ಬ್ರೇಕಿಂಗ್ ನ್ಯೂಸ್

ರಷ್ಯಾ – ಉಕ್ರೇನ್ ಸಂಘರ್ಷ!

(ನ್ಯೂಸ್ ಕಡಬ)newskawaba @gmail.com ರಷ್ಯಾ, ಜೂನ್, 1. ಮಾಸ್ಕೋ (ರಷ್ಯಾ): ರಷ್ಯಾ ಯುದ್ಧ ಆರಂಭಿಸಿ 15 ತಿಂಗಳ ಬಳಿಕ ಉಕ್ರೇನ್ ಪ್ರತ್ಯುತ್ತರ ನೀಡುತ್ತಿದೆ. ರಷ್ಯಾ ಆಕ್ರಮಿಸಿದ ಪ್ರದೇಶಗಳನ್ನು ಮರಳಿ ವಶಕ್ಕೆ ಪಡೆಯಲು ದಾಳಿಗೆ ಮುಂದಾಗಿದೆ. ಅಂತೆಯೇ ರಷ್ಯಾದ ಗಡಿಯಲ್ಲಿ ಬುಧವಾರ ಭಾರಿ ಗುಂಡಿನ ದಾಳಿ ನಡೆದಿದೆ. ಡ್ರೋನ್ ಅಪ್ಪಳಿಸಿದ ಪರಿಣಾಮ ತೈಲ ಸಂಸ್ಕರಣಾ ಘಟಕ ಹೊತ್ತಿ ಉರಿದಿದೆ. ರಷ್ಯಾದ ಬೆಲ್ಗೊರೊಡ್‌ ಪ್ರಾಂತ್ಯದ ಗಡಿ ಜಿಲ್ಲೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಎಂಟು ಅಪಾರ್ಟ್‌ಮೆಂಟ್ ಕಟ್ಟಡಗಳು, ನಾಲ್ಕು ಮನೆಗಳು, ಒಂದು ಶಾಲೆ […]

ರಷ್ಯಾ – ಉಕ್ರೇನ್ ಸಂಘರ್ಷ! Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಎಕ್ಸ್‌ಪ್ರೆಸ್‌ ರೈಲಿನಲ್ಲಿ ಮತ್ತೆ ಬೆಂಕಿ!

(ನ್ಯೂಸ್ ಕಡಬ)newskawaba @gmail.com ಕಣ್ಣೂರು (ಕೇರಳ)  ಜೂನ್, 1 . ಕಣ್ಣೂರು ರೈಲು ನಿಲ್ದಾಣದಲ್ಲಿ ನಿಂತಿದ್ದ ರೈಲಿಗೆ ಬೆಂಕಿ ಹೊತ್ತಿಕೊಂಡಿದೆ. ನಿನ್ನೆ ರಾತ್ರಿ 11:45 ಕ್ಕೆ ಪ್ರಯಾಣ ಮುಗಿಸಿದ ಅಲಪ್ಪುಳ- ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್‌ಪ್ರೆಸ್‌ನ ಬೋಗಿಯಲ್ಲಿ ರಾತ್ರಿ 1.25ಕ್ಕೆ ಬೆಂಕಿ ಕಾಣಿಸಿಕೊಂಡಿದೆ. ರೈಲಿನ ಕೊನೆಯ ಮೂರು ಬೋಗಿಗಳಿಗೆ ಬೆಂಕಿ ವ್ಯಾಪಿಸಿ, ಸಂಪೂರ್ಣ ಸುಟ್ಟು ಕರಕಲಾಗಿದೆ. ಈ ಘಟನೆಯ ಕುರಿತು ಕೇರಳ ಪೊಲೀಸರು ಮತ್ತು ರೈಲ್ವೆ ಪೊಲೀಸರು ತನಿಖೆ ಆರಂಭಿಸಲಾಗಿದೆ ಎಂದು ವರದಿಯಾಗಿದೆ .  

