ಬ್ರೇಕಿಂಗ್ ನ್ಯೂಸ್

ಕೊನೆಗೂ ಪೊಲೀಸರ ಅತಿಥಿಯಾದ ಪ್ರವೀಣ್ ಹಂತಕರು

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಆ. 11. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮೂವರು ಪ್ರಮುಖ ಆರೋಪಿಗಳಾದ ಶಿಯಾಬ್, ಬಶೀರ್ ಮತ್ತು ರಿಯಾಜ್ ರನ್ನು ಬಂಧನ ಮಾಡಲಾಗಿದ್ದು, ಮೂವರು ಸುಳ್ಯ ಮೂಲದವರು ಎಂಬ ಮಾಹಿತಿ ಪೊಲೀಸ್ ಮೂಲಗಳಿಂದ ಲಭ್ಯವಾಗಿದೆ. ಇಂದು ಮಧ್ಯಾಹ್ನ ನಡೆಯುವ ಪತ್ರಿಕಾಗೋಷ್ಠಿಯಲ್ಲಿ ಹೆಚ್ಚಿನ ಮಾಹಿತಿಗಳನ್ನು ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಪ್ರವೀಣ್ ನೆಟ್ಟಾರು ಕೊಲೆಯಾದ ಬಳಿಕ ಹಂತಕರು ಎಸ್.ಡಿ.ಪಿ.ಐ ಮತ್ತು ಪಿ.ಎಫ್.ಐ ನಂಟು ಹೊಂದಿದವರು ಎಂಬ ಮಾತು ಸಾರ್ವಜನಿಕ ವಲಯದಲ್ಲಿ ಓಡಾಡುತ್ತಿತ್ತು. ಈಗಾಗಲೇ ಕೊಲೆಗೆ […]

ಕೊನೆಗೂ ಪೊಲೀಸರ ಅತಿಥಿಯಾದ ಪ್ರವೀಣ್ ಹಂತಕರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪ್ರವೀಣ್ ಹತ್ಯೆಯ ಪ್ರಮುಖ ಮೂವರು ಆರೋಪಿಗಳ ಬಂಧನ..? ➤‌ ಪ್ರಕರಣಕ್ಕೆ ಸಂಬಂಧಿಸಿ ಮಧ್ಯಾಹ್ನ ಪೊಲೀಸರಿಂದ ಪತ್ರಿಕಾಗೋಷ್ಠಿ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಆ.11. ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಪ್ರಮುಖ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದುಬಂದಿದೆ. ಇದಕ್ಕೆ ಪುಷ್ಠಿ ನೀಡುವಂತೆ ಇಂದು ಮಧ್ಯಾಹ್ನ 12.30ಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಛೇರಿಯಲ್ಲಿ ಪ್ರಕರಣಕ್ಕೆ ಸಂಬಂಧಿಸಿ ಇದೇ ಮೊದಲ ಬಾರಿಗೆ ಪತ್ರಿಕಾಗೋಷ್ಠಿ ಕರೆಯಲಾಗಿದ್ದು, ಆರೋಪಿಗಳ ಬಗ್ಗೆ ಮಾಹಿತಿ ನೀಡುವ ಸಂಭವವಿದೆ. ಈಗಾಗಲೇ ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಪ್ರಮುಖ ಮೂವರು ಆರೋಪಿಗಳಿಗಾಗಿ ಬಲೆ ಬೀಸಿದ್ದರು‌. ಬುಧವಾರದಂದು ಎಡಿಜಿಪಿಯವರು ಆರು ಜಿಲ್ಲೆಗಳ

ಪ್ರವೀಣ್ ಹತ್ಯೆಯ ಪ್ರಮುಖ ಮೂವರು ಆರೋಪಿಗಳ ಬಂಧನ..? ➤‌ ಪ್ರಕರಣಕ್ಕೆ ಸಂಬಂಧಿಸಿ ಮಧ್ಯಾಹ್ನ ಪೊಲೀಸರಿಂದ ಪತ್ರಿಕಾಗೋಷ್ಠಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪ್ರವೀಣ್ ಹತ್ಯೆಯ ಪ್ರಮುಖ ಆರೋಪಿಗಳ ಪತ್ತೆಗೆ ಕ್ರಮ: ಎಡಿಜಿಪಿ ಅಲೋಕ್ ಕುಮಾರ್ ➤‌ ಆಸ್ತಿ ಮುಟ್ಟುಗೋಲಿಗೆ ಚಿಂತನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 10. ಬಿಜೆಪಿ ಯುವಮುಖಂಡ ಪ್ರವೀಣ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 7 ಜನರನ್ನು ಬಂಧಿಸಲಾಗಿದೆ. ಇನ್ನುಳಿದ ಮೂವರು ಪ್ರಮುಖ ಆರೋಪಿಗಳನ್ನು ಪತ್ತೆ ಹಚ್ಚಲು ಬೇರೆ ಬೇರೆ ಜಿಲ್ಲೆಯ ಪೊಲೀಸ್‌ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದೇವೆ ಎಂದು ಎಡಿಜಿಪಿ ಅಲೋಕ್‌ ಕುಮಾರ್‌ ಬುಧವಾರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಾರಿಯಾದ ಮೂವರು ಆರೋಪಿಗಳ ಫೋಟೋ, ಮನೆ ವಿಳಾಸ, ಮನೆಯವರ ಬಗ್ಗೆ ತಿಳಿದಿದೆ. ಆದರೆ ಆರೋಪಿಗಳನ್ನು ಕೆಲವರು ಸೇರಿ ಬಚ್ಚಿಟ್ಟಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಪ್ರಚೋದನೆ

