ಬ್ರೇಕಿಂಗ್ ನ್ಯೂಸ್

ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ: 19 ಕೆಜಿ ವಾಣಿಜ್ಯ ಸಿಲಿಂಡರ್‌ಗೆ ₹9.50 ಹೆಚ್ಚಳ

(ನ್ಯೂಸ್‌ ಕಡಬ) newskadaba.com,  ಸೆ.01: ಇಂದಿನಿಂದ ಜಾರಿಗೆ ಬರುವಂತೆ 19 ಕೆಜಿ ವಾಣಿಜ್ಯ ಎಲ್‌ಪಿಜಿ (LPG) ಸಿಲಿಂಡರ್ ಬೆಲೆಯಲ್ಲಿ ರೂ. 9.50 ಹೆಚ್ಚಿಸಲಾಗಿದೆ.ದರ ಏರಿಕೆಯಿಂದಾಗಿ ಹೋಟೆಲ್‌, ರೆಸ್ಟೋರೆಂಟ್‌ ಹಾಗೂ ಬೇಕರಿ ಮಾಲೀಕರಿಗೆ ನಿರ್ವಹಣಾ ವೆಚ್ಚ ಹೆಚ್ಚಾಗುವ ಆತಂಕ ಎದುರಾಗಿದೆ. 14.2 ಕೆಜಿ ತೂಕದ ಗೃಹ ಬಳಕೆ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. 5 ಕೆಜಿ ಹಾಗೂ 10 ಕೆಜಿ ಸಿಲಿಂಡರ್ ದರಗಳೂ ಸ್ಥಿರವಾಗಿವೆ.5 ಕೆಜಿ ನಾನ್-ಡೊಮೆಸ್ಟಿಕ್ (ವಾಣಿಜ್ಯ) ಸಿಲಿಂಡರ್ ದರ ರೂ. 762 ರಿಂದ ರೂ. […]

ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ: 19 ಕೆಜಿ ವಾಣಿಜ್ಯ ಸಿಲಿಂಡರ್‌ಗೆ ₹9.50 ಹೆಚ್ಚಳ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಿಸ್ ಮಾಡ್ದೆ ಓದಿ: ಸೆಪ್ಟೆಂಬರ್ 1ರಿಂದ ಇಂಟರ್ನ್ಯಾಷನಲ್ ಫ್ಲೈಟ್, ITR ಮತ್ತು LPG ನಿಯಮಗಳಲ್ಲಿ ಬಿಗ್ ಚೇಂಜ್!

(ನ್ಯೂಸ್‌ ಕಡಬ) newskadaba.com,  ಆ.31: ವ್ಯವಹಾರ ಅಥವಾ ವೃತ್ತಿಪರ ಆದಾಯ ಹೊಂದಿರುವವರು 2026-27ರ ಮೌಲ್ಯಮಾಪನ ವರ್ಷಕ್ಕೆ ತೆರಿಗೆ ರಿಟರ್ನ್ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದೆ.ಸೆಪ್ಟೆಂಬರ್ 1ರಿಂದ ಭಾರತದಿಂದ ಹೊರಡುವ ಅಂತಾರಾಷ್ಟ್ರೀಯ ಪ್ರಯಾಣಿಕರು ವಲಸೆ ಕೌಂಟರ್‌ಗಳಲ್ಲಿ ಬೋರ್ಡಿಂಗ್ ಪಾಸ್‌ಗೆ ಸ್ಟಾಂಪ್ ಹಾಕಿಸುವುದು ಅಗತ್ಯವಿಲ್ಲ. ಮೊಬೈಲ್‌ನಲ್ಲಿರುವ ಎಲೆಕ್ಟ್ರಾನಿಕ್ ಬೋರ್ಡಿಂಗ್ ಪಾಸ್ ತೋರಿಸಬಹುದು. ಎಲ್​​ಪಿಜಿ ಗ್ರಾಹಕರು ಆಗಸ್ಟ್ 31ರೊಳಗೆ ಇ-ಕೆವೈಸಿ ಪೂರ್ಣಗೊಳಿಸಬೇಕು. ಸಬ್ಸಿಡಿ ಮತ್ತು ನಿರಂತರ ಸೇವೆ ಪಡೆಯಲು ಆಧಾರ್ ಆಧಾರಿತ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ.₹3 ಕೋಟಿ ಅಥವಾ ಅದಕ್ಕಿಂತ

