ಬ್ರೇಕಿಂಗ್ ನ್ಯೂಸ್

ಬೆಳ್ಳಂಬೆಳಗ್ಗೆ ಬೆಂಕಿಗಾಹುತಿಯಾದ ಪಾರ್ಸೆಲ್ ಸಾಗಾಟದ ವಾಹನ ➤ ಮಧ್ಯ ರಸ್ತೆಯಲ್ಲೇ ಸುಟ್ಟು ಭಸ್ಮ

(ನ್ಯೂಸ್ ಕಡಬ) newskadaba.com ಸಕಲೇಶಪುರ, ಆ.19. ಪಾರ್ಸೆಲ್ ಸಾಗಾಟದ ಕ್ಯಾಂಟರ್ ವಾಹನವೊಂದು ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿಗಾಹುತಿಯಾದ ಘಟನೆ ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಸಕಲೇಶಪುರದ ದೋಣಿಗಲ್ ಸಮೀಪ ಗುರುವಾರ ಬೆಳಿಗ್ಗೆ ಸಂಭವಿಸಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕ್ಯಾಂಟರ್, ದೋಣಿಗಲ್ ಸಮೀಪ ಹೆದ್ದಾರಿಯಲ್ಲೇ ಹೊತ್ತಿ ಉರಿದಿದೆ. ಸ್ಥಳೀಯರು ಬೆಂಕಿಯನ್ನು ನಂದಿಸಲು ಯತ್ನಿಸಿದರಾದರೂ ಅದಾಗಲೇ ಬೆಂಕಿಯ ಕೆನ್ನಾಲಗೆಗೆ ಕ್ಯಾಂಟರ್ ಲಾರಿ ಭಸ್ಮವಾಗಿದೆ. ಚಾಲಕ ತಕ್ಷಣವೇ ಹೊರ ಬಂದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.          

ಬೆಳ್ಳಂಬೆಳಗ್ಗೆ ಬೆಂಕಿಗಾಹುತಿಯಾದ ಪಾರ್ಸೆಲ್ ಸಾಗಾಟದ ವಾಹನ ➤ ಮಧ್ಯ ರಸ್ತೆಯಲ್ಲೇ ಸುಟ್ಟು ಭಸ್ಮ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೊರೋನಾ ಭೀತಿಯಿಂದ ಆತ್ಮಹತ್ಯೆಗೈದ ದಂಪತಿಯ ವರದಿ ನೆಗೆಟಿವ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ.18. ಕೊರೋನಾ ಸೋಂಕಿನ ಭೀತಿಯಿಂದ ಡೆತ್‌ನೋಟ್‌ ಬರೆದಿಟ್ಟು ಅಪಾರ್ಟ್‌ಮೆಂಟ್‌ನಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ ದಂಪತಿಯ ಮರಣೋತ್ತರ ಪರೀಕ್ಷೆಗೆ ಮುನ್ನ ನಡೆಸಿದ ಕೋವಿಡ್ ಟೆಸ್ಟ್‌ನಲ್ಲಿ ಕೊರೋನಾ ನಗೆಟಿವ್ ವರದಿ ಬಂದಿದೆ. ಮೂಲತಃ ಪಡುಬಿದ್ರಿ ನಿವಾಸಿಗಳಾದ ಆರ್ಯ ಸುವರ್ಣ(45) ಮತ್ತು ಗುಣ ಸುವರ್ಣ(35) ಎಂಬವರು ನಗರದ ಹೊರವಲಯದ ಬೈಕಂಪಾಡಿ ಸಮೀಪದ ಚಿತ್ರಾಪುರದ ಅಪಾರ್ಟ್‌ಮೆಂಟ್ ಒಂದರಲ್ಲಿ ಕೊರೋನಾ ಜೊತೆಗೆ ಬ್ಲ್ಯಾಕ್ ಫಂಗಸ್ ಭೀತಿಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದರು‌. ಡೆತ್ ನೋಟ್ ಬರೆದಿರುವ ಗಯಣ ಸುವರ್ಣ ‘ನಾನು 14ನೇ

