಕ ಕರುನಾಡಿನ ಜನರಲ್ಲಿ ಕ್ಷಮೆಯಾಚಿಸಿದ್ದಾರೆ ಎಂದು ವರದಿ ಪ್ರಕಟಣೆ ತಿಳಿಸಿದೆ. ಅನೇಕ ಕನ್ನಡಿಗರು ಫೋನ್ ಪೇ ಆ್ಯಪ್ ಅನ್ನು ಅನ್ಇನ್ಸ್ಟಾ ಲ್ ಮಾಡುವಂತೆ ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ಹೊರಹಾಕಿ ಬಾಯ್ಕಟ್ ಅಭಿಯಾನ ಆರಂಭವಾಗಿದ್ದೇ ತಡ ಇದೀಗ ಟ್ವೀಟ್ ಮೂಲಕ ಕನ್ನಡಿಗರಲ್ಲಿ

ಕನ್ನಡಿಗರ ಆಕ್ರೋಶಕ್ಕೆ ಕಾರಣರಾದ ಫೋನ್ ಪೇ ಸಿಇಒ..!     ಟ್ವೀಟ್ ಮೂಲಕ ಕ್ಷಮೆಯಾಚನೆ.! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಡಬ: ನೇಣು ಬಿಗಿದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಜು.21. ಜೀವನದಲ್ಲಿ ಜಿಗುಪ್ಸೆಗೊಂಡು ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ರಾತ್ರಿ ಕಡಬದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕಡಬ ತಿಮರಡ್ಡ ನಿವಾಸಿ ಅಝರ್(28) ಎಂದು ಗುರುತಿಸಲಾಗಿದೆ. ಈತ ಶನಿವಾರ ರಾತ್ರಿ ತನ್ನ ಮನೆಯ ಕೋಣೆಯಲ್ಲಿ ಸೀರೆಯಿಂದ‌ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ಕಡಬ: ನೇಣು ಬಿಗಿದು ಯುವಕ ಆತ್ಮಹತ್ಯೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸುಬ್ರಹ್ಮಣ್ಯ: ನದಿ ನೀರಿನಲ್ಲಿ ತೇಲಿ ಬಂತು ಆನೆಯ ಮೃತದೇಹ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜು. 16. ಕರಾವಳಿಯಾದ್ಯಂತ ಕಳೆದ ಎರಡು ದಿನಗಳಿಂದ ವಿಪರೀತ ಮಳೆಯಾಗುತ್ತಿರುವ ಹಿನ್ನೆಲೆ ನದಿಗಳು ಉಕ್ಕಿ ಹರಿಯುತ್ತಿದ್ದು, ಇದರ ನಡುವೆ ಆನೆಯ ಮೃತದೇಹವೊಂದು ನದಿಯಲ್ಲಿ ತೇಲಿಬಂದ ಘಟನೆ ಸುಬ್ರಹ್ಮಣ್ಯದಿಂದ ವರದಿಯಾಗಿದೆ. ಸುಬ್ರಹ್ಮಣ್ಯದ ಸ್ನಾನಘಟ್ಟ ಮುಳುಗಿದ್ದು, ತಡರಾತ್ರಿ ಒಂದು ಗಂಟೆಯ ಸುಮಾರಿಗೆ ಕುಮಾರಧಾರ ನದಿಯಲ್ಲಿ ನೀರು ಎಷ್ಟಿದೆ ಎಂದು ನೋಡಲು ತೆರಳಿದ ಮನ್ಮಥ ಬಟ್ಟೋಡಿ ಎಂಬುವರಿಗೆ ಆನೆಯ ಮೃತ ದೇಹವೊಂದು ನೀರಿನಲ್ಲಿ ತೇಲುತ್ತಿರುವುದು ಕಂಡು ಬಂದಿದೆ. ತಕ್ಷಣವೇ ಅವರು ವೀಡಿಯೋದಲ್ಲಿ ಆನೆಯ ಮೃತದೇಹ ತೇಲಾಡುವ

ಸುಬ್ರಹ್ಮಣ್ಯ: ನದಿ ನೀರಿನಲ್ಲಿ ತೇಲಿ ಬಂತು ಆನೆಯ ಮೃತದೇಹ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಇಂದು (ಜು.15) ದ.ಕ. ಜಿಲ್ಲಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.15. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವಿಪರೀತ ಮಳೆಯಾಗುವ ಹಿನ್ನೆಲೆಯಲ್ಲಿ ರೆಡ್ ಅಲೆರ್ಟ್ ಘೋಷಿಸಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜು.15 ಸೋಮವಾರದಂದು ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ಆದೇಶಿಸಿದ್ದಾರೆ‌. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜು.15 ರಂದು ರೆಡ್ ಅಲರ್ಟ್ ಘೋಷಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಿಸಿ

