ಬ್ರೇಕಿಂಗ್ ನ್ಯೂಸ್

ಮಗನಿಗೆ ರೀ-ಎಂಟ್ರಿ ನಿರಾಕರಿಸಿದ ಶಾಲೆ: ಮನನೊಂದ ತಾಯಿಯಿಂದ ಶಾಲಾ ಶೌಚಾಲಯದಲ್ಲೇ ವಿಷಸೇವನೆ, ಸ್ಥಿತಿ ಗಂಭೀರ

(ನ್ಯೂಸ್‌ ಕಡಬ) newskadaba.com, ಜೂ. 30: 10ನೇ ತರಗತಿ ವಿದ್ಯಾರ್ಥಿಯ ಅಮಾನತು ಆದೇಶ ಹಿಂಪಡೆಯಲು ಹಾಗೂ ಮರುಪ್ರವೇಶ ನೀಡಲು ಶಾಲೆ ನಿರಾಕರಿಸಿದ್ದರಿಂದ ಮನನೊಂದ ತಾಯಿಯೊಬ್ಬರು ಶಾಲೆಯ ಶೌಚಾಲಯದಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಭಾರತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸದ್ಯ ಸಂತ್ರಸ್ತ ತಾಯಿ ಸುಮಿತ್ರಾ ಅವರನ್ನು ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವು ದಿನಗಳ ಹಿಂದೆ 10ನೇ ಮತ್ತು 9ನೇ ತರಗತಿ ವಿದ್ಯಾರ್ಥಿಗಳ ನಡುವೆ ಶಾಲೆಯ ಹೊರಗೆ ಗಲಾಟೆ […]

ಮಗನಿಗೆ ರೀ-ಎಂಟ್ರಿ ನಿರಾಕರಿಸಿದ ಶಾಲೆ: ಮನನೊಂದ ತಾಯಿಯಿಂದ ಶಾಲಾ ಶೌಚಾಲಯದಲ್ಲೇ ವಿಷಸೇವನೆ, ಸ್ಥಿತಿ ಗಂಭೀರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಾಟ್ಸಾಪ್‌ನಿಂದ ಹೊಸ ‘ಯೂಸರ್ ನೇಮ್’ ವೈಶಿಷ್ಟ್ಯ ಪ್ರಕಟ

(ನ್ಯೂಸ್‌ ಕಡಬ) newskadaba.com, ಜೂ.30 :ಮೆಟಾ ಮಾಲೀಕತ್ವದ ಜಗತ್ತಿನ ಪ್ರಮುಖ ಮೆಸೇಜಿಂಗ್ ಆ್ಯಪ್ ‘ವಾಟ್ಸಾಪ್’ ತನ್ನ ಬಳಕೆದಾರರ ಸುರಕ್ಷತೆಗಾಗಿ ಮಹತ್ವದ ‘ಯೂಸರ್ ನೇಮ್’ ವೈಶಿಷ್ಟ್ಯವನ್ನು ಅಧಿಕೃತವಾಗಿ ಘೋಷಿಸಿದೆ. ಇನ್ಮುಂದೆ ಬಳಕೆದಾರರು ಇತರರೊಂದಿಗೆ ಚಾಟ್ ಮಾಡಲು ತಮ್ಮ ವೈಯಕ್ತಿಕ ಮೊಬೈಲ್ ಸಂಖ್ಯೆಯನ್ನು ಹಂಚಿಕೊಳ್ಳುವ ಅಗತ್ಯವಿರುವುದಿಲ್ಲ. ಬದಲಿಗೆ ತಮ್ಮದೇ ಆದ ವಿಶಿಷ್ಟ ಯೂಸರ್ ನೇಮ್ ಬಳಸಬಹುದು.ದೊಡ್ಡ ಗ್ರೂಪ್‌ಗಳಿಗೆ ಸೇರಿದಾಗ ಅಥವಾ ಅಪರಿಚಿತರಿಗೆ ಮೊದಲ ಬಾರಿಗೆ ಸಂದೇಶ ಕಳುಹಿಸುವಾಗ ಫೋನ್ ಸಂಖ್ಯೆಗಳು ಸ್ವಯಂಚಾಲಿತವಾಗಿ ಹೈಡ್ ಆಗಲಿವೆ. ಇನ್‌ಸ್ಟಾಗ್ರಾಮ್ ಮಾದರಿಯಲ್ಲಿ ವಾಟ್ಸಾಪ್‌ನಲ್ಲಿ ಯಾರನ್ನಾದರೂ

