ಬ್ರೇಕಿಂಗ್ ನ್ಯೂಸ್

ಮರವೂರು ಸೇತುವೆ ಮೇಲೆ ಕೀ, ಹೆಲ್ಮೆಟ್ ಸಹಿತ ಬೈಕ್ ಪತ್ತೆ..!! ➤ ಆತ್ಮಹತ್ಯೆ ಶಂಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 06. ಇಲ್ಲಿನ ವಿಮಾನ ನಿಲ್ದಾಣ ರಸ್ತೆಯ ಮರವೂರು ಸೇತುವೆ ಮೇಲೆ ಇಂದು ಬೆಳಗ್ಗೆ ಬೈಕ್, ಕೀ ಮತ್ತು ಹಲ್ಮೆಟ್ ಪತ್ತೆಯಾಗಿದ್ದು, ಯಾರೋ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸೇತುವೆ ಮೇಲೆ ಬೈಕ್, ಕೀ ಮತ್ತು ಹೆಲ್ಮೆಟ್ ಕಂಡುಬಂದಿದ್ದು, ತುಂಬಾ ಹೊತ್ತಾದರೂ ಯಾರೂ ಬೈಕ್ ಕೊಂಡೊಯ್ಯಲು ಬಾರದೇ ಇದ್ದುದರಿಂದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬೈಕ್ ನ್ನು ಸೇತುವೆ ಮೇಲೆ ನಿಲ್ಲಿಸಿ ಸವಾರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಮರವೂರು ಸೇತುವೆ ಮೇಲೆ ಕೀ, ಹೆಲ್ಮೆಟ್ ಸಹಿತ ಬೈಕ್ ಪತ್ತೆ..!! ➤ ಆತ್ಮಹತ್ಯೆ ಶಂಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗುಂಡ್ಯ: ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಢಿಕ್ಕಿ ➤ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಗುಂಡ್ಯ, ಜು. 06. ಕಾರು ಮತ್ತು ಬಸ್ಸು ನಡುವೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಚಾಲಕ ಹಾಗೂ ಮಗುವಿಗೆ ಗಾಯಗಳಾದ ಘಟನೆ ರಾ ಹೆ. 75ರ ಗುಂಡ್ಯ ಸಮೀಪದ ಬರ್ಚಿನ ಹಳ್ಳ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಇಕ್ಬಾಲ್ ಹಾಗೂ ನಿಹಾಲ್ ಎಂದು ಗುರುತಿಸಲಾಗಿದೆ. ಧರ್ಮಸ್ಥಳದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಬಸ್ಸಿಗೆ ಹಾಸನದಿಂದ ಮಂಗಳೂರಿಗೆ ಬರುತ್ತಿದ್ದ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದಿದ್ದು, ಪರಿಣಾಮ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಕಾರಿನಲ್ಲಿ ಒಟ್ಟು ಐದು ಪ್ರಯಾಣಿಕರಿದ್ದು ಉಳಿದವರು ಅಪಾಯದಿಂದ ಪಾರಾಗಿದ್ದಾರೆ.

ಗುಂಡ್ಯ: ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಢಿಕ್ಕಿ ➤ ಇಬ್ಬರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಿಸಿರೋಡ್: ಚೂರಿಯಿಂದ ಇರಿದು ಯುವಕನ ಕೊಲೆ ಪ್ರಕರಣ ➤ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 06. ಶಾಂತಿಅಂಗಡಿ ನಿವಾಸಿ ಮಹಮ್ಮದ್ ಆಸೀಫ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ‌. ಬಂಧಿತರನ್ನು ಬಂಟ್ವಾಳ ಮಾರಿಪಳ್ಳ ನಿವಾಸಿಗಳಾದ ಮಹಮ್ಮದ್ ನೌಫಾಲ್ ಹಾಗೂ ಮಹಮ್ಮದ್ ನೌಶೀರ್ ಎಂದು ಗುರುತಿಸಲಾಗಿದೆ. ಮಹಮ್ಮದ್ ಆಸಿಫ್ ಹಾಗೂ ಆರೋಪಿಗಳು ಸ್ನೇಹಿತರಾಗಿದ್ದು, ಸೋಮವಾರ ಮಧ್ಯರಾತ್ರಿ 1 ಗಂಟೆಯ ವೇಳೆಗೆ ಬಂಟ್ವಾಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಚೂರಿಯಿಂದ ಇರಿದು‌ ಆಸಿಪೊ್ ಎಂಬಾತನನ್ನು ಕೊಲೆ ಮಾಡಲಾಗಿತ್ತು.

