ಬ್ರೇಕಿಂಗ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಚರಂಡಿಗಿಳಿದ ಕೆಎಸ್ಸಾರ್ಟಿಸಿ ಬಸ್ ➤ ಪ್ರಾಯಾಣಿಕರು ಪಾರು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ. 09. ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಸಾರ್ಟಿಸಿ ಬಸ್ಸೊಂದು ರಸ್ತೆ ಬದಿಯ ಚರಂಡಿಗೆ ಉರುಳಿಬಿದ್ದ ಘಟನೆ ಮದ್ದಡ್ಕ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಧರ್ಮಸ್ಥಳ ಕಡೆಗೆ ವೇಗವಾಗಿ ತೆರಳುತ್ತಿದ್ದ ಬಸ್ಸು ಎದುರಿನಿಂದ ಬರುತ್ತಿದ್ದ ವಾಹನಕ್ಕೆ ಸೈಡ್ ಕೊಡುವ ಭರದಲ್ಲಿ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದಿದ್ದು, ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ಚರಂಡಿಗಿಳಿದ ಕೆಎಸ್ಸಾರ್ಟಿಸಿ ಬಸ್ ➤ ಪ್ರಾಯಾಣಿಕರು ಪಾರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಐಸ್ ಕ್ರೀಂ ಟೆಂಪೋ ಪಲ್ಟಿ..!

(ನ್ಯೂಸ್ ಕಡಬ) newskadaba.com ಪುತ್ತೂರು, ನ. 09. ಚಾಲಕನ ನಿಯಂತ್ತಣ ತಪ್ಪಿದ ಐಸ್ ಕ್ರೀಂ ಟೆಂಪೊವೊಂದು ಪಲ್ಟಿಯಾದ ಘಟನೆ ಪುತ್ತೂರು- ಉಪ್ಪಿನಂಗಡಿ ರಸ್ತೆಯ ಕೆಮ್ಮಾಯಿ ತಿರುವಿನಲ್ಲಿ ನಡೆದಿದೆ. ಕೆಮ್ಮಾಯಿ ಸಮೀಪ ರಸ್ತೆ ಬಳಿ ಚರಂಡಿಯ ದುರಸ್ಥಿಕಾರ್ಯ ನಡೆಯುತ್ತಿದ್ದು, ಇದೇ ವೇಳೆ ಐಸ್ ಕ್ರೀಮ್ ಟೆಂಪೊ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಐಸ್ ಕ್ರೀಂ ಟೆಂಪೋ ಪಲ್ಟಿ..! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಹಲ್ಲೆ ಪ್ರಕರಣದ ಆರೋಪಿ ಆತ್ಮಹತ್ಯೆಗೆ ಯತ್ನ..!

(ನ್ಯೂಸ್ ಕಡಬ) newskadaba.com ಮಂಗಳೂರು, ನ. 09. ಶಿಕ್ಷಕರ ತರಬೇತಿ ಕೇಂದ್ರಕ್ಕೆ ನುಗ್ಗಿ ಮೂವರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿದ್ದ ಆರೋಪಿಯೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ಆರೋಪಿಯನ್ನು ಕುಂದಾಪುರ ಮೂಲದ ನವೀನ್(31) ಎಂದು ಗುರುತಿಸಲಾಗಿದೆ. ಎರಡು ದಿನಗಳ ಹಿಂದೆ ಮಾನಸಿಕ ತೊಂದರೆ ಹಿನ್ನೆಲೆ ನಗರದ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಈತ ಆಸ್ಪತ್ರೆಯ ಜೈಲ್ ವಾರ್ಡ್ ನಲ್ಲಿ ಬೆಡ್ ಶೀಟ್ ಬಳಸಿ ಕಿಟಕಿಗೆ ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ.

