ಬ್ರೇಕಿಂಗ್ ನ್ಯೂಸ್

ಇಂದು ಎಸ್ಸೆಸ್ಸೆಲ್ಸಿ ಫಲಿತಾಂಶ ➤ ಫಲಿತಾಂಶ ಇಲ್ಲಿ ವೀಕ್ಷಿಸಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.09. ಕೊರೋನಾ ಏಳು-ಬೀಳುಗಳ ನಡುವೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆದು ಕೊನೆಗೂ ಇದೀಗ ಫಲಿತಾಂಶ ಪ್ರಕಟಗೊಳ್ಳಲು ಕ್ಷಣಗಣನೆ ಆರಂಭಗೊಂಡಿದೆ. ಇಂದು ಸಂಜೆ 3.30ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ನೂತನ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಕೊರೋನಾ ಭಯದ ನಡುವೆಯೂ 99.65% ವಿದ್ಯಾರ್ಥಿಗಳು ಹಾಜರಾಗಿದ್ದರು. ಸರಕಾರದ ಅಧಿಕೃತ ವೆಬ್‌ಸೈಟ್‌ http://sslc.karnataka.gov.in http://kseeb.kar.nic.in http://karresults.nic.in ಗಳಲ್ಲಿ ಫಲಿತಾಂಶವನ್ನು ಪಡೆಯಬಹುದಾಗಿದೆ‌. ಈ ಬಾರಿ ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳು ಪಾಸ್ […]

ಇಂದು ಎಸ್ಸೆಸ್ಸೆಲ್ಸಿ ಫಲಿತಾಂಶ ➤ ಫಲಿತಾಂಶ ಇಲ್ಲಿ ವೀಕ್ಷಿಸಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರಾವಳಿಯಲ್ಲಿ ಏರಿಕೆ ಕಂಡ ಕೊರೋನಾ ಸೋಂಕು ➤ ದಕ್ಷಿಣ ಕನ್ನಡದಲ್ಲಿ ಇಂದು ರಾಜ್ಯದಲ್ಲೇ ಅತ್ಯಧಿಕ ಪಾಸಿಟಿವ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ.08. ಕೊರೋನಾ ಸೋಂಕು ನಿಯಂತ್ರಿಸುವಲ್ಲಿ ಬುದ್ಧಿವಂತರ ಜಿಲ್ಲೆಯ ಜನತೆ ಎಡವಿದ್ದು, ದಕ್ಷಿಣ ಕನ್ನಡ ಜಿಲ್ಲೆ ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 438 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, ಬೆಂಗಳೂರು ನಗರದಲ್ಲಿ 348 ಮಂದಿಗೆ ಪಾಸಿಟಿವ್ ಬಂದಿದೆ. ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ 6 ಮಂದಿ ಮೃತಪಟ್ಟಿದ್ದು, ಇಂದಿನ ಪಾಸಿಟಿವಿಟಿ ದರ 4.57% ದಾಖಲಾಗಿದೆ.        

ಕರಾವಳಿಯಲ್ಲಿ ಏರಿಕೆ ಕಂಡ ಕೊರೋನಾ ಸೋಂಕು ➤ ದಕ್ಷಿಣ ಕನ್ನಡದಲ್ಲಿ ಇಂದು ರಾಜ್ಯದಲ್ಲೇ ಅತ್ಯಧಿಕ ಪಾಸಿಟಿವ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೆರೆಗೆ ಬಿದ್ದ ಮಗು ಜೊತೆ ರಕ್ಷಿಸಲು ನೀರಿಗೆ ಹಾರಿದ ತಾಯಿ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಆ.08. ಆಕಸ್ಮಿಕವಾಗಿ ಕೆರೆಗೆ ಬಿದ್ದ ಮಗುವನ್ನು ರಕ್ಷಿಸಲು ಕೆರೆಗೆ ಹಾರಿದ ತಾಯಿ ಹಾಗೂ ಮಗು ಇಬ್ಬರೂ ನೀರಿನಲ್ಲಿ ಮುಳುಗಿ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಸುಳ್ಯದಲ್ಲಿ ಭಾನುವಾರದಂದು ಸಂಭವಿಸಿದೆ. ಮೃತರನ್ನು ಸುಳ್ಯ ತಾಲೂಕು ನೆಲ್ಲೂರು ಕೆಮ್ರಾಜೆ ಗ್ರಾಮದ ಮಾಪಲಕಜೆ ನಿವಾಸಿ ಸಂಗೀತಾ(30) ಹಾಗೂ ಆಕೆಯ ಮಗು‌ ಮೂರೂವರೆ ವರ್ಷದ ಅಭಿಮನ್ಯು ಎಂದು ಗುರುತಿಸಲಾಗಿದೆ. ಸಂಗೀತಾರನ್ನು ಮೆಲ್ಕಾರ್ ನಿವಾಸಿ ಅಮಿತ್ ಎಂಬವರಿಗೆ ವಿವಾಹ ಮಾಡಿಕೊಡಲಾಗಿದ್ದು, ಕಳೆದೆರಡು ದಿನಗಳ ಹಿಂದಷ್ಟೇ ಪೂಜೆಯ ನಿಮಿತ್ತ ತವರು

