ಬ್ರೇಕಿಂಗ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ನದಿಗೆ ಉರುಳಿದ ಬೊಲೆರೋ ➤ ವೃದ್ಧೆಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ.04. ಚಾಲಕನ ನಿಯಂತ್ರಣ ತಪ್ಪಿದ ಬೊಲೆರೋ ವಾಹನವೊಂದು ನದಿಗೆ ಬಿದ್ದ ಘಟನೆ ಸುಬ್ರಹ್ಮಣ್ಯ ಸಮೀಪದ ಕಲ್ಮಕಾರು ಸೇತುವೆಯ ಬಳಿ ಬುಧವಾರದಂದು ಸಂಭವಿಸಿದೆ. ಕಡಮಕಲ್ಲು ಎಸ್ಟೇಟ್‌ನವರಿಗೆ ಸೇರಿದ್ದು ಎನ್ನಲಾದ ಬೊಲೆರೋ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಘಟನೆಯಲ್ಲಿ ಬೊಲೆರೋದಲ್ಲಿದ್ದ ವೃದ್ಧೆಯೋರ್ವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಇನ್ನುಳಿದ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.      

ಚಾಲಕನ ನಿಯಂತ್ರಣ ತಪ್ಪಿ ನದಿಗೆ ಉರುಳಿದ ಬೊಲೆರೋ ➤ ವೃದ್ಧೆಗೆ ಗಂಭೀರ ಗಾಯ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸ್ಕೂಟಿಗೆ ಢಿಕ್ಕಿ ಹೊಡೆದ ಕಾರು ➤ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಕಾರ್ಕಳ, ಆ.02. ರಸ್ತೆ ದಾಟುತ್ತಿದ್ದ ಸ್ಕೂಟಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಾರ್ಕಳ ಸಮೀಪದ ಬಜಗೋಳಿ ಎಂಬಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಮೃತ ವ್ಯಕ್ತಿಯನ್ನು ಕಾರ್ಕಳ ತಾಲೂಕಿನ ಮುಡಾರು ಗ್ರಾಮದ ಬಂಜನಾಕ್ಯಾರು ನಿವಾಸಿ ಶೇಖರ್ ದೇವಾಡಿಗ ಎಂದು ಗುರುತಿಸಲಾಗಿದೆ. ಮೃತರು ತನ್ನ ಸ್ಕೂಟಿಯನ್ನು ರಸ್ತೆ ಕ್ರಾಸ್ ಮಾಡುತ್ತಿದ್ದ ವೇಳೆ ಸ್ವಿಫ್ಟ್ ಕಾರು ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಶೇಖರ್ ದೇವಾಡಿಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ‌.  

ಸ್ಕೂಟಿಗೆ ಢಿಕ್ಕಿ ಹೊಡೆದ ಕಾರು ➤ ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕೊರೋನಾ ಸೋಂಕಿಗೆ ಕಡಬದ ವ್ಯಕ್ತಿ ಮೃತ್ಯು ➤ ಕರಾವಳಿಯಲ್ಲಿ ದಾಖಲೆಯ ಪ್ರಮಾಣದಲ್ಲಿ ಕೋವಿಡ್ ಏರಿಕೆ

(ನ್ಯೂಸ್ ಕಡಬ) newskadaba.com ಕಡಬ, ಆ.02. ರಾಜ್ಯದಲ್ಲಿ ಕೊರೋನಾ ಸೋಂಕು ಮತ್ತೆ ತನ್ನ ಅಟ್ಟಹಾಸವನ್ನು ಮುಂದುವರಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಜ್ಯದಲ್ಲೇ ಪ್ರಥಮವಾಗಿ ದಾಖಲೆಯ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಕೊರೋನಾ ಸೋಂಕಿಗೆ ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ 73 ವರ್ಷ ಪ್ರಾಯದ ವ್ಯಕ್ತಿಯೋರ್ವರು ಬಲಿಯಾಗಿದ್ದಾರೆ. ಕಳೆದ ಹದಿನೈದು ದಿನಗಳ ಹಿಂದೆ ಕೊರೋನಾ ಪಾಸಿಟಿವ್ ಬಂದಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸಿದೆ ಇಂದು ಅವರು ಮೃತಪಟ್ಟಿದ್ದಾರೆ‌.      

