ಬ್ರೇಕಿಂಗ್ ನ್ಯೂಸ್

ರಾಜ್ಯ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ ➤ ಫಲಿತಾಂಶ ವೀಕ್ಷಿಸಲು ಕ್ಲಿಕ್ ಮಾಡಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.08. ರಾಜ್ಯ ಎಸ್ಸೆಸ್ಸೆಲ್ಸಿ ಫಲಿತಾಂಶವು ಪ್ರಕಟಗೊಂಡಿದ್ದು, ನಾಲ್ಕು ವಿದ್ಯಾರ್ಥಿಗಳ 625ಕ್ಕೆ 625 ಅಂಕಗಳನ್ನು ಗಳಿಸುವ ಮೂಲಕ‌ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ಈ ಬಾರಿ ಬಾಲಕಿಯರೇ ಮೇಲುಗೈ ಸಾಧಿಸಿದ್ದು, ಫಲಿತಾಂಶದಲ್ಲಿ ಚಿತ್ರದುರ್ಗ ಜಿಲ್ಲೆಯು ಪ್ರಥಮ ಸ್ಥಾನ ಪಡೆದರೆ, ಮಂಡ್ಯ ಜಿಲ್ಲೆ ಎರಡನೇ ಸ್ಥಾನವನ್ನು ಪಡೆದಿದೆ. ಯಾದಗಿರಿ ಜಿಲ್ಲೆ ಕೊನೆಯ ಸ್ಥಾನಕ್ಕೆ ತೃಪ್ತಿ ಪಟ್ಟಿದೆ. ಫಲಿತಾಂಶ ವೀಕ್ಷಿಸಲು http://karresults.nic.in ವೆಬ್‌ಸೈಟ್ ನ್ನು ಕ್ಲಿಕ್ ಮಾಡಿ.

ರಾಜ್ಯ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ ➤ ಫಲಿತಾಂಶ ವೀಕ್ಷಿಸಲು ಕ್ಲಿಕ್ ಮಾಡಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ನಾಳೆ ಕರಾವಳಿಗೆ ಪ್ರಿಯಾಂಕಾ ಗಾಂಧಿ ಆಗಮನ

 (ನ್ಯೂಸ್ ಕಡಬ) newskadaba.com. ಮಂಗಳೂರು, ಮೇ.6. ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಕರಾವಳಿಗೆ ಮೇ 7ರಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ  ಆಗಮಿಸಲಿದ್ದಾರೆ.  ಅವರು ಮುಲ್ಕಿ ಕೊಲ್ನಾಡು ಮೈದಾನದಲ್ಲಿ  ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ, ಮೂಡಬಿದ್ರೆ ಕ್ಷೇತ್ರ, ಕಾಪು ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಒಟ್ಟು ಸುಮಾರು 50 ಸಾವಿರ ಮಂದಿ ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಮಂಜುನಾಥ ಭಂಡಾರಿ ತಿಳಿಸಿದ್ದಾರೆ.

ಮಂಗಳೂರು: ನಾಳೆ ಕರಾವಳಿಗೆ ಪ್ರಿಯಾಂಕಾ ಗಾಂಧಿ ಆಗಮನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮೇ.03 ಧರ್ಮಸ್ಥಳದಲ್ಲಿ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ..! ➤ವಧೂ-ವರರಿಗೆ ನಟ ದರ್ಶನ್ ತೂಗುದೀಪ ಮಂಗಲಸೂತ್ರ ವಿತರಿಸಲಿದ್ದಾರೆ!!

(ನ್ಯೂಸ್ ಕಡಬ)Newskadaba.com ಬೆಳ್ತಂಗಡಿ,ಮೇ.02 ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಮೇ 3ರಂದು ಸಂಜೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ನಡೆಯಲಿದೆ. ಈಗಾಗಲೇ ನೋಂದಣಿ ಮಾಡಿಕೊಂಡಿರುವ 201 ಜೋಡಿಗಳು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಲಿವೆ. ಮೇ 2ರಂದು ಎಲ್ಲರ ದಾಖಲೆಗಳನ್ನು ಪರಿಶೀಲಿಸಿ ವಧುವಿಗೆ ಸೀರೆ, ರವಿಕೆ ಕಣ ಮತ್ತು ವರನಿಗೆ ಧೋತಿ, ಶಾಲು ನೀಡಲಾಗುತ್ತದೆ. ಮೇ 3ರಂದು ಸಂಜೆ 5ರಿಂದ ವಧೂ-ವರರು ದೇವಸ್ಥಾನಕ್ಕೆ ಪ್ರದಕ್ಷಿಣೆ ಬಂದು ವಿವಾಹ ನೆರವೇರಲಿರುವ ಅಮೃತವರ್ಷಿಣಿ ಸಭಾ ಮಂಟಪಕ್ಕೆ