ವಾಟ್ಸಾಪ್‌ನಿಂದ ಹೊಸ ‘ಯೂಸರ್ ನೇಮ್’ ವೈಶಿಷ್ಟ್ಯ ಪ್ರಕಟ Read More »

ಕರಾವಳಿ, ಕರ್ನಾಟಕ, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್

ದೇಶದಲ್ಲಿ ಇಂಧನ ಕೊರತೆ ಭೀತಿ ಮುಕ್ತಾಯ; ತುರ್ತು ನಿಯಂತ್ರಣ ಕ್ರಮಗಳ ಆದೇಶ ವಾಪಸ್

(ನ್ಯೂಸ್‌ ಕಡಬ) newskadaba.com, ಜೂ.30 ದೇಶದಲ್ಲಿ ಇಂಧನ ಪೂರೈಕೆ ಸಂಪೂರ್ಣವಾಗಿ ಸಹಜ ಸ್ಥಿತಿಗೆ ಮರಳಿರುವುದನ್ನು ಪರಿಗಣಿಸಿ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಜೂನ್ 29 ರಂದು ಹೊಸ ಆದೇಶವೊಂದನ್ನು ಹೊರಡಿಸಿದೆ. ಜೂನ್ 12 ರಂದು ಇಂಧನ ಕೊರತೆ ಮತ್ತು ಕಾಳಸಂತೆಯನ್ನು ತಡೆಯುವ ಉದ್ದೇಶದಿಂದ ಹೇರಲಾಗಿದ್ದ ತುರ್ತು ನಿಯಂತ್ರಣ ಕ್ರಮಗಳು ಹಾಗೂ ವಾಣಿಜ್ಯ ಗ್ರಾಹಕರ ಮೇಲಿನ ಇಂಧನ ಖರೀದಿ ಮಿತಿಗಳು  ಸಾರ್ವಜನಿಕ ಹಿತದೃಷ್ಟಿಯಿಂದ ಇನ್ನು ಮುಂದೆ ಅಗತ್ಯವಿಲ್ಲ ಎಂದು ಸಚಿವಾಲಯವು ಸ್ಪಷ್ಟಪಡಿಸಿದೆ. ಪಶ್ಚಿಮ ಏಷ್ಯಾ ಬಿಕ್ಕಟ್ಟಿನಿಂದಾಗಿ ಸಗಟು

ದೇಶದಲ್ಲಿ ಇಂಧನ ಕೊರತೆ ಭೀತಿ ಮುಕ್ತಾಯ; ತುರ್ತು ನಿಯಂತ್ರಣ ಕ್ರಮಗಳ ಆದೇಶ ವಾಪಸ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು ವಿವಿ ಶೈಕ್ಷಣಿಕ ಮಂಡಳಿ ಸಭೆ: ವಿದ್ಯಾರ್ಥಿ ಕೊರತೆಯಿಂದಾಗಿ 3 ಸರ್ಕಾರಿ ಕಾಲೇಜುಗಳ ಬಿಎ ಕೋರ್ಸ್‌ಗಳು ಬಂದ್

(ನ್ಯೂಸ್‌ ಕಡಬ) newskadaba.com, ಜೂ.30 ವಿದ್ಯಾರ್ಥಿಗಳ ಕೊರತೆಯಿಂದಾಗಿ ಮಂಗಳೂರು ವಿಶ್ವವಿದ್ಯಾಲಯಕ್ಕೆ ಸಂಯೋಜಿತವಾಗಿರುವ ಮೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು 2026-27ನೇ ಶೈಕ್ಷಣಿಕ ವರ್ಷದಲ್ಲಿ ಬಿಎ (BA) ಕೋರ್ಸ್‌ಗಳ ಹೊಸ ಬ್ಯಾಚ್‌ಗಳನ್ನು ಆರಂಭಿಸದಿರಲು ನಿರ್ಧರಿಸಿವೆ. ಸೋಮವಾರ ನಡೆದ ಮಂಗಳೂರು ವಿಶ್ವವಿದ್ಯಾಲಯದ ಈ ವರ್ಷದ ಮೊದಲ ಶೈಕ್ಷಣಿಕ ಮಂಡಳಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.ಕುಲಪತಿ ಪ್ರೊ. ಪಿ.ಎಲ್. ಧರ್ಮ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ರಾಜ್ಯ ಸರ್ಕಾರದ ಆದೇಶದಂತೆ ಮಂಗಳೂರಿನ ಕಾವೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅರ್ಥಶಾಸ್ತ್ರ, ಇತಿಹಾಸ