ಕೊರೋನಾ ಸೋಂಕಿಗೆ ಕಡಬದ ವ್ಯಕ್ತಿ ಮೃತ್ಯು ➤ ಕರಾವಳಿಯಲ್ಲಿ ದಾಖಲೆಯ ಪ್ರಮಾಣದಲ್ಲಿ ಕೋವಿಡ್ ಏರಿಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸಿಎಂ ಸ್ಥಾನಕ್ಕೆ ರಾಜೀನಾಮೆ ಬೆನ್ನಲ್ಲೇ BSY ಮೂಲೆಗುಂಪು..? ➤ ಪಕ್ಷದ ಬ್ಯಾನರ್ ನಲ್ಲಿ ಯಡಿಯೂರಪ್ಪ ಫೋಟೋ ನಾಪತ್ತೆ..!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.01. ರಾಜ್ಯ ಬಿಜೆಪಿಯ ಹಿರಿಯ ಮುಖಂಡ, ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ತನ್ನ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿ ವಾರ ಪೂರ್ತಿಯಾಗುವುದರ ಮೊದಲೇ ಬಿಜೆಪಿಯ ಬ್ಯಾನರ್‌ಗಳಿಂದಲೂ ಅವರ ಫೋಟೊ ತೆರವಾಗಿರುವುದು ಪಕ್ಷದ ಕಾರ್ಯಕರ್ತರನ್ನು ಆಕ್ರೋಶಭರಿತರನ್ನಾಗಿಸಿದೆ. ಬೆಂಗಳೂರಿನ ಯಶವಂತಪುರ ಮಂಡಲ ಮಹಿಳಾ ಮೋರ್ಚಾ ಹಾಗೂ ಬೆಂಗಳೂರು ಉತ್ತರ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸಭೆಗಳು ಶನಿವಾರದಂದು ಪ್ರತ್ಯೇಕವಾಗಿ ನಡೆದಿದ್ದು, ಎರಡೂ ಸಭೆಗಳ ವೇದಿಕೆಯಲ್ಲಿ ಅಳವಡಿಸಿದ್ದ ಬ್ಯಾನರ್‌ಗಳಲ್ಲಿ ಯಡಿಯೂರಪ್ಪ ಅವರ ಭಾವಚಿತ್ರ ನಾಪತ್ತೆಯಾಗಿತ್ತು.

ಸಿಎಂ ಸ್ಥಾನಕ್ಕೆ ರಾಜೀನಾಮೆ ಬೆನ್ನಲ್ಲೇ BSY ಮೂಲೆಗುಂಪು..? ➤ ಪಕ್ಷದ ಬ್ಯಾನರ್ ನಲ್ಲಿ ಯಡಿಯೂರಪ್ಪ ಫೋಟೋ ನಾಪತ್ತೆ..!! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

BIG NEWS: ದೇಶದಲ್ಲಿ ಕೊರೋನಾ ಮೂರನೇ ಅಲೆ ಆರಂಭ..?

(ನ್ಯೂಸ್ ಕಡಬ) newskadaba.com ನವದೆಹಲಿ, ಆ.01. ದೇಶದಲ್ಲಿ ಕೊರೋನಾ ಎರಡನೇ ಅಲೆಯ ತೀವ್ರತೆ ಕಡಿಮೆಯಾಗುತ್ತಿರುವುದರ ನಡುವೆಯೇ ಇದೀಗ ಕೊರೋನಾ ಸೋಂಕಿನಲ್ಲಿ ದಿಢೀರ್ ಏರಿಕೆ ಕಂಡುಬಂದಿದ್ದು, ಮೂರನೇ ಅಲೆಯ ಆರಂಭವೇ ಎನ್ನುವ ಪ್ರಶ್ನೆ ಹುಟ್ಟಿದೆ‌. ಆಗಸ್ಟ್ ಎರಡನೇ ವಾರದಲ್ಲಿ ಕೊರೋನಾ ಮೂರನೇ ಅಲೆ ಆರಂಭಗೊಂಡು ಅಕ್ಟೋಬರ್ ವೇಳೆಗೆ ತನ್ನ ಪಾರಮ್ಯ ಮೆರೆಯಲಿದೆ ಎಂದು ಈ ಹಿಂದೆಯೇ ತಜ್ಞರು ಎಚ್ಚರಿಕೆ ನೀಡಿದ್ದರು. ಅದಕ್ಕೆ ಪುರಾವೆ ಎಂಬಂತೆ ಇದೀಗ ಕೇರಳ, ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗಿದೆ. ತಮಿಳುನಾಡು, ಕರ್ನಾಟಕದಲ್ಲೂ ಕೊರೋನಾ

