ಬ್ರೇಕಿಂಗ್ ನ್ಯೂಸ್

ಟಿಕೆಟ್ ರಹಿತ ಪ್ರಯಾಣ – 2,832 ಪ್ರಯಾಣಿಕರಿಗೆ ದಂಡ ವಿಧಿಸಿದ ಕೆಎಸ್ಸಾರ್ಟಿಸಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 29. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ತನಿಖಾ ತಂಡಗಳು ನಿಗಮ ವ್ಯಾಪ್ತಿಯಲ್ಲಿ ಜುಲೈ ತಿಂಗಳಲ್ಲಿ ಟಿಕೆಟ್‌ ರಹಿತವಾಗಿ ಪ್ರಯಾಣಿಸಿದ ಕಾರಣ 2,832 ಪ್ರಯಾಣಿಕರಿಗೆ ದಂಡ ವಿಧಿಸಿರುವ ಕುರಿತು ವರದಿಯಾಗಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಕೆಎಸ್‌ಆರ್‌ಟಿಸಿ, ನಿಗಮದ ತನಿಖಾ ತಂಡಗಳು ತಪಾಸಣಾ ಕಾರ್ಯವನ್ನು ಕೈಗೊಂಡು ಒಟ್ಟು 2,832 ಪ್ರಯಾಣಿಕರಿಗೆ ದಂಡ ವಿಧಿಸಿರುವುದಾಗಿ ಹೇಳಿದೆ. ಇದರ ಪ್ರಕಾರ, ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 43,698 ವಾಹನಗಳನ್ನು ತನಿಖೆಗೊಳಪಡಿಸಿ, ಅವುಗಳ ಪೈಕಿ […]

ಟಿಕೆಟ್ ರಹಿತ ಪ್ರಯಾಣ – 2,832 ಪ್ರಯಾಣಿಕರಿಗೆ ದಂಡ ವಿಧಿಸಿದ ಕೆಎಸ್ಸಾರ್ಟಿಸಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸೆಪ್ಟೆಂಬರ್ ತಿಂಗಳಿನಿಂದ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶನಿವಾರದಂದು ಫುಲ್ ಕ್ಲಾಸ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ಮಳೆಯ ಕಾರಣದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆಗಳಿಗೆ ನೀಡಲಾಗಿದ್ದ ರಜೆಯನ್ನು ಸರಿದೂಗಿಸಲು ಶನಿವಾರದಂದು ತರಗತಿಗಳನ್ನು ನಡೆಸಲು ಆದೇಶಿಸಲಾಗಿದೆ. ಹೀಗಾಗಿ ಸೆಪ್ಟೆಂಬರ್ ಮೊದಲ ವಾರದಿಂದ ಆರಂಭಿಸಿ ಒಟ್ಟು 14 ಶನಿವಾರಗಳಂದು ಇಡೀ ದಿನ ಶಾಲೆ ನಡೆಸುವಂತೆ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಎಲ್ಲಾ ಶಾಲೆಗಳಿಗೆ ಸೂಚನೆ ನೀಡಿದ್ದಾರೆ. ಜುಲೈನಲ್ಲಿ ಸುರಿದ ಅತಿ ಹೆಚ್ಚು ಮಳೆಯಿಂದಾಗಿ ಜಿಲ್ಲೆಯ ಶಾಲೆಗಳಿಗೆ ಜಿಲ್ಲಾಧಿಕಾರಿಯ ನಿರ್ದೇಶನದಂತೆ ಏಳು ದಿನ ರಜೆ ಸಾರಲಾಗಿತ್ತು. ಆ ದಿನಗಳಿಂದ

ಸೆಪ್ಟೆಂಬರ್ ತಿಂಗಳಿನಿಂದ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶನಿವಾರದಂದು ಫುಲ್ ಕ್ಲಾಸ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

14 ಭಯೋತ್ಪಾದಕರ ಆಸ್ತಿ ಮುಟ್ಟುಗೋಲಿಗೆ ಪೊಲೀಸ್ ಕ್ರಮ

(ನ್ಯೂಸ್ ಕಡಬ) newskadaba.com ಶ್ರೀನಗರ, ಆ. 29. ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಜ್ಜಾಗಿದ್ದ ಪಾಕಿಸ್ತಾನ ಮೂಲದ 14 ಉಗ್ರರ ಆಸ್ತಿಯನ್ನು ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದಾರೆ ಎಂದು ವರದಿಯೊಂದು ತಿಳಿಸಿದೆ. ಇಬ್ಬರು ಭಯೋತ್ಪಾದಕರ ಆಸ್ತಿಯನ್ನು ಈಗಾಗಲೇ ಮುಟ್ಟುಗೋಲು ಹಾಕಲಾಗಿದ್ದು, ಅಲ್ಲದೇ ಇತರ 14 ಭಯೋತ್ಪಾದಕರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದ್ದು, ಇನ್ನುಳಿದ ಎಲ್ಲಾ ಉಗ್ರಗಾಮಿಗಳ ಆಸ್ತಿಗಳನ್ನು ಶೀಘ್ರದಲ್ಲೇ ಮುಟ್ಟುಗೋಲು ಹಾಕಿಕೊಳ್ಳಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

