ಬ್ರೇಕಿಂಗ್ ನ್ಯೂಸ್

ರಾಜ್ಯ ಸರಕಾರದ ವಿರುದ್ದ ಬಿಜೆಪಿ ಪ್ರತಿಭಟನೆ ➤ ಬೊಮ್ಮಾಯಿ, ಆರ್. ಅಶೋಕ್ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 20. ರಾಜ್ಯ ಸರಕಾರದ ವಿರುದ್ದ ಬಿಜೆಪಿ ನಾಯಕರು ಮಂಗಳವಾರದಂದು ನಗರದ ಮೌರ್ಯ ವೃತ್ತದ ಬಳಿ ಪ್ರತಿಭಟನೆ ನಡೆಸಿದರು. ಅಕ್ಕಿ ಪೂರೈಕೆ ಬಗ್ಗೆ ಕಾಂಗ್ರೆಸ್ ನಾಯಕರು ಸುಳ್ಳು ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ, ರಾಜ್ಯ ಸರಕಾರದ ವಿರುದ್ದ ಘೋಷಣೆಗಳನ್ನುಕೂಗಿದರು. ಈ ವೇಳೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಆರ್.ಅಶೋಕ್, ಬಿಜೆಪಿ ನಾಯಕರಾದ ಎನ್.ರವಿ ಕುಮಾರ್ ರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.

ರಾಜ್ಯ ಸರಕಾರದ ವಿರುದ್ದ ಬಿಜೆಪಿ ಪ್ರತಿಭಟನೆ ➤ ಬೊಮ್ಮಾಯಿ, ಆರ್. ಅಶೋಕ್ ಪೊಲೀಸ್ ವಶಕ್ಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Theft, crime, Robbery

ಕಡಬ: ಪ್ರಧಾನಿ ಮೋದಿ ಸ್ಕೀಮ್ ಹೆಸರಿನಲ್ಲಿ ಯಾಮಾರಿಸಿದ ಯುವಕ – ಮನೆಗೆ ಬಂದು ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದು ಪರಾರಿ

(ನ್ಯೂಸ್ ಕಡಬ) newskadaba.com ಕಡಬ, ಜೂ.19. ಪ್ರಧಾನಿ ಮೋದಿಯ ಹೆಸರಿನಲ್ಲಿ ಸ್ಕೀಂ ಇದೆ ಎಂದು ಯಾಮಾರಿಸಿದ ಯುವಕನೋರ್ವ ಮಹಿಳೆಯೋರ್ವರ ಕತ್ತಿನಲ್ಲಿದ್ದ ಸರವನ್ನು ಎಳೆದು ಪರಾರಿಯಾದ ಘಟನೆ ಮರ್ಧಾಳದಲ್ಲಿ ನಡೆದಿದೆ. ಮರ್ಧಾಳ ನಿವಾಸಿ ಸುಶೀಲ ಎಂಬವರು ಮನೆಯಲ್ಲಿದ್ದ ವೇಳೆ ಆಗಮಿಸಿದ ಯುವಕನೋರ್ವ ಪ್ರಧಾನ ಮಂತ್ರಿ ಮೋದಿ ಹೆಸರಿನಲ್ಲಿ 1.25 ಲಕ್ಷ ರೂ. ಸ್ಕೀಮ್ ಇದೆ ಎಂದು ಯಾಮಾರಿಸಿ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಎಳೆದೊಯ್ದಿದ್ದಾನೆ. ಬಳಿಕ ಇಚಿಲಂಪಾಡಿ‌ ಕಡೆಗೆ ಬೈಕಿನಲ್ಲಿ ತೆರಳಿದ್ದಾನೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಕಡಬ ಠಾಣಾ