ಮಂಗಳೂರು: ಹಲ್ಲೆ ಪ್ರಕರಣದ ಆರೋಪಿ ಆತ್ಮಹತ್ಯೆಗೆ ಯತ್ನ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಹೊಳೆಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ಬ್ರಹ್ಮಾವರ, ನ. 09. ಸಮೀಪದ ಕೊಕ್ಕರ್ಣೆ ಪೆಜಮಂಗೂರು ಗ್ರಾಮದ ಗುಂಡಾಲು ಕಿಂಡಿ‌ ಅಣೆಕಟ್ಟಿನ‌ ಬಳಿ ಸೀತಾ ನದಿಯಲ್ಲಿ ನವಜಾತ ಗಂಡು ಮಗುವಿನ‌ ಮೃತದೇಹವೊಂದು ಪತ್ತೆಯಾಗಿದೆ. ಕಳೆದ ಎರಡು ದಿನಗಳ ಹಿಂದೆ ನದಿಗೆ ಎಸೆದಿರಬಹುದು ಎಂದು ಶಂಕಿಸಲಾಗಿದೆ. ಈ ನವಜಾತ ಶಿಶುವಿನ ಮೃತದೇಹದಲ್ಲಿ ಹೊಕ್ಕುಳ ಬಳ್ಳಿ ಕೂಡಾ ಇದ್ದು, ಮಗುವಿನ‌ ತಲೆ‌ ಮತ್ತು ದೇಹದ ಕೆಲವೆಡೆ ಮೀನುಗಳು ತಿಂದಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಹೊಳೆಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಗೆಳೆಯರ ಜೊತೆ ವಿಹಾರಕ್ಕೆಂದು ಬಂದ ಬೆಂಗಳೂರಿನ ಯುವಕ ಸಮುದ್ರಪಾಲು

(ನ್ಯೂಸ್ ಕಡಬ) newskadaba.com ಮಂಗಳೂರು, ನ. 09. ಗೆಳೆಯರ ಜೊತೆ ವಿಹಾರಕ್ಕೆಂದು ಬಂದ ಯುವಕನೋರ್ವ ಸಮುದ್ರ ಪಾಲಾದ ಘಟನೆ ಪಣಂಬೂರು ಬೀಚ್ ನಲ್ಲಿ ನಡೆದಿದೆ. ಮೃತ ಯುವಕನನ್ನು ಬೆಂಗಳೂರು ಮೂಲದ ದಿನೇಶ್ (20) ಎಂದು ಗುರುತಿಸಲಾಗಿದೆ. ಈತ ತನ್ನ ಸ್ನೇಹಿತರಾದ ದೀಪಕ್, ಶ್ರೀ ನಿವಾಸ, ಪ್ರಶಾಂತ್, ಸುನೀಲ್, ಸುದೀಪ್, ಪ್ರಜ್ವಲ್ ಹಾಗೂ ಸೀನಾ ಎಂಬವರೊಂದಿಗೆ ಬೆಂಗಳೂರಿನಿಂದ ಮಂಗಳೂರಿನ ಪಣಂಬೂರು ಬೀಚ್ ಗೆ ವಿಹಾರಕ್ಕೆಂದು ತೆರಳಿದ್ದರು. ಈ ಸಂದರ್ಭ ಸ್ನಾನಕ್ಕೆಂದು 8 ಮಂದಿ ನೀರಿಗಿಳಿದಿದ್ದು, ಬೃಹತ್ ಅಲೆಗೆ ಸಿಲುಕಿದ

ಮಂಗಳೂರು: ಗೆಳೆಯರ ಜೊತೆ ವಿಹಾರಕ್ಕೆಂದು ಬಂದ ಬೆಂಗಳೂರಿನ ಯುವಕ ಸಮುದ್ರಪಾಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಯುವತಿಗೆ ಅಶ್ಲೀಲ ಸಂದೇಶ ರವಾನೆ ➤ ಯುವಕನ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 09. ಮದುವೆ ನಿಗದಿಯಾಗಿದ್ದ ಯುವತಿಗೆ ಆಕೆಯನ್ನು ಮದುವೆಯಾಗಲಿರುವ ಯುವಕ ಅಶ್ಲೀಲ ಹಾಗೂ ವಿಚಿತ್ರ ಸಂದೇಶ ಕಳುಹಿಸುತ್ತಿದ್ದಾನೆ ಎಂದು ಯುವತಿಯು ನೀಡಿದ ದೂರಿನಂತೆ ಆರೋಪಿಯನ್ನು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಕುದ್ರೋಳಿ ಅಳಕೆ ನಿವಾಸಿ ಶ್ರೀನಿವಾಸ ಭಟ್ (35) ಎಂದು ಗುರುತಿಸಲಾಗಿದೆ. ಆರೋಪಿಗೆ ನಗರದ ಯುವತಿಯೋರ್ವಳ ಜೊತೆ ಮದುವೆ ಮಾತುಕತೆ ನಡೆದು, ಎರಡೂ ಕುಟುಂಬಗಳು ಒಪ್ಪಿಗೆ ಸೂಚಿಸಿದ್ದವು. ಇದರ ನಡುವೆ ಶ್ರೀನಿವಾಸ್ ಮದುವೆಯಾಗಲಿದ್ದ ಯುವತಿಯ ಮೊಬೈಲ್ ನಂಬರ್ ಪಡೆದು ಚಾಟಿಂಗ್

