ಬ್ರೇಕಿಂಗ್ ನ್ಯೂಸ್

ಚಿರತೆ ಪ್ರತ್ಯಕ್ಷ ➤ ಸಾರ್ವಜನಿಕರಲ್ಲಿ ಆತಂಕ

(ನ್ಯೂಸ್ ಕಡಬ) newskadaba.com ವಿಟ್ಲ, ಜು. 20. ರಸ್ತೆಯಲ್ಲಿ ತೆರಳುತ್ತಿದ್ದ ಯುವಕನಿಗೆ ಚಿರತೆ ಅಡ್ಡ ಬಂದ ಘಟನೆ ವಿಟ್ಲ-ಸಾಲೆತ್ತೂರು ರಸ್ತೆಯಲ್ಲಿ ನಡೆದಿದೆ. ಕುಡ್ತಮುಗೇರಿಗೆ ನಡೆದು ಬರುತ್ತಿದ್ದ ಯುವಕನಿಗೆ ನೀರಪಳಿಕೆ ಎಂಬಲ್ಲಿ ಚಿರತೆ ಅಡ್ಡ ಬಂದಿದೆ ಎನ್ನಲಾಗಿದೆ. ಸ್ಥಳದಲ್ಲಿ ಸಾರ್ವಜನಿಕರು ಜಮಾವಣೆಗೊಂಡಿದ್ದು, ಅರಣ್ಯ ಅಧಿಕಾರಿಗಳು ಕೂಡ ಆಗಮಿಸಿದ್ದಾರೆ ಎಂದು ತಿಳಿದು ಬಂದಿದೆ. ಇದೀಗ ಮತ್ತೆ ಚಿರತೆ ಓಡಾಟದಿಂದ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿ ಮಾಡಿದೆ.  

ಚಿರತೆ ಪ್ರತ್ಯಕ್ಷ ➤ ಸಾರ್ವಜನಿಕರಲ್ಲಿ ಆತಂಕ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ಳಾರೆ: ಯುವಕನ ಕೊಲೆ ಯತ್ನ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜು. 20. ಯುವಕನ ಮೇಲೆ ತಂಡವೊಂದು ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಬೆಳ್ಳಾರೆ ಸಮೀಪದ ಕಳಂಜ ಎಂಬಲ್ಲಿ ನಡೆದಿದೆ. ಹಲ್ಲೆಗೊಳಗಾದವರನ್ನು ಮಸೂದ್ (21) ಎಂದು ಗುರುತಿಸಲಾಗಿದೆ. ಯುವಕನನ್ನು ಮಂಗಳೂರಿನ ಆಸ್ಪತ್ರೆಗೆ ಸೇರಿಸಲಾಗಿದ್ದು, ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

ಬೆಳ್ಳಾರೆ: ಯುವಕನ ಕೊಲೆ ಯತ್ನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಬೈಕ್ ಹಾಗೂ ಆಟೋರಿಕ್ಷಾ ನಡುವೆ ಅಪಘಾತ..!

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 19. ಬೈಕ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣದ ಬಳಿ ನಡೆದಿದೆ. ಘಟನೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ಪುತ್ತೂರು: ಬೈಕ್ ಹಾಗೂ ಆಟೋರಿಕ್ಷಾ ನಡುವೆ ಅಪಘಾತ..! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಡಿಕೆಶಿ ಒಡೆತನದ ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ ವಿದ್ಯಾರ್ಥಿ ಪೊಲೀಸ್ ವಶಕ್ಕೆ ➤ 10ನೇ ತರಗತಿ ವಿದ್ಯಾರ್ಥಿಯ ಪ್ಲಾನ್ ಗೆ ಬೆಚ್ಚಿಬಿದ್ದ ಜನತೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 19. ರಾಜರಾಜೇಶ್ವರಿ ನಗರದ ‘ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಸ್ಕೂಲ್‌’ಗೆ ಬಾಂಬ್ ಬೆದರಿಕೆ ಹಾಕಿ ಸೋಮವಾರದಂದು ಇಡೀ ದಿನ ಆತಂಕ ಹುಟ್ಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಾಲಕನೋರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಆತನೇ ಇ-ಮೇಲ್ ಕಳುಹಿಸಿದ್ದಾನೆಂಬ ಮಾಹಿತಿ ತನಿಖೆಯಿಂದ ಹೊರಬಂದಿದೆ.   ಬೆಳಗ್ಗೆ 9 ಗಂಟೆ ಸುಮಾರಿಗೆ ಶಾಲಾ ಸಿಬ್ಬಂದಿಯು ಇ-ಮೇಲ್ ಪರಿಶೀಲಿಸುತ್ತಿದ್ದ ವೇಳೆ ಅಪರಿಚಿತರೋರ್ವರು ಕಳುಹಿಸಿದ್ದ ಇ-ಮೇಲ್ ತೆರೆದಿದ್ದು, ಅದರಲ್ಲಿ ‘ಕ್ಯಾಂಪಸ್ ಹಾಗೂ ಶಾಲೆಯಲ್ಲಿ ಬಾಂಬ್ ಇಡಲಾಗಿದೆ. ನಾಳೆ (ಸೋಮವಾರ)

