ಬ್ರೇಕಿಂಗ್ ನ್ಯೂಸ್

ಕಡಬ: ಮರದ ಕೊಂಬೆ ಕಡಿಯುವ ವೇಳೆ ವಿದ್ಯುತ್ ಲೈನ್ ತಗುಲಿ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಸೆ. 07. ಮರದ ಕೊಂಬೆ ಕಡಿಯುತ್ತಿದ್ದ ವೇಳೆ ವಿದ್ಯುತ್ ತಗುಲಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಬುಧವಾರದಂದು ನಡೆದಿದೆ ಮೃತ ವ್ಯಕ್ತಿಯನ್ನು ಕಡಬ ಸಮೀಪದ ಕುಂತೂರು ನಿವಾಸಿ ಮನೋಜ್ ಎಂದು ಗುರುತಿಸಲಾಗಿದೆ. ಮನೋಜ್ ಅವರು ಮರದ ಕೊಂಬೆಯೊಂದನ್ನು ಕಡಿಯುವಾಗ 33 kv ವಿದ್ಯುತ್ ತಂತಿ ತಾಗಿ ಸ್ಥಳದಲ್ಲೇ ಮೃತಪಟ್ಟಿದ್ದು, ಮನೋಜ್ ಮೃತದೇಹ ಮರದಲ್ಲೇ ನೇತಾಡುತ್ತಿತ್ತು. ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಕಡಬ ಸರಕಾರಿ ಆಸ್ಪತ್ರೆಗೆ ತರಲಾಗಿದೆ.

ಕಡಬ: ಮರದ ಕೊಂಬೆ ಕಡಿಯುವ ವೇಳೆ ವಿದ್ಯುತ್ ಲೈನ್ ತಗುಲಿ ವ್ಯಕ್ತಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪತಿ- ಪತ್ನಿಯ ನಡುವೆ ಜಗಳ ಕೊಲೆಯಲ್ಲಿ ಅಂತ್ಯ ➤ ಪತ್ನಿಯ ಕತ್ತು ಕೊಯ್ದ ಪತಿರಾಯ- ಪತ್ನಿ ಮೃತ್ಯು

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಸೆ. 07. ದಂಪತಿಗಳಿಬ್ಬರ ನಡುವೆ ಜಗಳ ನಡೆದು, ತಾರಕಕ್ಕೇರಿ ಬಳಿಕ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಇಲ್ಲಿನ ತುಂಗಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಪ್ರಿಯಾಂಕಾ ಲೇಜೌಟ್ ನಲ್ಲಿ ನಡೆದಿದೆ. ಕೊಲೆಗೀಡಾದವರನ್ನು ಮಂಜುಳಾ ಎಂದು ಗುರುತಿಸಲಾಗಿದೆ. ಪತಿ ದಿನೇಶ್ ಕೊಲೆ ಆರೋಪಿ. ಮೆಸ್ಕಾಂ ಉದ್ಯೋಗಿಯಾಗಿರುವ ದಿನೇಶ್ ತನ್ನ ಪತ್ನಿ ಮಂಜುಳಾರವರ ಕುತ್ತಿಗೆ ಕೊಯ್ದು ಹತ್ಯೆ ಮಾಡಿದ್ದಲ್ಲದೇ, ತಾನೂ ಕೂಡ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆದರೆ ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ನಾರಾಯಣ ಹೃದಯಾಲಯಕ್ಕೆ