ಮಂಗಳೂರು ವಿವಿ ಶೈಕ್ಷಣಿಕ ಮಂಡಳಿ ಸಭೆ: ವಿದ್ಯಾರ್ಥಿ ಕೊರತೆಯಿಂದಾಗಿ 3 ಸರ್ಕಾರಿ ಕಾಲೇಜುಗಳ ಬಿಎ ಕೋರ್ಸ್‌ಗಳು ಬಂದ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಮುದ್ರದಲ್ಲಿ ಮುಳುಗುತ್ತಿದ್ದ ‘ಮಂಜುಮಾತಾ’ ಬೋಟ್: ಆರೂ ಮೀನುಗಾರರು ಸುರಕ್ಷಿತ ರಕ್ಷಣೆ

(ನ್ಯೂಸ್‌ ಕಡಬ) newskadaba.com, ಜೂ.30 ಮಂಗಳೂರು ಕರಾವಳಿಯ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ ಹವಾಮಾನದಿಂದಾಗಿ ಮುಳುಗುತ್ತಿದ್ದ ಮೀನುಗಾರಿಕಾ ಬೋಟ್‌ನಲ್ಲಿದ್ದ ಆರು ಮಂದಿ ಮೀನುಗಾರರನ್ನು ಭಾರತೀಯ ಕೋಸ್ಟ್ ಗಾರ್ಡ್ ಸಿಬ್ಬಂದಿ ಯಶಸ್ವಿಯಾಗಿ ರಕ್ಷಿಸಿದ್ದಾರೆ. ‘ಐಎಫ್‌ಬಿ ಮಂಜುಮಾತಾ’ ಎಂಬ ಬೋಟ್‌ನಲ್ಲಿ ಮೀನುಗಾರರು ಆಳ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ, ದೈತ್ಯ ಅಲೆಗಳ ಹೊಡೆತಕ್ಕೆ ಸಿಲುಕಿ ಬೋಟ್‌ನೊಳಗೆ ನೀರು ತುಂಬಿ ಮುಳುಗಲಾರಂಭಿಸಿತು.ಮಾಹಿತಿ ತಿಳಿಯುತ್ತಿದ್ದಂತೆ ಕಡಲ ಕಾವಲು ಪಡೆಯ ಹಡಗು ‘ಐಸಿಜಿಎಸ್ ಸಚೇತ್’ ಮೂಲಕ ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ, ತೀವ್ರ ಅಲೆಗಳ ನಡುವೆಯೂ ಅತ್ಯಾಧುನಿಕ ‘ರಿಮೋಟ್-ಆಪರೇಟೆಡ್

ಸಮುದ್ರದಲ್ಲಿ ಮುಳುಗುತ್ತಿದ್ದ ‘ಮಂಜುಮಾತಾ’ ಬೋಟ್: ಆರೂ ಮೀನುಗಾರರು ಸುರಕ್ಷಿತ ರಕ್ಷಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

“ಇದು ಸರಕಾರಿ ರಸ್ತೆಯಲ್ಲ, ಖಾಸಗಿ ಲೇಔಟ್”: ವಿದ್ಯುತ್ ಕಂಬಗಳನ್ನು ತಕ್ಷಣ ತೆರವುಗೊಳಿಸಲು ಶಾಸಕಿ ಭಾಗೀರಥಿ ಮುರುಳ್ಯ ಆದೇಶ.