ಮೇ.03 ಧರ್ಮಸ್ಥಳದಲ್ಲಿ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ..! ➤ವಧೂ-ವರರಿಗೆ ನಟ ದರ್ಶನ್ ತೂಗುದೀಪ ಮಂಗಲಸೂತ್ರ ವಿತರಿಸಲಿದ್ದಾರೆ!! Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬ: ನಿಯಂತ್ರಣ ತಪ್ಪಿ ಉರುಳಿ ಬಿದ್ದ ಬೈಕ್ ➤ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಎ.25. ಬೈಕೊಂದು ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಡಬ – ಪಂಜ ರಸ್ತೆಯ ಕಲ್ಲಂತಡ್ಕ ಎಂಬಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಮೃತ ಸವಾರನನ್ನು ದಾವಣಗೆರೆ ಮೂಲದ ಪ್ರಸ್ತುತ ಕೋಡಿಂಬಾಳದಲ್ಲಿ ವಾಸವಿರುವ ಮಂಜು ಎಂದು ಗುರುತಿಸಲಾಗಿದೆ. ಸೆಂಟ್ರಿಂಗ್ ಕೆಲಸ ನಿರ್ವಹಿಸುತ್ತಿದ್ದ ಮಂಜು ಬೈಕಿನಲ್ಲಿ ಕೋಡಿಂಬಾಳ ಕಡೆಗೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಬೈಕ್ ರಸ್ತೆಗೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಮಂಜು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕಡಬ: ನಿಯಂತ್ರಣ ತಪ್ಪಿ ಉರುಳಿ ಬಿದ್ದ ಬೈಕ್ ➤ ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಾಂಗ್ರೆಸ್ ಮೂರನೇ ಪಟ್ಟಿ ಬಿಡುಗಡೆ ➤ ಪುತ್ತೂರು ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ ಘೋಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ.15. ಕಾಂಗ್ರೆಸ್ ಪಕ್ಷವು ಇಂದು ತನ್ನ ಮೂರನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಪುತ್ತೂರು ವಿಧಾನಸಭೆಗೆ ಅಶೋಕ್ ಕುಮಾರ್ ರೈ ಯವರಿಗೆ ಟಿಕೆಟ್ ಘೋಷಣೆಯಾಗಿದೆ. ಈಗಾಗಲೇ 124 ಕ್ಷೇತ್ರಗಳಿಗೆ ಮೊದಲ ಪಟ್ಟಿ ಹಾಗೂ 2ನೇ ಪಟ್ಟಿಯ ನಂತರ, ಇದೀಗ 3ನೇ ಪಟ್ಟಿಯನ್ನು ಪ್ರಕಟಿಸಲಾಗಿದೆ.  

ಕಾಂಗ್ರೆಸ್ ಮೂರನೇ ಪಟ್ಟಿ ಬಿಡುಗಡೆ ➤ ಪುತ್ತೂರು ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ ಘೋಷಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ: ಕಾರು – ಬಸ್ ನಡುವೆ ಭೀಕರ ಅಪಘಾತ ➤ ಆರು ಮಂದಿ ದುರ್ಮರಣ

