ಬ್ರೇಕಿಂಗ್ ನ್ಯೂಸ್

ಪ್ರವೀಣ್ ಹತ್ಯೆ ಪ್ರಕರಣ – ಗಡಿ ಭಾಗಗಳಲ್ಲಿ ತೀವ್ರ ತಪಾಸಣೆ ➤ ಬೆಳ್ಳಾರೆಗೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜು.27. ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಕೇರಳ – ಕರ್ನಾಟಕ ಗಡಿಪ್ರದೇಶಗಳಾದ ಸಾರಡ್ಕ, ಕನ್ಯಾನ, ಸಾಲೆತ್ತೂರು ಚೆಕ್ ಪೋಸ್ಟ್ ಗಳಲ್ಲಿ ವಾಹನ ತಪಾಸಣೆ ಬಿಗುಗೊಳಿಸಲಾಗಿದೆ. ಕೇರಳದಿಂದ ಕರ್ನಾಟಕಕ್ಕೆ ಆಗಮಿಸುವ ಹಾಗೂ ಕೇರಳಕ್ಕೆ ತೆರಳುವ ವಾಹನಗಳ ಬಗ್ಗೆ ತೀವ್ರ ನಿಗಾ ಇರಿಸಲಾಗಿದೆ. ವಾಹನ ಸಂಚಾರ ವಿರಳವಾಗಿದ್ದು, ಜನರು ಮನೆಯಿಂದ ಹೊರ ಬರಲು ಹೆದರುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಈಗಾಗಲೇ ಬೆಳ್ಳಾರೆಗೆ ಆಗಮಿಸಿದ್ದು, ತನಿಖೆಯನ್ನು […]

ಪ್ರವೀಣ್ ಹತ್ಯೆ ಪ್ರಕರಣ – ಗಡಿ ಭಾಗಗಳಲ್ಲಿ ತೀವ್ರ ತಪಾಸಣೆ ➤ ಬೆಳ್ಳಾರೆಗೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಗನ ಚಿತೆಗೆ ತಂದೆಯಿಂದಲೇ ಅಗ್ನಿಸ್ಪರ್ಶ. ➤ ಮುಗಿಲುಮುಟ್ಟಿದ ಕುಟುಂಬಸ್ಥರ ಆಕ್ರಂದನ..!

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜು. 27. ಬೆಳ್ಳಾರೆಯಲ್ಲಿ ಹತ್ಯೆಗೀಡಾದ ಹಿಂದೂ ಯುವ ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರು ಅವರ ಸ್ವಗ್ರಾಮ ನೆಟ್ಟಾರುವಿನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಬಿಲ್ಲವ ಸಂಪ್ರದಾಯದಂತೆ ಮೃತದೇಹದ ಅಂತಿಮ ವಿಧಿವಿಧಾನ ನಡೆದು ಅಂತ್ಯಸಂಸ್ಕಾರ ನಡೆಸಲಾಯಿತು. ಈ ಸಂದರ್ಭ ಕುಟುಂಬಸ್ಥರಿಗೆ ಮಾತ್ರ ಸ್ಥಳದಲ್ಲಿ ಅವಕಾಶ ನೀಡಲಾಗಿತ್ತು. ಈ ಸಮಯದಲ್ಲಿ ಪ್ರವೀಣ್‌ ಪತ್ನಿ, ತಂದೆ-ತಾಯಿ ಸೇರಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ತಂದೆಯೇ ಮಗನ ಚಿತೆಗೆ ಅಗ್ನಿ ಸ್ಪರ್ಶ ನೀಡುವ ಮೂಲಕ ಅಂತಿಮ ಸಂಸ್ಕಾರ ನಡೆಸಲಾಯಿತು. ಬೆಳ್ಳಾರೆಯಲ್ಲಿ

