ಬ್ರೇಕಿಂಗ್ ನ್ಯೂಸ್

ಪಾನ್ ಕಾರ್ಡ್ ಹೊಂದಿರುವವರಿಗೆ ಆದಾಯ ತೆರಿಗೆ ಇಲಾಖೆಯಿಂದ ಬಿಗ್ ಶಾಕ್

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 20. ಪಾನ್ ಕಾರ್ಡ್ ಹೊಂದಿರುವವರಿಗೆ ಆದಾಯ ತೆರಿಗೆ ಇಲಾಖೆಯು ಟ್ವೀಟ್ ಮೂಲಕ ಬಿಗ್ ಶಾಕ್ ನೀಡಿದ್ದು, ಮಾರ್ಚ್ 31, 2023ರ ಒಳಗೆ ಪ್ಯಾನ್ ಕಾರ್ಡ್ ಅನ್ನು ಆಧಾರ್‌ಗೆ ಲಿಂಕ್ ಮಾಡಬೇಕು, ಇಲ್ಲದಿದ್ದಲ್ಲಿ ಏಪ್ರಿಲ್ 1, 2023 ರಂದು ಪ್ಯಾನ್ ಕಾರ್ಡ್ ನಿಷ್ಕ್ರಿಯಗೊಳಿಸಲಾಗುವುದು ಎಂದು ಇಲಾಖೆ ತಿಳಿಸಿದೆ. ಪ್ರಸ್ತುತ ದಿನಗಲ್ಲಿ ಪ್ಯಾನ್ ಕಾರ್ಡ್ ಪ್ರಮುಖ ದಾಖಲೆಯಾಗಿದೆ. ಅದು ಇಲ್ಲದಿದ್ದರೆ ತೆರಿಗೆ ಇಲಾಖೆಯಲ್ಲಿ ಯಾವುದೇ ಕೆಲಸ ನಡೆಯುವುದಿಲ್ಲ. ಆದಾಯ ತೆರಿಗೆ ಇಲಾಖೆಯು ಪ್ಯಾನ್ […]

ಪಾನ್ ಕಾರ್ಡ್ ಹೊಂದಿರುವವರಿಗೆ ಆದಾಯ ತೆರಿಗೆ ಇಲಾಖೆಯಿಂದ ಬಿಗ್ ಶಾಕ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮದ್ಯ ಸೇವನೆಗೆ ಹಣ ನೀಡಿಲ್ಲವೆಂದು ಮಹಿಳೆಯ ಹತ್ಯೆ   ➤ ಆರೋಪಿ ಪೊಲೀಸ್ ಬಲೆಗೆ  

(ನ್ಯೂಸ್ ಕಡಬ) newskadaba.com ಮುಂಬೈ, ಡಿ. 15. ಮದ್ಯ ಸೇವನೆಗೆ ಹಣ ನೀಡಿಲ್ಲವೆಂದು ವ್ಯಕ್ತಿಯೋರ್ವ ನೆರೆಮನೆಯ ಮಹಿಳೆಯನ್ನು ಹತ್ಯೆಗೈದ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ಸಂಭವಿಸಿದೆ. ಮೃತ ಮಹಿಳೆಯನ್ನು ವೈಶಾಲಿ ಮಸೂದ್ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯು ವೈಶಾಲಿ ಮಸೂದ್ ಅವರಿಂದ ಆಗಾಗ್ಗೆ ಹಣ ಪಡೆಯುತ್ತಿದ್ದ ಎಂದು ತಿಳಿದುಬಂದಿದೆ. ಹಣ ನೀಡಲು ನಿರಾಕರಿಸಿದಾಗ ಆಕ್ರೋಶಗೊಂಡ ವ್ಯಕ್ತಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ.

