ಬ್ರೇಕಿಂಗ್ ನ್ಯೂಸ್

ನೇಣುಬಿಗಿದು ಯುವಕ ಆತ್ಮಹತ್ಯೆ ➤ ಎರಡು ದಿನಗಳ ಹಿಂದೆಯಷ್ಟೇ ಊರಿಗೆ ಮರಳಿದ ಯುವಕ

(ನ್ಯೂಸ್ ಕಡಬ) newskadaba.com ಮಾಣಿ, ಜು. 06. ಎರಡು ದಿನಗಳ ಹಿಂದೆಯಷ್ಟೇ ಊರಿಗೆ ಬಂದಿದ್ದ ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರದಂದು ಸಂಜೆ ಕೊಡಾಜೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ನಝೀರ್ ಎಂದು ಗುರುತಿಸಲಾಗಿದೆ. ನಝೀರ್ ಇಂದು ಸಂಜೆ ಕೊಡಜೆಯ ಪ್ಲಾಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೂಲತಃ ಬುಡೋಳಿ ನಿವಾಸಿಗಳಾದ ಇವರು ಇತ್ತೀಚೆಗೆ ಕೊಡಾಜೆಯಲ್ಲಿ ವಾಸಿಸುತ್ತಿದ್ದರು. ಉಪ್ಪಳದಲ್ಲಿ ಕೆಲಸದಲ್ಲಿದ್ದ ಈತ ಎರಡು ದಿನಗಳ‌ ಹಿಂದೆಯಷ್ಟೇ ಮನೆಗೆ ಬಂದಿದ್ದು, ಇಂದು‌ ಮನೆಯಲ್ಲಿ ಎಲ್ಲರೂ ಇದ್ದ […]

ನೇಣುಬಿಗಿದು ಯುವಕ ಆತ್ಮಹತ್ಯೆ ➤ ಎರಡು ದಿನಗಳ ಹಿಂದೆಯಷ್ಟೇ ಊರಿಗೆ ಮರಳಿದ ಯುವಕ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ದ.ಕ ಜಿಲ್ಲೆಯಾದ್ಯಂತ ನಾಳೆ ಜು.07 ಶಾಲಾ ಕಾಲೇಜುಗಳಿಗೆ ರಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 06. ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆ, ಪಿಯುಸಿ, ಕಾಲೇಜುಗಳಿಗೆ ನಾಳೆಯೂ ( ಜುಲೈ 7) ರಜೆ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ, ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ಗುರುವಾರ ದ.ಕ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕಶಾಲೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ಸಾರಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ದ.ಕ ಜಿಲ್ಲೆಯಾದ್ಯಂತ ನಾಳೆ ಜು.07 ಶಾಲಾ ಕಾಲೇಜುಗಳಿಗೆ ರಜೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಕ್ರಮವಾಗಿ 3500 ಪ್ಯಾಕೆಟ್ ಪಾನ್ ಮಸಾಲ ಉತ್ಪನ್ನಗಳ ಸಾಗಾಟ ➤ ಓರ್ವ ಅರೆಸ್ಟ್

(ನ್ಯೂಸ್ ಕಡಬ) newskadaba.com ಕಾಸರಗೋಡು, ಜು. 06. ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮಸಾಲ ಉತ್ಪನ್ನಗಳನ್ನು ಬದಿಯಡ್ಕ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಇಂದು ನಡೆದಿದೆ. ಬಂಧಿತ ಆರೋಪಿಯನ್ನು ಮುಂಡಿತ್ತಡ್ಕ ಯೂಸುಫ್ ಶರೀಫ್ ಎಂದು ಗುರುತಿಸಲಾಗಿದೆ. ಪೆರ್ಲದಲ್ಲಿ ವಾಹನ ತಪಾಸಣಾ ನಿರತರಾಗಿದ್ದ ಪೊಲೀಸರು ಈತ ಚಲಾಯಿಸಿಕೊಂಡು ಬರುತ್ತಿದ್ದ ಕಾರನ್ನು ಪರಿಶೀಲಿಸಿದಾಗ 3,500 ಪ್ಯಾಕೆಟ್ ಪಾನ್ ಮಸಾಲ ಉತ್ಪನ್ನಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದುದು ಬೆಳಕಿಗೆ ಬಂದಿದೆ.