ಮಗನ ಚಿತೆಗೆ ತಂದೆಯಿಂದಲೇ ಅಗ್ನಿಸ್ಪರ್ಶ. ➤ ಮುಗಿಲುಮುಟ್ಟಿದ ಕುಟುಂಬಸ್ಥರ ಆಕ್ರಂದನ..! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ಳಾರೆ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ➤ ಚಿಕ್ಕಮಗಳೂರು ಜಿಲ್ಲಾ ಯುವಮೋರ್ಚಾ ಪದಾಧಿಕಾರಿಗಳಿಂದ ಸಾಮೂಹಿಕ ರಾಜೀನಾಮೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜು. 27. ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಜುಲೈ 26ರಂದು ರಾತ್ರಿ ನಡೆದ ಬಿಜೆಪಿ ಯುವನಾಯಕ ಪ್ರವೀಣ್ ನೆಟ್ಟಾರ್ ರವರ ಹತ್ಯೆಯನ್ನು ಖಂಡಿಸಿ ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಯುವಮೋರ್ಛಾ ಪ್ರಮುಖರು ಸಾಮೂಹಿಕ ರಾಜೀನಾಮೆ ಸಲ್ಲಿಸಿದ್ದಾರೆ.‌ ನಮ್ಮದೇ ಸರಕಾರ ಅಧಿಕಾರದಲ್ಲಿದ್ದರೂ ನಮಗೆ ರಕ್ಷಣೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯ ಯುವಮೋರ್ಛಾಗಳ ಪದಾಧಿಕಾರಿಗಳು‌ ಪಕ್ಷದ ಪ್ರಮುಖರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಬೆಳ್ಳಾರೆ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ➤ ಚಿಕ್ಕಮಗಳೂರು ಜಿಲ್ಲಾ ಯುವಮೋರ್ಚಾ ಪದಾಧಿಕಾರಿಗಳಿಂದ ಸಾಮೂಹಿಕ ರಾಜೀನಾಮೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಳ್ಳಾರೆ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ➤ ತುರ್ತು ಸಭೆ ಕರೆದ ಸಿಎಂ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜು. 27. ಜುಲೈ 26ರಂದು ರಾತ್ರಿ ನಡೆದ ಸುಳ್ಯ ತಾಲೂಕು ಯುವವಾಹಿನಿ ಘಟಕದ ಮಾಜಿ ಅಧ್ಯಕ್ಷರೂ, ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿಯೂ ಬಿಜೆಪಿ ಯುವಮೋರ್ಛಾದ ದ.ಕ. ಜಿಲ್ಲಾ ಕಾರ್ಯಕಾರಿಣಿ ಸದಸ್ಯರೂ ಆಗಿದ್ದ ಯುವ ಉದ್ಯಮಿ ಪ್ರವೀಣ್ ನೆಟ್ಟಾರುರವರ ಹತ್ಯೆ ಪ್ರಕರಣದ ಕುರಿತು ಚರ್ಚೆ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತುರ್ತು ಸಭೆ ಕರೆದಿದ್ದಾರೆ.   ಬೆಂಗಳೂರಿನ ‘ಕೃಷ್ಣಾ’ದಲ್ಲಿ ಇದೀಗ ಸಭೆ ನಡೆಯಲಿದ್ದು, ಗೃಹಸಚಿವ ಅರಗ ಜ್ಞಾನೇಂದ್ರ, ಬಿಜೆಪಿ ರಾಷ್ಟ್ರೀಯ ಪ್ರಧಾನ

ಬೆಳ್ಳಾರೆ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ➤ ತುರ್ತು ಸಭೆ ಕರೆದ ಸಿಎಂ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಳ್ಳಾರೆ: ಲಾಠಿ ಚಾರ್ಜ್ – ಯುವಕನಿಗೆ ಗಾಯ ➤ ಬೆಳ್ಳಾರೆಯಲ್ಲಿ ಉದ್ವಿಗ್ನ ಪರಿಸ್ಥಿತಿ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜು‌.27. ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಬೆಳ್ಳಾರೆಯಲ್ಲಿ ಕಲ್ಲು ತೂರಾಟ ನಡೆದಿದೆ ಎನ್ನಲಾಗಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಪೊಲೀಸ್ ಲಾಠಿ ಚಾರ್ಜ್ ನಿಂದಾಗಿ ಯುವಕನ ತಲೆಗೆ ಗಾಯವಾಗಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.  

