ಬ್ರೇಕಿಂಗ್ ನ್ಯೂಸ್

ಜುಲೈ 07ರಂದು ರಾಜ್ಯ ಬಜೆಟ್ ಮಂಡನೆ ➤ ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ದಾವಣಗೆರೆ, ಜೂ. 05. ಬರುವ ಜುಲೈ 3 ರಿಂದ ರಾಜ್ಯ ಬಜೆಟ್ ಅಧಿವೇಶನ ಪ್ರಾರಂಭವಾಗಲಿದ್ದು, ಜು. 07ರಂದು ಬಜೆಟ್ ಮಂಡನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ, ಹಣಕಾಸು ಇಲಾಖೆ ಸಚಿವ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಜೆಟ್ ಅಧಿವೇಶನದ ಮೊದಲ ದಿನ ರಾಜ್ಯಪಾಲರು ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡುವರು. ರಾಜ್ಯಪಾಲರ ಭಾಷಣದ ಕುರಿತು ಚರ್ಚೆ ನಡೆದ ಬಳಿಕ ಜು. 07 ರ ಶುಕ್ರವಾರದಂದು ಬಜೆಟ್ ಮಂಡನೆ ಮಾಡಲಾಗುವುದು ಎಂದರು. ಇನ್ನು ಈ […]

ಜುಲೈ 07ರಂದು ರಾಜ್ಯ ಬಜೆಟ್ ಮಂಡನೆ ➤ ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಒಡಿಶಾದ ಮತ್ತೊಂದು ಜಿಲ್ಲೆಯಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು- ತಪ್ಪಿದ ಅನಾಹುತ ➤ ಬಾಲಸೋರ್ ಭೀಕರ ದುರಂತದ ಬೆನ್ನಲ್ಲೇ ಘಟನೆ

(ನ್ಯೂಸ್ ಕಡಬ) newskadaba.com ಒಡಿಶಾ, ಜೂ. 05. ಕಳೆದ ವಾರ ನಡೆದ ಭೀಕರ ರೈಲು ದುರಂತದ ದುಃಖ ಮಾಸುವ ಮುನ್ನವೇ ಬಾರ್ಗಢ ಜಿಲ್ಲೆಯ ಮೆಂಧಪಾಲಿ ಬಳಿ ಗೂಡ್ಸ್ ರೈಲಿನ ಐದು ಬೋಗಿಗಳು ಹಳಿತಪ್ಪಿದ ಘಟನೆ ವರದಿಯಾಗಿದೆ. ವರದಿಯ ಪ್ರಕಾರ, ಸುಣ್ಣದಕಲ್ಲು ಸಾಗಿಸುತ್ತಿದ್ದ ಗೂಡ್ಸ್ ರೈಲಿನ ಹಲವಾರು ವ್ಯಾಗನ್‌ಗಳು ಬರ್ಗರ್‌ನಲ್ಲಿ ಹಳಿತಪ್ಪಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ, ಘಟನಾ ಸ್ಥಳಕ್ಕೆ ಈಗಾಗಲೇ ಪೊಲೀಸರು ಧಾವಿಸಿದ್ದು, ತನಿಖೆ ಆರಂಭಿಸಿದ್ದಾರೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಒಡಿಶಾದ ಮತ್ತೊಂದು ಜಿಲ್ಲೆಯಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು- ತಪ್ಪಿದ ಅನಾಹುತ ➤ ಬಾಲಸೋರ್ ಭೀಕರ ದುರಂತದ ಬೆನ್ನಲ್ಲೇ ಘಟನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೊದಲ ಗ್ಯಾರಂಟಿಯಾಗಿ ‘ಗೃಹ ಜ್ಯೋತಿ’ ಯೋಜನೆ ಜಾರಿ- ಜುಲೈ 01ರಿಂದ 200 ಯುನಿಟ್ ವಿದ್ಯುತ್ ಫ್ರೀ ➤ ಹಳೇ ವಿದ್ಯುತ್ ಬಾಕಿಯನ್ನು ಗ್ರಾಹಕರೇ ಪಾವತಿಸಬೇಕು- ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 02. ಚುನಾವಣಾ ಸಂದರ್ಭದಲ್ಲಿ ಐದು ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ ಎಂದಿದ್ದ ಕಾಂಗ್ರೆಸ್, ಈ ಆರ್ಥಿಕ ವರ್ಷದಲ್ಲಿ 5 ಗ್ಯಾರಂಟಿ ಯೋಜನೆಯನ್ನು ಜಾರಿಗೊಳಿಸಲು ನಿರ್ಧಾರ ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಬಗ್ಗೆ ಸಂಪುಟ ಸಭೆಯ ಬಳಿಕ ವಿಧಾನಸೌಧದ ಸಮ್ಮೇಳನದ ಸಭಾಂಗಣದಲ್ಲಿ ಮಾತನಾಡಿದ ಅವರು, ರಾಜ್ಯದ ಯಾವುದೇ ಜಾತಿ, ಧರ್ಮ, ಭಾಷೆ ನೋಡದೇ ಈ ಯೋಜನೆಗಳನ್ನು ತಲುಪಿಸುತ್ತೇವೆ. ಮೊದಲ ಗ್ಯಾರಂಟಿಯಾಗಿ ‘ಗೃಹ ಜ್ಯೋತಿ‘ ಯೋಜನೆ ಜಾರಿ ಮಾಡಲಾಗಿದೆ. 12 ತಿಂಗಳ