14 ಭಯೋತ್ಪಾದಕರ ಆಸ್ತಿ ಮುಟ್ಟುಗೋಲಿಗೆ ಪೊಲೀಸ್ ಕ್ರಮ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಣ್ಣ ಎಲ್ಇಡಿ ಬಲ್ಬ್ ನುಂಗಿದ ಒಂಬತ್ತು ತಿಂಗಳ ಮಗು

(ನ್ಯೂಸ್ ಕಡಬ) newskadaba.com ಅಹ್ಮದಾಬಾದ್‌, ಆ. 27. 9 ತಿಂಗಳ ಮಗುವೊಂದು ಆಕಸ್ಮಿಕವಾಗಿ ಸಣ್ಣ ಎಲ್​ಇಡಿ ಬಲ್ಬ್​ ನುಂಗಿರುವ ಘಟನೆ ಅಹಮದಾಬಾದ್​ನಲ್ಲಿ ನಡೆದಿರುವ ಕುರಿತು ವರದಿಯಾಗಿದೆ. ಆಸ್ಪತ್ರೆಯ ಅಧಿಕಾರಿಗಳ ಪ್ರಕಾರ, ಮಗು ಆಟಿಕೆ ಮೊಬೈಲ್ ಫೋನ್​ನೊಂದಿಗೆ ಆಟವಾಡುತ್ತಾ, ಅದರ ಆಂಟೆನಾದಲ್ಲಿರುವ ಎಲ್​ಇಡಿ ಬಲ್ಬ್​ ಅನ್ನು ಬಾಯಿಗೆ ಹಾಕಿಕೊಂಡಿತ್ತು. ನಂತರ ಮಗುವಿಗೆ ಉಸಿರಾಟದ ತೊಂದರೆ ಉಂಟಾಗಿ, ಆಗ ಪೋಷಕರು ಮಗುವಿಗೆ ಏನೋ ಆಗಿದೆ ಎಂದು ಭಾವಿಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ತಕ್ಷಣವೇ ವೈದ್ಯರು ಮಗುವನ್ನು ಎಕ್ಸ್ ರೇ ಮಾಡಿದ್ದು, ಮಗು

ಸಣ್ಣ ಎಲ್ಇಡಿ ಬಲ್ಬ್ ನುಂಗಿದ ಒಂಬತ್ತು ತಿಂಗಳ ಮಗು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಮೇರಿಕಾ ಮಾಜಿ ಅಧ್ಯಕ್ಷ ಟ್ರಂಪ್ ಬಂಧನ- ಬಿಡುಗಡೆ

(ನ್ಯೂಸ್ ಕಡಬ) newskadaba.com ಅಮೇರಿಕಾ, ಆ. 25. ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು 2020ರ ಅಧ್ಯಕ್ಷೀಯ ಚುನಾವಣೆಯಲ್ಲಿ ಅಕ್ರಮವೆಸಗಿದ್ದಾರೆ ಎಂಬ ಆರೋಪದಡಿಯಲ್ಲಿ ಬಂಧಿಸಲಾಗಿತ್ತು. ಕೆಲವೇ ಹೊತ್ತಿನಲ್ಲಿ ಟ್ರಂಪ್ ಟವರು ಜಾಮೀನು ಪಡೆದು ಹೊರಬಂದಿದ್ದಾರೆ ಎಂದು ವರದಿಯಾಗಿದೆ. 2020ರ ಅಧ್ಯಕ್ಷೀಯ ಚುನಾವಣೆ ವೇಳೆ ಅಧಿಕಾರ ದುರ್ಬಳಕೆ, ಪಿತೂರಿ, ವಂಚನೆ ಯತ್ನ ಆರೋಪ ಸೇರಿದಂತೆ 13 ಪ್ರಕರಣಗಳು ದಾಖಲಾಗಿದ್ದವು. ಈ ಆರೋಪಗಳ ಮೇರೆಗೆ ಜಾರ್ಜಿಯಾ ಪೊಲೀಸರು, ಔಪಚಾರಿಕವಾಗಿ ಟ್ರಂಪ್​ರನ್ನು​​​​​​ ಬಂಧಿಸಿ ಅಟ್ಲಾಂಟಾದ ಫುಲ್ಟನ್ ಕೌಂಟಿ ಜೈಲಿನಲ್ಲಿದ್ದರು. ಆದರೆ