ಕೆರೆಗೆ ಬಿದ್ದ ಮಗು ಜೊತೆ ರಕ್ಷಿಸಲು ನೀರಿಗೆ ಹಾರಿದ ತಾಯಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ತನ್ನ ಅಪ್ರಾಪ್ತೆ ಶಿಷ್ಯೆಯನ್ನೇ ಅತ್ಯಾಚಾರಗೈದ ಕಾಮುಕ ಶಿಕ್ಷಕ ➤ ಪೋಕ್ಸೋ ಕಾಯ್ದೆಯಡಿ ಬಂಧನ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ.08. ಅಪ್ರಾಪ್ತ ವಯಸ್ಸಿನ ತನ್ನ ಶಿಷ್ಯೆಯನ್ನೇ ಅತ್ಯಾಚಾರಗೈದ ಕಾಮುಕ ಶಿಕ್ಷಣಕನನ್ನು ಸುಬ್ರಹ್ಮಣ್ಯ ಪೊಲೀಸರು ಭಾನುವಾರದಂದು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸುಬ್ರಹ್ಮಣ್ಯದ ಶಿಕ್ಷಣ ಸಂಸ್ಥೆಯೊಂದರ ಪ್ರೌಢಶಾಲಾ ವಿಭಾಗದ ಶಿಕ್ಷಕ, ರಾಯಚೂರು ಮೂಲದ ಗುರುರಾಜ್ ಎಂದು ಗುರುತಿಸಲಾಗಿದೆ. ಆರೋಪಿಯು 2018 ರ ಬಳಿಕ ಹಲವು ಬಾರಿ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಅತ್ಯಾಚಾರಗೈದು ಆ ಬಳಿಕ ಫೋಟೋ ತೆಗೆದಿದ್ದಲ್ಲದೆ, ಈ ಬಗ್ಗೆ ಯಾರಲ್ಲಾದರೂ ಹೇಳಿದರೆ ಫೋಟೋ ವೈರಲ್ ಮಾಡುವುದಾಗಿ ಬೆದರಿಸಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಬಾಲಕಿಯು ಸುಬ್ರಹ್ಮಣ್ಯ

ತನ್ನ ಅಪ್ರಾಪ್ತೆ ಶಿಷ್ಯೆಯನ್ನೇ ಅತ್ಯಾಚಾರಗೈದ ಕಾಮುಕ ಶಿಕ್ಷಕ ➤ ಪೋಕ್ಸೋ ಕಾಯ್ದೆಯಡಿ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬದ ಸ್ಮಶಾನದಲ್ಲಿ ಅರೆ ಬೆಂದ ಸ್ಥಿತಿಯಲ್ಲಿ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಆ.07. ಇಲ್ಲಿನ ಹಿಂದೂ ರುದ್ರಭೂಮಿಯಲ್ಲಿ ಅರೆಬೆಂದ ಸ್ಥಿತಿಯಲ್ಲಿ ಮೃತದೇಹವೊಂದು ಶನಿವಾರ ರಾತ್ರಿ ಕಂಡುಬಂದಿದೆ. ಕಡಬ ಸಮೀಪದ ಗೋಳಿಯಡ್ಕ ನಿವಾಸಿಯೋರ್ವರು ಶನಿವಾರದಂದು ಮೃತಪಟ್ಟಿದ್ದು, ಕಡಬದ ಹಿಂದೂ ರುದ್ರಭೂಮಿಯಲ್ಲಿ ದಹನ ಕಾರ್ಯ ಮಾಡಲಾಗಿತ್ತು. ಮೃತ ವ್ಯಕ್ತಿಯ ಕುಟುಂಬ ಸದಸ್ಯರು ಮೃತದೇಹಕ್ಕೆ ಬೆಂಕಿ ಹಚ್ಚಿ ತೆರಳಿದ್ದರು ಎನ್ನಲಾಗಿದೆ. ಸಂಜೆ ವೇಳೆಗೆ ಪರಿಸರದ ವಾಸಿಗಳಿಗೆ ವಾಸನೆ ಬರಲಾರಂಭಿಸಿದ್ದು, ಸ್ಮಶಾನಕ್ಕೆ ತೆರಳಿದಾಗ ಅರೆಬೆಂದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ತಕ್ಷಣವೇ ಸ್ಥಳೀಯರು ಸೇರಿ ಬೆಂಕಿ‌ಹಾಕಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಕಡಬದ ಸ್ಮಶಾನದಲ್ಲಿ ಅರೆ ಬೆಂದ ಸ್ಥಿತಿಯಲ್ಲಿ ಮೃತದೇಹ ಪತ್ತೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ರೈಲಿನಡಿಗೆ ಬಿದ್ದು ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಆ.07. ರೈಲಿನಡಿಗೆ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಮಂಗಳೂರು – ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದ ನಡುವಿನ ಎಡಮಂಗಲದಲ್ಲಿ ಶನಿವಾರ ಸಂಜೆ ನಡೆದಿದೆ. ಮೃತ ಯುವಕನನ್ನು ಕಡಬ ತಾಲೂಕು ಎಡಮಂಗಲ ನಿವಾಸಿ ಭರತ ಎಂದು ಗುರುತಿಸಲಾಗಿದೆ. ಭರತನಿಗೆ 22 ವರ್ಷ ವಯಸ್ಸಾಗಿತ್ತು. ಶನಿವಾರ ಸಂಜೆ ರೈಲು ಹಳಿಯ ಮೇಲೆ ಭರತನ ಮೃತದೇಹ ದೊರೆತಿದ್ದು, ಘಟನೆಯ ಬಗ್ಗೆ ಹೆಚ್ಚಿನ ವಿವರ ಇನ್ನಷ್ಟೇ ತಿಳಿದುಬರಬೇಕಿದೆ.      

