ಬ್ರೇಕಿಂಗ್ ನ್ಯೂಸ್

ಪೆಟ್ರೋಲ್ ಹಾಗೂ ಡೀಸೆಲ್‌ ಬೆಲೆಯಲ್ಲಿ ಭಾರೀ ಇಳಿಕೆ ➤ ಅಬಕಾರಿ ಸುಂಕ ಕಡಿತಗೊಳಿಸಿದ ಕೇಂದ್ರ ಸರಕಾರ

(ನ್ಯೂಸ್ ಕಡಬ) newskadaba.com ನವದೆಹಲಿ, ಮೇ.21. ಕೇಂದ್ರ ಸರಕಾರವು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯ ಜೊತೆಗೆ ಅಡುಗೆ ಅನಿಲದ ಬೆಲೆಯನ್ನು ಕಡಿತಗೊಳಿಸಿ ಆದೇಶಿಸಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತ ಮಾಡಿದ್ದು, ಅದರಂತೆ ಪೆಟ್ರೋಲ್‌ ಬೆಲೆ ಲೀಟರಿಗೆ 9.5 ರೂ. ಹಾಗೂ ಡೀಸೆಲ್‌ 7 ರೂ. ಇಳಿಕೆ ಮಾಡಿ ಆದೇಶ ಹೊರಡಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿರುವುದಾಗಿ ತಿಳಿಸಿದ್ದಾರೆ. […]

ಪೆಟ್ರೋಲ್ ಹಾಗೂ ಡೀಸೆಲ್‌ ಬೆಲೆಯಲ್ಲಿ ಭಾರೀ ಇಳಿಕೆ ➤ ಅಬಕಾರಿ ಸುಂಕ ಕಡಿತಗೊಳಿಸಿದ ಕೇಂದ್ರ ಸರಕಾರ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಎಸ್ಸೆಸ್ಸೆಲ್ಸಿ ಫಲಿತಾಂಶಕ್ಕೆ ಕ್ಷಣಗಣನೆ ➤ ಫಲಿತಾಂಶಕ್ಕಾಗಿ ಇಲ್ಲಿ ನೋಡಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.18. ಇಂದು ಮಧ್ಯಾಹ್ನ 12.30ಕ್ಕೆ SSLC ಪರೀಕ್ಷೆಯ ಫಲಿತಾಂಶವನ್ನು ಪ್ರಕಟಗೊಳ್ಳಲಿದ್ದು, ಕ್ಷಣಗಣನೆ ಆರಂಭಗೊಂಡಿದೆ. ಇಂದು (ಮೇ.19) ಮಧ್ಯಾಹ್ನ 12.30ಕ್ಕೆ SSLC ಫಲಿತಾಂಶವನ್ನು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಪ್ರಕಟಿಸಲಿದ್ದು, ಮಧ್ಯಾಹ್ನ 1 ಗಂಟೆ ಬಳಿಕ ಇಲಾಖೆಯ ವೆಬ್‌ಸೈಟ್‌ನಲ್ಲಿ ಮತ್ತು ಶಾಲೆಗಳಲ್ಲಿ ಫಲಿತಾಂಶ ಲಭ್ಯವಿರಲಿದೆ. ಫಲಿತಾಂಶವನ್ನು ವೀಕ್ಷಿಸಲು https://karresults.nic.in ಗೆ ಲಾಗಿನ್ ಆಗಬಹುದು.

ಎಸ್ಸೆಸ್ಸೆಲ್ಸಿ ಫಲಿತಾಂಶಕ್ಕೆ ಕ್ಷಣಗಣನೆ ➤ ಫಲಿತಾಂಶಕ್ಕಾಗಿ ಇಲ್ಲಿ ನೋಡಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆ ➤ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.19. ಕಳೆದೆರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯ ಹಿನ್ನಲೆಯಲ್ಲಿ ದಕ್ಷಿಣ ಕನ್ನಡದ ಶಾಲೆಗಳಿಗೆ ಮೇ.19ರಂದು ರಜೆ ಘೋಷಣೆಯಾಗಿದೆ. ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯ ಕಾರಣ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಗುರುವಾರದಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಆದೇಶಿಸಿದ್ದಾರೆ.    

ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆ ➤ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ನಾಳೆ (ಮೇ.19) ಮಧ್ಯಾಹ್ನ 12.30 ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ ➤ ಫಲಿತಾಂಶ ವೀಕ್ಷಿಸಲು ಇಲ್ಲಿ ನೋಡಿ..