ಮಂಗಳೂರು: ಯುವತಿಗೆ ಅಶ್ಲೀಲ ಸಂದೇಶ ರವಾನೆ ➤ ಯುವಕನ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಳ್ಳಾರೆ: ಯುವತಿಯೊಂದಿಗೆ‌ಅಸಭ್ಯ ವರ್ತನೆ ➤ ಆರೋಪಿಗೆ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ನ. 09. ಯುವಕನೋರ್ವ ಅಸಭ್ಯವಾಗಿ ವರ್ತಿಸಿದನೆಂದು ಯುವತಿಯೋರ್ವಳು ದೂರು ನೀಡಿದ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯ ಅಲೆಕ್ಕಾಡಿ ಎಂಬಲ್ಲಿ ನಡೆದಿದೆ. ಆರೋಪಿ ನವಾಝ್ ಎಂಬಾತನನ್ನು ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಿದ್ದಾರೆ‌. ಅಲೆಕ್ಕಾಡಿಯಲ್ಲಿ ಬಾಡಿಗೆ ರೂಮಿನಲ್ಲಿ ವಾಸವಾಗಿದ್ದ ನವಾಝ್ ಅದೇ ಕಟ್ಟಡದಲ್ಲಿ ಬಾಡಿಗೆ ರೂಮ್ ಮಾಡಿಕೊಂಡಿರುವ ಯುವತಿಗೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ದೂರು ನೀಡಿದ್ದಳು.

ಬೆಳ್ಳಾರೆ: ಯುವತಿಯೊಂದಿಗೆ‌ಅಸಭ್ಯ ವರ್ತನೆ ➤ ಆರೋಪಿಗೆ ನ್ಯಾಯಾಂಗ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರತೀಯ ಮೀನುಗಾರಿಕಾ ದೋಣಿ ಮೇಲೆ ಗುಂಡಿನ ದಾಳಿ ನಡೆಸಿದ ಪಾಕ್ ನೌಕಾಸೇನೆ..! ➤ ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಇಸ್ಲಾಮಾಬಾದ್, ನ. 08. ಪಾಕಿಸ್ತಾನದ ನೌಕಾ ಸೇನೆಯು ಭಾರತಕ್ಕೆ ಸೇರಿದ ದೋಣಿಯೊಂದರ ಮೇಲೆ ಗುಂಡಿನ ದಾಳಿ ನಡೆಸಿದ ಪರಿಣಾಮ ಓರ್ವ ಮೀನುಗಾರ ಮೃತಪಟ್ಟು, ಮತ್ತೋರ್ವ ಗಾಯಗೊಂಡ ಬಗ್ಗೆ ವರದಿಯಾಗಿದೆ. ಮೃತಪಟ್ಟ ಮೀನುಗಾರನನ್ನು ಶ್ರೀಧರ್‌ ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ದ್ವಾರಕಾದಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಜರಾತ್‌ನ ದ್ವಾರಕಾ ಸಮುದ್ರ ಪ್ರದೇಶದಲ್ಲಿ ಜಲ್‌ಪರ್ ಹೆಸರಿನ ದೋಣಿಯ ಮೇಲೆ ಪಾಕಿಸ್ತಾನ ನೌಕಾಪಡೆಯು ಗುಂಡಿನ ದಾಳಿ ನಡೆಸಿದೆ ಎನ್ನಲಾಗಿದೆ.