ಮದ್ಯ ಸೇವನೆಗೆ ಹಣ ನೀಡಿಲ್ಲವೆಂದು ಮಹಿಳೆಯ ಹತ್ಯೆ   ➤ ಆರೋಪಿ ಪೊಲೀಸ್ ಬಲೆಗೆ   Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೇರಳದಲ್ಲಿ ಹೆಚ್ಚುತ್ತಿರುವ ಹಕ್ಕಿಜ್ವರ ➤ 8 ಸಾವಿರ ಪಕ್ಷಿಗಳನ್ನು ಕೊಲ್ಲಲು ಆದೇಶ

(ನ್ಯೂಸ್ ಕಡಬ) newskadaba.com ತಿರುವನಂತಪುರಂ, ಡಿ. 14.  ಕೊಟ್ಟಾಯಂ ಜಿಲ್ಲೆಯ ಎರಡು ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ಹಕ್ಕಿಜ್ವರ ಕಾಣಿಸಿಕೊಂಡ ಹಿನ್ನೆಲೆ ಈ ಪ್ರದೇಶದ ಸುಮಾರು ಒಂದು ಕಿಲೋ ಮೀಟರ್ ವ್ಯಾಪ್ತಿಯಲ್ಲಿ 8 ಸಾವಿರ ಬಾತುಕೋಳಿ, ಕೋಳಿ ಮತ್ತು ಇತರ ಪಕ್ಷಿಗಳನ್ನು ಕೊಲ್ಲಲು ಆದೇಶಿಸಲಾಗಿದೆ. ಅರ್ಪೂಕರ ಮತ್ತು ತಾಳಯಾಳಂ ವ್ಯಾಪ್ತಿಯಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿದ್ದು, ಈ ಕುರಿತು ಜಿಲ್ಲಾಧಿಕಾರಿ ಪಿ.ಕೆ. ಜಯಶ್ರೀ ಅವರು ಹಿರಿಯ ಅಧಿಕಾರಿಗಳೊಂದಿಗೆ ತುರ್ತು ಸಭೆ ಕರೆದು, ಬಳಿಕ ಈ ನಿರ್ಧಾರ ಕೈಗೊಂಡಿದ್ದು, ಹಕ್ಕಿಜ್ವರ ಪೀಡಿತ ಪ್ರದೇಶಗಳ ಸುಮಾರು

ಕೇರಳದಲ್ಲಿ ಹೆಚ್ಚುತ್ತಿರುವ ಹಕ್ಕಿಜ್ವರ ➤ 8 ಸಾವಿರ ಪಕ್ಷಿಗಳನ್ನು ಕೊಲ್ಲಲು ಆದೇಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Death, deadbody, Waterfall

ಅಂತ್ಯಕ್ರಿಯೆಗೆ ಹಣವಿಲ್ಲದೇ ತಾಯಿಯ ಮೃತದೇಹವನ್ನು ಮನೆಯಲ್ಲೇ ಬಚ್ಚಿಟ್ಟ ಮಗ..!

(ನ್ಯೂಸ್ ಕಡಬ) newskadaba.com ಗೋರಖ್‌ಪುರ, ಡಿ. 14. ಅಂತ್ಯಕ್ರಿಯೆಗೆ ಹಣವಿಲ್ಲದೇ ವ್ಯಕ್ತಿಯೋರ್ವ ತನ್ನ ತಾಯಿಯ ಮೃತದೇಹವನ್ನು ಮನೆಯಲ್ಲೇ ಬಚ್ಚಿಟ್ಟ ಘಟನೆ ಗುಲ್ರಿಹಾ ಪ್ರದೇಶದಲ್ಲಿ ನಡೆದಿದೆ. ಮೃತರನ್ನು ನಿವೃತ್ತ ಸರಕಾರಿ ಶಿಕ್ಷಕಿ ಶಾಂತಿ ದೇವಿ (82) ಎಂದು ಗುರುತಿಸಲಾಗಿದೆ. ಇವರು ನಾಲ್ಕೈದು ದಿನಗಳ ಹಿಂದೆ ಮೃತಪಟ್ಟಿದ್ದು, ಅವರ ಪುತ್ರ ನಿಖಿಲ್ ಮಿಶ್ರಾ ಎಂಬಾತ ತಾಯಿಯ ಶವವನ್ನು ಅಂತ್ಯಕ್ರಿಯೆ ನಡೆಸದೆ ಮನೆಯಲ್ಲೇ ಬಚ್ಚಿಟ್ಟಿದ್ದ. ಈತ ಮದ್ಯವ್ಯಸನಿಯಾಗಿದ್ದು, ಮಾನಸಿಕವಾಗಿಯೂ ಸ್ಥಿರತೆ ಹೊಂದಿರಲಿಲ್ಲ. ಇವರ ಮನೆಯಿಂದ ತೀರಾ ದುರ್ವಾಸನೆ ಬರುತ್ತಿದ್ದ ಹಿನ್ನೆಲೆ ಆಸುಪಾಸಿನ