ಪ್ರವೀಣ್ ಹತ್ಯೆಯ ಪ್ರಮುಖ ಆರೋಪಿಗಳ ಪತ್ತೆಗೆ ಕ್ರಮ: ಎಡಿಜಿಪಿ ಅಲೋಕ್ ಕುಮಾರ್ ➤‌ ಆಸ್ತಿ ಮುಟ್ಟುಗೋಲಿಗೆ ಚಿಂತನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ: ಪ್ಲಾಸ್ಟಿಕ್ ಬ್ಯಾನರ್ ತೆರವುಗೊಳಿಸಿದ ಹಿನ್ನೆಲೆ ➤‌ ತಲ್ವಾರ್ ಹಿಡಿದು ಹುಚ್ಚಾಟ ಮೆರೆದ ಯುವಕ

(ನ್ಯೂಸ್ ಕಡಬ) newskadaba.com ಸುಳ್ಯ, ಆ. 10. ಇತ್ತೀಚೆಗೆ ದ.ಕ ಜಿಲ್ಲೆಯಲ್ಲಿ ನಡೆದ ಮಸೂದ್, ಪ್ರವೀಣ್ ನೆಟ್ಟಾರು, ಫಾಝಿಲ್ ಕೊಲೆ ಪ್ರಕರಣವು ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಇದರ ನಡುವೆ ಸುಳ್ಯ ತಾಲೂಕಿನ ಕನಕಮಜಲಿನಲ್ಲಿ ಸಂದೀಪ್ ಎಂಬ ಯುವಕನೋರ್ವ ತಲ್ವಾರ್ ಹಿಡಿದು ಊರಿಡೀ ಸುತ್ತಾಡಿ ಹುಚ್ಚಾಟ ಮೆರೆದ ಘಟನೆ ವರದಿಯಾಗಿದೆ. ಪ್ರವೀಣ್ ನೆಟ್ಟಾರು ಅವರಿಗೆ ಶ್ರದ್ಧಾಂಜಲಿ ಅರ್ಪಿಸಲೆಂದು ಬ್ಯಾನರ್ ಅಳವಡಿಸುವ ವೇಳೆ ಪ್ಲಾಸ್ಟಿಕ್ ಬ್ಯಾನರ್‌ ಬಳಸದಂತೆ ಗ್ರಾಮ ಪಂಚಾಯತ್ ನಿಂದ ತಿಳಿಸಲಾಗಿತ್ತಾದರೂ, ಸಂದೀಪ್ ಮತ್ತು ಕೆಲವರು ಪ್ಲಾಸ್ಟಿಕ್ ಬ್ಯಾನರ್

ಸುಳ್ಯ: ಪ್ಲಾಸ್ಟಿಕ್ ಬ್ಯಾನರ್ ತೆರವುಗೊಳಿಸಿದ ಹಿನ್ನೆಲೆ ➤‌ ತಲ್ವಾರ್ ಹಿಡಿದು ಹುಚ್ಚಾಟ ಮೆರೆದ ಯುವಕ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿಟ್ಲ ಗ್ರಾ.ಪಂ. ಸದಸ್ಯನಿಗೆ ಹಲ್ಲೆ ಆರೋಪ ➤‌ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ವಿಟ್ಲ, ಆ. 10. ಗ್ರಾ. ಪಂ ಸದಸ್ಯ ಪುನೀತ್ ಮಾಡತ್ತಾರು ಎಂಬವರಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ. ಬಂಧಿತರನ್ನು ಕೇಪು ಗಣೇಶ ಮತ್ತು ನಿಶಾಂತ್ ಶೆಟ್ಟಿ ನೀರುಮಾರ್ಗ ಎಂದು ಗುರುತಿಸಲಾಗಿದೆ. ವಿಟ್ಲದ ಚಂದಳಿಕೆ ಮಾಡತ್ತಡ್ಕ ರಸ್ತೆಯಲ್ಲಿ ಮಂಗಳವಾರದಂದು ಘಟನೆ ನಡೆದಿತ್ತು. ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನಂತೆ ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ವಿಟ್ಲ ಗ್ರಾ.ಪಂ. ಸದಸ್ಯನಿಗೆ ಹಲ್ಲೆ ಆರೋಪ ➤‌ ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅಕ್ರಮ ಜಾನುವಾರು ಸಾಗಾಟ ➤‌ ವಾಹನ, ಗೋವು ಸಹಿತ ಆರೋಪಿ ವಶಕ್ಕೆ