ಅಕ್ರಮವಾಗಿ 3500 ಪ್ಯಾಕೆಟ್ ಪಾನ್ ಮಸಾಲ ಉತ್ಪನ್ನಗಳ ಸಾಗಾಟ ➤ ಓರ್ವ ಅರೆಸ್ಟ್ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇನ್ಮುಂದು ಪಿಯುಸಿ ವಿದ್ಯಾರ್ಥಿಗಳು ಕಾಲೇಜಿಗೆ ದ್ವಿಚಕ್ರ ವಾಹನ ತರುವಂತಿಲ್ಲ..!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 06. ಇನ್ಮುಂದೆ ಪಿಯುಸಿ ವಿದ್ಯಾರ್ಥಿಗಳು ಕಾಲೇಜಿಗೆ ದ್ವಿಚಕ್ರ ವಾಹನ ತರುವಂತಿಲ್ಲ ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಹೇಳಿದ್ದಾರೆ. ಈ ಕುರಿತು ಮಾಧ್ಯಮದೊಂದಿಗೆ ಮಾತನಾಡಿದ ಅವರು, ಪಿಯುಸಿ ವಿದ್ಯಾರ್ಥಿಗಳು ಡಿಎಲ್ ಪಡೆಯಲು ಅನರ್ಹರಾಗಿರುವುದರಿಂದ ಕಾಲೇಜಿಗೆ ಬೈಕ್ ತರುವಂತಿಲ್ಲ ಎಂದು ಹೇಳಿದ್ದಾರೆ. ಇನ್ನು ಬೆಂಗಳೂರು ನಗರದಲ್ಲಿ ನಕಲಿ ನಂಬರ್ ಪ್ಲೇಟ್ ಹೊಂದಿರುವ ವಾಹನಗಳು ಸಿಗುತ್ತಿದ್ದು, ಈಗಾಗಲೇ ಅದರ ಮಾಲೀಕರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗುತ್ತಿದೆ. ಜೂನ್ ತಿಂಗಳಲ್ಲಿ 22 ದ್ವಿಚಕ್ರ

ಇನ್ಮುಂದು ಪಿಯುಸಿ ವಿದ್ಯಾರ್ಥಿಗಳು ಕಾಲೇಜಿಗೆ ದ್ವಿಚಕ್ರ ವಾಹನ ತರುವಂತಿಲ್ಲ..!! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅರಂತೋಡು: ಗುಡ್ಡ ಕುಸಿತ ➤ ರಸ್ತೆ ಸಂಚಾರ ಬಂದ್…!

(ನ್ಯೂಸ್ ಕಡಬ) newskadaba.com ಅರಂತೋಡು, ಜು. 06. ಜಿಲ್ಲೆಯಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ತೊಡಿಕಾನ ಮಾವಿನಕಟ್ಟೆ ಮುತ್ತುಕೋಡಿ ಬಾಳೆಕಜೆ ರಸ್ತೆಗೆ ಗುಡ್ಡ ಕುಸಿದು ಬಿದ್ದ ಪರಿಣಾಮ ರಸ್ತೆ ಸಂಚಾರ ಬಂದ್ ಆಗಿದೆ. ರಸ್ತೆ ಬಂದ್ ನಿಂದಾಗಿ ತೊಡಿಕಾನ ಗ್ರಾಮದೊಂದಿಗೆ ಸಂಪರ್ಕ ಕಳೆದುಕೊಂಡ ಸ್ಥಳೀಯ ನಿವಾಸಿಗಳು ತೊಂದರೆಗೊಳಗಾಗಿದ್ದು, ಸ್ಥಳೀಯ ಆಡಳಿತ ಮತ್ತು ಜನಪ್ರತಿನಿಧಿಗಳು ಗಮನಹರಿಸಿ ರಸ್ತೆಗೆ ಬಿದ್ದ ಗುಡ್ಡವನ್ನು ತೆರವುಗೊಳಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಈ ಕುರಿತು ಸ್ಥಳೀಯರು ಗ್ರಾಮ ಪಂಚಾಯತ್ ನ ಗಮನಕ್ಕೆ ತಂದಿದ್ದು, ಪಂಚಾಯತ್ ಅಭಿವೃದ್ಧಿ