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.18. ನಾಳೆ (ಮೇ.19 ಗುರುವಾರ) ಮಧ್ಯಾಹ್ನ 12.30ಕ್ಕೆ SSLC ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಈ ಬಗ್ಗೆ ಬುಧವಾರದಂದು ಟ್ವೀಟ್ ಮಾಡಿರುವ ನೀಡಿರುವ ಅವರು, ‘ನಾಳೆ ಮಧ್ಯಾಹ್ನ 12.30ಕ್ಕೆ SSLC ಫಲಿತಾಂಶ ಪ್ರಕಟಿಸಲಾಗುತ್ತದೆ. ಮಧ್ಯಾಹ್ನ 1 ಗಂಟೆ ಬಳಿಕ ಇಲಾಖೆಯ ವೆಬ್‌ಸೈಟ್‌ನಲ್ಲಿ ಮತ್ತು ಶಾಲೆಗಳಲ್ಲಿ ಫಲಿತಾಂಶ ಲಭ್ಯವಿರಲಿದೆ. https://karresults.nic.in ಗೆ ಲಾಗಿನ್ ಆಗಿ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಬಹುದು’ ಎಂದು ತಿಳಿಸಿದ್ದಾರೆ.    

ನಾಳೆ (ಮೇ.19) ಮಧ್ಯಾಹ್ನ 12.30 ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ ➤ ಫಲಿತಾಂಶ ವೀಕ್ಷಿಸಲು ಇಲ್ಲಿ ನೋಡಿ.. Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಒಂಭತ್ತನೇ ತರಗತಿಯ ವಿದ್ಯಾರ್ಥಿನಿ ದಿಢೀರ್ ಅಸ್ವಸ್ಥಗೊಂಡು ಮೃತ್ಯು ➤ ಹೃದಯಾಘಾತ ಶಂಕೆ

(ನ್ಯೂಸ್ ಕಡಬ) newskadaba.com ವಿಟ್ಲ, ಮೇ.18. ಒಂಭತ್ತನೆಯ ತರಗತಿಯ ವಿದ್ಯಾರ್ಥಿನಿಯೋರ್ವಳು ತೀವ್ರ ಅಸ್ವಸ್ಥಗೊಂಡು ಮೃತಪಟ್ಟಿರುವ ಘಟನೆ ಮಂಗಳವಾರದಂದು ವಿಟ್ಲದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ವಿಟ್ಲದ ಅಳಿಕೆ ಗ್ರಾಮದ ಚಂದಾಡಿ ನಿವಾಸಿ ವಿನಯ್ ಹೆಗ್ಡೆ ಹಾಗೂ ಸಾಯಿಗೀತಾ ದಂಪತಿಗಳ ಏಕೈಕ ಪುತ್ರಿ, ವಿಟ್ಲ ಜೆಸೀಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಒಂಭತ್ತನೆಯ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಅನ್ವಿತ ಹೆಗ್ಡೆ ಎಂದು ಗುರುತಿಸಲಾಗಿದೆ. ಮಂಗಳವಾರದಂದು ದಿಢೀರ್ ಅಸ್ವಸ್ತಗೊಂಡು ಮೃತಪಟ್ಟಿದ್ದು, ಹೃದಯಾಘಾತದಿಂದಾಗಿ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.    

ಒಂಭತ್ತನೇ ತರಗತಿಯ ವಿದ್ಯಾರ್ಥಿನಿ ದಿಢೀರ್ ಅಸ್ವಸ್ಥಗೊಂಡು ಮೃತ್ಯು ➤ ಹೃದಯಾಘಾತ ಶಂಕೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ಚಲಿಸುತ್ತಿದ್ದ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ, ಸುಟ್ಟು ಕರಕಲು ➤ ಓರ್ವನಿಗೆ ಗಾಯ, ಪ್ರಯಾಣಿಕರು ಪಾರು

ಕಡಬ, ಮೇ.15. ಚಲಿಸುತ್ತಿರುವಾಗಲೇ ಝೈಲೋ ಕಾರು ಬೆಂಕಿಗಾಹುತಿಯಾದ ಘಟನೆ ಕೊಂಬಾರು ಗ್ರಾಮದ ಪೆರುಂದೋಡಿ ಕಟ್ಟೆ ಎಂಬಲ್ಲಿ ಮೇ.14 ರ ರಾತ್ರಿ ನಡೆದಿದೆ. ಪಟ್ರಮೆ ನಿವಾಸಿ ಆನಂದ ಗೌಡ ಎಂಬವರು ತಮ್ಮವರೊಂದಿಗೆ ಕಾರಿನಲ್ಲಿ ಸಂಬಂಧಿಕರಾದ ಕೊಂಬಾರು ಕಟ್ಟೆ ಸೊಮಪ್ಪ ಗೌಡರ ಗೌಡರ ಮನೆಗೆ ಬರುತ್ತಿದ್ದು ಈ ಸಂದರ್ಭದಲ್ಲಿ ಕಾರಿನಲ್ಲಿ ಅಕಸ್ಮಿಕವಾಗಿ ಬೆಂಕಿ ಹತ್ತಿಕೊಂಡು ಕಾರಿನ ಬಹುತೇಕ ಭಾಗಗಳು ಸಂಪೂರ್ಣ ಭಸ್ಮವಾಗಿದೆ. ಕಾರಿನಲ್ಲಿ ಇಬ್ಬರು ಗಂಡಸರು, ಓರ್ವ ಮಹಿಳೆ ಹಾಗೂ ಮಗು ಇದ್ದರು ಎಂದು ತಿಳಿದು ಬಂದಿದೆ. ಕಾರು ಹೊತ್ತಿ