(ನ್ಯೂಸ್ ಕಡಬ) newskadaba.com ಮೂಡುಬಿದಿರೆ, ಆ. 10. ಅಕ್ರಮ ಗೋಸಾಗಾಟವನ್ನು ತಡೆದ ಪೊಲೀಸರು ಮೂರು ಹಸುಗಳ ಸಹಿತ ಆರೋಪಿಯನ್ನು ವಶಕ್ಕೆ ಪಡೆದ ಘಟನೆ ವಿದ್ಯಾಗಿರಿ ಜಂಕ್ಷನ್ ಬಳಿ ನಡೆದಿದೆ. ಬಂಧಿತ ಆರೋಪಿಯನ್ನು ಚಾಲಕ ಸಂದೇಶ್ ಶೆಟ್ಟಿ ಎಂದು ಗುರುತಿಸಲಾಗಿದೆ. ವಾಹನ ತಪಾಸಣಾ ನಿರತರಾಗಿದ್ದ ಮೂಡಬಿದಿರೆ ಠಾಣಾ ಎಸ್‌ಐ ಸಿದ್ದಪ್ಪ, ಎಎಸ್‌ಐ ಕುಮಾರ್‌ ಮತ್ತು ಸಿಬಂದಿಗಳು ಪಿಕಪ್ ವಾಹನವನ್ನು ತಡೆದು ತಪಾಸಣೆಗೊಳಪಡಿಸಿದಾಗ ಅಕ್ರಮವಾಗಿ ಮೂರು ಹಸುಗಳನ್ನು ಸಾಗಿಸುತ್ತಿರುವುದು ಕಂಡುಬಂದಿದೆ. ಈ ಕುರಿತು ಚಾಲಕ ಸಂದೇಶ ಶೆಟ್ಟಿಯವರನ್ನು ವಿಚಾರಿಸಿದಾಗ ಜಾನುವಾರು

ಅಕ್ರಮ ಜಾನುವಾರು ಸಾಗಾಟ ➤‌ ವಾಹನ, ಗೋವು ಸಹಿತ ಆರೋಪಿ ವಶಕ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮನೆಮೇಲೆ ಮರ ಬಿದ್ದು ತಾಯಿ- ಮಗಳು ಮೃತ್ಯು

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಆ. 10. ಮನೆ ಮೇಲೆ ಮರ ಬಿದ್ದ ಪರಿಣಾಮ ತಾಯಿ ಮತ್ತು ಮಗಳು ದಾರುಣವಾಗಿ ಮೃತಪಟ್ಟ ಘಟನೆ ಮೂಡಿಗೆರೆ ಬಳಿಯ ಕೆ.ತಲಗೂರು ಗ್ರಾಮದಲ್ಲಿ ಮಂಗಳವಾರದಂದು ರಾತ್ರಿ ನಡೆದಿದೆ. ಮೃತರನ್ನು ಚಂದ್ರಮ್ಮ ಹಾಗೂ ಮಗಳು ಸರಿತಾ ಎಂದು ಗುರುತಿಸಲಾಗಿದೆ. ಮಂಗಳವಾರದಂದು ರಾತ್ರಿ ಚಂದ್ರಮ್ಮ ಹಾಗೂ ಮಕ್ಕಳಾದ ಸರಿತಾ, ಸುನಿಲ್ ಹಾಗೂ ದೀಕ್ಷಿತ್ ಎಂಬವರು ಮಲಗಿದ್ದ ವೇಳೆ ಮನೆಯ ಪಕ್ಕದಲ್ಲಿದ್ದ ಬೃಹದಾಕಾರದ ಮರವೊಂದು ಮನೆಯ ಮೇಲೆ ಬಿದ್ದಿದ್ದು, ಪರಿಣಾಮ ಮನೆಯೊಳಗೆ ಮಲಗಿದ್ದ ಸರಿತಾ ಎಂಬವರು