ಮಿಸ್ ಮಾಡ್ದೆ ಓದಿ: ಸೆಪ್ಟೆಂಬರ್ 1ರಿಂದ ಇಂಟರ್ನ್ಯಾಷನಲ್ ಫ್ಲೈಟ್, ITR ಮತ್ತು LPG ನಿಯಮಗಳಲ್ಲಿ ಬಿಗ್ ಚೇಂಜ್! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅನ್ನಭಾಗ್ಯ ಯೋಜನೆ: ಆಗಸ್ಟ್ ತಿಂಗಳು ರಾಜ್ಯ ಸರ್ಕಾರದ ಉಚಿತ ಅಕ್ಕಿ ಇಲ್ಲ

(ನ್ಯೂಸ್‌ ಕಡಬ) newskadaba.com,  ಆ.31: ರಾಜ್ಯದಲ್ಲಿ ಆಗಸ್ಟ್ ತಿಂಗಳ ಅನ್ನಭಾಗ್ಯ ಯೋಜನೆಯಡಿ ನೀಡಲಾಗುತ್ತಿದ್ದ ಹೆಚ್ಚುವರಿ ಅಕ್ಕಿ ವಿತರಣೆಗೆ ಹಿನ್ನಡೆಯಾಗಿದೆ. ಈ ತಿಂಗಳು ರಾಜ್ಯ ಸರ್ಕಾರದ ಪಾಲಿನ ಉಚಿತ ಅಕ್ಕಿ ಸಿಗುತ್ತಿಲ್ಲ. ಪ್ರಸ್ತುತ ಕೇಂದ್ರ ಸರ್ಕಾರದ ಪಾಲಿನ 4 ಕೆಜಿ ಅಕ್ಕಿ ಮತ್ತು 6 ಕೆಜಿ ರಾಗಿಯನ್ನು ಮಾತ್ರ ಪಡಿತರದಾರರಿಗೆ ವಿತರಿಸಲಾಗುತ್ತಿದೆ. ಮುಂದಿನ ತಿಂಗಳಿನಿಂದ ಅನ್ನಭಾಗ್ಯ ಯೋಜನೆಯ ಪೂರ್ಣ 10 ಕೆಜಿ ಉಚಿತ ಅಕ್ಕಿ ವಿತರಣೆ ನಿಯಮಿತವಾಗಿ ಮರುಆರಂಭಗೊಳ್ಳಲಿದೆ ಎಂದು ರೇಷನ್ ಅಂಗಡಿ ಮಾಲೀಕರು ತಿಳಿಸಿದ್ದಾರೆ.   ಆಹಾರ

ಅನ್ನಭಾಗ್ಯ ಯೋಜನೆ: ಆಗಸ್ಟ್ ತಿಂಗಳು ರಾಜ್ಯ ಸರ್ಕಾರದ ಉಚಿತ ಅಕ್ಕಿ ಇಲ್ಲ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಏಕರೂಪದ IST ಜಾರಿ: 180 ದಿನಗಳಲ್ಲಿ ದೇಶಾದ್ಯಂತ ಒಂದೇ ‘ಭಾರತೀಯ ಪ್ರಮಾಣಿತ ಸಮಯ’ ಕಡ್ಡಾಯ

