ಬ್ರೇಕಿಂಗ್ ನ್ಯೂಸ್

ಶರದ್ ಪವಾರ್ ಗೆ ಕೊಲೆ ಬೆದರಿಕೆ ಪ್ರಕರಣ ➤ ಆರೋಪಿ ಐಟಿ ಕಂಪನಿ ಉದ್ಯೋಗಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮುಂಬೈ, ಜೂ. 12. ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್‌ಗೆ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಪುಣೆಯ ಐಟಿ ಕಂಪನಿ ಉದ್ಯೋಗಿಯೋರ್ವನನ್ನು ಮುಂಬೈ ಕ್ರೈಂ ಬಾಂಚ್, ಪುಣೆಯಲ್ಲಿ ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತನನ್ನು ಸಾಗರ್ ಬರ್ವೆ(34) ಎಂದು ಗುರುತಿಸಲಾಗಿದೆ. ಈತ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಕೊಲೆ ಬೆದರಿಕೆಗಳನ್ನು ಕಳುಹಿಸಲು ಎರಡು ನಕಲಿ ಸಾಮಾಜಿಕ ಮಾಧ್ಯಮ ಖಾತೆಗಳನ್ನು ರಚಿಸಿ, ವಾಟ್ಸಾಪ್ ಮೂಲಕ ಶರದ್ ಪವಾರ್ ಪುತ್ರಿ ಸುಪ್ರಿಯಾ ಸುಳೆ ಅವರ ಮೊಬೈಲ್ […]

ಶರದ್ ಪವಾರ್ ಗೆ ಕೊಲೆ ಬೆದರಿಕೆ ಪ್ರಕರಣ ➤ ಆರೋಪಿ ಐಟಿ ಕಂಪನಿ ಉದ್ಯೋಗಿ ಅರೆಸ್ಟ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನೆಲ್ಯಾಡಿ: ಬೆಳ್ಳಂಬೆಳಗ್ಗೆ ಹೊಳೆಗೆ ಬಿದ್ದ ಕಾರು ➤ ಓರ್ವ ಮೃತ್ಯು, ಮತ್ತೋರ್ವ ಗಂಭೀರ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜೂ.11. ಚಾಲಕನ ನಿಯಂತ್ರಣ ತಪ್ಪಿದ ಮಾರುತಿ ಎರ್ಟಿಗಾ ಕಾರು ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಅಡ್ಡಹೊಳೆ ಎಂಬಲ್ಲಿ ರಸ್ತೆ ಬದಿಯ ಹೊಳೆಗೆ ಉರುಳಿ ಬಿದ್ದ ಘಟನೆ ಭಾನುವಾರ ಬೆಳಗಿನ ಜಾವ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಹೊಸೂರು ನಿವಾಸಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುವನ್ನು ಅಶ್ವಿನಿ ಆಂಬ್ಯುಲೆನ್ಸ್ ಮೂಲಕ ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ನೀರಿನಲ್ಲಿ ಮುಳುಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.  

ನೆಲ್ಯಾಡಿ: ಬೆಳ್ಳಂಬೆಳಗ್ಗೆ ಹೊಳೆಗೆ ಬಿದ್ದ ಕಾರು ➤ ಓರ್ವ ಮೃತ್ಯು, ಮತ್ತೋರ್ವ ಗಂಭೀರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸರಕಾರಿ ಹುದ್ದೆ ಕೊಡಿಸುವುದಾಗಿ ವಂಚನೆ ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಮಣಿಪಾಲ, ಜೂ. 10. ವಿಧಾನಸೌಧದಲ್ಲಿ ಸರ್ಕಾರಿ ಹುದ್ದೆ ಕೊಡಿಸುವುದಾಗಿ ವ್ಯಕ್ತಿಯೋರ್ವರಿಂದ ಹಣ ಪಡೆದು ವಂಚಿಸಿದ ಘಟನೆ ವರದಿಯಾಗಿದೆ. ಕುಂಜಿಬೆಟ್ಟು ಮನೋಳಿಗುಜ್ಜಿ ನಿವಾಸಿ ನವೀನ್ ರಾವ್ ಎಂಬವರಿಗೆ ಬಾಸ್ಕರ್ ಭಟ್ ಎಂಬಾತ ವಿಧಾನಸೌಧದಲ್ಲಿ ಸರ್ಕಾರಿ ಹುದ್ದೆ ಕೊಡಿಸುವುದಾಗಿ ಹೇಳಿ ಹಂತ ಹಂತವಾಗಿ 40 ಸಾವಿರ ರೂ. ನಗದು ಪಡೆದು ಫೆ. 20ರ ಒಳಗೆ ಉದ್ಯೋಗದ ಆದೇಶ ಬರುವುದಾಗಿ ಹೇಳಿದ್ದು, ಇದುವರೆಗೂ ಯಾವುದೇ ನೇಮಕಾತಿ ಆದೇಶವು ಬಾರದೆ ವಂಚಿಸಿದ್ದಾರೆ. ಇದೀಗ ನೀಡಿದ ಹಣವನ್ನು ವಾಪಾಸು ಕೊಡಲು