ಮೊದಲ ಗ್ಯಾರಂಟಿಯಾಗಿ ‘ಗೃಹ ಜ್ಯೋತಿ’ ಯೋಜನೆ ಜಾರಿ- ಜುಲೈ 01ರಿಂದ 200 ಯುನಿಟ್ ವಿದ್ಯುತ್ ಫ್ರೀ ➤ ಹಳೇ ವಿದ್ಯುತ್ ಬಾಕಿಯನ್ನು ಗ್ರಾಹಕರೇ ಪಾವತಿಸಬೇಕು- ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಮನೆಯ ಮೇಲ್ಛಾವಣಿಯಿಂದ ಕೆಳಗೆ ಬಿದ್ದ ಕಾರ್ಮಿಕ ➤ ಆಸ್ಪತ್ರೆಗೆ ದಾಖಲಿಸುವ ಹಾದಿ ಮಧ್ಯೆ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಜೂ.02. ಮನೆಯ ಮೇಲ್ಛಾವಣಿಯಿಂದ ಬಿದ್ದು ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರದಂದು ನೆಟ್ಟಣದಲ್ಲಿ ನಡೆದಿದೆ. ಮೃತರನ್ನು ಅಲಂಕಾರು ಗ್ರಾಮದ ಶರವೂರು ನಿವಾಸಿ ಪದ್ಮನಾಭ ಎಂಬವರ ಪುತ್ರ ಹರಿಪ್ರಸಾದ್ ಎಂದು ಗುರುತಿಸಲಾಗಿದೆ. ನೆಟ್ಟಣದ ಮೇರೊಂಜಿ ಎಂಬಲ್ಲಿ ನಿರ್ಮಾಣ ಹಂತದ ಮನೆಯ ಮೇಲ್ಛಾವಣಿಯಿಂದ ಹರಿಪ್ರಸಾದ್ ಕೆಳಗೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣವೇ ನೆಟ್ಟಣದ ಪ್ರಕಾಶ್ ಎಂಬವರ ಜೀಪಿನಲ್ಲಿ ಸ್ಥಳೀಯ ಯುವಕರು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅದಾಗಲೇ ಮೃತಪಟ್ಟ ಬಗ್ಗೆ ವರದಿಯಾಗಿದೆ.