(ನ್ಯೂಸ್‌ ಕಡಬ) newskadaba.com, ಜೂ.30 ಸುಳ್ಯ: ಇಲ್ಲಿನ ಸರಕಾರಿ ಆಸ್ಪತ್ರೆಯ ಪಕ್ಕದ ರಿಕ್ಷಾ ನಿಲ್ದಾಣದಿಂದ ಜೂನಿಯರ್ ಕಾಲೇಜು ಸಂಪರ್ಕಿಸುವ ರಸ್ತೆಯ ಮಧ್ಯದಲ್ಲಿದ್ದ ವಿದ್ಯುತ್ ಕಂಬಗಳನ್ನು ತೆರವುಗೊಳಿಸದೆ ಕಾಂಕ್ರೀಟ್ ರಸ್ತೆ ನಿರ್ಮಿಸಿರುವ ಅವೈಜ್ಞಾನಿಕ ಕಾಮಗಾರಿಯ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ವೈರಲ್ ಆಗಿದ್ದವು. ಈ ಹಿನ್ನೆಲೆಯಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಅವರು ಮೆಸ್ಕಾಂ ಅಧಿಕಾರಿಗಳೊಂದಿಗೆ ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಸ್ತೆ ಮಧ್ಯೆ ಕಂಬಗಳನ್ನಿಟ್ಟುಕೊಂಡೇ ಕಾಂಕ್ರೀಟ್ ಮಾಡಿರುವುದು ಅತ್ಯಂತ ಅಪಾಯಕಾರಿ ಮತ್ತು ಅವೈಜ್ಞಾನಿಕ ಎಂದು ಆಕ್ರೋಶ

“ಇದು ಸರಕಾರಿ ರಸ್ತೆಯಲ್ಲ, ಖಾಸಗಿ ಲೇಔಟ್”: ವಿದ್ಯುತ್ ಕಂಬಗಳನ್ನು ತಕ್ಷಣ ತೆರವುಗೊಳಿಸಲು ಶಾಸಕಿ ಭಾಗೀರಥಿ ಮುರುಳ್ಯ ಆದೇಶ. Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಗಾರ ಪ್ರಿಯರಿಗೆ ಭರ್ಜರಿ ಸಿಹಿ ಸುದ್ದಿ

(ನ್ಯೂಸ್‌ ಕಡಬ) newskadaba.com, ಜೂ.30: 24 ಕ್ಯಾರೆಟ್ ಚಿನ್ನ (ಶುದ್ಧ ಚಿನ್ನ):1 ಗ್ರಾಂ: ₹14,013 (₹180 ಇಳಿಕೆ) 10 ಗ್ರಾಂ: ₹1,40,130 (₹1,800 ಇಳಿಕೆ) 22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ): 1 ಗ್ರಾಂ: ₹12,845 (₹165 ಇಳಿಕೆ) 10 ಗ್ರಾಂ: ₹1,28,450 (₹1,650 ಇಳಿಕೆ)   1 ಗ್ರಾಂ ಬೆಳ್ಳಿ: ₹235 1 ಕೆಜಿ ಬೆಳ್ಳಿ: ₹2,35,000 (₹5,000 ಇಳಿಕೆ)

ಬಂಗಾರ ಪ್ರಿಯರಿಗೆ ಭರ್ಜರಿ ಸಿಹಿ ಸುದ್ದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಸ್ತೆ ಮಧ್ಯೆ ವಿದ್ಯುತ್ ಕಂಬ ಉಳಿಸಿಯೇ ಕಾಂಕ್ರೀಟೀಕರಣ

(ನ್ಯೂಸ್‌ ಕಡಬ) newskadaba.com, ಜೂ.30: ಸುಳ್ಯ ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಕೆಳಭಾಗದಿಂದ ಸರ್ಕಾರಿ ಪದವಿಪೂರ್ವ ಕಾಲೇಜು ಕಡೆಗೆ ತೆರಳುವ ರಸ್ತೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸದೆ ರಸ್ತೆ ಕಾಂಕ್ರೀಟೀಕರಣ ಮಾಡಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಅವ್ಯವಸ್ಥೆಯಿಂದಾಗಿ ಅಪಘಾತಗಳು ಸಂಭವಿಸುವ ಭೀತಿ ಎದುರಾಗಿದ್ದು, ವಾಹನ ಸವಾರರು ಆತಂಕ ವ್ಯಕ್ತಪಡಿಸಿದ್ದಾರೆ. ರಸ್ತೆ ಮಧ್ಯೆ ವಿದ್ಯುತ್ ಕಂಬ ಉಳಿಸಿಕೊಂಡೇ ಕಾಂಕ್ರೀಟ್ ಮಾಡಿರುವುದನ್ನು ಶಾಸಕಿ ಭಾಗೀರಥಿ ಮುರುಳ್ಯ ಅವರು ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.ಈ ಕಾಮಗಾರಿ ಅತ್ಯಂತ ಅಪಾಯಕಾರಿಯಾಗಿದ್ದು, ತಕ್ಷಣವೇ ವಿದ್ಯುತ್