ಅಮೇರಿಕಾ ಮಾಜಿ ಅಧ್ಯಕ್ಷ ಟ್ರಂಪ್ ಬಂಧನ- ಬಿಡುಗಡೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ದಕ್ಷಿಣ ಆಫ್ರಿಕಾದಿಂದಲೇ ಚಂದ್ರಯಾನ ವೀಕ್ಷಿಸಲಿರುವ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 23. ಚಂದ್ರಯಾನ ಕುರಿತು ಭಾರತೀಯರಲ್ಲಿ ಕುತೂಹಲ ಹೆಚ್ಚಿಸಿದ್ದು, ದೇವಾಲಯ ಮಸೀದಿ ಹಾಗೂ ಚರ್ಚ್ ಗಳಲ್ಲಿ ಈ ಚಂದ್ರಯಾನಕ್ಕೆ ಯಶಸ್ಸು ಸಿಗಲಿ ಎಂದು ಪ್ರಾರ್ಥನೆ ನಡೆಯುತ್ತಿದೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿಯವರು 15ನೇ ಬ್ರಿಕ್ಸ್ ಶೃಂಗಸಭೆಗಾಗಿ ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್ ತಲುಪಿದ್ದಾರೆ. ಹೀಗಾಗಿ ದಕ್ಷಿಣ ಆಫ್ರಿಕಾದಿಂದಲೇ ಮೋದಿ ವರ್ಚುವಲ್ ಆಗಿ ಲ್ಯಾಂಡಿಂಗ್ ವೀಕ್ಷಣೆ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಚಂದ್ರನ ದಕ್ಷಿಣ ಧ್ರುವದಲ್ಲಿ ಬುಧವಾರ ಸಂಜೆ ಇಳಿಯಲಿರುವ ಚಂದ್ರಯಾನ-3 ನೌಕೆಯನ್ನು

ದಕ್ಷಿಣ ಆಫ್ರಿಕಾದಿಂದಲೇ ಚಂದ್ರಯಾನ ವೀಕ್ಷಿಸಲಿರುವ ಪ್ರಧಾನಿ ಮೋದಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಿರ್ಮಾಣ ಹಂತದ ರೈಲ್ವೇ ಸೇತುವೆ ಕುಸಿತ- 17 ಮಂದಿ ಮೃತ್ಯು

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಆ. 23. ನಿರ್ಮಾಣ ಹಂತದ ರೈಲ್ವೇ ಸೇತುವೆ ಕುಸಿದು ಬಿದ್ದ ಪರಿಣಾಮ 17 ಮಂದಿ ಮೃತಪಟ್ಟಿರುವ ಘಟನೆ ಮಿಝೋರಾಂನ ಸಾಯಿರಾಂಗ್ ಪ್ರದೇಶದಲ್ಲಿ ಬುಧವಾರದಂದು ನಡೆದಿದೆ. ಘಟನಾ ಸ್ಥಳದಲ್ಲಿ ಇನ್ನೂ ಹಲವರು ಸಿಲುಕಿರುವ ಶಂಕೆಯಿದ್ದು, ಅವರನ್ನು ರಕ್ಷಿಸುವ ಪ್ರಯತ್ನ ನಡೆಯುತ್ತಿದೆ ಎಂದು ತಿಳಿದು ಬಂದಿದೆ. ಸೇತುವೆ ಕುಸಿಯುವ ವೇಳೆ ಸುಮಾರು 35 ರಿಂದ 40 ಕಟ್ಟಡ ಕಾರ್ಮಿಕರು ಇದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಗೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ಅಪಘಾತದಲ್ಲಿ

ನಿರ್ಮಾಣ ಹಂತದ ರೈಲ್ವೇ ಸೇತುವೆ ಕುಸಿತ- 17 ಮಂದಿ ಮೃತ್ಯು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅನ್ಯಕೋಮಿನ ಯುವಕನ ಮೇಲೆ ತಲವಾರು ದಾಳಿ ಪ್ರಕರಣ – 24 ಗಂಟೆಯೊಳಗೆ ಆರೋಪಿಗಳು ಅಂದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 22. ಅನ್ಯ ಕೋಮಿನ ಯುವಕನ ಮೇಲೆ ಮೂವರ ಗುಂಪೊಂದು ತಲವಾರು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದ 24 ಗಂಟೆಗಳಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ ಘಟನೆ ನಗರದ ಕಾವೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಂಧಿತರನ್ನು ಮಂಗಳೂರಿನ ಪಂಚಮೊಗರು ನಿವಾಸಿ ಚರಣ್ ರಾಜ್(23), ಸುರತ್ಕಲ್‌ನ ಸುಮಂತ್ ಬರ್ಮನ್(23) ಹಾಗೂ ಸುಂಕದಕಟ್ಟೆ ಕೋಡಿಕಲ್ ನಿವಾಸಿ ಅವಿನಾಶ್ (24) ಎಂದು ಗುರುತಿಸಲಾಗಿದೆ. ಆ. 20ರ ಭಾನುವಾರದಂದು ಅನ್ಯಕೋಮಿನ ಯುವಕನೋರ್ವ ಮನೆಗೆ ನಡೆದುಕೊಂಡು

