ಬ್ರೇಕಿಂಗ್ ನ್ಯೂಸ್

ISRO ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್ ಗೆ ಹೃದಯಾಘಾತ- ಶ್ರೀಲಂಕಾದಿಂದ ಬೆಂಗಳೂರಿಗೆ ಏರ್-ಲಿಫ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 10. ಖ್ಯಾತ ವಿಜ್ಞಾನಿ, ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್(83) ಅವರಿಗೆ ಹೃದಯಾಘಾತವಾಗಿದ್ದು, ಶ್ರೀಲಂಕಾದಲ್ಲಿದ್ದ ಅವರನ್ನು ಏರ್‌ಲಿಫ್ಟ್ ಮೂಲಕ ಬೆಂಗಳೂರಿಗೆ ಕರೆತರಲಾಗುತ್ತಿದೆ. ಕಸ್ತೂರಿ ರಂಗನ್ ಅವರು ಸುಮಾರು ಒಂದು ದಶಕದ ಕಾಲ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು.  ಶ್ರೀಲಂಕಾಕ್ಕೆ ತೆರಳಿದ್ದ ಅವರು ಅಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದು, ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಾರಾಯಣ ಹೃದಯಾಲಯ […]

ISRO ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್ ಗೆ ಹೃದಯಾಘಾತ- ಶ್ರೀಲಂಕಾದಿಂದ ಬೆಂಗಳೂರಿಗೆ ಏರ್-ಲಿಫ್ಟ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
crime, arrest, suspected

ಸಿಬ್ಬಂದಿಯ ಮೇಲಿನ ಕೋಪಕ್ಕೆ ಹುಸಿಬಾಂಬ್ ಕರೆ- ಆರೋಪಿ ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 10. ಶಿವಾಜಿನಗರದ ಆಜಾಂ ಮಸೀದಿಯಲ್ಲಿ ಬಾಂಬ್​ ಇದೆ ಎಂದು ಸುಳ್ಳು ಕರೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಬಂಧಿತನನ್ನು ಮಹಾರಾಷ್ಟ್ರ ಮೂಲದ ಸೈಯದ್​ ಮಹಮ್ಮದ್ ಅನ್ವರ್​(37) ಎಂದು ಗುರುತಿಸಲಾಗಿದೆ. ಜುಲೈ 04ರಂದು ಬೆಂಗಳೂರಿಗೆ ಬಂದಿದ್ದ ಸೈಯದ್,​ ಮದರಸಾ ಹೆಸರಿನಲ್ಲಿ ಮಸೀದಿಗಳಿಗೆ ತೆರಳಿ ಚಂದಾ ಕೇಳುತ್ತಿದ್ದ. ಅದರಂತೆ ಆಜಾಂ ಮಸೀದಿ ಬಳಿ ಚಂದಾ ಪಡೆದಿದ್ದ ಸೈಯದ್,​ ರಾತ್ರಿ ಮಸೀದಿಯಲ್ಲಿ ಮಲಗಲು ಅವಕಾಶ ಕೇಳಿದ್ದು, ಇದಕ್ಕೆ ಮಸೀದಿ ಸಿಬ್ಬಂದಿ ನಿರಾಕರಿಸಿದ್ದರು.

ಸಿಬ್ಬಂದಿಯ ಮೇಲಿನ ಕೋಪಕ್ಕೆ ಹುಸಿಬಾಂಬ್ ಕರೆ- ಆರೋಪಿ ಖಾಕಿ ಬಲೆಗೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಯೋತ್ಪಾದನೆಗೆ ಬಿಟ್ ಕಾಯಿನ್ ನಂಟು..? ಮಂಗಳೂರು ಕುಕ್ಕರ್ ಸ್ಫೋಟ, ಶಿವಮೊಗ್ಗ ಪ್ರಕರಣದಲ್ಲೂ ಬಳಕೆ..!!