ಬೆಳ್ಳಾರೆ: ಲಾಠಿ ಚಾರ್ಜ್ – ಯುವಕನಿಗೆ ಗಾಯ ➤ ಬೆಳ್ಳಾರೆಯಲ್ಲಿ ಉದ್ವಿಗ್ನ ಪರಿಸ್ಥಿತಿ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪ್ರವೀಣ್ ಹತ್ಯೆ ಪ್ರಕರಣ – ಆರೋಪಿಗಳ ಪತ್ತೆಗೆ ಐದು ತಂಡ ರಚನೆ ➤ ಶಂಕಿತ ಹಲವರ ತೀವ್ರ ವಿಚಾರಣೆ

(ನ್ಯೂಸ್ ಕಡಬ) newskadaba.com ಕಡಬ, ಜು‌.27. ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶೋಧ ಕಾರ್ಯಾಚರಣೆ ಆರಂಭಗೊಂಡಿದ್ದು, ಆರೋಪಿಗಳ ಪತ್ತೆಗಾಗಿ ಐದು ತಂಡಗಳನ್ನು ರಚಿಸಲಾಗಿದೆ. ಶಂಕಿತ ಆರೋಪದ ಮೇರೆಗೆ ಸ್ಥಳೀಯ ಹಲವರನ್ನು ಈಗಾಗಲೇ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ತೀವ್ರ ವಿಚಾರಣೆ ನಡೆಸುತ್ತಿರುವುದಾಗಿ ಪ್ರಮುಖ ದೃಶ್ಯ ಮಾಧ್ಯಮಗಳು ವರದಿ ಮಾಡಿವೆ. ಆರೋಪಿಗಳು ಕೇರಳ ನೋಂದಣಿಯ ಬೈಕ್ ನಲ್ಲಿ ಆಗಮಿಸಿದ್ದಾರೆಂಬ ಗುಮಾನಿ ಇರುವುದರಿಂದ ತನಿಖೆಯನ್ನು ಕೇರಳ ಕಡೆಗೂ ಕೇಂದ್ರೀಕರಿಸಲಾಗಿದೆ. ಬೆಳ್ಳಾರೆ ಪೇಟೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

ಪ್ರವೀಣ್ ಹತ್ಯೆ ಪ್ರಕರಣ – ಆರೋಪಿಗಳ ಪತ್ತೆಗೆ ಐದು ತಂಡ ರಚನೆ ➤ ಶಂಕಿತ ಹಲವರ ತೀವ್ರ ವಿಚಾರಣೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಬಸ್ಸಿಗೆ ಕಲ್ಲೆಸೆತ

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 27. ಪುತ್ತೂರು ಬೊಳುವಾರಿನಲ್ಲಿ ಬಸ್ ವೊಂದಕ್ಕೆ ಯಾರೋ ಕಿಡಿಗೇಡಿಗಳು ಕಲ್ಲೆಸೆದ ಘಟನೆ ಜು.27 ರ ಬೆಳಿಗ್ಗೆ ನಡೆದಿದೆ. ಮಂಗಳೂರಿಗೆ ಹೋಗುತ್ತಿದ್ದ ಬಸ್ ಗೆ ಬೊಳುವಾರಿನಲ್ಲಿ ಕಲ್ಲೆಸೆಯಲಾಗಿದೆ. ಕಲ್ಲೆಸೆದ ಪರಿಣಾಮ ಬಸ್ ನ ಎದುರಿನ ಗಾಜು ಹುಡಿಯಾಗಿದೆ ಎನ್ನಲಾಗಿದೆ.

ಪುತ್ತೂರು: ಬಸ್ಸಿಗೆ ಕಲ್ಲೆಸೆತ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಳ್ಳಾಲ: ಮಲತಂದೆಯಿಂದ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ➤ ಆರೋಪಿ ವಶಕ್ಕೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜು. 27.ಮಲತಂದೆಯೋರ್ವ 9 ವರ್ಷದ ಮಗಳ ಮೇಲೆಯೇ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿ ಕೊಣಾಜೆ ಠಾಣಾ ಪೊಲೀಸರ ಆರೋಪಿಯ್ನ ನಡೆದಿದೆ. ಬಂಧಿತ ಆರೋಪಿಯನ್ನು ಅಶ್ವತ್ಥ್ ಎಂದು ಗುರುತಿಸಲಾಗಿದೆ. ಈತ ಕೇರಳ ಗಡಿಭಾಗದ ವಿವಾಹಿತ ಮಹಿಳೆಯನ್ನು ಮದುವೆಯಾಗಿದ್ದು, ಆಕೆಗೆ ಒಂಬತ್ತು ವರ್ಷದ ಮಗಳಿದ್ದು, ಒಟ್ಟಿಗೆ ಪಾವೂರಿನಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು. ಇದೀಗ ಮಹಿಳೆ ಗರ್ಭಿಣಿಯಾಗಿದ್ದು, ಹೆರಿಗೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಸಂದರ್ಭ ಅಶ್ವತ್ಥ್ ಹಾಗೂ ಬಾಲಕಿ ಮನೆಯಲ್ಲಿದ್ದರು. ಈ ವೇಳೆ ಮಲತಂದೆಯು ಬಾಲಕಿಯ ಮೇಲೆ