ಕೊರೋನಾ ಭೀತಿಯಿಂದ ಆತ್ಮಹತ್ಯೆಗೈದ ದಂಪತಿಯ ವರದಿ ನೆಗೆಟಿವ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕೊರೋನಾ ಸೋಂಕಿನ ನಡುವೆ ಬ್ಲಾಕ್ ಫಂಗಸ್ ಭೀತಿ ➤ ಡೆತ್ ನೋಟ್ ಬರೆದಿಟ್ಟು ದಂಪತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.17. ಕೊರೋನಾ ಸೋಂಕಿತ ದಂಪತಿ ಡೆತ್‌ನೋಟ್‌ ಬರೆದಿಟ್ಟು ಅಪಾರ್ಟ್‌ಮೆಂಟ್‌ನಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಹೊರವಲಯದ ಬೈಕಂಪಾಡಿ ಸಮೀಪದ ಚಿತ್ರಾಪುರದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ದಂಪತಿಯನ್ನು ಮೂಲತಃ ಪಡುಬಿದ್ರಿ ನಿವಾಸಿಗಳಾದ ಚಿತ್ರಾಪುರದ ಅಪಾರ್ಟ್‌ಮೆಂಟ್‌ವೊಂದರಲ್ಲಿ ವಾಸವಿದ್ದ ಆರ್ಯ ಸುವರ್ಣ(45) ಮತ್ತು ಗುಣ ಸುವರ್ಣ(35) ಎಂದು ಗುರುತಿಸಲಾಗಿದೆ. ಡೆತ್ ನೋಟ್ ಬರೆದಿರುವ ಗಯಣ ಸುವರ್ಣ ‘ನಾನು 14ನೇ ವಯಸ್ಸಿನಿಂದಲೇ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದೇನೆ. 2000ನೇ ಇಸವಿಯಲ್ಲಿ ನಮ್ಮ ಮದುವೆಯಾಗಿದೆ. 2001ರಲ್ಲಿ ಗರ್ಭಿಣಿಯಾಗಿದ್ದಾಗ ನನಗೆ

ಕೊರೋನಾ ಸೋಂಕಿನ ನಡುವೆ ಬ್ಲಾಕ್ ಫಂಗಸ್ ಭೀತಿ ➤ ಡೆತ್ ನೋಟ್ ಬರೆದಿಟ್ಟು ದಂಪತಿ ಆತ್ಮಹತ್ಯೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬ: ಬಾಲಕಿಯ ಅತ್ಯಾಚಾರ ಯತ್ನ ಪ್ರಕರಣ ಪೂರ್ವಯೋಜಿತ ➤ ವಾಡ್ಯಪ್ಪ ಗೌಡ ಎರ್ಮಾಯಿಲ್ ಆರೋಪ

ಕಡಬ, ಆ.14. ಬಿಳಿನೆಲೆ ಕಿದು ಸಮೀಪದ ಹಾಲುಮಡ್ಡಿಯ ತೋಟದಲ್ಲಿ ವಿದ್ಯಾರ್ಥಿನಿಯನ್ನು ಅತ್ಯಾಚಾರ ಹಾಗೂ ಕಿಡ್ನಾಪ್‌ಗೆ ಯತ್ನ ಮಾಡಿರುವ ಪ್ರಕರಣವು ಪೂರ್ವ ಯೋಜಿತವಾಗಿದ್ದು, ಪೊಲೀಸರು ಕೂಡಾ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸದೆ ಆರೋಪಿಯನ್ನು ರಕ್ಷಿಸುವ ಯತ್ನ ನಡೆಸಿದ್ದರು ಎಂದು ಬಿಳಿನೆಲೆ ಗ್ರಾ.ಪಂ. ಮಾಜಿ ಅಧ್ಯಕ್ಷ ವಾಡ್ಯಪ್ಪ ಗೌಡ ಎರ್ಮಾಯಿಲ್ ಆರೋಪಿಸಿದ್ದಾರೆ. ಅವರು ಕಡಬದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಪ್ರಕರಣದ ಆರೋಪಿಯ ಬಗ್ಗೆ ಸ್ಪಷ್ಟ ಮಾಹಿತಿಯಿದ್ದರೂ ಪೊಲೀಸರು ಪ್ರಕರಣ ದಾಖಲಿಸಲು ಮೀನಾಮೇಷ ನಡೆಸಿ ಊರವರು ಒತ್ತಡ ಹಾಕಿದ ಬಳಿಕವೇ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು

