ಬ್ರೇಕಿಂಗ್ ನ್ಯೂಸ್

ಅಕ್ರಮ ಹಣ ಸಾಗಾಟ-14.26 ಲಕ್ಷ ರೂಪಾಯಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬೀದರ್, ಫೆ. 23.  ಗೂಡ್ಸ್ ವಾಹನವೊಂದರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 14.26 ಲಕ್ಷ ರೂಪಾಯಿ ನಗದು ಸಹಿತ ವಾಹನವನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಬೀದರ್ ನ ಹುಲಸೂರು ತಾಲೂಕಿನ ಅಂಬೇವಾಡಿ ಚೆಕ್ ಪೋಸ್ಟ್ ಬಳಿ ನಡೆದಿದೆ. ಲೋಕಸಭೆ ಚುನಾವಣೆ ಸುಮೀಪಿಸುತ್ತಿರುವುದರಿಂದ ಹುಲಸೂರು ತಾಲೂಕಿನ ಅಂಬೇವಾಡಿ ಚೆಕ್ ಪೋಸ್ಟ್ ಬಳಿ ಪೊಲೀಸರು ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಬಸವಕಲ್ಯಾಣದಿಂದ ಮಹಾರಾಷ್ಟ್ರದ ಲಾತೂರ್ ಗೆ ತೆರಳುತ್ತಿದ್ದ ಈಚರ್ ಗೂಡ್ಸ್ ವಾಹನವನ್ನು ತಪಾಸಣೆ ನಡೆಸಿದಾಗ 5.26 ಲಕ್ಷ […]

ಅಕ್ರಮ ಹಣ ಸಾಗಾಟ-14.26 ಲಕ್ಷ ರೂಪಾಯಿ ಪೊಲೀಸ್ ವಶಕ್ಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರಾವಳಿ ಜಲಪ್ರದೇಶದಲ್ಲಿ ಚೀನಾ ಬೋಟ್ ಪತ್ತೆ- ಕಾವಲು ಪಡೆ ಅಲರ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 23. ಮೂರು ದಿನಗಳ ಹಿಂದೆ ಹೊನ್ನಾವರದಿಂದ ಆಳಸಮುದ್ರದ ಮೀನುಗಾರಿಕೆಗೆಂದು ತೆರಳಿದ್ದ ರಾಜ್ಯದ ಬೋಟ್‌ನಲ್ಲಿದ್ದ ಮೀನುಗಾರರಿಗೆ ಸುಮಾರು 200 ನಾಟಿಕಲ್ ಮೈಲು ದೂರದಲ್ಲಿ ಬೇರೆ ದೇಶದ ಬೋಟ್‌ ಒಂದು ಕಂಡುಬಂದಿದ್ದು, ಮಾಹಿತಿ ತಿಳಿದ ಕರಾವಳಿ ಕಾವಲು ಪಡೆಯ ಪೊಲೀಸರು ಹಾಗೂ ಕೋಸ್ಟ್‌ ಗಾರ್ಡ್‌ ಅಲರ್ಟ್ ಆಗಿದ್ದಾರೆ. ಈ ಬಗ್ಗೆ ಕುಮಟಾ ಪೊಲೀಸರು, ಕರಾವಳಿ ಕಾವಲು ಪಡೆ ಮತ್ತು ಕೋಸ್ಟ್‌ ಗಾರ್ಡ್‌ನವರಿಗೆ ಮಾಹಿತಿ ನೀಡಿದ್ದರು. ಬೋಟ್ ಕುರಿತಾಗಿ ಅಧಿಕಾರಿಗಳು ಮಾಹಿತಿ ಕಲೆ ಹಾಕಿದಾಗ

ಕರಾವಳಿ ಜಲಪ್ರದೇಶದಲ್ಲಿ ಚೀನಾ ಬೋಟ್ ಪತ್ತೆ- ಕಾವಲು ಪಡೆ ಅಲರ್ಟ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಹರಿಯಾಣ ಗಡಿಯಲ್ಲಿ ಪ್ರತಿಭಟನಾ ನಿರತ ರೈತ ಮೃತ್ಯು!