ಭಾರತೀಯ ಮೀನುಗಾರಿಕಾ ದೋಣಿ ಮೇಲೆ ಗುಂಡಿನ ದಾಳಿ ನಡೆಸಿದ ಪಾಕ್ ನೌಕಾಸೇನೆ..! ➤ ಓರ್ವ ಮೃತ್ಯು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ಉಚಿತ ಶಾಲೆ ➤ ಜನಾರ್ಧನ ರೆಡ್ಡಿ ಘೋಷಣೆ

(ನ್ಯೂಸ್ ಕಡಬ) newskadaba.com ಬಳ್ಳಾರಿ, ನ. 08. ದಿವಂಗತ ನಟ ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್​​ ಅವರ ಹೆಸರಿನಲ್ಲಿ ಬಳ್ಳಾರಿಯಲ್ಲಿ ಉಚಿತ ಶಾಲೆಯೊಂದನ್ನು ಆರಂಭಿಸುವುದಾಗಿ ಮಾಜಿ ಸಚಿವ ಜನಾರ್ಧನ ರೆಡ್ಡಿ ಘೋಷಿಸಿದ್ದಾರೆ. ಈ ಕುರಿತು ಪುನೀತ್ ರಾಜ್ ಕುಮಾರ್ ಅವರ ಶ್ರದ್ದಾಂಜಲಿ ಸಭೆಯಲ್ಲಿ ಮಾತನಾಡಿದ ಮಾಜಿ ಸಚಿವ, ಬಳ್ಳಾರಿ ಬಸ್ ನಿಲ್ದಾಣಕ್ಕೆ ಪುನೀತ್​​ ಹೆಸರಿಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗುವುದು, ಇನ್ನು ಪುನೀತ್ ವಯಸ್ಸಿನಲ್ಲಿ ನನಗಿಂತ ಚಿಕ್ಕವನಾದರೂ ಆತ ಹಾಕಿರುವ ಮಾರ್ಗದಲ್ಲಿ ನಾನು ಕೂಡಾ ಊರಿನ ಜನರಿಗೆ ಸಹಾಯ

ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ಉಚಿತ ಶಾಲೆ ➤ ಜನಾರ್ಧನ ರೆಡ್ಡಿ ಘೋಷಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಕ್ರಮ ಅಕ್ಕಿ ಸಾಗಾಟ ➤ ಲಾರಿ ಸಹಿತ 83 ಕ್ವಿಂಟಾಲ್ ಅಕ್ಕಿ ವಶ

(ನ್ಯೂಸ್ ಕಡಬ) newskadaba.com ಬಾಗಲಕೋಟೆ, ನ. 08. ಸರಕಾರದ ವಿವಿಧ ಯೋಜನೆಗಳ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವಾಹನವನ್ನು ಆಹಾರ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಜಿಲ್ಲೆಯ ರಬಕವಿ- ಬನಹಟ್ಟಿ ತಾಲೂಕಿನ ತೇರದಾಳ ಪಟ್ಟಣದ ಬಸವಣ್ಣ ರಸ್ತೆಯಲ್ಲಿ ನಡೆದಿದೆ. ಅಕ್ರಮವಾಗಿ ಸಾಗಾಟವಾಗುತ್ತಿದ್ದ ಸುಮಾರು 1ಲಕ್ಷ 24 ಸಾವಿರದ 83 ಕ್ವಿಂಟಾಲ್ 10 ಕೆಜಿ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ. ಹಾಗೂ ಎರಡು ವಾಹನವನ್ನು ಜಪ್ತಿ ಮಾಡಿ ಚಾಲಕರಾದ ವಿನಾಯಕ ಸದಾಶಿವ ತೇಲಿ, ವಿಠ್ಠಲ ಲಕ್ಷ್ಮಣ ವಿರುದ್ದ ಪ್ರಕರಣ ದಾಖಲಾಗಿದೆ.

ಅಕ್ರಮ ಅಕ್ಕಿ ಸಾಗಾಟ ➤ ಲಾರಿ ಸಹಿತ 83 ಕ್ವಿಂಟಾಲ್ ಅಕ್ಕಿ ವಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top