ಅನ್ಯಕೋಮಿನ ಯುವಕನ ಮೇಲೆ ತಲವಾರು ದಾಳಿ ಪ್ರಕರಣ – 24 ಗಂಟೆಯೊಳಗೆ ಆರೋಪಿಗಳು ಅಂದರ್ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಚಂದ್ರಯಾನ-3 ಬಗ್ಗೆ ಅವಹೇಳನಕಾರಿ ಪೋಸ್ಟ್ – ನಟ ಪ್ರಕಾಶ್ ರಾಜ್ ವಿರುದ್ದ ದೂರು ದಾಖಲು

(ನ್ಯೂಸ್ ಕಡಬ) newskadaba.com ಮುಂಬೈ, ಆ. 22. ಸದಾ ವಿವಾದಗಳಿಂದಲೇ ಸುದ್ದಿಯಾಗುತ್ತಿರುವ ನಟ ಪ್ರಕಾಶ್ ರಾಜ್ ಇದೀಗ ಚಂದ್ರಯಾನ-3 ಬಗ್ಗೆ ವ್ಯಂಗ್ಯವಾಡಲು ಹೋಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಒಂದೆಡೆ ನೆಟ್ಟಿಗರು ಅವರ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿದ್ದರೆ ಇನ್ನೊಂದೆಡೆ ಅವರ ವಿರುದ್ದ ಬಾಗಲಕೋಟೆಯ ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ಹಿಂದೂ ಸಂಘಟನೆ ಮುಖಂಡ ನಂದು ಗಾಯಕವಾಡ ಮತ್ತಿತರರು ದೂರು ನೀಡಿದ್ದಾರೆ. ಪ್ರಕಾಶ್ ರಾಜ್ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಕೂಡಲೇ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಚಂದ್ರಯಾನ-3 ಬಗ್ಗೆ ಅವಹೇಳನಕಾರಿ ಪೋಸ್ಟ್ – ನಟ ಪ್ರಕಾಶ್ ರಾಜ್ ವಿರುದ್ದ ದೂರು ದಾಖಲು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತದ ಹಿರಿಯ ಆನೆ 89 ವರ್ಷದ ಬಿಜುಲಿ ಪ್ರಸಾದ್ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ಅಸ್ಸಾಂ, ಆ. 22. ಅಸ್ಸಾಂನಲ್ಲಿದ್ದ ಭಾರತದ ಅತ್ಯಂತ ಹಿರಿಯ ಸಾಕಾನೆ ಬಿಜುಲಿ ಪ್ರಸಾದ್ ನಿನ್ನೆ ಸಾವನ್ನಪ್ಪಿದೆ. ಅಸ್ಸಾಂನ ಸೋನಿತ್ ಪುರ ಜಿಲ್ಲೆಯ ಬೆಹಾಲಿ ಟೀ ಎಸ್ಟೇಟ್ ನಲ್ಲಿದ್ದ ಈ ಆನೆಗೆ 89 ವರ್ಷ ವಯಸ್ಸಾಗಿತ್ತು. ವಯೋ ಸಹಜ ಸಮಸ್ಯೆಯಿಂದಾಗಿ ಬಿಜುಲಿ ಸಾವನ್ನಪ್ಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಿ ವಿಲಿಯಮ್ಸನ್ ಮಾಗೊರ್ ಗ್ರೂಪ್ ಕಂಪೆನಿಗೆ ಸೇರಿದ ಬೆಹಾಲಿ ಟೀ ಎಸ್ಟೇಟ್ ನಲ್ಲಿ ಈ ಆನೆ ಹಲವು ವರ್ಷಗಳಿಂತ ವಾಸವಾಗಿತ್ತು.

ಭಾರತದ ಹಿರಿಯ ಆನೆ 89 ವರ್ಷದ ಬಿಜುಲಿ ಪ್ರಸಾದ್ ಇನ್ನಿಲ್ಲ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top