ಕಡಬ: ಬಾಲಕಿಯ ಅತ್ಯಾಚಾರ ಯತ್ನ ಪ್ರಕರಣ ಪೂರ್ವಯೋಜಿತ ➤ ವಾಡ್ಯಪ್ಪ ಗೌಡ ಎರ್ಮಾಯಿಲ್ ಆರೋಪ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಹಾರ ಹಾಕಿ ಸನ್ಮಾನ ನಿಷೇಧ ಬೆನ್ನಲ್ಲೇ ಮತ್ತೊಂದು ಮಹತ್ವದ ನಿರ್ಧಾರ ➤ ಇತರ ನಾಯಕರಿಗೆ ಮಾದರಿಯಾದ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.14. ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಸರಕಾರಿ ಕಾರ್ಯಕ್ರಮಗಳಲ್ಲಿ ಹಾರ ಹಾಕಿ ಸನ್ಮಾನ ಮಾಡುವುದಕ್ಕೆ ಬ್ರೇಕ್ ಹಾಕಿದ್ದ ಸಿಎಂ ಬಸವರಾಜ ಬೊಮ್ಮಾಯಿ ಇದೀಗ ಮತ್ತೊಂದು ಮಹತ್ವದ ತೀರ್ಮಾನಕ್ಕೆ ನಾಂದಿ ಹಾಡಿದ್ದಾರೆ. ಇನ್ಮುಂದೆ ತನಗೆ ಬೆಂಗಳೂರು ನಗರದಲ್ಲಿ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡುವುದು ಬೇಡ ಎಂಬ ಹೊಸ ತೀರ್ಮಾನ ಕೈಗೊಳ್ಳುವ ಮೂಲಕ ಮಾದರಿಯಾಗಿದ್ದಾರೆ. ತಾನು ಸಂಚರಿಸುವ ವೇಳೆ ಝೀರೋ ಟ್ರಾಫಿಕ್ ಹೆಸರಿನಲ್ಲಿ ಸಾರ್ವಜನಿಕರಿಗೆ ತೊಂದರೆ ಉಂಟಾಗುವುದನ್ನು ಮನಗಂಡು ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.

ಹಾರ ಹಾಕಿ ಸನ್ಮಾನ ನಿಷೇಧ ಬೆನ್ನಲ್ಲೇ ಮತ್ತೊಂದು ಮಹತ್ವದ ನಿರ್ಧಾರ ➤ ಇತರ ನಾಯಕರಿಗೆ ಮಾದರಿಯಾದ ಸಿಎಂ ಬೊಮ್ಮಾಯಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ರಾತ್ರಿಯಿಂದಲೇ ವೀಕೆಂಡ್ ಕರ್ಫ್ಯೂ ➤ ಸರಳ ರೀತಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.13. ನೆರೆ ರಾಜ್ಯ ಕೇರಳದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖವಾಗದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾದ್ಯಂತ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಇಂದು ರಾತ್ರಿ 9ರಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದ್ದು, ಈ ವೇಳೆ ಅಗತ್ಯ ವಸ್ತುಗಳ ಖರೀದಿಗೆ ಕಳೆದ ವಾರದ ವೀಕೆಂಡ್ ಕರ್ಫ್ಯೂನಂತೆ ಅಪರಾಹ್ನ 2 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ. ವಾರಾಂತ್ಯ ಕರ್ಫ್ಯೂ ವೇಳೆ ಯಾವುದೇ ವಾಣಿಜ್ಯ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ರಾತ್ರಿಯಿಂದಲೇ ವೀಕೆಂಡ್ ಕರ್ಫ್ಯೂ ➤ ಸರಳ ರೀತಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

Big Shocking News ರಾಜ್ಯದಲ್ಲಿ ಕೊರೋನಾ ಮೂರನೇ ಅಲೆ ಆರಂಭ..? ➤ 5 ದಿನಗಳಲ್ಲಿ 242 ಮಕ್ಕಳಿಗೆ ಕೊರೋನಾ ದೃಢ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.12. ರಾಜ್ಯದಲ್ಲಿ ಕಳೆದ ಐದು ದಿನಗಳಲ್ಲಿ ಕನಿಷ್ಠ 242 ಮಕ್ಕಳು ಕೊರೊನಾವೈರಸ್ ಸೋಂಕಿಗೆ ಒಳಗಾಗಿದ್ದು, ಕೊರೋನಾ ಮೂರನೇ ಅಲೆ ಆರಂಭವಾಗಿದೆಯಾ ಎನ್ನುವ ಅನುಮಾನ ಮೂಡಿಬಂದಿದೆ. ಸರ್ಕಾರದ ಅಂಕಿ ಅಂಶಗಳ ಪ್ರಕಾರ ಕಳೆದ 5 ದಿನಗಳಲ್ಲಿ 19 ವರ್ಷಕ್ಕಿಂತ ಕಡಿಮೆ ವಯಸ್ಸಿನ 242 ಮಂದಿಯಲ್ಲಿ ಕೊರೋನಾ ದೃಢಪಟ್ಟಿದ್ದು, ಇದರಲ್ಲಿ 9 ವರ್ಷಕ್ಕಿಂತ ಕಡಿಮೆ ವಯಸ್ಸಿನ 106 ಮಕ್ಕಳು ಹಾಗೂ 9 ರಿಂದ 19 ವರ್ಷದ ಒಳಗಿನ 136 ಮಂದಿ ಸೇರಿದ್ದಾರೆ. ಈ ಹಿಂದೆಯೇ