ಅಂತ್ಯಕ್ರಿಯೆಗೆ ಹಣವಿಲ್ಲದೇ ತಾಯಿಯ ಮೃತದೇಹವನ್ನು ಮನೆಯಲ್ಲೇ ಬಚ್ಚಿಟ್ಟ ಮಗ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆದೇಶ ಪಾಲನೆಗೆ ವಿಫಲವಾದ ರಾಜ್ಯ ಸರಕಾರ ➤ ದಂಡ ವಿಧಿಸಿದ ಹೈಕೋರ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 14. ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಗಳಿಗೆ ಚುನಾವಣೆ ನಡೆಸಲು ಒಬಿಸಿ ಸಮುದಾಯಕ್ಕೆ ಮೀಸಲಾತಿ ನಿಗದಿ ಹಾಗೂ ಕ್ಷೇತ್ರ ವಿಂಗಡಣೆ ಪೂರ್ಣಗೊಳಿಸುವುದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶಗಳನ್ನು ಪಾಲಿಸಲು ವಿಫಲವಾಗಿರುವ ರಾಜ್ಯ ಸರ್ಕಾರಕ್ಕೆ 5 ಲಕ್ಷ ರೂಪಾಯಿ ದಂಡ ವಿಧಿಸಿ ಮುಖ್ಯ ನ್ಯಾಯಮೂರ್ತಿ ಪಿ.ಬಿ ವರಾಳೆ ನೇತೃತ್ವದ ವಿಭಾಗೀಯ ಪೀಠವು ಮಹತ್ವದ ಆದೇಶ ಹೊರಡಿಸಿದೆ. ನ್ಯಾಯಾಲಯದ ಹಿಂದಿನ ಆದೇಶಗಳನ್ನು ರಾಜ್ಯ ಸರ್ಕಾರ ಪಾಲನೆ ಮಾಡಿಲ್ಲ ಎಂದು ಎಚ್ಚರಿಕೆ ನೀಡಿದ ನ್ಯಾಯಾಲಯವು, ಫೆ.

ಆದೇಶ ಪಾಲನೆಗೆ ವಿಫಲವಾದ ರಾಜ್ಯ ಸರಕಾರ ➤ ದಂಡ ವಿಧಿಸಿದ ಹೈಕೋರ್ಟ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತಂದೆಯ ಸಾಲ ತೀರಿಸಲು ಕಿಡ್ನಿ ಮಾರಲು ಹೋಗಿ 16 ಲಕ್ಷ ರೂ. ಕಳಕೊಂಡ ವಿದ್ಯಾರ್ಥಿನಿ