(ನ್ಯೂಸ್ ಕಡಬ) newskadaba.com ಚಂಡೀಗಢ, ಫೆ. 22. ಹರಿಯಾಣದ ಖಾನೌರಿ ಗಡಿಯಲ್ಲಿ ಪ್ರತಿಭಟನಾ ನಿರತ ರೈತರೊಬ್ಬರು ಮೃತಪಟ್ಟಿದ್ದು, ಪೊಲೀಸರೊಂದಿಗೆ ರೈತರು ಘರ್ಷಣೆಗಿಳಿದಿದ್ದಾರೆ. ಮೃತ ರೈತನನ್ನು 23 ವರ್ಷದ ಶುಭಕರಣ್ ಸಿಂಗ್ ಎಂದು ಗುರುತಿಸಲಾಗಿದೆ. ಪೊಲೀಸರು ರೈತರನ್ನು ಚದುರಿಸಲು ಅಶ್ರುವಾಯು ಸೇರಿದಂತೆ ವಿವಿಧ ರೀತಿಯ ಕ್ರಮಗಳನ್ನು ಅನುಸರಿಸುತ್ತಿದ್ದರು, ಈ ವೇಳೆ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ರೈತರು ತಮ್ಮ ಪ್ರತಿಭಟನಾ ಮೆರವಣಿಗೆಯನ್ನು ಸ್ಥಗಿತಗೊಳಿಸಿದ್ದಾರೆ. ಖಾನೌರಿ ಗಡಿ ಪ್ರತಿಘಟನೆಯಲ್ಲಿ ಭಾಗವಹಿಸಿದ್ದ ರೈತರ ಪೈಕಿ ಮೂವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಲ್ಲಿ

ಹರಿಯಾಣ ಗಡಿಯಲ್ಲಿ ಪ್ರತಿಭಟನಾ ನಿರತ ರೈತ ಮೃತ್ಯು! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಅಡ್ಡಾದಿಡ್ಡಿ ಚಲಿಸಿದ ಕಾರು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ. 21. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯಲ್ಲಿ ಯದ್ವಾತದ್ವಾ ಚಲಿಸಿದ ಘಟನೆ ಮಾಣಿ ಸಮೀಪದ ಪೆರಾಜೆಯಲ್ಲಿ ನಡೆದಿದೆ. ಪುತ್ತೂರಿನಿಂದ ಮಾಣಿ ಕಡೆಗೆ ತೆರಳುತ್ತಿದ್ದ ಕಾರು ರಸ್ತೆಯಿಂದ ಬದಿಗೆ ಸರಿದು ಅಡ್ಡಾದಿಡ್ಡಿಯಾಗಿ ಚಲಿಸಿ ಮೈಲುಗಲ್ಲಿಗೆ ಡಿಕ್ಕಿ ಹೊಡೆದಿದೆ. ಇನ್ನು ಚಾಲಕನ ನಿಯಂತ್ರಣ ತಪ್ಪಿ ಚಲಿಸಿದ್ದ ಕಾರು ಪಲ್ಟಿಯಾಗುವ ಅಪಾಯ ಸ್ವಲ್ಪದರಲ್ಲೇ ತಪ್ಪಿದೆ.

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಅಡ್ಡಾದಿಡ್ಡಿ ಚಲಿಸಿದ ಕಾರು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಅಕ್ರಮ‌ ಮರಳು ಸಾಗಾಟ – ಟಿಪ್ಪರ್ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಫೆ. 21. ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ ನ್ನು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ವಶಕ್ಕೆ ಪಡೆದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಸೋಮೇಶ್ವರ ಉಚ್ಚಿಲದಲ್ಲಿ ನಡೆದಿದೆ. ಉಚ್ಚಿಲ ಬಟಪ್ಪಾಡಿಯಿಂದ ಮರಳು ತುಂಬಿಸಿ ಸಾಗಾಟ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಟಿಪ್ಪರ್ ನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ದಾಳಿಯ ವೇಳೆ ಟಿಪ್ಪರ್ ಚಾಲಕ ತಲೆಮರೆಸಿಕೊಂಡಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಅಕ್ರಮ‌ ಮರಳು ಸಾಗಾಟ – ಟಿಪ್ಪರ್ ಪೊಲೀಸ್ ವಶಕ್ಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ವಿರಾಟ್ ಕೊಹ್ಲಿ-ಅನುಷ್ಕಾ ದಂಪತಿಗೆ ಗಂಡು ಮಗು ಜನನ

(ನ್ಯೂಸ್‌ ಕಡಬ)newskadaba.com ಮುಂಬೈ, ಫೆ.20: ಟೀಂ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಎರಡನೇ ಮಗುವಿಗೆ ಜನ್ಮ ನೀಡಿದ್ದಾರೆ. ಫೆಬ್ರವರಿ 15ರಂದೇ ಗಂಡು ಮಗುವಿಗೆ ಅನುಷ್ಕಾ ಜನ್ಮ ನೀಡಿದ್ದು ಈ ಸಂತಸದ ಸುದ್ದಿಯನ್ನು ಪೋಸ್ಟ್ ಮಾಡುವ ಮೂಲಕ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಮಗುವಿಗೆ ಅಕಾಯ್ ಎಂದು ವಿಭಿನ್ನ ಹೆಸರಿಟ್ಟಿದ್ದಾರೆ. ವಾಮಿಕಾಳ ಕಿರಿಯ ಸಹೋದರನನ್ನು ಜಗತ್ತಿಗೆ ಸ್ವಾಗತ ಎಂದು ಅನುಷ್ಕಾ ಬರೆದಿದ್ದಾರೆ. ಈ ಪೋಸ್ಟ್ ಗೆ ಅಭಿಮಾನಿಗಳು ಶುಭಾಶಯ ತಿಳಿಸಿದ್ದಾರೆ. ಅನುಷ್ಕಾ ಪೋಸ್ಟ್‌ನಲ್ಲಿ ‘ನಮ್ಮ ಹೃದಯದಲ್ಲಿ ಬಹಳ