ಬಿಸಿರೋಡ್: ಚೂರಿಯಿಂದ ಇರಿದು ಯುವಕನ ಕೊಲೆ ಪ್ರಕರಣ ➤ ಇಬ್ಬರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮುಂದುವರಿದ ವರುಣನ ಆರ್ಭಟ ➤ ನಾಳೆಯೂ (ಜು. 06) ದ.ಕ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು 05. ಜಿಲ್ಲಾದ್ಯಂತ ಭಾರೀ ಮಳೆ ಮುಂದುವರಿದಿದ್ದು ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬುಧವಾರವೂ (ಜು. 06) ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ನಿರಂತರ ಮಳೆಯಿಂದ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಸಾರ್ವಜನಿಕ ಹಿತಾಸಕ್ತಿಯ ಹಿನ್ನೆಲೆ ಎಲ್ಲಾ ಅಂಗನವಾಡಿ, ಶಾಲೆಗಳು, ಪಿಯು ಮತ್ತು ಪದವಿ ಕಾಲೇಜುಗಳಿಗೆ ಬುಧವಾರವೂ ರಜೆ ಘೋಷಿಸಲು ನಿರ್ಧರಿಸಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಮುಂದುವರಿದ ವರುಣನ ಆರ್ಭಟ ➤ ನಾಳೆಯೂ (ಜು. 06) ದ.ಕ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸರಳವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣ ➤ ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಜು. 05. ಸರಳವಾಸ್ತು ತಜ್ಞ ಚಂದ್ರಶೇಖರ ಗುರೂಜಿಯವರನ್ನು ಹತ್ಯೆಗೈದು ಕಾರಿನಲ್ಲಿ ಪರಾರಿಯಾಗಲು ಯತ್ನಿಸುತ್ತಿದ್ದ ಇಬ್ಬರು ಹಂತಕರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ವರದಿಯಾಗಿದೆ. ಬಂಧಿತ ಹಂತಕರನ್ನು ಕಲಘಟಗಿ ತಾಲೂಕು ಧುಮ್ಮವಾಡ ಗ್ರಾಮದ ಮಹಾಂತೇಶ ಶಿರೂರ ಹಾಗೂ ಮಂಜುನಾಥ ಮರೇವಾಡ ಎಂದು ಗುರುತಿಸಲಾಗಿದೆ. ಆರೋಪಿಗಳಿಬ್ಬರು ಕಾರಿನಲ್ಲಿ ಬೆಳಗಾವಿ ಕಡೆಗೆ ಹೋಗುತ್ತಿದ್ದ ಖಚಿತ ಮಾಹಿತಿಯನ್ನು ಪಡೆದ ಇನ್ಸ್ ಪೆಕ್ಟರ್ ಜಗದೀಶ ಹಂಚಿನಾಳ ನೇತೃತ್ವದ ತನಿಖಾ ತಂಡವು ಇಬ್ಬರನ್ನು ವಶಕ್ಕೆ ಪಡೆದು ಕರೆತರುತ್ತಿರುವುದಾಗಿ ಪೊಲೀಸ್ ಮೂಲಗಳು

ಸರಳವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣ ➤ ಆರೋಪಿಗಳ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಹೆಬ್ಬಾವನ್ನು ಕೊಂದು ಕಟ್ಟಿಹಾಕಿದ ಪ್ರಕರಣ ➤ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 05. ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿಯಲ್ಲಿನ ಗ್ರಾಮ ಅರಣ್ಯ ಸಮಿತಿ ಕಟ್ಟಡದ ಬಾಗಿಲಿಗೆ ಹೆಬ್ಬಾವನ್ನು ಕೊಂದು ಕಟ್ಟಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪುತ್ತೂರು ಅರಣ್ಯ ಇಲಾಖೆ ಸಿಬ್ಬಂದಿಗಳು ಬಂಧಿಸಿದ ಘಟನೆ ನಡೆದಿದೆ. ಬಂಧಿತರನ್ನು ಕೊಳ್ತಿಗೆ ಗ್ರಾಮದ ಶೇಡಿಗುರಿ ನಿವಾಸಿ ಧನಂಜಯ ಮತ್ತು ಜಯ ಎಂದು ಗುರುತಿಸಲಾಗಿದೆ. ಆರೋಪಿಗಳಿಗೆ ನ್ಯಾಯಾಲಯವು ಜು.15 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಇವರು ತಮ್ಮ ಮನೆ ಬಳಿ ಬಂದಿದ್ದ ಹೆಬ್ಬಾವನ್ನು ಹಿಡಿದು ಕೊಂದು ಗ್ರಾಮ

ಪುತ್ತೂರು: ಹೆಬ್ಬಾವನ್ನು ಕೊಂದು ಕಟ್ಟಿಹಾಕಿದ ಪ್ರಕರಣ ➤ ಇಬ್ಬರ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ಳಾರೆ: ಕಾಳುಮೆಣಸು ಕಳ್ಳತನ ➤ ನಾಲ್ವರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜು. 05. ಕಳ್ಳರು ಇಲ್ಲಿನ ಮನೆಯೊಂದರಿಂದ ಕದ್ದಿದ್ದ 10 ಗೋಣಿ ಕಾಳುಮೆಣಸನ್ನು ಸಾಗಿಸುತ್ತಿದ್ದ ವೇಳೆ ಬೆಳ್ಳಾರೆ ಠಾಣಾ ಪೊಲೀಸರ ಕೈಗೆ ಸಿಕ್ಕಿಬಿದ್ದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಗಳನ್ನು ಸುಳ್ಯ ತಾಲೂಕಿನ ಕಳಂಜಿ ಮನೆ ನಿವಾಸಿ ಮಂಜು, ಕೊಡಿಯಭೈಲು ಮನೆ ನಿವಾಸಿ ಪ್ರವೀಣ, ಜಾಲ್ಸೂರು ಗ್ರಾಮದ ಬರ್ಪೆಡ್ಕ ನಿವಾಸಿ ಪವನ್ ಕುಮಾರ್ ಹಾಗು ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಅಬ್ದುಲ್ ಬಾಶೀತ್ ಎಂದು ಗುರುತಿಸಲಾಗಿದೆ. ಈ ಕೃತ್ಯದಲ್ಲಿ ಒಟ್ಟು ಐವರು ಭಾಗಿಯಾಗಿದ್ದು ಇನ್ನೊಬ್ಬ