ರಸ್ತೆ ಮಧ್ಯೆ ವಿದ್ಯುತ್ ಕಂಬ ಉಳಿಸಿಯೇ ಕಾಂಕ್ರೀಟೀಕರಣ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನಿಂದ ರಾಜ್ಯಾದ್ಯಂತ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ

(ನ್ಯೂಸ್‌ ಕಡಬ) newskadaba.com, ಜೂ.30: ಭಾರತದ ಚುನಾವಣಾ ಆಯೋಗವು ರಾಜ್ಯಾದ್ಯಂತ ಇಂದಿನಿಂದ ಒಂದು ತಿಂಗಳ ಕಾಲ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಈಗಾಗಲೇ ಶೇ. 91.61 ರಷ್ಟು ಮ್ಯಾಪಿಂಗ್ ಪೂರ್ಣಗೊಂಡಿದ್ದು, ಉಳಿದ ಮತದಾರರ ಪರಿಶೀಲನೆಗಾಗಿ ಬೂತ್ ಮಟ್ಟದ ಅಧಿಕಾರಿಗಳು ಮತ್ತು ಚುನಾವಣಾಧಿಕಾರಿಗಳು ಮನೆ ಮನೆಗೆ ಭೇಟಿ ನೀಡಲಿದ್ದಾರೆ. ಒಟ್ಟು 5.55 ಕೋಟಿ ಮತದಾರರ ಪೈಕಿ ಅಸಲಿ ಮತ್ತು ನಕಲಿ ಮತದಾರರನ್ನು ಗುರುತಿಸಿ, ಅನರ್ಹ ಹಾಗೂ ಮೃತಪಟ್ಟವರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗುತ್ತದೆ.ಮತದಾರರ ಪಟ್ಟಿಯಲ್ಲಿ ಹೆಸರು

ಇಂದಿನಿಂದ ರಾಜ್ಯಾದ್ಯಂತ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು ಆಸ್ಪತ್ರೆ ವೈದ್ಯರ ಕೆಲಸಕ್ಕೆ ಅಡ್ಡಿ; ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಮಾಡಿದವರ ವಿರುದ್ಧ ದೂರು

(ನ್ಯೂಸ್‌ ಕಡಬ) newskadaba.com, ಜೂ.29:  ಪುತ್ತೂರು ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲು ತೆರಳುತ್ತಿದ್ದ ಕರ್ತವ್ಯ ನಿರತ ವೈದ್ಯರ ಕೆಲಸಕ್ಕೆ ಅಡ್ಡಿಪಡಿಸಿ, ಸುಳ್ಳು ಆರೋಪ ಹೊರಿಸಿದವರ ವಿರುದ್ಧ ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.ಡಿಸೆಂಬರ್ 10 ರಂದು ಪುಂಜಾಲಕಟ್ಟೆಯಿಂದ ಕರೆತಂದ 29 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು. ಮರಣೋತ್ತರ ಪರೀಕ್ಷೆಗೆ ಪುಂಜಾಲಕಟ್ಟೆ ಪೊಲೀಸರು ಮಧ್ಯಾಹ್ನದ ಬಳಿಕ ಬಂದು ಪ್ರಕ್ರಿಯೆಗಳನ್ನು ಮುಗಿಸಿದ್ದರು. ಸಂಜೆ ವೇಳೆ ಕರ್ತವ್ಯದಲ್ಲಿದ್ದ ಡಾ. ಶ್ವೇತಾ ಅವರು ಮರಣೋತ್ತರ ಪರೀಕ್ಷೆಗೆ ತೆರಳುವಾಗ, ಮೃತರ ಕಡೆಯವರು “ವೈದ್ಯರು

ಪುತ್ತೂರು ಆಸ್ಪತ್ರೆ ವೈದ್ಯರ ಕೆಲಸಕ್ಕೆ ಅಡ್ಡಿ; ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಮಾಡಿದವರ ವಿರುದ್ಧ ದೂರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top