ವಿರಾಟ್ ಕೊಹ್ಲಿ-ಅನುಷ್ಕಾ ದಂಪತಿಗೆ ಗಂಡು ಮಗು ಜನನ Read More »

ಬ್ರೇಕಿಂಗ್ ನ್ಯೂಸ್

ಬೆಳ್ಳುಳ್ಳಿ ದರ ಏರಿಕೆ ಬೆನ್ನಲ್ಲೇ ಈರುಳ್ಳಿ ಬೆಲೆ ದಿಢೀರ್ ಹೆಚ್ಚಳ

(ನ್ಯೂಸ್ ಕಡಬ) newskadab.com ನವದೆಹಲಿ, ಫೆ. 20. ಈರುಳ್ಳಿ ಬೆಲೆಯು ಏರಿಕೆಯಾಗಿದ್ದು, ಇದೀಗ ಬೆಲೆ ಹೆಚ್ಚಳದಿಂದ ಜನಸಾಮಾನ್ಯರಿಗೆ ಹೊರೆ ಬಿದ್ದಂತಾಗಿದೆ. ಕೇಂದ್ರ ಸರ್ಕಾರವು ಈರುಳ್ಳಿ ರಫ್ತು ನಿಷೇಧವನ್ನು ಹಿಂಪಡೆದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿರುವುದಾಗಿ ವರದಿ ತಿಳಿಸಿದೆ. ದೇಶದ ಅತೀ ದೊಡ್ಡ ಈರುಳ್ಳಿ ಮಾರುಕಟ್ಟೆಯಾದ ಲಾಸಲ್ ಗಾಂವ್ ಕೃಷಿ ಉತ್ಪಾದನಾ ಮಾರುಕಟ್ಟೆಯಲ್ಲಿ ಈರುಳ್ಳಿ ರಖಂ ಮಾರಾಟ ಬೆಲೆ ಶೇ. 40ರಷ್ಟು ಏರಿಕೆ ಕಂಡಿರುವುದಾಗಿ ವರದಿಯಾಗಿದೆ. ಈರುಳ್ಳಿ ಪ್ರತಿ ಕ್ವಿಂಟಾಲ್ ಬೆಲೆ 1,280 ರೂಪಾಯಿಯಿಂದ 1,800 ರೂಪಾಯಿಗೆ ಏರಿಕೆಯಾಗಿದೆ.

ಬೆಳ್ಳುಳ್ಳಿ ದರ ಏರಿಕೆ ಬೆನ್ನಲ್ಲೇ ಈರುಳ್ಳಿ ಬೆಲೆ ದಿಢೀರ್ ಹೆಚ್ಚಳ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹೃದಯಾಘಾತ- ಖ್ಯಾತ ಕಿರುತೆರೆ ನಟ ನಿಧನ

(ನ್ಯೂಸ್ ಕಡಬ) newskadaba.com ಮುಂಬೈ, ಫೆ. 20.  ಖ್ಯಾತ ಕಿರುತೆರೆ ನಟ ರಿತುರಾಜ್ ಸಿಂಗ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು. ಪ್ಯಾಂಕ್ರಿಯಾಟಿಕ್ ಎಂಬ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಇತ್ತೀಚೆಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇವರು ಬಾಲಿವುಡ್ ಸಿನಿಮಾಗಳಾದ ಬದರಿನಾಥ್ ಕಿ ದುಲ್ಹನಿಯಾ (2017), ವಾಶ್-ಪಾಸೆಸ್ಡ್ ಬೈ ದಿ ಒಬ್ಸೆಸ್ಡ್, ಮತ್ತು ಥುನಿವು (2023) ನಂತಹ ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕಳೆದ ವರ್ಷ ಬಿಡುಗಡೆಯಾದ ಯಾರಿಯನ್ 2 ಅವರ ಕೊನೆಯ ಸಿನೆಮಾವಾಗಿತ್ತು. ರಿತುರಾಜ್ ದಿ ಟೆಸ್ಟ್ ಕೇಸ್, ಹೇ