ಎಕ್ಸ್‌ಪ್ರೆಸ್‌ ರೈಲಿನಲ್ಲಿ ಮತ್ತೆ ಬೆಂಕಿ! Read More »

ಬ್ರೇಕಿಂಗ್ ನ್ಯೂಸ್

ಕಡಬ: ಕೆಲಸಕ್ಕೆ ಹೋಗಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ – ಗಾಯ

(ನ್ಯೂಸ್ ಕಡಬ) newskadaba.com ಕಡಬ, ಮೇ.28. ಕೆಲಸಕ್ಕೆ ಹೋಗಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ಇಚ್ಲಂಪಾಡಿಯ ನಡುಮನೆ ಕ್ರಾಸ್ ಬಳಿ ಭಾನುವಾರದಂದು ನಡೆದಿದೆ. ಇಚಿಲಂಪಾಡಿ ನಿವಾಸಿ ವಿಜುಕುಮಾರ್ ಎಂಬವರು ಭಾನುವಾರ ಮಧ್ಯಾಹ್ನ ವೇಳೆಗೆ ಕೆಲಸ ಬಿಟ್ಟು ತೆರಳುತ್ತಿದ್ದ ಸಮಯದಲ್ಲಿ ಕಾಡಾನೆಯು ದಾಳಿ ನಡೆಸಿದ್ದು, ಗಂಭೀರ ಗಾಯಗೊಂಡ ವಿಜುಕುಮಾರ್ ರನ್ನು ಕಡಬದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಪರಿಸರದಲ್ಲಿ 2 ಆನೆಗಳು ಇರುವ ಬಗ್ಗೆ ಸಾರ್ವಜನಿಕರಿಂದ ಮಾಹಿತಿ ದೊರೆತಿದ್ದು, ಸುಬ್ರಹ್ಮಣ್ಯ-ಧರ್ಮಸ್ಥಳ

ಕಡಬ: ಕೆಲಸಕ್ಕೆ ಹೋಗಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ – ಗಾಯ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ಕುಮಾರಧಾರ ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಮೇ.26. ಉದ್ಯಮಿಯೋರ್ವರು ಕುಮಾರಧಾರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಬೆಳಗಿನ ಜಾವ ಅಲಂಕಾರು ಸಮೀಪದ ಶಾಂತಿಮೊಗರು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಆಲಂಕಾರಿನ ದುರ್ಗಾಂಬಾ ಜನರಲ್ ಸ್ಟೋರ್ ನ ಮಾಲಕ, ಮೂರ್ತೆದಾರದ ಸೇವಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷ, ಚಂದ್ರಶೇಖರ ಪೂಜಾರಿ ಎಂದು ಗುರುತಿಸಲಾಗಿದೆ. ಚಂದ್ರಶೇಖರ್ ಅವರು ಇಂದು ಮುಂಜಾನೆ ಶಾಂತಿಮೊಗರು ಸೇತುವೆಯ ಮೇಲೆ ತನ್ನ ಕಾರನ್ನು ನಿಲ್ಲಿಸಿ ನಂತರ ಬಲೂನ್ ಕಟ್ಟಿ ನೀರಿಗೆ ಹಾರಿದ್ದಾರೆ ಎನ್ನಲಾಗಿದೆ.

ಕಡಬ: ಕುಮಾರಧಾರ ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರಿನಲ್ಲಿ ಟೇಕಾಫ್ ಗೆ ಸಿದ್ದವಾಗಿದ್ದ ಇಂಡಿಗೋ ವಿಮಾನದ ರೆಕ್ಕೆಗೆ ಹದ್ದು ಡಿಕ್ಕಿ

