ಬ್ರೇಕಿಂಗ್ ನ್ಯೂಸ್

ಮನೆಮೇಲೆ ಕುಸಿದ ಮಣ್ಣು ➤ ಅವಶೇಷಗಳಡಿಯಲ್ಲಿ ಸಿಲುಕಿದ ನಾಲ್ವರು

(ನ್ಯೂಸ್ ಕಡಬ) newskadaba.com ಭಟ್ಕಳ, ಆ. 02. ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಗುಡ್ಡದ ಮೇಲಿನಿಂದ ಭಾರೀ ಪ್ರಮಾಣದ ಮಣ್ಣು ಮನೆಮೇಲೆ ಕುಸಿದ ಪರಿಣಾಮ ಮನೆ ಸಂಪೂರ್ಣ ನಾಶವಾಗಿ ನಾಲ್ವರು ಸಿಲುಕಿರುವ ಘಟನೆ ಮುಟ್ಟಳ್ಳಿಯಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ. ಮನೆಯಲ್ಲಿದ್ದ ಲಕ್ಷ್ಮೀ ನಾರಾಯಣ ನಾಯ್ಕ(48), ಲಕ್ಷ್ಮಿ ನಾಯ್ಕ (33), ಅನಂತ ನಾರಾಯಣ ನಾಯ್ಕ (32) ಪ್ರವೀಣ ಬಾಲಕೃಷ್ಣ ನಾಯ್ಕ (20) ಎಂಬವರು ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯ ಆರಂಭವಾಗಿದೆ ಎಂದು ತಿಳಿದುಬಂದಿದೆ.

ಮನೆಮೇಲೆ ಕುಸಿದ ಮಣ್ಣು ➤ ಅವಶೇಷಗಳಡಿಯಲ್ಲಿ ಸಿಲುಕಿದ ನಾಲ್ವರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಹಾಮಳೆಗೆ ಕರಾವಳಿಯ ಸುಬ್ರಹ್ಮಣ್ಯ, ಸುಳ್ಯ ತತ್ತರ..!! ➤ ಮುರಿದುಬಿದ್ದ ಸಂಪರ್ಕ ಸೇತುವೆ- ಕಲ್ಲುಗುಂಡಿ ಸಂಪೂರ್ಣ ಜಲಾವೃತ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ. 02. ಕಳೆದ ರಾತ್ರಿಯಿಂದ ಸುರಿಯುತ್ತಿರುವ ಭಾರೀ ಮಳೆಗೆ ಸುಳ್ಯದ ಕಲ್ಮಕಾರು, ಕೊಲ್ಲಮೊಗ್ರು, ಹರಿಹರ ಪಲ್ಲತ್ತಡ್ಕ, ಕಡಬ ತಾಲೂಕಿನ ಸುಬ್ರಹ್ಮಣ್ಯ ತತ್ತರಿಸಿದ್ದು, ಕಲ್ಮಕಾರಿನ ಪೇಟೆಯ ಬಳಿಯಿರುವ ಸಂತಡ್ಕ ಬೈಲು, ಗುಳಿಕಾನ ಸೇರಿದಂತೆ ಹಲವು ಪ್ರದೇಶಗಳ ಸುಮಾರು 150 ಕ್ಕೂ ಹೆಚ್ಚಿನ ಮನೆಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ಮುರಿದುಬಿದ್ದು ಅಲ್ಲಿನ ಮನೆಗಳ ಸಂಪರ್ಕ ಕಡಿತಗೊಂಡಿದೆ. ರವಿವಾರದಂದು ಸೇತುವೆಗೆ ಹಾನಿಯಾಗಿತ್ತು ಆದರೆ, ಸೋಮವಾರದಂದು ತಡರಾತ್ರಿ ಸೇತುವೆ ಮುರಿದುಬಿದ್ದು ಸಂಪರ್ಕ ಕಡಿತವಾಗಿದೆ. ಇನ್ನು ಕಲ್ಲುಗುಂಡಿಯಲ್ಲಿ ಪಯಸ್ವಿನಿ‌