ಹೃದಯಾಘಾತ- ಖ್ಯಾತ ಕಿರುತೆರೆ ನಟ ನಿಧನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹಣ ವಸೂಲಿ ಆರೋಪ- 40 ಸಂಚಾರಿ ಪೊಲೀಸರು ಒಟ್ಟಿಗೆ ವರ್ಗಾವಣೆ

(ನ್ಯೂಸ್ ಕಡಬ) newskadaba.com ಥಾಣೆ, ಫೆ. 20. ಲಂಚ ಪಡೆದ ಆರೋಪದಡಿ 40 ಸಂಚಾರಿ ಪೊಲೀಸರನ್ನು ಒಟ್ಟಿಗೆ ವರ್ಗಾವಣೆ ಮಾಡಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಘಟನೆಯಲ್ಲಿ ಉನ್ನತ ಅಧಿಕಾರಿಗಳು ಸೇರಿದಂತೆ 40 ಸಿಬ್ಬಂದಿಗಳನ್ನು ಒಟ್ಟಿಗೆ ವರ್ಗಾವಣೆ ಮಾಡಲಾಗಿದೆ. ವರ್ಗಾವಣೆಯಾದ ಎಲ್ಲ ಸಿಬ್ಬಂದಿಯೂ ಥಾಣೆಯ ಮುಂಬ್ರಾ ವಿಭಾಗದ ಸಂಚಾರಿ ಪೊಲೀಸರೆಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಕುರಿತು ಥಾಣೆಯ ಡೆಪ್ಯುಟಿ ಕಮಿಷನರ್​ ಆಫ್​ ಪೊಲೀಸ್​ ವಿಜಯ್​ಕುಮಾರ್​ ರಾಥೋಡ್​ ಅವರು ವರ್ಗಾವಣೆ ಆದೇಶಗಳನ್ನು ಹೊರಡಿಸಿದ್ದು, ಎಲ್ಲ 40 ಸಿಬ್ಬಂದಿಯನ್ನು ಕಂಟ್ರೋಲ್​ ರೂಮ್​ಗೆ

ಹಣ ವಸೂಲಿ ಆರೋಪ- 40 ಸಂಚಾರಿ ಪೊಲೀಸರು ಒಟ್ಟಿಗೆ ವರ್ಗಾವಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪ್ರಯಾಣಿಕರಿಗೆ ಸಿಹಿಸುದ್ದಿ – ನಮ್ಮ ಮೆಟ್ರೋದಲ್ಲಿ ‘ಸೆಲ್ಫೀ’ ಪಾಯಿಂಟ್ ನಿರ್ಮಾಣ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 19. ನಗರದಲ್ಲಿ ಪ್ರಯಾಣಿಕರ ಸುಗಮ ಸಂಚಾರಕ್ಕೆ ಅನುಕೂಲವಾಗಿರುವ ಮೆಟ್ರೋ, ಇದೀಗ ಪ್ರಯಾಣಿಕರ ಸಂಖ್ಯೆ ಹೆಚ್ಚಿಸುವ ನಿಟ್ಟಿನಲ್ಲಿ ಸಿಹಿ ಸುದ್ದಿ ಒಂದನ್ನು ನೀಡಿದ್ದು, ಮೆಟ್ರೋ ನಿಲ್ದಾಣಗಳಲ್ಲಿ ಸೆಲ್ಫಿ ಪ್ರಿಯರಿಗಾಗಿ ಸೆಲ್ಫಿ ಪಾಯಿಂಟ್ ಗಳನ್ನು ನಿರ್ಮಾಣ ಮಾಡಿದೆ. ನಗರದಲ್ಲಿ ಟ್ರಾಫಿಕ್ ಮುಕ್ತ ಸಂಚಾರಕ್ಕೆ ನಮ್ಮ ಮೆಟ್ರೋ ಬಹಳಷ್ಟು ಅನುಕೂಲಕರವಾಗಿದೆ. ಪ್ರಯಾಣಿಕರ ಹಿತದೃಷ್ಟಿಯಿಂದ ಹಲವು ಉಪಕ್ರಮಗಳನ್ನು ಜಾರಿಗೆ ತರತ್ತಲೇ ಇರುತ್ತದೆ. ಸದ್ಯ ನಮ್ಮ ಮೆಟ್ರೋ ರೈಲಿನ ಹಸಿರು ಮಾರ್ಗದ ಬನಶಂಕರಿ ಮತ್ತು ಕೋಣನಕುಂಟೆ ನಿಲ್ದಾಣಗಳಲ್ಲಿ

ಪ್ರಯಾಣಿಕರಿಗೆ ಸಿಹಿಸುದ್ದಿ – ನಮ್ಮ ಮೆಟ್ರೋದಲ್ಲಿ ‘ಸೆಲ್ಫೀ’ ಪಾಯಿಂಟ್ ನಿರ್ಮಾಣ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top