ರೈಲಿನಡಿಗೆ ಬಿದ್ದು ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅಣ್ಣನ ಪತ್ನಿಯ ಜೊತೆ ಅನೈತಿಕ ಸಂಬಂಧ ಆರೋಪ ➤ ಸಲಾಕೆಯಿಂದ ಹೊಡೆದು ತಮ್ಮನನ್ನು ಕೊಂದ ಅಣ್ಣ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ.07. ಅತ್ತಿಗೆಯ ಜೊತೆ ಅನೈತಿಕ ಸಂಬಂಧ ಹೊಂದಿದ ಆರೋಪದಲ್ಲಿ ಸ್ವಂತ ತಮ್ಮನನ್ನು ಅಣ್ಣನೇ ಸಲಾಕೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಬಂಟ್ವಾಳ ತಾಲೂಕಿನ ಪಾಣೆಮಂಗಳೂರಿನ ಬೊಂಡಾಲ ಶಾಂತಿಗುಡ್ಡೆ ಎಂಬಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಶಾಂತಿಗುಡ್ಡೆ ನಿವಾಸಿ ಸುಂದರ(30) ಎಂದು ಗುರುತಿಸಲಾಗಿದೆ. ಅವಿವಾಹಿತವಾಗಿದ್ದ ಸುಂದರ ಮೂಲ ಮನೆಯಲ್ಲಿ ಒಬ್ಬನೇ ವಾಸವಾಗಿದ್ದು, ಆತನ ಮನೆಯ ಸಮೀಪದಲ್ಲಿರುವ ಅಣ್ಣನ ಮನೆಯಿಂದ ಅತ್ತಿಗೆ ಊಟ- ತಿಂಡಿ‌ ನೀಡುತ್ತಿದ್ದರು ಎನ್ನಲಾಗಿದೆ. ಅತ್ತಿಗೆಯ ಜೊತೆ ಅನೈತಿಕ‌ ಸಂಬಂಧವಿದೆ ಎಂದು

ಅಣ್ಣನ ಪತ್ನಿಯ ಜೊತೆ ಅನೈತಿಕ ಸಂಬಂಧ ಆರೋಪ ➤ ಸಲಾಕೆಯಿಂದ ಹೊಡೆದು ತಮ್ಮನನ್ನು ಕೊಂದ ಅಣ್ಣ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಆನ್‌ಲೈನ್ ತರಗತಿಯ ಅವಾಂತರ ➤ ಕಾಲೇಜಿಗೆಂದು ತೆರಳಿದ ಅಪ್ರಾಪ್ತ ಯುವತಿ ನಾಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಆ.06. ಮೊಬೈಲ್ ಮೂಲಕ ಹುಟ್ಟಿಕೊಂಡ ಪ್ರೀತಿಯಿಂದ ಅಪ್ರಾಪ್ತ ಯುವತಿಯು ಸ್ಥಳೀಯ ಯುವಕನ ಜೊತೆ ನಾಪತ್ತೆಯಾಗಿರುವ ಘಟನೆ ಕಡಬ ಸಮೀಪದ ಕಳಾರದಿಂದ ವರದಿಯಾಗಿದೆ. ಕಳಾರ ನಿವಾಸಿ ಹದಿನೇಳು ವರ್ಷದ ಯುವತಿಯು ಗುರುವಾರದಂದು ಕಾಲೇಜಿಗೆಂದು ಮನೆಯಿಂದ ತೆರಳಿದ್ದು, ಸಂಜೆಯವರೆಗೂ ಮನೆಗೆ ಬಾರದೆ ನಾಪತ್ತೆಯಾಗಿದ್ದಾಳೆ. ಸಂಬಂಧಿಕರ ಮನೆಯಲ್ಲೆಲ್ಲಾ ಹುಡಿಕಾಡಿದ ಆಕೆಯ ಮನೆಯವರು ಯಾವುದೇ ಸುಳಿವು ಸಿಗದ ಹಿನ್ನೆಲೆಯಲ್ಲಿ ಇಂದು ಕಡಬ ಠಾಣೆಗೆ ದೂರು ನೀಡಿದ್ದಾರೆ. ಇದೇ ವೇಳೆ ಸ್ಥಳೀಯ ನಿವಾಸಿ 24 ವರ್ಷದ ಹನೀಫ್ ಎಂಬಾತ

