ಬ್ರೇಕಿಂಗ್ ನ್ಯೂಸ್

ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಮಗುಚಿಬಿದ್ದ ಲಾರಿ ➤ ಸವಾರ ದುರ್ಮರಣ

(ನ್ಯೂಸ್ ಕಡಬ) newskadaba.com ಪಡುಬಿದ್ರಿ, ಜು. 05. ಲಾರಿಯೊಂದು ದ್ವಿಚಕ್ರ ವಾಹನದ ಮೇಲೆ ಮಗುಚಿ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪಡುಬಿದ್ರೆ ಜಂಕ್ಷನ್‌ ನಲ್ಲಿ ಇಂದು ನಡೆದಿದೆ. ಮೃತ ದ್ವಿಚಕ್ರ ವಾಹನ ಸವಾರನನ್ನು ಸಂಶುದ್ದೀನ್‌ ಎಂದು ಗುರುತಿಸಲಾಗಿದೆ. ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನದ ಮೇಲೆ ಮಗುಚಿಬಿದ್ದಿದ್ದು, ಪರಿಣಾಮ ಸವಾರ ಸಂಶುದ್ದೀನ್‌ ಅವರು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಮಗುಚಿಬಿದ್ದ ಲಾರಿ ➤ ಸವಾರ ದುರ್ಮರಣ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿಟ್ಲ: ಗುಡ್ಡ ಕುಸಿತ ➤ ಕರ್ನಾಟಕ- ಕೇರಳ ಸಂಚಾರ ಬಂದ್…!!

(ನ್ಯೂಸ್ ಕಡಬ) newskadaba.com ವಿಟ್ಲ, ಜು. 05. ಜಿಲ್ಲೆಯಾದ್ಯಂತ ವಿಪರೀತ ಮಳೆ ಸುರಿಯುತ್ತಿದ್ದು, ಕಲ್ಲಡ್ಕ, ಕಾಂಞಂಗಾಡ್ ಅಂತರಾಜ್ಯ ಹೆದ್ದಾರಿಯ ಸಾರಡ್ಕ ಬಳಿ ಗುಡ್ಡ ಕುಸಿದುಬಿದ್ದಿದ್ದು, ಕರ್ನಾಟಕ ಕೇರಳ ಸಂಚಾರ ಬಂದ್ ಆಗಿದೆ. ಗುಡ್ಡ ಕುಸಿದಿದ್ದರಿಂದ ಪೆರ್ಲ, ಬದಿಯಡ್ಕ, ಕಾಸರಗೋಡು ಸಂಚಾರಕ್ಕೆ ಅಡ್ಡಿಯಾಗಿದೆ. ಅಲ್ಲದೇ ರಸ್ತೆ ಮಧ್ಯದಲ್ಲಿ ದೊಡ್ಡ ರಂಧ್ರ ನಿರ್ಮಾಣವಾಗಿದ್ದು, ರಸ್ತೆಯ ನೀರು ಅದರೊಳಗೆ ಇಳಿಯುತ್ತಿದ್ದು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ.

ವಿಟ್ಲ: ಗುಡ್ಡ ಕುಸಿತ ➤ ಕರ್ನಾಟಕ- ಕೇರಳ ಸಂಚಾರ ಬಂದ್…!! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮುಂದುವರಿದ ವರುಣನ ಆರ್ಭಟ ➤ ಹಳ್ಳದಲ್ಲಿ ಕೊಚ್ಚಿಹೋಗಿ ಏಳು ವರ್ಷದ ಬಾಲಕಿ ಮೃತ್ಯು..!!

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಜು. 05. ಶಾಲಾ ವಿದ್ಯಾರ್ಥಿನಿಯೋರ್ವಳು ಕಿರು ಸೇತುವೆ ದಾಟುತ್ತಿದ್ದ ವೇಳೆ ಕಾಲುಜಾರಿ ಹಳ್ಳಕ್ಕೆ ಬಿದ್ದು ನೀರಿನಲ್ಲಿ ಕೊಚ್ಚಿಹೋದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ವಿದ್ಯಾರ್ಥಿನಿಯನ್ನು ಸುಪ್ರೀತ ಎಂದು ಗುರುತಿಸಲಾಗಿದೆ. ಈಕೆ ಶಾಲೆ ಬಿಟ್ಟು ಸಂಜೆ ಮನೆಗೆ ತೆರಳುತ್ತಿದ್ದು, ಹೊಸಪೇಟೆ ಗ್ರಾಮದ ಕಾಫಿ ಎಸ್ಟೇಟ್ ನಲ್ಲಿರುವ ಹಳ್ಳವನ್ನು ದಾಟುವ ವೇಳೆ ಕಾಲು ಜಾರಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾಳೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿದ್ದು, ಮಗುವಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