ಕಡಬ: ಮನೆಯ ಮೇಲ್ಛಾವಣಿಯಿಂದ ಕೆಳಗೆ ಬಿದ್ದ ಕಾರ್ಮಿಕ ➤ ಆಸ್ಪತ್ರೆಗೆ ದಾಖಲಿಸುವ ಹಾದಿ ಮಧ್ಯೆ ಮೃತ್ಯು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಕೆಎಸ್ಸಾರ್ಟಿಸಿ ಬಸ್ ಗೆ ದಂತದಿಂದ ತಿವಿದ ಕಾಡಾನೆ – ಬಸ್ ಗೆ ಹಾನಿ

(ನ್ಯೂಸ್ ಕಡಬ) newskadaba.com ಕಡಬ, ಜೂ.02. ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಸ್ಲೀಪರ್ ಬಸ್ ಗೆ ಕಾಡಾನೆಯೊಂದು ದಂತದಿಂದ ತಿವಿದ ಹಿನ್ನೆಲೆಯಲ್ಲಿ ಬಸ್ ಗೆ ಹಾನಿಯಾದ ಘಟನೆ ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯ ಕೆಂಜಾಳ ಸಮೀಪದ ಅನಿಲ ಎಂಬಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಪುತ್ತೂರಿನಿಂದ ಕಾಣಿಯೂರು ಮಾರ್ಗವಾಗಿ ಸುಬ್ರಹ್ಮಣ್ಯ ಮೂಲಕ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಚಾಲಕ ಅನಿಲ ಎಂಬಲ್ಲಿ ರಸ್ತೆ ಬದಿ ನಿಂತಿದ್ದ ಕಾಡಾನೆಯನ್ನು ಕಂಡು ತಪ್ಪಿಸಲು ಯತ್ನಿಸಿದರಾದರೂ, ಆನೆಯು ಬಸ್ಸಿನ ಎಡಭಾಗಕ್ಕೆ ದಂತದಿಂದ ತಿವಿದಿದೆ. ಚಾಲಕನ

ಕಡಬ: ಕೆಎಸ್ಸಾರ್ಟಿಸಿ ಬಸ್ ಗೆ ದಂತದಿಂದ ತಿವಿದ ಕಾಡಾನೆ – ಬಸ್ ಗೆ ಹಾನಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಂದಕಕ್ಕೆ ಉರುಳಿ ಬಿದ್ದ ಬಸ್ ➤ಪ್ರಾಣಾಪಾಯದಿಂದ ಪ್ರಯಾಣಿಕರು ಪಾರು

(ನ್ಯೂಸ್ ಕಡಬ)newskadaba @gmail.com ,ಜೂ.01. ಮಂಡಿ (ಹಿಮಾಚಲ ಪ್ರದೇಶ): ಜಿಲ್ಲೆಯ ಕರ್ಸೋಗ್‌ನಲ್ಲಿ ಬಹುದೊಡ್ಡ ಅನಾಹುತ ಪವಾಡದಂತೆ ತಪ್ಪಿದೆ. ಮಂಡಿ ಜಿಲ್ಲೆಯ ಕರ್ಸೋಗ್‌ ಎಂಬಲ್ಲಿ ಪ್ರಯಾಣಿಕರಿದ್ದ ಬಸ್ ಕಂದಕಕ್ಕೆ ಉರುಳಿ ಬಿದ್ದಿದೆ. ಅಪಘಾತದಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಸ್ಥಳದಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯಾಗಿದೆ.