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 10. ಮಂಗಳೂರಿನ ಜನತೆಯನ್ನು ಬೆಚ್ಚಿಬೀಳಿಸಿದ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಹತ್ವದ ಮಾಹಿತಿ ಲಭ್ಯವಾಗಿದ್ದು, ಕರ್ನಾಟಕದಲ್ಲಿ ಸಿಕ್ಕಿಬಿದ್ದಿರುವ ಶಂಕಿತ ಉಗ್ರರಿಗೆ ಭಯೋತ್ಪಾದನಾ ಕೃತ್ಯಗಳಿಗೆ ‘ಕ್ರಿಪ್ಟೋ ಕರೆನ್ಸಿ’ ಮೂಲಕವೇ ವಿದೇಶಗಳಿಂದ ಲಕ್ಷಾಂತರ ರೂ. ಬಂದಿದೆ ಎಂಬ ಶಾಕಿಂಗ್ ಮಾಹಿತಿ ಎನ್ಐಎ ತನಿಖೆಯ ವೇಳೆ ಬೆಳಕಿಗೆ ಬಂದಿದೆ. ಮಂಗಳೂರಿನ ನಾಗುರಿಯಲ್ಲಿ 2022ರ ನ.19ರಂದು ನಡೆದ ಕುಕ್ಕರ್ ಬಾಂಬ್ ಸ್ಫೋಟ ಹಾಗೂ ಶಿವಮೊಗ್ಗದಲ್ಲಿ ನಡೆದ ಟ್ರಯಲ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಈಗಾಗಲೇ

ಭಯೋತ್ಪಾದನೆಗೆ ಬಿಟ್ ಕಾಯಿನ್ ನಂಟು..? ಮಂಗಳೂರು ಕುಕ್ಕರ್ ಸ್ಫೋಟ, ಶಿವಮೊಗ್ಗ ಪ್ರಕರಣದಲ್ಲೂ ಬಳಕೆ..!! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜೈನಮುನಿಗಳ ಹತ್ಯೆ ಆರೋಪಿಗಳ ವಿರುದ್ದ ಸೂಕ್ತ ಕ್ರಮ ➤ ಗೃಹಸಚಿವ ಡಾ.ಜಿ.ಪರಮೇಶ್ವರ್

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಜು. 10. ಜೈನಮುನಿ ನಂದಿ ಮಹಾರಾಜರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಯಾರೂ ರಾಜಕೀಯ ಮಾಡಲ್ಲ. ಕೊಲೆ ಆರೋಪಿಗಳನ್ನು ಈಗಾಗಲೇ ಪೊಲೀಸರು ಬಂಧಿಸಿದ್ದು, ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ. ಮುಂದಿನ ದಿನಗಳಲ್ಲಿ ಇಂತಹ ಕೃತ್ಯ ಮರುಕಳಿಸದಂತೆ ನೋಡಿಕೊಳ್ಳುತ್ತೇವೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಭರವಸೆ ನೀಡಿದ್ದಾರೆ. ಈ ಕುರಿತಂತೆ ಮಾತನಾಡಿದ ಅವರು, ಅಪರಾಧಿಗಳ ವಿರುದ್ದ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಇದೆ. ಇದರಲ್ಲಿ ತಾರತಮ್ಯದ ಪ್ರಶ್ನೆಯೇ ಇಲ್ಲ. ವರೂರಲ್ಲಿ ಜೈನ ಮುನಿಗಳು ಉಪವಾಸ ಸತ್ಯಾಗ್ರಹ ಮಾಡುತ್ತಿದ್ದು,

ಜೈನಮುನಿಗಳ ಹತ್ಯೆ ಆರೋಪಿಗಳ ವಿರುದ್ದ ಸೂಕ್ತ ಕ್ರಮ ➤ ಗೃಹಸಚಿವ ಡಾ.ಜಿ.ಪರಮೇಶ್ವರ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದು ಜಾರಿಗೆ ಬರಲಿದೆ ಕಾಂಗ್ರೆಸ್ ಸರಕಾರದ 3ನೇ ಗ್ಯಾರಂಟಿ ಯೋಜನೆ – 5 ಕೆಜಿ ಅನ್ನಭಾಗ್ಯ ಅಕ್ಕಿಯ ಹಣ ಫಲಾನುಭವಿಗಳ ಖಾತೆಗೆ ವರ್ಗಾವಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.10. ಕಾಂಗ್ರೆಸ್‌ ಸರ್ಕಾರದ ಅನ್ನಭಾಗ್ಯ ಯೋಜನೆಯಡಿ ರಾಜ್ಯ ಸರಕಾರದಿಂದ ಸಿಗಬೇಕಿದ್ದ 5 ಕೆಜಿ ಅಕ್ಕಿಯ ದಾಸ್ತಾನು ಲಭ್ಯವಿಲ್ಲದೆ ಇರುವುದರಿಂದ ಫಲಾನುಭವಿಗಳ ಖಾತೆಗೆ ಹಣ ವರ್ಗಾಯಿಸುವ ಯೋಜನೆಗೆ ಇಂದು ಅಧಿಕೃತ ಚಾಲನೆ ದೊರೆಯಲಿದೆ. ಸೋಮವಾರ ಸಂಜೆ 5 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಫಲಾನುಭವಿಗಳ ಖಾತೆಗೆ ನಗದು ವರ್ಗಾವಣೆ ಮಾಡುವ ಮೂಲಕ ಸಾಂಕೇತಿಕವಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಅನ್ನಭಾಗ್ಯದಲ್ಲಿ ಹೆಚ್ಚುವರಿ ಐದು ಕೆಜಿ ಅಕ್ಕಿ ನೀಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಅದರ

ಇಂದು ಜಾರಿಗೆ ಬರಲಿದೆ ಕಾಂಗ್ರೆಸ್ ಸರಕಾರದ 3ನೇ ಗ್ಯಾರಂಟಿ ಯೋಜನೆ – 5 ಕೆಜಿ ಅನ್ನಭಾಗ್ಯ ಅಕ್ಕಿಯ ಹಣ ಫಲಾನುಭವಿಗಳ ಖಾತೆಗೆ ವರ್ಗಾವಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಒಡಿಶಾ ರೈಲು ದುರಂತ- ಮೂವರು ಸಿಬಂದಿಗಳನ್ನು ವಶಕ್ಕೆ ಪಡೆದ ಸಿಬಿಐ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜು. 08. ಒಡಿಶಾದ ಬಾಲಸೋರ್ ನಲ್ಲಿ ಜೂನ್ 2 ರಂದು ಸಂಭವಿಸಿದ್ದ ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್, ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಮತ್ತು ಸ್ಟೇಷನರಿ ಗೂಡ್ಸ್ ಈ ಮೂರು ರೈಲುಗಳ ಸರಣಿ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಮೂವರು ರೈಲ್ವೇ ಸಿಬಂದಿಯನ್ನು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಬಂಧಿತರನ್ನು ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ನಿಯೋಜಿಸಲಾದ ಹಿರಿಯ ಸೆಕ್ಷನ್ ಇಂಜಿನಿಯರ್ ಅರುಣ್ ಕುಮಾರ್ ಮಹಂತ, ಸೆಕ್ಷನ್ ಇಂಜಿನಿಯರ್ ಮೊಹಮ್ಮದ್ ಅಮೀರ್ ಖಾನ್ ಮತ್ತು ತಂತ್ರಜ್ಞ ಪಪ್ಪು

ಒಡಿಶಾ ರೈಲು ದುರಂತ- ಮೂವರು ಸಿಬಂದಿಗಳನ್ನು ವಶಕ್ಕೆ ಪಡೆದ ಸಿಬಿಐ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ದಿಢೀರ್ ಹೆಚ್ಚಳ

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 04. ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್ ಪಿಜಿ ಸಿಲಿಂಡರ್ ಗಳ ಬೆಲೆಯನ್ನು 7 ರೂ.ಗಳಷ್ಟು ಏರಿಕೆ ಮಾಡಿದೆ. ಜೂನ್ ತಿಂಗಳಲ್ಲಿ 83.5 ರೂ. ಗಳಷ್ಟು ಕಡಿತಗೊಳಿಸಿದ ನಂತರ ಜುಲೈನಲ್ಲಿ ಕೊಂಚ ಏರಿಕೆ ಕಂಡಿದೆ. ಇನ್ನು ಗೃಹಬಳಕೆಯ ಎಲ್ ಪಿಜಿ ಸಿಲಿಂಡರ್ ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆ 7 ರೂ.ಗಳಷ್ಟು ಏರಿಕೆಯಾಗಿದ್ದು, ಇದು ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌‌ಗಳ ಬೆಲೆಯನ್ನು 1,773

ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ದಿಢೀರ್ ಹೆಚ್ಚಳ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮದುವೆಯ ಹಿಂದಿನ ದಿನವೇ ವರನ ತಂದೆ ನಾಪತ್ತೆ

