ಬ್ರೇಕಿಂಗ್ ನ್ಯೂಸ್

ಪರೀಕ್ಷೆಯಲ್ಲಿ ನಕಲು ಮಾಡುವ ಆತಂಕ ➤ ಮೂರು ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆ ತಾತ್ಕಾಲಿಕ ಸ್ಥಗಿತ..!

(ನ್ಯೂಸ್ ಕಡಬ) Newskadaba.com ಬಿಕಾನೇರ್, ಅ. 23. ಪಟ್ವಾರಿ ನೇಮಕಾತಿ ಪರೀಕ್ಷೆಯ ಹಿನ್ನೆಲೆ ರಾಜಸ್ಥಾನದ ಬಿಕಾನೇರ್, ಜೈಪುರ ಹಾಗೂ ದೌಸಾ ಜಿಲ್ಲೆಗಳಲ್ಲಿ ಬೆಳಗ್ಗೆ 6ರಿಂದ ಸಂಜೆ 6ರ ವರೆಗೆ ಇಂಟರ್‌ನೆಟ್ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಬಿಕಾನೇರ್ ವಿಭಾಗೀಯ ಆಯುಕ್ತ ಬಿ.ಎಲ್. ಮೆಹ್ರಾ ಆದೇಶಿಸಿದ್ದಾರೆ.   ಉತ್ತರ ಭಾರತದಲ್ಲಿ ನಡೆಯುವ ವಿವಿಧ ಪರೀಕ್ಷೆಗಳಲ್ಲಿ ಆಧುನಿಕ ವ್ಯವಸ್ಥೆಗಳನ್ನು ದುರುಪಯೋಗಪಡಿಸಿ ನಕಲು ಮಾಡಿರುವುದು ಈ ಹಿಂದೆ ಹಲವು ಬಾರಿ ಪತ್ತೆಯಾಗಿತ್ತು. ಈ ಹಿನ್ನೆಲೆ ಪರೀಕ್ಷೆಯಲ್ಲಿ ನಕಲು ಮಾಡುವ ಆತಂಕವಿರುವುದರಿಂದ ಈ ನಿರ್ಧಾರವನ್ನು […]

ಪರೀಕ್ಷೆಯಲ್ಲಿ ನಕಲು ಮಾಡುವ ಆತಂಕ ➤ ಮೂರು ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆ ತಾತ್ಕಾಲಿಕ ಸ್ಥಗಿತ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರೈಲು ಢಿಕ್ಕಿ- ಮಹಿಳೆ ಗಂಭೀರ

(ನ್ಯೂಸ್ ಕಡಬ) Newskadaba.com ಮುಲ್ಕಿ, ಅ. 23. ರೈಲು ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೋರ್ವರು ಗಂಭೀರ ಗಾಯಗೊಂಡ ಘಟನೆ ಮುಲ್ಕಿಯಲ್ಲಿ ನಡೆದಿದೆ. ಗಂಭೀರ ಗಾಯಗೊಂಡ ಮಹಿಳೆಯನ್ನು ಇಬ್ರಾಹೀಂ ಎಂಬವರ‌ ಮಗಳು ಸಕೀನಾ ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಮುಲ್ಕಿ ರೈಲು ನಿಲ್ದಾಣದ ಬಳಿ ಈ ದುರ್ಘಟನೆ ನಡೆದಿದ್ದು, ಮಹಿಳೆಯ ತಲೆಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ರೈಲ್ವೇ ಪೊಲೀಸರು ಹಾಗೂ ಮುಲ್ಕಿ ಠಾಣಾ ಪೊಲೀಸರು ಭೇಟಿ ನೀಡಿ

ರೈಲು ಢಿಕ್ಕಿ- ಮಹಿಳೆ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಹೋಟೆಲ್ ನಲ್ಲಿ ತಂಗಿದ್ದ ಅನ್ಯಕೋಮಿನ ಜೋಡಿ ➤ ಪೊಲೀಸರಿಗೊಪ್ಪಿಸಿದ ಬಜರಂಗದಳ ಕಾರ್ಯಕರ್ತರು