ಪತಿ- ಪತ್ನಿಯ ನಡುವೆ ಜಗಳ ಕೊಲೆಯಲ್ಲಿ ಅಂತ್ಯ ➤ ಪತ್ನಿಯ ಕತ್ತು ಕೊಯ್ದ ಪತಿರಾಯ- ಪತ್ನಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸುಳ್ಯ: ಮನೆಗೆ ಬೆಂಕಿಬಿದ್ದು ಯಜಮಾನ ಜೀವಂತ ದಹನ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಸೆ. 07. ಮನೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಮನೆಯೊಳಗೆ ಮಲಗಿದ್ದ ಯಜಮಾನ ಜೀವಂತ ದಹನವಾದ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಮೃತರನ್ನು ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಪರ್ಲಿಕಜೆ ಸುಧಾಕರ (47) ಎಂದು ಗುರುತಿಸಲಾಗಿದೆ. ಇಂದು ಬೆಳಿಗ್ಗೆ ಸುಧಾಕರ್ ಅವರು ಮನೆಯಲ್ಲಿ ಮಲಗಿದ್ದು, ಪತ್ನಿ ಟ್ಯಾಪಿಂಗ್‌ಗೆಂದು ಹೋಗಿದ್ದರು. ಮಗಳು ಶಾಲೆಗೆ ತೆರಳಿದ್ದಳು. ಈ ಹೊತ್ತಿನಲ್ಲಿ ಬೆಂಕಿ ಮನೆಯ ಒಂದು ಪಾರ್ಶ್ವವನ್ನು ಸುಟ್ಟು ಹಾಕಿದೆ. ಸುಧಾಕರರು ಅಸೌಖ್ಯಕ್ಕೀಡಾಗಿರುವ ಹಿನ್ನಲೆ

ಸುಳ್ಯ: ಮನೆಗೆ ಬೆಂಕಿಬಿದ್ದು ಯಜಮಾನ ಜೀವಂತ ದಹನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸಚಿವ ಉಮೇಶ್ ಕತ್ತಿ ನಿಧನ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 06. ಅರಣ್ಯ ಹಾಗೂ ಆಹಾರ, ನಾಗರಿಕ ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ್ ಕತ್ತಿಗೆ ಮಂಗಳವಾರದಂದು ರಾತ್ರಿ ಹೃದಯಾಘಾತವಾಗಿದ್ದು, ತಕ್ಷಣವೇ ಅವರನ್ನು ಕುಟುಂಬಸ್ಥರು ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಿದರಾದರೂ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ರಾತ್ರಿ 10 ಗಂಟೆಯ ವೇಳೆಗೆ ಹೃದಯಾಘಾತವಾಗಿದೆ ಎಂದೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಸಚಿವ ಉಮೇಶ್ ಕತ್ತಿ ನಿಧನ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಚಿವ ಉಮೇಶ್ ಕತ್ತಿಗೆ ಹೃದಯಾಘಾತ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 06. ಅರಣ್ಯ ಹಾಗೂ ಆಹಾರ, ನಾಗರಿಕ ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ್ ಕತ್ತಿಗೆ ಮಂಗಳವಾರದಂದು ರಾತ್ರಿ ಹೃದಯಾಘಾತವಾಗಿದ್ದು, ತಕ್ಷಣವೇ ಅವರನ್ನು ಕುಟುಂಬಸ್ಥರು ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ರಾತ್ರಿ 10ಗಂಟೆಯ ವೇಳೆಗೆ ಹೃದಯಾಘಾತವಾಗಿದೆ ಎಂದೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಸಚಿವ ಉಮೇಶ್ ಕತ್ತಿಗೆ ಹೃದಯಾಘಾತ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಾಳೆ (ಸೆ. 07) ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 06. ಮಂಗಳೂರು ನಗರ ಸೇರಿ‌ದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ ಭಾರೀ ಮಳೆಯಾಗಲಿದ್ದು, ಈ ಹಿನ್ನೆಲೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ನಾಳೆಯಿಂದ ಮುಂದಿನ ಐದು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದ್ದು, ಸೆ. 07ರಂದು ರೆಡ್ ಅಲರ್ಟ್ ಹಾಗೂ ಮೂರು ದಿನ ಆರೆಂಜ್ ಅಲರ್ಟ್‌ ಅನ್ನು ಹವಾಮಾನ ಇಲಾಖೆ ಘೋಷಿಸಿದೆ.