(ನ್ಯೂಸ್ ಕಡಬ) newskadaba.com ಹೈದರಾಬಾದ್, ಡಿ. 14. ತಂದೆಯ ಸಾಲ ತೀರಿಸಲು ತನ್ನ ಕಿಡ್ನಿ ಮಾರಲು ಹೋದ ವಿದ್ಯಾರ್ಥಿನಿಯೋರ್ವಳು ಸೈಬರ್ ವಂಚಕರಿಂದ ವಂಚನೆಗೊಳಗಾಗಿ 16 ಲಕ್ಷ ರೂ. ಕಳೆದುಕೊಂಡ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಹೈದರಾಬಾದ್‌ನ ಗುಂಟೂರಿನಲ್ಲಿ ನರ್ಸಿಂಗ್ ಕಲಿಯುತ್ತಿದ್ದ ವಿದ್ಯಾರ್ಥಿನಿ, ತನ್ನ ತಂದೆ ಮಾಡಿದ್ದ 2 ಲಕ್ಷ ರೂ. ಸಾಲ ತೀರಿಸಲು ಮೂತ್ರಪಿಂಡವನ್ನೇ ಮಾರಾಟ ಮಾಡಲು ಯತ್ನಿಸಿದ್ದಾಳೆ. ಇದಕ್ಕಾಗಿ ಆಕೆ ಆನ್‌ಲೈನ್ ಮೂಲಕ ಅಪರಿಚಿತರನ್ನು ಸಂಪರ್ಕಿಸಿದಾಗ ಪ್ರವೀಣ್‌ರಾಜ್ ಎಂಬಾತ 3 ಕೋಟಿ ರೂ. ಆಫರ್ ನೀಡಿದ್ದ. ಅಲ್ಲದೇ

ತಂದೆಯ ಸಾಲ ತೀರಿಸಲು ಕಿಡ್ನಿ ಮಾರಲು ಹೋಗಿ 16 ಲಕ್ಷ ರೂ. ಕಳಕೊಂಡ ವಿದ್ಯಾರ್ಥಿನಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿದ್ಯಾರ್ಥಿ ಒಕ್ಕೂಟದಿಂದ ರಾಜ್ಯದಾದ್ಯಂತ ಡಿ.17 ರಂದು ಬಂದ್ ಗೆ ಕರೆ                                            

(ನ್ಯೂಸ್ ಕಡಬ) newskadaba.com ಕೊಪ್ಪಳ, ಡಿ. 13. ವಿಶ್ವವಿದ್ಯಾನಿಲಯ ಹಾಗೂ ಸಂಯೋಜಿತ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಡಿ.17ರಂದು ರಾಜ್ಯಾದಾದ್ಯಂತ ಪದವಿ ಕಾಲೇಜುಗಳ ಬಂದ್ ಗೆ ಕರೆ ನೀಡಲಾಗಿದೆ ಎಂದು ಭಾರತಿಯ ರಾಷ್ಟ್ರೀಯ ಒಕ್ಕೂಟ ಜಿಲ್ಲಾ ಅಧ್ಯಕ್ಷ ಶಿವಕುಮಾರ್ ತೆಕ್ಕಲಕೋಟೆ ಹೇಳಿದ್ದಾರೆ. ಅಲ್ಲದೇ ವಿಳಂಬವಾಗಿರುವ ಪರೀಕ್ಷಾ ಫಲಿತಾಂಶವನ್ನು ಕೂಡಲೇ ಪ್ರಕಟಿಸಬೇಕು ಮತ್ತು ಕೃಷ್ಣದೇವರಾಯ ವಿಶ್ವವಿದ್ಯಾನಿಲಯದ ಪರೀಕ್ಷೆ ನಡೆಸಿ 7 ತಿಂಗಳಾದರೂ ಫಲಿತಾಂಶ ಬಂದಿಲ್ಲ, ಸರಿಯಾಗಿ ಸ್ಕಾಲರ್ ಶಿಪ್ ನೀಡಬೇಕು, ಸಾರಿಗೆ ಸೌಲಭ್ಯ ಪರಿಹಾರ ನೀಡಬೇಕು,

