ಬ್ರೇಕಿಂಗ್ ನ್ಯೂಸ್

ಜಿಲ್ಲೆಯಲ್ಲಿ ಸಂಜೆ 6 ಗಂಟೆಯ ಒಳಗೆ ಅಂಗಡಿ ಮುಚ್ಚಲು ಆದೇಶ ➤ ಜಿಲ್ಲೆಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆಯ ಹಿನ್ನೆಲೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 29. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಸಂಜೆ 6 ಗಂಟೆಗೆ ಮುಚ್ಚುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ. ಇಂದು ಸಂಜೆ (ಜು.29) ರಿಂದ ಆ.1 ರವರೆಗೆ ಈ ಆದೇಶ ಜಾರಿಯಲ್ಲಿರುತ್ತದೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮಾತ್ರ ಅಂಗಡಿ-ಮುಂಗಟ್ಟು ತೆರೆಯಲು ಅನುಮತಿಯಿದೆ. ಉಳಿದಂತೆ ಸಂಜೆ 6 ಗಂಟೆಯಿಂದ ಮರುದಿನ ಬೆಳಗ್ಗೆ 6 ಗಂಟೆಯವರೆಗೆ ಮುಚ್ಚಬೇಕು ಎಂದು […]

ಜಿಲ್ಲೆಯಲ್ಲಿ ಸಂಜೆ 6 ಗಂಟೆಯ ಒಳಗೆ ಅಂಗಡಿ ಮುಚ್ಚಲು ಆದೇಶ ➤ ಜಿಲ್ಲೆಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆಯ ಹಿನ್ನೆಲೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪ್ರವೀಣ್ ಹತ್ಯೆಯ ಬೆನ್ನಲ್ಲೇ ಇಬ್ಬರು ಸಬ್ ಇನ್ಸ್‌ಪೆಕ್ಟರ್ ಗಳ ತಲೆದಂಡ ➤ ಬೆಳ್ಳಾರೆ ಠಾಣಾ ಎಸ್ಐ ಆಗಿ ಸುಹಾಸ್ ಹಾಗೂ ಸುಬ್ರಹ್ಮಣ್ಯ ಠಾಣಾ ಎಸ್ಐ ಮಂಜುನಾಥ್ ನೇಮಕ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 29. ವಿಟ್ಲ, ಬೆಳ್ಳಾರೆ ಮತ್ತು ಸುಬ್ರಹ್ಮಣ್ಯ ಠಾಣೆಯ ಪಿ.ಎಸ್.ಐ ಗಳನ್ನು ದಿಢೀರ್ ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ. ವಿಟ್ಲ ಠಾಣೆಯ ಪಿಎಸ್ ಐ ಮಂಜುನಾಥ್ ರವರನ್ನು ಸುಬ್ರಹ್ಮಣ್ಯ ಠಾಣೆಗೆ, ಕುಂದಾಪುರ ಗ್ರಾಮಾಂತರ ಠಾಣೆಯ ಪಿಎಸ್ ಐ ಸುಹಾಸ್ ಆರ್. ರವರನ್ನು ಬೆಳ್ಳಾರೆ ಠಾಣೆಗೆ ವರ್ಗಾವಣೆಗೊಳಿಸಿ ಪೊಲೀಸ್ ಮಹಾ ನಿರೀಕ್ಷಕರಾದ ದೇವಜ್ಯೋತಿ ರೇ ರವರು ಆದೇಶ ನೀಡಿದ್ದಾರೆ. ಪ್ರವೀಣ್ ರವರ ಪಾರ್ಥಿವ ಶರೀರದ ಮೆರವಣಿಗೆ ವೇಳೆ ಅಂತಿಮ ನಮನ ಸಲ್ಲಿಸಲು ಬಂದಿದ್ದ ಆರ್.ಎಸ್.ಎಸ್.

ಪ್ರವೀಣ್ ಹತ್ಯೆಯ ಬೆನ್ನಲ್ಲೇ ಇಬ್ಬರು ಸಬ್ ಇನ್ಸ್‌ಪೆಕ್ಟರ್ ಗಳ ತಲೆದಂಡ ➤ ಬೆಳ್ಳಾರೆ ಠಾಣಾ ಎಸ್ಐ ಆಗಿ ಸುಹಾಸ್ ಹಾಗೂ ಸುಬ್ರಹ್ಮಣ್ಯ ಠಾಣಾ ಎಸ್ಐ ಮಂಜುನಾಥ್ ನೇಮಕ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಫಾಝಿಲ್ ಹತ್ಯೆ ಪ್ರಕರಣ ➤ 12 ಮಂದಿ ಪೊಲೀಸ್ ವಶಕ್ಕೆ…?