ಸರಕಾರಿ ಹುದ್ದೆ ಕೊಡಿಸುವುದಾಗಿ ವಂಚನೆ ➤ ದೂರು ದಾಖಲು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮತ್ತೆ ಇನ್ಸ್ಟಾಗ್ರಾಮ್ ಸರ್ವರ್ ಡೌನ್

(ನ್ಯೂಸ್ ಕಡಬ) newskadaba.com ನವದೆಹಲಿ, ಜೂ. 09. ಜನಪ್ರಿಯ ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್ ಸೇವೆಯಲ್ಲಿ ಮತ್ತೆ ವ್ಯತ್ಯಯ ಉಂಟಾಗಿದ್ದು, ಭಾರತ ಸೇರಿದಂತೆ ಜಗತ್ತಿನ ಇತರ ಕೆಲವು ಭಾಗಗಳಲ್ಲೂ ಮೆಟಾ ಒಡೆತನದ ಪ್ರಸಿದ್ಧ ಅಪ್ಲಿಕೇಷನ್ ಇನ್ಸ್ಟಾಗ್ರಾಮ್ ಸಮಸ್ಯೆಗಳನ್ನು ಎದುರಿಸುತ್ತಿದೆ. ಈ ಕುರಿತು ಡೌನ್‌ ಡೆಕ್ಟರ್ ಹೇಳಿರುವ ಪ್ರಕಾರ, ಬಳಕೆದಾರರ ಪೈಕಿ 44 ಪ್ರತಿಶತದಷ್ಟು ಜನರು ಅಪ್ಲಿಕೇಶನ್ ನೊಂದಿಗೆ ಸಮಸ್ಯೆ ಎದುರಿಸುತ್ತಿದ್ದಾರೆ, 32 ಪ್ರತಿಶತದಷ್ಟು ಜನರು ವೆಬ್ ಆವೃತ್ತಿಯೊಂದಿಗೆ ಸಮಸ್ಯೆಗಳನ್ನು ಹೊಂದಿದ್ದಾರೆ ಮತ್ತು 24 ಪ್ರತಿಶತದಷ್ಟು ಜನರು ಸರ್ವರ್ ಸಂಪರ್ಕದಲ್ಲಿ

ಮತ್ತೆ ಇನ್ಸ್ಟಾಗ್ರಾಮ್ ಸರ್ವರ್ ಡೌನ್ Read More »

ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್

ಲಾರಿ ತಡೆದು ಹಣ ವಸೂಲಿ ಆರೋಪ ➤ ಎಎಸ್ಐ ಸಹಿತ ಇಬ್ಬರು ಪೊಲೀಸರ ಅಮಾನತು

(ನ್ಯೂಸ್ ಕಡಬ) newskadaba.com ತುಮಕೂರು, ಜೂ. 09. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಲಾರಿಗಳನ್ನು ತಡೆದು ಹಣ ವಸೂಲಿ ಮಾಡುತ್ತಿದ್ದ  ಆರೋಪದಲ್ಲಿ ಎಎಸ್ಐ ಸಹಿತ ಇಬ್ಬರು ಪೊಲೀಸರನ್ನು ಅಮಾನತು ಮಾಡಿರುವ ಕುರಿತು ವರದಿಯಾಗಿದೆ. ಕಳ್ಳಂಬೆಳ್ಳ ಠಾಣೆಯ ಎಎಸ್ಐ ಚಿದಾನಂದ ಸ್ವಾಮಿ ಮತ್ತು ಜೀಪು ಚಾಲಕ ಚಿಕ್ಕಹನುಮಯ್ಯ ಎಂಬವರು ಲಾರಿಗಳನ್ನು ತಡೆದು ಹಣ ವಸೂಲಿ ಮಾಡುತ್ತಿರುವ ಬಗ್ಗೆ ಶಿರಾ ಠಾಣಾ ಇನ್ಸ್ಪೆಕ್ಟರ್ ನೀಡಿರುವ ದೂರಿನಂತೆ ಎಸ್ಪಿ ರಾಹುಲ್ ಕುಮಾರ್ ಇಬ್ಬರನ್ನು ಅಮಾನತು ಮಾಡಿ ಆದೇಶಿಸಿದ್ದಾರೆ.