(ನ್ಯೂಸ್‌ ಕಡಬ) newskadaba.com,  ಆ.31: ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆಯು ‘ಕಾನೂನು ಮಾಪನಶಾಸ್ತ್ರ (ಭಾರತೀಯ ಪ್ರಮಾಣಿತ ಸಮಯ) ನಿಯಮಗಳು-2026’ ಅಧಿಸೂಚನೆ ಹೊರಡಿಸಿದ್ದು, 180 ದಿನಗಳ ಒಳಗೆ ದೇಶಾದ್ಯಂತ ಏಕರೂಪದ ‘ಭಾರತೀಯ ಪ್ರಮಾಣಿತ ಸಮಯ ಅನುಷ್ಠಾನಗೊಳ್ಳಲಿದೆ. ವಿದೇಶಿ ಸಮಯ ಮೂಲಗಳ ಮೇಲಿನ ಅವಲಂಬನೆ ತಗ್ಗಿಸಿ, ಭಾರತದ ಸ್ವದೇಶಿ ಉಪಗ್ರಹ ಸಂಚರಣೆ ವ್ಯವಸ್ಥೆಯಾದ NavIC ಹಾಗೂ ಅನುಮೋದಿತ ಸಮಯ ಮೂಲಗಳನ್ನು ಬಳಸಿಕೊಂಡು ನಿಖರ ಸಮಯ ಪ್ರಸಾರ ಮಾಡಲಾಗುತ್ತದೆಬ್ಯಾಂಕಿಂಗ್, ಡಿಜಿಟಲ್ ಪಾವತಿ, ದೂರಸಂಪರ್ಕ, ರೈಲ್ವೆ, ವಿಮಾನಯಾನ, ವಿದ್ಯುತ್ ಶಕ್ತಿ ವ್ಯವಸ್ಥೆ ಮತ್ತು

ಏಕರೂಪದ IST ಜಾರಿ: 180 ದಿನಗಳಲ್ಲಿ ದೇಶಾದ್ಯಂತ ಒಂದೇ ‘ಭಾರತೀಯ ಪ್ರಮಾಣಿತ ಸಮಯ’ ಕಡ್ಡಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಬಿಗ್ ನ್ಯೂಸ್ 1,919 ಶಾಲೆಗಳಲ್ಲಿ 6 ತಿಂಗಳ ‘ಸ್ಪೋಕನ್ ಇಂಗ್ಲಿಷ್’ ತರಬೇತಿಗೆ ಸರ್ಕಾರ ಅನುಮೋದನೆ

(ನ್ಯೂಸ್‌ ಕಡಬ) newskadaba.com,  ಆ.31: ಸರ್ಕಾರಿ ಶಾಲಾ ವಿದ್ಯಾರ್ಥಿಗಳಲ್ಲಿ ಆಂಗ್ಲ ಭಾಷೆಯಲ್ಲಿ ಮಾತನಾಡುವ ಆತ್ಮವಿಶ್ವಾಸ ಬೆಳೆಸಲು ರಾಜ್ಯ ಸರ್ಕಾರ ಮುಂದಾಗಿದೆ. 1,919 ಸರ್ಕಾರಿ ಶಾಲೆಗಳಲ್ಲಿ 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ 6 ತಿಂಗಳ ಕಾಲ ಸ್ಪೋಕನ್ ಇಂಗ್ಲಿಷ್ ತರಬೇತಿ ಆರಂಭವಾಗಲಿದೆ. 2026ರ ಸೆಪ್ಟೆಂಬರ್‌ನಿಂದ 2027ರ ಫೆಬ್ರವರಿವರೆಗೆ ಹಾಗೂ 1–3ನೇ, 4–7ನೇ ಮತ್ತು 8–10ನೇ ತರಗತಿ ಎಂದು ವಿದ್ಯಾರ್ಥಿಗಳನ್ನು 3 ಗುಂಪುಗಳಾಗಿ ವಿಂಗಡಿಸಿ ತರಬೇತಿ ನೀಡಲಾಗುತ್ತದೆ. ಪ್ರತಿ ತಂಡಕ್ಕೆ ವಾರಕ್ಕೆ 4 ಅವಧಿಗಳು ಇರಲಿವೆ.ಎಸ್‌ಡಿಎಂಸಿ ಮೂಲಕ ಇಂಗ್ಲಿಷ್ ಪದವಿ/ಸ್ನಾತಕೋತ್ತರ