ಕಂದಕಕ್ಕೆ ಉರುಳಿ ಬಿದ್ದ ಬಸ್ ➤ಪ್ರಾಣಾಪಾಯದಿಂದ ಪ್ರಯಾಣಿಕರು ಪಾರು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಡಬ: ಕಂಬವೇರಿದ ಲೈನ್ ಮ್ಯಾನ್ ಗೆ ವಿದ್ಯುತ್ ಶಾಕ್ ➤ ಗಂಭೀರ ಗಾಯಗೊಂಡಿದ್ದ ಲೈನ್ ಮ್ಯಾನ್ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಜೂ.01. ವಿದ್ಯುತ್ ಕಂಬವೇರಿದ್ದ ಲೈನ್ ಮ್ಯಾನ್ ಓರ್ವರು ವಿದ್ಯುತ್ ಆಘಾತಕ್ಕೊಳಗಾಗಿ ಮೃತಪಟ್ಟ ದಾರುಣ ಘಟನೆ ಗುರುವಾರದಂದು ಕಡಬದಲ್ಲಿ ನಡೆದಿದೆ. ಮೃತರನ್ನು ಬಾಗಲಕೋಟೆ ಮೂಲದ ದ್ಯಾಮಣ್ಣ ಎಂದು ಗುರುತಿಸಲಾಗಿದೆ. ಕಡಬದ ಮುಳಿಮಜಲು ಎಂಬಲ್ಲಿ ವಿದ್ಯುತ್ ಪೂರೈಕೆಯಲ್ಲಿ ಸಮಸ್ಯೆಯನ್ನು ಕಂಡು ಕಂಬವೇರಿದ್ದ ಲೈನ್ ಮ್ಯಾನ್ ದ್ಯಾಮಣ್ಣರಿಗೆ ವಿದ್ಯುತ್ ಶಾಕ್ ಹೊಡೆದಿದೆ. ಕಂಬದಲ್ಲೇ ಕೆಲಕಾಲ ಬಾಕಿಯಾಗಿದ್ದ ಅವರಿಗೆ ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕರೆದೊಯ್ಯಲಾಯಿತಾದರೂ ಅದಾಗಲೇ ಮೃತಪಟ್ಟ

ಕಡಬ: ಕಂಬವೇರಿದ ಲೈನ್ ಮ್ಯಾನ್ ಗೆ ವಿದ್ಯುತ್ ಶಾಕ್ ➤ ಗಂಭೀರ ಗಾಯಗೊಂಡಿದ್ದ ಲೈನ್ ಮ್ಯಾನ್ ಮೃತ್ಯು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ಕಂಬವೇರಿದ ಲೈನ್ ಮ್ಯಾನ್ ಗೆ ವಿದ್ಯುತ್ ಶಾಕ್ ➤ ಲೈನ್ ಮ್ಯಾನ್ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಜೂ.01. ವಿದ್ಯುತ್ ಕಂಬವೇರಿದ್ದ ಲೈನ್ ಮ್ಯಾನ್ ಓರ್ವರು ವಿದ್ಯುತ್ ಆಘಾತಕ್ಕೊಳಗಾಗಿ ಗಂಭೀರ ಗಾಯಗೊಂಡ ಘಟನೆ ಗುರುವಾರದಂದು ಕಡಬದಲ್ಲಿ ನಡೆದಿದೆ. ಗಾಯಾಳುವನ್ನು ಬಾಗಲಕೋಟೆ ಮೂಲದ ದ್ಯಾಮಣ್ಣ ಎಂದು ಗುರುತಿಸಲಾಗಿದೆ. ಕಡಬದ ಮುಳಿಮಜಲು ಸಮೀಪದ ಕಾಯರಡ್ಕ ಎಂಬಲ್ಲಿ ವಿದ್ಯುತ್ ಪೂರೈಕೆಯಲ್ಲಿ ಸಮಸ್ಯೆಯನ್ನು ಕಂಡು ಕಂಬವೇರಿದ್ದ ಲೈನ್ ಮ್ಯಾನ್ ಗೆ ವಿದ್ಯುತ್ ಶಾಕ್ ಹೊಡೆದಿದೆ. ಗಂಭೀರ ಗಾಯಗೊಂಡ ಅವರನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕರೆದೊಯ್ಯಲಾಗಿದೆ. ಈ

ಕಡಬ: ಕಂಬವೇರಿದ ಲೈನ್ ಮ್ಯಾನ್ ಗೆ ವಿದ್ಯುತ್ ಶಾಕ್ ➤ ಲೈನ್ ಮ್ಯಾನ್ ಗಂಭೀರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಒಂದೇ ವರ್ಷದಲ್ಲಿ 2ನೇ ಬಾರಿ ಕುಸಿದುಬಿದ್ದ ಬೈಯ್ಯಪ್ಪನಹಳ್ಳಿ ರೈಲ್ವೇ ಟರ್ಮಿನಲ್ ಮೇಲ್ಛಾವಣಿ!