Big Shocking News ರಾಜ್ಯದಲ್ಲಿ ಕೊರೋನಾ ಮೂರನೇ ಅಲೆ ಆರಂಭ..? ➤ 5 ದಿನಗಳಲ್ಲಿ 242 ಮಕ್ಕಳಿಗೆ ಕೊರೋನಾ ದೃಢ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸ್ವಂತ ಚಿಕ್ಕಪ್ಪನಿಂದಲೇ ಅಪ್ರಾಪ್ತ ಬಾಲಕಿಯ‌ ಅತ್ಯಾಚಾರ ಯತ್ನ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಆ.12. ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಆಕೆಯ ಚಿಕ್ಕಪ್ಪನೇ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಮೂಡಬಿದಿರೆಯಿಂದ ವರದಿಯಾಗಿದೆ. ತೆಂಕಮಿಜಾರು ವ್ಯಾಪ್ತಿಯ ಪ್ರೌಢಶಾಲಾ ವಿದ್ಯಾರ್ಥಿನಿ, ಅಪ್ರಾಪ್ತೆ ಬಾಲಕಿಯು ಸೋಮವಾರದಂದು ತನ್ನ ಮನೆಗೆ ತೆರಳುತ್ತಿದ್ದ ವೇಳೆ ಅಡ್ಡಗಟ್ಟಿದ ಆಕೆಯ ಚಿಕ್ಕಪ್ಪ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಬಾಲಕಿ ನೀಡಿದ ದೂರಿನ ಮೇರೆಗೆ ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.        

ಸ್ವಂತ ಚಿಕ್ಕಪ್ಪನಿಂದಲೇ ಅಪ್ರಾಪ್ತ ಬಾಲಕಿಯ‌ ಅತ್ಯಾಚಾರ ಯತ್ನ ➤ ಆರೋಪಿಯ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯ ಈ ಬಾರಿಯೂ ಟಾಪ್ ➤ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಇಬ್ಬರಿಗೆ 625 ರಲ್ಲಿ 625 ಅಂಕ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ.09. ಈ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದ ಇಬ್ಬರು ವಿದ್ಯಾರ್ಥಿನಿಯರು 625 ರಲ್ಲಿ 625 ಅಂಕ ಪಡೆಯುವ ಮೂಲಕ ರಾಜ್ಯದಲ್ಲಿ ಟಾಪರ್ ಎನಿಸಿಕೊಂಡಿದ್ದಾರೆ. ಸುಳ್ಯ ತಾಲೂಕಿನ ಗುತ್ತಿಗಾರು ನಿವಾಸಿ ದುರ್ಗೇಶ್ ಮತ್ತು ವೇದಾವತಿ ದಂಪತಿಗಳ ಪುತ್ರಿ ಅನನ್ಯ ಹಾಗೂ ಸುಬ್ರಹ್ಮಣ್ಯದ ವೆಲೇರಿಯನ್ ಡಿಸೋಜಾ ಮತ್ತು ತೆರೆಸಾ ಡಿಸೋಜಾ ದಂಪತಿಗಳ ಪುತ್ರಿ ವೆನೆಸಾ ಶರಿನಾ ಡಿಸೋಜಾ 625 ಅಂಕ ಪಡೆದ ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿನಿಗಳಾಗಿದ್ದಾರೆ. ಕಳೆದ ವರ್ಷ

ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯ ಈ ಬಾರಿಯೂ ಟಾಪ್ ➤ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಇಬ್ಬರಿಗೆ 625 ರಲ್ಲಿ 625 ಅಂಕ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಸ್ಸೆಸ್ಸೆಲ್ಸಿ ಫಲಿತಾಂಶಕ್ಕೆ ಕ್ಷಣಗಣನೆ ➤ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.09. ಕೊರೋನಾ ಏಳು-ಬೀಳುಗಳ ನಡುವೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆದು ಕೊನೆಗೂ ಇದೀಗ ಫಲಿತಾಂಶ ಪ್ರಕಟಗೊಳ್ಳಲು ಕ್ಷಣಗಣನೆ ಆರಂಭಗೊಂಡಿದೆ. ಇಂದು ಸಂಜೆ 3.30ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ನೂತನ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಕೊರೋನಾ ಭಯದ ನಡುವೆಯೂ 99.65% ವಿದ್ಯಾರ್ಥಿಗಳು ಹಾಜರಾಗಿದ್ದರು. ಸರಕಾರದ ಅಧಿಕೃತ ವೆಬ್‌ಸೈಟ್‌ http://sslc.karnataka.gov.in http://kseeb.kar.nic.in http://karresults.nic.in ಗಳಲ್ಲಿ ಫಲಿತಾಂಶವನ್ನು ಪಡೆಯಬಹುದಾಗಿದೆ‌. ಈ ಬಾರಿ ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳು ಪಾಸ್

ಎಸ್ಸೆಸ್ಸೆಲ್ಸಿ ಫಲಿತಾಂಶಕ್ಕೆ ಕ್ಷಣಗಣನೆ ➤ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top