ಮಹಾಮಳೆಗೆ ಕರಾವಳಿಯ ಸುಬ್ರಹ್ಮಣ್ಯ, ಸುಳ್ಯ ತತ್ತರ..!! ➤ ಮುರಿದುಬಿದ್ದ ಸಂಪರ್ಕ ಸೇತುವೆ- ಕಲ್ಲುಗುಂಡಿ ಸಂಪೂರ್ಣ ಜಲಾವೃತ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಭೀಕರ ಮಳೆ ➤ ಇಂದು ಕಡಬ, ಸುಳ್ಯ ತಾಲೂಕಿನ ಶಾಲೆಗಳಿಗೆ ರಜೆ ಘೊಷಣೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ. 02. ದ.ಕ ಜಿಲ್ಲೆಯ ವಿವಿಧ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಅದರಲ್ಲೂ ಸುಬ್ರಹ್ಮಣ್ಯ ಕಲ್ಮಕಾರು , ಕೊಲ್ಲಮೊಗ್ರು, ಹರಿಹರ, ಬಾಳುಗೋಡು ಐನೆಕಿದು ಗ್ರಾಮದಲ್ಲಿ ಸೋಮವಾರ ಸಂಜೆ ಭಾರೀ ಮಳೆಯಾಗಿದ್ದು, ಜಳಪ್ರಳಯವೇ ಸಂಭವಿಸಿದೆ. ಭಾರೀ ಮಳೆ ಮುಂದುವರಿದ ಪರಿಣಾಮ ನದಿ , ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಸುಳ್ಯ ಹಾಗೂ ಕಡಬ ತಾಲೂಕಿನ ಎಲ್ಲಾ ಅಂಗನವಾಡಿ, ಶಾಲಾ ಕಾಲೇಜು ಗಳಿಗೆ ಆ. 2 ರಂದು ಜಿಲ್ಲಾಧಿಕಾರಿ ಡಾ. ಕೆವಿ

ಭೀಕರ ಮಳೆ ➤ ಇಂದು ಕಡಬ, ಸುಳ್ಯ ತಾಲೂಕಿನ ಶಾಲೆಗಳಿಗೆ ರಜೆ ಘೊಷಣೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸುಬ್ರಹ್ಮಣ್ಯ: ಗುಡ್ಡ ಕುಸಿದು ಮಣ್ಣುಪಾಲಾಗಿದ್ದ ಬಾಲಕಿಯರಿಬ್ಬರು ಮೃತ್ಯು ➤ ಘಟನೆಯ ಸಂಪೂರ್ಣ ಮಾಹಿತಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ.01. ಕುಕ್ಕೇ ಸುಬ್ರಹ್ಮಣ್ಯದಲ್ಲಿ ವರುಣನ ಆರ್ಭಟಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಕುಮಾರಧಾರ ಬಳಿಯ ಪರ್ವತಮುಖಿ ಎಂಬಲ್ಲಿ ಮನೆಯೊಂದರ ಮೇಲೆ ಗುಡ್ಡ ಜರಿದು ಬಿದ್ದ ಪರಿಣಾಮ ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿ ಮೃತಪಟ್ಟ ಘಟನೆ ಸೋಮವಾರ ರಾತ್ರಿ ನಡೆದಿದೆ. ಸೋಮವಾರ ಸಂಜೆಯಿಂದ ಸುಬ್ರಹ್ಮಣ್ಯ ಪರಿಸರದಲ್ಲಿ ಭಾರೀ ಮಳೆಯಾಗುತ್ತಿದ್ದು, ಧಾರಾಕಾರ ಮಳೆಗೆ ಪರ್ವತಮುಖಿ ನಿವಾಸಿ ಕುಸುಮಾಧರ ಎಂಬವರ ಮನೆಯ ಹಿಂಬದಿಯ ಗುಡ್ಡ ಏಕಾಏಕಿ ಮನೆಯ ಮೇಲೆ ಕುಸಿದು ಬಿದ್ದಿದೆ. ಘಟನೆಯಲ್ಲಿ ಕುಸುಮಾಧರರ ಮಕ್ಕಳಾದ ಶ್ರುತಿ(11) ಹಾಗೂ