ಲಾರಿ ತಡೆದು ಹಣ ವಸೂಲಿ ಆರೋಪ ➤ ಎಎಸ್ಐ ಸಹಿತ ಇಬ್ಬರು ಪೊಲೀಸರ ಅಮಾನತು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಮಾನದಲ್ಲಿ ಕುಳಿತು ಫೋನ್ ಸಂಭಾಷಣೆಯಲ್ಲಿ ‘ಬಾಂಬ್’ ಬಗ್ಗೆ ಚರ್ಚೆ ➤ ವ್ಯಕ್ತಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜೂ. 09. ಫೋನ್ ಸಂಭಾಷಣೆ ಮೂಲಕ ಬಾಂಬ್ ಬಗ್ಗೆ ಮಾತನಾಡಿದ್ದಕ್ಕೆ ದೆಹಲಿಯ ಇಂದಿರಾಗಾಂಧಿ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಓರ್ವ ವ್ಯಕ್ತಿಯನ್ನು ಬಂಧಿಸಿದ ಕುರಿತು ವರದಿಯಾಗಿದೆ. ಆರೋಪಿ ಉತ್ತರ ಪ್ರದೇಶದ ಪಿಲಿಭಿತ್ ನಿವಾಸಿ ಅಝೀಂ ಖಾನ್ ಎಂಬಾತ ವಿಸ್ತಾರಾ ವಿಮಾನ ಸಂಖ್ಯೆ ಯುಕೆ-941 ರಲ್ಲಿ ದುಬೈಗೆ ಪ್ರಯಾಣಿಸುತ್ತಿದ್ದು, ಫೋನಿನ ಮೂಲಕ ಬಾಂಬ್ ಕುರಿತು ಮಾತನಾಡುತ್ತಿದ್ದನು. ಇದನ್ನು ಕೇಳಿಸಿಕೊಂಡ ಮಹಿಳೆಯೊಬ್ಬರು ತಕ್ಷಣ ವಿಮಾನದಲ್ಲಿದ್ದ ವಿಮಾನ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಮಹಿಳೆಯ ದೂರಿನ ಆಧಾರದ

ವಿಮಾನದಲ್ಲಿ ಕುಳಿತು ಫೋನ್ ಸಂಭಾಷಣೆಯಲ್ಲಿ ‘ಬಾಂಬ್’ ಬಗ್ಗೆ ಚರ್ಚೆ ➤ ವ್ಯಕ್ತಿ ಅರೆಸ್ಟ್..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

NCP ಅಧ್ಯಕ್ಷ ಶರದ್ ಪವಾರ್ ಗೆ ಕೊಲೆ ಬೆದರಿಕೆ

(ನ್ಯೂಸ್ ಕಡಬ) newskadaba.com ಮುಂಬೈ, ಜೂ. 09. ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಅವರಿಗೆ ಶುಕ್ರವಾರ ಟ್ವಿಟರ್ ಮೂಲಕ ಕೊಲೆ ಬೆದರಿಕೆ ಹಾಕಲಾಗಿದೆ. ಪಕ್ಷದ ಮುಖಂಡರ ನಿಯೋಗವು ಪೊಲೀಸ್ ಕಮಿಷನರ್ ಕಛೇರಿಗೆ ಭೇಟಿ ನೀಡಿ ಬೆದರಿಕೆ ಹಾಕಿರುವ ಟ್ವಿಟರ್ ಖಾತೆಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಈ ಹಿಂದೆಯೂ ಕೂಡಾ ಶರದ್ ಪವಾರ್ ಅವರಿಗೆ ಕೊಲೆ ಬೆದರಿಕೆ ಹಾಕಲಾಗಿತ್ತು. ಈ ಸಂಬಂಧ ಪೊಲೀಸರು ಎನ್ ಸೋನಿ(45) ಎಂಬ ಆರೋಪಿಯನ್ನು ಬಂಧಿಸಿದ್ದರು.