(ನ್ಯೂಸ್ ಕಡಬ) newskadaba.com. ಮಂಗಳೂರು, ಮೇ.25. ದಕ್ಷಿಣ ಕನ್ನಡ  ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೇಕಾಫ್‌ಗೆ ಸಿದ್ದವಾಗಿದ್ದ ವಿಮಾನದ ರೆಕ್ಕೆಗೆ ಹಕ್ಕಿ ಡಿಕ್ಕಿ ಹೊಡೆದ ಘಟನೆ ಇಂದು ಬೆಳಗ್ಗೆ ನಡೆದಿದೆ.  ದುಬೈಗೆ ಹೊರಟಿದ್ದ ಇಂಡಿಗೋ ವಿಮಾನ ಟೇಕಾಪ್ ವೇಳೆ ರನ್ ವೇನಲ್ಲಿಯೇ ಘಟನೆ ನಡೆಯಿತು ಎಂದು ತಿಳಿದುಬಂದಿದೆ. ಬೆಳಗ್ಗೆ 8.15 ಕ್ಕೆ ಹೊರಟಿದ್ದ ವಿಮಾನವು ಟ್ಯಾಕ್ಸಿ ವೇ ದಾಟಿ ರನ್​ವೇನಲ್ಲಿ ಸಾಗುತ್ತಿದ್ದಂತೆ ವಿಮಾನದ ರೆಕ್ಕೆಯ ಭಾಗಕ್ಕೆ ಹದ್ದು ಡಿಕ್ಕಿ ಹೊಡೆದಿದೆ. ಅಪಾಯದ ಸೂಚನೆ ಅರಿತ ಪೈಲೆಟ್ ಎಟಿಸಿಗೆ

ಮಂಗಳೂರಿನಲ್ಲಿ ಟೇಕಾಫ್ ಗೆ ಸಿದ್ದವಾಗಿದ್ದ ಇಂಡಿಗೋ ವಿಮಾನದ ರೆಕ್ಕೆಗೆ ಹದ್ದು ಡಿಕ್ಕಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಅ.15ರ ವರೆಗೆ ಮರಳುಗಾರಿಕೆ ನಿಷೇಧ

(ನ್ಯೂಸ್ ಕಡಬ) newskadaba.com.ಮಂಗಳೂರು, ಮೇ.23. ಸಿಆರ್‌ಝಡ್‌ ಪ್ರದೇಶದಲ್ಲಿ ಮರಳುಗಾರಿಕೆ ಮಳೆಗಾಲ ಆರಂಭವಾಗುವ ಎರಡು ತಿಂಗಳ ಮೊದಲೇ ಪೂರ್ಣಗೊಂಡಿದ್ದು, ಅಕ್ಟೋಬರ್‌ 15ರವರೆಗೆ ಮರಳುಗಾರಿಕೆ ನಿಷೇಧ ಜಾರಿಮಾಡಲಾಗಿದೆ. ಪರವಾನಿಗೆಯ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಮಾ. 4ಕ್ಕೇ ಸಿಆರ್‌ಝಡ್‌ ವ್ಯಾಪ್ತಿಯ ಮರಳು ದಿಣ್ಣೆಗಳಲ್ಲಿ ಮರಳುಗಾರಿಕೆ ನಿಂತಿದ್ದು, ಆ ಬಳಿಕ ಪರಿಸರ ಕ್ಲಿಯರೆನ್ಸ್‌ ಮತ್ತೆ ಪಡೆಯುವುದಕ್ಕೆ ಬೇಕಾದ ಬೆಥಮೆಟ್ರಿ ಸರ್ವೇ ಪೂರ್ಣಗೊಂಡಿದ್ದು, ಆದರೆ ವರದಿ ಬರಲು ಬಾಕಿ ಇದೆ. ಅಲ್ಲದೆ ಈ ಮಧ್ಯೆ ಚುನಾವಣ ಪ್ರಕ್ರಿಯೆಯೂ ಇದ್ದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ನೇತೃತ್ವದ ಜಿಲ್ಲಾ