ಕಡಬ: ಪ್ರಧಾನಿ ಮೋದಿ ಸ್ಕೀಮ್ ಹೆಸರಿನಲ್ಲಿ ಯಾಮಾರಿಸಿದ ಯುವಕ – ಮನೆಗೆ ಬಂದು ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದು ಪರಾರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನೆಲ್ಯಾಡಿ: ಕಿರು ಸೇತುವೆಯಿಂದ ಕೆಳಕ್ಕೆ ಬಿದ್ದ ಕಾರು ➤ ಆರು ಮಂದಿ ಗಂಭೀರ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜೂ.17. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಿರು ಸೇತುವೆಯಿಂದ ಕೆಳಕ್ಕೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ಆರು ಮಂದಿ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಎಂಜಿರ ಎಂಬಲ್ಲಿ ಶನಿವಾರದಂದು ನಡೆದಿದೆ. ಗಾಯಾಳುಗಳನ್ನು ಬೆಂಗಳೂರು ಆರ್.ಟಿ. ನಗರ ನಿವಾಸಿಗಳೆಂದು ಗುರುತಿಸಲಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಕಾರಿನಲ್ಲಿದ್ದ ಎರಡು ವರ್ಷದ ಮಗುವೊಂದು ಅದೃಷ್ಟವಶಾತ್ ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ನೆಲ್ಯಾಡಿ: ಕಿರು ಸೇತುವೆಯಿಂದ ಕೆಳಕ್ಕೆ ಬಿದ್ದ ಕಾರು ➤ ಆರು ಮಂದಿ ಗಂಭೀರ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸುಳ್ಯ: ಮನೆಮೇಲೆ ಉರುಳಿಬಿದ್ದ ಡೀಸೆಲ್ ಸಾಗಾಟದ ಲಾರಿ ➤ ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ಜೂ. 17. ಡೀಸೆಲ್ ಸಾಗಾಟದ ಲಾರಿಯೊಂದು ಮನೆ ಮೇಲೆ ಮಗುಚಿಬಿದ್ದ ಪರಿಣಾಮ ಮೂವರು ಗಾಯಗೊಂಡ ಘಟನೆ ಸುಳ್ಯ-ಪಾಣತ್ತೂರು ಅಂತಾರಾಜ್ಯ ರಸ್ತೆಯ ಪರಿಯಾರಂ ಘಾಟಿ ರಸ್ತೆಯಲ್ಲಿ ಸಂಭವಿಸಿದೆ‌ ಘಟನೆಯಿಂದ ಮನೆಗೆ ಹಾನಿ ಸಂಭವಿಸಿದ್ದು, ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯರು ಕಾರ್ಯಾಚರಣೆ ನಡೆಸಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಠೇ ಲಭ್ಯವಾಗಬೇಕಾಗಿದೆ.

ಸುಳ್ಯ: ಮನೆಮೇಲೆ ಉರುಳಿಬಿದ್ದ ಡೀಸೆಲ್ ಸಾಗಾಟದ ಲಾರಿ ➤ ಮೂವರಿಗೆ ಗಾಯ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಡಿಕೆಶಿ ವಿರುದ್ದ ದಾಖಲಾಗಿದ್ದ 5 ಪ್ರಕರಣಗಳನ್ನು ರದ್ದುಗೊಳಿಸಿ ಹೈಕೋರ್ಟ್ ಆದೇಶ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 16. ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಈಗಾಗಲೇ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ, ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿ ರಿಲೀಫ್ ನೀಡಿತ್ತು. ಇದೀಗ ಅವರ ವಿರುದ್ಧ ದಾಖಲಾಗಿದ್ದ ಐದೂ ಪ್ರಕರಣಗಳನ್ನು ರದ್ದುಗೊಳಿಸುವ ಮೂಲಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಕೋವಿಡ್-19 ಸಂದರ್ಭ, ಸರ್ಕಾರದ ಮಾರ್ಗಸೂಚಿ ನಿಯಮಗಳನ್ನು ಉಲ್ಲಂಘನೆ ಮಾಡಿ ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಮೇಕೆದಾಟು ಪಾದಯಾತ್ರೆಯನ್ನು ನಡೆಸಲಾಗಿತ್ತು. ಈ

ಡಿಕೆಶಿ ವಿರುದ್ದ ದಾಖಲಾಗಿದ್ದ 5 ಪ್ರಕರಣಗಳನ್ನು ರದ್ದುಗೊಳಿಸಿ ಹೈಕೋರ್ಟ್ ಆದೇಶ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪ್ರಯಾಣಿಕನಿಂದ 5ಲಕ್ಷ ರೂ. ಕದ್ದು ಪರಾರಿಯಾಗಲೆತ್ನಿಸಿದ ಆರೋಪಿಯನ್ನು ಸೆರೆಹಿಡಿದ ಕೆಎಸ್ಸಾರ್ಟಿಸಿ ಸಿಬ್ಬಂದಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 16. ಪ್ರಯಾಣಿಕರೋರ್ವರು ಊಟಕ್ಕೆ ಕುಳಿತಿದ್ದ ವೇಳೆ ಅವರ ಬಳಿ ಇದ್ದ 5 ಲಕ್ಷ ರೂ. ನಗದನ್ನು ಕದ್ದು ಪರಾರಿಯಾಗುತ್ತಿದ್ದ ಸಹ ಪ್ರಯಾಣಿಕನೊಬ್ಬನನ್ನು ಕೆಎಸ್ಸಾರ್ಟಿಸಿ ಚಾಲಕನ ಸಮಯಪ್ರಜ್ಞೆಯಿಂದ ವಾಪಾಸ್ ಪಡೆಯುವಲ್ಲಿ ಯಶಸ್ವಿಯಾಗಿದ್ದು, ಚಾಲಕನ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಬೆಂಗಳೂರು- ತಿರುನಲ್ಲೂರ್ ಮಾರ್ಗದಲ್ಲಿ ಕಾರ್ಯಾಚರಣೆಯಲ್ಲಿದ್ದ ಬಸ್ ನ ಆಸನ ಸಂಖ್ಯೆ 17-18ರಲ್ಲಿ ಪ್ರಯಾಣಿಕನ ಸೋಗಿನಲ್ಲಿ ಕುಳಿತಿದ್ದ ವ್ಯಕ್ತಿ ಬಸ್ಸಿನ ಆಸನ ಸಂಖ್ಯೆ 29-30ರಲ್ಲಿ ಕುಳಿತಿದ್ದ ದಂಪತಿ ಊಟಕ್ಕೆಂದು ಕೆಳಗಿಳಿದಾಗ ಅವರ ಬಳಿಯಿದ್ದ 5