ಸುಬ್ರಹ್ಮಣ್ಯ: ಗುಡ್ಡ ಕುಸಿದು ಮಣ್ಣುಪಾಲಾಗಿದ್ದ ಬಾಲಕಿಯರಿಬ್ಬರು ಮೃತ್ಯು ➤ ಘಟನೆಯ ಸಂಪೂರ್ಣ ಮಾಹಿತಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಸೂದ್ ಹಾಗೂ ಫಾಝಿಲ್ ಮನೆಗೆ ಹೆಚ್ಡಿಕೆ ಭೇಟಿ- ಕುಟುಂಬಸ್ಥರಿಗೆ ಸಾಂತ್ವನ ➤ 5 ಲಕ್ಷ ರೂ. ಪರಿಹಾರ ವಿತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 01. ಬೆಳ್ಳಾರೆಯಲ್ಲಿ ಹತ್ಯೆಗೀಡಾದ ಮಸೂದ್ ಹಾಗೂ ಸುರತ್ಕಲ್ ಮಂಗಳಪೇಟೆ ನಿವಾಸಿ ಫಾಝಿಲ್ ಮನೆಗೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಅಂತೆಯೇ ವೈಯಕ್ತಿಕವಾಗಿ 5 ಲಕ್ಷ ಪರಿಹಾರ ಧನ ವಿತರಣೆ ಮಾಡಿದರು. ಈ ಸಂದರ್ಭ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು.  

ಮಸೂದ್ ಹಾಗೂ ಫಾಝಿಲ್ ಮನೆಗೆ ಹೆಚ್ಡಿಕೆ ಭೇಟಿ- ಕುಟುಂಬಸ್ಥರಿಗೆ ಸಾಂತ್ವನ ➤ 5 ಲಕ್ಷ ರೂ. ಪರಿಹಾರ ವಿತರಣೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸುಬ್ರಹ್ಮಣ್ಯ: ಗುಡ್ಡ ಕುಸಿದು ಮಣ್ಣಿನಡಿ‌ ಸಿಲುಕಿದ್ದ ಬಾಲಕಿಯರಿಬ್ಬರು ಗಂಭೀರ ➤ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ.01. ಕುಕ್ಕೇ ಸುಬ್ರಹ್ಮಣ್ಯದಲ್ಲಿ ವರುಣನ ಆರ್ಭಟಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಕುಮಾರಧಾರ ಬಳಿಯ ಪರ್ವತಮುಖಿ ಎಂಬಲ್ಲಿ ಮನೆಯೊಂದರ ಮೇಲೆ ಗುಡ್ಡ ಜರಿದು ಬಿದ್ದ ಪರಿಣಾಮ ಇಬ್ಬರು ಮಕ್ಕಳನ್ನು ಮಣ್ಣಿನಡಿ ಸಿಲುಕಿ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಿದ ಘಟನೆ ಸೋಮವಾರ ರಾತ್ರಿ ನಡೆದಿದೆ. ಸೋಮವಾರ ಸಂಜೆಯಿಂದ ಸುಬ್ರಹ್ಮಣ್ಯ ಪರಿಸರದಲ್ಲಿ ಭಾರೀ ಮಳೆಯಾಗುತ್ತಿದ್ದು, ಧಾರಾಕಾರ ಮಳೆಗೆ ಪರ್ವತಮುಖಿ ನಿವಾಸಿ ಕುಸುಮಾಧರ ಎಂಬವರ ಮನೆಯ ಹಿಂಬದಿಯ ಗುಡ್ಡ ಏಕಾಏಕಿ ಮನೆಯ ಮೇಲೆ ಕುಸಿದು ಬಿದ್ದಿದೆ. ಘಟನೆಯಲ್ಲಿ ಕುಸುಮಾಧರರ