ಮಂಗಳೂರು: ಅ.15ರ ವರೆಗೆ ಮರಳುಗಾರಿಕೆ ನಿಷೇಧ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಪೂರ್ವ ಮುಂಗಾರು ➤ಜಿಲ್ಲಾಧಿಕಾರಿಗಳೊಂದಿಗೆ ವಿಶೇಷ ಸಭೆ ನಡೆಸಲಿರುವ ಸಿಎಂ

(ನ್ಯೂಸ್ ಕಡಬ) newskadaba.com.ಬೆಂಗಳೂರು, ಮೇ.23. ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆಯಿಂದ ಹಲವು ಕಡೆ ಸಾವು-ನೋವು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯನವರು ಇಂದು ಆಯಾ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಲು ವಿಶೇಷ ಸಭೆ ನಡೆಸಲಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ವಿಧಾನಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಒಗಳ ಜೊತೆ ವಿವಿಧ ಭಾಗಗಳಲ್ಲಿ ಮಳೆಯಿಂದ ಆದ ಅನಾಹುತಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲಿದ್ದಾರೆ.

ರಾಜ್ಯದಲ್ಲಿ ಪೂರ್ವ ಮುಂಗಾರು ➤ಜಿಲ್ಲಾಧಿಕಾರಿಗಳೊಂದಿಗೆ ವಿಶೇಷ ಸಭೆ ನಡೆಸಲಿರುವ ಸಿಎಂ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ರಾಜ್ಯ ಮುಖ್ಯಮಂತ್ರಿ ಫೈಟ್ ➤ ಸಿಎಂ ಆಗಿ ಸಿದ್ಧರಾಮಯ್ಯ, ಡಿಸಿಎಂ ಆಗಿ ಡಿಕೆಶಿ ಹೆಸರು ಬಹುತೇಕ ಫೈನಲ್

(ನ್ಯೂಸ್ ಕಡಬ) newskadaba.com ನವದೆಹಲಿ, ಮೇ.17. ರಾಜ್ಯದ ಮುಖ್ಯಮಂತ್ರಿ ಹುದ್ದೆಗೆ ಸಿದ್ಧರಾಮಯ್ಯ ಮತ್ತು ಡಿಕೆಶಿ ನಡುವೆ ನಡೆಯುತ್ತಿರುವ ಗುದ್ದಾಟವು ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ್ದು, ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ ಹೆಸರು ಬಹುತೇಕ ಅಂತಿಮವಾಗಿರುವುದಾಗಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ ಅಧಿಕಾರ ಸ್ವೀಕರಿಸಿದರೆ, ಉಪ ಮುಖ್ಯಮಂತ್ರಿ ಜೊತೆಗೆ ಪ್ರಮುಖ ಎರಡು ಖಾತೆಗಳನ್ನು ಡಿ.ಕೆ.ಶಿವಕುಮಾರ್ ನಿರ್ವಹಿಸಲಿದ್ದಾರೆ. ನಾಳೆ ಮೇ.18 ರಂದು ಅದ್ಧೂರಿ ಕಾರ್ಯಕ್ರಮದ ಮೂಲಕ ಪ್ರಮಾಣ ವಚನ ನಡೆಯಲಿದೆ ಎಂದು ವರದಿ ತಿಳಿಸಿದೆ.

ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ರಾಜ್ಯ ಮುಖ್ಯಮಂತ್ರಿ ಫೈಟ್ ➤ ಸಿಎಂ ಆಗಿ ಸಿದ್ಧರಾಮಯ್ಯ, ಡಿಸಿಎಂ ಆಗಿ ಡಿಕೆಶಿ ಹೆಸರು ಬಹುತೇಕ ಫೈನಲ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರಾವಳಿಯ ಎಂಟು ಕ್ಷೇತ್ರಗಳಲ್ಲಿ 5ರಲ್ಲಿ ಬಿಜೆಪಿ ಮುನ್ನಡೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.13. ತೀವ್ರ ಕುತೂಹಲ ಕೆರಳಿಸಿರುವ ದಕ್ಷಿಣ ಕನ್ನಡದಲ್ಲಿ ಐದು ಸ್ಥಾನಗಳಲ್ಲಿ ಬಿಜೆಪಿ ಹಾಗೂ ಮೂರು ಸ್ಥಾನಗಳಲ್ಲಿ ಕಾಂಗ್ರೆಸ್ ಆರಂಭಿಕ ಮುನ್ನಡೆಯನ್ನು ಕಾಯ್ದುಕೊಂಡಿದೆ. ಬಿಜೆಪಿಯ ಭಾಗೀರಥಿ ಮುರುಳ್ಯ, ಹರೀಶ್ ಪೂಂಜ, ವೇದವ್ಯಾಸ ಕಾಮತ್, ಉಮಾನಾಥ್ ಕೋಟ್ಯಾನ್, ಭರತ್ ಶೆಟ್ಟಿ ಮುನ್ನಡೆಯನ್ನು ಕಾಯ್ದುಕೊಂಡಿದ್ದು, ಕಾಂಗ್ರೆಸ್ ನ ಅಶೋಕ್ ರೈ, ರಮಾನಾಥ್ ರೈ ಹಾಗೂ ಯು.ಟಿ.ಖಾದರ್ ಅಂಚೆ ಮತ ಎಣಿಕೆಯಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಕರಾವಳಿಯ ಎಂಟು ಕ್ಷೇತ್ರಗಳಲ್ಲಿ 5ರಲ್ಲಿ ಬಿಜೆಪಿ ಮುನ್ನಡೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

2023 ರಾಜ್ಯ ವಿಧಾನಸಭೆ ಚುನಾವಣೆ ➤ಮತದಾನದ ದಿನ ವಿಶೇಷ ರೈಲು, ಹೆಚ್ಚುವರಿ ಕೋಚ್ ಅಳವಡಿಕೆ!

(ನ್ಯೂಸ್ ಕಡಬ) newskadaba.com.ಬೆಂಗಳೂರು,  ಮೇ.6. ರಾಜ್ಯದಲ್ಲಿ ಮೇ.10 ರಂದು ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದ್ದು, ಚುನಾವಣೆ ಹಿನ್ನೆಲೆಯಲ್ಲಿ ಮತದಾನದ ದಿನವಾದ ಬುಧವಾರ ವಿಶೇಷ ರೈಲು ಹಾಗೂ ರೈಲುಗಳಿಗೆ ಹೆಚ್ಚುವರಿ ಬೋಗಿಗಳನ್ನು ಅಳವಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ. ಬೆಂಗಳೂರು-ಬೆಳಗಾವಿ, ಬೆಂಗಳೂರು-ಬೀದರ್, ಬೆಂಗಳೂರು (ಯಶವಂತಪುರ) -ಮುರುಡೇಶ್ವರಕ್ಕೆ ವಿಶೇಷ ರೈಲು ಸಂಚರಿಸಲಿವೆ. ಬೆಂಗಳೂರಿನಿಂದ ಹುಬ್ಬಳ್ಳಿ ಮಾರ್ಗವಾಗಿ ಬೆಳಗಾವಿಗೆ ಒಂದು ರೈಲು ಸಂಚರಿಸಲಿದೆ. ಎಂ ವಿಶ್ವೇಶ್ವರಯ್ಯ ಟರ್ಮಿನಲ್‌ನಿಂದ ಮೇ 9ರಂದು 8.30ಕ್ಕೆ ಹೊರಡಲಿದ್ದು, ಮೇ 10ರಂದು ಬೆಳಗ್ಗೆ 8.20ಕ್ಕೆ ಬೆಳಗಾವಿ ತಲುಪಲಿದೆ. ಮೇ 10ರ

2023 ರಾಜ್ಯ ವಿಧಾನಸಭೆ ಚುನಾವಣೆ ➤ಮತದಾನದ ದಿನ ವಿಶೇಷ ರೈಲು, ಹೆಚ್ಚುವರಿ ಕೋಚ್ ಅಳವಡಿಕೆ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top