ಬ್ರೇಕಿಂಗ್ ನ್ಯೂಸ್

ಹಂದಿ ಜ್ವರಕ್ಕೆ ತುಂಬು ಗರ್ಭಿಣಿ ಬಲಿ

(ನ್ಯೂಸ್ ಕಡಬ) newskadaba.com ಮೈಸೂರು, ಸೆ. 01. ತುಂಬು ಗರ್ಭಿಣಿಯೊಬ್ಬರು ಹಂದಿ ಜ್ವರಕ್ಕೆ ಬಲಿಯಾದ ಘಟನೆ ಮೈಸೂರಿನಲ್ಲಿ ನಡೆದಿದೆ. ಮೃತಪಟ್ಟವರನ್ನು ಹುಣಸೂರು ತಾಲೂಕು ಕೋಣನಹೊಸಹಳ್ಳಿ ಗ್ರಾಮದ ಸ್ವಾಮಿನಾಯ್ಕ ಎಂಬವರ ಪುತ್ರಿ ಛಾಯಾ ಎಂದು ಗುರುತಿಸಲಾಗಿದೆ. ಇವರಿಗೆ 4 ವರ್ಷದ ಗಂಡು ಮಗು ಇದ್ದು, ಇದೀಗ 2ನೇ ಮಗುವಿನ ನಿರೀಕ್ಷೆಯಲ್ಲಿದ್ದ 9 ತಿಂಗಳ ಗರ್ಭಿಣಿ ಛಾಯಾಗೆ ಎಚ್1ಎನ್1 ಸೋಂಕು ತಗುಲಿತ್ತು. ಬಳಿಕ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಹಂದಿ ಜ್ವರಕ್ಕೆ ತುಂಬು ಗರ್ಭಿಣಿ ಬಲಿ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕೊಕ್ಕಡ: ಮಹಿಳೆ ಅನುಮಾನಾಸ್ಪದ ಸಾವು ➤‌ ಪತಿ ಕೊಲೆಗೈದಿರುವ ಶಂಕೆ

(ನ್ಯೂಸ್ ಕಡಬ) newskadaba.com ಕೊಕ್ಕಡ, ಆ. 31. ಇಲ್ಲಿನ ವಿವಾಹಿತ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ನಡೆದಿದ್ದು, ಪತಿಯೇ ಕೊಲೆಗೈದಿರುವ ಬಗ್ಗೆ ಸಂಶಯ ವ್ಯಕ್ತವಾಗಿದೆ. ಮೃತರನ್ನು ಕೊಕ್ಕಡ ಗ್ರಾಮದ ಅಗರ್ತ ನಿವಾಸಿ ಗಣೇಶ್‌ ಗೌಡ ಅವರ ಪತ್ನಿ ಮೋಹಿನಿ(36) ಎಂದು ಗುರುತಿಸಲಾಗಿದೆ. ಇವರ ಪತಿ ಗಣೇಶ ಗೌಡನಿಗೆ ಕುಡಿತದ ಚಟವಿದ್ದು, ಪತ್ನಿ ಜತೆ ಜಗಳ ನಡೆದು ಗಲಾಟೆ ವಿಕೋಪಕ್ಕೆ ತಿರುಗಿ ಹಲ್ಲೆಗೈದ ಪರಿಣಾಮ ಮೋಹಿನಿ ಮೃತಪಟ್ಟಿರುವುದಾಗಿ ಶಂಕಿಸಲಾಗಿದ್ದು, ಮಹಿಳೆ ಅನುಮಾನಾಸ್ಪದ ಸಾವಿನ ಪ್ರಕರಣ ದಾಖಲಿಸಿಕೊಂಡಿರುವ ಧರ್ಮಸ್ಥಳ ಪಿಎಸ್‌ಐ

ಕೊಕ್ಕಡ: ಮಹಿಳೆ ಅನುಮಾನಾಸ್ಪದ ಸಾವು ➤‌ ಪತಿ ಕೊಲೆಗೈದಿರುವ ಶಂಕೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ..!