BIG NEWS: ದೇಶದಲ್ಲಿ ಕೊರೋನಾ ಮೂರನೇ ಅಲೆ ಆರಂಭ..? Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೇರಳ, ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವವರೇ ಎಚ್ಚರ ➤ ವ್ಯಾಕ್ಸಿನ್ ಹಾಕಿಸಿದ್ದರೂ ಕೊರೋನಾ ನೆಗೆಟಿವ್ ವರದಿ ಕಡ್ಡಾಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.01. ಕೊರೋನ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇರಳ ಮತ್ತು ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಆಗಮಿಸುವವರು ಕೋವಿಡ್ ಲಸಿಕೆಯ ಎರಡೂ ಡೋಸ್ ಪಡೆದಿದ್ದರೂ 72 ಗಂಟೆಯೊಳಗಿನ ಆರ್‌ಟಿಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿ ಕಡ್ಡಾಯಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ನೂತನ ಆದೇಶದಂತೆ ವಿಮಾನ/ರೈಲು/ರಸ್ತೆ (ಬಸ್ ಮತ್ತಿತರ ಖಾಸಗಿ ವಾಹನಗಳ ಮೂಲಕ) ಮಾರ್ಗದಲ್ಲಿ ಕರ್ನಾಟಕಕ್ಕೆ ಆಗಮಿಸುವ ಪ್ರಯಾಣಿಕರು 72 ಗಂಟೆಯೊಳಗೆ ಮಾಡಿಸಿರುವ ಆರ್‌ಟಿಪಿಸಿಆರ್ ಪರೀಕ್ಷೆಯ ನೆಗಟಿವ್ ವರದಿ ಹೊಂದುವುದು ಕಡ್ಡಾಯವಾಗಿದೆ. ಕೇರಳ ಮತ್ತು

ಕೇರಳ, ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವವರೇ ಎಚ್ಚರ ➤ ವ್ಯಾಕ್ಸಿನ್ ಹಾಕಿಸಿದ್ದರೂ ಕೊರೋನಾ ನೆಗೆಟಿವ್ ವರದಿ ಕಡ್ಡಾಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕುಕ್ಕೇ ಸುಬ್ರಹ್ಮಣ್ಯ: ಹಟ್ಟಿಯಲ್ಲಿ ಕಟ್ಟಿ ಹಾಕಿದ್ದ ಕರುವನ್ನು ಸೀಳಿ ಕೊಂದ ಚಿರತೆ ➤ ಸ್ಥಳೀಯರಲ್ಲಿ ಆತಂಕ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ.01. ಹಟ್ಟಿಯಲ್ಲಿ ಕಟ್ಟಿ ಹಾಕಿದ್ದ ದನದ ಕರುವಿನ ಮೇಲೆ ದಾಳಿ ಮಾಡಿದ ಚಿರತೆಯೊಂದು ಕರುವನ್ನು ತಿಂದ ಘಟನೆ ಭಾನುವಾರ ಬೆಳಿಗ್ಗೆ ಸುಬ್ರಹ್ಮಣ್ಯದಿಂದ ವರದಿಯಾಗಿದೆ. ಸುಬ್ರಹ್ಮಣ್ಯ ಸಮೀಪದ ಕಲ್ಮಕಾರು ಗ್ರಾಮದ ಮಾಡಬಾಕಿಲು ನಿವಾಸಿ ಲಾವಣ್ಯ ಮಹೇಶ್ ಎಂಬವರ ಹಟ್ಟಿಯಲ್ಲಿ ದನ ಕರುಗಳನ್ನು ಕಟ್ಟಿ ಹಾಕಲಾಗಿತ್ತು ಎನ್ನಲಾಗಿದೆ. ಭಾನುವಾರ ಬೆಳಿಗ್ಗೆ ಹಟ್ಟಿಗೆ ತೆರಳಿದಾಗ ಕರುವನ್ನು ಸೀಳಿ ಅರ್ಧ ತಿಂದಿರುವುದು ಗಮನಕ್ಕೆ ಬಂದಿದೆ. ಈ ಭಾಗದಲ್ಲಿ ಚಿರತೆ ಇರುವ ಬಗ್ಗೆ ಮಾಹಿತಿ ಹರಿದಾಡುತ್ತಿದ್ದು, ಚಿರತೆಯೇ ಕರುವನ್ನು