ಡಿಕೆಶಿ ಒಡೆತನದ ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ ವಿದ್ಯಾರ್ಥಿ ಪೊಲೀಸ್ ವಶಕ್ಕೆ ➤ 10ನೇ ತರಗತಿ ವಿದ್ಯಾರ್ಥಿಯ ಪ್ಲಾನ್ ಗೆ ಬೆಚ್ಚಿಬಿದ್ದ ಜನತೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಪ್ರೇಮಿಗಳಿಬ್ಬರು ಮೃತ್ಯು..!!

(ನ್ಯೂಸ್ ಕಡಬ) newskadaba.com ಉತ್ತರ ಕನ್ನಡ, ಜು. 19. ವಿಷ ಸೇವಿಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಪ್ರೇಮಿಗಳಿಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಮೃತರನ್ನು ಉತ್ತರಕನ್ನಡ ಜಿಲ್ಲೆ ಹಳಿಯಾಳ ಮೂಲದ ಜ್ಯೋತಿ ಸುರೇಶ ಅಂತ್ರೋಳಕರ(19) ಹಾಗೂ ರಿಕೇಶ್​ ಸುರೇಶ ಮಿರಾಶಿ(20) ಎಂದು ಗುರುತಿಸಲಾಗಿದೆ. ಹಳಿಯಾಳದ ಹವಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಇವರು ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ತಿಂಗಳ ಹಿಂದೆ ಯುವತಿಯ ಪೋಷಕರು ಆಕೆಗೆ ಬೇರೊಬ್ಬ ಯುವಕನೊಂದಿಗೆ ಮದುವೆ ಮಾಡಿದ್ದರು. ಆದರೆ, ಪ್ರಿಯಕರನನ್ನು

ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಪ್ರೇಮಿಗಳಿಬ್ಬರು ಮೃತ್ಯು..!! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಭಾರೀ ಪ್ರವಾಹದಿಂದಾಗಿ ನೀರಿನಲ್ಲಿ ಕೊಚ್ಚಿಹೋದ ಶಾಲಾ ಬಸ್..!! ➤ ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 19. ಶಾಲಾ ಮಕ್ಕಳನ್ನು ಹತ್ತಿಸಿಕೊಳ್ಳಲು ಹೋಗುತ್ತಿದ್ದ ಶಾಲಾ ಬಸ್ಸೊಂದು ನೀರಿನಲ್ಲಿ ಕೊಚ್ಚಿಹೋದ ಘಟನೆ ಉತ್ತರಾಖಂಡದ ಚಂಪಾವತ್ ನಲ್ಲಿ ನಡೆದಿದೆ. ಘಟನೆಯಲ್ಲಿ ಶಾಲಾ ಬಸ್ ಚಾಲಕ ಕಮಲೇಶ್ ಕರ್ಕಿ ಹಾಗೂ ಮತ್ತೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಅದೃಷ್ಟವಶಾತ್ ಬಸ್ ನಲ್ಲಿ ಮಕ್ಕಳಿರದೇ ಇದ್ದುದರಿಂದ ಭಾರೀ ಅನಾಹುತ ತಪ್ಪಿದಂತಾಗಿದೆ. ನೀರಿನ ಹರಿವು ಹೆಚ್ಚಿರುವುದರಿಂದ ಚಾಲಕನಿಗೆ ಸ್ವಲ್ಪ ಸಮಯ ಕಾಯಲು ಹೇಳಲಾಗಿತ್ತಾದರೂ, ಆತ ನೀರು ತುಂಬಿ ಹರಿಯುತ್ತಿದ್ದ

ಭಾರೀ ಪ್ರವಾಹದಿಂದಾಗಿ ನೀರಿನಲ್ಲಿ ಕೊಚ್ಚಿಹೋದ ಶಾಲಾ ಬಸ್..!! ➤ ಇಬ್ಬರು ಗಂಭೀರ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶೋರೂಂ ನಲ್ಲಿ ಬೆಂಕಿ ಅವಘಡ ➤ 7 ಎಲೆಕ್ಟ್ರಿಕ್ ಬೈಕ್ ಗಳು ಸುಟ್ಟು ಭಸ್ಮ..!