ಮನೆಮೇಲೆ ಮರ ಬಿದ್ದು ತಾಯಿ- ಮಗಳು ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನೇತ್ರಾವತಿ ನದಿಗೆ ಬಿದ್ದು ಗಂಭೀರಾವಸ್ಥೆಯಲ್ಲಿದ್ದ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 10. ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ವಿದ್ಯಾರ್ಥಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬರಿಮಾರು ಗ್ರಾಮದ ಕಾಗೆಕಾನ ಎಂಬಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಬರಿಮಾರು ಗ್ರಾಮದ ಪಾಪೆತ್ತಿಮಾರು ನಿವಾಸಿ ರಕ್ಷಣ್ (16) ಎಂದು ಗುರುತಿಸಲಾಗಿದೆ. ಈತ ಸ್ಥಳೀಯ ಕಾಲೇಜೊಂದರ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿದ್ದು, ಕಾಲೇಜಿಗೆ ರಜೆ ಇದ್ದ ಹಿನ್ನೆಲೆ ನೇತ್ರಾವತಿ ನದಿ ಬಳಿಗೆ ಹೋಗಿದ್ದ ವೇಳೆ ಕಾಲು ಜಾರಿ ನದಿಗೆ ಬಿದ್ದಿದ್ದ. ತಕ್ಷಣವೇ ಸ್ಥಳೀಯರು ಮತ್ತು ಅಗ್ನಿಶಾಮಕದಳದವರು ವಿದ್ಯಾರ್ಥಿಯನ್ನು

ನೇತ್ರಾವತಿ ನದಿಗೆ ಬಿದ್ದು ಗಂಭೀರಾವಸ್ಥೆಯಲ್ಲಿದ್ದ ಯುವಕ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಿಜೆಪಿ ನಾಯಕ ಪ್ರವೀಣ್ ಹತ್ಯೆ ಪ್ರಕರಣ – ಮತ್ತೋರ್ವ ಆರೋಪಿಯ ಬಂಧನ ➤‌ ಬಂಧಿತರ ಸಂಖ್ಯೆ ಏಳಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಆ.09. ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸುಳ್ಯ ಜಟ್ಟಿಪಳ್ಳ ನಿವಾಸಿ ಅಬ್ಬಾಸ್ ಎಂಬವರ ಪುತ್ರ ಅಬ್ದುಲ್ ಕಬೀರ್ ಸಿ.ಎ.(33) ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಇದುವರೆಗೆ ಒಟ್ಟು ಏಳು ಆರೋಪಿಗಳನ್ನು ಬಂಧಿಸಲಾಗಿದೆ.

ಬಿಜೆಪಿ ನಾಯಕ ಪ್ರವೀಣ್ ಹತ್ಯೆ ಪ್ರಕರಣ – ಮತ್ತೋರ್ವ ಆರೋಪಿಯ ಬಂಧನ ➤‌ ಬಂಧಿತರ ಸಂಖ್ಯೆ ಏಳಕ್ಕೆ ಏರಿಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

(ನ್ಯೂಸ್ ಕಡಬ) newskadaba.com ಪಾಟ್ನಾ, ಆ. 09. ಜೆಡಿ(ಯು) ಪಕ್ಷಕ್ಕೆ ಆರ್.ಸಿ.ಪಿ. ಸಿಂಗ್ ರಾಜೀನಾಮೆ ಸಲ್ಲಿಸಿದ ಬಳಿಕ ಬಿಹಾರದಲ್ಲಿ ರಾಜಕೀಯ ಬಿಕ್ಕಟ್ಟು ಉಲ್ಬಣಗೊಂಡಿದ್ದು, ಈ ಹಿನ್ನೆಲೆ ಬಿಜೆಪಿ ಮೈತ್ರಿ ತೊರೆದು ಆರ್ ಜೆಡಿ ಜೊತೆ ಸರ್ಕಾರ ರಚನೆಗೆ ಮುಂದಾದ ನಿತೀಶ್ ಕುಮಾರ್ ಇದೀಗ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆರ್ ಜೆಡಿ ಶಾಸಕ ತೇಜಸ್ವಿ ಅವರೊಂದಿಗೆ ಆಗಮಿಸಿ ರಾಜ್ಯಪಾಲರನ್ನು ಭೇಟಿಯಾದ ನಿತೀಶ್ ಕುಮಾರ್ ರಾಜೀನಾಮೆ ಪತ್ರವನ್ನು ಸಲ್ಲಿಸಿದರು.

ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top