ಅರಂತೋಡು: ಗುಡ್ಡ ಕುಸಿತ ➤ ರಸ್ತೆ ಸಂಚಾರ ಬಂದ್…! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಟ್ಲ: ಮನೆ ಮೇಲೆ ಉರುಳಿಬಿದ್ದ ಮರ- ಮನೆಗೆ ಹಾನಿ

(ನ್ಯೂಸ್ ಕಡಬ) newskadaba.com ವಿಟ್ಲ, ಜು. 06. ಕೊಳ್ನಾಡು ಗ್ರಾಮದ ಸೆರ್ಕಳ ಸಂಕಪ್ಪ ಸಫಲ್ಯ ಎಂಬವರ ಮನೆ ಮೇಲೆ ಅತ್ತಿ ಮರವೊಂದು ಉರುಳಿಬಿದ್ದ ಘಟನೆ ವರದಿಯಾಗಿದೆ. ಘಟನೆಯಿಂದ ಮನೆ ಮಾಲಿಕ ಸಂಕಪ್ಪ ಸಫಲ್ಯ ಎಂಬವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದು, ಅಂದಾಜು 30,000 ರೂ. ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಕೊಳ್ನಾಡು ಗ್ರಾಮಕರಣಿಕ ಮಂಜುನಾಥ, ಪಿಡಿಒ ಭೇಟಿ, ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಟ್ಲ: ಮನೆ ಮೇಲೆ ಉರುಳಿಬಿದ್ದ ಮರ- ಮನೆಗೆ ಹಾನಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಚಲಿಸುತ್ತಿದ್ದ ಬಸ್ ನಲ್ಲಿ ಹಠಾತ್ತನೆ ಕಾಣಿಸಿಕೊಂಡ ಬೆಂಕಿ ➤ ತಪ್ಪಿದ ದುರಂತ