(ನ್ಯೂಸ್ ಕಡಬ) newskadaba.com ಸುರತ್ಕಲ್, ಜು. 29. ಮಂಗಳಪೇಟೆ ನಿವಾಸಿ ಫಾಝಿಲ್ ಎಂಬ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 12 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.   ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫಾಝಿಲ್ ಹತ್ಯೆಗೆ ಸಂಬಂಧಿಸಿದಂತೆ ಈಗಾಗಲೇ 12 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ಘಟನೆಯ ಬಗ್ಗೆ ಪ್ರತ್ಯಕ್ಷದರ್ಶಿಗಳನ್ನೂ ಕೂಡ ವಿಚಾರಣೆ ಮಾಡಲಾಗುತ್ತಿದೆ. ನಿಷ್ಪಕ್ಷಪಾತ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸುತ್ತೇವೆ ಎಂದರು. ಇನ್ನು

ಫಾಝಿಲ್ ಹತ್ಯೆ ಪ್ರಕರಣ ➤ 12 ಮಂದಿ ಪೊಲೀಸ್ ವಶಕ್ಕೆ…? Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪ್ರವೀಣ್ ಹತ್ಯೆ ಪ್ರಕರಣದ ಮೂರನೇ ಆರೋಪಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 29. ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂರನೇ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಚಿಕನ್ ಸೆಂಟರ್ ಹೊಂದಿದ್ದ ಸದ್ದಾಂ ಎಂದು ಗುರುತಿಸಲಾಗಿದೆ. ಈತನನ್ನು ಕಾಣಿಯೂರಿನಲ್ಲಿ ವಶ ಪಡಿಸಿಕೊಂಡ ಬಗ್ಗೆ ವರದಿಯಾಗಿದೆ. ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಗುರುವಾರದಂದು ಬೆಳ್ಳಾರೆಯ ಶಫೀಕ್‌ (27) ಮತ್ತು ಸವಣೂರಿನ ಝಾಕೀರ್‌ (29) ಎಂಬವರನ್ನು ಬಂಧಿಸಿದ್ದರು. ಆರೋಪಿಗಳನ್ನು ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಪ್ರವೀಣ್ ಹತ್ಯೆ ಪ್ರಕರಣದ ಮೂರನೇ ಆರೋಪಿ ಪೊಲೀಸ್ ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ಕಾಡಾನೆ ಹಿಂಡು ದಾಳಿ ➤ ಅಡಿಕೆ ಗಿಡ, ಜೇನು ಕೃಷಿ ಸೇರಿದಂತೆ ದ್ವಿಚಕ್ರ ವಾಹನ ಧ್ವಂಸ

(ನ್ಯೂಸ್ ಕಡಬ) newskadaba.com ಕಡಬ, ಜು.29. ಕಾಡಾನೆ ಹಿಂಡೊಂದು ಅಡಿಕೆ ತೋಟಕ್ಕೆ ನುಗ್ಗಿ ಅಡಿಕೆ ಮರ ಹಾಗೂ ಜೇನು ಕೃಷಿಯ ಜೊತೆ ನಿಲ್ಲಿಸಲಾಗಿದ್ದ ಸ್ಕೂಟರ್ ಗೆ ಹಾನಿ ಮಾಡಿರುವ ಘಟನೆ ನೂಜಿಬಾಳ್ತಿಲ ಗ್ರಾಮದ ಅಡೆಂಜ ಭಾಗದಲ್ಲಿ ನಡೆದಿದೆ. ಅಡೆಂಜ ನಿವಾಸಿ ಲಕ್ಷ್ಮಣ ಪೆತ್ತಲ ಹಾಗೂ ಸುಂದರ ಪೆತ್ತಲ ಎಂಬವರಿಗೆ ಸೇರಿದ 25 ಕ್ಕೂ ಹೆಚ್ಚಿನ ಅಡಿಕೆ ಗಿಡ, ಜಯಪ್ರಕಾಶ್ ಪೆತ್ತಲ ಎಂಬವರಿಗೆ ಸೇರಿದ 14 ಜೇನು ಪೆಟ್ಟಿಗೆ ಹಾಗೂ ಕಿಶೋರ್ ಪಾದೆ ಎಂಬವರಿಗೆ ಸೇರಿದ ಸ್ಕೂಟರನ್ನು ಕಾಡಾನೆ