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಬಿಗ್ ನ್ಯೂಸ್ 1,919 ಶಾಲೆಗಳಲ್ಲಿ 6 ತಿಂಗಳ ‘ಸ್ಪೋಕನ್ ಇಂಗ್ಲಿಷ್’ ತರಬೇತಿಗೆ ಸರ್ಕಾರ ಅನುಮೋದನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಪಘಾತ, ದಟ್ಟಣೆ ತಡೆಯಲು ಮಾಸ್ಟರ್ ಪ್ಲಾನ್: ಸೆಪ್ಟೆಂಬರ್ 4ರಿಂದ ಫ್ಲೈಓವರ್‌ಗಳಲ್ಲಿ ಹೊಸ ಟ್ರಾಫಿಕ್ ರೂಲ್ಸ್ ಜಾರಿ!

(ನ್ಯೂಸ್‌ ಕಡಬ) newskadaba.com,  ಆ.31: ಬೆಂಗಳೂರಿನ ಪ್ರಮುಖ ಫ್ಲೈಓವರ್‌ಗಳಲ್ಲಿ ರಸ್ತೆ ಸುರಕ್ಷತೆ ಹೆಚ್ಚಿಸಲು, ಅಪಘಾತ ನಿಯಂತ್ರಿಸಲು ಮತ್ತು ಸಂಚಾರ ದಟ್ಟಣೆ ಕಡಿಮೆ ಮಾಡಲು ನಿರ್ದಿಷ್ಟ ವಾಹನಗಳ ಸಂಚಾರವನ್ನು ನಿಷೇಧಿಸಿ ಸಂಚಾರ ಪೊಲೀಸ್ ಇಲಾಖೆ ಆದೇಶಿಸಿದೆ.ಈ ಹೊಸ ನಿಯಮವು ಸೆಪ್ಟೆಂಬರ್ 4 ರಿಂದ ಜಾರಿಗೆ ಬರಲಿದ್ದು, ಎಲೆಕ್ಟ್ರಾನಿಕ್‌ ಸಿಟಿ ಎಲಿವೇಟೆಡ್‌ ಕಾರಿಡಾರ್‌ನಲ್ಲಿ ಸೆಪ್ಟೆಂಬರ್ 11 ರಿಂದ ಅನ್ವಯವಾಗಲಿದೆ. ಭಾರಿ ಸರಕು ಸಾಗಣೆ ವಾಹನಗಳಿಗೆ 24 ಗಂಟೆಯೂ ನಿಷೇಧ ಹೇರಲಾಗಿದೆ. ಜೊತೆಗೆ ಬೆಳಗ್ಗೆ 7:00 ರಿಂದ 11:00 ಮತ್ತು ಸಂಜೆ

ಅಪಘಾತ, ದಟ್ಟಣೆ ತಡೆಯಲು ಮಾಸ್ಟರ್ ಪ್ಲಾನ್: ಸೆಪ್ಟೆಂಬರ್ 4ರಿಂದ ಫ್ಲೈಓವರ್‌ಗಳಲ್ಲಿ ಹೊಸ ಟ್ರಾಫಿಕ್ ರೂಲ್ಸ್ ಜಾರಿ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸರ್ಕಾರಿ ಶಾಲಾ ಮಕ್ಕಳಿಗೆ ಕತ್ತರಿ: ಶೂ-ಸಾಕ್ಸ್ ವಿಳಂಬ, ರಾಗಿ ಗಂಜಿಗೆ ತಡೆ; AIDSO ತೀವ್ರ ಆಕ್ರೋಶ