ಮುಂದುವರಿದ ವರುಣನ ಆರ್ಭಟ ➤ ಹಳ್ಳದಲ್ಲಿ ಕೊಚ್ಚಿಹೋಗಿ ಏಳು ವರ್ಷದ ಬಾಲಕಿ ಮೃತ್ಯು..!! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಗಂಡನನ್ನೇ ಕತ್ತಿಯಿಂದ ಕಡಿದು ಕೊಲೆ ಮಾಡಿದ ಪತ್ನಿ..!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 05. ಪತ್ನಿಯೋರ್ವಳು ಮಲಗಿದ್ದ ಗಂಡನನ್ನು ಕತ್ತಿಯಿಂದ ಕಡಿದು ಕೊಂದ ಘಟನೆ ನಾವೂರು ಗ್ರಾಮದ ಅಬ್ಬನಕೆರೆ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ಕೊಲೆಯಾದವರನ್ನು ಪೊಟ್ಟಸ್ ಬೇಬಿ (55) ಎಂದು ಗುರುತಿಸಲಾಗಿದೆ. ಈತನ ಪತ್ನಿ ನಲ್ಲಮ್ಮ(50) ಎಂಬಾಕೆ ಕೊಲೆ ಮಾಡಿದ್ದಾರೆ‌. ದಂಪತಿಗೆ ಒಬ್ಬ ಪುತ್ರಿ ಹಾಗೂ ಇಬ್ಬರು ಗಂಡು ಮಕ್ಕಳಿದ್ದು ಓರ್ವ ಮಗ ಉಪ್ಪಿನಂಗಡಿಯಲ್ಲಿ ಸ್ವಂತ ಉದ್ಯೋಗ ಮಾಡುತ್ತಿದ್ದು, ಇನ್ನೋರ್ವ ವಿದೇಶದಲ್ಲಿ ಉದ್ಯೋಗದಲ್ಲಿದ್ದಾರೆ. ಮಗಳನ್ನು ಮದುವೆ ಮಾಡಿಕೊಡಲಾಗಿದೆ. ಈ ಕುರಿತು ಹೆಚ್ಚಿನ‌ ಮಾಹಿತಿ

ಬೆಳ್ತಂಗಡಿ: ಗಂಡನನ್ನೇ ಕತ್ತಿಯಿಂದ ಕಡಿದು ಕೊಲೆ ಮಾಡಿದ ಪತ್ನಿ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಾಣಿ: ಮುಂದುವರಿದ ಸರಣಿ ಕಳ್ಳತನ ➤ ವರ್ತಕರ ಆಕ್ರೋಶ

(ನ್ಯೂಸ್ ಕಡಬ) newskadaba.com ಮಾಣಿ, ಜು. 04. ಇಲ್ಲಿನ ಪೇಟೆಯ ತರಕಾರಿ ಅಂಗಡಿ ಹಾಗೂ ಬೇಕರಿ ಅಂಗಡಿಗಳಿಗೆ ಶನಿವಾರದಂದು ರಾತ್ರಿ ನುಗ್ಗಿದ ಕಳ್ಳರು ಚಿಲ್ಲರೆ ಹಣವನ್ನು ಕದ್ದೊಯ್ದಿದ್ದು, ಮರುದಿನ ಮತ್ತೆ ರಾತ್ರಿ ಮಾಣಿ ಪೆಟ್ರೋಲ್ ಬಂಕ್ ಹತ್ತಿರ ಇರುವ ಟಯರ್ ಅಂಗಡಿ ಹಾಗೂ ಹಳೀರದಲ್ಲಿರುವ ಮತ್ತೊಂದು ಟಯರ್ ಅಂಗಡಿಗೆ ನುಗ್ಗಿ ಟೈರುಗಳನ್ನು ಕದ್ದುಕೊಂಡು ಹೋಗಿರುವ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಆಕ್ರೋಶಗೊಂಡ ವರ್ತಕರು, ರಾತ್ರಿ ವೇಳೆ ಅಂಗಡಿಗೆ ಬೀಗ ಹಾಕಿ ಮನೆಗೆ ಹೋಗಿ ನೆಮ್ಮದಿಯಿಂದ ಮಲಗುವಂತಿಲ್ಲ,

