ಬ್ರೇಕಿಂಗ್ ನ್ಯೂಸ್

ಕಾಡುಹಂದಿ ದಾಳಿ ➤‌ ತಂದೆ- ಮಗ ಗಂಭೀರ

(ನ್ಯೂಸ್ ಕಡಬ) newskadaba.com ಕಾಸರಗೋಡು, ಆ. 24. ಕಾಡು ಹಂದಿಗಳ ದಾಳಿಯಿಂದಾಗಿ ತಂದೆ ಮತ್ತು ಮಗ ಗಂಭೀರ ಗಾಯಗೊಂಡ ಘಟನೆ ಬೋವಿಕ್ಕಾನದಲ್ಲಿ ಮಂಗಳವಾರದಂದು ರಾತ್ರಿ ನಡೆದಿದೆ. ಗಾಯಗೊಂಡವರನ್ನು ಬೋವಿಕ್ಕಾನ ವ್ಯಾಪಾರಿ ಅಬ್ದುಲ್ಲ (57) ಹಾಗೂ ಪುತ್ರ ಫಝಲ್ ರಹಮಾನ್ (24) ಎಂದು ಗುರುತಿಸಲಾಗಿದೆ. ಇವರು ಮಂಗಳವಾರದಂದು ರಾತ್ರಿ ಅಂಗಡಿ ಬಂದ್ ಮಾಡಿ ಸ್ಕೂಟರ್ ನಲ್ಲಿ ಮನೆಗೆ ಮರಳುತ್ತಿದ್ದ ವೇಳೆ ಮುದಲಪ್ಪಾರ ಎಂಬಲ್ಲಿ ಕಾಡು ಹಂದಿಗಳ ತಂಡವು ರಸ್ತೆಗೆ ಅಡ್ಡವಾಗಿ ಬಂದಿದ್ದು, ಇಬ್ಬರ ಮೇಲೆ ದಾಳಿ ನಡೆಸಿದೆನ್ನಲಾಗಿದೆ.

ಕಾಡುಹಂದಿ ದಾಳಿ ➤‌ ತಂದೆ- ಮಗ ಗಂಭೀರ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿಟ್ಲ: ಹಠಾತ್ತನೆ ಕುಸಿದುಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ವಿಟ್ಲ, ಆ. 23. ಹಠಾತ್ತನೆ ಕುಸಿದು ಬಿದ್ದು ವ್ಯಕ್ತಿಯೋರ್ವರ ತಲೆಗೆ ಗಂಭೀರ ಗಾಯವಾಗಿ ಮೃತಪಟ್ಟ ಘಟನೆ ವಿಟ್ಲದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಮೂಲತಃ ವಿಟ್ಲ ಅಡ್ಯನಡ್ಕ ನಿವಾಸಿ ಸದ್ಯ ಸಾಲೆತ್ತೂರಿನಲ್ಲಿ ವಾಸವಿರುವ ಮೊಯ್ದೀನ್ ಎಂದು ಗುರುತಿಸಲಾಗಿದೆ. ಇವರು ವಿಟ್ಲದ ಖಾಸಗಿ ಬಸ್ ನಿಲ್ದಾಣದಲ್ಲಿನ ರಿಕ್ಷಾ ಪಾರ್ಕಿಂಗ್ ಬಳಿ ಹಠಾತ್ ಕುಸಿದು ಬಿದ್ದಿದ್ದು, ತಲೆಗೆ ಗಂಭೀರ ಗಾಯವಾಗಿತ್ತು. ಅವರನ್ನು ಕೂಡಲೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದರಾದರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ವಿಟ್ಲ: ಹಠಾತ್ತನೆ ಕುಸಿದುಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅಝಾನ್ ವಿಚಾರಕ್ಕೆ ನಿರ್ಬಂಧ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 23. ಮಸೀದಿಗಳಲ್ಲಿ ಧ್ವನಿವರ್ಧಕಗಳ ಮೂಲಕ ಕರೆಯಲಾಗುವ ಆಝಾನ್‌ನಲ್ಲಿ ಇರುವ ವಿಚಾರಗಳನ್ನು ನಿರ್ಬಂಧಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಆಲಿಸಲು ಹೈಕೋರ್ಟ್ ನಿರಾಕರಿಸಿದೆ. ನಗರದ ನಿವಾಸಿ ಆರ್. ಚಂದ್ರಶೇಖರ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ ಆರಾಧೆ ನೇತೃತ್ವದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ಪ್ರತಿ ದಿನ 5 ಬಾರಿ ಅಝಾನ್ ಕೂಗುವುದರಿಂದ ಬೇರೆ ಧರ್ಮದ ಅನುಯಾಯಿಗಳ ಭಾವನೆಗೆ ಧಕ್ಕೆಯಾಗುತ್ತದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು. ಆಝಾನ್‌ನಲ್ಲಿ ಇರುವ ವಿಚಾರಗಳು,