(ನ್ಯೂಸ್‌ ಕಡಬ) newskadaba.com,  ಆ.31: ಶೈಕ್ಷಣಿಕ ವರ್ಷ ಆರಂಭವಾಗಿ 3 ತಿಂಗಳು ಕಳೆದರೂ ಕರ್ನಾಟಕದ ಸರ್ಕಾರಿ ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ನೀಡದಿರುವುದಕ್ಕೆ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಶನ್ ತೀವ್ರ ವಿರೋಧ ವ್ಯಕ್ತಪಡಿಸಿದೆ. ಸಕ್ಕರೆ ಬೆಲೆ ಏರಿಕೆಯ ನೆಪ ಹೇಳಿ ಹಲವು ಶಾಲೆಗಳಲ್ಲಿ ರಾಗಿ ಗಂಜಿ ವಿತರಣೆಯನ್ನು ನಿಲ್ಲಿಸಲಾಗಿದ್ದು, ಹಣಕಾಸಿನ ಕಾರಣ ನೀಡಿ ಮಕ್ಕಳ ಪೌಷ್ಟಿಕ ಆಹಾರಕ್ಕೆ ಕಡಿವಾಣ ಹಾಕುವುದು ಸರಿಯಲ್ಲ ಎಂದು AIDSO ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ಪ್ರಶ್ನಿಸಿದ್ದಾರೆ. ಪ್ರತಿವರ್ಷ ದೇಶದಲ್ಲಿ

ಸರ್ಕಾರಿ ಶಾಲಾ ಮಕ್ಕಳಿಗೆ ಕತ್ತರಿ: ಶೂ-ಸಾಕ್ಸ್ ವಿಳಂಬ, ರಾಗಿ ಗಂಜಿಗೆ ತಡೆ; AIDSO ತೀವ್ರ ಆಕ್ರೋಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: ಪಿಂಕ್ ಬಣ್ಣದ ವಿದ್ಯುದ್ದೀಪಗಳಿಂದ ಕಂಗೊಳಿಸಿದ ದಕ್ಷಿಣ ಕನ್ನಡ ಡಿಸಿ ಕಚೇರಿ!

(ನ್ಯೂಸ್‌ ಕಡಬ) newskadaba.com,  ಆ.31: ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹಲಕ್ಷ್ಮಿ’ ಯೋಜನೆ ಜಾರಿಗೆ ಬಂದು ಮೂರು ವರ್ಷ ಪೂರೈಸಿದ (ಆಗಸ್ಟ್ 30) ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಕಟ್ಟಡಕ್ಕೆ ಭಾನುವಾರ ರಾತ್ರಿ ವಿಶೇಷ ವಿದ್ಯುದ್ದೀಪಾಲಂಕಾರ ಮಾಡಲಾಗಿತ್ತು.ಮಹಿಳೆಯರ ಸ್ವಾವಲಂಬನೆ ಹಾಗೂ ಹೆಮ್ಮೆಯ ಸಂಕೇತವಾಗಿ ಇಡೀ ಜಿಲ್ಲಾಧಿಕಾರಿ ಕಚೇರಿ ಕಟ್ಟಡವನ್ನು ಗುಲಾಬಿ ಬಣ್ಣದ ಬೆಳಕಿನಿಂದ ಸಿಂಗರಿಸಲಾಗಿತ್ತು. ಪ್ರತಿ ಮನೆಯ ಯಜಮಾನಿಗೆ ತಿಂಗಳಿಗೆ ₹2,000 ನೀಡುವ ಈ ಯೋಜನೆಯಡಿ ಇದುವರೆಗೆ ಒಟ್ಟು 1.20 ಕೋಟಿ ಫಲಾನುಭವಿಗಳ ಖಾತೆಗೆ ₹76,500

ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: ಪಿಂಕ್ ಬಣ್ಣದ ವಿದ್ಯುದ್ದೀಪಗಳಿಂದ ಕಂಗೊಳಿಸಿದ ದಕ್ಷಿಣ ಕನ್ನಡ ಡಿಸಿ ಕಚೇರಿ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನೇಪಾಳ ಪ್ರವಾಹದಲ್ಲಿ ಸಿಲುಕಿದ್ದ ಇಬ್ಬರು ಕನ್ನಡಿಗರ ಸುರಕ್ಷಿತ ರಕ್ಷಣೆ