NCP ಅಧ್ಯಕ್ಷ ಶರದ್ ಪವಾರ್ ಗೆ ಕೊಲೆ ಬೆದರಿಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಲುಷಿತ ನೀರು ಸೇವಿಸಿ 10ರ ಬಾಲಕಿ ಮೃತ್ಯು

(ನ್ಯೂಸ್ ಕಡಬ) newskadaba.com ಕೊಪ್ಪಳ, ಜೂ. 08. ಕಲುಷಿತ ನೀರು ಸೇವಿಸಿ 15ಕ್ಕೂ ಹೆಚ್ಚು ಜನ ಆಸ್ಪತ್ರೆಗೆ ದಾಖಲಾಗಿದ್ದು, ಈ ಪೈಕಿ ಓರ್ವ ಬಾಲಕಿ ಮೃತಪಟ್ಟ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಠಗಿ ತಾಲೂಕಿನ ಬಿಜಕಲ್ ಗ್ರಾಮದಿಂದ ವರದಿಯಾಗಿದೆ. ಮೃತ ಬಾಲಕಿಯನ್ನು ನಿರ್ಮಲಾ ಈರಪ್ಪ ಬೆಳಗಲ್ (10) ಎಂದು ಗುರುತಿಸಲಾಗಿದೆ. ಬಿಜಕಲ್ ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ 15ಕ್ಕೂ ಹೆಚ್ಚು ಜನ ಆಸ್ಪತ್ರೆಗೆ ದಾಖಲಾಗಿದ್ದರು. ಈ ನಡುವೆ ಮೃತ ಬಾಲಕಿಗೆ ನಿನ್ನೆ ರಾತ್ರಿ ವಾಂತಿ ಭೇದಿ ಕಾಣಿಸಿಕೊಂಡಿತ್ತು. ರಾತ್ರಿ

ಕಲುಷಿತ ನೀರು ಸೇವಿಸಿ 10ರ ಬಾಲಕಿ ಮೃತ್ಯು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರೆಪೋ ದರದಲ್ಲಿ ಯಥಾಸ್ಥಿತಿ- ಆರ್ ಬಿಐ ನಿರ್ಧಾರ

(ನ್ಯೂಸ್ ಕಡಬ) newskadaba.com ನವದೆಹಲಿ, ಜೂ. 08. ಆರ್ ಬಿಐ ಹಣಕಾಸು ನೀತಿ ಸಮಿತಿಯ ರೆಪೋ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ಧರಿಸಿದೆ ಎಂದು ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ತಿಳಿಸಿದ್ದಾರೆ. ಸದ್ಯದ ರೆಪೋ ದರ ಶೇಕಡಾ 6.5 ರಷ್ಟಿದೆ. 2023-24ರ ಹಣಕಾಸು ವರ್ಷದಲ್ಲಿ ಜಿಡಿಪಿ ಬೆಳವಣಿಗೆ 6.5ರಷ್ಟೇ ಇರಬಹುದು ಎಂದು ಅಂದಾಜಿಸಲಾಗಿದ್ದು, ಹಣದುಬ್ಬರ ಶೇ. 5.1 ರಷ್ಟಿದೆ ಎಂದು ಗವರ್ನರ್ ಶಕ್ತಿಕಾಂತ್ ದಾಸ್ ಹೇಳಿದ್ದಾರೆ.

ರೆಪೋ ದರದಲ್ಲಿ ಯಥಾಸ್ಥಿತಿ- ಆರ್ ಬಿಐ ನಿರ್ಧಾರ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

12 ವರ್ಷ ಮೇಲ್ಪಟ್ಟ ಹಸುಗಳನ್ನು ಕೊಲ್ಲಲು ಕಾನೂನಿನಲ್ಲಿ ಅವಕಾಶವಿದೆ ➤ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 05. ರಾಜ್ಯದಲ್ಲಿ 12 ವರ್ಷ ಮೇಲ್ಪಟ್ಟ ಹಸುಗಳನ್ನು ಕೊಲ್ಲಲು ಕಾನೂನಿನಲ್ಲಿ ಅವಕಾಶವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಕರ್ನಾಟಕ ಸರ್ಕಾರವು ಗೋಹತ್ಯೆ ನಿಷೇಧ ಕಾನೂನನ್ನು ಹಿಂಪಡೆಯುವ ಕುರಿತು ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ನಡುವೆ ಮಾತಿನ ಚಕಮಕಿ ನಡೆಯುತ್ತಿದ್ದು, ಈ ಬೆನ್ನಲ್ಲೇ ಎಮ್ಮೆಗಳನ್ನು ಕಡಿಯುವುದಾದರೆ ಹಸುಗಳನ್ನು ಏಕೆ ಹತ್ಯೆ ಮಾಡಬಾರದು ಎಂದು ಪ್ರಶ್ನಿಸಿರುವ ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ ಅವರು ಕೇಳಿರುವ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಮಾತನಾಡಿ, 12

12 ವರ್ಷ ಮೇಲ್ಪಟ್ಟ ಹಸುಗಳನ್ನು ಕೊಲ್ಲಲು ಕಾನೂನಿನಲ್ಲಿ ಅವಕಾಶವಿದೆ ➤ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top