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 06. ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನ ಇಂಜಿನ್ ನಲ್ಲಿ ಹಠಾತ್ತನೆ ಬೆಂಕಿ ಕಾಣಿಸಿಕೊಂಡ ಘಟನೆ ಇಲ್ಲಿನ ಮುಖ್ಯರಸ್ತೆಯ ಮಯೂರ ಚಿತ್ರಮಂದಿರದ ಬಳಿ ನಡೆದಿದೆ.   ತಕ್ಷಣವೇ ಸಮೀಪದ ಟಾಟಾ ಸಂಸ್ಥೆಯ ಸಹಾಯದಿಂದ ಅಗ್ನಿಶಾಮಕ ದಳದ ಸಿಬ್ಬಂದಿಗಳ ಸಹಕಾರದಿಂದ ಇಂಜಿನ್ ನಲ್ಲಿ ಕಾಣಿಸಿಕೊಂಡ ಬೆಂಕಿಯನ್ನು ನಂದಿಸಿದ್ದಾರೆ ಎನ್ನಲಾಗಿದೆ. ಇಂಜಿನ್ ನಲ್ಲಿನ ಬ್ಯಾಟರಿ ಸಮಸ್ಯೆಯಿಂದಾಗಿ ಈ ಘಟನೆ ಸಂಭವಿಸಿದೆನ್ನಲಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಪುತ್ತೂರು: ಚಲಿಸುತ್ತಿದ್ದ ಬಸ್ ನಲ್ಲಿ ಹಠಾತ್ತನೆ ಕಾಣಿಸಿಕೊಂಡ ಬೆಂಕಿ ➤ ತಪ್ಪಿದ ದುರಂತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಫಾಸ್ಟ್ ಪುಡ್ ಅಂಗಡಿಯಲ್ಲಿ ಬೆಂಕಿ ಅವಘಡ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 06. ಇಲ್ಲಿನ ಮೇರಿಹಿಲ್ ಎಂಬಲ್ಲಿ ಫಾಸ್ಟ್ ಫುಡ್ ಅಂಗಡಿಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ವರದಿಯಾಗಿದೆ. ಚಂದು ಬಿರಿಯಾನಿ ಸ್ಪಾಟ್ ಎಂಬ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಮಂಗಳೂರು: ಫಾಸ್ಟ್ ಪುಡ್ ಅಂಗಡಿಯಲ್ಲಿ ಬೆಂಕಿ ಅವಘಡ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ➤ ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಜು.06. ಚಾಲಕನ ನಿಯಂತ್ರಣ ತಪ್ಪಿದ ಮಾರುತಿ ಸೆಲೆರಿಯೋ ಕಾರೊಂದು ಪಲ್ಟಿಯಾದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ಸಮೀಪದ ಹಳೇಸ್ಟೇಷನ್ ಎಂಬಲ್ಲಿ ಬುಧವಾರದಂದು ನಡೆದಿದೆ. ಗಾಯಾಳುಗಳನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.    

ಕಡಬ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ➤ ಇಬ್ಬರು ಗಂಭೀರ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ನೇತ್ರಾವತಿ ನದಿಯಲ್ಲಿ ನೀರುಪಾಲಾದ ಯುವಕನ ಮೃತದೇಹ ಉಳ್ಳಾಲದಲ್ಲಿ ಪತ್ತೆ..!!

(ನ್ಯೂಸ್ ಕಡಬ) newskadaba.com ಉಳ್ಳಾಲ, ಜು. 06. ಸಜಿಪಪಡು ಗ್ರಾಮದ ತಲೆಮೊಗರು ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಭಾನುವಾರ ಸಂಜೆ ಸ್ನೇಹಿತರೊಂದಿಗೆ ಈಜಲು ಹೋಗಿ ನೀರುಪಾಲಾಗಿದ್ದ ಯುವಕನ ಮೃತದೇಹವು ಉಳ್ಳಾಲದ ಕೋಟೆಪುರ ಕೋಡಿಯ ಸಮುದ್ರ ತೀರದಲ್ಲಿ ಬುಧವಾರದಂದು ಪತ್ತೆಯಾಗಿದೆ. ಮೃತ ಯುವಕನನ್ನು ಅಶ್ವಿತ್(19) ಎಂದು ಗುರುತಿಸಲಾಗಿದೆ. ಈತ ಸಜಿಪಪಡುವಿನ ತಲೆಮೊಗರು ನಾಗೇಶ್ ಗಾಣಿಗ ಎಂಬವರ ಮನೆಯಲ್ಲಿ ಮಗುವಿನ ತೊಟ್ಟಿಲು ತೂಗುವ ಸಮಾರಂಭದಲ್ಲಿ ಪಾಲ್ಗೊಂಡು, ಬಳಿಕ ಹರ್ಷ ಎಂಬಾತನೊಂದಿಗೆ ಸಮೀಪದ ನೇತ್ರಾವತಿ ನದಿಗೆ ಈಜಲು ತೆರಳಿದ್ದು, ಈ ವೇಳೆ ಅಶ್ವಿತ್

ನೇತ್ರಾವತಿ ನದಿಯಲ್ಲಿ ನೀರುಪಾಲಾದ ಯುವಕನ ಮೃತದೇಹ ಉಳ್ಳಾಲದಲ್ಲಿ ಪತ್ತೆ..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top