ಸುಬ್ರಹ್ಮಣ್ಯ: ಗುಡ್ಡ ಕುಸಿದು ಮಣ್ಣಿನಡಿ‌ ಸಿಲುಕಿದ್ದ ಬಾಲಕಿಯರಿಬ್ಬರು ಗಂಭೀರ ➤ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಎರಡು ಗಂಟೆಯ ಭಾರೀ ಮಳೆಗೆ ಮುಳುಗಿದ ಕುಕ್ಕೇ ಸುಬ್ರಹ್ಮಣ್ಯ..!! ➤ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡದಂತೆ ಡಿಸಿ ಸೂಚನೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ. 01. ಭಾರೀ ಮಳೆಗೆ ರಾಜ್ಯದ ಪ್ರತಿಷ್ಠಿತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ನೀರು ನುಗ್ಗಿದ್ದು, ಈ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌ ಸೇರಿ ವಿವಿಧ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ನಾಳೆ ನಾಗರ ಪಂಚಮಿ ಹಿನ್ನೆಲೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಆಗಮಿಸದಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ಉಳಿದಂತೆ ಸುಬ್ರಹ್ಮಣ್ಯಕ್ಕೆ ಹೊಂದಿಕೊಂಡ ಹರಿಹರ ಬಾಳುಗೋಡು, ಕೊಲ್ಲಮೊಗ್ರು, ಕಲ್ಮಕಾರು, ಐನಕಿದು ಗ್ರಾಮಗಳಲ್ಲಿ ಸೋಮವಾರ ಸಂಜೆ ಭಾರಿ ಮಳೆಯಾಗಿದ್ದು,

ಎರಡು ಗಂಟೆಯ ಭಾರೀ ಮಳೆಗೆ ಮುಳುಗಿದ ಕುಕ್ಕೇ ಸುಬ್ರಹ್ಮಣ್ಯ..!! ➤ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡದಂತೆ ಡಿಸಿ ಸೂಚನೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೀಚ್ ಗೆ ತೆರಳಿದ್ದ ವಿದ್ಯಾರ್ಥಿನಿಯ ಅತ್ಯಾಚಾರ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 01. ಕಾಲೇಜು ವಿದ್ಯಾರ್ಥಿನಿಯನ್ನು ಅತ್ಯಾಚಾರ ಮಾಡಿದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ ಘಟನೆ ಮಂಗಳೂರಿನ ಎನ್ ಐಟಿಕೆ ಬೀಚ್ ಬಳಿ ನಡೆದಿದೆ. ಬಂಧಿತನನ್ನು ಮುನಾಝ್ ಅಹಮ್ಮದ್(30) ಎಂದು ಗುರುತಿಸಲಾಗಿದೆ. ವಿದ್ಯಾರ್ಥಿನಿಯು ಜುಲೈ 27 ರಂದು ಎನ್ ಐಟಿಕೆ ಬೀಚ್ ಗೆ ತನ್ನ ಸಹಪಾಠಿಯೊಂದಿಗೆ ಬಂದಿದ್ದು, ಇದನ್ನು ಕಂಡ ಮುನಾಝ್ ಅಹಮದ್ ವಿದ್ಯಾರ್ಥಿನಿಯ ಸಹಪಾಠಿಯನ್ನು ಹೆದರಿಸಿ ಓಡಿಸಿದ್ದಾನೆ. ಆ ಬಳಿಕ ವಿದ್ಯಾರ್ಥಿನಿಯನ್ನು ಅತ್ಯಾಚಾರ ಮಾಡಿದ್ದಾನೆ ಎನ್ನಲಾಗಿದೆ. ಅತ್ಯಾಚಾರದ ವೀಡಿಯೋ ವನ್ನು ಮೊಬೈಲ್