ನಾಳೆ (ಸೆ. 07) ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಣೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಉಳ್ಳಾಲ: ತೆಂಗಿನಕಾಯಿ ಕೀಳುತ್ತಿದ್ದ ವೇಳೆ ಕಣಜದ ಹುಳುಗಳ ದಾಳಿ ➤ ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಉಳ್ಳಾಲ, ಸೆ. 06. ತೆಂಗಿನಕಾಯಿ ಕೀಳಲು ಮರವೇರಿದ ವೇಳೆ ಗೂಡುಕಟ್ಟಿದ್ದ ಕಣಜದ ಹುಳುಗಳು ದಾಳಿ ನಡೆಸಿದ ಪರಿಣಾಮ ಕಾಯಿ ಕೀಳುವ ವ್ಯಕ್ತಿ ಗಂಭೀರ ಗಾಯಗೊಂಡಿದ್ದಲ್ಲದೆ, ರಸ್ತೆಯಲ್ಲಿ ಹೋಗುತ್ತಿದ್ದ ತಂದೆ ಹಾಗೂ ಮಗಳಿಗೂ ಹುಳುಗಳು ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ತೊಕ್ಕೊಟ್ಟು ಸಮೀಪದ ಉಳ್ಳಾಲ ಬೈಲು ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಉಳ್ಳಾಲ ಬೈಲು ನಿವಾಸಿ ಜಿತನ್‌ ರೆಸ್ಕಿನ(40), ಪ್ರವೀಣ್ ಪೂಜಾರಿ ಹಾಗೂ ಅವರ ಮಗಳು ದೃತಿ ಎಂದು ಗುರುತಿಸಲಾಗಿದೆ. ಜಿತನ್ ಅವರು ವೃತ್ತಿಪರ ತೆಂಗಿನಕಾಯಿ

ಉಳ್ಳಾಲ: ತೆಂಗಿನಕಾಯಿ ಕೀಳುತ್ತಿದ್ದ ವೇಳೆ ಕಣಜದ ಹುಳುಗಳ ದಾಳಿ ➤ ಮೂವರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಎಲ್ಲಾ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಿದ ಸುರೇಶ್ ರೈನಾ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 06. ಖ್ಯಾತ ಆಲ್ ರೌಂಡರ್ ಸುರೇಶ್ ರೈನಾ ಐಪಿಎಲ್ ಸೇರಿದಂತೆ ಎಲ್ಲಾ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ‘ ದೇಶ ಮತ್ತು ಉತ್ತರ ಪ್ರದೇಶ ರಾಜ್ಯವನ್ನು ಪ್ರತಿನಿಧಿಸಿರುವುದು ಹೆಮ್ಮೆಯ ವಿಷಯವಾಗಿದೆ. ಕ್ರಿಕೆಟ್ ನಿಂದ ನಿವೃತ್ತಿ ಘೋಷಿಸುತ್ತಿದ್ದೇನೆ. ಈ ಸಂದರ್ಭದಲ್ಲಿ ಬಿಸಿಸಿಐ, ಉತ್ತರ ಪ್ರದೇಶ ಕ್ರಿಕೆಟ್ ಸಂಸ್ಥೆ, ಚೆನ್ನೈ ಸೂಪರ್ ಕಿಂಗ್ಸ್, ರಾಜೀವ್ ಶುಕ್ಲಾ ಹಾಗೂ ನನ್ನ ಮೇಲೆ ನಂಬಿಕೆ ಇಟ್ಟು ಬೆಂಬಲಿಸಿದ,