ವಿದ್ಯಾರ್ಥಿ ಒಕ್ಕೂಟದಿಂದ ರಾಜ್ಯದಾದ್ಯಂತ ಡಿ.17 ರಂದು ಬಂದ್ ಗೆ ಕರೆ                                             Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ: ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ➤ ಲಾರಿ ವಶಕ್ಕೆ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 13. ಸುಳ್ಯ ತಾಲೂಕಿನ ಹಲವೆಡೆ ಅಕ್ರಮ ಕೆಂಪು ಕಲ್ಲು ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಕೇಳಿಬಂದ ದೂರಿನ ಮೇರೆಗೆ ಸ್ಥಳಗಳಿಗೆ ಲೋಕಾಯುಕ್ತ ದಾಳಿ ನಡೆಸುತ್ತಿದ್ದು, ಇದರ ಮುಂದುವರಿದ ಭಾಗವಾಗಿ ಇಂದು ಬೆಳ್ಳಂಬೆಳಗ್ಗೆ ಮಂಡೆಕೋಲು ಗಡಿಯನ್ನು ದಾಟಿ ಕೆಂಪು ಕಲ್ಲು ಸಾಗಾಟ ಮಾಡುತ್ತಿರುವ ಮಾಹಿತಿಯ ಪ್ರಕಾರ ಕಂದಾಯ ಇಲಾಖೆ ಅಧಿಕಾರಿ ಶರತ್ ರವರು ಲಾರಿಯನ್ನು ತಡೆದು ವಶಕ್ಕೆ ಪಡೆದ ಘಟನೆ ವರದಿಯಾಗಿದೆ.   ಸುಳ್ಯ ತಾಲೂಕಿನ ನಾನಾ ಕಡೆಗಳಲ್ಲಿ ಮರಳು ಮತ್ತು ಕೆಂಪುಕಲ್ಲು

ಸುಳ್ಯ: ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ➤ ಲಾರಿ ವಶಕ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ ➤ ಆರೋಪಿ ಪೊಲೀಸ್ ಬಲೆಗೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಡಿ. 13. ತೆಂಗಿನಕಾಯಿ ಕೀಳಲೆಂದು ಬಂದವ ಮನೆಯಲ್ಲಿ ಒಂಟಿಯಾಗಿದ್ದ ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಬಂಧಿಸಿದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.   ಬಂಧಿತನನ್ನು ಮಂಜನಾಡಿ ನಿವಾಸಿ ಬಶೀರ್(28) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ತೆಂಗಿನಕಾಯಿ ಕೀಳುವ ಕೆಲಸ ಮಾಡುತ್ತಿದ್ದ ಈತ, ಬಾಲಕಿಯ ಮನೆಮಂದಿಗೆ ಪರಿಚಿತ. ಈತ ಸೋಮವಾರದಂದು ಮಧ್ಯಾಹ್ನದ ವೇಳೆ ತೆಂಗಿನಕಾಯಿ ತೆಗೆಯುವುದಾಗಿ ಹೇಳಿಕೊಂಡು ಬಂದಿದ್ದು, ಈ ವೇಳೆ ಬಾಲಕಿ ಒಂಟಿಯಾಗಿರುವುದನ್ನು ಕಂಡು

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ ➤ ಆರೋಪಿ ಪೊಲೀಸ್ ಬಲೆಗೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸುಳ್ಯ ಮದುವೆಗೆ ತೆರಳುತ್ತಿದ್ದ ಕಾರು ಪಲ್ಟಿ ➤ ತಾಯಿ- ಮಗು ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 12. ಕಾರು ಪಲ್ಟಿಯಾದ ಪರಿಣಾಮ ತಾಯಿ- ಮಗು ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ಜಾಲ್ಸೂರು ಕಾಸರಗೋಡು ರಸ್ತೆಯ ಪರಪ್ಪೆ ಬಳಿ ನಡೆದಿದೆ.   ಮೃತಪಟ್ಟವರನ್ನು ಸುಳ್ಯದ ನಾವೂರು ಬೋರುಗುಡ್ಡೆ ಅಬ್ದುಲ್ಲಾ ಎಂಬವರ ಪುತ್ರಿ ಶಾಹಿನಾ (28) ಹಾಗೂ ಮಗು ಶಝಾ (3) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

ಸುಳ್ಯ ಮದುವೆಗೆ ತೆರಳುತ್ತಿದ್ದ ಕಾರು ಪಲ್ಟಿ ➤ ತಾಯಿ- ಮಗು ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top