ಪ್ರಯಾಣಿಕನಿಂದ 5ಲಕ್ಷ ರೂ. ಕದ್ದು ಪರಾರಿಯಾಗಲೆತ್ನಿಸಿದ ಆರೋಪಿಯನ್ನು ಸೆರೆಹಿಡಿದ ಕೆಎಸ್ಸಾರ್ಟಿಸಿ ಸಿಬ್ಬಂದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಿವಮೊಗ್ಗ ಮೆಸ್ಕಾಂ ಕಛೇರಿಗೆ ಮುತ್ತಿಗೆಗೆ ಯತ್ನ ➤ ಸಂಸದ ಬಿವೈ.ರಾಘವೇಂದ್ರ ಸೇರಿ ಹಲವರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಜೂ. 15. ಸಂಸದ ಬಿ.ವೈ.ರಾಘವೇಂದ್ರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ವಿದ್ಯುತ್ ದರ ಹೆಚ್ಚಳವನ್ನು ಖಂಡಿಸಿ ಶಿವಮೊಗ್ಗ ಮೆಸ್ಕಾಂ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿದ್ದು, ಕಾಂಗ್ರೆಸ್ ಸರಕಾರದ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಈ ವೇಳೆ ಮಾತನಾಡಿದ ಬಿವೈ ರಾಘವೇಂದ್ರ, ಕಾಂಗ್ರೆಸ್ ನವರು ಜನರಿಗೆ ಸುಳ್ಳು ಭರವಸೆ ಕೊಟ್ಟು ಅಧಿಕಾರಕ್ಕೆ ಬಂದಿದ್ದಲ್ಲದೇ ಉಚಿತ ವಿದ್ಯುತ್ ಎಂದು ಘೋಷಣೆ ಮಾಡಿ ಇದೀಗ ವಿದ್ಯುತ್ ದರ ಹೆಚ್ಚಿಸಿದ್ದಾರೆ. ಸರಕಾರ ತಕ್ಷಣ ಈ ಆದೇಶವನ್ನು ಹಿಂಪಡೆಯಬೇಕು

ಶಿವಮೊಗ್ಗ ಮೆಸ್ಕಾಂ ಕಛೇರಿಗೆ ಮುತ್ತಿಗೆಗೆ ಯತ್ನ ➤ ಸಂಸದ ಬಿವೈ.ರಾಘವೇಂದ್ರ ಸೇರಿ ಹಲವರು ಪೊಲೀಸ್ ವಶಕ್ಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರತದಲ್ಲಿ ಫೇಸ್ ಬುಕ್ ಬಂದ್ ಮಾಡಿಸಬೇಕಾಗುತ್ತದೆ ➤ ಕರ್ನಾಟಕ ಹೈಕೋರ್ಟ್ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 15. ಸಿಎಎ ಮತ್ತು ಎನ್ಆರ್.ಸಿಯನ್ನು ಬೆಂಬಲಿಸಿದ ಕಾರಣಕ್ಕೆ ಯಾರೋ ಅಪರಿಚಿತರು ಮಂಗಳೂರು ಮೂಲದ ಶೈಲೇಶ್ ಕುಮಾರ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು, ಸೌದಿ ಅರೇಬಿಯಾದ ದೊರೆಯ ಬಗ್ಗೆ ಅವಹೇಳನಕಾರಿ ಪೋಸ್ಟ್ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಗೆ ಸೂಕ್ತ ಸಹಕಾರ ನೀಡದೇ ಇದ್ದಲ್ಲಿ ಭಾರತದಲ್ಲಿ ಫೇಸ್ ಬುಕ್ ಕಾರ್ಯಾಚರಣೆ ಬಂದ್ ಮಾಡುವಂತೆ ಆದೇಶ ಹೊರಡಿಸಬೇಕಾಗುತ್ತದೆ ಎಂದು ಹೈಕೋರ್ಟ್ ಎಚ್ಚರಿಕೆ ನೀಡಿದೆ. ಯಾರೋ ಅಪರಿಚಿತರು ನಕಲಿ ಎಫ್.ಬಿ ಅಕೌಂಟ್ ತೆರೆದು