ಕಡಬ: ಕಾಡಾನೆ ಹಿಂಡು ದಾಳಿ ➤ ಅಡಿಕೆ ಗಿಡ, ಜೇನು ಕೃಷಿ ಸೇರಿದಂತೆ ದ್ವಿಚಕ್ರ ವಾಹನ ಧ್ವಂಸ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಹಂಪ್ಸ್ ಗೆ ಸಿಲುಕಿದ ದ್ವಿಚಕ್ರ ವಾಹನ ➤ ರಸ್ತೆಗೆ ಬಿದ್ದ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 28. ರಸ್ತೆಯಲ್ಲಿನ ಹಂಪ್ಸ್ ಗೆ ಸಿಲುಕಿ ದ್ವಿಚಕ್ರ ವಾಹನ ಸವಾರನೋರ್ವ ಮೃತಪಟ್ಟ ಘಟನೆ ಗುರುವಾರ ರಾತ್ರಿ ನಗರದ ಫಳ್ನೀರ್ ನಲ್ಲಿ ನಡೆದಿದೆ.   ಮೃತ ಯುವಕನನ್ನು ಶಕ್ತಿನಗರದ ಮುತ್ತುರಾಜ್ (20)ಎಂದು ಗುರುತಿಸಲಾಗಿದೆ. ಈತ ರಾತ್ರಿ ಸುಮಾರು 8.30ಕ್ಕೆ ಕಂಕನಾಡಿಯಿಂದ ವೆನ್ಲಾಕ್ ಕಡೆಗೆ ದ್ವಿಚಕ್ರದಲ್ಲಿ ತೆರಳುತ್ತಿದ್ದ ಸಂದರ್ಭ ಫಳ್ನೀರ್ ನ ಹೈಲ್ಯಾಂಡ್ ಆಸ್ಪತ್ರೆ ಮುಂಬಾಗದಲ್ಲಿ ಅಳವಡಿಸಲಾದ ಹಂಪ್ಸ್ ಗೆ ಸಿಲುಕಿ ರಸ್ತೆಗೆ ಎಸೆಯಲ್ಪಟ್ಟಿದ್ದಾನೆ. ಇದರಿಂದ ಗಂಭೀರ ಗಾಯಗೊಂಡ ಈತನನ್ನು ಹೈಲ್ಯಾಂಡ್ ಆಸ್ಪತ್ರೆಗೆ

ಮಂಗಳೂರು: ಹಂಪ್ಸ್ ಗೆ ಸಿಲುಕಿದ ದ್ವಿಚಕ್ರ ವಾಹನ ➤ ರಸ್ತೆಗೆ ಬಿದ್ದ ಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಮತ್ತೊಂದು ಮರ್ಡರ್ ➤ ದುಷ್ಕರ್ಮಿಗಳ ತಂಡದಿಂದ ಗಾಯಗೊಂಡಿದ್ದ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಜು.28. ಬೆಳ್ಳಾರೆಯಲ್ಲಿ ಬಿಜೆಪಿ ಮುಖಂಡ ಪ್ರವೀಣ್ ಹತ್ಯೆಯ ಬೆನ್ನಲ್ಲೇ ಮಂಗಳೂರಿನಲ್ಲಿ ಯುವಕನೋರ್ವನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದ ಯುವಕ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಸುರತ್ಕಲ್ ನಲ್ಲಿ ಚಪ್ಪಲಿ ಖರೀದಿಗೆಂದು ಬಂದಿದ್ದ ಮಂಗಲಪೇಟೆ ನಿವಾಸಿ ಫಾಝಿಲ್ ಎಂಬಾತನಿಗೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಇರಿದಿದ್ದು, ಗಂಭೀರ ಗಾಯಗೊಂಡ ಫಾಝಿಲ್ ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು ಹೆಚ್ಚಿನ ಪೊಲೀಸ್

ಮಂಗಳೂರು: ಮತ್ತೊಂದು ಮರ್ಡರ್ ➤ ದುಷ್ಕರ್ಮಿಗಳ ತಂಡದಿಂದ ಗಾಯಗೊಂಡಿದ್ದ ಯುವಕ ಮೃತ್ಯು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಯುವಕನಿಗೆ ಚೂರಿ ಇರಿತ ➤ ಪ್ರವೀಣ್ ಕೊಲೆ ಬೆನ್ನಲ್ಲೇ ಮತ್ತೊಂದು ಪ್ರಕರಣ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.28. ಬೆಳ್ಳಾರೆಯಲ್ಲಿ ಬಿಜೆಪಿ ಮುಖಂಡ ಪ್ರವೀಣ್ ಹತ್ಯೆಯ ಬೆನ್ನಲ್ಲೇ ಮಂಗಳೂರಿನಲ್ಲಿ ಯುವಕನೋರ್ವನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸುರತ್ಕಲ್ ನಲ್ಲಿ ಚಪ್ಪಲಿ ಖರೀದಿಗೆಂದು ಬಂದಿದ್ದ ಮಂಗಲಪೇಟೆ ನಿವಾಸಿ ಫಾಝಿಲ್ ಎಂಬಾತನಿಗೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಇರಿದಿದ್ದು, ಗಂಭೀರ ಗಾಯಗೊಂಡ ಫಾಝಿಲ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು ಹೆಚ್ಚಿನ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ

ಮಂಗಳೂರು: ಯುವಕನಿಗೆ ಚೂರಿ ಇರಿತ ➤ ಪ್ರವೀಣ್ ಕೊಲೆ ಬೆನ್ನಲ್ಲೇ ಮತ್ತೊಂದು ಪ್ರಕರಣ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಶ್ರೀರಾಮ ಸೇನೆಯ ಮುಖಂಡ ಪ್ರಮೋದ್ ಮುತಾಲಿಕ್ ದ.ಕ. ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ➤ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.28. ಪ್ರವೀಣ್ ಹತ್ಯೆಯ ಹಿನ್ನೆಲೆಯಲ್ಲಿ ಅಹಿತಕರ ಘಟನೆಯನ್ನು ತಡೆಯುವ ಸಲುವಾಗಿ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯ 5 ತಾಲೂಕುಗಳ ಪ್ರವೇಶಕ್ಕೆ ನಿಷೇಧ ಹೇರಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶಿಸಿದ್ದಾರೆ. ಪ್ರಮೋದ್ ಮುತಾಲಿಕ್ ಭಾಷಣ ಮಾಡಿದ್ದಲ್ಲಿ ಜನತೆ ಪ್ರಚೋದನೆಗೊಂಡು ಅಹಿತಕರ ಘಟನೆ ನಡೆಯುವ ಸಂಭವವಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ ಹಾಗೂ ಕಡಬ ತಾಲೂಕುಗಳಿಗೆ ಮುತಾಲಿಕ್ ಪ್ರವೇಶಕ್ಕೆ

ಶ್ರೀರಾಮ ಸೇನೆಯ ಮುಖಂಡ ಪ್ರಮೋದ್ ಮುತಾಲಿಕ್ ದ.ಕ. ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ➤ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಆದೇಶ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಪ್ರವೀಣ್ ಮನೆಗೆ ಭೇಟಿ ನೀಡಿದ ಸಿಎಂ ಬೊಮ್ಮಾಯಿ ➤ ಗೃಹ ಸಚಿವ ಅರಗ ಜ್ಞಾನೇಂದ್ರ, ಬಿಜೆಪಿ ಅಧ್ಯಕ್ಷ ನಳಿನ್ ಕಟೀಲ್ ಸಾಥ್

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜು.28. ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆಯ ಹಿನ್ನೆಲೆಯಲ್ಲಿ ಸರಕಾರದ ಜನೋತ್ಸವ ಕಾರ್ಯಕ್ರಮವನ್ನು ರದ್ದುಗೊಳಿಸಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮೃತ ಪ್ರವೀಣ್ ರ ನೆಟ್ಟಾರಿನ ಮನೆಗೆ ಭೇಟಿ ನೀಡಿ ಕುಟುಂಬಸ್ಥರನ್ನು ಸಂತೈಸಿದ್ದಾರೆ‌. ಸಂಜೆ 4.30 ಕ್ಕೆ ಮಂಗಳೂರಿನಿಂದ ಹೊರಟ ಸಿಎಂ ರಸ್ತೆ ಮಾರ್ಗವಾಗಿ ನೆಟ್ಟಾರಿಗೆ ಆಗಮಿಸಿದ್ದು, ಗೃಹ ಸಚಿವ ಅರಗ ಜ್ಞಾನೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಹಲವು ಮುಖಂಡರು ಜೊತೆಗಿದ್ದರು. ಈ ನಡುವೆ ವಿವಿಧ ನಾಯಕರು ಮನೆ

ಪ್ರವೀಣ್ ಮನೆಗೆ ಭೇಟಿ ನೀಡಿದ ಸಿಎಂ ಬೊಮ್ಮಾಯಿ ➤ ಗೃಹ ಸಚಿವ ಅರಗ ಜ್ಞಾನೇಂದ್ರ, ಬಿಜೆಪಿ ಅಧ್ಯಕ್ಷ ನಳಿನ್ ಕಟೀಲ್ ಸಾಥ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top