ಮಾಣಿ: ಮುಂದುವರಿದ ಸರಣಿ ಕಳ್ಳತನ ➤ ವರ್ತಕರ ಆಕ್ರೋಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಕ್ರಮ ಗೋಸಾಗಾಟ ➤ ಇಬ್ಬರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಕಾರ್ಕಳ, ಜು. 04. ಕಾರಿನಲ್ಲಿ ಹಿಂಸಾತ್ಮಕವಾಗಿ ಗೋಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಸಿನಿಮಾ ಶೈಲಿಯಲ್ಲಿ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ಕಾರ್ಕಳದಲ್ಲಿ ನಡೆದಿದೆ. ಬಂಧಿತರನ್ನು ಶಕೀಲ್ ಅಹಮದ್ ಹಾಗೂ ಸಹೋದರ ಅಖಿಲ್ ಅಹಮದ್ ಎಂದು ಗುರುತಿಸಲಾಗಿದೆ. ರಾತ್ರಿ ವೇಳೆ ದನಗಳನ್ನು ಕದಿಯುತ್ತಿದ್ದ ಇವರು, ರಸ್ತೆ ಬದಿಯಲ್ಲಿ ಮಲಗಿದ್ದ ಎರಡು ಗೋವುಗಳನ್ನು ಕಳವುಮಾಡಿ ಕಾರಿನಲ್ಲಿ ಹಿಂಸಾತ್ಮಕವಾಗಿ ತುಂಬಿಸಿಕೊಂಡು ಸಾಗಿಸುತ್ತಿದ್ದ ವೇಳೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು

ಅಕ್ರಮ ಗೋಸಾಗಾಟ ➤ ಇಬ್ಬರು ಪೊಲೀಸ್ ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿಟ್ಲ: ಅನ್ಯಕೋಮಿನ ಜೋಡಿ ಮದುವೆ ➤ ರಿಜಿಸ್ಟರ್ ಪತ್ರ ವೈರಲ್..!!

(ನ್ಯೂಸ್ ಕಡಬ) newskadaba.com ವಿಟ್ಲ, ಜು. 04. ಅನ್ಯಕೋಮಿನ ಯುವಕನೋರ್ವ ಹಿಂದೂ ಯುವತಿಯನ್ನು ಮದುವೆಯಾದ ಘಟನೆ ಮೈಸೂರಿನಲ್ಲಿ ನಡೆದಿದೆ. ವಿಟ್ಲ ನೀರಕಣಿ ಮಾರ್ನೆಮಿಗುಡ್ಡೆ ನಿವಾಸಿ ಉಬೈದ್ ಎಂಬಾತ ಮೈಸೂರು ಲೋಕನಾಯಕನ ನಗರದ ಸೌಂದರ್ಯ ಎಂಬಾಕೆಯನ್ನು ಮೈಸೂರಿನಲ್ಲಿ ರಿಜಿಸ್ಟರ್ ಮದುವೆಯಾಗಿದ್ದು, ಇದೀಗ ಅವರ ವಿವಾಹ ಪತ್ರವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆಯೇ ಕೆಲವು ದಿನಗಳ ಹಿಂದೆ ಈ ಜೋಡಿ ವಿಟ್ಲದಲ್ಲಿ ತಿರುಗಾಡುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ರಿಜಿಸ್ಟರ್ ಮದುವೆಯಾದ ಈ ಜೋಡಿಯ ರಿಸೆಪ್ಶನ್ ಕೂಡಾ ಇದೇ ತಿಂಗಳು ನಡೆಯಲಿದ್ದು,

ವಿಟ್ಲ: ಅನ್ಯಕೋಮಿನ ಜೋಡಿ ಮದುವೆ ➤ ರಿಜಿಸ್ಟರ್ ಪತ್ರ ವೈರಲ್..!! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದುಬೈನಿಂದ ಮಂಗಳೂರಿಗೆ ಅಕ್ರಮ ಚಿನ್ನ ಸಾಗಾಟ ➤ ಲಕ್ಷಾಂತರ ರೂ. ಮೌಲ್ಯದ ಚಿನ್ನ ಸಹಿತ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 04. ಇಲ್ಲಿನ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಚಿನ್ನ ವಶಕ್ಕೆ ಪಡೆದ ಘಟನೆ ವರದಿಯಾಗಿದೆ. ಕಾಸರಗೋಡು ಮೂಲದ ವ್ಯಕ್ತಿಯೋರ್ವ ದುಬೈನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದು, ಈತನಿಂದ 24 ಕ್ಯಾರೆಟ್ ನ 602.200 ಗ್ರಾಂ ತೂಕದ 31,31,440 ಮೌಲ್ಯದ ಚಿನ್ನ ವಶಕ್ಕೆ ಪಡೆದುಕೊಳ್ಳಲಾಗಿದೆ. ಈತ ಚಿನ್ನವನ್ನು ಹಾಲಿನ ಹುಡಿಯ ಪ್ಯಾಕೇಟ್ ನಲ್ಲಿರಿಸಿ ಸಾಗಾಟಕ್ಕೆ ಯತ್ನಿಸಿದ್ದ ಎನ್ನಲಾಗಿದೆ. ಕಸ್ಟಮ್ಸ್