ಕುಕ್ಕೇ ಸುಬ್ರಹ್ಮಣ್ಯ: ಹಟ್ಟಿಯಲ್ಲಿ ಕಟ್ಟಿ ಹಾಕಿದ್ದ ಕರುವನ್ನು ಸೀಳಿ ಕೊಂದ ಚಿರತೆ ➤ ಸ್ಥಳೀಯರಲ್ಲಿ ಆತಂಕ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ನೆಲ್ಯಾಡಿ: ವಿಷ ಸೇವಿಸಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜು.31. ವಿಷ ಸೇವಿಸಿದ ವ್ಯಕ್ತಿಯೋರ್ವರು ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟ ಘಟನೆ ಶನಿವಾರ ರಾತ್ರಿ ನೆಲ್ಯಾಡಿಯಿಂದ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ನೆಲ್ಯಾಡಿ ಸಮೀಪದ ದೋಂತಿಲ‌ ನಿವಾಸಿ ರಾಮಕೃಷ್ಣ (38) ಎಂದು ಗುರುತಿಸಲಾಗಿದೆ. ಶನಿವಾರ ರಾತ್ರಿ ತನ್ನ ಮನೆಯಲ್ಲಿ ವಿಷ ಸೇವಿಸಿದ್ದ ಇವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಹಾದಿ ಮಧ್ಯೆ ಮೃತಪಟ್ಟಿದ್ದಾರೆ‌. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.      

ನೆಲ್ಯಾಡಿ: ವಿಷ ಸೇವಿಸಿ ಆತ್ಮಹತ್ಯೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

BIG NEWS: ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ..? ➤ ಅಂತಿಮ ಆದೇಶ ಬಾಕಿ..

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.27. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಹೆಸರು ಅಂತಿಮವಾಗಿದ್ದು, ಅಧಿಕೃತ ಘೋಷಣೆ ಬಾಕಿಯಿದೆ. ಇಂದು ಸಂಜೆ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ಮುಖ್ಯಮಂತ್ರಿಯ ಆಯ್ಕೆ ಕಸರತ್ತು ನಡೆದಿದ್ದು, ಬಸವರಾಜ್ ಬೊಮ್ಮಾಯಿಯವರ ಹೆಸರು ಅಂತಿಮವಾಗಿರುವುದಾಗಿ ಪ್ರಮುಖ ಸುದ್ದಿ ಮಾಧ್ಯಮಗಳು ವರದಿ ಮಾಡಿವೆ. ಇನ್ನು ಕೆಲವೇ ಕ್ಷಣಗಳಲ್ಲಿ ಈ ಬಗ್ಗೆ ಅಧಿಕೃತ ಆದೇಶ ಹೊರಬೀಳಲಿದೆ.        

BIG NEWS: ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ..? ➤ ಅಂತಿಮ ಆದೇಶ ಬಾಕಿ.. Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Nalin Kumar kateel

Breaking: ನೂತನ ಮುಖ್ಯಮಂತ್ರಿಯಾಗಿ ನಳಿನ್ ಕುಮಾರ್ ಕಟೀಲ್..??

(ನ್ಯೂಸ್ ಕಡಬ) newskadaba.com ನವದೆಹಲಿ, ಜು.26. ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ಅವರು ರಾಜೀನಾಮೆ ನೀಡಿರುವ ಬೆನ್ನಲ್ಲೇ ಇದೀಗ ಆ ಸ್ಥಾನಕ್ಕೆ ಕರಾವಳಿಯ ಪ್ರಭಾವಿ ಮುಖಂಡರ ಹೆಸರು ಕೇಳಿ ಬರುತ್ತಿದೆ. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ದಕ್ಷಿಣ ಕನ್ನಡ ಜಿಲ್ಲಾ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೆಸರು ಬಲವಾಗಿ ಕೇಳಿ ಬಂದಿದೆ. ಯಡಿಯೂರಪ್ಪ ರವರು ರಾಜೀನಾಮೆ ನೀಡುವ ಮಾಹಿತಿಯಿದ್ದ ಹಿನ್ನೆಲೆಯಲ್ಲಿ ನಳಿನ್ ಕುಮಾರ್ ಕಟೀಲ್ ಅವರು ಭಾನುವಾರದಂದು ದಿಢೀರ್ ಆಗಿ ಕಡಬ ತಾಲೂಕಿನ ಪಾಲ್ತಾಡಿ ಗ್ರಾಮದ

Breaking: ನೂತನ ಮುಖ್ಯಮಂತ್ರಿಯಾಗಿ ನಳಿನ್ ಕುಮಾರ್ ಕಟೀಲ್..?? Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top