(ನ್ಯೂಸ್ ಕಡಬ) newskadaba.com ಮುಂಬೈ, ಜು. 19. ಶೋರೂಂ ನಲ್ಲಿ ಚಾರ್ಜಿಂಗ್ ಮಾಡುತ್ತಿದ್ದ ವೇಳೆ ಏಳು ಎಲೆಕ್ಟ್ರಿಕ್ ಬೈಕ್ ಗಳು ಬೆಂಕಿಗಾಹುತಿಯಾದ ಘಟನೆ ಪುಣೆಯ ಗಂಗಾಧಾಮ್ ಪ್ರದೇಶದಲ್ಲಿ ನಡೆದಿದೆ. ಎಲೆಕ್ಟ್ರಿಕ್ ಬೈಕ್ ನ್ನು ಶೋ ರೂಮ್‌‌ನಲ್ಲಿ ಚಾರ್ಜಿಂಗ್‌ ಮಾಡುತ್ತಿದ್ದ ವೇಳೆ ಬೈಕ್‌‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಪರಿಣಾಮ 7 ಎಲೆಕ್ಟ್ರಿಕಲ್ ಬೈಕ್‍ಗಳು ಸುಟ್ಟು ಕರಕಲಾಗಿದೆ ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ.

ಶೋರೂಂ ನಲ್ಲಿ ಬೆಂಕಿ ಅವಘಡ ➤ 7 ಎಲೆಕ್ಟ್ರಿಕ್ ಬೈಕ್ ಗಳು ಸುಟ್ಟು ಭಸ್ಮ..! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಳ್ಯ: ಬಸ್ಸಿನಿಂದಿಳಿದು ವಿಶ್ರಾಂತಿ ಪಡೆಯುತ್ತಿದ್ದ ವೇಳೆ ಹೃದಯಾಘಾತ..! ➤ KSRTC ಬಸ್ ಚಾಲಕ ನಿಧನ

(ನ್ಯೂಸ್ ಕಡಬ) newskadaba.com ಸುಳ್ಯ, ಜು. 19. ಬಸ್ ನಿಲ್ಲಿಸಿ ವಿಶ್ರಾಂತಿ ಪಡೆಯುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಚಾಲಕರೋರ್ವರು ಬಸ್ ನಿಲ್ದಾಣದಲ್ಲಿಯೇ ಮೃತಪಟ್ಟ ಘಟನೆ ಮರ್ಕಂಜ ಎಂಬಲ್ಲಿ ನಡೆದಿದೆ. ಮೃತರನ್ನು ಕೆಎಸ್‌ಆರ್‌ಟಿಸಿ ಪುತ್ತೂರು ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಮಲ್ಲೇಶ್ (56) ಎಂದು ಗುರುತಿಸಲಾಗಿದೆ. ಇವರು ಮರ್ಕಂಜ ಬಸ್ ನಿಲ್ದಾಣದಲ್ಲಿ ಬಸ್ ನಿಲ್ಲಿಸಿ ವಿಶ್ರಾಂತಿ ಪಡೆಯಲು ಹೋದ ವೇಳೆ ತೀವ್ರ ಎದೆನೋವು ಉಂಟಾಗಿ ಉಸಿರಾಟದ ತೊಂದರೆಯಾಗಿದ್ದು, ತಕ್ಷಣವೇ ಬಸ್ಸು ನಿರ್ವಾಹಕ ಸಿದ್ದಪ್ಪರವರು ಮಲ್ಲೇಶ್ ನನ್ನು ಜೀಪಿನಲ್ಲಿ ಸುಳ್ಯ ಆಸ್ಪತ್ರೆಗೆ ಕರೆದೊಯ್ದಿದಿದ್ದಾರೆ