ಕಡಬ: ಚಲಿಸುತ್ತಿದ್ದ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ, ಸುಟ್ಟು ಕರಕಲು ➤ ಓರ್ವನಿಗೆ ಗಾಯ, ಪ್ರಯಾಣಿಕರು ಪಾರು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

‘ಅಸನಿ’ ಚಂಡಮಾರುತ ಎಫೆಕ್ಟ್ ➤ ಎರಡು ದಿನಗಳ ಕಾಲ ರಾಜ್ಯಾದ್ಯಂತ ಯೆಲ್ಲೋ ಅಲರ್ಟ್ ಘೋಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.12. ‘ಅಸಾನಿ’ ಚಂಡಮಾರುತವು ಆಂಧ್ರಪ್ರದೇಶದ ವಿಶಾಖಪಟ್ಟಣ ಮತ್ತು ಒಡಿಶಾದ ಕರಾವಳಿಗೆ ಧಾವಿಸಿದ್ದು, ಮುಂದಿನ ಎರಡು ದಿನಗಳ ಕಾಲ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಸೇರಿದಂತೆ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ, ಚಾಮರಾಜನಗರ, ದಾವಣಗೆರೆ, ಹಾವೇರಿ, ಚಿತ್ರದುರ್ಗ, ಬಳ್ಳಾರಿ, ಗದಗ, ಧಾರವಾಡ, ಬೆಳಗಾವಿ, ಕೊಪ್ಪಳ, ರಾಯಚೂರು,

‘ಅಸನಿ’ ಚಂಡಮಾರುತ ಎಫೆಕ್ಟ್ ➤ ಎರಡು ದಿನಗಳ ಕಾಲ ರಾಜ್ಯಾದ್ಯಂತ ಯೆಲ್ಲೋ ಅಲರ್ಟ್ ಘೋಷಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಾಲಕಿಯೊಂದಿಗೆ ಅಸಭ್ಯ ವರ್ತನೆ ➤ ಆರೋಪಿ ಅಂದರ್..!

(ನ್ಯೂಸ್ ಕಡಬ) newskadaba.com ಪುತ್ತೂರು, ಮೇ. 10. ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದೆನ್ನಲಾದ ಯುವಕನೋರ್ವನನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಬಂಧಿತ ಯುವಕನನ್ನು ನೌಫಲ್ ಸರಳಿಕಟ್ಟೆ ಎಂದು ಗುರುತಿಸಲಾಗಿದೆ. ಈತ ಬಸ್ ನಿಲ್ದಾಣದಲ್ಲಿ ಮನೆಗೆಲಸ ಮಾಡುತ್ತಿದ್ದ ಗದಗ ಮೂಲದ ಮಹಿಳೆಯ ಜೊತೆಗಿದ್ದ ಬಾಲಕಿಗೆ ಆಮಿಷವೊಡ್ಡಿ ಬಸ್ ನಿಲ್ದಾಣದ ವಾಶ್ ರೂಂ ಗೆ ಕರೆದೊಯ್ದಿದ್ದಾನೆ ಎನ್ನಲಾಗಿದೆ. ಈ ಕುರಿತು ಮಹಿಳೆಯು ಆರೋಪಿಯನ್ನು ವಿಚಾರಿಸಿದಾಗ ಆರೋಪಿಯು ಮಹಿಳೆಗೆ ಬೆದರಿಕೆ ಒಡ್ಡಿರುವುದಾಗಿ ದೂರಿನಲ್ಲಿ ತಿಳಿಸಿಲಾಗಿದೆ. ಇದೇವೇಳೆ