(ನ್ಯೂಸ್ ಕಡಬ) newskadaba.com ಚೆನ್ನೈ, ಆ. 29. ಭಾರತ- ಶ್ರೀಲಂಕಾ ನಡುವಿನ ಸಮುದ್ರದಲ್ಲಿ ಮೀನು ಹಿಡಿಯಲು ತೆರಳಿದ್ದ ಆರು ಮೀನುಗಾರರನ್ನು ಶ್ರೀಲಂಕಾ ಬಂಧಿಸಿದ್ದು, ಇನ್ನುಳಿದವರನ್ನು ಬೆನ್ನಟ್ಟಿ ಬಂದಿರುವ ಕುರಿತು ರಾಮೇಶ್ವರಂನ ಮೀನುಗಾರರ ಸಂಘವು ಆರೋಪಿಸಿದೆ. ಮೀನುಗಾರರು ಭಾರತೀಯ ಸಮುದ್ರ ಮಿತಿಯೊಳಗಿದ್ದರೂ ಅವರನ್ನು ಬಂಧಿಸಲಾಗಿದೆ ಎಂದು ಆರೋಪಿಸಿದ ಸಂಘವು, ಕೂಡಲೇ ನಮ್ಮ ಮೀನುಗಾರರನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದೆ.

ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಪ್ಪಿನಂಗಡಿ: ರಕ್ಚಿತಾರಣ್ಯದಿಂದ ಮರ ಕಡಿದು ಸಾಗಾಟಕ್ಕೆ ಸಿದ್ದತೆ ➤‌ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ. 26. ಸರಕಾರಿ ಮೀಸಲು ರಕ್ಷಿತಾರಣ್ಯದಿಂದ ಮರ ಕಡಿದು ಅಲ್ಲೇ ತುಂಡುಗಳನ್ನಾಗಿ ಮಾಡಿ ಸಾಗಾಟಕ್ಕೆ ಸಿದ್ಧತೆ ಮಾಡಿಕೊಂಡಿದ್ದ ಪ್ರಕರಣವನ್ನು ಪತ್ತೆಹಚ್ಚಿದ ಉಪ್ಪಿನಂಗಡಿ ವಲಯ ಅರಣ್ಯ ಇಲಾಖಾ ಸಿಬ್ಬಂದಿಗಳು, ಬೆಳೆಬಾಳುವ ದಿಮ್ಮಿ ಸಹಿತ ಮೂವರು ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಗಳನ್ನು ಪದ್ಮುಂಜ ನಿವಾಸಿಗಳಾದ ದಿನೇಶ್, ಉಮೇಶ್ ಗೌಡ ಹಾಗೂ ಹೇಮಂತ್ ಎಂದು ಗುರುತಿಸಲಾಗಿದೆ. ಬಂಧಿತರು ಕಣಿಯೂರು ಗ್ರಾಮದ ಮಲೆಂಗಲ್ಲು ಎಂಬಲ್ಲಿರುವ ಸರಕಾರಿ ಮೀಸಲು ರಕ್ಷಿತಾರಣ್ಯದಿಂದ ಬೃಹತ್ ಗಾತ್ರದ ಕಲ್ಬಾಜಿ

ಉಪ್ಪಿನಂಗಡಿ: ರಕ್ಚಿತಾರಣ್ಯದಿಂದ ಮರ ಕಡಿದು ಸಾಗಾಟಕ್ಕೆ ಸಿದ್ದತೆ ➤‌ ಮೂವರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪ್ರತ್ಯೇಕ ಪ್ರಕರಣ- ವ್ಯಕ್ತಿಗಳಿಬ್ಬರು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 25. ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುರಿಯ ಬಲ್ಲಮಜಲು ಎಂಬಲ್ಲಿ ನಡೆದಿದೆ. ಮೃತರನ್ನು ನಾರಾಯಣ ಪೂಜಾರಿ ಎಂದು ಗುರುತಿಸಲಾಗಿದೆ. ಇವರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇನ್ನೊಂದು ಪ್ರಕರಣದಲ್ಲಿ ಉಪ್ಪಿನಂಗಡಿ ನಲಿಕೆಮಜಲು ನಿವಾಸಿ ಶೀನಪ್ಪ ಗೌಡರವರು ಮನೆ ಪಕ್ಕದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಘಟನೆಗೆ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.