(ನ್ಯೂಸ್ ಕಡಬ) newskadaba.com ಆ. 27. ನೇಪಾಳದಲ್ಲಿ ಉಂಟಾಗಿರುವ ಭೀಕರ ಪ್ರವಾಹದ ನಡುವೆ ಸಿಲುಕಿದ್ದ ಕಲಬುರಗಿ ಜಿಲ್ಲೆಯ ಇಬ್ಬರು ಕನ್ನಡಿಗರನ್ನು ರಕ್ಷಣಾಪಡೆ ಸುರಕ್ಷಿತವಾಗಿ ರಕ್ಷಿಸಿ, ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದೆ.   ಚಿಂಚೋಳಿ ತಾಲೂಕಿನ ಮಲ್ಲಿನಾಥ್ ಕೊಲಕುಂದಿ ಮತ್ತು ಸಂಗಮೇಶ್ ಕನಕಪುರ ಅವರನ್ನು ರಕ್ಷಿಸಲಾಗಿದ್ದು, ಇಬ್ಬರೂ ಸದ್ಯ ಸುರಕ್ಷಿತವಾಗಿದ್ದಾರೆ. ವಿಪತ್ತು ನಿರ್ವಹಣಾ ಸಂಸ್ಥೆಯ ಅಧಿಕಾರಿಗಳು ಅವರೊಂದಿಗೆ ಸಂಪರ್ಕಿಸಿ ಪರಿಸ್ಥಿತಿಯ ಮಾಹಿತಿ ಪಡೆದುಕೊಂಡಿದ್ದಾರೆ.   ಮಲ್ಲಿನಾಥ್ ಮತ್ತು ಸಂಗಮೇಶ್ ಸೇರಿದಂತೆ ಹೈದರಾಬಾದ್‌ನ 23 ಮಂದಿ ಒಟ್ಟು 25 ಜನರು ನೇಪಾಳಕ್ಕೆ

ನೇಪಾಳ ಪ್ರವಾಹದಲ್ಲಿ ಸಿಲುಕಿದ್ದ ಇಬ್ಬರು ಕನ್ನಡಿಗರ ಸುರಕ್ಷಿತ ರಕ್ಷಣೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ನೇಪಾಳ ಪ್ರವಾಹ: ಸಿಲುಕಿರುವ ಕನ್ನಡಿಗರ ಪತ್ತೆಗೆ ಸರ್ಕಾರದ ಕ್ರಮ

(ನ್ಯೂಸ್ ಕಡಬ) newskadaba.com ಆ. 27. ನೇಪಾಳ ಮತ್ತು ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಪ್ರವಾಹ ಹಾಗೂ ಭೂಕುಸಿತದ ಹಿನ್ನೆಲೆಯಲ್ಲಿ, ಅಲ್ಲಿ ಸಿಲುಕಿರುವ ಕನ್ನಡಿಗರ ಸುರಕ್ಷತೆ ಹಾಗೂ ಮಾಹಿತಿ ಸಂಗ್ರಹಕ್ಕೆ ಕರ್ನಾಟಕ ಸರ್ಕಾರ ಮುಂದಾಗಿದೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಸ್ತೆ ಸಂಪರ್ಕ ಮತ್ತು ಸಂಚಾರ ವ್ಯವಸ್ಥೆ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದ್ದು, ಹಲವು ಭಾರತೀಯರು ನಾಪತ್ತೆಯಾಗಿರುವ ವರದಿಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ರಕ್ಷಣಾ ಕಾರ್ಯಕ್ಕೆ ಸಜ್ಜಾಗಿದೆ.   ನೇಪಾಳ

ನೇಪಾಳ ಪ್ರವಾಹ: ಸಿಲುಕಿರುವ ಕನ್ನಡಿಗರ ಪತ್ತೆಗೆ ಸರ್ಕಾರದ ಕ್ರಮ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top