(ನ್ಯೂಸ್ ಕಡಬ) Newskadaba.com ಮಂಗಳೂರು, ಅ. 23. ಹೋಟೆಲೊಂದರ ಮೇಲೆ ದಾಳಿ ನಡೆಸಿದ ಬಜರಂಗದಳದ ಕಾರ್ಯಕರ್ತರು ಅಲ್ಲಿ ತಂಗಿದ್ದ ಅನ್ಯಕೋಮಿನ ಜೋಡಿಯೊಂದನ್ನು ಪೊಲೀಸರ ವಶಕ್ಕೊಪ್ಪಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಹಾವೇರಿಯ ಅನ್ಯಕೋಮಿನ ಯುವಕ ಹಾಗೂ ವಿಜಯಪುರದ ಹಿಂದೂ ಯುವತಿಯು ಮಂಗಳೂರಿನ ಹೋಟೆಲೊಂದರಲ್ಲಿ ತಂಗಿದ್ದು, ವಿಷಯ ತಿಳಿದ ಬಜರಂಗದಳದ ಕಾರ್ಯಕರ್ತರು ಹೋಟೆಲ್ ಮೇಲೆ ದಾಳಿ ನಡೆಸಿ, ಜೋಡಿಗೆ ಎಚ್ಚರಿಕೆ ನೀಡಿ ಯುವಕ- ಯುವತಿಯನ್ನು ಮಂಗಳೂರಿನ ಬಂದರು ಪೊಲೀಸ್ ಠಾಣೆಗೆ ಹಾಜರುಪಡಿಸಿದ್ದಾರೆ.

ಮಂಗಳೂರು: ಹೋಟೆಲ್ ನಲ್ಲಿ ತಂಗಿದ್ದ ಅನ್ಯಕೋಮಿನ ಜೋಡಿ ➤ ಪೊಲೀಸರಿಗೊಪ್ಪಿಸಿದ ಬಜರಂಗದಳ ಕಾರ್ಯಕರ್ತರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಹಾಲು ಸೊಸೈಟಿಯಲ್ಲಿ ಶಾರ್ಟ್ ಸರ್ಕ್ಯೂಟ್ ➤ ಕಂಪ್ಯೂಟರ್ ಸೇರಿದಂತೆ ಹಲವು ವಸ್ತುಗಳು ಸುಟ್ಟು ಭಸ್ಮ

(ನ್ಯೂಸ್ ಕಡಬ) newskadaba.com ಕಡಬ, ಅ.22. ಶಾರ್ಟ್ ಸರ್ಕ್ಯೂಟ್ ಕಾರಣದಿಂದಾಗಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಹಾಲಿನ ಸೊಸೈಟಿಯಲ್ಲಿನ ಪರಿಕರಗಳು ಸುಟ್ಟು ಭಸ್ಮವಾದ ಘಟನೆ ಗುರುವಾರ ರಾತ್ರಿ ಕಡಬ ಸಮೀಪದ ಪೇರಡ್ಕ ಎಂಬಲ್ಲಿ ನಡೆದಿದೆ. ಹಾಲು ಉತ್ಪಾದಕರ ಸಹಕಾರಿ ಸಂಘದ ಪೇರಡ್ಕ ಶಾಖೆಯಲ್ಲಿ ಗುರುವಾರ ರಾತ್ರಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡಿದ್ದು, ಕಂಪ್ಯೂಟರ್ ಸೇರಿದಂತೆ ಸಾವಿರಾರು ರೂ. ನಷ್ಟ ಸಂಭವಿಸಿರುವುದಾಗಿ ಅಂದಾಜಿಸಲಾಗಿದೆ.      

ಕಡಬ: ಹಾಲು ಸೊಸೈಟಿಯಲ್ಲಿ ಶಾರ್ಟ್ ಸರ್ಕ್ಯೂಟ್ ➤ ಕಂಪ್ಯೂಟರ್ ಸೇರಿದಂತೆ ಹಲವು ವಸ್ತುಗಳು ಸುಟ್ಟು ಭಸ್ಮ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ಬೈಕ್ – ಮಿನಿ ಟೆಂಪೋ ನಡುವೆ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ.19. ಮೀನು ಸಾಗಾಟದ ಟೆಂಪೋ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗೋಳಿತೊಟ್ಟು ಸಮೀಪದ ಸನ್ನಂಪಾಡಿಯಲ್ಲಿ ನಡೆದಿದೆ. ಮೃತ ಸವಾರನನ್ನು ಮಂಗಳೂರು ಸಮೀಪದ ಕುಂಟಲ್ಪಾಡಿ ಪದವು ನಿವಾಸಿ ಸಚಿನ್(29ವ.) ಎಂದು ಗುರುತಿಸಲಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರನ ತಲೆಯ ಮೇಲೆ ಮೀನು ಸಾಗಾಟದ ಟೆಂಪೋ ಹರಿದಿದ್ದು, ಘಟನೆಯಲ್ಲಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು

ಉಪ್ಪಿನಂಗಡಿ: ಬೈಕ್ – ಮಿನಿ ಟೆಂಪೋ ನಡುವೆ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಟೀಂ ಇಂಡಿಯಾದ ಮುಂದಿನ ಕೋಚ್ ಆಗಿ ರಾಹುಲ್ ದ್ರಾವಿಡ್ ಆಯ್ಕೆ

(ನ್ಯೂಸ್ ಕಡಬ) Newskadaba.com ನವದೆಹಲಿ, ಅ. 16. ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರನ್ನು ನೇಮಕ ಮಾಡಲಾಗಿದೆ ಎಂದು ಎಎನ್‌ಐ ವರದಿ ತಿಳಿಸಿದೆ. ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ ಮುಗಿದ ತಕ್ಷಣ ಹಾಲಿ ಕೋಚ್ ರವಿ ಶಾಸ್ತ್ರಿ ಅವರ ಅವಧಿ ಮುಗಿಯಲಿದ್ದು, ಬಳಿಕ ರಾಹುಲ್ ದ್ರಾವಿಡ್ ಕೋಚ್ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಟೀಂ ಇಂಡಿಯಾದ ಮುಂದಿನ ಕೋಚ್ ಆಗಿ ರಾಹುಲ್ ದ್ರಾವಿಡ್ ಆಯ್ಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನೀರಿನಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಿ ನೀರುಪಾಲಾದ ಯುವಕ..!

(ನ್ಯೂಸ್ ಕಡಬ) Newskadaba.com ಕಲ್ಲಿಕೋಟೆ, ಅ. 15. ಸ್ನಾನಕ್ಕೆಂದು ಕಾಲುವೆಗೆ ತೆರಳಿದ್ದ ಮೂವರು ಮಕ್ಕಳು ಮುಳುಗುತ್ತಿದ್ದುದನ್ನು ಕಂಡ ಯುವಕನೋರ್ವ ಮೂವರು ಮಕ್ಕಳನ್ನು ರಕ್ಷಿಸಿ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಕೇರಳದ ಕುಟ್ಟಿಯಾಡಿ ಪ್ರದೇಶದ ವಿಲಾಪಳ್ಳಿ ಅರಯಾಕೂಲ್ ಎಂಬಲ್ಲಿ ನಡೆದಿದೆ. ಮೃತರನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(PFI) ಕಾರ್ಯಕರ್ತ ಝಹೀರ್(40) ಎಂದು ಗುರುತಿಸಲಾಗಿದೆ. ಇವರು ಮಾಹಿ ಕಾಲುವೆಗೆ ಸ್ನಾನಕ್ಕೆಂದು ತೆರಳಿದ್ದ ಮಕ್ಕಳು ನೀರಿನ ಸುಳಿಗೆ ಸಿಲುಕಿ ಮುಳುಗುತ್ತಿದ್ದು, ಜೊತೆಗಿದ್ದ ಮಕ್ಕಳ ಕಿರುಚಾಟವನ್ನು ಕೇಳಿದ ಝಹೀರ್, ಮೂವರು

ನೀರಿನಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಿ ನೀರುಪಾಲಾದ ಯುವಕ..! Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

12ರಿಂದ 18 ವರ್ಷದ ಒಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡಲು ಡಿಸಿಜಿಐ ನಿಂದ ಗ್ರೀನ್ ಸಿಗ್ನಲ್

(ನ್ಯೂಸ್ ಕಡಬ) Newskadaba.com ನವದೆಹಲಿ, ಅ. 12. ಕೋವಿಡ್ ಲಸಿಕೆ ಕೋವ್ಯಾಕ್ಸಿನ್ ಅನ್ನು 2 ರಿಂದ 18 ವರ್ಷದ ವಯೋಮಾನದವರಿಗೆ ನೀಡಲು ತಜ್ಞರ ಸಮಿತಿ ಗ್ರೀನ್ ಸಿಗ್ನಲ್ ನೀಡಿದೆ. ಭಾರತ್ ಬಯೋಟೆಕ್ ಕಂಪನಿ ಅಭಿವೃದ್ಧಿಪಡಿಸಿರುವ ಕೋವ್ಯಾಕ್ಸಿನ್ ಕೋವಿಡ್–19 ಲಸಿಕೆಯನ್ನು, 2ರಿಂದ 18 ವರ್ಷದ ಒಳಗಿನವರಿಗೆ ನೀಡಬಹುದೆಂದು ವಿಷಯ ತಜ್ಞರ ಸಮಿತಿಯು ಭಾರತೀಯ ಪ್ರಧಾನ ಔಷಧ ನಿಯಂತ್ರಕಕ್ಕೆ (ಡಿಸಿಜಿಐ) ಶಿಫಾರಸು ಮಾಡಿರುವುದಾಗಿ ಅಧಿಕೃತ ಮೂಲಗಳು ತಿಳಿಸಿವೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.