ಬೆಳ್ಳಾರೆ: ಕಾಳುಮೆಣಸು ಕಳ್ಳತನ ➤ ನಾಲ್ವರು ಆರೋಪಿಗಳು ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕೊಕ್ಕಡ: ಅನ್ಯಕೋಮಿನ ಅಪ್ರಾಪ್ತ ಜೋಡಿ ಪತ್ತೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 05. ಧರ್ಮಸ್ಥಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರಕಾರಿ ಬಸ್ ನಲ್ಲಿ ಅನ್ಯಕೋಮಿನ ಅಪ್ರಾಪ್ತ ಜೋಡಿಯನ್ನು ತಡೆದ ಹಿಂದೂ ಸಂಘಟನಾ ಕಾರ್ಯಕರ್ತರು ಧರ್ಮಸ್ಥಳ ಪೊಲೀಸರಿಗೊಪ್ಪಿಸಿದ ಘಟನೆ ಕೊಕ್ಕಡದಲ್ಲಿ ಸೋಮವಾರದಂದು ರಾತ್ರಿ ನಡೆದಿದೆ.   ಬೆಂಗಳೂರು ಜಿಲ್ಲೆಯ ದೇವನಹಳ್ಳಿಯ ವ್ಯಾಪ್ತಿಯ ಒಂದೇ ಕಾಲೇಜಿನ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಬ್ಬರು (ಹಿಂದೂ ಬಾಲಕಿ ಮತ್ತು ಮುಸ್ಲಿಂ ಬಾಲಕ) ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬಂದು ರಾತ್ರಿ ವಾಪಾಸ್ ಬಸ್ ನಲ್ಲಿ ಹೋಗುತ್ತಿದ್ದ ವೇಳೆ ಮಾಹಿತಿ ತಿಳಿದ ಹಿಂದೂ ಸಂಘಟನಾ

ಕೊಕ್ಕಡ: ಅನ್ಯಕೋಮಿನ ಅಪ್ರಾಪ್ತ ಜೋಡಿ ಪತ್ತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ: ವಿಷ ಸೇವಿಸಿ ಪೌರಕಾರ್ಮಿಕ ಆತ್ಮಹತ್ಯೆ..!!

(ನ್ಯೂಸ್ ಕಡಬ) newskadaba.com ಸುಳ್ಯ, ಜು. 05. ವ್ಯಕ್ತಿಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದುಗಲಡ್ಕದಿಂದ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ದುಗಲಡ್ಕ ನೀರಬಿದಿರೆ ನಿವಾಸಿ ದೇವನಾಥ ಎಂದು ಗುರುತಿಸಲಾಗಿದೆ. ನಗರ ಪಂಚಾಯತ್ ನಲ್ಲಿ ಕಸ ಸಂಗ್ರಹ ಮತ್ತು ವಿಲೇವಾರಿ ಘಟಕದಲ್ಲಿ ಪೌರ ಕಾರ್ಮಿಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಇವರು, ನಿನ್ನೆ ವಿಷ ಸೇವಿಸಿದ್ದು, ಕೂಡಲೇ ವಿಷಯ ತಿಳಿದ ಸ್ನೇಹಿತರು ಸುಳ್ಯದ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅದಾಗಲೇ ಮೃತಪಟ್ಟಿದ್ದಾರೆ. ಆತ್ಮಹತ್ಯೆಗೆ ನಿಖರ

ಸುಳ್ಯ: ವಿಷ ಸೇವಿಸಿ ಪೌರಕಾರ್ಮಿಕ ಆತ್ಮಹತ್ಯೆ..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸರಳವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಹತ್ಯೆ..!!

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಜು. 05. ಮಾನವಗುರು, ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಅವರನ್ನು ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಹತ್ಯೆ ಮಾಡಿದ ಘಟನೆ ವರದಿಯಾಗಿದೆ. ಭಕ್ತರ ಸೋಗಿನಲ್ಲಿ ಬಂದ ಆಗಂತುಕನೋರ್ವ ಚಂದ್ರಶೇಖರ್ ಗುರೂಜಿಗೆ ಚೂರಿಯಿಂದ ಇರಿದು ಹತ್ಯೆ ಮಾಡಿ, ಬಳಿಕ ಪರಾರಿಯಾಗುತ್ತಿರುವ ದೃಶ್ಯ ವೈರಲ್ ಆಗಿದೆ. ಚಂದ್ರಶೇಖರ್ ಗುರೂಜಿ ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ನಗರ ಪೊಲಿಸ್ ಆಯುಕ್ತ ಲಾಬೂರಾಮ್ ಭೇಟಿ ನೀಡಿ ಸಿಸಿಕ್ಯಾಮರಾ ದೃಶ್ಯಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಸರಳವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಹತ್ಯೆ..!! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top