ಅಝಾನ್ ವಿಚಾರಕ್ಕೆ ನಿರ್ಬಂಧ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ: ಕಾರು ಮತ್ತು ಲಾರಿ ನಡುವೆ ಅಪಘಾತ ➤‌ ಕಾರು ಚಾಲಕ ಗಂಭೀರ

(ನ್ಯೂಸ್ ಕಡಬ) newskadaba.com ಸುಳ್ಯ, ಆ. 23. ಕಾರು ಹಾಗೂ ಲಾರಿ ಮಧ್ಯೆ ಪರಸ್ಪರ ಢಿಕ್ಕಿ ಸಂಭವಿಸಿದ ಪರಿಣಾಮ ಕಾರು ಚಾಲಕ ಗಂಭೀರ ಗಾಯಗೊಂಡ ಘಟನೆ ಕನಕಮಜಲು ಗ್ರಾಮದ ಕೋಡಿ ಎಂಬಲ್ಲಿ ಸಂಭವಿಸಿದೆ. ಪುತ್ತೂರಿನಿಂದ ಸುಳ್ಯ ಕಡೆಗೆ ತೆರಳುತ್ತಿದ್ದ ಕಾರು ಕನಕಮಜಲಿನ ಕೋಡಿ ಎಂಬಲ್ಲಿ ತಿರುವಿನ ಬಳಿ ತಲುಪುತ್ತಿದ್ದಂತೆಯೇ ವಿರುದ್ದ ದಿಕ್ಕಿನಿಂದ ಬಂದ ಲಾರಿಗೆ ಢಿಕ್ಕಿ ಹೊಡೆದಿದ್ದು, ಪರಿಣಾಮ ಕಾರು ಚಾಲಕನ ಕಾಲಿಗೆ ಗಂಭೀರ ಗಾಯವಾಗಿದೆ. ತಕ್ಷಣವೇ ಸ್ಥಳೀಯರು ಸೇರಿ ಗಾಯಾಳುವನ್ನು ಸುಳ್ಯದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎನ್ನಲಾಗಿದೆ.

ಸುಳ್ಯ: ಕಾರು ಮತ್ತು ಲಾರಿ ನಡುವೆ ಅಪಘಾತ ➤‌ ಕಾರು ಚಾಲಕ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿಟ್ಲ: ದ್ವಿಚಕ್ರ ವಾಹನಗಳ ನಡುವೆ ಅಪಘಾತ ➤‌ ಸಹಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ವಿಟ್ಲ, ಆ. 22. ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ದ್ವಿಚಕ್ರ ವಾಹನದ ಸಹ ಸವಾರ ಮೃತಪಟ್ಟ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಮೃತರನ್ನು ಮಂಕುಡೆ ಅಮೈ ನಿವಾಸಿ ಸಂಜೀವ ಶೇಖರ ಪುತ್ರ ವಿಕಲಚೇತನರಾಗಿದ್ದ ಚಂದ್ರಹಾಸ ಶೇಖ (50) ಎಂದು ಗುರುತಿಸಲಾಗಿದೆ. ಢಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನದ ಸಹ ಸವಾರ ವಿಕಲಚೇತನರಾದ ಚಂದ್ರಹಾಸ ಶೇಖ ರವರು ಗಂಭೀರ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ದೇರಳಕಟ್ಟೆ ಆಸ್ಪತ್ರೆಗೆ