ಭಾರತದಲ್ಲಿ ಫೇಸ್ ಬುಕ್ ಬಂದ್ ಮಾಡಿಸಬೇಕಾಗುತ್ತದೆ ➤ ಕರ್ನಾಟಕ ಹೈಕೋರ್ಟ್ ಎಚ್ಚರಿಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಆನ್-ಲೈನ್ ವಂಚನೆ ಜಾಲ “ಪಿಂಕ್ ವಾಟ್ಸಾಪ್” ➤ ಎಚ್ಚರಿಕೆ ವಹಿಸುವಂತೆ ಪೊಲೀಸ್ ಇಲಾಖೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಉಡುಪಿ, ಜೂ. 15. ಆನ್-ಲೈನ್ ವಂಚನೆ ಜಾಲವಾದ ಪಿಂಕ್ ವಾಟ್ಸಾಪ್ ಬಗ್ಗೆ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯು ನಿರ್ದೇಶನ ನೀಡಿದೆ. ಪಿಂಕ್ ವಾಟ್ಸಾಪ್ ನ್ನು ಹೆಚ್ಚಿನ ಫ್ಯೂಚರ್ಸ್‌ಗಳೊಂದಿಗೆ ಹೊಸ ರೂಪದಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಲಾಗುತ್ತಿದ್ದು, ಇದನ್ನು ಅಗತ್ಯವಾಗಿ ಪ್ರಯತ್ನಿಸಿ ಎಂಬ ಲಿಂಕ್‌ನೊಂದಿಗೆ ಮೊಬೈಲ್ ಗಳಿಗೆ ಎಸ್‌ಎಂಎಸ್ ಬರುತ್ತಿದ್ದು, ಇದನ್ನು ನಂಬಿದ ಸಾಕಷ್ಟು ಮಂದಿ ನಕಲಿ ಪಿಂಕ್ ವಾಟ್ಸಾಪ್‌ ಅನ್ನು ಇನ್‌ಸ್ಟಾಲ್ ಮಾಡುತ್ತಿದ್ದಾರೆ. ಇದರ ಪರಿಣಾಮ ಹ್ಯಾಕರ್ಸ್‌ಗಳು ಮೊಬೈಲ್‌ನಲ್ಲಿರುವ ಫೋಟೋಗಳು,

ಆನ್-ಲೈನ್ ವಂಚನೆ ಜಾಲ “ಪಿಂಕ್ ವಾಟ್ಸಾಪ್” ➤ ಎಚ್ಚರಿಕೆ ವಹಿಸುವಂತೆ ಪೊಲೀಸ್ ಇಲಾಖೆ ಎಚ್ಚರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜೂ. 26ರಂದು ದೇಶದ 5 ಕಡೆ ವಂದೇಭಾರತ್ ರೈಲುಗಳಿಗೆ ಚಾಲನೆ

(ನ್ಯೂಸ್ ಕಡಬ) newskadaba.com ನವದೆಹಲಿ, ಜೂ. 15. ಜೂ. 26ರಂದು ಬೆಂಗಳೂರು-ಹುಬ್ಬಳ್ಳಿ ಸೇರಿದಂತೆ ದೇಶದ ಐದು ಮಾರ್ಗಗಳಲ್ಲಿ ಹೊಸ ವಂದೇ ಭಾರತ್‌ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ಬೆಂಗಳೂರು-ಹುಬ್ಬಳ್ಳಿ, ಮುಂಬೈ-ಗೋವಾ, ಪಾಟ್ನಾ-ರಾಂಚಿ, ಭೋಪಾಲ್‌-ಇಂದೋರ್‌ ಹಾಗೂ ಭೋಪಾಲ್‌-ಜಬ್ಬಲ್‌ಪುರ ಮಾರ್ಗದಲ್ಲಿ ವಂದೇ ಭಾರತ್‌ ಸಂಚಾರಕ್ಕೆ ಚಾಲನೆ ನೀಡಲಾಗುತ್ತಿದೆ. ಒಡಿಶಾ ರೈಲು ದುರಂತದ ಬಳಿಕ ಮುಂಬೈ ಹಾಗೂ ಗೋವಾ ನಡುವಿನ ವಂದೇ ಭಾರತ್‌ ಉದ್ಘಾಟನೆ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿತ್ತು.

ಜೂ. 26ರಂದು ದೇಶದ 5 ಕಡೆ ವಂದೇಭಾರತ್ ರೈಲುಗಳಿಗೆ ಚಾಲನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top