ದುಬೈನಿಂದ ಮಂಗಳೂರಿಗೆ ಅಕ್ರಮ ಚಿನ್ನ ಸಾಗಾಟ ➤ ಲಕ್ಷಾಂತರ ರೂ. ಮೌಲ್ಯದ ಚಿನ್ನ ಸಹಿತ ಆರೋಪಿ ಅರೆಸ್ಟ್..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪುತ್ತೂರು: ಭಾರೀ ಗಾಳಿಮಳೆಗೆ ರಸ್ತೆಗೆ ಉರುಳಿಬಿದ್ದ ಬೃಹತ್ ಮರ ಹಾಗೂ ವಿದ್ಯುತ್ ಕಂಬ ➤ ಸಂಚಾರ ಸ್ಥಗಿತ..!!

(ನ್ಯೂಸ್ ಕಡಬ) newskadaba.com ಕಾವು, ಜು. 04. ಭಾನುವಾರ ರಾತ್ರಿ ಬೀಸಿದ ಗಾಳಿಗೆ ಬೃಹತ್ ಗಾತ್ರದ ಮರವೊಂದು ಮುರಿದುಬಿದ್ದ ಪರಿಣಾಮ ಗಂಟೆಗಳ ಕಾಲ ವಾಹನ ಸಂಚಾರ ಸ್ಥಗಿತಗೊಂಡ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾವು ಕುಡ್ಪುನಡ್ಕ ಎಂಬಲ್ಲಿ ನಡೆದಿದೆ. ಬೃಹತ್ ಮರದ ಜೊತೆಗೆ ವಿದ್ಯುತ್ ಕಂಬಗಳೂ ಮುರಿತಕ್ಕೊಳಗಾಗಿ ವಿದ್ಯುತ್ ಸಂಪರ್ಕವೂ ಕಡಿತಗೊಂಡಿದೆ. ರಸ್ತೆ ಬದಿಯಲ್ಲಿನ ಮರವೊಂದು ಗಾಳಿಗೆ ಮುರಿದು ಬಿದ್ದಿದರಿಂದಾಗಿ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಗಿದ್ದು, ಅರಣ್ಯ ಮತ್ತು ಮೆಸ್ಕಾಂ ಇಲಾಖೆಯವರು ಸಾರ್ವಜನಿಕರ ಸಹಕಾರದೊಂದಿಗೆ ಮರ ತೆರವು,

ಪುತ್ತೂರು: ಭಾರೀ ಗಾಳಿಮಳೆಗೆ ರಸ್ತೆಗೆ ಉರುಳಿಬಿದ್ದ ಬೃಹತ್ ಮರ ಹಾಗೂ ವಿದ್ಯುತ್ ಕಂಬ ➤ ಸಂಚಾರ ಸ್ಥಗಿತ..!! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಅಕ್ರಮ ಮರ ಸಾಗಾಟ ➤ ವಾಹನ ಸಹಿತ ಓರ್ವ ಸಹಿತ ವಶಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಜು. 04. ಮರ ಕಡಿದು ಅಕ್ರಮ ಸಾಗಾಟ ಮಾಡಿರುವ ಆರೋಪಕ್ಕೆ ಸಂಬಂಧಿಸಿ ಓರ್ವನನ್ನು ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿಗಳು ವಶಕ್ಕೆ ಪಡೆದ ಘಟನೆ ಐತ್ತೂರಿನಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಐತ್ತೂರು ಗ್ರಾಮದ ನೆಟ್ಟಣಬೈಲು ನಿವಾಸಿ ನಿತಿನ್ ಎಂದು ಗುರುತಿಸಲಾಗಿದೆ. ಸರಕಾರಿ ಜಾಗದಿಂದ ಮಾವು ಹಾಗೂ ಹಲಸಿನ ಮರಗಳನ್ನು ಅನುಮತಿ ಇಲ್ಲದೇ ಕಡಿದು ಲಾರಿಯಲ್ಲಿ ಸಾಗಾಟ ನಡೆಸಿದ್ದಾರೆ ಎಂಬ ಆರೋಪದಡಿ ಓರ್ವನನ್ನು ಬಂಧಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಕಡಬ: ಅಕ್ರಮ ಮರ ಸಾಗಾಟ ➤ ವಾಹನ ಸಹಿತ ಓರ್ವ ಸಹಿತ ವಶಕ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top