ಬಾಲಕಿಯೊಂದಿಗೆ ಅಸಭ್ಯ ವರ್ತನೆ ➤ ಆರೋಪಿ ಅಂದರ್..! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾರು ಚಲಾಯಿಸುತ್ತಿದ್ದ ವೇಳೆ ರಕ್ತದೊತ್ತಡ ಹೆಚ್ಚಾಗಿ ಮರಕ್ಕೆ ಢಿಕ್ಕಿ ➤ ಕಡಬ ಕಾಲೇಜಿನ ಉಪನ್ಯಾಸಕರಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಮೇ.07. ಕಾರನ್ನು ಚಲಾಯಿಸುತ್ತಿದ್ದ ವೇಳೆ ರಕ್ತದೊತ್ತಡ ಹೆಚ್ಚಾದ ಪರಿಣಾಮ ನಿಯಂತ್ರಣ ಕಳೆದ ಕಾರು ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದ ಘಟನೆ ಕಡಬ – ಪಂಜ ರಸ್ತೆಯ ಮೆಸ್ಕಾಂ ಸಮೀಪ ಶುಕ್ರವಾರ ಸಂಜೆ ನಡೆದಿದೆ. ಕಡಬ ಸ.ಪ.ಪೂ.ಕಾಲೇಜಿನ ಉಪನ್ಯಾಸಕ ವಾಸುದೇವ ಕೋಲ್ಪೆಯವರು ತನ್ನ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಮೆಸ್ಕಾಂ ಸಮೀಪ ರಕ್ತದೊತ್ತಡ ಹೆಚ್ಚಾದ ಪರಿಣಾಮ ನಿಯಂತ್ರಣ ತಪ್ಪಿದ್ದು, ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಉಪನ್ಯಾಸಕ ವಾಸುದೇವರವರು ಗಾಯಗೊಂಡಿರುವುದಾಗಿ ತಿಳಿದುಬಂದಿದೆ.

ಕಾರು ಚಲಾಯಿಸುತ್ತಿದ್ದ ವೇಳೆ ರಕ್ತದೊತ್ತಡ ಹೆಚ್ಚಾಗಿ ಮರಕ್ಕೆ ಢಿಕ್ಕಿ ➤ ಕಡಬ ಕಾಲೇಜಿನ ಉಪನ್ಯಾಸಕರಿಗೆ ಗಾಯ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಅಕ್ರಮ ಕಸಾಯಿಖಾನೆಗೆ ಕಡಬ ಪೊಲೀಸರಿಂದ ದಾಳಿ ➤ ತಲೆ‌ಕಡಿದ ದನ, ಜಾನುವಾರುಗಳು ವಶಕ್ಕೆ, ಆರೋಪಿಗಳು ಪರಾರಿ

(ನ್ಯೂಸ್ ಕಡಬ) newskadaba.com ಕಡಬ, ಮೇ.01. ಅಕ್ರಮ ಕಸಾಯಿಖಾನೆಗೆ ದಾಳಿ ನಡೆಸಿರುವ ಕಡಬ ಪೊಲೀಸರು ತಲೆ ಕಡಿದ ದನ ಹಾಗೂ ಮಾಂಸಕ್ಕಾಗಿ ತಂದಿದ್ದ ಜಾನುವಾರುಗಳನ್ನು ವಶಪಡಿಸಿಕೊಂಡ ಘಟನೆ ಭಾನುವಾರದಂದು ಕಡಬದಲ್ಲಿ ನಡೆದಿದೆ. ಕಡಬ ಕಳಾರ ಸಮೀಪದ ತಿಮರಡ್ಡ ಎಂಬಲ್ಲಿ ಜಾನುವಾರುಗಳನ್ನು ಮಾಂಸ ಮಾಡಲಾಗುತ್ತಿದೆ ಎಂಬ ದೂರಿ‌ನ ಮೇರೆಗೆ ದಾಳಿ ನಡೆಸಿರುವ ಕಡಬ ಎಸ್ಐ ಆಂಜನೇಯ ರೆಡ್ಡಿ, ಎಎಸ್ಐ ಸುರೇಶ್ ಹಾಗೂ ಸಿಬ್ಬಂದಿಗಳು ಕೊಲ್ಲಲ್ಪಟ್ಟ ಒಂದು ದನ ಹಾಗೂ ಜಾನುವಾರುಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿ ಫಾರೂಕ್ ಹಾಗೂ ಇನ್ನಿತರರು ಸ್ಥಳದಿಂದ

ಅಕ್ರಮ ಕಸಾಯಿಖಾನೆಗೆ ಕಡಬ ಪೊಲೀಸರಿಂದ ದಾಳಿ ➤ ತಲೆ‌ಕಡಿದ ದನ, ಜಾನುವಾರುಗಳು ವಶಕ್ಕೆ, ಆರೋಪಿಗಳು ಪರಾರಿ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top