ಉಳ್ಳಾಲ: ಮಲತಂದೆಯಿಂದ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ➤ ಆರೋಪಿ ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ ಹಿನ್ನೆಲೆ ➤ ಸುಳ್ಯ, ಪುತ್ತೂರು, ಕಡಬ ತಾಲೂಕುಗಳಲ್ಲಿ ಸ್ವಯಂ ಪ್ರೇರಿತ ಬಂದ್ ಗೆ ಕರೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜು.27. ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೈದ ಹಿನ್ನೆಲೆಯಲ್ಲಿ ಸುಳ್ಯ, ಪುತ್ತೂರು ಹಾಗೂ ಕಡಬ ತಾಲೂಕುಗಳಲ್ಲಿ ಸ್ವಯಂಪ್ರೇರಿತ ಬಂದ್ ನಡೆಸಲು ಎಂದು ಹಿಂದೂ ಸಂಘಟನೆಯ ಮುಖಂಡರು ಕರೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಹಿಂದೂ ಮುಖಂಡ ಮುರಳೀಕೃಷ್ಣ ಹಸಂತ್ತಡ್ಕ, ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ಹತ್ಯೆ ಹಿನ್ನೆಲೆಯಲ್ಲಿ ಜು.27 ರಂದು ಪುತ್ತೂರು, ಕಡಬ ಹಾಗೂ ಸುಳ್ಯ ತಾಲೂಕಿನಾದ್ಯಂತ ಸ್ವಯಂ ಪ್ರೇರಿತ

ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ ಹಿನ್ನೆಲೆ ➤ ಸುಳ್ಯ, ಪುತ್ತೂರು, ಕಡಬ ತಾಲೂಕುಗಳಲ್ಲಿ ಸ್ವಯಂ ಪ್ರೇರಿತ ಬಂದ್ ಗೆ ಕರೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಬಿಜೆಪಿ ಮುಖಂಡನ ಹತ್ಯೆ ಹಿನ್ನೆಲೆ ➤ ಸ್ಥಳಕ್ಕೆ ಜಿಲ್ಲಾಧಿಕಾರಿ ಬರುವಂತೆ ಒತ್ತಾಯಿಸಿ ಕಾರ್ಯಕರ್ತರಿಂದ ಧರಣಿ

(ನ್ಯೂಸ್ ಕಡಬ) newskadaa.com ಪುತ್ತೂರು, ಜು. 26. ಬಿಜೆಪಿ ಯುವನಾಯಕ ಪ್ರವೀಣ್ ರವರನ್ನು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೈದ ಹಿನ್ನೆಲೆ ಪುತ್ತೂರಿನಲ್ಲಿ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಲಾಗಿದ್ದು, ಪೇಟೆಯಲ್ಲೆಲ್ಲಾ ಖಾಕಿ ಕಣ್ಗಾವಲು ತೀವ್ರವಾಗಿದೆ. ಪ್ರವೀಣ್ ರವರ ಮೃತದೇಹವು ಪ್ರಗತಿ ಆಸ್ಪತ್ರೆಯಲ್ಲಿದ್ದು, ಮರಣೋತ್ತರ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲು ಸಿದ್ದತೆ ನಡೆಯುತ್ತಿರುವ ಬೆನ್ನಲ್ಲೇ ಸ್ಥಳಕ್ಕೆ ಜಿಲ್ಲಾಧಿಕಾರಿ ಸ್ಥಳಕ್ಕೆ ಆಗಮಿಸಬೇಕು ಎಂದು ಒತ್ತಾಯಿಸಿ ಹಿಂದೂ ಕಾರ್ಯಕರ್ತರು ಆಸ್ಪತ್ರೆ ಮುಂಭಾಗ ಧರಣಿ ಕುಳಿತಿದ್ದಾರೆ.

ಪುತ್ತೂರು: ಬಿಜೆಪಿ ಮುಖಂಡನ ಹತ್ಯೆ ಹಿನ್ನೆಲೆ ➤ ಸ್ಥಳಕ್ಕೆ ಜಿಲ್ಲಾಧಿಕಾರಿ ಬರುವಂತೆ ಒತ್ತಾಯಿಸಿ ಕಾರ್ಯಕರ್ತರಿಂದ ಧರಣಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top