ಇಂದು (ಜು.15) ದ.ಕ. ಜಿಲ್ಲಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬ: ಭಾರೀ ಗಾಳಿಗೆ ಶಾಲೆಯ ಎಲ್ಲಾ ಕೊಠಡಿಗಳ ಹಂಚುಗಳಿಗೆ ಹಾನಿ – ತರಗತಿಗೆ ರಜೆಯಿದ್ದ ಹಿನ್ನೆಲೆಯಲ್ಲಿ ತಪ್ಪಿದ ಪ್ರಾಣಾಪಾಯ

(ನ್ಯೂಸ್ ಕಡಬ) newskadaba.com ಕಡಬ, ಜು.14.‌ ಕಳೆದ ಕೆಲವು ದಿನಗಳಿಂದ‌ ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಭಾನುವಾರ ಮಧ್ಯಾಹ್ನದಂದು ಬೀಸಿದ ಭಾರೀ ಗಾಳಿಗೆ ಕಡಬ ತಾಲೂಕಿನ ಬಲ್ಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಲ್ಲಾ ಕೊಠಡಿಗಳ ಹಂಚು ಹಾರಿ ಹೋಗಿದ್ದು, ಸಾವಿರಾರು ರೂ. ನಷ್ಟ ಸಂಭವಿಸಿದೆ. ಹಂಚು ಹಾರುವ ಸಮಯ ಭಾನುವಾರ ಶಾಲೆಗೆ ರಜೆ ಇದ್ದ ಕಾರಣ ಶಾಲೆಯಲ್ಲಿ ಮಕ್ಕಳು ಇಲ್ಲದಿದ್ದುದರಿಂದ ಅನಾಹುತ ತಪ್ಪಿದೆ. ಎಂದಿನಂತೆ ತರಗತಿ ನಡೆಯುವ ವೇಳೆ ಈ ಘಟನೆ ನಡೆದಿದ್ದರೆ ಪ್ರಾಣಹಾನಿ ಸಂಭವಿಸುವ ಸಾಧ್ಯತೆ

ಕಡಬ: ಭಾರೀ ಗಾಳಿಗೆ ಶಾಲೆಯ ಎಲ್ಲಾ ಕೊಠಡಿಗಳ ಹಂಚುಗಳಿಗೆ ಹಾನಿ – ತರಗತಿಗೆ ರಜೆಯಿದ್ದ ಹಿನ್ನೆಲೆಯಲ್ಲಿ ತಪ್ಪಿದ ಪ್ರಾಣಾಪಾಯ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಗುಂಡ್ಯ: ಕಾರು ಲಾರಿ ನಡುವೆ ಢಿಕ್ಕಿ – ಇಬ್ಬರಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜು.13. ಹ್ಯುಂಡೈ ಐ20 ಕಾರು ಹಾಗೂ ಲಾರಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪ ಶನಿವಾರ ಬೆಳಗಿನ ಜಾವ ನಡೆದಿದೆ. ಬೆಂಗಳೂರಿನಿಂದ ಬೆಳ್ತಂಗಡಿ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ವಿರುದ್ಧ ದಿಕ್ಕಿನಿಂದ ತೆರಳುತ್ತಿದ್ದ ಲಾರಿಯ ನಡುವೆ ಗುಂಡ್ಯ ಸಮೀಪದ ಬರ್ಚಿನಹಳ್ಳ ಎಂಬಲ್ಲಿ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ

ಗುಂಡ್ಯ: ಕಾರು ಲಾರಿ ನಡುವೆ ಢಿಕ್ಕಿ – ಇಬ್ಬರಿಗೆ ಗಂಭೀರ ಗಾಯ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ಓಮ್ನಿ ಕಾರು ಮರಕ್ಕೆ ಢಿಕ್ಕಿ – ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಯಾಣಿಕರು ಪಾರು

(ನ್ಯೂಸ್ ಕಡಬ) newskadaba.com ಕಡಬ, ಜು.09. ಚಾಲಕನ ನಿಯಂತ್ರಣ ತಪ್ಪಿದ ಓಮ್ನಿ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ನೆಕ್ಕಿತ್ತಡ್ಕ‌ ಎಂಬಲ್ಲಿ ಮಂಗಳವಾರ ಸಂಜೆ ನಡೆದಿದೆ. ಸುಬ್ರಹ್ಮಣ್ಯದಿಂದ ಕಡಬ ಕಡೆಗೆ ತೆರಳುತ್ತಿದ್ದ ಓಮ್ನಿ ಕಾರು ನೆಕ್ಕಿತ್ತಡ್ಕ ಎಂಬಲ್ಲಿ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿದ್ದು, ಮರಕ್ಕೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಮಹಿಳೆಯೋರ್ವರು ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು,

ಕಡಬ: ಓಮ್ನಿ ಕಾರು ಮರಕ್ಕೆ ಢಿಕ್ಕಿ – ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಯಾಣಿಕರು ಪಾರು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top