(ನ್ಯೂಸ್ ಕಡಬ) newskadaba.com ಸುಳ್ಯ, ಎ.14. ಬಸ್ ಮತ್ತು ಕಾರು ನಡುವೆ ಉಂಟಾದ ಭೀಕರ ಅಪಘಾತದಲ್ಲಿ 6 ಮಂದಿ ಮೃತಪಟ್ಟಿರುವ ದಾರುಣ ಘಟನೆ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪಾಜೆಯಲ್ಲಿ ನಡೆದಿದೆ. ಕಾರು ಮತ್ತು ಬಸ್ ನಡುವೆ ಸಂಪಾಜೆ ಪೆಟ್ರೋಲ್ ಪಂಪ್ ಬಳಿ ಅಪಘಾತ ನಡೆದಿದ್ದು ಕಾರಿನಲ್ಲಿದ್ದವರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಮೃತರನ್ನು ಮಂಡ್ಯ ಮೂಲದವರೆಂದು ಮೇಲ್ನೋಟಕ್ಕೆ ತಿಳಿದುಬಂದಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.  

ಸುಳ್ಯ: ಕಾರು – ಬಸ್ ನಡುವೆ ಭೀಕರ ಅಪಘಾತ ➤ ಆರು ಮಂದಿ ದುರ್ಮರಣ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಚಾರ್ಮಾಡಿ ಘಾಟ್ ನಲ್ಲಿ ಕಂದಕಕ್ಕೆ ಉರುಳಿದ‌ ಕಾರು ➤ ಮಹಿಳೆ‌ ಮೃತ್ಯು, ನಾಲ್ವರು ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಎ.10. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಚಾರ್ಮಾಡಿ ಘಾಟಿಯ ಎರಡನೇ ತಿರುವಿನ ಬಳಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡ ಘಟನೆ ಭಾನುವಾರ ರಾತ್ರಿ ನಡೆದಿದೆ. ಉಜಿರೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ ಹಾಗೂ ಕುಟುಂಬಸ್ಥರು ಶೃಂಗೇರಿಗೆ ತೆರಳಿ ಹಿಂತಿರುಗುತ್ತಿದ್ದ ವೇಳೆ ಕೊಟ್ಟಿಗೆಹಾರದಿಂದ ಉಜಿರೆ ಕಡೆ ಪ್ರಯಾಣಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಸರೋಜಿನಿ ಅವರು

ಚಾರ್ಮಾಡಿ ಘಾಟ್ ನಲ್ಲಿ ಕಂದಕಕ್ಕೆ ಉರುಳಿದ‌ ಕಾರು ➤ ಮಹಿಳೆ‌ ಮೃತ್ಯು, ನಾಲ್ವರು ಗಂಭೀರ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ನೆಲ್ಯಾಡಿ: ಬೆಳ್ಳಂಬೆಳಗ್ಗೆ ಡಿವೈಡರ್ ಗೆ ಢಿಕ್ಕಿ ಹೊಡೆದ ಕಾರು ➤ ಮಹಿಳೆ ಸ್ಥಳದಲ್ಲೇ ಮೃತ್ಯು, ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮಾ.30. ಬೆಳ್ಳಂಬೆಳಗ್ಗೆ ನಡೆದ ಭೀಕರ ಅಪಘಾತದಲ್ಲಿ ಮಹಿಳೆಯೋರ್ವರು ಮೃತಪಟ್ಟ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಎಂಬಲ್ಲಿ ಗುರುವಾರದಂದು ನಡೆದಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರೊಂದು ನೆಲ್ಯಾಡಿ ಜ್ಞಾನೋದಯ ಬೆಥನಿ ಕಾಲೇಜು ಸಮೀಪ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರ ಗಾಯಗೊಂಡ ಇಬ್ಬರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.  

ನೆಲ್ಯಾಡಿ: ಬೆಳ್ಳಂಬೆಳಗ್ಗೆ ಡಿವೈಡರ್ ಗೆ ಢಿಕ್ಕಿ ಹೊಡೆದ ಕಾರು ➤ ಮಹಿಳೆ ಸ್ಥಳದಲ್ಲೇ ಮೃತ್ಯು, ಇಬ್ಬರು ಗಂಭೀರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