ಸುಳ್ಯ: ಬಸ್ಸಿನಿಂದಿಳಿದು ವಿಶ್ರಾಂತಿ ಪಡೆಯುತ್ತಿದ್ದ ವೇಳೆ ಹೃದಯಾಘಾತ..! ➤ KSRTC ಬಸ್ ಚಾಲಕ ನಿಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಶಿರಾಡಿ, ಆಗುಂಬೆ, ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಸಂಚಾರ ಸ್ಥಗಿತ ಹಿನ್ನೆಲೆ ➤ ಮಂಗಳೂರು- ಬೆಂಗಳೂರು ಹೆಚ್ಚುವರಿ ರೈಲಿಗೆ ಬೇಡಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 19. ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಘಾಟ್‌ ಮತ್ತು ಪರ್ಯಾಯ ರಸ್ತೆಗಳಾದ ಚಾರ್ಮಾಡಿ, ಸಂಪಾಜೆ, ಆಗುಂಬೆ ರಸ್ತೆಗಳಲ್ಲಿ ಭೂಕುಸಿತ ಉಂಟಾಗಿ ಮಂಗಳೂರು- ಬೆಂಗಳೂರು ರಸ್ತೆ ಸಂಚಾರ ಸಂಪೂರ್ಣ ಸ್ಥಗಿತಗೊಳ್ಳುವ ಆತಂಕವಿದೆ. ಇದಕ್ಕೆ ಪರ್ಯಾಯವಾಗಿ ರೈಲು ಸಂಚಾರ ಅವಲಂಬಿಸಬೇಕಾದ ಅನಿವಾರ್ಯತೆ ಸೃಷ್ಠಿಯಾಗಿದ್ದು, ಈ ನಿಟ್ಟಿನಲ್ಲಿ ಮಂಗಳೂರು- ಬೆಂಗಳೂರು ನಡುವೆ ಈಗಿರುವ ರೈಲುಗಳ ಹೊರತಾಗಿ ಹೆಚ್ಚುವರಿ ರೈಲುಗಳನ್ನು ಓಡಿಸಬೇಕೆಂಬ ಆಗ್ರಹ ಸಾರ್ವಜನಿಕರಿಂದ ಕೇಳಿಬರುತ್ತಿದೆ. ಇದೇ ವೇಳೆ ದಕ್ಷಿಣ ಕನ್ನಡ ಸಂಸದ ನಳಿನ್‌

ಶಿರಾಡಿ, ಆಗುಂಬೆ, ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಸಂಚಾರ ಸ್ಥಗಿತ ಹಿನ್ನೆಲೆ ➤ ಮಂಗಳೂರು- ಬೆಂಗಳೂರು ಹೆಚ್ಚುವರಿ ರೈಲಿಗೆ ಬೇಡಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ: ಕಾಡಾನೆ ಹಿಂಡು ದಾಳಿ ➤ ಅಪಾರ ಕೃಷಿ ಹಾನಿ

(ನ್ಯೂಸ್ ಕಡಬ) newskadaba.com ಸುಳ್ಯ, ಜು. 19. ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಸೋಮವಾರ ಬೆಳಿಗ್ಗೆ ಮಾವಂಜಿ ಭಾಗದಲ್ಲಿ ಪ್ರತ್ಯಕ್ಷಗೊಂಡ ಕಾಡಾನೆಗಳ ಹಿಂಡು ಕೃಷಿ ಹಾನಿ ಮಾಡಿ ಅಪಾರ ನಷ್ಟವುಂಟಾದ ಘಟನೆ ವರದಿಯಾಗಿದೆ. ಒಂದು ಮರಿ ಹಾಗು ಮೂರು ದೊಡ್ಡ ಆನೆಗಳ ಹಿಂಡು ಸೀತಾರಾಮ ಮಣಿಯಾಣಿ ಎಂಬವರ ತೋಟಕ್ಕೆ ನುಗ್ಗಿ ಬಾಳೆ, ತೆಂಗು ಸೇರಿ ಅಪಾರ ಕೃಷಿ ಹಾನಿಗೊಳಿಸಿದೆ. ಮಂಡೆಕೋಲು ಗ್ರಾಮದಲ್ಲಿ ಕಾಡಾನೆ ಹಾಳಿ ನಿರಂತರವಾಗಿ ಮುಂದುವರಿದಿದ್ದು ಮಳೆಗಾಲ ಆರಂಭವಾದ ಬಳಿಕ ಆನೆ ಹಾವಳಿ ಇನ್ನಷ್ಟು ತೀವ್ರಗೊಂಡಿದೆ.

ಸುಳ್ಯ: ಕಾಡಾನೆ ಹಿಂಡು ದಾಳಿ ➤ ಅಪಾರ ಕೃಷಿ ಹಾನಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top