ವಿಟ್ಲ: ದ್ವಿಚಕ್ರ ವಾಹನಗಳ ನಡುವೆ ಅಪಘಾತ ➤‌ ಸಹಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಾಸರಗೋಡು: ಮಾದಕ ವಸ್ತು ಸಹಿತ ಓರ್ವ ಆರೋಪಿ ಪೊಲೀಸ್ ಬಲೆಗೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಆ. 22. ಮಾದಕ ವಸ್ತುಗಳ ಸಹಿತ ಓರ್ವನನ್ನು ಡಿವೈಎಸ್ಪಿ ನೇತೃತ್ವದ ಪೊಲೀಸ್ ತಂಡವು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಯನ್ನು ಕೆ.ಹರ್ಷಾದ್ (32) ಎಂದು ಗುರುತಿಸಲಾಗಿದೆ. ಕಾಞ೦ಗಾಡ್ ಬಸ್ಸು ನಿಲ್ದಾಣ ಪರಿಸರದಿಂದ 10 ಗ್ರಾಂ ಮಾದಕ ವಸ್ತು ಸಹಿತ ಈತನನ್ನು ಬಂಧಿಸಲಾಯಿತು. ಈತನ ವಿರುದ್ಧ ಅತ್ಯಾಚಾರ, ಕಳವು, ಹೊಡೆದಾಟ ಸೇರಿದಂತೆ ಹಲವು ಪ್ರಕರಣಗಳು ಹೊಸದುರ್ಗ, ನೀಲೇಶ್ವರ, ಪಯ್ಯನ್ನೂರು ಠಾಣೆಗಳಲ್ಲಿ ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಸರಗೋಡು: ಮಾದಕ ವಸ್ತು ಸಹಿತ ಓರ್ವ ಆರೋಪಿ ಪೊಲೀಸ್ ಬಲೆಗೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಕೊಲೆಯತ್ನ ಆರೋಪಿಗೆ ಗುಂಡೇಟು

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 22. ಸ್ಥಳ ಮಹಜರು ವೇಳೆ ಪೊಲೀಸರಿಗೆ ಹಲ್ಲೆ ನಡೆಸಿ ಪರಾರಿಯಾಗಲೆತ್ನಿಸಿದ ಆರೋಪಿಗೆ ಪೊಲೀಸರು ಫೈರಿಂಗ್ ನಡೆಸಿದ ಘಟನೆ ಮಂಗಳೂರು ಗ್ರಾಮಾಂತರ ಠಾಣೆಯ ಕಂಬಳ ಎಂಬಲ್ಲಿ ನಡೆದಿದೆ. ಆರೋಪಿ ಮಿಸ್ತಾ ಯಾನೆ ಮುಸ್ತಾಕ್ ಗುಂಡೇಟು ತಗುಲಿದಾತ. ಕಳೆದೆರಡು ದಿನಗಳ ಹಿಂದೆ ನಗರದ ಹೊರವಲಯದಲ್ಲಿ ನಡೆದ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರಿಂದ ಬಂಧಿಸಲ್ಪಟ್ಟಿದ್ದ ಈತನನ್ನು ಇಂದು ಸ್ಥಳ ಮಹಜರಿಗೆಂದು ಘಟನಾ ಸ್ಥಳಕ್ಕೆ ಕರೆದೊಯ್ಯಲಾಗಿತ್ತು. ಈ ವೇಳೆ ಆರೋಪಿ ಪೊಲೀಸರಿಗೆ ಹಲ್ಲೆ ನಡೆಸಿ

ಮಂಗಳೂರು: ಕೊಲೆಯತ್ನ ಆರೋಪಿಗೆ ಗುಂಡೇಟು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಟೋಲ್’ನ ಮಹಿಳಾ ಸಿಬ್ಬಂದಿಗೆ ಕಪಾಳಮೋಕ್ಷ ಮಾಡಿದ ಕಾರು ಚಾಲಕ ➤‌ ವಿಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಭೋಪಾಲ್, ಆ. 22. ವ್ಯಕ್ತಿಯೊಬ್ಬ ಟೋಲ್ ನಲ್ಲಿದ್ದ ಮಹಿಳಾ ಉದ್ಯೋಗಿಗೆ ಕಪಾಳಮೋಕ್ಷ ಮಾಡಿದ ಘಟನೆ ಮಧ್ಯಪ್ರದೇಶದ ರಾಜಗಢ-ಭೋಪಾಲ್ ರಸ್ತೆಯಲ್ಲಿನ ಕಚ್ನಾರಿಯಾ ಟೋಲ್ ಪ್ಲಾಝಾದಲ್ಲಿ ನಡೆದಿದೆ. ಇದೀಗ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸ್ಥಳೀಯ ನಿವಾಸಿಯೋರ್ವರ ಕಾರಿನಲ್ಲಿ ಟೋಲ್ ಪಾವತಿಸಲು ಫಾಸ್ಟ್ ಟ್ಯಾಗ್ ವ್ಯವಸ್ಥೆಯನ್ನು ಹೊಂದಿರಲಿಲ್ಲ. ಆದರೆ ಮಹಿಳೆ ಟೋಲ್ ಪಾವತಿಸದೇ ವಾಹನ ಹೋಗಲು ಬಿಡುವುದಿಲ್ಲ ಎಂದಿದ್ದಕ್ಕೆ ಕೋಪಗೊಂಡ ರಾಜ್ ಕುಮಾರ್, ತಾನು ಸ್ಥಳೀಯನಾಗಿದ್ದು ಟೋಲ್ ನಿಂದ ವಿನಾಯಿತಿ ನೀಡಬೇಕು ಎಂದು