➤ ಪ್ಯಾನ್-ಆಧಾರ್ ಜೋಡಣೆ ಗಡುವು ಜೂನ್ 30ಕ್ಕೆ ವಿಸ್ತರಣೆ

(ನ್ಯೂಸ್ ಕಡಬ) newskadaba.com. ನವದೆಹಲಿ, ಮಾ 28. ಪ್ಯಾನ್ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಲು ವಿಧಿಸಲಾಗಿದ್ದ ಗಡುವನ್ನು ಆದಾಯ ತೆರಿಗೆ ಇಲಾಖೆ ಇದೀಗ ಜೂನ್ 30ರವರೆಗೆ ವಿಸ್ತರಿಸಿದೆ. ಗಡುವು ಅವಧಿಗೆ ಮೂರು ದಿನ ಇರುವಾಗ ಮತ್ತೆ ಅವಧಿ ವಿಸ್ತರಣೆಯಾಗಿದೆ. 1000 ರೂ. ಶುಲ್ಕದೊಂದಿಗೆ ಪಾನ್ ಮತ್ತು ಆಧಾರ್ ಕಾರ್ಡ್ ಜೋಡಣೆಗೆ ಮಾರ್ಚ್ 31ರ ಗಡುವು ನೀಡಲಾಗಿತ್ತು. ಜೋಡಣೆಗೆ ಕೊನೆಯ ದಿನ ಸಮೀಪಿಸುತ್ತಿದ್ದಂತೆ ಆಧಾರ್-ಪ್ಯಾನ್ ಲಿಂಕ್ ಮಾಡಲು ಸೈಬರ್ ಸೆಂಟರ್‌ಗಳಲ್ಲಿ ಜನ ಮುಗಿಬಿದ್ದಿದ್ದಾರೆ. ಇದರಿಂದ ಸೈಬರ್ ಸೆಂಟರ್‌ಗಳಲ್ಲಿಯೂ

➤ ಪ್ಯಾನ್-ಆಧಾರ್ ಜೋಡಣೆ ಗಡುವು ಜೂನ್ 30ಕ್ಕೆ ವಿಸ್ತರಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

2ಗಂಟೆ ತಡವಾಗಿ ಬಂದು 12 ಪ್ರಯಾಣಿಕರನ್ನು ಬಿಟ್ಟು ತೆರಳಿದ ವಿಮಾನ ➤ ತೀವ್ರ ಆಕ್ರೋಶ

(ನ್ಯೂಸ್ ಕಡಬ) newskadaba.com ಮುಂಬೈ, ಮಾ. 23. ಬಹರೇನ್​ನಿಂದ ಮುಂಬೈಗೆ 2 ಗಂಟೆ ತಡವಾಗಿ ಆಗಮಿಸಿದ್ದ ವಿಮಾನವು ಮಂಗಳೂರಿನ ಪ್ರಯಾಣಿಕರನ್ನು ಮುಂಬೈನಲ್ಲಿ ಬಿಟ್ಟು ಹೋದ ಘಟನೆ ವರದಿಯಾಗಿದೆ. ಬಹರೇನ್​ನಿಂದ ಮಂಗಳೂರಿಗೆ ಟಿಕೆಟ್ ಮಾಡಿದ್ದ ಪ್ರಯಾಣಿಕರು, ಮುಂಬೈ ವಿಮಾನ ನಿಲ್ದಾಣದಲ್ಲಿ ಪರದಾಡುವಂತಾಗಿದೆ. ಬಹರೇನ್​ನಿಂದ ಮುಂಬೈಗೆ ಮುಂಜಾನೆ 5.30 ಕ್ಕೆ ಲ್ಯಾಂಡ್ ಆಗಬೇಕಿದ್ದ ಇಂಡಿಗೋ ವಿಮಾನವು 7.30 ಕ್ಕೆ ಮುಂಬೈ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗಿದೆ. ಆದರೂ ಮುಂಬೈನಲ್ಲಿ ಕಾಯುತ್ತಿದ್ದ ಮಂಗಳೂರಿನ ಪ್ರಯಾಣಿಕರನ್ನು ಬಿಟ್ಟು ಹೋಗಿದೆ. ಇದರಿಂದ ಮಂಗಳೂರಿಗೆ ಬರಬೇಕಿದ್ದ

2ಗಂಟೆ ತಡವಾಗಿ ಬಂದು 12 ಪ್ರಯಾಣಿಕರನ್ನು ಬಿಟ್ಟು ತೆರಳಿದ ವಿಮಾನ ➤ ತೀವ್ರ ಆಕ್ರೋಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top