ಬೀಚ್ ಗೆ ತೆರಳಿದ್ದ ವಿದ್ಯಾರ್ಥಿನಿಯ ಅತ್ಯಾಚಾರ ➤ ಆರೋಪಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸುಬ್ರಹ್ಮಣ್ಯ: ಪರ್ವತಮುಖಿಯಲ್ಲಿ ಮನೆಯ ಮೇಲೆ ಗುಡ್ಡ ಕುಸಿತ ➤ ಮಣ್ಣಿನಡಿ ಸಿಲುಕಿದ ಮನೆಮಂದಿ, ಮಣ್ಣು ತೆರವು ಕಾರ್ಯಾಚರಣೆ ಆರಂಭ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ.01. ಕುಕ್ಕೇ ಸುಬ್ರಹ್ಮಣ್ಯದಲ್ಲಿ ವರುಣನ ಆರ್ಭಟಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಕುಮಾರಧಾರ ಬಳಿಯ ಪರ್ವತಮುಖಿ ಎಂಬಲ್ಲಿ ಮನೆಯೊಂದರ ಮೇಲೆ ಗುಡ್ಡ ಜರಿದು ಬಿದ್ದ ಪರಿಣಾಮ ಮನೆ ಮಂದಿ ಮಣ್ಣಿನಡಿ ಸಿಲುಕಿದ ಘಟನೆ ಸೋಮವಾರ ರಾತ್ರಿ ನಡೆದಿದೆ. ಸೋಮವಾರ ಸಂಜೆಯಿಂದ ಭಾರೀ ಮಳೆಯಾಗುತ್ತಿದ್ದು, ಧಾರಾಕಾರ ಮಳೆಗೆ ಮನೆಯ ಹಿಂಬದಿಯ ಗುಡ್ಡ ಏಕಾಏಕಿ ಮನೆಯ ಮೇಲೆ ಕುಸಿದು ಬಿದ್ದಿದೆ. ಮನೆಯಲ್ಲಿ ಇಬ್ಬರು ಮಕ್ಕಳು, ಓರ್ವ ವೃದ್ಧೆ ಸಹಿತ ನಾಲ್ಕೈದು ಮಂದಿ ವಾಸಿಸುತ್ತಿದ್ದು, ಅವರೆಲ್ಲರೂ ಮಣ್ಣಿನಡಿ ಸಿಲುಕಿರುವ

ಸುಬ್ರಹ್ಮಣ್ಯ: ಪರ್ವತಮುಖಿಯಲ್ಲಿ ಮನೆಯ ಮೇಲೆ ಗುಡ್ಡ ಕುಸಿತ ➤ ಮಣ್ಣಿನಡಿ ಸಿಲುಕಿದ ಮನೆಮಂದಿ, ಮಣ್ಣು ತೆರವು ಕಾರ್ಯಾಚರಣೆ ಆರಂಭ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸರಣಿ ಹತ್ಯೆ ಹಿನ್ನೆಲೆ ➤ ದ.ಕ ಜಿಲ್ಲೆಗೆ ದೌಡಾಯಿಸಿದ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 01. ಜಿಲ್ಲೆಯಲ್ಲಿ ನಡೆದ ಸರಣಿ ಹತ್ಯೆ ಹಿನ್ನೆಲೆ ಜಿಲ್ಲೆಗೆ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್ ಸೂದ್ ದೌಡಾಯಿಸಿದ್ದಾರೆ. ಮಂಗಳೂರಿನಲ್ಲಿ ಅಧಿಕಾರಿಗಳ ಜೊತೆ ಪ್ರವೀಣ್ ಸೂದ್ ಮಾತುಕತೆ ನಡೆಸಿದ್ದು, ಪ್ರವೀಣ್ ನೆಟ್ಟಾರು, ಫಾಝಿಲ್‌ ಹಾಗೂ ಮಸೂದ್‌ ಹತ್ಯೆ ತನಿಖೆಯ ಪ್ರಗತಿ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ. ದ.ಕ ಜಿಲ್ಲೆಯು ಬೂದಿ ಮುಚ್ಚಿದ ಕೆಂಡದಂತೆ ಇರುವುದರಿಂದ ಕೈಗೊಳ್ಳಬೇಕಾದ ಮುಂಜಾಗೃತಾ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಮತ್ತು

ಸರಣಿ ಹತ್ಯೆ ಹಿನ್ನೆಲೆ ➤ ದ.ಕ ಜಿಲ್ಲೆಗೆ ದೌಡಾಯಿಸಿದ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top