(ನ್ಯೂಸ್ ಕಡಬ)newskadaba @gmail.com , ಬೆಂಗಳೂರು: ಜೂನ್ 1, ಲೋಕಾರ್ಪಣೆಯಾದ ಒಂದೇ ವರ್ಷದೊಳಗೆ ಎರಡನೇ ಬಾರಿ ಬೈಯ್ಯಪ್ಪನಹಳ್ಳಿ ರೈಲ್ವೇ ಟರ್ಮಿನಲ್ ಮೇಲ್ಛಾವಣಿ ಕುಸಿದಿದೆ. ಅತ್ಯಾಧುನಿಕ ವ್ಯವಸ್ಥೆಗಳೊಂದಿಗೆ ಉದ್ಘಾಟನೆಯಾದ ಬೈಯಪ್ಪನಹಳ್ಳಿಯ ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್‌ನ ಛಾವಣಿ ಒಂದೇ ವರ್ಷಕ್ಕೆ ಕುಸಿದು ಬಿದ್ದಿದ್ದು, ಭಾರಿ ಅಪಘಾತ ತಪ್ಪಿದೆ.ಟರ್ಮಿನಲ್​ನಲ್ಲಿ ಮಂಗಳವಾರ ಮಧ್ಯಾಹ್ನ ಗಾಳಿ, ಮಳೆಯಿಂದಾಗಿ ಈ ಘಟನೆ ನಡೆದಿದೆ. ಛಾವಣಿ ಕೆಳಗಿದ್ದ ಪ್ರಯಾಣಿಕರು ಪಾರಾಗಿದ್ದಾರೆ ಎಂದು ವರದಿಯಾಗಿದೆ.    

ಒಂದೇ ವರ್ಷದಲ್ಲಿ 2ನೇ ಬಾರಿ ಕುಸಿದುಬಿದ್ದ ಬೈಯ್ಯಪ್ಪನಹಳ್ಳಿ ರೈಲ್ವೇ ಟರ್ಮಿನಲ್ ಮೇಲ್ಛಾವಣಿ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಲಕ್ಷಾಂತರ ಬೆಲೆಬಾಳುವ ಚಿನ್ನಾಭರಣ ಕಳವು!

(ನ್ಯೂಸ್ ಕಡಬ)newskadaba @gmail.com ಕಾರ್ಕಳ , ಜೂನ್, 1 ನಂದಳಿಕೆ ಮೂಡುಮನೆಯಲ್ಲಿ ಲಕ್ಷಾಂತರ ಬೆಲೆಬಾಳುವ ಚಿನ್ನಾಭರಣ ಕಳವು. ಈ ಬಗ್ಗೆ ಎನ್ ಸುಧಾಕರ ರಾವ್  (66) ಕಾರ್ಕಳ ಠಾಣೆಗೆ ದೂರು ನೀಡಿದ್ದಾರೆ.ಮೇ 26 ರ ಮಧ್ಯಾಹ್ನ 3ರಿಂದ ಮೇ 30 ರ ಸಂಜೆ 6 ಗಂಟೆಯ ನಡುವಿನ ಅವಧಿಯಲ್ಲಿ ಈ ಕೃತ್ಯ ನಡೆದಿರುವುದಾಗಿದೆ. ಸುಧಾಕರ ರಾವ್ ವಾಸವಿರುವ ಮನೆಯ ಪಕ್ಕದಲ್ಲಿರುವ ಇವರ ಮೂಲಮನೆ ಮೂಡುಮನೆಯ ಕಪಾಟಿನಲ್ಲಿ ಇಟ್ಟಿದ್ದ ಸುಮಾರು 40 ಗ್ರಾಂ ತೂಕದ ಕರಿಮಣಿ ಸರ-2. 26 ಗ್ರಾಂನ

ಲಕ್ಷಾಂತರ ಬೆಲೆಬಾಳುವ ಚಿನ್ನಾಭರಣ ಕಳವು! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top