ಎಲ್ಲಾ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಿದ ಸುರೇಶ್ ರೈನಾ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಮಹಿಳೆಯರ ಸರಗಳ್ಳತನ ಪ್ರಕರಣ ➤ ಮೂವರು ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 06. ನಗರದ ವಿವಿಧ ಕಡೆಗಳಲ್ಲಿ ಮಹಿಳೆಯರ ಸರ ದೋಚುತ್ತಿದ್ದ 3 ಜನ ಆರೋಪಿಗಳನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಪಿಲಿಕುಲ ನಿಸರ್ಗಧಾಮ ನಗರದ ಜಗದೀಶ್(39), ಉರ್ವ ಸ್ಟೋರ್ ನಿವಾಸಿ ಸುಜಿತ್ ಶೆಟ್ಟಿ(40), ಮಂಗಳೂರಿನ ಪದವಿನಂಗಡಿ ನಿವಾಸಿ ಸುರೇಶ್ ರೈ(39) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ 90 ಗ್ರಾಂ ತೂಕದ ಚಿನ್ನಾಭರಣ, 2 ಸ್ಕೂಟರ್ ಮತ್ತು 3 ಮೊಬೈಲ್ ಪೋನ್ ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಇವುಗಳ ಒಟ್ಟು ಮೌಲ್ಯ

ಮಂಗಳೂರು: ಮಹಿಳೆಯರ ಸರಗಳ್ಳತನ ಪ್ರಕರಣ ➤ ಮೂವರು ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಗುವಿಗೆ ಜನ್ಮವಿತ್ತು ಆವರಣಗೋಡೆಯ ಬಳಿ ಉಪೇಕ್ಷಿಸಿದ ಪಿಯುಸಿ ವಿದ್ಯಾರ್ಥಿನಿ ➤ ಎಸ್ಸೆಸ್ಸೆಲ್ಸಿ ಬಾಲಕನ ಬಂಧನ

(ನ್ಯೂಸ್ ಕಡಬ) newskadaba.com ಚೆನ್ನೈ, ಸೆ. 06. ಎಸ್ಸೆಸ್ಸೆಲ್ಸಿ ಬಾಲಕನಿಂದ ಗರ್ಭಿಣಿಯಾದ ಪಿಯುಸಿ ವಿದ್ಯಾರ್ಥಿನಿಯು, ಜನನವಾದ ಬಳಿಕ ಮಗುವನ್ನು ಶಾಲೆಯ ಪಕ್ಕದ ಆವರಣ ಗೋಡೆಯ ಬಳಿ ಬಿಟ್ಟುಹೋದ ಘಟನೆ ತಮಿಳು ನಾಡಿನ ಕಡಲೂರು ಜಿಲ್ಲೆಯ ಭುವನಗಿರಿಯಲ್ಲಿ‌ ನಡೆದಿದೆ. ಶಾಲಾ ಆವರಣದ ಬಳಿ ನವಜಾತ ಶಿಶುವನ್ನು ಗಮನಿಸಿದ ವಿದ್ಯಾರ್ಥಿನಿಯೋರ್ವಳು ಶಿಕ್ಷಕರಿಗೆ ಮಾಹಿತಿ ನೀಡಿದ್ದು, ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಶಿಶುವಿನ ಹೊಕ್ಕುಳ ಬಳ್ಳಿ ಸರಿಯಾದ ರೀತಿಯಲ್ಲಿ ತುಂಡರಿಸಿರದಿಂದ, ಶಾಲಾ ವಿದ್ಯಾರ್ಥಿನಿಯರ ಪೈಕಿ ಯಾರೋ ಈ ಕೃತ್ಯ ನಡೆಸಿರಬಹುದೆಂದು ಪ್ರಾಥಮಿಕ

ಮಗುವಿಗೆ ಜನ್ಮವಿತ್ತು ಆವರಣಗೋಡೆಯ ಬಳಿ ಉಪೇಕ್ಷಿಸಿದ ಪಿಯುಸಿ ವಿದ್ಯಾರ್ಥಿನಿ ➤ ಎಸ್ಸೆಸ್ಸೆಲ್ಸಿ ಬಾಲಕನ ಬಂಧನ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top