ಅಡುಗೆ ಅನಿಲ ಸೇರಿದಂತೆ ದಿನ ಬಳಕೆಯ ವಸ್ತುಗಳ ಬೆಲೆ ಏರಿಕೆಗೆ ಖಂಡನೆ ➤ ಎಸ್ಡಿಪಿಐ ಕಡಬ ಬ್ಲಾಕ್ ವತಿಯಿಂದ ಪ್ರತಿಭಟನೆ
(ನ್ಯೂಸ್ ಕಡಬ) newskadaba.com ಕಡಬ, ಸೆ.01. ಕೇಂದ್ರ ಮತ್ತು ರಾಜ್ಯ ಸರಕಾರವು ಕೋವಿಡ್ ಸಂಕಷ್ಟದ ಸಮಯದಲ್ಲಿ ಅಡುಗೆ ಅನಿಲ, ಪೆಟ್ರೋಲ್ ಸೇರಿದಂತೆ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಎಸ್ಡಿಪಿಐ ಕಡಬ ಬ್ಲಾಕ್ ವತಿಯಿಂದ, ಕಡಬದ ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು. ಸರಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು, ಅಡುಗೆ ಅನಿಲದ ಸಿಲಿಂಡರ್ ಗಳ ಅಣುಕು ಶವಯಾತ್ರೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯ ನೇತೃತ್ವವನ್ನು ವಹಿಸಿದ್ದ ಎಸ್ಡಿಪಿಐ ರಾಜ್ಯ ಸಮಿತಿ ನಾಯಕರಾದ […]