12ರಿಂದ 18 ವರ್ಷದ ಒಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡಲು ಡಿಸಿಜಿಐ ನಿಂದ ಗ್ರೀನ್ ಸಿಗ್ನಲ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಪ್ಪಿನಂಗಡಿ: ಬಸ್ಸಿನಡಿಗೆ ಬಿದ್ದು ತಾಯಿ – ಮಗು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ.12. ಚಲಿಸುತ್ತಿದ್ದ ಬಸ್ಸಿನಡಿಗೆ ಬಿದ್ದು ತಾಯಿ ಮತ್ತು ಮಗು ಸ್ಥಳದಲ್ಲೇ ಮೃತಪಟ್ಟ ದಟರುಣ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ನಡೆದಿದೆ. ತಾಯಿ ಮಗು ಬಸ್ ನಿಲ್ದಾಣದ ಬಳಿ ರಸ್ತೆ ದಾಟುತ್ತಿದ್ದ ವೇಳೆ ದಿಢೀರನೆ ಆಗಮಿಸಿದ ಕೆಎಸ್ಸಾರ್ಟಿಸಿ ಬಸ್ ಚಲಿಸಿ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ತಾಯಿ ಮತ್ತು ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕಾಗಮಿಸಿದ ಉಪ್ಪಿನಂಗಡಿ ಪೊಲೀಸರು ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.      

ಉಪ್ಪಿನಂಗಡಿ: ಬಸ್ಸಿನಡಿಗೆ ಬಿದ್ದು ತಾಯಿ – ಮಗು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪ್ರಚೋದನೆಯನ್ನು ಪ್ರಬುದ್ದತೆಯಿಂದ ಎದುರಿಸೋಣ ➤ ಇಕ್ಬಾಲ್ ಬಾಳಿಲ

(ನ್ಯೂಸ್ ಕಡಬ) Newskadaba.com ಅ.‌ 12. ವಿವಿಧತೆಯಲ್ಲಿ ಏಕತೆಯನ್ನು ಸಾರುವ ಭಾರತದಲ್ಲಿ ಪ್ರಚೋದನಕಾರಿ ಹೇಳಿಕೆಗಳ ಮೂಲಕ ಹಿಂದೂ- ಮುಸ್ಲಿಮರಲ್ಲಿ ಒಡಕುಂಟು ಮಾಡಲು ಸಾಧ್ಯವಿಲ್ಲ. ಇಂತಹ ಹೇಳಿಕೆಗಳನ್ನು ಖಂಡಿಸುತ್ತೇವೆ ಅಲ್ಲದೇ, ಪ್ರಚೋದನೆಗಳನ್ನು ಪ್ರಬುದ್ಧತೆಯಿಂದ ಎದುರಿಸೋಣ ಎಂದು SKSSF ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬಾಳಿಲ ಹೇಳಿದರು. ಅವರು ಇಂದು SKSSF ಸುಳ್ಯ ವಲಯ ಸಮಿತಿ ವತಿಯಿಂದ ನಡೆದ ಮುಸ್ಲಿಂ ಸಮುದಾಯದ ವಿರುದ್ದ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯ, ಪ್ರಚೋದನಕಾರಿ ಹೇಳಿಕೆ ಮತ್ತು ಪ್ರವಾದಿ (ಸ.ಅ) ರವರ ನಿಂದನೆಯ ವಿರುದ್ದ ಸುಳ್ಯದಲ್ಲಿ ನಡೆದ

ಪ್ರಚೋದನೆಯನ್ನು ಪ್ರಬುದ್ದತೆಯಿಂದ ಎದುರಿಸೋಣ ➤ ಇಕ್ಬಾಲ್ ಬಾಳಿಲ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್, ಸಿನಿಮಾ
Scroll to Top