ಆನ್‌ಲೈನ್ ತರಗತಿಯ ಅವಾಂತರ ➤ ಕಾಲೇಜಿಗೆಂದು ತೆರಳಿದ ಅಪ್ರಾಪ್ತ ಯುವತಿ ನಾಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

BIG NEWS: ರಾಜ್ಯದ 8 ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ➤ ಇಂದು ರಾತ್ರಿಯಿಂದಲೇ ಬಂದ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.06. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಇಂದು ರಾತ್ರಿಯಿದಲೇ ವೀಕೆಂಡ್ ಕರ್ಫ್ಯೂ ಘೋಷಿಸಲಾಗಿದೆ. ರಾಜ್ಯದಲ್ಲಿ ಕೊರೋನಾ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಚಾಮರಾಜನಗರ, ಮೈಸೂರು, ಕೊಡಗು, ಬೆಳಗಾವಿ, ವಿಜಯಪುರ, ಕಲಬುರಗಿ, ಬೀದರ್ ಸೇರಿದಂತೆ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 05 ಗಂಟೆಯವರೆಗೆ ವೀಕೆಂಡ್ ಕರ್ಫ್ಯೂ ಘೋಷಿಸಿ ರಾಜ್ಯ ಸರಕಾರವು ಆದೇಶ ಹೊರಡಿಸಿದೆ.  

BIG NEWS: ರಾಜ್ಯದ 8 ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ➤ ಇಂದು ರಾತ್ರಿಯಿಂದಲೇ ಬಂದ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

BIG NEWS: ಡೆಲ್ಟಾ ಆಯ್ತು, ಇದೀಗ ‘ಇಟಾ’ ಸೋಂಕು ಮಂಗಳೂರಿನಲ್ಲಿ ಪತ್ತೆ ➤ ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ಸಾಧ್ಯತೆ..?

(ನ್ಯೂಸ್ ಕಡಬ) newskadaba.com ಮಂಗಳೂರು, ಆ.06. ಕೊರೋನಾ ಏರಿಕೆಯ ನಡುವೆ ಡೆಲ್ಟಾ ಸೋಂಕಿನ ಜೊತೆಗೆ ಇದೀಗ ಮತ್ತೊಂದು ಶಾಕ್ ಗೆ ಕರಾವಳಿಯ ಜನತೆ ಬೆಚ್ಚಿಬಿದ್ದಿದ್ದಾರೆ. ಎರಡು ತಿಂಗಳ ಹಿಂದೆ ಕತರ್ ನಿಂದ ಮಂಗಳೂರಿಗೆ ಆಗಮಿಸಿದ್ದ ವ್ಯಕ್ತಿಯೋರ್ವರಲ್ಲಿ ಗುರುವಾರದಂದು ಕೊರೋನಾ ಸೋಂಕಿನ ಹೊಸ ತಳಿ ‘ಇಟಾ’ (ಬಿ.1.525) ವೈರಾಣು ಪತ್ತೆಯಾಗಿದೆ. ಇದರ ಜೊತೆಗೆ ಹೊಸದಾಗಿ ಒಂದು ಡೆಲ್ಟಾ ಪ್ಲಸ್‌ ಪ್ರಕರಣ ಕೂಡ ಕಂಡುಬಂದಿದ್ದು, ರಾಜ್ಯದಲ್ಲಿ ಡೆಲ್ಟಾ ಪ್ಲಸ್ ವೈರಾಣು ಹೊಂದಿದವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಹೊಸದಾಗಿ ಕಂಡುಬಂದಿರುವ ಇಟಾ

BIG NEWS: ಡೆಲ್ಟಾ ಆಯ್ತು, ಇದೀಗ ‘ಇಟಾ’ ಸೋಂಕು ಮಂಗಳೂರಿನಲ್ಲಿ ಪತ್ತೆ ➤ ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ಸಾಧ್ಯತೆ..? Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top