ಪ್ರತ್ಯೇಕ ಪ್ರಕರಣ- ವ್ಯಕ್ತಿಗಳಿಬ್ಬರು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಗೋಳಿತೊಟ್ಟು: ಟಿಪ್ಪರ್- ಸ್ಕೂಟಿ ನಡುವೆ ಢಿಕ್ಕಿ ➤‌ ತಾಯಿ- ಮಗನಿಗೆ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಆ. 25. ಟಿಪ್ಪರ್ ಹಾಗೂ ಸ್ಕೂಟಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ತಾಯಿ- ಮಗ ಗಾಯಗೊಂಡ ಘಟನೆ ಕಾಂಚನ – ಶಾಂತಿನಗರ ರಸ್ತೆಯ ಗೋಳಿತ್ತೊಟ್ಟು ಗ್ರಾಮದ ನೂಜೋಲು ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ. ನೂಜೋಲು ನಿವಾಸಿ ಕುಶಾಲಪ್ಪ ಹಾಗೂ ಅವರ ತಾಯಿ ಉಪ್ಪಿನಂಗಡಿಯಿಂದ ಸ್ಕೂಟಿಯಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ಬಂದ ಟಿಪ್ಪರ್ ನಡುವೆ ಡಿಕ್ಕಿ ಸಂಭವಿಸಿದೆ. ಪರಿಣಾಮ ಟಿಪ್ಪರ್ ಅಡಿಗೆ ಬಿದ್ದಿದ್ದ ಕುಶಾಲಪ್ಪ ಹಾಗೂ ಅವರ ತಾಯಿಯನ್ನು ಕಷ್ಟಪಟ್ಟು

ಗೋಳಿತೊಟ್ಟು: ಟಿಪ್ಪರ್- ಸ್ಕೂಟಿ ನಡುವೆ ಢಿಕ್ಕಿ ➤‌ ತಾಯಿ- ಮಗನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪುತ್ತೂರು: ಅನ್ಯಕೋಮಿನ ಯುವಕರ ಜೊತೆ ಯುವತಿಯರು ಪತ್ತೆ

(ನ್ಯೂಸ್ ಕಡಬ) newskadaba.com ಪುತ್ತೂರು, ಆ.25. ಹಿಂದೂ ಯುವತಿ ಮತ್ತು ಕ್ರಿಶ್ಚಿಯನ್ ಯುವತಿಯರ ಜೊತೆ ಅನ್ಯಕೋಮಿನ ಯುವಕರು ಪತ್ತೆಯಾದ ಘಟನೆ ಇಲ್ಲಿನ ನೆಲ್ಲಿಕಟ್ಟೆಯ ಪಿಜ್ಜಾ ಹಟ್ ವೊಂದರಲ್ಲಿ ನಡೆದಿದೆ. ಇಬ್ಬರು ಕ್ರಿಶ್ಚಿಯನ್ ಯುವತಿಯರು, ಓರ್ವ ಹಿಂದೂ ಯುವತಿ ಮತ್ತು ಇಬ್ಬರು ಮುಸ್ಲಿಂ ಯುವಕರು ಪಿಜ್ಜಾ ಹಟ್ ವೊಂದರಲ್ಲಿ ಊಟಕ್ಕೆ ಆಗಮಿಸಿದ್ದು, ಈ ಕುರಿತು ಮಾಹಿತಿ ತಿಳಿದ ಹಿಂದೂ ಸಂಘಟನಾ ಕಾರ್ಯಕರ್ತರು ಪೊಲೀಸರಿಗೆ ನೀಡಿದ ಮಾಹಿತಿಯಂತೆ ಸ್ಥಳಕ್ಕಾಗಮಿಸಿದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಜೊತೆಗಿದ್ದವರೆಲ್ಲಾ ಸ್ಥಳೀಯರೇ ಆಗಿದ್ದು ಮನೆಯವರಿಗೆ ಮಾಹಿತಿ

ಪುತ್ತೂರು: ಅನ್ಯಕೋಮಿನ ಯುವಕರ ಜೊತೆ ಯುವತಿಯರು ಪತ್ತೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕ್ರೂಸರ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ➤‌ 9 ಮಂದಿ ದುರ್ಮರಣ

(ನ್ಯೂಸ್ ಕಡಬ) newskadaba.com ತುಮಕೂರು, ಆ. 25. ಕ್ರೂಸರ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 9 ಜನರು ಸ್ಥಳದಲ್ಲೇ ಮೃತಪಟ್ಟು, ಹಲವರು ಗಂಭೀರ ಗಾಯಗೊಂಡ ಘಟನೆ ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಎಂಬಲ್ಲಿ ಇಂದು ಮುಂಜಾನೆ ಸಂಭವಿಸಿದೆ. ರಾಯಚೂರು ಮತ್ತು ಮಾನ್ವಿ ಮೂಲದ ಜನರು ಕೂಲಿಗೆಂದು ಅರಸಿ ಕ್ರೂಸರ್ ವಾಹನದಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಲಾರಿ ಢಿಕ್ಕಿ ಹೊಡೆದಿದ್ದು, ಪರಿಣಾಮ ಸ್ಥಳದಲ್ಲೇ ಒಂಬತ್ತು ಜನ ಸಾವನ್ನಪ್ಪಿ, ಹಲವರು ಗಂಭೀರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆ

ಕ್ರೂಸರ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ➤‌ 9 ಮಂದಿ ದುರ್ಮರಣ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಆಕಸ್ಮಿಕವಾಗಿ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 25. ಆಕಸ್ಮಿಕವಾಗಿ ಬಾವಿಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ದಾರುಣ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಮೃತರನ್ನು ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗಾಂಧಿನಗರ ಕಾಫಿನಡ್ಕ ನಿವಾಸಿ ರಮಾನಂದ(42) ಎಂದು ಗುರುತಿಸಲಾಗಿದೆ. ಇವರು ಮನೆ ಸಮೀಪದ ಬಾವಿಗೆ ನಿನ್ನೆ ಮಧ್ಯಾಹ್ನ ಆಕಸ್ಮಿಕವಾಗಿ ಬಿದ್ದಿದ್ದು, ಸಂಜೆವರೆಗೂ ಇವರನ್ನು ಕಾಣದೇ ಇದ್ದಾಗ ಆತಂಕಗೊಂಡು ಮನೆಯವರು ಹುಡುಕಾಡಿದಾಗ ರಾತ್ರಿ ವೇಳೆ ರಮಾನಂದರ ಚಪ್ಪಲಿ ಬಾವಿ ಸಮೀಪ ಸಿಕ್ಕಿದೆ. ತಕ್ಷಣವೇ ಗ್ರಾ.ಪಂ. ಅಧ್ಯಕ್ಷರಾದ ಹೇಮಂತ್ ರವರು ಬೆಳ್ತಂಗಡಿ ಅಗ್ನಿಶಾಮಕದಳಕ್ಕೆ ಮಾಹಿತಿ

ಬೆಳ್ತಂಗಡಿ: ಆಕಸ್ಮಿಕವಾಗಿ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸುಬ್ರಹ್ಮಣ್ಯ: ಕುಮಾರಧಾರ ನದಿಯಲ್ಲಿ ಯುವಕ ನಾಪತ್ತೆ ➤‌ 4 ದಿನಗಳ ಬಳಿಕ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ. 24. ಇಲ್ಲಿನ ಕುಮಾರಧಾರಾ ನದಿಯಲ್ಲಿ ಸ್ನಾನಕ್ಕೆಂದು ಹಾರಿದ್ದ ಬೆಂಗಳೂರು ಯುವಕನ ಮೃತದೇಹವು ಸತತ ನಾಲ್ಕು ದಿನಗಳ ಕಾರ್ಯಾಚರಣೆಯ ಬಳಿಕ ಇಂದು ಸಂಜೆ ಮೃತದೇಹ ಪತ್ತೆಯಾಗಿದೆ. ಪ್ರವಾಸಿಗರಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದ ಬೆಂಗಳೂರು ದೀಪಾಂಜಲಿ ನಗರದ ತಂಡದಲ್ಲಿದ್ದ ಯುವಕ ಶಿವು ಎಂಬಾತ ಕುಕ್ಕೆ ಸುಬ್ರಹ್ಮಣ್ಯದಿಂದ ಹಿಂತಿರುಗುವ ವೇಳೆ ಕುಮಾರಧಾರಾ ನದಿಯಲ್ಲಿ ಸ್ನಾನಕ್ಕೆಂದು ನದಿಗೆ ಹಾರಿದ್ದು, ಬಳಿಕ ನಾಪತ್ತೆಯಾಗಿದ್ದ. ಇದೀಗ ಸುಮಾರು 15 ಜನ ನುರಿತ ಈಜುಗಾರರು, ಸಮಾಜ ಸೇವಕ ರವಿಕಕ್ಕೆಪದವು, ಅಗ್ನಿಶಾಮಕ

ಸುಬ್ರಹ್ಮಣ್ಯ: ಕುಮಾರಧಾರ ನದಿಯಲ್ಲಿ ಯುವಕ ನಾಪತ್ತೆ ➤‌ 4 ದಿನಗಳ ಬಳಿಕ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top