(ನ್ಯೂಸ್ ಕಡಬ)news kadaba.com ಪುತ್ತೂರು, ಜು. 3. ಮದುವೆಯ ಹಿಂದಿನ ದಿನವೇ ವರನ ತಂದೆ ನಾಪತ್ತೆಯಾಗಿರುವ ಘಟನೆ ಒಳಮೊಗ್ರು ಗ್ರಾಮದ ಕುಂಬ್ರದಲ್ಲಿ ನಡೆದಿದೆ. ನಾಪತ್ತೆಯಾದ ನಿವಾಸಿ ಉಮ್ಮರ್‌ ಎಂಬವರು, ಜು.1ರಂದು ಮಧ್ಯಾಹ್ನ 3 ಗಂಟೆಯವರೆಗೆ ಪುತ್ತೂರಿನಲ್ಲಿದ್ದರು ಆ ಬಳಿಕ ನಾಪತ್ತೆಯಾಗಿದ್ದು, ಮೊಬೈಲ್‌ ಸ್ವಿಚ್‌ ಆಫ್‌ ಆಗಿದೆ.ಮಗನ ಮದುವೆ ಇಂದು ನಡೆಯಬೇಕಾಗಿತ್ತು. ನಿನ್ನೆ ಮದರಂಗಿ ಶಾಸ್ತ್ರ ನಿಗದಿಯಾಗಿತ್ತು. ಈಗ ತಂದೆ ನಾಪತ್ತೆಯಾಗಿರುವ ಕಾರಣ ಮದುವೆ ರದ್ದು ಮಾಡಲಾಗಿದೆ. ಮನೆಯವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ, ಮೊಬೈಲ್‌ ಲೊಕೇಶನ್‌ ಆಧಾರದಲ್ಲಿ

ಮದುವೆಯ ಹಿಂದಿನ ದಿನವೇ ವರನ ತಂದೆ ನಾಪತ್ತೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ – ಕಡಬದ ಯುವಕನ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.29. ಮದುವೆಯಾಗುವುದಾಗಿ ನಂಬಿಸಿ ಯುವತಿಯ ಮೇಲೆ ಅತ್ಯಾಚಾರ ಎಸಗಿರುವ ಬಗ್ಗೆ ಕಡಬದ ಯುವಕನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಡಬದ ಕೋಡಿಂಬಾಳ ನಿವಾಸಿ ಅನೀಶ್ ಎಂದು ಗುರುತಿಸಲಾಗಿದೆ. ಆರೋಪಿಯು ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಂಗಳೂರಿನ ಯುವತಿಯನ್ನು ಪ್ರೀತಿಸುವುದಾಗಿ ತಿಳಿಸಿ ಆ ಬಳಿಕ ಮದುವೆಯಾಗುವುದಾಗಿ ನಂಬಿಸಿದ್ದಲ್ಲದೆ ಮಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಸುಮಾರು 20 ದಿನಗಳ ಕಾಲ ದೈಹಿಕ ಸಂಪರ್ಕ ನಡೆಸಿದ್ದಾನೆ ಎನ್ನಲಾಗಿದೆ. ಆರೋಪಿಗೆ ಈ ಮೊದಲೇ ಮದುವೆಯಾಗಿರುವ ವಿಚಾರ ತಡವಾಗಿ

ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ – ಕಡಬದ ಯುವಕನ ಬಂಧನ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ➤ ಬೈಕ್ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಜೂ.29. ಬೈಕ್ ಹಾಗೂ ಬಸ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೈಕಂಬ ಎಂಬಲ್ಲಿ ನಡೆದಿದೆ. ನೆಟ್ಟಣದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಹಾಗೂ ವಿರುದ್ಧ ದಿಕ್ಕಿನಿಂದ ಸಾಗುತ್ತಿದ್ದ ಬೈಕ್ ನಡುವೆ ಕೈಕಂಬ ಸಮೀಪದ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು, ತಕ್ಷಣವೇ ಗಸ್ತಿನಲ್ಲಿದ್ದ ಹೈವೇ ಪಾಟ್ರಲ್ ಸಿಬ್ಬಂದಿಗಳಾದ ಕಡಬ ಠಾಣಾ ಎಎಸ್ಐ

ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ➤ ಬೈಕ್ ಸವಾರ ಗಂಭೀರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top