ಟೋಲ್’ನ ಮಹಿಳಾ ಸಿಬ್ಬಂದಿಗೆ ಕಪಾಳಮೋಕ್ಷ ಮಾಡಿದ ಕಾರು ಚಾಲಕ ➤‌ ವಿಡಿಯೋ ವೈರಲ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪತ್ನಿಯನ್ನು ಕೊಲೆಗೈದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಪತಿ

(ನ್ಯೂಸ್ ಕಡಬ) newskadaba.com ಕುಂದಾಪುರ, ಆ. 22. ಪತಿಯೋರ್ವ ಪತ್ನಿಯನ್ನು ಕೊಲೆಗೈದು ಬಳಿಕ ತಾನೂ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ದೇವಲ್ಕುಂದ ಶಾಲೆಯ ಸಮೀಪ ನಡೆದಿದೆ. ಕೊಲೆಯಾದ ಮಹಿಳೆಯನ್ನು ಸೊರಬ ನಿವಾಸಿ ಪೂರ್ಣಿಮಾ ಆಚಾರ್ಯ (38) ಹಾಗೂ ಆಕೆಯ ಪತಿ ರವಿ ಆಚಾರ್ಯ (42) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ. ಮೂಲತಃ ಸೊರಬ ನಿವಾಸಿಯಾಗಿರುವ ಪೂರ್ಣಿಮಾ ಆಚಾರ್ಯ ಅವರನ್ನು ಕಳೆದ ಹದಿನಾರು ವರ್ಷಗಳ‌ ಹಿಂದೆ ಕೋಗಾರ್ ಮೂಲದ ರವಿ ಆಚಾರ್ಯರಿಗೆ

ಪತ್ನಿಯನ್ನು ಕೊಲೆಗೈದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಪತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಭಟ್ಕಳ: ಕಿಡ್ನಾಪ್ ಆದ ಬಾಲಕ ಗೋವಾದಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಭಟ್ಕಳ, ಆ. 22. ಅಂಗಡಿಗೆ ಬ್ರೆಡ್ ತರಲೆಂದು ಹೋಗಿದ್ದ 8 ವರ್ಷದ ಬಾಲಕನ‌ ನಾಪತ್ತೆಯಾದ ಪ್ರಕರಣ ಸುಖಾಂತ್ಯ ಕಂಡಿದ್ದು, ಇದೀಗ ಬಾಲಕ ಗೋವಾದಲ್ಲಿ ಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಅಲಿ ಇಸ್ಲಾಂ ಸಾದಾ(8) ಎಂಬ ಬಾಲಕ ಎರಡು ದಿನಗಳ ಹಿಂದೆ ಅಪಹರಣಕ್ಕೊಳಗಾಗಿದ್ದು, ಬಾಲಕನನ್ನು ಕಾರಿನಲ್ಲಿ ಬಂದು ಕಿಡ್ನಾಪ್ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಈ ಕುರಿತು ಕಾರ್ಯಚರಣೆ ನಡೆಸಿದ ಭಟ್ಕಳ ನಗರ ಠಾಣಾ ಪೊಲೀಸರು ಇದೀಗ ಬಾಲಕನನ್ನು ಗೋವಾದಲ್ಲಿ ಪತ್ತೆ ಹಚ್ಚಿ ರಕ್ಷಿಸಿದ್ದಾರೆ.

ಭಟ್ಕಳ: ಕಿಡ್ನಾಪ್ ಆದ ಬಾಲಕ ಗೋವಾದಲ್ಲಿ ಪತ್ತೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top